Connect with us

ಅಂತರಂಗ

ರೈತ ಚಳುವಳಿ : ಒಂದು ಟಿಪ್ಪಣಿ

Published

on

  • ಪುರುಷೋತ್ತಮ ಬಿಳಿಮಲೆ

ದೇಶದ ರಾಜಧಾನಿಯ ವಿವಿಧ ಗಡಿ ಭಾಗಗಳಲ್ಲಿ ಲಕ್ಷಾಂತರು ರೈತರು ಚಳುವಳಿ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಚಳುವಳಿಯ ಬಗ್ಗೆ ಪ್ರಾಥಮಿಕ ತಿಳಿವಳಿಕೆಯನ್ನು ನೀಡುವುದು ಈ ಟಿಪ್ಪಣಿಯ ಉದ್ದೇಶ.

ಕೃಷಿ ಸುಧಾರಣೆ

ಪಾಶ್ಚಾತ್ಯ ದೇಶಗಳಲ್ಲಿ ಅಲ್ಲಿನ ಕೃಷಿ ಪದ್ಧತಿಯು ಸಾಧಿಸಿದ ಪ್ರಗತಿಯನ್ನು ನಮ್ಮ ದೇಶದ ಸಾಂಪ್ರದಾಯಕ, ಕೃಷಿ ಪದ್ಧತಿಯೊಡನೆ ಹೋಲಿಸಿ ನೋಡಿದಾಗ, ನಮ್ಮ ಕೃಷಿ ಪದ್ಧತಿಯಲ್ಲಿ ಸುಧಾರಣೆ ಅಗತ್ಯ ಎಂಬುದರಲ್ಲಿ ಯಾವ ಅನುಮಾನವೂ ಇಲ್ಲ. 1990ರ ದಶಕದಲ್ಲಿ ಜ್ಯಾರಿಗೆ ಬಂದ ಉದಾರೀಕರಣ, ಜಾಗತೀಕರಣ ಮತ್ತು ಖಾಸಗೀಕರಣ ಪ್ರಕ್ರಿಯೆಗಳು ಅನ್ನದಾತನ ಬದುಕಲ್ಲಿ ಬದಲಾವಣೆಗಳನ್ನು ತರಲಿವೆ ಎಂದು ಈಗಿನಂತೆಯೇ ಆಗಲೂ ಹೇಳಲಾಗಿತ್ತು.

ಆದರೆ ಅಂತ ಬದಲಾವಣೆಗಳೇನೂ ಸಂಭವಿಸಲಿಲ್ಲ ಎಂಬುದನ್ನು ನಾವು ಗಮನಿಸಿದ್ದೇವೆ. ಸರಕಾರವೇ ನೀಡಿದ ಅಂಕಿ ಅಂಶಗಳ ಪ್ರಕಾರ1995ರಿಂದ 2019ರ ನಡುವೆ ಒಟ್ಟು 296438 ರೈತರು ನಮ್ಮ ದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಮಾನ್ಯವಾಗಿ ಸರಕಾರದ ಲೆಕ್ಕಕ್ಕೆ ಸಿಗದ ಸಾವುಗಳು ಇದಕ್ಕಿಂತಲೂ ಹೆಚ್ಚಿರುತ್ತವೆ.

ರೈತರು ದಿಕ್ಕೆಟ್ಟಿದ್ದಾರೆ, ತಮ್ಮ ಜಮೀನನ್ನು ಕಳೆದುಕೊಂಡಿದ್ದಾರೆ. ಇದರ ಪರಿಣಾಮವೋ ಎಂಬಂತೆ2014 ರಿಂದ ರೈತ ಹೋರಾಟಗಳು ಶೇಕಡಾ 700ರಷ್ಟು ಹೆಚ್ಚಿವೆ. ಈಗ ನಡೆಯುತ್ತಿರುವುದು ಅವುಗಳ ಮುಂದುವರಿಕೆಯಾಗಿದೆ.

ಇಂಥ ಪರಿಸ್ಥಿತಿಯಲ್ಲಿ ಕೃಷಿ ಸುಧಾರಣೆಯನ್ನು ಹೇಗೆ ಮಾಡಬೇಕೆಂಬುದು ಬಹಳ ಮುಖ್ಯ ಪ್ರಶ್ನೆ. ಈ ಕುರಿತು 2006ರಷ್ಟು ಹಿಂದೆಯೇ ಸ್ವಾಮಿನಾಥನ್‌ ವರದಿ ತನ್ನ ಶಿಫಾರಸುಗಳನ್ನು ಸರಕಾರಕ್ಕೆ ಸಲ್ಲಿಸಿತ್ತು.

ಅದರಲ್ಲಿ ಭೂಮಿಯ ಹಂಚಿಕೆ, ನೀರಾವರಿ, ರೈತರ ಭೂಮಿಯ ಮಾರಾಟ ಇತ್ಯಾದಿ ವಿಷಯಗಳ ಕುರಿತು ಅತ್ಯಂತ ಉಪಯುಕ್ತವಾದ ಸಲಹೆಗಳಿದ್ದುವು. ಆದರೆ ಆ ಮೇಲೆ ಅಧಿಕಾರಕ್ಕೆ ಬಂದ ಯುಪಿಎ ಮತ್ತು ಎನ್‌ಡಿಯೆ ಸರಕಾರಗಳು ಸ್ವಾಮಿನಾಥನ್‌ ವರದಿಯನ್ನು ಗಂಭೀರವಾಗಿ ಪರಿಗಣಿಸಲೇ ಇಲ್ಲ. ಯಾಕೆ ಪರಿಗಣಿಸುವುದಿಲ್ಲ ಎಂದು ಹೇಳಲೂ ಇಲ್ಲ, ನಾವು ಕೇಳಲೂ ಇಲ್ಲ.

ಮೂರು ಹೊಸ ಕಾಯ್ದೆಗಳು

ಕೃಷಿ ವಿಷಯಕವಾದ ಪ್ರಶ್ನೆಗಳ ಗಹನತೆಯನ್ನು ಅರ್ಥಮಾಡಿಕೊಳ್ಳದ ಪ್ರಸ್ತುತ ಸರಕಾರವು ಜನರೆಲ್ಲ ಕೊರೋನಾ ಭಯದಿಂದ ತತ್ತರಿಸುತ್ತಿರುವಾಗ, ಲೋಕ ಸಭೆ, ರಾಜ್ಯ ಸಭೆಗಳಲ್ಲಿ ವಿಸ್ತೃತ ಚರ್ಚೆಯನ್ನೂ ಮಾಡದೆ, ಈಗ ವಿವಾದಾಸ್ಪದವಾಗಿರುವ ಮೂರು ಕಾಯ್ದೆಗಳನ್ನು ತರಾತುರಿಯಿಂದ ( 2019ರ ಸಪ್ಟಂಬರ ತಿಂಗಳ 20ರಂದು) ಅಂಗೀಕರಿಸಿತು. ಈ ಮೂರು ಕಾಯ್ದೆಗಳನ್ನು ಸಂಕ್ಷಿಪ್ತವಾಗಿ ಈ ಕೆಳಗಿನಂತೆ ವಿವರಿಸಬಹುದು.

1. ರೈತರ ಉತ್ಪನ್ನಗಳ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಸುಗ್ರೀವಾಜ್ಞೆ 2020

ಇದರ ಪ್ರಕಾರ, ಎಪಿಎಂಸಿ-ನಿಯಂತ್ರಿತ ಮಂಡಿಗಳನ್ನು ಹೊರತುಪಡಿಸಿ ಬೇರೆ ಸ್ಥಳಗಳಲ್ಲಿಯೂ ರೈತರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಸಾಧ್ಯವಿದೆ. ಮೇಲ್ನೋಟಕ್ಕೆ ಇದು ಮುಕ್ತ ವ್ಯವಸ್ಥೆಯಂತೆ ಕಂಡರೂ ನಿಧಾನವಾಗಿ ಅದು ಎಪಿಎಂಸಿಗಳನ್ನು ಸ್ಥಗಿತಗೊಳಿಸುತ್ತದೆ.

ಜೊತೆಗೆ ಸರಕಾರವು ಈಗ ನೀಡುತ್ತಿರುವ ಅನೇಕ ಬಗೆಯ ಸಬ್ಸಿಡಿಗಳನ್ನು ನಿಧಾನವಾಗಿ ಕೊನೆಗೊಳಿಸುತ್ತದೆ. ಕೃಷಿಯು ಸರಕಾರದ ಕೈ ತಪ್ಪಿದ ತಕ್ಷಣ ಖಾಸಗಿಯವರು ರೈತರೊಡನೆ ಆಟವಾಡಲು ಸುರು ಮಾಡುತ್ತಾರೆ. ಈ ಆಟಕ್ಕೆ ಕೊನೆಯೇ ಇರುವುದಿಲ್ಲ. ನಮ್ಮ ದೇಶದಲ್ಲಿ ಇನ್ನೂ 68.8 ಶೇಕಡಾ ಜನರು ( ಸುಮಾರು 80 ಕೋಟಿ) ಬಡತನದ ರೇಖೆಯಿಂದ ಕೆಳಗಿರುವಾಗ ಸರಕಾರವು ಇಂತ ಜವಾಬ್ದಾರಿಗಳಿಂದ ತನ್ನನ್ನು ಈಗಲೇ ಮುಕ್ತಗೊಳಿಸಿಕೊಂಡರೆ ಇನ್ನಷ್ಟು ಅಪಾಯಗಳು ಸಂಭವಿಸುತ್ತವೆ.

2. ಅಗತ್ಯ ಸರಕುಗಳ (ತಿದ್ದುಪಡಿ) ಸುಗ್ರೀವಾಜ್ಞೆ, 2020

ಇದನ್ನು ʼಕೃಷಿ ಉದ್ಯಮದ ಮೂಲಕ ಆಹಾರ ಸಂಗ್ರಹಣೆ ಸ್ವಾತಂತ್ರ್ಯದ ಸುಗ್ರೀವಾಜ್ಞೆʼ ಎಂದು ಕರೆಯಬಹುದು. ಈ ಕಾಯ್ದೆಯ ಪ್ರಕಾರ, ಆರ್ಥಿಕ ಏಜೆಂಟರು ಯಾವುದೇ ಕಾನೂನು ಕ್ರಮದ ಭಯವಿಲ್ಲದೆ ಆಹಾರ ಸಾಮಗ್ರಿಗಳನ್ನು ಸಂಗ್ರಹಿಸಿಡಬಹುದು. ಒಬ್ಬ ರೈತನಿಗೆ ಏನಾದರೂ ಅನ್ಯಾಯವಾದರೆ, ಆತ ನ್ಯಾಯಾಲಯಕ್ಕೆ ಹೋಗುವಂತಿಲ್ಲ, ಬದಲು ಸ್ಥಳೀಯವಾಗಿಯೇ ಪರಿಹರಿಸಿಕೊಳ್ಳಬೇಕು.

ಒಂದು ಕಾಯ್ದೆಯನ್ನು ಹೀಗೆ ನ್ಯಾಯಾಂಗ ವ್ಯವಸ್ಥೆಯಿಂದಲೇ ಹೊರಗಿಟ್ಟಿರುವುದು ಇದುವೇ ಪ್ರಥಮ. ಇಂಥಲ್ಲಿ ದಾಸ್ತಾನುಗಾರರು ಕೃತಕ ಅಭಾವ ಸೃಷ್ಟಿಸಿ, ಬೆಲೆ ಏರಿಕೆ ಮಾಡಿದರೆ ಸರಕಾರವೂ ಸೇರಿದಂತೆ ಯಾರಿಗೂ ಏನೂ ಮಾಡಲಾಗದು. ದಾಸ್ತಾನುಗಾರರು ದೇಶದ ಹಲವು ಕಡೆಗಳಲ್ಲಿ ನೀರುಳ್ಳಿಯ ಕೃತಕ ಅಭಾವ ಸೃಷ್ಟಿಸಿ ಕಿಲೋ ಒಂದಕ್ಕೆ 300 ರೂಪಾಯಿ ವಸೂಲಿ ಮಾಡುವಾಗ ಯಾವ ಸರಕಾರಗಳಿಗೂ ಏನೂ ಮಾಡಲಾಗಲಿಲ್ಲ.

ನಾಳೆ ಅಕ್ಕಿ, ಗೋಧಿ, ಎಣ್ಣೆ, ಬೇಳೆಗಳಿಗೆ ಹೀಗಾಗುವ ಸಾಧ್ಯತೆಗಳು ನಮ್ಮ ಕಣ್ಣ ಮುಂದೆಯೇ ನಿಂತಿವೆ. ಅಗತ್ಯ ವಸ್ತು ಬೆಲೆ ನಿಯಂತ್ರಣ ಇಲ್ಲವಾಗುವುದರಿಂದ ರೈತರೂ ಸೇರಿದಂತೆ ಎಲ್ಲರೂ ವಿಪರೀತ ಬೆಲೆ ಏರಿಕೆಗೆ ಬಲಿಯಾಗಬೇಕಾಗುತ್ತದೆ.

3 . ರೈತರ (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆಗಳ ಖಾತರಿ ಒಪ್ಪಂದದ ಭರವಸೆ ಮತ್ತು ಕೃಷಿ ಸೇವೆಗಳ ಸುಗ್ರೀವಾಜ್ಞೆ 2020

ಇದನ್ನು ಗುತ್ತಿಗೆ ಕೃಷಿ ಸುಗ್ರೀವಾಜ್ಞೆಯೆಂದು ಹೇಳಲಾಗುತ್ತಿದೆ. ಈ ಕಾಯ್ದೆಯು ಕಾರ್ಪೋರೇಟ್‌ ಕಂಪೆನಿಗಳು ಕೃಷಿಗೆ ಪ್ರವೇಶಿಸಲು ಒಂದು ಚೌಕಟ್ಟನ್ನು ಒದಗಿಸಿಕೊಡುತ್ತದೆ. ಇದರ ಪ್ರಕಾರ ಆರೋಗ್ಯಕರ ಸಂಭಾವನೆಗೆ ಪ್ರತಿಯಾಗಿ ಕಂಪೆನಿಯು ಬಯಸಿದ್ದನ್ನು ಉತ್ಪಾದಿಸಲು ಕಂಪನಿಯೊಂದಿಗೆ ರೈತರು ಲಿಖಿತ ಒಪ್ಪಂದಕ್ಕೆ ಸಹಿ ಹಾಕಬೇಕು.

ಈ ಸಹಿಯು ರೈತನ ಭೂಮಿಯ ಹಕ್ಕನ್ನು ಕಿತ್ತುಕೊಳ್ಳುವುದಿಲ್ಲ, ಬದಲು ಬೆಳೆಯ ಹಕ್ಕನ್ನು ಕಿತ್ತುಕೊಳ್ಳುತ್ತದೆ. ಪರೋಕ್ಷವಾಗಿ ತಮ್ಮದೇ ಜಮೀನಿಗೆ ರೈತರು ತಾವೇ ಕೂಲಿಯಾಳುಗಳಾಗುತ್ತಾರೆ. ಕ್ಷಿಪ್ರವಾಗಿ ಹಣ ಮಾಡುವ ಕಲೆಯಲ್ಲಿ ನುರಿತರಾಗಿರುವ ಕಾರ್ಪೊರೇಟ್‌ ಕಂಪೆನಿಗಳು, ಹೆಚ್ಚು ಉತ್ಪಾದಿಸಲು ಬಗೆ ಬಗೆಯ ರಾಸಾಯನಿಕಗಳನ್ನು ಬಳಸಿ, ಭೂಮಿಯನ್ನು ಬಂಜರುಗೊಳಿಸುತ್ತವೆ. ಪಂಜಾಬ್‌, ಹರಿಯಾಣಗಳಲ್ಲಿ ಈಗ ಆದದ್ದು ಇದುವೇ. ಇದರಿಂದ ಅಲ್ಲಿಯ ರೈತರು ಎಚ್ಚತ್ತಿದ್ದಾರೆ, ಆದರೆ ಉಳಿದವರಿಗೆ ಅಪಾಯದ ಅರಿವಿದ್ದಂತಿಲ್ಲ.

ಇತರ ಸಮಸ್ಯೆಗಳು

ಕಾಯ್ದೆಗಳ ಈ ಸಮಸ್ಯೆಗಳೊಂದಿಗೆ ಇನ್ನಷ್ಟು ಪ್ರಶ್ನೆಗಳೂ ಸೇರಿಕೊಂಡು ಈಗ ಸಂಕೀರ್ಣವಾದ ಪರಿಸ್ಥಿತಿ ನಿರ್ಮಾಣವಾಗಿದೆ. ಅದರಲ್ಲಿ ಬಹಳ ಮುಖ್ಯವಾದದ್ದೆಂದರೆ, ಸಂವಿಧಾನದ ಪ್ರಕಾರ ಕೃಷಿಯು ರಾಜ್ಯ ಸರಕಾರದ ಆಧೀನದಲ್ಲಿ ಬರುತ್ತದೆ. ಅದು ಸರಿ ಕೂಡಾ ಹೌದು. ಏಕೆಂದರೆ ರಾಜ್ಯ ಸರಕಾರಗಳಿಗೆ ತಮ್ಮ ರಾಜ್ಯದ ವ್ಯಾಪ್ತಿಯಲ್ಲಿ ಬರುವ ಭೂಮಿಯ ಗುಣ, ಬೆಳೆಗಳು, ನೀರಾವರಿ, ಬೇಸಾಯದ ಕ್ರಮಗಳು, ರೈತರ ನಂಬುಗೆಗಳು ಇತ್ಯಾದಿಗಳ ಬಗ್ಗೆ ಸಾಕಷ್ಟು ತಿಳಿವಳಿಕೆ ಇರುತ್ತದೆ.

ಹೀಗಿರುವಾಗ, ಕೇಂದ್ರ ಸರಕಾರವು ಏಕಾ ಏಕಿ ಕೃಷಿ ಕಾಯ್ದೆಗಳನ್ನು ತಾನು ಚಾಲ್ತಿಗೆ ತಂದದ್ದು ಸಂವಿಧಾನ ವಿರೋಧೀ ನಡೆಯಾಗುತ್ತದೆ. ಈ ಕುರಿತ ಕೇಸೊಂದು ಸುಪ್ರೀಂ ಕೋರ್ಟಲ್ಲಿ ದಾಖಲಾಗಿದೆ. ಆದರೆ ಸುಪ್ರೀಂ ಕೋರ್ಟು ಅದನ್ನು ಆದ್ಯತೆಯ ಮೇಲೆ ಚರ್ಚೆಗೆ ತೆಗೆದುಕೊಳ್ಳದ್ದರಿಂದ ಸಮಸ್ಯೆ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಲೇ ಇದೆ.

ಸರಕಾರವು ಇದೇ ರೀತಿ ವಿದ್ಯುತ್‌ ಕಾಯ್ದೆಯಲ್ಲಿಯೂ ಬದಲಾವಣೆ ತಂದಿದೆ. ಸಂವಿಧಾನದ ಪ್ರಕಾರ ವಿದ್ಯುತ್‌, ರಾಜ್ಯ ಮತ್ತು ಕೇಂದ್ರ ಸರಕಾರಗಳು ಜಂಟಿಯಾಗಿ ನಿರ್ವಹಿಸಬೇಕಾದ ಕನ್ಕರೆಂಟ್‌ ಪಟ್ಟಿಯಲ್ಲಿ ಬರುತ್ತದೆ. ಆದರೆ ಕೇಂದ್ರ ಸರಕಾರ ಇದನ್ನು ಪರಿಗಣಿಸದೆ, ಏಕಾ ಏಕಿ ತಾನೇ ನಿರ್ಧಾರ ತೆಗೆದುಕೊಂಡಿರುವುದೂ ಸಂವಿಧಾನ ಬಾಹಿರ ಕ್ರಮವಾಗಿದೆ.

ಕೇಂದ್ರೀಕರಣ

ದೇಶದ ಅತಿ ಮುಖ್ಯ ಸಂಗತಿಗಳೆಲ್ಲ ಹೀಗೆ ಕೇಂದ್ರ ಸರಕಾರದ ಕೈ ಕೆಳಗೆ ಬಂದರೆ ಖಾಸಗಿಯವರ ಕೆಲಸ ಸುಲಭವಾಗುತ್ತದೆ. ಅವರಿಗೆ ಈಗ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳನ್ನು ಭೇಟಿ ಆಗಬೇಕಿಲ್ಲ. ಬದಲು ಒಂದು ಕೇಂದ್ರದ ಮೂಲಕ ಇಡೀ ದೇಶವನ್ನೇ ಆಕ್ರಮಿಸಿಕೊಳ್ಳಬಹುದು. ಸಾಮಾಜಿಕ ನ್ಯಾಯಕ್ಕಾಗಿ ಇನ್ನೂ ಹಪಹಪಿಸುತ್ತಿರುವ ಭಾರತದಂಥ ದೇಶದಲ್ಲಿ ಇಂಥ ಬೆಳವಣಿಗೆಗಳು ಬಡತನವನ್ನು ಇನ್ನಷ್ಟು ಹೆಚ್ಚು ಮಾಡಿ ಆಳದಲ್ಲಿ ದೇಶವನ್ನು ದುರ್ಬಲಗೊಳಿಸುತ್ತದೆ.

ಕೊನೆಮಾತು

ಇವತ್ತು ಭಾರದಲ್ಲಿ ನಡೆಯುತ್ತಿರುವ ರೈತ ಚಳುವಳಿಯು ಅತ್ಯಂತ ಮಹತ್ವದ ಘಟನೆ ಎಂಬುದನ್ನು ಜಗತ್ತು ಒಪ್ಪಿಕೊಂಡಿದೆ. ಇದು ಕೇಂದ್ರ ಮತ್ತು ರಾಜ್ಯಗಳ ನಡುವಣ ಸಂಬಂಧಗಳನ್ನು (ಫೆಡರಲ್‌ ರಚನೆ) ಪರಿಶೀಲಿಸಲು ಒತ್ತಾಯಿಸಿದೆ. ಕೃಷಿಭೂಮಿಯ ಖಾಸಗೀಕರಣವು ಭಾರತದಂಥ ಅಭಿವೃದ್ಧಿ ಶೀಲ ದೇಶದಲ್ಲಿ ಉಂಟು ಮಾಡಬಹುದಾದ ಅನಾಹುತಗಳ ಬಗ್ಗೆ ಎಲ್ಲೆಡೆಯೂ ಚರ್ಚೆ ನಡೆಯುತ್ತಿದೆ.

ತತ್ಕಾಲೀನ ರಾಜಕೀಯ ಲಾಭಗಳನ್ನು ಬದಿಗಿರಿಸಿ ಎಲ್ಲರೂ ಈ ಕುರಿತು ಯೋಚಿಸಿದರೆ ಬಹಳ ಪ್ರಯೋಜನವಿದೆ. ಇದು ಸಾಧ್ಯವಾಗಲು, ಸರಕಾರವು ಈಗ ಗಡಿಬಿಡಿಯಿಂದ ಜ್ಯಾರಿಗೆ ತಂದ ಮೂರೂ ಕಾಯ್ದೆಗಳನ್ನು ಹಿಂಪಡೆಯಬೇಕು. ಕೃಷಿ ಅಭಿವೃದ್ಧಿಯ ಕುರಿತು ಚರ್ಚಿಸಲೆಂದೇ ವಿಶೇಷ ಪಾರ್ಲಿಮೆಂಟ್‌ ಅಧಿವೇಶನವನ್ನು ಕರೆಯಬೇಕು. ಅದಕ್ಕೂ ಮುನ್ನ ರೈತರೊಂದಿಗೆ, ಕೃಷಿ ತಜ್ಞರೊಂದಿಗೆ, ರಾಜ್ಯ ಸರಕಾರಗಳೊಂದಿಗೆ ಕೇಂದ್ರವು ಮುಕ್ತವಾದ ಚರ್ಚೆಯನ್ನು ನಡೆಸಬೇಕು. ಸ್ವಾಮಿನಾಥನ್‌ ವರದಿ ಯಾಕೆ ಬೇಡವೆಂದು ಜನರಿಗೆ ಹೇಳಬೇಕು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026 : ಕತಾ ಸ್ಪರ್ಧೆ ; ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನ ಅಮಾನ್ಯ ; ಪರಿಷ್ಕೃತ ಫಲಿತಾಂಶ ‌ಪ್ರಕಟ

Published

on

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026ರ ಕತಾ ಸ್ಪರ್ಧೆಯ ನಿಯಮಾವಳಿಯನ್ನು ಉಲಂಘಿಸಿರುವ ಕಾರಣ ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನವನ್ನು ಅಮಾನ್ಯ ಮಾಡಲಾಗಿದೆ ಎಂದು ಪತ್ರಿಕೆಯ ಸಂಪಾದಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕತೆ-ಕವಿತೆ ಸ್ಪರ್ಧೆಯ ನಿಯಮಾವಳಿಗಳ ಪ್ರಕಾರ ‘ “ಸ್ವತಂತ್ರ ರಚನೆಯಾಗಿರ ಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು” ಎನ್ನುವ ನಿಯಮಾವಳಿಗಳನ್ನು ಉಲಂಘಿಸಿರುವುದರಿಂದ ಪ್ರಥಮ ಸ್ಥಾನ ಪಡೆದ ” ಸಂಸ” ಕತೆಯನ್ನು ಅಮಾನ್ಯಗೊಳಿಸಲಾಗಿದೆ.

‘ಸಂಸ’ ಕತೆಯ ಕತೆಗಾರರಾದ ಅನಂತ ಕುಣಿಗಲ್ ಅವರು
ಸ್ವತಃ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ‘ ಸಂಸ’ ಕತೆಯು ಈ ಹಿಂದೆ ಯಾವುದೋ ಕತಾ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿತ್ತು. ಮತ್ತೊಂದೆಡೆ ತೃತೀಯ, ಮಗದೊಂದೆಡೆ ದ್ವಿತೀಯ ಬಹುಮಾನ ಲಭಿಸಿತ್ತು, ಅಲ್ಲದೆ ‘ಟೋಟೋ’ ಅವಾರ್ಡ್ ನ ಅಂತಿಮ ಸುತ್ತಿಗೆ ಎರಡು ಬಾರಿ ಶಾರ್ಟ್ ಲಿಸ್ಟ್ ಆಗಿತ್ತು ಎಂದು ಬರೆದು ಕೊಂಡಿರುತ್ತಾರೆ. ಆದಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ.

ಕತಾ ಸ್ಪರ್ಧೆಯ ಪರಿಷ್ಕೃತ ಫಲಿತಾಂಶ

ಕತಾ ಸ್ಪರ್ಧೆಯಲ್ಲಿ ರವಿಮುಡೋಡಿ ಅವರ ʼಅರ್ಧ ರೇಖೆಯ ಚಿತ್ರʼ  ಕತೆಗೆ ಪ್ರಥಮ ಬಹುಮಾನ, ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ದ್ವಿತೀಯ ಬಹುಮಾನ ಹಾಗೂ ಅಜೇಯ ಸಿಂಹ ಕೆ.ವಿ ಅವರ ‘ ಮಾರ್ಜಕದ ಶ್ರೀಮುಡಿ’ ಕತೆಗೆ  ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕ ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು

Published

on

~ ಯೋಗೇಶ್ ಮಾಸ್ಟರ್

ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.

ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.

ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.

ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?

ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.

ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.

ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.

ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

Continue Reading

ಅಂತರಂಗ

ಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ

Published

on

~ಯೋಗೇಶ್ ಮಾಸ್ಟರ್, ಚಿಂತಕರು

ಆಪ್ತ ಸಮಾಲೋಚಕ ಮತ್ತು ಮನೋವೈದ್ಯ
ಹಾಗಂತಿರುವ ನನ್ನ ಮನೆಯ ಮುಂದಿನ ನನ್ನ ಪರಿಚಯ. ಅದನ್ನೇ ನಾನೆಂದು ತಿಳಿದಿರುವ ಹೊರಗಿನವರಿಗೆಲ್ಲಾ ನನ್ನೊಳಗಿರುವ ಅಪರಿಚಿತನ ಹೇಗೂ ಕಾಣಲಾಗದು.

ಲೋಕ ಕಾಣುವ ಅಥವಾ ನಾನು ತೋರುವ ಮುಖದ ಮುಸುಕನ್ನು ಸರಿಸಿ ಇಣುಕುವಷ್ಟು ಯಾರಿಗಾದರೂ ಅದೆಷ್ಟು ಬಿಡುವಿರುವುದು! ಪರದೆಯ ಮೇಲಿನ ಡಾ. ಆತ್ಮಾರಾಮನ ನೆರಳಿನಾಟವನ್ನು ಮೆಚ್ಚುವರು, ಹೊಗಳುವರು, ತೆಗಳುವರು, ತಿರಸ್ಕರಿಸುವರು; ಅವರವರ ಕಣ್ಣುಗಳ ಅಭಿರುಚಿಗೆ ತಕ್ಕಂತೆ.
ಪರರ ರುಚಿಗೆ ಎಟಕುವುದು ಚಹರೆಗಳೇ ತಾನೇ! ಅವರ ಕಣ್ಣುಗಳಿಂದಲೇ ನನ್ನ ನಾನು ಕಂಡುಕೊಳ್ಳಲು ಅಥವಾ ಕಾಣಿಸಿಕೊಳ್ಳಲು ಸಾಕಾಗಿ ನನ್ನ ಕಣ್ಣುಗಳು ಮುಚ್ಚಿಕೊಂಡವು. ಅದೆಷ್ಟೋ ಹೊತ್ತು ಹಾಗಿದ್ದೆನೋ!

ಚಹರೆಗಳ ನೆರಳುಗಳನ್ನು ನುಂಗಿಕೊAಡ ಕಣ್ಣೊಳಗಿನ ಕತ್ತಲೆಯಲ್ಲಿ ಬೆತ್ತಲೆಯಾಗಿರುವುದು ಸುಖ. ಅದು ನಿರಾಳತೆಯ ಸುಖ. ತರಾವರಿ ತೊಡುಗೆಗಳ ತೂಕವನಿಳಿಸಿಕೊಂಡ ನಿರಾತಂಕದ ನೆಮ್ಮದಿ. ಕತ್ತಲು; ಅದೆಷ್ಟು ಆಳ! ಗೂಢತೆಗಳ ಮೇಳವದೆಷ್ಟಿದ್ದರೂ ತೋರ್ಪಡಿಸಿಕೊಳ್ಳುವ ಕಾತುರವಿಲ್ಲದ ನಿರಹಂಕಾರದ ನಿರಾಳತೆ!

ಬೆಳಕಿನದೇ ಸಮಸ್ಯೆ. ಅದರಲ್ಲದೆಷ್ಟು ಬಣ್ಣಗಳು, ಬಣ್ಣನೆಗಳು. ವ್ಯತ್ಯಾಸಗಳು, ವ್ಯತ್ಯಯಗಳು. ಸಮೀಕರಣಗಳು, ಅಸಮಾನತೆಗಳು. ಉಪಮೆಗಳು, ಉದಾಹರಣೆಗಳು. ಸಾಧಾರಣಗಳು, ಅಸಾಧರಣಗಳು. ಅಸೂಯೆಗಳು, ಆಯಾಸಗಳು. ಕತ್ತಲು ನೆಮ್ಮದಿ. ಮುಚ್ಚಿರುವ ಕಣ್ಣೊಳಗಿನ ಕತ್ತಲಿನಲ್ಲಿ ಕಾಣತೊಡಗಿದ ನನ್ನ ಬಿಂಬವನ್ನು ನೋಡುತ್ತಲೇ ಕುಳಿತುಬಿಟ್ಟೆ. ಹೌದಲ್ಲಾ, ಇಷ್ಟು ಕಾಲ ಮುಚ್ಚಿಟ್ಟಿದವರೇ ಈಗ ಬಿಚ್ಚಿಡುತ್ತಿದ್ದಾರೆ.

ಹೌದು, ಮನಸ್ಸೆಂಬುದೇ ಹಾಗೆ. ಅದು ತನಗೆ ತಾನೇ ತೊಂದರೆಯನ್ನು ಉಂಟುಮಾಡಿಕೊಳ್ಳುತ್ತದೆ. ತಾನೇ ಗೋಗರೆಯುತ್ತದೆ. ತಾನೇ ಸಹಾಯವನ್ನು ನಿರಾಕರಿಸುತ್ತದೆ. ತಾನೇ ಗೋಳಿಡುತ್ತದೆ. ತಾನೇ ಸಂತೈಸುತ್ತದೆ.
ತಿಕ್ಕಲು, ತಾನೇ ಹಾಳು ಮಾಡುವುದು, ತಾನೇ ಗೋಳಿಡುವುದು, ತಾನೇ ಸರಿ ಮಾಡುವುದು. ಈಗ ಸರಿಮಾಡಿಕೊಳ್ಳುವ ಮಗ್ಗುಲಿಗೆ ತಿರುಗಿಕೊಂಡಿದೆ. ಸರಿ ಹೋಗಿಬಿಡಲಿ.
ಸರಿ ಹೋಗುವುದೋ ಬಿಡುವುದೋ, ಸರಿಯಿಲ್ಲ, ಸರಿ ಮಾಡಬೇಕಾಗಿದೆ ಅಂತ ಗೊತ್ತಾಯಿತಲ್ಲಾ ಅಷ್ಟೇ ಸಾಕು.
ರೋಗವಿದೆ ಎಂಬ ಅರಿವು ಬಹುದೊಡ್ಡ ಉಪಶಮನ. ರೋಗವನ್ನೇ ಆರೋಗ್ಯವೆಂದು ಭಾವಿಸಿದ್ದು, ಈಗ ರೋಗ ಎಂದು ತಿಳಿಯಿತಲ್ಲಾ, ಅದೇ ಗುಣಮುಖವಾಗುವ ಮುನ್ಸೂಚನೆ.

ಇಷ್ಟೂ ದಿನಗಳ ಕಾಲ ಕನ್ನಡಿಯೊಳಗೆ ಮುಖ ನೋಡಿಕೊಳ್ಳುತ್ತಿದ್ದದ್ದು, ಇತರರಿಗೆ ಹೇಗೆ ಕಾಣಿಸುತ್ತೇನೆ, ಹೇಗೆ ಕಾಣಿಸಬೇಕು ಎಂದು. ಆದರೆ ಇಂದು ಕತ್ತಲಿನ ಕನ್ನಡಿಯಲ್ಲಿ ಕಾಣುತ್ತಿರುವ ಮುಖದ ಒಳಗಿನ ಮೌನ ತನ್ನ ಗುರುತಿನ ಪರದೆಯನ್ನು ಹರಿಯುತ್ತಿದೆ. ಯಾವ ಅಡಿಗಿದ್ದ ಮೌನ ನನ್ನಾತ್ಮದ ಕವಚವಾಗಿತ್ತೋ ಅದು ಕಾರಾಗೃಹವೆನಿಸಿ ಉಸಿರುಕಟ್ಟಿಸಿದ್ದು ಒಳ್ಳೆಯದೇ ಆಯಿತು.
ಮೌನ ದನಿಯಾಗುತ್ತಿದೆ. ದನಿ ಬನಿಯಾಗುತ್ತಿದೆ.
ಹಾಗಾಗಿಯೇ ಬೆಳಕಿನಲ್ಲಿ ವಿವಿಧ ಬಣ್ಣಗಳನ್ನು ಹಚ್ಚಿ ಬಣ್ಣಿಸಿದ್ದ ಎಲ್ಲಾ ಸಂಬAಧಗಳು, ಸಂಗತಿಗಳು, ಸಂವಹನಗಳು, ಸಂಘರ್ಷಗಳು ಈಗ ನೆನಪಿನ ನೆರಳುಗಳಾಗಿ ಆಳವಾದ ಕತ್ತಲಲ್ಲಿ ಬಣ್ಣ, ಬಣ್ಣನೆಗಳನ್ನು ಕಳೆದುಕೊಂಡಿವೆ.
ಅವರಿವರ ಮನಸ್ಸುಗಳ ಮಸುಕು ಮಾಡುವ ಮುಸುಕುಗಳ ತೆಗೆಯಲು ಸಹಕರಿಸುತ್ತಿದ್ದವನಿಗೆ ಸ್ವಸಹಾಯ ಮಾಡಿಕೊಳ್ಳಲು ಅದೇ ಮನಸ್ಸು ಮನಸ್ಸು ಮಾಡಿದೆ. ಆಗಲಿ, ಅದೂ ಆಗಿ ಹೋಗಲಿ.

ಮನೋವೈದ್ಯ ತನ್ನೊಳಗಿನ ರೋಗವನ್ನು ಪತ್ತೆ ಮಾಡಿಕೊಳ್ಳಲಿ. ಆಪ್ತ ಸಮಾಲೋಚಕ ತನ್ನಿರುವಿಗೆ, ತನ್ನಾಳಕೆ ಒಂದಿಷ್ಟು ಕಾಲ ಆಪ್ತನಾಗಿರುವ ಅವಕಾಶವನ್ನು ದಕ್ಕಿಸಿಕೊಳ್ಳಲಿ. ಮೌನವನ್ನು ಓದುವ ಓರಗೆಯವರಿದ್ದಾರೆ. ಓದಲಿ.
ವೈದ್ಯನೊಬ್ಬ ತಾನು ರೋಗಿಯಾಗಿರಲಿಲ್ಲ, ಅಥವಾ ತನಗೆ ರೋಗ ಬರುವುದಿಲ್ಲ ಎನ್ನುವುದು ಆತ್ಮವಂಚನೆ. ತನಗೆ ತಾನು ವಂಚಿಸಿಕೊಳ್ಳುವವನು ಜಗತ್ತಿನ ಯಾರೊಂದಿಗೆ ವಿಶ್ವಾಸವನ್ನು ಸಂಚಯ ಮಾಡಿಯಾನು!

ಮತ್ತೆ ಸಿಕ್ಕಿದನವನು ಮೌನದಲಿ
ಕಳೆದಿದ್ದವನು ಗದ್ದಲದಲಿ
ಗಾಯಗಳು ಮರೆತಿವೆ
ನೋವಿಲ್ಲದ ಕಲೆಗಳ ಹಿಂದೆ
ಪ್ರತಿ ಉಸಿರು ಆಸೆಗಳ ಬಸಿರು
ಹೆರಲಾಗದೆ ಘನವಾದ ಕಣ್ಣೀರು
ಕರಗುವುದೊಮ್ಮೆ ಹೆಪುö್ಪಗಟ್ಟಿದ ಕಾರ್ಮೋಡ
ಸುರಿವುದಲ್ಲಿ ಒಳಗಣ್ಣಿಂದ ಮಳೆಯು ನೋಡ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending