ದಿನದ ಸುದ್ದಿ
ತಂಬಾಕು ನಿಯಂತ್ರಣ ಕಾನೂನನ್ನು ಬಲಪಡಿಸಲು ಶೇಕಡಾ 88% ಭಾರತೀಯರ ಒಲವು
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2021/02/ban-tobacco_suddidina.jpg&description=ತಂಬಾಕು ನಿಯಂತ್ರಣ ಕಾನೂನನ್ನು ಬಲಪಡಿಸಲು ಶೇಕಡಾ 88% ಭಾರತೀಯರ ಒಲವು', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2021/02/ban-tobacco_suddidina.jpg&description=ತಂಬಾಕು ನಿಯಂತ್ರಣ ಕಾನೂನನ್ನು ಬಲಪಡಿಸಲು ಶೇಕಡಾ 88% ಭಾರತೀಯರ ಒಲವು', 'pinterestShare', 'width=750,height=350'); return false;" title="Pin This Post">
ಕೋಟ್ಪಾ ತಿದ್ದುಪಡಿ ಮಸೂದೆ 2020ರ ಪ್ರಸ್ತಾವಿತ ಸುಧಾರಣೆಗಳಿಗೆ ರಾಷ್ಟ್ರ ಯ ಸಮೀಕ್ಷೆಯಲ್ಲಿ ಭಾರೀ ಸಾರ್ವಜನಿಕ ಬೆಂಬಲ ವ್ಯಕ್ತವಾಗಿದೆ.
ಸುದ್ದಿದಿನ,ಬೆಂಗಳೂರು: ದೇಶದ 10 ರಾಜ್ಯಗಳ ವಯಸ್ಕರಲ್ಲಿ ನಡೆಸಿದ ಸಮೀಕ್ಷೆಯ ಪ್ರಕಾರ ಶೇ. 80ಕ್ಕೂ
ಹೆಚ್ಚು ಭಾರತೀಯರು ಸಿಗರೇಟ್, ಬೀಡಿ ಮತ್ತು ಹೊಗೆರಹಿತ ತಂಬಾಕು ಬಳಕೆ ಬಹಳ ಗಂಭೀರ ಸಮಸ್ಯೆ ಎಂದು
ನಂಬಿದ್ದಾರೆ ಹಾಗೂ ಈ ಸಮಸ್ಯೆಯನ್ನು ನಿವಾರಿಸಲು ಪ್ರ ಪ್ರಸ್ತುತ ಚಾಲ್ತಿಯಲ್ಲಿರುವ ತಂಬಾಕು ನಿಯಂತ್ರಣ ಕಾನೂನನ್ನು
ಬಲಪಡಿಸಲು ಶೇ. 88% ಮಂದಿ ಪ್ರಬಲವಾಗಿ ಬೆಂಬಲಿಸುತ್ತಾರೆ.
ಧೂಮಪಾನದ ಹೊಗೆಗೆ ಒಡ್ಡಿಕೊಳ್ಳುವುದು
ಆರೋಗ್ಯಕ್ಕೆ ಅತೀ ಹಾನಿಕಾರಕ ಎಂದು ಶೇ. 72 ಜನರು ನಂಬಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ,
ವಿಮಾನ” ನಿಲ್ದಾಣ, ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ವಿಶೇಷ ಧೂಮಪಾನ ಪ್ರದೇಶಗಳ ತೆರವು ಹಾಗೂ
ಮಾರಾಟ ಕೇಂದ್ರ ಗಳಲ್ಲಿ ಸಿಗರೇಟ್ ಮತ್ತು ದೀಡಿಗಳ ಬಿಡಿ ಮಾರಾಟ ಮತ್ತು ತಂಬಾಕು ಉತ್ಪನ್ನಗಳ ಜಾಹೀರಾತಿನ
ಮೇಲೆ ನಿಷೇಧಕ್ಕೆ ಸಿಕ್ಕ ಬೆಂಬಲ ಅಭೂತಪೂರ್ವ.
ಕನ್ಸ್ಯುಮರ್ ವಾಯ್ಸ್ 10 ರಾಜ್ಯಗಳಲ್ಲಿ ದೂರವಾಣಿ ಮುಖಾಂತರ ನಡೆಸಿದ 18 ವರ್ಷ ಮೇಲ್ಪಟ್ಟ 1,476
ವಯಸ್ಕರನ್ನೊಳಗೊಂಡ ವಿವರವಾದ ಸಮೀಕ್ಷೆಯ ಅಂಶಗಳಿವು. ಹತ್ತು ಭಾಷೆಗಳಲ್ಲಿ (ಕನ್ನಡ, ಹಿಂದಿ, ಗುಜರಾತಿ,
ಪಂಜಾಬಿ, ಒರಿಯಾ, ಮರಾಠಿ, ತಮಿಳು, ಬೆಂಗಾಲಿ, ತೆಲುಗು ಮತ್ತು ಮಲಯಾಳಂ) ನಡೆಸಲಾದ ಈ ಆಳವಾದ
ಸಂದರ್ಶನಗಳಿಗೆ ಕಂಪ್ಯೂಟರ್ ಅಸಿಸ್ಲೆಡ್ ಟೆಲಿಫೋನ್ ಇಂಟರ್ವ್ಯೂಯಿಂಗ್ (ಸಿಎಟಿಐ) ಮತ್ತು ರಾಂಡಮ್ ಡಿಜಿಟ್
ಡಯಲ್ (ಆರ್ ಡಿಡಿ) ಕ್ರಮಶಾಸ್ತ್ರವನ್ನು ಬಳಸಲಾಯಿತು.
ಸಮೀಕ್ಷೆಯ ಪ್ರಮುಖಾಂಶಗಳು
1. ತಂಬಾಕುಬಳಕೆಯನ್ನುಬಹುತೇಕ ಭಾರತೀಯರು ಗಂಭೀರ ಸಮಸ್ಯೆಯಾಗಿ ನೋಡುತ್ತಾರೆ
ಸಮೀಕ್ಷೆಯಲ್ಲಿ ಪಾಲ್ಗೊಂಡ ಬಹುತೇಕರು ತಂಬಾಕು ಬಳಕೆಯ ವಿವಿಧ ಬಗೆಗಳನ್ನು ಬಹಳ ಗಂಭೀರ ಸಮಸ್ಯೆಗಳಿಂದ ಪರಿಗಣಿಸುತ್ತಾರೆ. ಶೇಕಡ 82ರಷ್ಟು ಮಂದಿ
ಹೊಗೆರಹಿತ ತಂಬಾಕು ಬಳಕೆ ತೀವ್ರ ಗಂಭೀರ ಸಮಸ್ಯೆ ಎಂದು ನಂಬುತ್ತಾರೆ; “ಶೇಕಡಾ 80ರಷ್ಟು ಮಂದಿ ಸಿಗರೇಟ್ ಸೇವಸೆ ಬಗ್ಗೆ ಇದೇ ಅಭಿಪ್ರಾಯ ವ್ಯಕ್ತಪಡಿಸಿದರೆ, ಶೇಕಡ
77ರಷ್ಟು ಮಂದಿ ಬೀಡಿ ಬಳಕೆ ಬಹಳ ಗಂಭೀರ ಸಮಸ್ಯೆ ಎಂದು ಹೇಳುತ್ತಾರೆ.
2. ಧೂಮಪಾನದ ಹೊಗೆಗೆ ಒಡ್ಡಿಕೊಳ್ಳುವುದು ಆರೋಗ್ಯಕ್ಕೆ ಬಹಳ ಅಪಾಯಕಾರಿ
ಧೂಮಪಾನದ ಹೊಗೆಗೆ ತಮ್ಮನ್ನು ಒಡ್ಡಿಕೊಳ್ಳುವುದು ಕಳವಳಕಾರಿ ಎಂದು ಶೇಕಡ 72 ರಷ್ಟು ಮಂದಿ, ಅಂದರೆ ಪ್ರತಿ ಹತ್ತು ಭಾರತೀಯರಲ್ಲಿ ಏಳು ಮಂದಿ ಎಂದು ಹೇಳುತ್ತಾರೆ.
3. ತಂಬಾಕು ನಿಯಂತ್ರಣ ಕಾನೂನನ್ನು ಬಲಪಡಿಸಲು ಭಾರತೀಯರ ತೀವ್ರ ಒಲವು
ಪ್ರಸಕ್ತ ತಂಬಾಕು ನಿಯಂತ್ರಣ ಕಾನೂನನ್ನು ಬಲಪಡಿಸಲು ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಶೇಕಡ 88ರಷ್ಟು ಮಂದಿ ಇದಕ್ಕೆ ಬೆಂಬಲ ನೀಡುವ ಮೂಲಕ ಹತ್ತು
ಭಾರತೀಯರಲ್ಲಿ 9 ಮಂದಿ ಕಾನೂನನ್ನು ಬಲಪಡಿಸುವ ಪರವಾಗಿದ್ದಾರೆ. ವಯಸ್ಸು ಮತ್ತು ಲಿಂಗ ಸೇರಿದಂತೆ ಎಲ್ಲ ಸಾಮಾಜಿಕ ‘ಮತ್ತು ಭೌಗೋಳಿಕ ಸ್ತರಗಳನ್ನೂ ಮೀರಿ’ ಇದಕ್ಕೆ ಬೆಂಬಲ ವ್ಯಕ್ತವಾಗಿದೆ. ತಂಬಾಕು ಬಳಕೆದಾರರು ಸಹ ಇದಕ್ಕೆ ಬೆಂಬಲ ಸೂಚಿಸಿದ್ದಾರೆ.
‘”ಪ್ರಸಕ್ತ ಜಾರಿಯಲ್ಲಿರುವ ತಂಬಾಕು ನಿಯಂತಣ ಕಾನೂನನ್ನು ಬಲಪಡಿಸಲು ಜನರಿಂದ ವ್ಹಕ್ತವಾಗಿರುವ ಬೆಂಬಲ ಆಶಾದಾಯಕವಾಗಿದೆ. ಭಾರತ ಸರ್ಕಾರವು ಈಗಾಗಲೇ ತಂಬಾಕು ನಿಯಂತಣ ಕಾನೂನು
ಕೋಟಾ-2003ಕ್ಕೆ ತಿದ್ದುಪಡಿ ತರುವ ಪ್ರಕ್ರಿಯೆಯನ್ನು ಆರಂಭಿಸಿದ್ದು ಇದು ಸಾರ್ವಜನಿಕ ಆರೋಗ್ಯವನ್ನು
ಸುಧಾರಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ, ಮಾರಾಟ
ಕೇಂದ್ರಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತು ಪ್ರದರ್ಶನ ಹಾಗೂ ಸಿಗರೇಟ್ ಮತ್ತು ಬಿಡಿಗಳ ಬಿಡಿ ಮಾರಾಟ ಪ್ರಸಕ್ತ ಜಾರಿಯಲ್ಲಿರುವ ತಂಬಾಕು ನಿಯಂತ್ರಣ ಕಾನೂನನ್ನು ಬಲಪಡಿಸಲು ಜನರಿಂದ ವ್ಯಕ್ತವಾಗಿರುವ
ಅಭೂತಪೂರ್ವ ಬೆಂಬಲ ಆಶಾದಾಯಕವಾಗಿದೆ.
ಭಾರತ ಸರ್ಕಾರವು ಈಗಾಗಲೇ ತಂಬಾಕು ನಿಯಂತ್ರಣ ಕಾನೂನು ಕೋಟಾ-2003ಕ್ಕೆ ತಿದುಪಡಿ ತರುವ ಪ್ರಕ್ರಿಯೆಯನ್ನು ಆರಂಭಿಸಿದ್ದು ಇದು ಸಾರ್ವಜನಿಕ ಆರೋಗ್ಯವನ್ನು ಸುಧಾರಿಸುವ ನಿಟ್ಟಿನಲ್ಲಿ ಮಹತ್ತದ ಹೆಜ್ಜೆಯಾಗಿದೆ. ಸಾರ್ವಜನಿಕ ಸಳಗಳಲ್ಲಿ ಧೂಮಪಾನ ನಿಷೇಧ, ಮಾರಾಟ ಕೇಂದ್ರಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತು ಪ್ರದರ್ಶನ ಹಾಗೂ ಸಿಗರೇಟ್ ಮತ್ತು ಬಿಡಿಗಳ ಬಿಡಿ ಮಾರಾಟ ನಿಷೇಧಕ್ಕೆ ಸಂಬಂಧಿಸಿದ ನಿಬಂಧನೆಗಳನ್ನು ಬಲಪಡಿಸುವುದರ ಜೊತೆಗೆ ಹೆಚ್ಚಿನ ದಂಡವನ್ನೂ ವಿಧಿಸಲು ಸರ್ಕಾರ ‘ಯೋಜಿಸಿದೆ.’ ಎಂದು ಶ್ರೀ ಆಶಿಮ್ ಸನ್ಯಾಲ್, ಮುಖ್ಯ ನಿರ್ವಹಣಾಧಿಕಾರಿ, ಕನ್ಸ್ಯುಮರ್ ವಾಯ್ಟ್ ತಿಳಿಸಿದ್ದಾರೆ.
“ಕನ್ಸ್ಯುಮರ್ ವಾಯ್ಸ್ ನಡೆಸಿರುವ ಸಮೀಕ್ಷೆಯಲ್ಲಿ ಶೇಕಡ 80ಕ್ಕೂ ಹೆಚ್ಚು ಮಂದಿ ತಂಬಾಕು ನಿಯಂತ್ರಣ
ಕಾನೂನುಗಳನ್ನು ಬಲಪಡಿಸುವಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಭಾರಿ ಜನಬೆಂಬಲವನ್ನು ಗಣನೆಗೆ
ತೆಗೆದುಕೊಂಡರೆ, ಧೂಮಪಾನವನ್ನು ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿಸುವುದಿಲ್ಲದೆ ರೆಸ್ಟೋರೆಂಟ್ ಪಬ್
ಹೋಟೆಲ್ ಮತ್ತು ವಿಮಾನ ನಿಲ್ದಾಣಗಳಲ್ಲಿ ಧೂಮಪಾನ ಪ್ರದೇಶವನ್ನು ಸರ್ಕಾರ ಕೂಡಲೇ ನಿಷೇಧಿಸುವ
ಸಮಯ ಬಂದಿದೆ ಎಂದೇ ಅರ್ಥ.
ಅಲ್ಲದೆ, ತಂಬಾಕು ನಿಯಂತ್ರಣ ಕಾಸೂಸುಗಳ ಉಲ್ಲಂಘನೆಗೆ ಹೆಚ್ಚಿನ ದಂಡ ವಿಧಿಸುವುದು ಹಾಗೂ ಸಿಗರೇಟ್ ಮತ್ತು ಬೀಡಿಗಳ ಬಿಡಿ ಮಾರಾಟದ ಮೇಲಿನ ನಿಷೇಧದ
ಕಟ್ಟುನಿಟ್ಟಿನ ಜಾರಿ ಈ ಕ್ಷಣದ ತುರ್ತಾಗಿದೆ” ಎಂದು ಡಾ. ತ್ರಿವೇಣಿ ಸಾರ್ವಜನಿಕ ಆರೋಗ್ಯ ತಜ್ಞೆ ಮತ್ತು
ಪ್ರಾಜೆಕ್ಟ್ ಲೀಡರ್ ಸ್ಮೋಕ್ ಪ್ರೀ ಬೆಂಗಳೂರು ಹೇಳಿದ್ದಾರೆ.
ಜಾಗತಿಕವಾಗಿ ರೋಗ ಮತ್ತು ಅಕಾಲಿಕ ಮರಣಗಳಿಗೆ ತಂಬಾಕು ಬಳಕೆ ಪ್ರಮುಖ ಮತ್ತು ತಡೆಯಬಹುದಾದ
ಕಾರಣವಾಗಿದ್ದು, ಭಾರತದಲ್ಲಿ ತಂಬಾಕು ಸಂಬಂಧಿತ ಕಾಯಿಲೆಗಳಿಂದ ಪ್ರತಿವರ್ಷ 10 ಲಕ್ಷಕ್ಕೂ ಹೆಚ್ಚು ಜನ ಮರಣ
ಹೊಂದುತ್ತಿದ್ದಾರೆ. ಭಾರತದಲ್ಲಿ ಸಾಮಾಜಿಕ, ಆರ್ಥಿಕ, ಲಿಂಗ ಮುಂತಾದ ಎಲ್ಲ ಸ್ತರಗಳನ್ನೂ ಮೀರಿ 26 ಕೋಟಿಗೂ
ಹೆಚ್ಚು ತಂಬಾಕು ಬಳಕೆದಾರರಿದ್ದಾರೆ. 2017-18ರಲ್ಲಿ ಎಲ್ಲ ತಂಬಾಕು ಉತ್ಪನ್ನಗಳ ವಾರ್ಷಿಕ ಆರ್ಥಿಕ ವೆಚ್ಚ ರೂ.
177,341 ಕೋಟಿ ಎಂದು ಅಂದಾಜಿಸಲಾಗಿತ್ತು ಮತ್ತು ಇದು ಭಾರತದ ಜಿಡಿಪಿಯ ಶೇಕಡ ಒಂದರಷ್ಟಿತ್ತು.
ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ನೀಡಿರುವ ಮಾಹಿತಿಯ ಪ್ರಕಾರ, ತಂಬಾಕಿನ ಎಲ್ಲ ರೀತಿಯ ಬಳಕೆಗೂ, ಅದು ಧೂಮಪಾನವಾಗಲಿ ಅಥವ ಜಗಿಯುವುದಾಗಲಿ, ಕೋವಿಡ್ ಸಂಬಂಧಿ ಸಾವು-ನೋವುಗಳಿಗೂ ಗಮನಾರ್ಹ ನಂಟಿದೆ.
ವಾಲೆಂಟರಿ ಆರ್ಗನೈಸೇಷನ್ ಇನ್ ಇಂಟ್ರೆಸ್ಟ್ ಆಫ್ ಕನ್ಸ್ಹುಮರ್ ಎಜುಕೇಶನ್ (voluntary organisation in interest of consumer education )-(voice) ನವದೆಹಲಿ ಮೂಲದ ಸರ್ಕಾರೇತರ ಸಂಸ್ಥೆಯಾಗಿದ್ದು,
ಭಾರತದಾದ್ಯಂತ ತಂಬಾಕು ನಿಯಂತ್ರಣ ಸೇರಿದಂತೆ ವಿವಿಧ ಸಾಮಾಜಿಕ ಮತ್ತು ಆರೋಗ್ಯ ವಿಷಯಗಳ ಕುರಿತು
ಕಾರ್ಯನಿರ್ವಹಿಸುತ್ತಿದೆ.
ಇದೊಂದು ರಾಷ್ಟ್ರೀಯ ಮಟ್ಟದ ಗ್ರಾಹಕ ಸಂಘಟನೆಯಾಗಿದ್ದು, 1983ರಿಂದ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಹಲವು ನೀತಿ ರಚನೆ ಮತ್ತು ನಿಯಂತ್ರಕ ಸಂಸ್ಥೆಗಳಲ್ಲಿ ಗ್ರಾಹಕರ ಹಿತಾಸಕ್ತಿಗಳನ್ನು ಪ್ರತಿನಿಧಿಸುತ್ತೇವೆ ಎಂದಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ
ಸುದ್ದಿದಿನ,ದಾವಣಗೆರೆ:ಕೆ. ಬೇವಿನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾದ ರಕ್ತದಾನ ಶಿಬಿರದಲ್ಲಿ 21 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಇದೇ ವೇಳೆ ಸಾಲಕಟ್ಟೆ ಗ್ರಾಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹರಿಹರ ಇವರ ಸಂಯುಕ್ತ ಆಶ್ರಯದಲ್ಲಿ 11 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.
ಶಿಬಿರದಲ್ಲಿ ಸತ್ಯನಾರಾಯಣ ಕ್ಯಾಂಪ್‌ನ ಡಾ. ರಾಮಾಂಜನೇಯ ಸ್ವಾಮಿ ಅವರು ಇದುವರೆಗೆ 110 ಬಾರಿ ರಕ್ತದಾನ ಮಾಡಿರುವುದು ವಿಶೇಷವಾಗಿದ್ದು, ಈ ಬಾರಿ ತಮ್ಮ ಮಗನೊಂದಿಗೆ ರಕ್ತದಾನ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ. ಅಲ್ಲದೆ ವಿರೂಪಾಕ್ಷಪ್ಪ ಬಿ.ಕೆ. (ವಿ.ಆರ್.ಡಬ್ಲ್ಯೂ) ಎಂಬ ವಿಶೇಷ ಚೇತನರು 5ನೇ ಬಾರಿ ರಕ್ತದಾನ ಮಾಡಿ ಗಮನಾರ್ಹರಾಗಿದ್ದಾರೆ.
ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ (ಟಿ.ಎಚ್.ಒ) ಉಮಣ್ಣ ಅವರು ಮಾತನಾಡಿ, ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲವಾದುದರಿಂದ ರಕ್ತದಾನದ ಮಹತ್ವ ಅತ್ಯಂತ ಮಹತ್ತರವಾಗಿದೆ ಎಂದು ತಿಳಿಸಿದರು.
ವೈದ್ಯಾಧಿಕಾರಿಗಳಾದ ಡಾ. ರೇವತಿ ಎಚ್ ಬುಟ್ಟೆ ಅವರು ಮಾತನಾಡಿ, ಗ್ರಾಮದ ಜನರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿರುವುದು ಸಂತೋಷದ ಸಂಗತಿ. ಅತಿ ತುರ್ತು ಪರಿಸ್ಥಿತಿಗಳಲ್ಲಿ ರಕ್ತದಾನವು ಅನೇಕ ರೋಗಿಗಳ ಜೀವ ಉಳಿಸಲು ಸಹಾಯಕವಾಗುತ್ತದೆ ಎಂದು ಹೇಳಿದರು. ದಾವಣಗೆರೆ ಕೇಂದ್ರ ರಕ್ತ ನಿಧಿಯ ಡಾ. ಗೀತಾ ಡಿ.ಎಚ್. ಹಾಗೂ ಸಿಬ್ಬಂದಿಗಳು ರಕ್ತವನ್ನು ಸಂಗ್ರಹಿಸಿದರು.
ಈ ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಕರಾದ ಉಮೇಶ್ ಎಂ.ಆರ್.ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು ಹಾಗೂ ಗ್ರಾಮಸ್ಥರಾದ ವಿಶ್ವನಾಥ್ ಡಿ.ಆರ್. (ಉಪನ್ಯಾಸಕರು), ವಿಶ್ವನಾಥ್ ಎ.ಎಸ್., ಬನ್ನಿಕೋಡು ಸುರೇಶ್, ರೇವಣಸಿದ್ದಪ್ಪ, ಕೆ.ಜಿ. ಸಂತೋಷ್, ಜಿ.ಎಂ. ಮುರುಗೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.
ಕೆ. ಬೇವಿನಹಳ್ಳಿ ಮತ್ತು ಸಾಲಕಟ್ಟೆ ಗ್ರಾಮಸ್ಥರ ಸಹಕಾರದಿಂದ ರಕ್ತದಾನ ಶಿಬಿರ ಯಶಸ್ವಿಯಾಗಿ ನೆರವೇರಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ
ಸುದ್ದಿದಿನ,ದಾವಣಗೆರೆ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಮುಸ್ಲಿಂ ಸಮಾಜದ ನಾಯಕರಾಗಿದ್ದ ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸೈಫುಲ್ಲಾ ಸಾಬ್ (79ವರ್ಷ) ಅವರು ಇಂದು ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ದಾವಣಗೆರೆಯ ನಂಜಪ್ಪ ಆಸ್ಪತ್ರೆಯಲ್ಲಿ ದಾಖಲಾಗಿದ್ದರು . ಮೃತರ ನಿಧನಕ್ಕೆ ಮುಸ್ಲಿಂ ಸಮುದಾಯದ ಮುಖಂಡರು, ವಿವಿಧ ಪಕ್ಷಗಳ ನಾಯಕರು ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.
ಕರೆಕಟ್ಟೆಜನಾಬ್ ಸೈಯದ್ ಸೈಫುಲ್ಲ ಸಾಬ್ಮಿ ಲ್ಲತ್ ವಿದ್ಯಾ ಸಂಸ್ಥೆಗಳ ಸಂಸ್ಥಾಪಕರೂ ಆಗಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡಿದ್ದ ಸೈಯದ್ ಸೈಫುಲ್ಲಾ ಸಾಬ್ ಅವರು ಸಿಎಂ ಸಿದ್ದರಾಮಯ್ಯ, ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರ ಆಪ್ತರಾಗಿದ್ದರು.
ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಅವರನ್ನು ಸೇರಿದಂತೆ ಕುಟುಂಬಸ್ಥರು, ಅಪಾರ ಬಂಧುಬಳಗದವರನ್ನು ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸಾಬ್ ಅವರು ಅಗಲಿದ್ದಾರೆ.
2013ರಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ ಜೆಡಿಎಸ್ ಸೇರಿ ಈ ಪಕ್ಷದಿಂದ ಸ್ಪರ್ಧಿಸಿ 26 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಶಾಮನೂರು ಶಿವಶಂಕರಪ್ಪರ ವಿರುದ್ಧ ಸೋತರೂ ಎರಡನೇ ಸ್ಥಾನ ಪಡೆದಿದ್ದರು. ಆಗ ಬಿಜೆಪಿ ಮೂರನೇ ಸ್ಥಾನಕ್ಕೆ ಹೋಗಿತ್ತು. ಮತ್ತೆ ಕಾಂಗ್ರೆಸ್ ಪಕ್ಷ ಸೇರಿದ್ದ ಅವರು, ಸಿದ್ದರಾಮಯ್ಯರ ಜೊತೆ ಉತ್ತಮ ಒಡನಾಟ ಹೊಂದಿದ್ದರು. ಅವರು ಸ್ನಾತಕೋತ್ತರ ವೃತ್ತಿಪರ ಬಿಎಸ್ಸಿ ಅನ್ನು ಮೈಸೂರು ವಿಶ್ವವಿದ್ಯಾಲಯದಿಂದ ಪಡೆದಿದ್ದರು. ದಾವಣಗೆರೆಯ ಡಿಆರ್ ಎಂ ಕಾಲೇಜಿನಲ್ಲಿ ಬಿ. ಎಡ್ ವ್ಯಾಸಂಗ ಮಾಡಿದ್ದರು. ಎಂ. ಎಂ. ಬಸಪ್ಪ ಶಿಕ್ಷಣ ಸಂಘದ ಕಾಲೇಜಿನಲ್ಲಿ ಪದವಿ ಪೂರೈಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ
ಸುದ್ದಿದಿನ,ದಾವಣಗೆರೆ:ಈ ವರ್ಷ ಬರಗಾಲದ ಲಕ್ಷಣಗಳಿರುವುದರಿಂದ ಜಲಚರಗಳ ರಕ್ಷಣೆ ಹಾಗೂ ಕುಡಿಯುವ ನೀರಿನ ಲಭ್ಯತೆಗೆ ಮೊದಲ ಆದ್ಯತೆ ನೀಡಬೇಕು. ಜಿಲ್ಲೆಯ ಕೆರೆಗಳಲ್ಲಿರುವ ನೀರಿನ ಪ್ರಮಾಣದ ಬಗ್ಗೆ ನಿಖರವಾದ ಅಧ್ಯಯನ ನಡೆಸಿ ವರದಿ ನೀಡುವಂತೆ , ಜಿಲ್ಲೆಯ ಕೆರೆಗಳ ಸಂರಕ್ಷಣೆ ಹಾಗೂ ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರರುಗಳಿಗೆ ಜಿಲ್ಲಾಧಿಕಾರಿಗಳಾದ ಗಂಗಾಧರಸ್ವಾಮಿ ಜಿ.ಎಂ ಅವರು ಸೂಚನೆ ನೀಡಿದರು.
ಅವರು (ಏ.15) ಕೆರೆಗಳ ಸಂರಕ್ಷಣೆ, ಒತ್ತುವರಿ ತೆರವು ಹಾಗೂ ಮುಂಬರುವ ಬೇಸಿಗೆಯ ಕುಡಿಯುವ ನೀರಿನ ನಿರ್ವಹಣೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ಒಟ್ಟು 533 ಕೆರೆಗಳ ಪೈಕಿ ಇನ್ನೂ 20 ಕೆರೆಗಳ ಒತ್ತುವರಿ ತೆರವು ಕಾರ್ಯ ಬಾಕಿ ಇದೆ. ಚನ್ನಗಿರಿ ತಾಲ್ಲೂಕಿನ 5 ಕೆರೆಗಳಾದ ಹರೇಗಂಗೂರು, ಸಾಗರಪೇಟೆ, ದಾಗಿನಕಟ್ಟೆ, ತ್ಯಾವಣಿಗ ಮತ್ತು ಸೂಳೆಕೆರೆ; ಹರಿಹರ ತಾಲ್ಲೂಕಿನ 7 ಕೆರೆಗಳಾದ ಹಿಂಡಸಗಟ್ಟ, ಜಿಗಳಿ, ಹಾಲಿವಾಣ, ಕಮಲಾಪುರ, ಗುಡ್ಡದತುಮ್ಮಿನಕಟ್ಟೆ, ಕುಂಬಳೂರು, ಯಲವಟ್ಟಿ; ದಾವಣಗೆರೆ ತಾಲ್ಲೂಕಿನ ಹೊನ್ನೂರು, ಹದಡಿ, ಮಾಳಗೊಂಡನಹಳ್ಳಿಯ 3 ಕೆರೆಗಳು ಹಾಗೂ ಹೊನ್ನಾಳಿ ತಾಲ್ಲೂಕಿನ ನೆಲಹೊನ್ನೆ, ಬನ್ನಿಕೊಡು, ಕುಂಬಳೂರು, ಸಾಸ್ವೆಹಳ್ಳಿ ಮತ್ತು ಬಲಮುರಿ ಕೆರೆಗಳನ್ನು ಶೀಘ್ರವಾಗಿ ಗುರುತಿಸಿ ತೆರವುಗೊಳಿಸಲು ಕ್ರಮವಹಿಸಬೇಕು. ತೆರವು ಕಾರ್ಯಾಚರಣೆಯನ್ನು ಛಾಯಾಚಿತ್ರ ಮತ್ತು ವಿಡಿಯೋ ಚಿತ್ರೀಕರಣದೊಂದಿಗೆ ಪಾರದರ್ಶಕವಾಗಿ ನಡೆಸಿ ಗ್ರಾಮ ಪಂಚಾಯತಿಗಳಿಗೆ ಅಧಿಕೃತವಾಗಿ ಹಸ್ತಾಂತರಿಸಬೇಕು ಎಂದು ತಿಳಿಸಿದರು.
ಚನ್ನಗಿರಿ ಹಾಗೂ ದಾವಣಗೆರೆ ತಾಲ್ಲೂಕಿನ ಹಲವು ಕೆರೆಗಳಿಗೆ ಕೊಳಚೆ ನೀರು ಸೇರುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಉದ್ದೇಶಕ್ಕೆ ಬಳಸುವ ಕೆರೆಗಳ ನೀರಿನ ಮಾದರಿಯನ್ನು ಪ್ರತಿ ತಿಂಗಳು ಪ್ರಯೋಗಾಲಯದಲ್ಲಿ ಪರೀಕ್ಷಿಸಿ ವರದಿ ಸಲ್ಲಿಸಬೇಕು. ಯೋಗ್ಯವಾಗಿದ್ದರೆ ಮಾತ್ರ ಕುಡಿಯಲು ಬಳಸಬೇಕು ಎಂದರು.
ಕೆರೆಗಳಲ್ಲಿ ಹೂಳೆತ್ತುವ ಕಾರ್ಯವನ್ನು ಕೇವಲ ರೈತರಿಗೆ ಮಾತ್ರ ಸೀಮಿತಗೊಳಿಸಬೇಕು. ಅಕ್ರಮ ಮಣ್ಣು ಸಾಗಾಟಕ್ಕೆ ಆಸ್ಪದ ನೀಡದಂತೆ ಭೂ-ವಿಜ್ಞಾನ ಇಲಾಖೆ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲು ಹಾಗೂ ಮಣ್ಣಿನ ಮೂಲ ಪದರ ಹಾನಿಯಾಗದಂತೆ ಕ್ರಮವಹಿಸಬೇಕೆಂದು ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೆರೆಗಳನ್ನು ಒತ್ತುವರಿಯಿಂದ ಶಾಶ್ವತವಾಗಿ ಮುಕ್ತಗೊಳಿಸಲು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಕೆರೆಗಳ ಬಫರ್ ವಲಯದಲ್ಲಿ ಸಸಿಗಳನ್ನು ನೆಟ್ಟು ಜೈವಿಕ ಬೇಲಿ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಮುಂಬರುವ ಮಳೆಗಾಲದ ವೇಳೆಗೆ ಸಸಿಗಳನ್ನು ನೆಡಲು ಸಿದ್ಧತೆ ಮಾಡಿಕೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ವ್ಯಾಪ್ತಿಯಲ್ಲಿ ಕೆರೆಗಳ ನೀರಿನ ಸಂಗ್ರಹಣಾ ಮಟ್ಟದ ಕುರಿತು ವಿವರ (ಮಾರ್ಚ್ 31 ಅಂತ್ಯಕ್ಕೆ)
ಪೂರ್ಣ ತುಂಬಿದ ಕೆರೆಗಳು: ಜಿಲ್ಲೆಯ ಒಟ್ಟು 08 ಕೆರೆಗಳು ಶೇ. 100 ರಷ್ಟು ಭರ್ತಿಯಾಗಿವೆ.
ಶೇ. 51 ರಿಂದ ಶೇ. 99 ರಷ್ಟು: ಒಟ್ಟು 47 ಕೆರೆಗಳಲ್ಲಿ ಉತ್ತಮ ನೀರಿನ ಸಂಗ್ರಹವಿದೆ.
ಶೇ. 31 ರಿಂದ ಶೇ. 50 ರಷ್ಟು: ಸುಮಾರು 164 ಕೆರೆಗಳು ಅರ್ಧದಷ್ಟು ನೀರಿನ ಮಟ್ಟವನ್ನು ಹೊಂದಿವೆ.
ಶೇ. 1 ರಿಂದ ಶೇ. 30 ರಷ್ಟು: ಜಿಲ್ಲೆಯ ಗರಿಷ್ಠ ಅಂದರೆ 250 ಕೆರೆಗಳಲ್ಲಿ ಕನಿಷ್ಠ ಪ್ರಮಾಣದ ನೀರು ಸಂಗ್ರಹವಾಗಿದೆ.
ಶೂನ್ಯ ಮಟ್ಟ (ತುಂಬಿರದ ಕೆರೆಗಳು): ಪ್ರಸ್ತುತ ಜಿಲ್ಲೆಯ 64 ಕೆರೆಗಳಲ್ಲಿ ನೀರಿನ ಸಂಗ್ರಹವಿಲ್ಲದೆ ಖಾಲಿಯಾಗಿವೆ.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಕರಣ್ಣನವರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರುಗಳು, ಬೃಹತ್ ಮತ್ತು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು , ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ
-
ದಿನದ ಸುದ್ದಿ7 days agoಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ
-
ದಿನದ ಸುದ್ದಿ3 days agoದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ
-
ದಿನದ ಸುದ್ದಿ3 days agoಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ
-
ದಿನದ ಸುದ್ದಿ5 days agoದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ

