Connect with us

ದಿನದ ಸುದ್ದಿ

ಕೆಎಸ್‍ಓಯು ಟೆಕ್ನಾಲಜಿ ಪಾರ್ಕ್ ಆಫ್ ಇಂಡಿಯಾದೊಂದಿಗೆ ಒಪ್ಪಂದ

Published

on

ಸುದ್ದಿದಿನ,ದಾವಣಗೆರೆ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮತ್ತು ಭಾರತ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗದ ಸಾಫ್ಟ್‍ವೇರ್ ಟೆಕ್ನಾಲಜಿ ಪಾರ್ಕ್ ಆಫ್ ಇಂಡಿಯಾ ಇವರ ನಡುವೆ ಪರಸ್ಪರ ತಿಳುವಳಿಕೆ ಪತ್ರಕ್ಕೆ ಒಪ್ಪಂದ ಇಂದು ಮಾಡಿಕೊಳ್ಳಲಾಯಿತು.

ಕ.ರಾ,ಮು.ವಿ. ದಾವಣಗೆರೆ ಪ್ರಾದೇಶಿಕ ಕೇಂದ್ರದಲ್ಲಿನ ಕಟ್ಟಡದಲ್ಲಿ 10,000 ಚದರಡಿ ವಿಸ್ತೀರ್ಣವನ್ನು ಈ ಉದ್ದೇಶಕ್ಕೆ ನೀಡಲಾಗಿದೆ. ಭಾರತ ಸರ್ಕಾರದ ಯೋಜನೆಯನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಪಡೆದುಕೊಂಡಿದ್ದು, ಈ ಯೋಜನೆಯಡಿ ಐ.ಟಿ. ಉದ್ಯಮ, ಎಲೆಕ್ಟ್ರಾನಿಕ್ ಉದ್ಯಮಕ್ಕೆ ಪೂರಕವಾದ ಚಟುವಟಿಕೆಗಳನ್ನು ನಡೆಸುತ್ತಿದೆ.

ಭವಿಷ್ಯದಲ್ಲಿ ಕ.ರಾ.ಮು.ವಿ.ಯ ವಿದ್ಯಾರ್ಥಿ ಸಮೂಹಕ್ಕೆ ಮಾಹಿತಿ ತಂತ್ರಜ್ಞಾನ ವಿಷಯದಲ್ಲಿ ಹೆಚ್ಚಿನ ಬೆಂಬಲ ಹಾಗೂ ಸೇವೆ ದೊರೆಯಲಿದೆ. ದಾವಣಗೆರೆ ಪ್ರಾದೇಶಿಕ ಕೇಂದ್ರವನ್ನು ಈ ಉದ್ದೇಶಕ್ಕಾಗಿ ವಿಶ್ವವಿದ್ಯಾನಿಲಯವು ಒದಗಿಸಿದೆ. ವಿಶ್ವವಿದ್ಯಾನಿಲಯದ ಕೋರ್ಸ್‍ಗಳು, ಕೈಗಾರಿಕಾ ಅಗತ್ಯತೆಗಳು ಹಾಗೂ ಉದ್ಯಮದ ಅವಶ್ಯಕತೆಗಳಿಗೆ ಅನುಕೂಲವಾಗುವಂತೆ ಪಠ್ಯಕ್ರಮ ರಚನೆಗೆ, ಸೌಲಭ್ಯಗಳು ಸೃಷ್ಟಿಯಾದಾಗ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ ಒಟ್ಟಾರೆಯಾಗಿ ನೆರವಾಗಲಿದೆ.

ರಾಷ್ಟ್ರೀಯ ಶಿಕ್ಷಣ ನೀತಿ 2020ರ ಆಶಯದಂತೆ ವಿಶ್ವವಿದ್ಯಾನಿಲಯವು ತನ್ನ ಕೋರ್ಸ್‍ಗಳ ಮುಖಾಂತರ ಕೈಗಾರಿಕೆ ಮತ್ತು ಉದ್ಯಮಗಳ ಜೊತೆ ಸಮೀಕರಿಸಿಕೊಳ್ಳಲು ಹಾಗೂ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಿಗೆ, ಅಧ್ಯಾಪಕವರ್ಗದವರಿಗೆ ಮತ್ತು ಸಿಬ್ಬಂದಿವರ್ಗದವರಿಗೆ ಹಾಗೂ ಶೈಕ್ಷಣಿಕ ಚಟುವಟಿಕೆಗಳಿಗೆ ಸಂಬಂಧಿಸಿದಂತೆ, ಒಟ್ಟಾರೆ ಮಾಹಿತಿ ತಂತ್ರಜ್ಞಾನದ ಒತ್ತಾಸೆ ಪಡೆಯುವಲ್ಲಿ ಈ ಒಪ್ಪಂದ ನೆರವಾಗಲಿದೆ.

ವಿಶ್ವವಿದ್ಯಾನಿಲಯವು ತನ್ನ ಎಲ್ಲಾ ವಿದ್ಯಾರ್ಥಿಗಳ ಒಳಿತಿಗಾಗಿ ಹಾಗೂ ಭವಿಷ್ಯದ ದೃಷ್ಟಿಯಿಂದ ಈ ಒಪ್ಪಂದವನ್ನು ಮಾಡಿಕೊಂಡಿದೆ. ದಾವಣಗೆರೆ ಸಂಸದರಾದ ಜಿ.ಎಂ. ಸಿದ್ದೇಶ್ವರ್‍ರವರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಎಸ್. ವಿದ್ಯಾಶಂಕರ್ ಹಾಗೂ ಎಸ್.ಟಿ.ಪಿ.ಐ. ನಿರ್ದೇಶಕರಾದ ಶೈಲೇಂದ್ರಕುಮಾರ್ ತ್ಯಾಗಿ ಇವರುಗಳ ಒತ್ತಾಸೆಯೊಂದಿಗೆ ಕಾರ್ಯಕ್ರಮ ಜಾರಿಯಾಗುತ್ತಿದೆ. ಎಸ್.ಟಿ.ಪಿ.ಐ. ಸ್ಥಾಪಿಸುತ್ತಿರುವ ಈ ಕೇಂದ್ರ ಕರ್ನಾಟಕದ 5ನೇ ಕೇಂದ್ರವಾಗಿದೆ.

ಇಂದು ನಡೆದ ಈ ಒಡಬಂಡಿಕೆ ಕಾರ್ಯಕ್ರಮದಲ್ಲಿ ಕುಲಪತಿಗಳಾದ ಡಾ. ಎಸ್. ವಿದ್ಯಾಶಂಕರ್, ಹಣಕಾಸು ಅಧಿಕಾರಿ ಡಾ. ಖಾದರ್‍ಪಾಷ, ಡೀನ್‍ರಾದ (ಶೈಕ್ಷಣಿಕ) ಡಾ. ಕಾಂಬ್ಳೆ ಅಶೋಕ್ , ಪರೀಕ್ಷಾಂಗ ಕುಲಸಚಿವರಾದ ಡಾ. ಕವಿತಾ ರೈ, ಡೀನ್ (ಅಧ್ಯಯನ ಕೇಂದ್ರ) ರಾದ ಡಾ. ಷಣ್ಮುಖ, ಐ,ಟಿ. ಹಾಗೂ ಕಂಪ್ಯೂಟರ್ ವಿಭಾಗಗಳ ಮುಖ್ಯಸ್ಥರಾದ ಡಾ. ಬಿ.ಎಸ್. ರಶ್ಮಿ, ಡಾ. ಸುನಿತ, ಎಸ್.ಟಿ.ಪಿ.ಐ. ಅಧಿಕಾರಿಗಳಾದ ಜಯಪ್ರಕಾಶ್, ಕರಾಮುವಿಯ ಅಭಿಯಂತರ ಭಾಸ್ಕರ್ ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ನಕಲಿ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 6 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಟಿ. ಸೋಮ್ಲನಾಯ್ಕ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 2023-24 ಮತ್ತು 2024-25ನೇ ಸಾಲಿನ ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬAಧಿಸಿದ ಕಾಮಗಾರಿಗಳಿಗೆ ಸಂಬAಧಿಸಿದAತೆ ಹೊನ್ನಾಳಿ ಉಪವಿಭಾಗದ ಅಡಿಯಲ್ಲಿ ನಡೆದಿರುವ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ನಾಲ್ಕು ಹಂತದ ತುರ್ತು ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಸಂಪೂರ್ಣ ಕಡತವನ್ನು ಪಡೆದು ಪರಿಶೀಲನೆ ಮಾಡಿದಾಗ, ಇಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಲೋಪಗಳು ಕಂಡುಬAದಿರುತ್ತವೆ. ಅಂತಹ ಪ್ರಮುಖ ಲೋಪಗಳನ್ನು ಉಲ್ಲೇಖಿಸಿ ಸೂಕ್ತ ತನಿಖೆಗೆ ಒಳಪಡಿಸುವಂತೆ ದಿನಾಂಕ: 01-12-2025 ರಂದು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರಿಗೆ ದೂರು ನೀಡಲಾಗಿತ್ತು.

ಈ ದೂರು ಅರ್ಜಿಗೆ ಸಂಬಂಧಿಸಿದಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು 2 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ದಿನಾಂಕ: 27-01-2026 ರಂದು ಜ್ಞಾಪನವನ್ನು ನೀಡಲಾಗಿರುತ್ತದೆ. ಆದರೆ ಜ್ಞಾಪನ ನೀಡಿ 6 ತಿಂಗಳು ಕಳೆಯುತ್ತ ಬಂದರೂ ಈ ದೂರು ಅರ್ಜಿಗೆ ಸಂಬAಧಿಸಿದAತೆ ಕಾರ್ಯಪಾಲಕ ಅಭಿಯಂತರರು (ಪ್ರಭಾರ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿರುತ್ತಾರೆ.

ಈ ದೂರು ಅರ್ಜಿಯನ್ನು ತನಿಖೆಗೆ ಒಳಪಡಿಸುವಲ್ಲಿ ತೋರಿದ ನಿರ್ಲಕ್ಷö್ಯಕ್ಕೆ ಪ್ರಮುಖ ಕಾರಣವೆಂದರೆ, ಹೊನ್ನಾಳಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರೇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯನಿರ್ವಹಿಸಿರುತ್ತಾರೆ. ಈ ಕಾರಣಕ್ಕಾಗಿ ತನ್ನ ಮೇಲಿನ ಆರೋಪವನ್ನು ತನಿಖೆಗೆ ಒಳಪಡಿಸುವಲ್ಲಿ ನಿರ್ಲಕ್ಷö್ಯ ತೋರಿ, ಈ ದೂರು ಅರ್ಜಿಯನ್ನು ಮೂಲೆ ಗುಂಪಾಗಿಸಿರುತ್ತಾರೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಸೋಮ್ಲನಾಯ್ಕ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ

Published

on

ಸುದ್ದಿದಿನಡೆಸ್ಕ್:ಜಪಾನ್‌ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿತು. ಅವರನ್ನು ಬಂಧಿಸಿ 19 ದಿನ ಜೈಲಿನಲ್ಲಿ ಇರಿಸಲಾಯಿತು.

ತಮ್ಮ ಬಂಧನ ಸರಿಯಲ್ಲ ಎಂದು ತನಕಾ ಮಾನವ ಹಕ್ಕುಗಳ ಆಯೋಗದ ಮೊರೆ ಹೋದರು. ವೀಸಾ ಅವಧಿ ಮುಗಿಯುತ್ತಿದ್ದಂತೆ, ಪ್ರಕರಣ ಮುಗಿಯುವವರೆಗೂ ಭಾರತದಲ್ಲೇ ಇರಲು ವಿಚಿತ್ರ ಪ್ರಯತ್ನವೂ ಮಾಡಿದರು. ಪೊಲೀಸ್ ಠಾಣೆಯಿಂದ ಪ್ಲಾಸ್ಟಿಕ್ ಕುರ್ಚಿಯೊಂದನ್ನು ತೆಗೆದುಕೊಂಡು ಹೋಗಿ, ಮತ್ತೆ ಬಂಧನಕ್ಕೊಳಗಾಗಲು ಪ್ರಯತ್ನಿಸಿದರು!

ಅದು ಆಗದೇ ಇದ್ದಾಗ ಜಪಾನ್ ಗೆ ಮರಳಿ . ಅಲ್ಲಿಂದಲೇ ತಮ್ಮ ಹೋರಾಟ ಮುಂದುವರಿಸಿದ ತನಕಾ ಅವರ ಹೋರಾಟಕ್ಕೆ ಜಯ ಸಿಕ್ಕಿದೆ ಸಿಕ್ಕಿದೆ. ಕರ್ನಾಟಕದಿಂದ 75,000 ಪರಿಹಾರವನ್ನು ಪಡೆದುಕೊಂಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಡಾಲಿಯ ಕನಸು ಒಂದೇ ಹೀರೋ ಆಗೋದು

Published

on

ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು!

ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು ಗುರಿಯ ಮೇಲೆ ಸಂಪೂರ್ಣ ಗಮನ ಹೊಂದಿದ್ದವರು. ಯಾವುದೇ ಡೈವರ್ಷನ್ ಇಲ್ಲ, ಸಿನಿಮಾ ಕನಸಿನ ಕಡೆ ಮಾತ್ರ ಗಮನ!

ಇಂದು ಬಹುಭಾಷಾ ನಟನಾಗಿ ದೊಡ್ಡ ಎತ್ತರಕ್ಕೇರಿದ್ದರೂ, ತಮ್ಮ ಬೇರುಗಳನ್ನು ಅವರು ಮರೆತಿಲ್ಲ. ಇಂದಿಗೂ ತಮ್ಮ ಹಳೆಯ ಸ್ನೇಹಿತರ ಜೊತೆಗೂಡಿ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿರ್ಮಾಪಕರಾಗಿಯೂ ಗುರುತಿಸಿಕೊಂಡಿರುವ ಅವರು, ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ.

ಅಂದಿನ ಅದೇ ಸರಳತೆ, ಅದೇ ನಡವಳಿಕೆ ಇಂದಿಗೂ ಇದೆ!

ಒಬ್ಬ ಕಾಲೇಜು ಯುವಕನಿಂದ ಬಹುಭಾಷಾ ತಾರೆಯವರೆಗೆ—ಎಂತಹ ಸ್ಪೂರ್ತಿದಾಯಕ ಪಯಣ! ಹ್ಯಾಪಿ ಬರ್ತ್ಡೇ ಡಾಲಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending