ದಿನದ ಸುದ್ದಿ
ಮಲೆಬೆನ್ನೂರು ಪುರಸಭೆ ಮುಖ್ಯಾಧಿಕಾರಿ ಧರಣೇಂದ್ರಕುಮಾರ್.ಡಿ.ಎನ್ ಅಮಾನತು
ಸುದ್ದಿದಿನ,ದಾವಣಗೆರೆ : ಮಲೆಬೆನ್ನೂರು ಪುರಸಭೆಯ ಮುಖ್ಯಾಧಿಕಾರಿ ಧರಣೇಂದ್ರಕುಮಾರ್.ಡಿ.ಎನ್ ಇವರನ್ನು ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಮಲೆಬೆನ್ನೂರು ಪುರಸಭೆಯಲ್ಲಿ ಮುಖ್ಯಾಧಿಕಾರಿಯಾಗಿ ಇವರು ಮಲೇಬೆನ್ನೂರು ಪುರಸಭೆಯಲ್ಲಿ ನಿಯೋಜನೆ ಮೇಲೆ ಕಾರ್ಯ ನಿರ್ವಹಿಸುತ್ತಿದ್ದು 2020-21 ನೇ ಸಾಲಿನ ಹದಿನೈದನೇ ಹಣಕಾಸಿನ ಯೋಜನೆಯಡಿ ಕ್ರಿಯಾ ಯೋಜನೆಗೆ ಮಂಜೂರಾತಿ ನೀಡುವ ಆದೇಶದಲ್ಲಿನ ಕಾಮಗಾರಿಗಳಲ್ಲಿ ಇ-ಪ್ರಕ್ಯೂರ್ಮೆಂಟ್ ಪೋರ್ಟಲ್ ಮುಖಾಂತರ ಟೆಂಡರ್ ಆಹ್ವಾನಿಸಲು ಆದೇಶಿಸಲಾಗಿತ್ತು.
ಸದರಿ ಆದೇಶವನ್ನು ಉಲ್ಲಂಘಿಸಿ ಮ್ಯಾನ್ಯುಯಲ್ ಟೆಂಡರ್ ಮುಖಾಂತರ ಸ್ಥಳೀಯ ದಿನ ಪತ್ರಿಕೆಯಲ್ಲಿ ಪ್ರಕಟಿಸಿ ಕರ್ನಾಟಕ ಪಾರದರ್ಶಿಕತೆ ಅಧಿನಿಯಮ 2000 ನಿಯಮ (17) ರಂತೆ ಕೆ.ಡಬ್ಲೂ-1 ಪ್ರಕಾರ ಟೆಂಡರ್ ಅವಧಿಯನ್ನು 15 ದಿನಗಳಿಗೆ ನಿಗದಿಪಡಿಸಿದ್ದರೂ ಸರ್ಕಾರದ ಮಾರ್ಗಸೂಚಿಯನ್ನು ಉಲ್ಲಂಘಿಸಿ 45 ದಿನಗಳ ದೀರ್ಘಾವಧಿ ಟೆಂಡರನ್ನು ಆಹ್ವಾನಿಸಿತ್ತು.
ಸದರಿ ಪ್ರಕಟಣೆಯನ್ನು ರಾಜ್ಯ ಮಟ್ಟದ ದಿನ ಪತ್ರಿಕೆಯಲ್ಲಿ ನೀಡದೇ ಸ್ಥಳೀಯ ದಿನಪತ್ರಿಕೆಯಲ್ಲಿ ಮಾತ್ರ ಪ್ರಕಟಿಸಿ ಟೆಂಡರ್ ಪ್ರಕಟಣೆಯನ್ನು ಮುಕ್ತವಾಗಿ ಪ್ರಚುರ ಪಡಿಸದೇ ಇರುವುದು ಕಂಡುಬಂದಿದ್ದು ಸಹಾಯಕ ಕಾರ್ಯಪಾಲಕ ಅಭಿಯಂತರರು ಜಿಲ್ಲಾ ನಗರಾಭಿವೃದ್ದಿ ಕೋಶ ಇವರ ತನಿಖಾ ವರದಿಯಂತೆ ಮುಖ್ಯಾಧಿಕಾರಿ ಧರಣೇಂದ್ರ ಕುಮಾರ್.ಡಿ.ಎನ್ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ನಿಲಂಬನೆಯಲ್ಲಿಟ್ಟು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು
ಸುದ್ದಿದಿನ ಡೆಸ್ಕ್:ಆರಂಭಿಕ ಜೀವನ – 1978ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ದಿಲೀಪ್ ರಾಜ್ ಅವರು ಕಾಲೇಜು ದಿನಗಳಿಂದಲೇ ಕಲೆಯತ್ತ ಒಲವು ಹೊಂದಿದ್ದರು.
ಚಲನಚಿತ್ರ ರಂಗ – 2005ರಲ್ಲಿ ‘ಬಾಯ್ ಫ್ರೆಂಡ್’ ಚಿತ್ರದ ಮೂಲಕ ಎಂಟ್ರಿ ಕೊಟ್ಟ ಅವರು, 2007ರಲ್ಲಿ ಪುನೀತ್ ರಾಜ್ಕುಮಾರ್ ಅವರ ‘ಮಿಲನ’ ಚಿತ್ರದಲ್ಲಿ ಹೇಮಂತ್ ಎಂಬ ವಿಲನ್ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದರು.
ಇತ್ತೀಚಿನ ಜನಪ್ರಿಯತೆ – ‘ಲವ್ ಮಾಕ್ಟೇಲ್’ ಸಿನಿಮಾ ಮತ್ತು ಕಿರುತೆರೆಯಲ್ಲಿ ನಟ-ನಿರ್ಮಾಪಕರಾಗಿ ದೊಡ್ಡ ಹೆಸರು ಮಾಡಿದ್ದರು.
ದಿಲೀಪ್ ರಾಜ್ ಅವರ ಸಾವು ಕೇವಲ ಒಂದು ಕುಟುಂಬಕ್ಕೆ ಮಾತ್ರವಲ್ಲದೆ ಇಡೀ ಚಿತ್ರರಂಗಕ್ಕೆ ದೊಡ್ಡ ನಷ್ಟ. ಇವರ ಈ ಹಠಾತ್ ನಿಧನವು ಒತ್ತಡದ ಜೀವನಶೈಲಿ ಮತ್ತು ಆರೋಗ್ಯದ ಕಡೆಗೆ ನಾವು ನೀಡಬೇಕಾದ ಹೆಚ್ಚಿನ ಗಮನದ ಬಗ್ಗೆ ಎಚ್ಚರಿಕೆ ನೀಡುವಂತಿದೆ.

ದಿನದ ಸುದ್ದಿ
ಬ್ಯಾಕ್ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಹರಿಹರ ನಗರದ ಮಾತೃಶ್ರೀ ರುದ್ರಮಾಂಬಾ ಬಸವಾರ್ಯ ಪ್ರೌಢಶಾಲೆಯ ಕನ್ನಡ ಶಿಕ್ಷಕರ ಬ್ಯಾಕ್ಲಾಗ್ (ಪರಿಶಿಷ್ಟ ಜಾತಿ) ನೇಮಕಾತಿಯಲ್ಲಿನ ಅಕ್ರಮಗಳನ್ನು ತನಿಖೆಗೆ ಒಳಪಡಿಸಿ ಆಡಳಿತ ಮಂಡಳಿ ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ನೀಡಿ ವರ್ಷಗಳೇ ಕಳೆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಶ್ರೀ ಕೃಷ್ಣಾಜಿ ಎಸ್. ಕರಿಚಣ್ಣನವರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ ಹರಿಹರ ನಗರದ ಮಾತೃಶ್ರೀ ರುದ್ರಮಾಂಬ ಬಸವಾರ್ಯ ಪ್ರೌಢಶಾಲೆಯಲ್ಲಿನ ಕನ್ನಡ ಶಿಕ್ಷಕರ ಬ್ಯಾಕ್ಲಾಗ್ (ಪರಿಶಿಷ್ಟ ಜಾತಿ) ನೇಮಕಾತಿಯು ನಿಯಮಬಾಹಿರವಾಗಿ ನಡೆದಿರುವ ಮಾಹಿತಿಯ ಆಧಾರದ ಮೇಲೆ ಆಯುಕ್ತರು ಹಾಗೂ ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ಆಯುಕ್ತರ ಕಛೇರಿ, ಬೆಂಗಳೂರು ಇವರಿಗೆ ದೂರು ನೀಡಿ, ಬ್ಯಾಕ್ಲಾಗ್ ನಿಯಮಕ್ಕೆ ವಿರುದ್ಧವಾಗಿ ಸಂದರ್ಶನ ನಡೆಸಿ, ನೇಮಕಾತಿ ಪ್ರಕ್ರಿಯೆಗೆ ಮುಂದಾಗಿರುವ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮೂಖ್ಯೋಪಧ್ಯಾಯರು, ವಿಷಯ ಪರಿವೀಕ್ಷಕರು, ವಿಷಯ ತಜ್ಞರು ಹಾಗೂ ಆಡಳಿತ ಮಂಡಳಿಯ ಸದಸ್ಯರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ದೂರು ಅರ್ಜಿ ತಲುಪಿದ ಒಂದು ತಿಂಗಳ ಒಳಗಾಗಿ ನೀಡುವಂತೆ ಮನವಿ ಮಾಡಲಾಗಿತ್ತು. ಆದರೆ ವರ್ಷಗಳೇ ಕಳೆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.
ವಯಸ್ಸು ಮತ್ತು ಮೆರಿಟ್ ಆಧಾರದಲ್ಲಿ ನೇಮಕಾತಿ ನಡೆಸದೆ ಸಂದರ್ಶನ ನಡೆಸಿ ಬ್ಯಾಕ್ಲಾಗ್ ನಿಯಮವನ್ನು ಉಲ್ಲಂಘನೆ ಮಾಡಿರುವುದು ತನಿಖೆಯಲ್ಲಿ ಕಂಡುಬAದಿರುತ್ತದೆ. ಆದರೆ ತಪ್ಪಿತಸ್ಥ ಅಧಿಕಾರಿಗಳು ಹಾಗೂ ಆಡಳಿತ ಮಂಡಳಿಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕಾರಣ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಕೃಷ್ಣಾಜಿ ಎಸ್. ಕರಿಚಣ್ಣನವರ್ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿ, ಬ್ಯಾಕ್ಲಾಗ್ ನಿಯಮಗಳನ್ನು ಉಲ್ಲಂಘಿಸಿ ಸಂದರ್ಶನ ನಡೆಸಲು ಕಾರಣರಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರಿಗೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿಗಳ ಅವ್ಯವಹಾರ ನಡೆಸಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇಲ್ಲಿನ ಪ್ರಾಂಶುಪಾಲರಾದ ನಾಗರಾಜ ಜಿ.ಎಂ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿ ನಕಲಿ ಬಿಲ್ಲುಗಳ ಮೂಲಕ ಸರ್ಕಾರದ ಅನುದಾನವನ್ನು ವಂಚಿಸುತ್ತಿರುವ ವಿಷಯ ತಿಳಿದು ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇವರು ನೀಡಿರುವ 37 ಬಿಲ್ಲುಗಳನ್ನು ಪರಿಶೀಲನೆ ಮಾಡಿದಾಗ, ಇವುಗಳಲ್ಲಿನ ಬಹುತೇಕ ಜಿ.ಎಸ್.ಟಿ ಬಿಲ್ಲುಗಳಲ್ಲಿ ದಿನಾಂಕವೇ ಇರುವುದಿಲ್ಲ.
ಇನ್ನೂ ಕೆಲವು ಬಿಲ್ಲುಗಳನ್ನು ಹೊರ ರಾಜ್ಯದಿಂದ ಪಡೆಯಲಾಗಿರುತ್ತದೆ. ಆದ್ದರಿಂದ ಮರು ಲೆಕ್ಕಪರಿಶೋಧನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ಅಂಕಣ3 days agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ದಿನದ ಸುದ್ದಿ4 hours agoನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
-
ದಿನದ ಸುದ್ದಿ4 days agoಮಾನಸಿಕ ಆರೋಗ್ಯ ಅರಿವು ಅಗತ್ಯ : ಡಾ. ಪ್ರಭು ಎಂ. ಬಿಸ್ಲೇರಿ
-
ದಿನದ ಸುದ್ದಿ1 day agoನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು
-
ದಿನದ ಸುದ್ದಿ2 days agoಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!

