ದಿನದ ಸುದ್ದಿ
ಫೆ.8 ಮತ್ತು 9 ರಂದು ವಾಲ್ಮೀಕಿ ಜಾತ್ರೆ ;ಮೂರನೇ ವರ್ಷದ ಜಾತ್ರೆ ಅದ್ದೂರಿಯಾಗಿ ನಡೆಯಲಿದೆ: ಶಾಸಕ ಎಸ್.ವಿ.ರಾಮಚಂದ್ರ
ಸುದ್ದಿದಿನ,ದಾವಣಗೆರೆ : ವಾಲ್ಮೀಕಿ ಜಯಂತಿಯ ಅಂಗವಾಗಿ ಹಮ್ಮಿಕೊಂಡಿರುವ ಜಾತ್ರಾ ಮಹೋತ್ಸವಕ್ಕೆ ಸರ್ಕಾರ ರೂ.1.99 ಕೋಟಿ ಹಣ ಬಿಡುಗಡೆ ಮಾಡಿದೆ ಹಾಗೂ ಸುಮಾರು ರೂ. 10 ಕೋಟಿ ಹಣವನ್ನು ಮಠದ ಅಭಿವೃದ್ಧಿಗಾಗಿ ಬಿಡುಗಡೆ ಮಾಡಿದ್ದು ಈ ಹಣದಲ್ಲಿ ರಾಮಾಯಣ ಸಂಶೋಧನಾ ಕೇಂದ್ರ ಹಾಗೂ ಗ್ರಂಥಾಲಯ ನಿರ್ಮಾಣ ಮಾಡಲಾಗುವುದು ಎಂದು ಜಗಳೂರು ಶಾಸಕರು ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಆದ ಎಸ್. ವಿ. ರಾಮಚಂದ್ರ್ಪ ತಿಳಿಸಿದರು.
ಜಿಲ್ಲಾಡಳಿತದ ಸಹಯೋಗದೊಂದಿಗೆ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ಸೋಮವಾರ ನಡೆದ 2021ನೇ ಸಾಲಿನ ಮಹರ್ಷಿ ವಾಲ್ಮೀಕಿ ಜಾತ್ರೆಯ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ ಎರಡು ವರ್ಷದಂತೆ ಈ ಬಾರಿಯೂ ವಾಲ್ಮೀಕಿ ಜಾತ್ರೆಯನ್ನು ಅದ್ದೂರಿಯಾಗಿ ಆಚರಿಸಲಾಗುವುದು.
ಆದರೆ ಕಳೆದ ವರ್ಷಕ್ಕಿಂತ ಈ ವರ್ಷದ ಪರಿಸ್ಥಿತಿ ಭಿನ್ನವಾಗಿದ್ದು ಕೊರೋನ ಮಹಾಮಾರಿ ನಮ್ಮೆಲ್ಲರ ನಡುವೆ ಇದೆ, ಹಾಗಾಗಿ ನಾವುಗಳೆಲ್ಲ ಅತ್ಯಂತ ಜಾಗರೂಕರಾಗಿ ಎಚ್ಚರಿಕೆಯಿಂದ ಈ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು. ಹಾಗೂ ರಾಮಾಯಣ ಸಂಶೋಧನಾ ಕೇಂದ್ರ ಸಂಶೋಧನಾ ಆಸಕ್ತರಿಗೆ ಮತ್ತು ರಾಮಾಯಣದ ಬಗ್ಗೆ ಅಧ್ಯಯನ ನಡೆಸುವವರಿಗೆ ಉತ್ತಮ ಕೇಂದ್ರ ಆಗಲಿದೆ ಎಂದರು.
ಈ ಜಾತ್ರೆಯು ಕೇವಲ ಒಂದು ಜಾತಿಗೆ ಸೀಮಿತವಾಗದೆ ಎಲ್ಲರಿಗೆ ಸೇರಿದ್ದಾಗಿದೆ. ಹಾಗೂ ಹಿಂದುಳಿದ ಪರಿಶಿಷ್ಠ ಜನಾಂಗದ ಕಲೆ ಮತ್ತು ಸಂಸ್ಕøತಿಯ ಪ್ರದರ್ಶನಕ್ಕೆ ಒಂದು ಉತ್ತಮ ವೇದಿಕೆಯಾಗಲಿದೆ. ಜಾತ್ರೆಗೆ ಬರುವ ಭಕ್ತಾದಿಗಳಿಗೆ ಸೂಕ್ತ ನೀರಿನ ವ್ಯವಸ್ಥೆ ಸೇರಿದಂತೆ ಉತ್ತಮ ಮೂಲ ಸೌಕರ್ಯವನ್ನು ಒದಗಿಸಲಾಗುವುದು. ಹಾಗೂ ಸಹಜವಾಗಿ ಕೇಂದ್ರ ಸರ್ಕಾರದ ಕೋವಿಡ್-19 ಮಾರ್ಗಸೂಚಿಗಳನ್ನು ಪಾಲನೆ ಮಾಡಲಾಗುವುದು. ಹಿಂದಿನ ವರ್ಷದ ಜಾತ್ರೆಯ ಅನುಭವಗಳೊಂದಿಗೆ ಈ ವರ್ಷ ಯಾವುದೇ ತೊಂದರೆಯಾಗದಂತೆ ಜನತೆಯ ಸಹಕಾರದೊಂದಿಗೆ ಯಶಸ್ವಿಗೊಳಿಸಲಾಗುವುದು ಎಂದರು.
ಮಠವು ನಮ್ಮನ್ನು ಬೆಳೆಸಿದೆ. ನಮ್ಮ ಸಮಾಜದ ಬೆಳವಣಿಗೆಗೆ ಶ್ರೀಗಳು ಅನೇಕ ಕಾರ್ಯಗಳನ್ನು ಮಾಡಿದ್ದಾರೆ. ಅದರಲ್ಲಿ ಮೀಸಲಾತಿ ಹೋರಾಟವೂ ಒಂದು. ನಮ್ಮ ಸಮಾಜ 17 ಶಾಸಕರನ್ನು ಕೊಟ್ಟಿದೆ, ನಾವೆಲ್ಲರೂ ಸೇರಿ ಮೀಸಲಾತಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದು ಇನ್ನು ಕೆಲವೇ ದಿನಗಳಲ್ಲಿ ಹೋರಾಟದ ಫಲ ದೊರೆಯಲಿದೆ ಎಂದರು.
ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಮಾತನಾಡಿ, ಮಹರ್ಷಿ ವಾಲ್ಮೀಕಿ ಜಯಂತಿ ಒಂದು ಐತಿಹಾಸಿಕ ಕಾರ್ಯಕ್ರಮ ಆಗಲಿದೆ. ಭಾರತೀಯ ಸಂಸ್ಕøತಿಗೆ ರಾಮಾಯಣದಂತಹ ಮಹಾನ್ ಕೃತಿಯನ್ನು ನೀಡಿದ ಮಹರ್ಷಿ ವಾಲ್ಮೀಕಿಯವರ ಜಯಂತಿಗೆ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿ ಸೇರಿದಂತೆ ಜಿಲ್ಲಾಡಳಿತದ ಎಲ್ಲ ಇಲಾಖೆಗಳು ಪ್ರತಿ ವರ್ಷ ಸಂಪೂರ್ಣ ಸಹಕಾರ ನೀಡುತ್ತಿದ್ದು ಇವರೆಲ್ಲರಿಗೂ ಗುರುಪೀಠದಿಂದ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ.
ಈ ವರ್ಷ ಜಗತ್ತಿಗೇ ವ್ಯಾಪಿಸಿರುವ ಕೊರೊನಾ ಆತಂಕ ತಂದೊಡ್ಡಿದ್ದರೂ ಎಲ್ಲರೂ ತಮ್ಮ ಆರೋಗ್ಯದ ಕಡೆ ಗಮನ ನೀಡಿ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಜಾತ್ರೆಯನ್ನು ಆಚರಿಸೋಣ. ಜಾತ್ರೆಗಳೆಂದರೆ ಭಾರತೀಯರಿಗೆ ಭಾವೈಕ್ಯತೆ ಬೆಸೆಯುವ ಉತ್ಸವಗಳಾಗಿದ್ದು ತಮ್ಮೆಲ್ಲರ ಸಹಕಾರದಿಂದ ಈ ಬಾರಿಯ ಜಾತ್ರಾ ಮಹೋತ್ಸವ ಯಶಸ್ವಿಯಾಗಲಿ ಎಂದು ಆಶಿಸಿದರು.
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ಜಿಲ್ಲಾಡಳಿತ ಹಾಗೂ ವಾಲ್ಮೀಕಿ ಗುರು ಪೀಠದಿಂದ ಆಯೋಜಿಸಲಾಗುತ್ತಿರುವ ಮಹರ್ಷಿ ವಾಲ್ಮೀಕಿ ಜಾತ್ರೆಯಲ್ಲಿ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಅಗತ್ಯ ಸಿದ್ದತೆಗಳನ್ನು ಚುರುಕುಗೊಳಿಸಬೇಕು. ಈ ಹಿಂದಿನ ಎರಡು ವರ್ಷಗಳ ಜಾತ್ರಾ ಮಹೋತ್ಸವಗಳು ವಿಜೃಂಭಣೆ ಹಾಗೂ ಯಶಸ್ವಿಯಾಗಿ ಮುಗಿದಿದ್ದು, ಈ ಬಾರಿ ಮೂರನೇ ವರ್ಷದ ಜಾತ್ರಾ ಕಾರ್ಯಕ್ರಮವನ್ನು ಕೇಂದ್ರ ಸರ್ಕಾರದ ಕೋವಿಡ್ ಮಾರ್ಗಸೂಚಿಗಳನ್ವಯ ಸರ್ಕಾರ ಹೊರಡಿಸಿರುವ ನಿಯಮಗಳಾದ ಮಾಸ್ಕ್, ಸ್ಯಾನಿಟೈಸರ್ ಬಳಕೆ, ದೈಹಿಕ ಅಂತರ ಕಾಪಾಡುವುದನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಜಾತ್ರೆ ಆಚರಿಸಬೇಕೆಂದರು.
ಈ ಸಂಬಂಧ ಆರೋಗ್ಯ ಇಲಾಖೆ ಅಧಿಕಾರಿಗಳು ಸುಮಾರು 8 ರಿಂದ 10 ಕಡೆಗಳಲ್ಲಿ ಕೋವಿಡ್ ಸ್ಕ್ರೀನಿಂಗ್ ವ್ಯವಸ್ಥೆ ಮಾಡಲಿದ್ದು, ಸಾರ್ವಜನಿಕರು ಸ್ಕ್ರೀನಿಂಗ್ ಇಲ್ಲದೇ ಆವರಣದೊಳಗೆ ಪ್ರವೇಶಿಸದಂತೆ ನೋಡಿಕೊಳ್ಳಬೇಕು. ಜಾತ್ರಾ ಕಾರ್ಯಕ್ರಮ ನಡೆಯುವ ಎರಡೂ ದಿನ ಈ ಕೆಲಸವನ್ನು ಸಂಬಂಧಿಸಿದವರು ಮಾಡಬೇಕೆಂದರು.
ಹೊರ ರಾಜ್ಯಗಳಿಂದ ಬರುವ ಕಲಾವಿದರು ತಮ್ಮ ರಾಜ್ಯಗಳ ಕಲಾಪ್ರಕಾರಗಳನ್ನು ಪರಿಚಯಿಸಲಿದ್ದು, ಸುಮಾರು 200 ಕಲಾವಿದರು ಭಾಗವಹಿಸುತ್ತಿದ್ದು, ಅವರುಗಳಿಗೆ ಸಿದ್ದೇಶ್ವರ ಪ್ಯಾಲೇಸ್‍ನಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದ್ದು ಆ ಕಲಾವಿದರುಗಳಿಗೆ ಆರ್‍ಟಿಪಿಸಿಆರ್ ಟೆಸ್ಟ್ ಮಾಡಿ ಒಂದೇ ದಿನದಲ್ಲಿ ವರದಿ ಪಡೆಯಲಾಗುವುದು ಎಂದರು.
ಜಾತ್ರಾ ಮಹೋತ್ಸವದಲ್ಲಿ ವಿವಿಧ ಇಲಾಖೆಗಳು ಮಳಿಗೆ ಹಾಕುವ ಮೂಲಕ ತಮ್ಮ ತಮ್ಮ ಇಲಾಖೆಗಳ ಪ್ರಗತಿ ಯೋಜನೆಗಳು, ಕಾರ್ಯಕ್ರಮಗಳು ಸೇರಿದಂತೆ ಸರ್ಕಾರದ ಕಾರ್ಯಕ್ರಮಗಳನ್ನು ಜಾತ್ರೆಯಲ್ಲಿ ಸೇರಿರುವ ಜನಸಮುದಾಯಕ್ಕೆ ಪರಿಚಯಿಸುವ ಕಾರ್ಯ ಮಾಡಬೇಕಾಗಿದ್ದು ಈಗಿನಿಂದಲೇ ಅದಕ್ಕೆ ಪೂರಕ ಸಿದ್ದತೆ ಮಾಡಿಕೊಂಡು ಫೆಬ್ರವರಿ 7 ರೊಳಗಾಗಿ ಮಳಿಗೆ ನಿರ್ಮಾಣ ಆಗಬೇಕು ಎಂದರು.
ಕಾರ್ಯಕ್ರಮಕ್ಕೆ ಸಾಕಷ್ಟು ಜನ ಸೇರುವುದರಿಂದ ಪ್ರಸಾದ ವ್ಯವಸ್ಥೆ ಮಾಡಲಾಗುವ ಅಡುಗೆ ಕೋಣೆ, ಕುಡಿಯುವ ನೀರು, ಊಟ ಬಡಿಸುವವರು ಸ್ವಚ್ಚತೆ ಕಾಪಾಡಿಕೊಳ್ಳಬೇಕು. ಹಾಗೂ ಆಹಾರ ಸುರಕ್ಷತಾ ಅಧಿಕಾರಿಗಳು ಆಹಾರ ಸುರಕ್ಷತೆಯನ್ನು ಪರೀಕ್ಷಿಸಬೇಕೆಂದರು.
ಹರಿಹರ ಕ್ಷೇತ್ರದ ಶಾಸಕರಾದ ರಾಮಪ್ಪ ಮಾತನಾಡಿ, ಜಾತ್ರಾ ಕಾರ್ಯಕ್ರಮಕ್ಕೆ ಸಹಸ್ರ ಸಂಖ್ಯೆಯಲ್ಲಿ ಜನ ಬರುವುದರಿಂದ ಎಲ್ಲ ಇಲಾಖೆಗಳ ಜವಾಬ್ದಾರಿ ಇರುತ್ತದೆ. ಪ್ರಮುಖವಾಗಿ ಬೆಸ್ಕಾಂನವರು ವಿದ್ಯುತ್ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು. ರಾಜ್ಯದ ತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಜನ ಬರುವುದರಿಂದ ಸ್ವಯಂ ಸೇವಕರು, ಪೊಲೀಸ್ ಸಿಬ್ಬಂದಿ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ ಮಾತನಾಡಿ, ಹಿಂದಿನ ವರ್ಷದಂತೆ ವಾಹನ ಪಾರ್ಕಿಂಗ್‍ಗಾಗಿ ವ್ಯವಸ್ಥೆ ಮಾಡಲಾಗಿದ್ದು, ವಿಐಪಿ ಪಾರ್ಕಿಂಗ್‍ಗೂ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಗಣ್ಯರು, ಚಲನಚಿತ್ರ ನಟರು ಕಾರ್ಯಕ್ರಮಕ್ಕೆ ಬರುವುದರಿಂದ ಸಮರ್ಪಕವಾಗಿ ಬ್ಯಾರಿಕೇಡ್ ವ್ಯವಸ್ಥೆ, ಪ್ರಸಾದ ಪೂರೈಸುವ ಸ್ಥಳದಲ್ಲಿ ಜನಜಂಗುಳಿ ತಡೆಯಲು ಸಾಕಷ್ಟು ಬ್ಯಾಕಿಕೇಡ್ ಹಾಕಿ ನಿಯಂತ್ರಿಸಲಾಗುವುದು ಎಂದರು.
ಕಾರ್ಮಿಕ ಮುಖಂಡ ಹೆಚ್.ಕೆ.ರಾಮಚಂದ್ರಪ್ಪ ಮಾತನಾಡಿ, ವಾಲ್ಮೀಕಿ ಜಯಂತಿ ಜಾತ್ಯಾತೀತವಾಗಿದ್ದು, ದೇಶದಾದ್ಯಂತ ಪ್ರಸಾರವಾಗಬೇಕಿದೆ. ಈ ಸಂಬಂಧ ವಾರ್ತಾ ಇಲಾಖೆಯವರು ಹೆಚ್ಚಿನ ಪ್ರಚಾರ ನೀಡುವ ಮೂಲಕ ಸಹಕರಿಸಬೇಕೆಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಪದ್ಮಾ ಬಸವಂತಪ್ಪ, ದಾವಣಗೆರೆ ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್, ಸಮಾಜದ ಮುಖಂಡರಾದ ಉಪನ್ಯಾಸಕರಾದ ರಾಮಚಂದ್ರಪ್ಪ, ವಕೀಲರಾದ ನಾಗೇಂದ್ರಪ್ಪ, ಟಿ.ಓಬಳಪ್ಪ, ಹೊದಿಗೆರೆ ರಮೇಶ್, ಈಶ್ವರ್, ಪಾಲಯ್ಯ, ಜಿ.ಪಂ ಮಾಜಿ ಅಧ್ಯಕ್ಷ ಡಾ.ವೈ.ರಾಮಪ್ಪ, ಜಿ.ಪಂ ಉಪಕಾರ್ಯದರ್ಶಿ ಆನಂದ್, ಡಿಹೆಚ್‍ಓ ಡಾ.ನಾಗರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಡಿಡಿ ವಿಜಯಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗಂಗಪ್ಪ, ಪರಿಶಿಷ್ಟ ಪಂಗಡಗಳ ಕಲ್ಯಾಣಾಧಿಕಾರಿ ಮಂಜಾನಾಯ್ಕ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆÉ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಮಾಮಾಸ್ ಜಾಯಿಂಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ.ಬಿ : ಶಾಬನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತ ಮುತ್ತ, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ , ಬಿ.ಐ.ಇ.ಟಿ. ಕಾಲೇಜು ಹಾಗೂ ಸುತ್ತ ಮುತ್ತ ಪ್ರದೇಶಗಳು.
ಮಂಡಿಪೇಟೆ, ಬೆನ್ನೆ ಕಂಪನಿ ರಸ್ತೆ, ಎಮ್ ಜಿ ರಸ್ತೆ, ಎನ್ ಆರ್ ರಸ್ತೆ, ಬೆಲ್ಲೌಡಿಹಲ್ಲಿ, ಮಹಾವೀರ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಬಿ.ಟಿ.: ಮಂಡಕ್ಕಿ ಬಟ್ಟಿ, 1 ರಿಂದ 10 ನೇ ಕ್ರಾಸ್, ಇಂದಿರಾ ನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು, ಮೌನೇಶ್ವರ : ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ, ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ.
ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗು ಇ.ಎಸ್.ಐ ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳ, ಪಿ.ಬಿ. ರಸ್ತೆ., ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಕೆಟಿಜೆ: ಶ್ರೀ ಮುರಘ ರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತ ಮುತ್ತ , ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗು ಸುತ್ತಮುತ್ತ ಪ್ರದೇಶಗಳು, ಪಿಜೆ: ಪೋಲೀಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಸಿಜಿಹೆಚ್: ಎಮ್.ಸಿ.ಸಿ. ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಎಸ್.ಎಸ್. ಬಡಾವಣೆ, ಎ ಬ್ಲಾಕ್, ಶಾಂತಿ ನಗರ, ಕುಂದುವಾಡ ರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗು ಸುತ್ತಮುತ್ತ ಪ್ರದೇಶಗಳು.
ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ. ಬಸವೇಶ್ವರ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮಾಗಾನಹಳ್ಳಿ, ಮಾಗಾನಹಳ್ಳಿ ಕ್ಯಾಂಪ್, ಓಬಜ್ಜಿಹಳ್ಳಿ, ಓಬಜ್ಜಿಹಳ್ಳಿ ಕ್ಯಾಂಪ್, ಕಡ್ಲೇಬಾಳು, ಹಳೆಕಡ್ಲೆಬಾಳು, ಮಾಳಗೊಂಡನಹಳ್ಳಿ, ಅರಸಾಪುರ, ಬದುನಾಯಕನತಾಂಡ, ಚಿಕ್ಕಓಬಜ್ಜೀಹಳ್ಳಿ, ದೊಡ್ಡಓಬಜ್ಜೀಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮ್ಯಾಸರಹಳ್ಳಿ, ಗುಮ್ಮನೂರು, ಹುಣಸೆಕಟ್ಟೆ, ಮುಡೇನಹಳ್ಳಿ, ಕೆಂಚಮ್ಮನಹಳ್ಳಿ, ಹೊಸಹಳ್ಳಿ, ಕಾಟಿಹಳ್ಳಿ.
ಮಂಡಲೂರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಹನುಮನಹಳ್ಳಿ, ಕೊಗ್ಗÀನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ, ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ.
ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್
ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ ಹೊಂದಲು ಬಾಪೂಜಿ ಮಹಾವಿದ್ಯಾಲಯ ಉಪ ಪ್ರಾಚಾರ್ಯರಾದ ಎಚ್ ಎನ್ ಶಿವಕುಮಾರ್ ನುಡಿದರು.
ಅವರು ಸ್ಥಳೀಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ಪುರಸ್ಕಾರ, ಬಿಳ್ಕೋಡಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಒಕ್ಕೂಟದ, ಎನ್ ಎಸ್ ಎಸ್ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಎ ಜೆಎಸ್ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳು ಡಾ.ಆರ್ ಎಂ ಕುಬೇರಪ್ಪ ಮಾತನಾಡಿ ವಿದ್ಯೆಯನ್ನು ವಿನಯದಿಂದ ವಿದ್ಯೆಕಲಿಯಬೇಕು ಸಂಸ್ಕಾರವಂತರಾಗ ಬೇಕು, ಸಂಸ್ಕಾರ ಹೊಂದಿರುವ ವ್ಯಕ್ತಿಗಳು ಪುರಸ್ಕಾರ ಪಡೆದರೆ ಸಂಸ್ಕಾರ ಇಲ್ಲದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗುವರು.ನಿಮ್ಮ ಬದುಕನ್ನು ನೀವೆ ಕಟ್ಟಿಕೊಳ್ಳುವ ನೆಲೆಯಲ್ಲಿ ಪ್ರಯತ್ನಿಸಬೇಕು ಎಂದು ನುಡಿದರು.
ಪ್ರಾಚಾರ್ಯರಾದ ಪ್ರಕಾಶ್ ಬಸಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಚ್ ಎನ್ ಭೀಕ್ಷಾವರ್ತಿಮಠ ಹಾಗೂ ಕೆ ಕೆ ಹಾವಿನಾಳ ರವರು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.ಆರಂಭದಲ್ಲಿಪ್ರೋ.ಎಂ ಡಿ ಹೊನ್ನಮ್ಮನವರ ಸ್ವಾಗತಿಸಿದರು.ಪ್ರೋ.ಶ್ರೀಕಾಂತ ಕುಂಚೂರ, ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿ ವಾಚಿಸಿದರು.
ಕೊನೆಯಲ್ಲಿ ಪ್ರೋ.ಪುಷ್ಟಾ ಕಬ್ಬಿನಾಲೆ ವಂದಿಸಿದರು.ಇದೆ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪುರಸ್ಕಾರ ಮಾಡಲಾಯಿತು.ವರ್ಷದ ಮಹಾವಿದ್ಯಾಲಯ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಯಿತು.ವಿವಿಧ ವಿಷಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪಿಂಚಣಿ ದಾರರು ಸಕಾಲದಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಿ
ಸುದ್ದಿದಿನ,ದಾವಣಗೆರೆ: ಪಿಂಚಣಿ ಪಡೆಯಲು ಜೀವಂತ ಸದಸ್ಯರ ಪ್ರಮಾಣ ಪತ್ರಗಳು ಕಡ್ಡಾಯವಾಗಿರುವುದರಿಂದ ಸಕಾಲಕ್ಕೆ ಸೂಕ್ತ ದಾಖಲಾತಿಗಳನ್ನು ನೀಡುವ ಮೂಲಕ ಸಹಕರಿಸಿ ಎಂದು ಉಪ ಮಹಾಲೇಖಪಾಲರಾದ ಸಚ್ಚಿನ್ ಕೃಷ್ಣ ಕೌಶಿಕ್ ತಿಳಿಸಿದರು.
ಶುಕ್ರವಾರ ಜೂನ್(19) ಬೆಂಗಳೂರಿನ ಮಹಾಲೇಖಪಾಲರು ದಾವಣಗೆರೆ ಜಿಲ್ಲಾ ಖಜಾನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಮಾನ್ಯ ಭವಿಷ್ಯ ನಿಧಿ ಹಾಗೂ ಲೆಕ್ಕಪತ್ರ ಸಮಸ್ಯೆಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪಿಂಚಣಿದಾರರು ತಮ್ಮ ಎಲ್ಲಾ ಬ್ಯಾಂಕ್ಗೆ 2ನೇ ವಾರ ಭೇಟಿ ನೀಡಿದರೆ ನಿಮ್ಮ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಲಾಗುವುದು. ಜೀವಂತ ಸದಸ್ಯರ ದೃಢೀಕರಣ ಪತ್ರವನ್ನು ಪಡೆಯಲು ಸೈಬರ್ಕೆಫೆ ಇನ್ನಿತರ ಕೇಂದ್ರಗಳಿಗೆ ಅಲೆಯುವ ಅವಶ್ಯಕತೆ ಇಲ್ಲ. ನೀವು ಮನೆಯಲ್ಲಿ ಮೊಬೈಲ್ನಲ್ಲಿ ಅಫ್ ಲೋಡ್ ಮಾಡಿ ಪಡೆಯಬಹುದು. ಮತ್ತು ನಿಮ್ಮ ಸಮಸ್ಯೆಗಳನ್ನು ತಿಳಿಸುವಾಗ ಅರ್ಜಿಯಲ್ಲಿ ಇ-ಮೇಲ್ ವಿಳಾಸ, ಮೊಬೈಲ್ ನಂಬರ್ನ್ನು ಕಡ್ಡಾಯವಾಗಿ ನಮೂದಿಸಿದರೆ, ಇದರಿಂದ ನಿಮಗೆ ಮಾಹಿತಿ ನೀಡಲು ಅನುಕೂಲವಾಗುತ್ತದೆ ಎಂದರು.
ಪಿಂಚಣಿ ಅದಾಲತ್ ಎನ್ನುವುದು ನಿವೃತ್ತ ನೌಕರರು ಮತ್ತು ಪಿಂಚಣಿದಾರರ ದೀರ್ಘಕಾಲದ ಬಾಕಿ ಉಳಿದಿರುವ ಸಮಸ್ಯೆಗಳನ್ನು ಅಥವಾ ಕುಂದುಕೊರತೆಗಳನ್ನು ಪರಿಹರಿಸಲು ವಿಶೇಷ ವೇದಿಕೆಯಾಗಿದೆ. ಸ್ಥಳದಲ್ಲೇ ಅರ್ಜಿಗಳನ್ನು ಪರಿಶೀಲಿಸಿ, ಬ್ಯಾಂಕ್ ಅಧಿಕಾರಿಗಳ ಸಮ್ಮುಖದಲ್ಲಿ ತ್ವರಿತವಾಗಿ ಸಮಸ್ಯೆಗಳನ್ನು ಬಗೆಹರಿಸುವುದು ಇದರ ಮುಖ್ಯ ಉದ್ದೇಶವಾಗಿದೆ.
ಮಹಾಲೇಖಪಾಲರ ಕಚೇರಿಯ ಹಿರಿಯ ಲೆಕ್ಕಪರಿಶೋಧನಾ ಅಧಿಕಾರಿ ನಾಗಸೇನಾ.ಟಿ.ವಿ, ಮತ್ತು ಪದ್ಮವತಿ, ಜಿಲ್ಲಾ ಖಜಾನೆಯ ಉಪನಿರ್ದೇಶಕರಾದ ರಮೇಶ್ ಅರೆಮಲ್ಲಾಪುರ, ಸಹಾಯಕ ಲೆಕ್ಕಪರಿಶೋಧನಾ ಆಧಿಕಾರಿ ಚಂದನ್ ಮತ್ತು ಜಾಬ್ಲೀನೋ, ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


