Connect with us

ದಿನದ ಸುದ್ದಿ

ಬುಡಾ ನಿವೇಶನಗಳ ಹರಾಜು : 9.67ಕೋಟಿ ಆದಾಯ

Published

on

ಸುದ್ದಿದಿನ,ಬಳ್ಳಾರಿ : ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ನಗರದ ರಾಘವ ಕಲಾಮಂದಿರದಲ್ಲಿ ಪ್ರಾಧಿಕಾರದಲ್ಲಿ ಲಭ್ಯವಿರುವ 49 ವಾಸಯೋಗ್ಯ ಮತ್ತು ವಾಣಿಜ್ಯ ನಿವೇಶನಗಳ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ವಾಣಿಜ್ಯ ಸಂಕೀರ್ಣದಲ್ಲಿನ 3 ಖಾಲಿ ಜಾಗದ ಬಹಿರಂಗ ಹರಾಜು ಪ್ರಕ್ರಿಯೆಗೆ ಬುಡಾ ಅಧ್ಯಕ್ಷ ದಮ್ಮೂರು ಶೇಖರ್ ಅವರು ಸೋಮವಾರ ಚಾಲನೆ ನೀಡಿದರು.

ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ರಾಘವ ಕಲಾಮಂದಿರದಲ್ಲಿ ನಡೆದ ವಾಸಯೋಗ್ಯ ನಿವೇಶನ, ವಾಣಿಜ್ಯ ನಿವೇಶನ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ವಾಣಿಜ್ಯ ಸಂಕೀರ್ಣದಲ್ಲಿನ ಖಾಲಿ ಜಾಗಗಳ ಬಹಿರಂಗ ಹರಾಜಿನಲ್ಲಿ ಪ್ರಾಧಿಕಾರಕ್ಕೆ ಒಟ್ಟು 9.67 ಕೋಟಿ ರೂಪಾಯಿ ಆದಾಯ ಬಂದಿರುತ್ತದೆ.

ಈ ಸಂದರ್ಭದಲ್ಲಿ ಪ್ರಾಧಿಕಾರದ ಆಯುಕ್ತ ವೀರೇಂದ್ರ ಕುಂದಗೋಳ, ಸಹಾಯಕ ಕಾರ್ಯಪಾಲಕ ಅಭಿಯಂತರ ರವಿಶಂಕರ್ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಸಿಬ್ಬಂದಿ ಇದ್ದರು. ನಗರದ ಹಲವಡೆಯಿಂದ ಬಂದಿದ್ದ ನೂರಕ್ಕೂ ಹೆಚ್ಚು ಜನರು ತಲಾ 25 ಸಾವಿರ ಮುಂಗಡ ಹಣ ಪಾವತಿಸಿ ಹರಾಜಿನಲ್ಲಿ ಭಾಗವಹಿಸಿದ್ದರು. ಕೋವಿಡ್ ನಿಯಮಗಳನ್ನು ಪಾಲಿಸಿ ಹರಾಜು ಪ್ರಕ್ರಿಯೆ ನೆರವೇರಿಸಲಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಅಂಧ ಮಕ್ಕಳ ವಸತಿ ಶಾಲೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿಗೆ ಅಂಧ ಮಕ್ಕಳ ಸರ್ಕಾರಿ ಪಾಠಶಾಲೆ 1 ನೇ ತರಗತಿ (6ವರ್ಷ) ಯಿಂದ 10ನೇ ತರಗತಿ (16ವರ್ಷ) ವರೆಗೆ ಅಂಧ ಹೆಣ್ಣು ಮತ್ತು ಗಂಡು ಮಕ್ಕಳಿಗೆ ದಾಖಲಾತಿಯು ಪ್ರಾರಂಭವಾಗಿದೆ.

ಈ ಶಾಲೆಯಲ್ಲಿ ಅಂಧ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣದ ಜೊತೆಗೆ ವಸತಿಯುತ ಶಾಲೆಯಾಗಿರುತ್ತದೆ. ಸಾರ್ವಜನಿಕ ಶಿಕ್ಷಣ ಇಲಾಖೆಯವರು ನಿಗದಿಪಡಿಸಿರುವ ಸಾಮಾನ್ಯ ಮಕ್ಕಳಿಗೆ ನೀಡುತ್ತಿರುವ ಶಿಕ್ಷಣವನ್ನೇ ಇಲ್ಲಿಯೂ ಭೋದಿಸುವುದರ ಜೊತೆಗೆ ಬೈಲ್ ಲಿಪಿಯನ್ನು ಅಳವಡಿಸಿಲಾಗಿದೆ.

ಶೈಕ್ಷಣಿಕ ಅವಧಿಯಲ್ಲಿ ಅಂಧ ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳಾದ Daily Living Skills(DLS), ಯೋಗ, ದೈಹಿಕ ಶಿಕ್ಷಣ, ಸಂಗೀತ, ಡ್ಯಾನ್ಸ್ ಚಲನ-ವಲನ ತರಬೇತಿ, ಕಂಪ್ಯೂಟರ್ ತರಬೇತಿ, ಒಳಾಂಗಣ ಹಾಗೂ ಹೊರಾಂಗಣ ಆಟಗಳು, ಬ್ರೈಲ್ ಪುಸ್ತಕಗಳು, ಶಾಲಾ ಸಮವಸ್ತ್ರ, ಕಲಿಕಾ ಉಪಕರಣಗಳು, ವೈದ್ಯಕೀಯ ತಪಾಸಣೆಗಳು, ಕರಕುಶಲ ಕಾರ್ಯ ಚಟುವಟಿಕೆಗಳನ್ನು ಕಳಿಸಲಾಗುವುದು.

ಸಾರ್ವಜನಿಕರು ತಮ್ಮ ವ್ಯಾಪ್ತಿಯಲ್ಲಿರುವ ದೃಷ್ಟಿ ವಿಕಲಚೇತನ ಮಕ್ಕಳು ಕಂಡು ಬಂದಲ್ಲಿ ಅವರ ಪೋಷಕರಿಗೆ ನಮ್ಮ ಶಾಲೆಯ ಬಗ್ಗೆ ಮಾಹಿತಿ ನೀಡಿ ಶೇ.40 ಕ್ಕಿಂತ ಹೆಚ್ಚಿನ ದೃಷ್ಟಿದೋಷ ಹೊಂದಿರುವ ಮಕ್ಕಳು ನಮ್ಮ ಸರ್ಕಾರಿ ಶಾಲೆಗೆ ದಾಖಲಾಗುವಂತೆ ಮಾಡಿ ವಿಕಲಚೇತನ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸಹಕರಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಾಲೆಯ ಮುಖ್ಯೋಪಾಧ್ಯಾಯರು, ಅಧೀಕ್ಷರಾದ ಗಂಗಾಧರಪ್ಪ.ಹೆಚ್.ಎನ್ ಮೊ.ಸಂ: 9984534883, 08182-250442 ಸಂಪರ್ಕಿಸಬಹುದೆAದು ಇಲಾಖೆಯ ಅಧೀಕ್ಷಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ, ಈ ವರ್ಷದ ಡಾ|| ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯನ್ನು ಅತ್ಯಂತ ಸರಳವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಎಪ್ರಿಲ್‌ 14 ರಂದು ಮಂಗಳವಾರ ಬೆಳಿಗ್ಗೆ 9:00 ಗಂಟೆಗೆ ಡಾ|| ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿರುವ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು. ನಂತರ ಬೆಳಿಗ್ಗೆ 11:00 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ “ತುಂಗಭದ್ರಾ” ಸಭಾಂಗಣದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಮೆರವಣಿಗೆ ಮಾರ್ಗ

ಬೆಳಿಗ್ಗೆ 9:00 ಗಂಟೆಗೆ ಅಂಬೇಡ್ಕರ್ ವೃತ್ತದಿಂದ ಭಾವಚಿತ್ರದ ಮೆರವಣಿಗೆ ಆರಂಭವಾಗಲಿದ್ದು, ಹೈಸ್ಕೂಲ್ ಮೈದಾನ ಮಾರ್ಗವಾಗಿ ಮಹಾನಗರ ಪಾಲಿಕೆ, ಗಾಂಧಿ ವೃತ್ತ ಹಾಗೂ ಜಯದೇವ ವೃತ್ತದ ಮೂಲಕ ಸಾಗಿ ಪುನಃ ಅಂಬೇಡ್ಕರ್ ವೃತ್ತಕ್ಕೆ ತಲುಪಲಿದೆ.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ದಾವಣಗೆರೆ ತಾಲ್ಲೂಕು ಮಟ್ಟದ ಅಧಿಕಾರಿಗಳು, ದಲಿತಪರ ಸಂಘಟನೆಯ ಮುಖಂಡರು, ಪ್ರಗತಿಪರ ಚಿಂತಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ರವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ

Published

on

ಸುದ್ದಿದಿನ,ಚಿಕ್ಕಮಗಳೂರು:ಜಿಲ್ಲೆಯ ಎನ್‌ಆರ್ ಪುರದಲ್ಲಿ ಇಂದುಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಹಂದೂರು ಗ್ರಾಮದಿಂದ ಎನ್.ಆರ್.ಪುರಕ್ಕೆ ಸಂಪರ್ಕಿಸುವ ನೂತನ ಭದ್ರಾ ಸೇತುವೆಯನ್ನು ಲೋಕಾರ್ಪಣೆಗೊಳಿಸಿ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ, ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ವಿತರಿಸಿದೆ.

ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಜೆ.ಜಾರ್ಜ್, ಶೃಂಗೇರಿ ಶಾಸಕರಾದ ಟಿ.ಡಿ.ರಾಜೇಗೌಡ, ಕಡೂರು ಶಾಸಕರಾದ ಆನಂದ್, ತರೀಕೆರೆ ಶಾಸಕರಾದ ಶ್ರೀನಿವಾಸ್, ಮಾಗಡಿ ಶಾಸಕ‌ ಬಾಲಕೃಷ್ಣ ಸೇರಿ ಜಿಲ್ಲೆಯ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರು, ಮುಖಂಡರು ಹಾಗೂ ಸಂಪಾದಕರಾದ ವಿಶ್ವೇಶ್ವರ ಭಟ್, ಕೆ‌ಎಸ್‌ಟಿ‌ಡಿಸಿ ಅಧ್ಯಕ್ಷರಾದ ಸರೋವರ್ ಶ್ರೀನಿವಾಸ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending