ದಿನದ ಸುದ್ದಿ
ಕೊಂಡಜ್ಜಿ ಕೆರೆ ಅರಣ್ಯ ಪ್ರದೇಶವನ್ನು ಜೀವ ವೈವಿದ್ಯ ತಾಣ ಎಂದು ಘೋಷಿಸಲು ಶಿಫಾರಸ್ಸು : ಅನಂತ ಹೆಗಡೆ ಆಶೀಸರ
ಸುದ್ದಿದಿನ,ದಾವಣಗೆರೆ : ಕರ್ನಾಟಕ ಜೀವವೈವಿದ್ಯ ಮಂಡಳಿಯ ಅಧ್ಯಕ್ಷರಾದ ಅನಂತ ಹೆಗಡೆ ಆಶೀಸರರವರು ಕೊಂಡಜ್ಜಿ ಕೆರೆ ಪ್ರದೇಶಕ್ಕೆ ಬೇಟಿ ನೀಡಿ,ಕೊಂಡಜ್ಜಿ ಕೆರೆ ಅರಣ್ಯ ಪ್ರದೇಶವನ್ನು ಪಾರಂಪರಿಕ ಜೀವ ವೈವಿಧ್ಯ ತಾಣ ಎಂದು ಮಂಡಳಿ ನಿರ್ಣಯ ಕೈಗೊಳ್ಳಲು ಶಿಪಾರಸು ಮಾಡುತ್ತೇನೆಂದು ಹೇಳಿದರು.
ಮಂಗಳವಾರದಂದು ಸಂಜೆ ಅರಣ್ಯ ಅಧಿಕಾರಿಗಳು ಪರಿಸರ ತಜ್ಞರ ಜೊತೆ ಹರಿಹರ.ತಾ ಕೊಂಡಜ್ಜಿ ಗ್ರಾಮದ ಕೆರೆ ಪ್ರದೇಶಕ್ಕೆ ಭೇಟಿ ನೀಡಿದ ಅವರು ಕೆರೆ ಮತ್ತು ಅರಣ್ಯ ಪ್ರದೇಶ ಮಲಿನವಾಗಿಲ್ಲ. ಅರಣ್ಯ ನಾಶವಾಗದೇ ಉಳಿದಿದೆ. ಈ ಬಗ್ಗೆ ಕೊಂಡಜ್ಜಿ ಗ್ರಾಮದ ಜನರನ್ನು ಅರಣ್ಯ ಇಲಾಖೆಯ ಅಧಿಕಾರಿ ಸಿಬ್ಬಂದಿಯನ್ನು ಅಶೀಸರ ಶ್ಲಾಘಿಸಿದರು.
ಈ ಕೆರೆ ಪಕ್ಷಿ ಸಂಕುಲಕ್ಕೆ ಆಶ್ರಯ ತಾಣ.ಕೆರೆ ಸುತ್ತಲಿನ 1250 ಎಕರೆ ಅರಣ್ಯ ದಾವಣಗೆರೆ-ಹರಿಹರದ–ಆಮ್ಲಜನಕ ಕೇಂದ್ರ. ಬಯಲು ಸೀಮೆಯ ಹಸಿರು ಜಯಸಿಸ್. ಹರಿಹರ ತಾಲ್ಲೂಕು ಪಂಚಾಯಿತಿ ಜೀವವೈವಿಧ್ಯ ಸಮಿತಿ ಕೊಂಡಜ್ಜಿ ಕೆರೆ – ಅರಣ್ಯವನ್ನು ಗುರುತಿಸಿ ಪಾರಂಪರಿಕ ತಾಣ ಎಂದು ನಿರ್ಣಯ ಕೈಗೊಳ್ಳಬೇಕು ಎಂದರು.
ಪಾಲಿಕೆ ವ್ಯಾಪ್ತಿಯಲ್ಲಿ ವನೀಕರಣ ಕಾರ್ಯ ಚುರುಕುಗೊಳ್ಳಲಿ
ದಾವಣಗೆರೆ ನಗರ ವ್ಯಾಪ್ತಿಯಲ್ಲಿ ಇರುವ 200 ಪಾರ್ಕಗಳಲ್ಲಿ ಫಲವೃಕ್ಷಗಳನ್ನು ನೆಡಲು ವಿಶೇಷ ಯೋಜನೆ ಜಾರಿ ಮಾಡಬೇಕು ಎಂದು ಅನಂತ ಹೆಗಡೆ ಆಶೀಸರ ಹೇಳಿದರು.
ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಮಹಾನಗರ ಪಾಲಿಕೆ ಮಹಾಪೌರರಾದ ಬಿ.ಜೆ.ಅಜಯ್ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಮಹಾನಗರ ಪಕ್ಷಿ ಸಂಕುಲಕ್ಕೆ ಆಶ್ರಯ ನೀಡಿರುವ ವೃಕ್ಷ ಸಮೂಹ ಗುರುತಿಸಿ ಪಾರಂಪರಿಕ ವೃಕ್ಷಗಳು ಎಂದು ಮಾನ್ಯತೆ ನೀಡಬೇಕು.
ಸ್ಮಾರ್ಟ್‍ಸಿಟಿ ಯೋಜನೆಯಲ್ಲಿ ಗ್ರೀನ್ ಸಿಟಿ ತತ್ವ ಅಳವಡಿಸಬೇಕು. ಕೆರೆ ಅಭಿವೃದ್ಧಿಯಲ್ಲಿ ಅತಿಯಾದ ಕಾಂಕ್ರಿಟೀಕರಣ ಕಾಮಗಾರಿ ಸಾಧು ಅಲ್ಲ ಎಂಬ ಒಟ್ಟಾಭಿಪ್ರಾಯ ದಾವಣಗೆರೆ ಮಹಾನಗರ ಪಾಲಿಕೆಯ ಜೀವವೈವಿಧ್ಯ ಸಮಿತಿ ಸಭೆಯಲ್ಲಿ ವ್ಯಕ್ತವಾಯಿತು. ನಗರದ ಹೋಟೆಲ್, ಕಲ್ಯಾಣ ಮಂಟಪ, ಹಾಸ್ಟೆಲ್‍ಗಳ ಅಡಿಗೆ ತ್ಯಾಜ್ಯದಿಂದ ಬಯೋಗ್ಲಾಸ್ ತಯಾರಿಸುವ ಯೋಜನೆ ಜಾರಿ ಮಾಡಬೇಕು. ಪಾಲಿಕೆ ಈ ಬಗ್ಗೆ ಅಗತ್ಯ ಕ್ರಮಕ್ಕೆ ಮುಂದಾಗಬೇಕು ಎಂದು ನಿರ್ಣಯಿಸಲಾಯಿತು.
ಪಾಲಿಕೆ ಕಮೀಷನರ್ ವಿಶ್ವನಾಥ್ ಮುದಜ್ಜಿ ಜೀವವೈವಿಧ್ಯ ಸಮಿತಿ ಸದಸ್ಯರು, ಪರಿಸರ ಸಂಸ್ಥೆಗಳ ಸದಸ್ಯರು, ಜಿಲ್ಲೆಯ ನಗರ ಸಂಸ್ಥೆಗಳ ಪ್ರಮುಖರು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


