ದಿನದ ಸುದ್ದಿ
ವಿಡಿಯೋ | ಮಿಲಿಯನ್ ವೀವ್ಸ್ ದಾಟಿ ಮುನ್ನುಗ್ಗುತ್ತಿದೆ ಚಂದನ್ ಶೆಟ್ಟಿ ‘ಪಾರ್ಟಿ ಫ್ರೀಕ್’ ಹಾಡು
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2020/12/chandan-shetty_party-freak_suddidina.jpg&description=ವಿಡಿಯೋ | ಮಿಲಿಯನ್ ವೀವ್ಸ್ ದಾಟಿ ಮುನ್ನುಗ್ಗುತ್ತಿದೆ ಚಂದನ್ ಶೆಟ್ಟಿ ‘ಪಾರ್ಟಿ ಫ್ರೀಕ್’ ಹಾಡು', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2020/12/chandan-shetty_party-freak_suddidina.jpg&description=ವಿಡಿಯೋ | ಮಿಲಿಯನ್ ವೀವ್ಸ್ ದಾಟಿ ಮುನ್ನುಗ್ಗುತ್ತಿದೆ ಚಂದನ್ ಶೆಟ್ಟಿ ‘ಪಾರ್ಟಿ ಫ್ರೀಕ್’ ಹಾಡು', 'pinterestShare', 'width=750,height=350'); return false;" title="Pin This Post">
ಸುದ್ದಿದಿನ ಡೆಸ್ಕ್ : ಯೂನೈಟೆಡ್ ಪ್ರೊಡಕ್ಷನ್ಸ್ ಬ್ಯಾನರ್ನಲ್ಲಿ ಮೂಡಿಬಂದ ಪಾರ್ಟಿ ಫ್ರೀಕ್ ಹಾಡು ಶನಿವಾರ ಯೂನೈಟೆಡ್ ಆಡಿಯೋಸ್ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆ ಆಗಿದೆ. ಹಾಡಿನ ಬಗ್ಗೆ ಮಾಹಿತಿ ನೀಡುವ ಉದ್ದೇಶಕ್ಕೆ ಸುದ್ದಿಗೋಷ್ಟಿ ಕರೆದಿದ್ದ ತಂಡ, ಹಾಡಿನ ಹುಟ್ಟು ಮತ್ತು ಅದರ ಹಿನ್ನೆಲೆಯನ್ನು ಬಿಚ್ಚಿಟ್ಟಿತು. ಚೈತನ್ಯ ಲಕಂಸಾನಿ ಈ ಹಾಡಿಗೆ ಬಂಡವಾಳ ಹೂಡಿದ್ದಾರೆ.
ಮೂಲತಃ ಆಂಧ್ರದವರಾದ ಚೈತನ್ಯ, ಸಿನಿಮಾ ಕ್ಷೇತ್ರದಲ್ಲಿ ನೆಲೆಯೂರಬೇಕೆಂದು ಯೂನೈಟೆಡ್ ಪ್ರೊಡಕ್ಷನ್ಸ್ ಸಂಸ್ಥೆಯನ್ನು ಹುಟ್ಟುಹಾಕಿದ್ದಾರೆ. ಮೊದಲಾರ್ಥವಾಗಿ ಕನ್ನಡ ಮತ್ತು ತೆಲುಗಿನಲ್ಲಿ ಹೊಸ ವರ್ಷಾಚರಣೆಗೆ ಉಡುಗೊರೆ ರೂಪದಲ್ಲಿ ಮತ್ತು ಬ್ಯಾನರ್ ಲಾಂಚ್ ಮಾಡುವ ಉದ್ದೇಶಕ್ಕೆ ಪಾರ್ಟಿ ಫ್ರೀಕ್ ಎಂಬ ಹಾಡನ್ನು ನಿರ್ಮಾಣ ಮಾಡಿದ್ದಾರೆ.
ಈ ಹಾಡಿಗೆ ಸಾಹಿತ್ಯ ಬರೆದು, ಸಂಗೀತ ನೀಡಿ ಧ್ವನಿಯನ್ನೂ ನೀಡಿರುವ ಚಂದನ್ ಶೆಟ್ಟಿ ಮಾತನಾಡಿ, ಒಂದು ವಾರದ ಹಿಂದಷ್ಟೇ ಈ ಆಡಿಯೋ ಸಂಸ್ಥೆ ಲಾಂಚ್ ಆಗಿದೆ. ಒಂದೇ ವಾರದಲ್ಲಿ ಯೂಟ್ಯೂಬ್‌ನಲ್ಲಿ ಒಳ್ಳೇ ರೀಚ್ ಸಿಕ್ಕಿದೆ. ಹೊಸಹೊಸ ಪ್ರತಿಭೆಗಳಿಗೋಸ್ಕರ ಈ ಚಾನೆಲ್ ತೆರೆಯಲಾಗಿದೆ.
ಇನ್ನು ಹಾಡಿನ ಬಗ್ಗೆ ಹೇಳುವುದಾದರೆ, 3 ದಿನಗಳ ಕಾಲ ಶೆರ್ಟನ್ ಹೊಟೇಲ್ನಲ್ಲಿ ಶೂಟಿಂಗ್ ಮಾಡಲಾಗಿದೆ. ಕನ್ನಡ ಮತ್ತು ತೆಲುಗಿನಲ್ಲಿ ಹಾಡು ಮೂಡಿಬಂದಿದ್ದು, ಈಗಾಗಲೇ ಮೆಚ್ಚುಗೆ ವ್ಯಕ್ತವಾಗಿದೆ. ಈ ಸಂಸ್ಥೆ ಮೂಲಕ ಸಾಕಷ್ಟು ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲು ನಿರ್ಮಾಪಕರು ಮುಂದೆ ಬಂದಿದ್ದಾರೆ. ಇದರಿಂದ ನಮ್ಮ ಬೆಳವಣಿಗೆ ಜತೆಗೆ ಇಂಡಸ್ಟ್ರಿಯ ಬೆಳವಣಿಗೆಗೂ ಸಹಕಾರಿ. ಈ ಥರದ ನಿರ್ಮಾಪಕರು ಇಂಡಸ್ಟ್ರಿಗೆ ಬೇಕು ಎಂದರು.
ಇನ್ನು ಈ ಹಾಡಿಗೆ ಬಂಡವಾಳ ಹೂಡಿರುವ ಚೈತನ್ಯ ಲಕಂಸಾನಿ ಮಾತನಾಡಿ, ತುಂಬ ಕಿರು ಅವಧಿಯಲ್ಲಿ ಈ ಹಾಡನ್ನು ಸೃಷ್ಟಿ ಮಾಡಿದ್ದೇವೆ. ನಮ್ಮ ತಾಂತ್ರಿಕ ತಂಡಕ್ಕೆ ಧನ್ಯವಾದ. ಈ ಆಡಿಯೋ ಸಂಸ್ಥೆ ತೆರೆಯಲು ಮೂಲ ಉದ್ದೇಶ ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವುದರ ಸಲುವಾಗಿ. ಯಾರಿಗೆ ಸಂಗೀತ ಮತ್ತು ಸಿನಿಮಾ ಆಸಕ್ತಿ ಇದೆಯೋ ಅವರಿಗೆ ನಮ್ಮ ಸಂಸ್ಥೆಯಿಂದ ಸ್ವಾಗತ ಎಂದರು.
ಇನ್ನು ಈ ಹಾಡಿನ ನಿರ್ಮಾಣದಲ್ಲಿ ಭಾಗವಾಗಿರುವ ನಟ ಧರ್ಮ ಸಹ ಹಾಡು ಮತ್ತು ಈ ಸಂಸ್ಥೆಯ ಮುಂದಿನ ಯೋಜನೆಗಳ ಬಗ್ಗೆ ಮಾತನಾಡಿದರು.
‘ಸಿನಿಮಾ ಬಗ್ಗೆ ಮಾತನಾಡುತ್ತ ಯೂನೈಟೆಡ್ ಪ್ರೊಡಕ್ಷನ್ಸ್ ಬ್ಯಾನರ್ ರಿಜಿಸ್ಟರ್ ಆಯ್ತು. ಅದನ್ನು ರೀಚ್ ಮಾಡಿಸುವ ಸಲುವಾಗಿ ಚಂದನ್ ಶೆಟ್ಟಿ ಅವರಿಂದ ಆಲ್ಬಂ ಮಾಡುವ ಬಗ್ಗೆ ನಿರ್ಧಾರವಾಯ್ತು. ಆಗ ಯುನೈಟೆಡ್ ಆಡಿಯೋ ಕಂಪನಿ ತೆರೆದೆವು. ಈ ಸಂಸ್ಥೆಯಲ್ಲಿ ನಾನೂ ಸಹ ಪಾಲುದಾರನಾಗಿದ್ದೇನೆ. ಅಂದುಕೊಂಡಿದ್ದಕ್ಕಿಂತ ಚೆಂದವಾಗಿ ಹಾಡು ಮೂಡಿಬಂದಿದೆ. ಮುಂದಿನ ದಿನಗಳಲ್ಲಿ ಇದೇ ಸಂಸ್ಥೆಯಿಂದ ಸಿನಿಮಾ ಸಹ ನಿರ್ಮಾಣವಾಗಲಿದೆ ಎಂದರು.
ಪಾರ್ಟಿ ಫ್ರೀಕ್ ಹಾಡಿನ ಚಿತ್ರೀಕರಣಕ್ಕೆ ಬರೋಬ್ಬರಿ 36 ಲಕ್ಷ ಮೊತ್ತವನ್ನು ಖರ್ಚು ಮಾಡಲಾಗಿದೆ. ಮೂರು ದಿನದಲ್ಲಿ ಚಿತ್ರೀಕರಣ ಮುಗಿಸಿಕೊಂಡ ಈ ಹಾಡಿನಲ್ಲಿ 80ಕ್ಕೂ ಅಧಿಕ ರಷ್ಯನ್ ಡಾನ್ಸರ್ಗಳಿದ್ದಾರೆ. 100ಕ್ಕೂ ಅಧಿಕ ಇಲ್ಲಿನ ನೃತ್ಯಗಾರರಿದ್ದಾರೆ. ಟಾಲಿವುಡ್ ನೃತ್ಯ ನಿರ್ದೇಶಕಿ ಅನ್ನಿ ಮಾಸ್ಟರ್ ಜತೆಗೆ ನಿಶ್ವಿಕಾ ನಾಯ್ಡು, ನಿವೇದಿತಾ ಗೌಡ ಸಹ ಈ ಹಾಡಿನಲ್ಲಿದ್ದಾರೆ. ಛಾಯಾಗ್ರಹಣ ಶ್ರೀಶ ಕುದುವಳ್ಳಿ, ಭಜರಂಗಿ ಮೋಹನ್ ನೃತ್ಯ ನಿರ್ದೇಶನ, ರಂಜಿತ್ ಸಂಕಲನ ಮಾಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ
ಸುದ್ದಿದಿನಡೆಸ್ಕ್:ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಇಂದು ಅವರು ಮಾತನಾಡಿದರು.
ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು. ಕ್ಷುಲ್ಲಕ ವಿಚಾರವನ್ನು ದಿನವಿಡೀ ತೋರಿಸುವವರು ಅದರ ಪರಿಣಾಮದ ಬಗ್ಗೆಯೂ ಯೋಚಿಸಬೇಕು. ಗಂಡ ಹೆಂಡತಿ ಜಗಳವನ್ನು ಇಡೀ ದಿನ ತೋರಿಸಿದರೆ ಅದರಿಂದ ಸಮಾಜಕ್ಕೆ ಏನು ಪ್ರಯೋಜನ? ಎಂದು ಪ್ರಶ್ನಿಸಿದರು.
ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿ ಇಬ್ಬರೂ ಪತ್ರಕರ್ತರಾಗಿ ಧ್ವನಿ ಇಲ್ಲದವರ ಧ್ವನಿಯಾಗಿದ್ದರು. ಸಮಾಜದಲ್ಲಿರುವ ನ್ಯೂನ್ಯತೆಗಳನ್ನು ಹೋಗಲಾಡಿಸಿ ಸಮಾಜವನ್ನು ಕಟ್ಟುವ ಕಾಯಕವನ್ನು ಬಸವಾದಿ ಶರಣರು ಮಾಡಿದ್ದರು. ಶರಣರ ಆಶಯದ ಸಮಸಮಾಜ ಆಗದಿದ್ದರೆ ಅಸಮಾನತೆ ಮುಂದುವರೆಯುತ್ತದೆ. ಅದು ಮುಂದುವರೆಯಲಿ ಎನ್ನುವುದು ಪಟ್ಟಭದ್ರರ ಹಿತಾಸಕ್ತಿಯಾಗಿದೆ ಎಂದರು.
ಯಾವ ದೇವರೂ ಯಾರನ್ನೂ ಕೂಡ ಅವಿದ್ಯಾವಂತನಾಗು ಅಂತಾಗಲೀ, ಕೆಳ ಜಾತಿಯಲ್ಲೇ ಹುಟ್ಟು ಎಂದು ಬಯಸುವುದಿಲ್ಲ. ಈ ಅರಿವನ್ನು ಜನರಲ್ಲಿ ಹೆಚ್ಚಿಸುವ ಕೆಲಸ ಪತ್ರಕರ್ತರಿಂದ ಆಗಬೇಕು. ಪತ್ರಕರ್ತರು ಕೇವಲ ಮಾಹಿತಿ ಕೊಡುವವರಾಗದೆ, ಸಮಾಜ ಸುಧಾರಣೆಗೂ ಒತ್ತು ನೀಡಬೇಕು.
ಅಂಬೇಡ್ಕರ್ ಅವರ ಆಶಯದಂತೆ ಎಲ್ಲರಿಗೂ ಆರ್ಥಿಕ, ಸಾಮಾಜಿಕ ಶಕ್ತಿ ಕೊಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ 2013 ರಲ್ಲೂ ಮಾಡಿತ್ತು. ಈಗಲೂ ಮುಂದುವರೆಸಿದೆ. ನಾವು ಬಡವರ ಪರವಾದ ಯೂನಿವರ್ಸಲ್ ಬೇಸಿಕ್ ಇನ್ ಕಂ ಆರ್ಥಿಕತೆಯನ್ನು ಪಾಲುಸುತ್ತಿದ್ದೇವೆ. ಇದನ್ನು ಪತ್ರಕರ್ತರು ಅರ್ಥ ಮಾಡಿಕೊಳ್ಳಬೇಕು.
ಕೆಲವು ಒಳ್ಳೆ ಪತ್ರಕರ್ತರೂ ಇದ್ದಾರೆ. ಆದರೆ ಬಹಳಷ್ಟು ಮಾಧ್ಯಮ ಸಂಸ್ಥೆಗಳು ಕಾರ್ಪೋರೇಟ್ ಹಿಡಿತಕ್ಕೆ ಒಳಪಟ್ಟಿವೆ. ಪತ್ರಕರ್ತರು ಸತ್ಯ ಬರೆದರೂ ಕೆಲವೊಮ್ಮೆ ಸಂಪಾದಕರುಗಳು ಮಾಲೀಕರ ಒತ್ತಡಕ್ಕೆ ಮಣಿದು ಬದಲಾಯಿಸಿ ಬಿಡುತ್ತಾರೆ. ನಾನು ಮಂತ್ರಿಯಾಗಿ 40 ವರ್ಷ ಆಯ್ತು. ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಎಂದು ಇವತ್ತಿನವರೆಗೂ ನಾನು ಯಾರನ್ನೂ ಕೇಳಿಲ್ಲ.
ಜನಸಾಮಾನ್ಯರು ಇನ್ನೂ ಪತ್ರಿಕೆಗಳ ಮೇಲೆ ನಂಬಿಕೆ ಇಟ್ಟಿದ್ದಾರೆ. ನಾನೂ ನಂಬಿಕೆ ಇಟ್ಟಿದ್ದೇನೆ.
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಸವಲತ್ತನ್ನು ಜಾರಿ ಮಾಡಿದ್ದೇ ನಾನು. ಇದರಲ್ಲಿನ ನಿಯಮಗಳಲ್ಲಿ ತೊಂದರೆ ಇದ್ದರೆ, ಆ ಬಗ್ಗೆ ಚರ್ಚಿಸಿ ನಿವಾರಣೆಗೊಳಿಸಲಾಗುವುದು ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.
ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ವಿಭಾಗವಾರು ಫಲಿತಾಂಶದ ವಿಶ್ಲೇಷಣೆ
ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗ (Commerce)
ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.
ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.
ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.
ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.
ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ5 days agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
-
ದಿನದ ಸುದ್ದಿ3 days agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ5 days agoಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
-
ದಿನದ ಸುದ್ದಿ4 days agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ4 days agoಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
-
ದಿನದ ಸುದ್ದಿ2 days agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
-
ದಿನದ ಸುದ್ದಿ23 hours agoಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ

