Connect with us

ದಿನದ ಸುದ್ದಿ

ನ್ಯಾಮತಿ | ಫೆ.14ರಂದು ಸಂತ ಸೇವಾಲಾಲ್‍ರವರ 282ನೇ ಜಯಂತಿ

Published

on

ಸುದ್ದಿದಿನ,ದಾವಣಗೆರೆ : ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪದ ಭಾಯಾಗಡ್ ಇಲ್ಲಿ ಫೆ.14 ರಂದು ಮಧ್ಯಾಹ್ನ 2 ಗಂಟೆಗೆ ಸಂತ ಸೇವಾಲಾಲ್‍ರವರ 282ನೇ ಜಯಂತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ದಾವಣಗೆರೆ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತ, ಬೆಂಗಳೂರು, ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಹಣಾ ಪ್ರತಿಷ್ಠಾನ, ಬೆಂಗಳೂರು ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ ಸೂರಗೊಂಡನಕೊಪ್ಪ ಇವರ ಸಂಯುಕ್ತಾಶ್ರಾಯದಲ್ಲಿ ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ ಇವರು ಜಯಂತ್ಯೋತ್ಸವದ ಉದ್ಘಾಟನೆಯನ್ನು ನೆರವೇರಿಸುವರು.

ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ವಿಧಾನಸಭಾಕ್ಷೇತ್ರದ ಶಾಸಕರಾದ ಎಂ.ಪಿ.ರೇಣುಕಾಚಾರ್ಯ ಅಧ್ಯಕ್ಷತೆ ವಹಿಸುವರು. ಸಮಾಜ ಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು ಪುಷ್ಪಾರ್ಚನೆ ಮಾಡುವರು. ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ ಸಭಾಮಂಟಪ ಲೋಕಾರ್ಪಣೆಯನ್ನು ಮಾಡುವರು.

ಮುಖ್ಯಅತಿಥಿಗಳಾಗಿ ಉಪಮುಖ್ಯಮಂತ್ರಿಗಳು ಮತ್ತು ಲೋಕೋಪಯೋಗಿ ಸಚಿವರಾದ ಗೋವಿಂದ ಎಂ ಕಾರಜೋಳ, ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ್ ಎಸ್ ಸವದಿ, ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ಐ.ಟಿ ಮತ್ತು ಬಿ.ಟಿ ಹಾಗೂ ವಿಜ್ಞಾನ ತಂತ್ರಜ್ಞಾನ ಸಚಿವರಾದ ಡಾ.ಸಿ.ಎನ್ ಅಶ್ವತ್ ನಾರಾಯಣ್, ಪಶುಸಂಗೋಪನೆ ಸಚಿವರಾದ ಪ್ರಭು ಬಿ.ಚವ್ಹಾಣ್, ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ.

ವಿಧಾನ ಪರಿಷತ್‍ನ ವಿರೋಧ ಪಕ್ಷದ ನಾಯಕರಾದ ಎಸ್.ಆರ್ ಪಾಟೀಲ್, ಕುಡಚಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಪಿ.ರಾಜೀವ್, ದಾವಣಗೆರೆ ಕ್ಷೇತ್ರದ ಲೋಕಸಭಾ ಸದಸ್ಯರಾದ ಜಿ.ಎಂ ಸಿದ್ದೇಶ್ವರ.

ಶಿವಮೊಗ್ಗ ಕ್ಷೇತ್ರದ ಲೋಕಸಭಾ ಸದಸ್ಯರಾದ ಬಿ.ವೈ ರಾಘವೇಂದ್ರ, ದಾವಣಗೆರೆ ಜಿ.ಪಂ ಅಧ್ಯಕ್ಷೆ ಕೆ.ವಿ ಶಾಂತಕುಮಾರಿ, ಕಲರ್ಬುಗಿ ಲೋಕಸಭಾ ಕ್ಷೇತ್ರದ ಸಂಸದರಾದ ಡಾ.ಉಮೇಶ್.ಜಿ.ಜಾಧವ್, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ಅಧ್ಯಕ್ಷರು ಹಾಗೂ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಮಾಡಾಳ್ ವಿರುಪಾಕ್ಷಪ್ಪ, ಮಲೆನಾಡು ಅಭಿವೃದ್ದಿ ಮಂಡಳಿಯ ಅಧ್ಯಕ್ಷರಾದ ಗುರುಮೂರ್ತಿ.

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಅಧ್ಯಕ್ಷರು ಹಾಗೂ ಜಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ವಿ ರಾಮಚಂದ್ರ, ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಡಾ.ಬಾಬು ಜಗಜೀವನ್‍ರಾವ್ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷರು ಪ್ರೊ.ಲಿಂಗಣ್ಣ, ದಕ್ಷಿಣ ವಿಧಾನಸಭಾ ಕ್ಷೇತ್ರದ ಮಾಜಿ ಸಚಿವರು ಹಾಗೂ ಹಾಲಿ ಶಾಸಕರಾದ ಶಾಮನೂರು ಶಿವಶಂಕರಪ್ಪ.

ಮಾಜಿ ಸಚಿವರು ಹಾಗೂ ಹೂವಿನ ಹಡಗಲಿ ಕ್ಷೇತ್ರದ ಶಾಸಕರಾದ ಪಿ.ಟಿ.ಪರಮೇಶ್ವರ ನಾಯ್ಕ, ಹಗರಿಬೊಮ್ಮನಹಳ್ಳಿ ವಿಧಾನಸಭಾಕ್ಷೇತ್ರದ ಶಾಸಕರಾದ ಎಸ್.ಭೀಮಾನಾಯ್ಕ, ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಶಾಸಕರಾದ ರಾಮಪ್ಪ ಲಮಾಣಿ, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಬಿ ಅಶೋಕ್ ನಾಯ್ಕ್.

ನಾಗಠಾಣ ವಿಧಾನಸಭಾ ಕ್ಷೇತ್ರದ ಶಾಸಕರಾದ ದೇವಾನಂದ್ ಫೂಲ್‍ಸಿಂಗ್ ಚೌವ್ಹಾಣ್, ಚಿಂಚೋಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಅವಿನಾಶ್ ಜಾಧವ್, ವಿಧಾನ ಪರಿಷತ್ ಶಾಸಕರು ಹಾಗೂ ಸಂತಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ರುದ್ರಪ್ಪ.ಎಂ.ಲಮಾಣಿ, ನ್ಯಾಮತಿ ತಾ.ಪಂ ಅಧ್ಯಕ್ಷರು, ಜಿ.ಪಂ ಸದಸ್ಯರು ಹಾಗೂ ತಾ.ಪಂ ಸದಸ್ಯರು ಪಾಲ್ಗೊಳ್ಳುವರು.

ಸಮಾಜ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಹಣಾ ಪ್ರತಿಷ್ಠಾನದ ಸದಸ್ಯ ಕಾರ್ಯದರ್ಶಿ ಹಾಗೂ ಕ.ತಾ.ಅ.ನಿ.ನಿ ವ್ಯವಸ್ಥಾಪಕ ನಿರ್ದೇಶಕರು, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯ ಪ್ರಧಾನ ಕಾರ್ಯದರ್ಶಿಗಳು ಭಾಗವಹಿಸುವರೆಂದು ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending