ದಿನದ ಸುದ್ದಿ
ಜಗಳೂರು ತಾಲ್ಲೂಕು ಹಿಂದುಳಿದ ಹಾಗೂ ಬರಪೀಡಿತ ಪ್ರದೇಶ ಎಂಬ ಹಣೆಪಟ್ಟಿ ತೊಡೆದು ಹಾಕುತ್ತೇವೆ : ಶಾಸಕ ಎಸ್.ವಿ. ರಾಮಚಂದ್ರಪ್ಪ
ಸುದ್ದಿದಿನ, ದಾವಣಗೆರೆ : ಕೆರೆಗಳನ್ನು ತುಂಬಿಸುವುದು, ನೀರಾವರಿ, ಶುದ್ಧ ಕುಡಿಯುವ ನೀರು ಯೋಜನೆಗಳನ್ನು ಸಾಕಾರಗೊಳಿಸುವ ಮೂಲಕ ಜಗಳೂರು ತಾಲ್ಲೂಕು ಹಿಂದುಳಿದ ಹಾಗೂ ಬರಪೀಡಿತ ಪ್ರದೇಶ ಎಂಬ ಹಣೆಪಟ್ಟಿ ತೊಡೆದುಹಾಕುವ ಕಾರ್ಯ ಶೀಘ್ರ ಮಾಡಲಾಗುವುದು ಎಂದು ಜಗಳೂರು ಶಾಸಕರು ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ವಿ. ರಾಮಚಂದ್ರಪ್ಪ ಹೇಳಿದರು.
ಶನಿವಾರ ಜಿಲ್ಲಾಧಿಕಾರಿಗಳ ನಡೆ- ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,57 ಕೆರೆಗೆ ನೀರು ತುಂಬಿಸುವ ಯೋಜನೆ ಕೆಲವೇ ದಿನಗಳಲ್ಲಿ ಚಾಲನೆ ದೊರೆಯಲಿದೆ. ರೂ.1200 ಕೋಟಿಯ ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ನೀರಾವರಿ ಯೋಜನೆಯಾಗಿಸಲು ಕ್ರಮ ವಹಿಸಿದ್ದು, ತಾಲ್ಲೂಕನ್ನು ಹಸಿರೀಕರಣ ಮಾಡುವ ನಿಟ್ಟಿನಲ್ಲಿ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದರು.
ಈಗಾಗಲೇ ತಾಲ್ಲೂಕಿಗೆ ಸಾಕಷ್ಟು ಕೆಲಸಗಳನ್ನು ಮಾಡಿಕೊಂಡು ಬಂದಿದ್ದು, ಮುಂದಿನ ದಿನಗಳಲ್ಲಿ ಜಿಲ್ಲಾಡಳಿತದ ಸಹಕಾರದೊಂದಿಗೆ ಮತ್ತಷ್ಟು ಕೆಲಸ ಕಾರ್ಯಗಳನ್ನು ಮಾಡುತ್ತೇವೆ. ವಾಲ್ಮೀಕಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷನಾದ ನಂತರ ಜಗಳೂರು ವಿಧಾನಸಭೆ ಕ್ಷೇತ್ರಕ್ಕೆ ಸ್ವಯಂ ಉದ್ಯೋಗ ನೇರ ಸಾಲಕ್ಕೆ ರೂ.1.35 ಕೋಟಿ, 176 ಗಂಗಾ ಕಲ್ಯಾಣಕ್ಕೆ ರೂ.6.16 ಕೋಟಿ, ಉದ್ಯಮಶೀಲತೆಗೆ ರೂ.79 ಲಕ್ಷ ಸೇರಿದಂತೆ ನಿಗಮದ ಮೂಲಕ ಒಟ್ಟು ರೂ.8.37 ಕೋಟಿ ಅನುದಾನವನ್ನು ಫಲಾನುಭವಿಗಳಿಗೆ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಎಲ್ಲಾ ಸೌಲಭ್ಯಗಳನ್ನು ನೇರವಾಗಿ ಜನರಿಗೆ ತಲುಪುವಂತೆ ಮಾಡುತ್ತೇವೆ ಎಂದು ಭರವಸೆ ಮೂಡಿಸಿದರು.
ತಹಶೀಲ್ದಾರ್ ನಾಗವೇಣಿ ಮಾತನಾಡಿ, ರಾಜ್ಯ ಸರ್ಕಾರದ ನಿರ್ದೇಶನದಂತೆ ಪ್ರತಿ ತಿಂಗಳ ಮೂರನೇ ಶನಿವಾರ ಗ್ರಾಮಗಳಿಗೆ ಭೇಟಿ ನೀಡಿ ಗ್ರಾಮಸ್ಥರ ಅಹವಾಲು ಸ್ವೀಕರಿಸಿ ಸ್ಥಳೀಯ ಸಮಸ್ಯೆಗಳನ್ನು ಇಲ್ಲಿಯೇ ಪರಿಹಾರ ಮಾಡುವಲ್ಲಿ ಗ್ರಾಮ ವಾಸ್ತವ್ಯ ಸಹಕಾರಿಯಾಗಿದೆ ಎಂದರು.
ಪಹಣಿ ತಿದ್ದುಪಡಿಗಾಗಿ 22 ಅರ್ಜಿಗಳು ಬಂದಿವೆ. ಪೌತಿ ಖಾತೆಗೆ 8 ಅರ್ಜಿ ಸ್ವೀಕೃತವಾಗಿದ್ದು, ಪೌತಿ ಖಾತೆಯ ಆಂದೋಲನಕ್ಕೆ ಕ್ರಮವಹಿಸಲಾಗಿದೆ. ಜಮೀನು ಸಕ್ರಮೀಕರಣ ಕೋರಿ ನಮೂನೆ 53 ರಲ್ಲಿ 13 ಅರ್ಜಿಗಳು ಹಾಗೂ ನಮೂನೆ 57ರಲ್ಲಿ 89 ಅರ್ಜಿಗಳು ಬಂದಿದ್ದು, ಈ ಕುರಿತ ಸಮಿತಿ ಸಭೆಗಳಲ್ಲಿ ಎಲ್ಲಾ ಅರ್ಜಿಗಳ ವಿಲೇವಾರಿಗೆ ಕ್ರಮವಹಿಸಲಾಗುವುದು. ಬಸವನಕಟ್ಟೆ ಗ್ರಾಮಕ್ಕೆ ಈಗಾಗಲೇ ಸರ್ವೇ ನಂ 23ಎ ಅಡಿ 2 ಎಕರೆ ಜಾಗವನ್ನು ಸ್ಮಶಾನಕ್ಕಾಗಿ ನೀಡಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ವಿಜಯ್ ಮಹಾಂತೇಶ್ ದಾನಮ್ಮನವರ್, ಉಪವಿಭಾಗಧಿಕಾರಿ ಮಮತ ಹೊಸಗೌಡರ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಣುಕಾ ಕೊಟ್ರೇಶ್, ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಸಿದ್ದೇಶ್, ಗ್ರಾ.ಪಂ. ಉಪಾಧ್ಯಕ್ಷೆ ಮರಿಯಮ್ಮನವರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಲ್ಲನಾಯಕ್ ಸೇರಿದಂತೆ ಗ್ರಾಮಪಂಚಾಯಿತಿ ಸದಸ್ಯರು, ತಾಲ್ಲೂಕು ಪಂಚಾಯಿತಿ ಸದಸ್ಯರು, ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಂಗವಾಗಿ ವಿವಿಧ ಫಲಾನುಭವಿಗಳಿಗೆ ಸರ್ಕಾರದ ವಿವಿಧ ಯೋಜನೆಗಳ ಮಂಜೂರಾತಿ ಆದೇಶ ಪತ್ರಗಳನ್ನು ವಿತರಿಸಲಾಯಿತು. ಸಂಸದ ಜಿ.ಎಂ. ಸಿದ್ದೇಶ್ವರ್ ಅವರು ಅಗಸನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ, ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಗಿಡಗಳನ್ನು ನೆಡುವ ಕಾರ್ಯದಲ್ಲಿ ಪಾಲ್ಗೊಂಡರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!
ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.
ನಡೆದಿದ್ದೇನು?
ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.
ಡೆತ್ ನೋಟ್ನಲ್ಲಿತ್ತು ಕೊನೆಯ ಆಸೆ
ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.
ತಮಿಳುನಾಡಿನಲ್ಲಿ ಅಂತ್ಯಕ್ರಿಯೆ
ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.
ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್; ಪ್ರವೇಶಾತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: 2026-27ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿನ ಮೂರು ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಹಾಗೂ ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ 2026 ರ ಜುಲೈ 01ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 23 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 25 ವರ್ಷ ಮೀರಿರಬಾರದು. ಒಟ್ಟು 39 ಅಭ್ಯರ್ಥಿಗಳನ್ನು (ಪುರುಷ ಮತ್ತು ಮಹಿಳಾ) ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500/- ಗಳ ಶಿಷ್ಯವೇತನ ನೀಡಲಾಗುವುದು., ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.
ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಡಿಪ್ಲೋಮಾ ಕೋರ್ಸ್ಗೆ ನೇರ ಪ್ರವೇಶಕ್ಕೆ https://khtigadag.ac.in/
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಳಿಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಕಾಲೇಜು ರಸ್ತೆ, ನಿಟ್ಟುವಳ್ಳಿ, ದಾವಣಗೆರೆ ಅಥವಾ ದೂರವಾಣಿ ಸಂಖ್ಯೆ: 08192-262362 ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಿನದ ಸುದ್ದಿ
ದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
ಸುದ್ದಿದಿನ,ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ದಾವಣಗೆರೆಯ ಭೂಮಿಕಾ ನಗರದ ನಿವಾಸಿಯಾಗಿರುವ 52 ವರ್ಷದ ಸರ್ಕಾರಿ ಕಾಲೇಜಿನ ಉಪನ್ಯಾಸಕ ಹಣ ಕಳೆದುಕೊಂಡಿದ್ದಾರೆ.
ಉಪನ್ಯಾಸಕರು ಮೊದಲಿಗೆ ಟೆಲಿಗ್ರಾಂ ಮೂಲಕ ಲಿಂಕ್ ಕ್ಲಿಕ್ ಮಾಡಿದ್ದಾರೆ. ಅಲ್ಲಿ ವಂಚಕರು ಹೇಳಿದಂತೆ ಹಲವು ಲಿಂಕ್ಗಳನ್ನು ಕ್ಲಿಕ್ ಮಾಡುತ್ತಾ ಹೋಗಿದ್ದು, ಹಂತಹಂತವಾಗಿ ಹಣ ಕಳೆದುಕೊಂಡಿದ್ದಾರೆ.
ಲಾಭದ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಲಾಭ ಹೋಗಲಿ, ಅಸಲೂ ಬಾರದ ಕಾರಣ ಅನುಮಾನಗೊಂಡು ತಾನು ಹಣ ಕಳೆದುಕೊಂಡಿರುವುದು ದೃಢಪಟ್ಟಿದೆ. ನಂತರ ಸೈಬರ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ3 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ6 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ದಿನದ ಸುದ್ದಿ3 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ದಿನದ ಸುದ್ದಿ7 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ಅಂಕಣ2 days agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ಕ್ರೀಡೆ6 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
-
ದಿನದ ಸುದ್ದಿ2 days agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ

