ದಿನದ ಸುದ್ದಿ
ಅಪೌಷ್ಟಿಕ ಮಕ್ಕಳನ್ನು ಎನ್ಆರ್ಸಿಗೆ ದಾಖಲಿಸದಿದ್ದರೆ ಶಿಸ್ತಿನ ಕ್ರಮ : ಡಿಸಿ ಮಹಾಂತೇಶ್ ಬೀಳಗಿ
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಅಪೌಷ್ಟಿಕತೆಯಿಂದ ಬಳಲುವ ಮಕ್ಕಳನ್ನು ಎನ್ಆರ್ಸಿ ಕೇಂದ್ರಗಳಿಗೆ ದಾಖಲು ಮಾಡಬೇಕು. ತಪ್ಪಿದಲ್ಲಿ ಸಂಬಂಧಿಸಿದ ಸಿಡಿಪಿಓ, ಅಧೀಕ್ಷಕರು ಮತ್ತು ವಿಷಯ ನಿರ್ವಾಹಕರ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಎಚ್ಚರಿಕೆ ನೀಡಿದರು.
ಸೋಮವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವಿವಿಧ ಯೋಜನೆಗಳಾದ ಪೋಷಣ್ ಅಭಿಯಾನ ಯೋಜನೆ, ಕಿರುಸಾಲ ಯೋಜನೆ, ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆಯಡಿ ಜಿಲ್ಲಾ ಮಟ್ಟದ ಸಮನ್ವಯ ಸಭೆ, ಬಾಲ್ಯ ವಿವಾಹ ನಿಷೇಧ ಯೋಜನೆ, ಸ್ವಾಧಾರ ಯೋಜನೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿನ ತೀವ್ರ ಮತ್ತು ಸಾಧಾರಣ ಸೇರಿದಂತೆ ಒಟ್ಟು 225 ಅಪೌಷ್ಟಿಕ ಮಕ್ಕಳನ್ನು ಗುರುತಿಸಲಾಗಿದೆ. ಯಾವುದೇ ಮಕ್ಕಳು ಅಪೌಷ್ಟಿಕತೆಯಿಂದ ಬಳಲಬಾರದೆಂದು ಸರ್ಕಾರ ಜಿಲ್ಲಾಸ್ಪತ್ರೆಯಲ್ಲಿ ಎನ್ಆರ್ಸಿ(ನ್ಯುಟ್ರಿಷನ್ ರಿಹ್ಯಾಬಿಲಿಟೇಷನ್ ಸೆಂಟರ್) ತೆರೆದಿದೆ. ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ಇದೊಂದು ವರದಾನವಾಗಿದ್ದು, ಮಕ್ಕಳನ್ನು ಎನ್ಆರ್ಸಿಗೆ ದಾಖಲಿಸಬೇಕು. ತಾಲ್ಲೂಕುಗಳಲ್ಲಿ ಸಿಡಿಪಿಓ ಗಳು, ಅಧೀಕ್ಷಕರು, ವಿಷಯ ನಿರ್ವಾಹಕರು ಈ ಬಗ್ಗೆ ಗಮನ ಹರಿಸಿ, ಪೋಷಕರ ಮನವೊಲಿಸಿ ಈ ಮಕ್ಕಳನ್ನು ಕೇಂದ್ರಕ್ಕೆ ಸೇರಿಸಬೇಕು ಎಂದರು.
ತಾಲ್ಲೂಕುಗಳ ಸಿಡಿಪಿಓ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರು ಪ್ರತಿಕ್ರಿಯಿಸಿ ಪೋಷಕರು ತಮ್ಮ ಮಕ್ಕಳನ್ನು ಕೇಂದ್ರಕ್ಕೆ ಸೇರಿಸಲು ಒಪ್ಪುತ್ತಿಲ್ಲ. ಏನಾದರೊಂದು ಕಾರಣ ಹೇಳುತ್ತಾರೆಂದರು.
ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ ಸರ್ಕಾರ ಎಷ್ಟೆಲ್ಲಾ ಹಣ ಖರ್ಚು ಮಾಡಿ ಸಿಆರ್ಸಿ ತೆರೆದಿದೆ. ಇದೊಂದು ಮುಖ್ಯವಾದ ಯೋಜನೆಯಾಗಿದ್ದು, ಹೇಗಾದರೂ ಪೋಷಕರ ಮನವೊಲಿಸಿ ಮಕ್ಕಳನ್ನು ಎನ್ಆರ್ಸಿ ದಾಖಲಿಸಿ, ಮಕ್ಕಳನ್ನು ಅಪೌಷ್ಟಿಕತೆಯಿಂದ ಹೊರತರಬೇಕು. ಇಲ್ಲದಿದ್ದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ದ ಸೂಕ್ತ ಕ್ರಮ ಜರುಗಿಸಲಾಗುವುದು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್ ಮಾತನಾಡಿ, ಪೋಷಣ್ ಅಭಿವಯಾನ ಯೋಜನೆಯಡಿ 0 ಯಿಂದ 6 ವರ್ಷಗಳವರೆಗಿನ ಮಕ್ಕಳು, ಕಿಶೋರಿಯರು, ಗರ್ಭಿಣಿ ಮತ್ತು ಬಾಣಂತಿಯರ ಪೌಷ್ಟಿಕತಾ ಮಟ್ಟವನ್ನು ಸುಧಾರಿಸಲು ಸಮುದಾಯ ಆಧಾರಿತ ಚಟುವಟಿಕೆಗಳ ಮೂಲಕ ಹಲವಾರು ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
ಪೋಷಣ್ ಅಭಿಯಾನ್ ಅಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಮುಖಾಮುಖಿ ಸಂವಾದ ಮಾಡಲು ಇ-ಐಎಲ್ಎ(ಇನ್ಕ್ರಿಮೆಂಟಲ್ ಲರ್ನಿಂಗ್ ಅಪ್ರೋಚ್) ಮಾಡ್ಯೂಲ್ಗಳನ್ನು ಅಭಿವೃದ್ದಿ ಪಡಿಸಿ ತರಬೇತಿ ನೀಡಲಾಗಿದೆ. ಜೊತೆಗೆ ಈ ಯೋಜನೆಯಡಿ ಸುಪೋಷಣಾ ದಿವಸ್, ಅನ್ನಪ್ರಾಶನ ದಿವಸ್, ತೀವ್ರ ಮತ್ತು ಸಾಧಾರಣ ಅಪೌಷ್ಟಕ ಮಕ್ಕಳು ಗುರುತಿಸುವಿಕೆ, ರಕ್ತಹೀನತೆ ಜಾಗೃತಿ ಸಭೆ, ಎದೆಹಾಲಿನ ಮಹತ್ವ, ಜಂತುಹುಳು ನಿವಾರಣೆ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ನಡೆಸಲಾಗಿದೆ ಎಂದು ವಿವರಣೆ ನೀಡಿದರು.
ಮಾದರಿ ಪೌಷ್ಟಿಕ ಕೈತೋಟ ನಿರ್ಮಿಸಲು ಸೂಚನೆ
ಅಂಗನವಾಡಿ ಕೇಂದ್ರದಲ್ಲಿ ‘ಪೌಷ್ಟಿಕ ಕೈತೋಟ’ ಗಳನ್ನು ನಿರ್ಮಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಪ್ರತಿ ತಾಲ್ಲೂಕಿನಲ್ಲಿ 5 ರಿಂದ 10 ಉತ್ತಮವಾದ ಪೌಷ್ಟಿಕ ಕೈತೋಟಗಳನ್ನು ನಿರ್ಮಿಸುವ ಮೂಲಕ ರಾಜ್ಯಕ್ಕೆ ಮಾದರಿಯಾಗಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಹಾಗೂ ಪೋಷಣ್ ಅಭಿಯಾನದಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆ, ಪಂಚಾಯತ್ರಾಜ್, ಶಿಕ್ಷಣ ಇಲಾಖೆ, ಕೃಷಿ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ಆಹಾರ ಇಲಾಖೆಗಳು ತಮ್ಮ ಪಾತ್ರವನ್ನು ಸಕ್ರಿಯವಾಗಿ ನಿರ್ವಹಿಸುವ ಮೂಲಕ ಯೋಜನೆಯ ಯಶಸ್ಸಿಗೆ ಸಹಕರಿಸಬೇಕೆಂದರು.
ಸಿಇಓ ಪದ್ಮಾ ಬಸವಂತಪ್ಪ ಮಾತನಾಡಿ, ಅಂಗನವಾಡಿ ಕೇಂದ್ರಗಳ ಆವರಣದಲ್ಲಿ ಪೌಷ್ಟಿಕ ಕೈತೋಟ ನಿರ್ಮಿಸಲು ಅವಶ್ಯಕವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಲು ಸೂಚನೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕ ವಿಜಯಕುಮಾರ್ ಮಾತನಾಡಿ, 2020-21 ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಒಟ್ಟು 62 ಬಾಲ್ಯ ವಿವಾಹ ಪ್ರಕರಣ ದಾಖಲಾಗಿದ್ದು, ಈ ಪೈಕಿ 61 ಬಾಲ್ಯ ವಿವಾಹಗಳನ್ನು ತಡೆಯಲಾಗಿದೆ. ಒಂದು ಬಾಲ್ಯ ವಿವಾಹ ನಡೆದಿದ್ದು ಎಫ್ಐಆರ್ ದಾಖಲಿಸಲಾಗಿದೆ ಎಂದರು.
ಬಾಲ್ಯ ವಿವಾಹ ತಡೆ ತಂಡ ಸಕ್ರಿಯವಾಗಿ ಕೆಲಸ ಮಾಡಬೇಕು
ಡಿಸಿ ಮಾತನಾಡಿ, ಕಳೆದ ಸಾಲಿಗೆ ಹೋಲಿಸಿದರೆ ಈ ಬಾರಿ ಬಾಲ್ಯ ವಿವಾಹ ಸಂಖ್ಯೆ ಹೆಚ್ಚಿದೆ. ಕೋವಿಡ್ ಹಿನ್ನೆಲೆಯಲ್ಲಿ ಶಾಲಾ-ಕಾಲೇಜು ಆರಂಭವಾಗಿಲ್ಲವೆಂದು ಎಷ್ಟೋ ಪೋಷಕರು ತಮ್ಮ ಮಕ್ಕಳನ್ನು ಮದುವೆ ಮಾಡುತ್ತಿದ್ದಾರೆ. ಆದ ಕಾರಣ ಬಾಲ್ಯ ವಿವಾಹ ತಡೆ ತಂಡ ಆದಷ್ಟು ಸಕ್ರಿಯವಾಗಿ ಕೆಲಸ ಮಾಡಬೇಕು. ಮುಖ್ಯವಾಗಿ ಪಿಡಿಓಗಳು, ಶಾಲಾ ಮುಖ್ಯಸ್ಥರು ಬಾಲ್ಯ ವಿವಾಹ ತಡೆಗೆ ಸಹಕರಿಸಬೇಕು. ಸಿಡಿಪಿಓ ಗ್ರಾಮ ಲೆಕ್ಕಿಗರು, ಆರ್ಐ, ಪೊಲೀಸ್ ಇಲಾಖೆಯವರು, ಎನ್ಜಿಓ ಸೇರಿದಂತೆ ತಂಡದ ಎಲ್ಲ ಸದಸ್ಯರು ಬಾಲ್ಯ ವಿವಾಹ ತಡೆಗೆ ಶ್ರಮಿಸಬೆಕೆಂದರು.
ಜಿ.ಪಂ ಸಿಇಓ ಪದ್ಮಾ ಬಸವಂತಪ್ಪ ಮಾತನಾಡಿ, 2020-21 ನೇ ಸಾಲಿನಲ್ಲಿ ಜಗಳೂರಿನಲ್ಲಿ 6, ದಾವಣಗೆರೆಯಲ್ಲಿ 18, ಹೊನ್ನಾಳಿಯಲ್ಲಿ 15, ಚನ್ನಗಿರಿಯಲ್ಲಿ 14 ಮತ್ತು ಹರಿಹರದಲ್ಲಿ 9 ಪ್ರಕರಣ ದಾಖಲಾಗಿದೆ. ಮುಂದುವರೆದ ತಾಲ್ಲೂಕುಗಳಲ್ಲೇ ಹೆಚ್ಚಾಗಿ ಪ್ರಕರಣ ದಾಖಲಾಗಿದ್ದು, ಬಾಲ್ಯ ವಿವಾಹ ತಡೆಗೆ ಎಲ್ಲಾ ಸರ್ಕಾರಿ ಅಧಿಕಾರಿ/ನೌಕರರ ತಂಡ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು.
ಬಾಲ್ಯ ವಿವಾಹ ತಡೆಗೆ ಜನನ ದಿನಾಂಕ ನೀಡುವಲ್ಲಿ ಪಾಮೇನಳ್ಳಿ ಶಾಲಾ ಮುಖ್ಯೋಪಾಧ್ಯಾಯರು ಸಹಕರಿಸಲಿಲ್ಲವೆಂದು ಮಕ್ಕಳ ಸಹಾಯವಾಣಿಯವರು ತಿಳಿಸಿದ್ದು, ಇನ್ನು ಮುಂದೆ ಹಾಗೆ ಅಸಹಕರಾರ ತೋರಿದವರ ವಿರುದ್ದ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಬಾಡಿಗೆ ಕಟ್ಟಡ ಬೇಡ
ಜಿಲ್ಲೆಯಲ್ಲಿ ಒಟ್ಟು 1721 ಅಂಗನವಾಡಿ ಕಟ್ಟಡಗಳಿದ್ದು ನಗರದಲ್ಲೇ 375 ಅಂಗನವಾಡಿಗಳು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿವೆ. ಖಾಸಗಿ ಕಟ್ಟಡದಲ್ಲಿ ಅಂಗನವಾಡಿ ನಡೆಸುವುದು ಬೇಡ. ಸರ್ಕಾರಿ ಜಮೀನು ನೀಡಲಾಗುವುದು. ಎಸ್ಸಿಪಿ/ಟಿಎಸ್ಪಿ ಮತ್ತು ಇತರೆ ಯೋಜನೆಗಳಡಿ ಕಟ್ಟಡಗಳನ್ನು ನಿರ್ಮಿಸಬೇಕು.
ಹಾಗೂ ಶಾಲೆಗಳ ಹೆಚ್ಚುವರಿ ಕಟ್ಟಡವನ್ನು ಅಂಗನವಾಡಿ ಕಟ್ಟಡವಾಗಿ ಬಳಕೆ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ. ಇನ್ನು ಮುಂದೆ ಬಾಡಿಗೆ ಕಟ್ಟಡದಲ್ಲಿ ಅಂಗನವಾಡಿ ನಡೆಸಬಾರದು. ಆದಷ್ಟು ಶೀಘ್ರದಲ್ಲೇ ಜಾಗ ಗುರಿತಿಸಿ ಸ್ವಂತ ಕಟ್ಟಡಗಳನ್ನು ಹೊಂದಬೇಕೆಂದು ಸೂಚನೆ ನೀಡಿದ ಅವರು ತಾವು, ಸಿಇಓ ಅಂಗನವಾಡಿ ಕೇಂದ್ರಗಳಿಗೆ ದಿಢೀರ್ ಭೇಟಿ ನೀಡುವುದಾಗಿ ತಿಳಿಸಿದರು.
ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ-2005 ರಡಿ 2020-21 ನೇ ಸಾಲಿನಲ್ಲಿ ದಾವಣಗೆರೆ ತಾಲ್ಲೂಕಿನಲ್ಲಿ 7, ಜಗಳೂರು 8, ಹರಿಹರ 5, ಹೊನ್ನಾಳಿ 4 ಮತ್ತು ಚನ್ನಗಿರಿ 3 ಸೇರಿದಂತೆ ಒಟ್ಟು 27 ಪ್ರಕರಣ ದಾಖಲಾಗಿದ್ದು, 02 ಪ್ರಕರಣಗಳ ಕೌಟುಂಬಿಕ್ ಘಟನಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.ಸಂರಕ್ಷಣಾಧಿಕಾರಿಗಳು 15 ಪ್ರಕರಣಗಳನ್ನು ಆಪ್ತಸಮಾಲೋಚನೆ ಮೂಲಕ ಇತ್ಯರ್ಥಪಡಿಸಿದ್ದು, 10 ಪ್ರಕರಣಗಳು ಆಪ್ತಸಮಾಲೋಚನೆ ಹಂತದಲ್ಲಿದೆ ಎಂದರು.
ಸ್ವಾಧಾರ ಯೋಜನೆಯಡಿ ನಗರದಲ್ಲಿ ಜಾಗೃತಿ ಮಹಿಳಾ ಸಂಘ ಮತ್ತು ಶುಭೋದಯ ಸ್ವಯಂ ಸೇವಾ ಸಂಸ್ಥೆಗಳು ಸ್ವಾಧಾರ ಗೃಹ ನಡೆಸುತ್ತಿದ್ದು, ಶೋಷಣೆಗೆ, ದೌರ್ಜನ್ಯಕ್ಕೊಳಗಾದ ಮಹಿಳೆಯರು ಮಕ್ಕಳು 6 ರಿಂದ 1 ವರ್ಷದವರೆಗೆ ತಾತ್ಕಾಲಿಕ ಆಶ್ರಯ ಜೊತೆಗೆ ಪುನರ್ವಸತಿಗಾಗಿ ಕೌಶಲ್ಯ ತರಬೇತಿ ಪಡೆಯುತ್ತಿದ್ದಾರೆ.
ಜಾಗೃತಿ ಮಹಿಳಾ ಸಂಘದಲ್ಲಿ ಪ್ರಸಕ್ತ ಸಾಲಿನ ಡಿಸೆಂಬರ್ ಅಂತ್ಯದವರೆಗೆ 46 ಮಹಿಳೆಯರು ಮಹಿಳೆಯರು 9ಮಕ್ಕಳು ದಾಖಲಾಗಿದ್ದು, ಈ ಪೈಕಿ 17 ಜನರನ್ನು ಪತಿ ಮತ್ತು ಪೋಷಕರ ವಶಕ್ಕೆ ನೀಡಿದ್ದು, 8 ಜನರು ಸ್ವಾವಲಂಬಿಗಳಾಗಿ ಹಾಗೂ ಒಬ್ಬರು ಮದುವೆಯಾಗಿ ಹಾಗೂ 08 ಮಕ್ಕಳು ಪೋಷಕರ ವಶಕ್ಕೆ ವಹಿಸಿ ಸಂಸ್ಥೆಯಿಂದ ಬಿಡುಗಡೆ ಹೊಂದಿರುತ್ತಾರೆ, ಶುಭೋದಯ ಸ್ವಯಂ ಸೇವಾ ಸಂಸ್ಥೆಯಲ್ಲಿ ಒಟ್ಟು 49 ಮಹಿಳೆಯರು ಮತ್ತು 9 ಮಕ್ಕಳು ದಾಖಲಾಗಿದ್ದು ಈ ಪೈಕಿ 23 ಮಹಿಳೆಯರು ಪತಿ ಮತ್ತು ಪೋಷಕರ ವಶಕ್ಕೆ 07 ಜನ ಸ್ವಾವಲಂಬಿಗಳಾಗಿ ಹಾಗೂ 03 ಮಕ್ಕಳ ತಾಯಿತಯ ವಶಕ್ಕೆ ವಹಿಸಿ ಬಿಡುಗಡೆ ಹೊಂದಿರುತ್ತಾರೆ. ಪುನರ್ವಸತಿಗಾಗಿ ಟೈಲರಿಂಗ್, ಬ್ಯುಟೀಷಿಯನ್, ಬ್ಯಾಗ್ ತಯಾರಿಕೆ, ಎಂಬ್ರಾಯಡರಿ, ಇತರೆ ತರಬೇತಿ ನೀಡಲಾಗುತ್ತಿದೆ ಎಂದರು.
ಜಿಲ್ಲಾಧಿಕಾರಿಗಳು, ಸಿಇಓ ಹಾಗೂ ಎಸ್ಪಿಯರೊಂದಿಗೆ ಸ್ವಾಧಾರ ಗೃಹಗಳಿಗೆ ಭೇಟಿ ನೀಡುವುದಾಗಿ ತಿಳಿಸಿದರು.
ಇದೇ ವೇಳೆ ಬಾಲ್ಯ ವಿವಾಹ ತಡೆಗೆ ಸಂಬಂಧಿಸಿದ ಕೈಪಿಡಿಯನ್ನು ಜಿಲ್ಲಾಧಿಕಾರಿ, ಜಿ.ಪಂ ಸಿಇಓ ಸೇರಿದಂತೆ ಅಧಿಕಾರಿಗಳು ಬಿಡುಗಡೆ ಮಾಡಿದರು.
ಸಭೆಯಲ್ಲಿ ಡಿವೈಎಸ್ಪಿ ಬಿ.ಎಸ್.ಬಸವರಾಜ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕೆ.ಸಿ.ಬಸವರಾಜಯ್ಯ, ಜಿ.ಪಂ. ಮುಖ್ಯ ಯೋಜನಾಧಿಕಾರಿ ಲೋಕೇಶ್, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಗಂಗಾಧರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಕೌಸರ್ ರೇಷ್ಮಾ, ಲೀಡ್ ಬ್ಯಾಂಕ್ ಮ್ಯಾನೇಜರ್ ಸುಶೃತ ಡಿ.ಶಾಸ್ತ್ರಿ, ಶಿಕ್ಷಣ ಇಲಾಖೆ ಇಓ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಂರಕ್ಷಣಾಧಿಕಾರಿಗಳಾದ ಪೂರ್ಣಿಮಾ, ಸುಶೀಲಮ್ಮ, ಮಕ್ಕಳ ಸಹಾಯವಾಣಿಯ ಕೊಟ್ರೇಶ್, ವಿವಿಧ ಎನ್ಜಿಓ ಗಳ ಪದಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವಿವಿಧ ಯೋಜನೆಗಳ ಅಧಿಕಾರಿ/ಸಿಬ್ಬಂದಿಗಳು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.
ಹೌದು! 2023ರ ಆಗಸ್ಟ್ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.
http://Visit : www.suddidina.com
ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ:
ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.
ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.
ಕುಟುಂಬದ ಬಜೆಟ್ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:
ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.
ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

ದಿನದ ಸುದ್ದಿ
ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.
http://Visit : www.suddidina.com
ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.
ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:
1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.
2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.
3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.
4. ಖರಗ್ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.
ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.
ಕರ್ನಾಟಕಕ್ಕೆ ಏನು ಲಾಭ?
ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.
ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.
ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ದಿನದ ಸುದ್ದಿ
ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.
ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:
ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.
http://Visit : www.suddidina.com
ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ
ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.
ದೃಢ ಕರ್ನಾಟಕದ ಸಂಕಲ್ಪ
ಶತಕದ ಪಥ – ಪ್ರಗತಿಯ ರಥ100 ದಿನಗಳು.. ಇದು ಕೇವಲ ಆರಂಭವಷ್ಟೇ. ಜನರ ಆಶಯಗಳಿಗೆ ಸ್ಪಂದಿಸಿ, ರಾಜ್ಯದ ಸಮಗ್ರ ಅಭಿವೃದ್ಧಿಗೆ ವೇಗ ನೀಡುವ ಸಂಕಲ್ಪದೊಂದಿಗೆ ಕಳೆದ 100 ದಿನಗಳಲ್ಲಿ ಹಲವು ಮಹತ್ವದ ಹೆಜ್ಜೆಗಳನ್ನು ಇಡಲಾಗಿದೆ. ಮುಂದಿನ ದಿನಗಳಲ್ಲಿ ಅಭಿವೃದ್ಧಿ, ಉದ್ಯೋಗ, ತಂತ್ರಜ್ಞಾನ, ಮೂಲಸೌಕರ್ಯ, ಶಿಕ್ಷಣ, ಕೃಷಿ ಹಾಗೂ… pic.twitter.com/NDViSWw6LV
— DK Shivakumar (@DKShivakumar) September 10, 2026
ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.
100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.
ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

-
ದಿನದ ಸುದ್ದಿ4 days agoಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ
-
ದಿನದ ಸುದ್ದಿ4 days agoರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
-
ದಿನದ ಸುದ್ದಿ4 days agoಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
-
ದಿನದ ಸುದ್ದಿ4 days agoಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
-
ದಿನದ ಸುದ್ದಿ4 days ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ4 days agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ4 days agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
-
ದಿನದ ಸುದ್ದಿ4 days agoವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್



