Connect with us

ದಿನದ ಸುದ್ದಿ

ಅತಿವೃಷ್ಠಿ ಹಾನಿ | ವಾರದಲ್ಲಿ ರೈತರ ಖಾತೆಗೆ 29.58 ಕೋಟಿ ರೂ. ಜಮಾ : ಸಚಿವ ಬಿ.ಸಿ.ಪಾಟೀಲ್ ಭರವಸೆ

Published

on

ಸುದ್ದಿದಿನ,ಕಲಬುರಗಿ : ಅತಿವೃಷ್ಠಿಯಿಂದ ಬೆಳೆ ಹಾನಿಗೊಳಗಾಗಿ ಕಂಗಾಲಾಗಿರುವ ಕಲಬುರಗಿ ಜಿಲ್ಲೆಯ 41 ಸಾವಿರ ರೈತರಿಗೆ ಬರುವ ಒಂದು ವಾರದಲ್ಲಿ 29.58 ಕೋಟಿ ರೂ. ಹಣ ನೇರವಾಗಿ ಅವರ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ಭಾನುವಾರ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೃಷಿ ಇಲಾಖೆಗೆ ಸಂಬಂಧಿಸಿದಂತೆ ಕೃಷಿ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಪ್ರಮುಖವಾಗಿ ತೊಗರಿ, ಹೆಸರು, ಉದ್ದು, ಸೋಯಾಬಿನ್ ಸೇರಿದಂತೆ ಅತಿವೃಷ್ಠಿಯಿಂದ ವಿವಿಧ ಬೆಳೆಗಳ ಒಟ್ಟಾರೆ 442626 ಹೆಕ್ಟೇರ್ ಪ್ರದೇಶ ಹಾನಿಗೊಳಗಾಗಿದೆ. ಇದರಲ್ಲಿ ಈಗಾಗಲೆ ಪರಿಹಾರಕ್ಕೆ ನೋಂದಣಿಯಾದ 150409 ರೈತರ ಪೈಕಿ 139158 ರೈತರಿಗೆ 6 ಹಂತಗಳಲ್ಲಿ 97.07 ಕೋಟಿ ರೂ. ಪರಿಹಾರ ನೀಡಲಾಗಿದೆ. ಇದರ ಮುಂದುವರೆದ ಭಾಗವಾಗಿ 7ನೇ ಹಂತದಲ್ಲಿ 41 ಸಾವಿರ ರೈತರಿಗೆ 29.58 ಕೋಟಿ ರೂ. ಪರಿಹಾರ ವಾರದಲ್ಲಿ ನೀಡಲಾಗುತ್ತಿದೆ ಎಂದರು.

ಜಿಲ್ಲೆಯಲ್ಲಿ 14 ಮಣ್ಣು ಪರೀಕ್ಷಾ ಕೇಂದ್ರಗಳಿದ್ದು, ಮಣ್ಣು ಪರೀಕ್ಷೆ ಮಾಡಿಕೊಂಡು ಬೆಳೆ ಬೆಳೆಯಲು ರೈತರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ಮನುಷ್ಯ ಹುಷಾರಿಲ್ಲದ ಸಮಯದಲ್ಲಿ ವೈದ್ಯನನ್ನು ಕಂಡಾಗ ರಕ್ತ ಪರೀಕ್ಷೆ ಮಾಡಿದ ನಂತರವೆ ರೋಗದ ಮೂಲ ಕಂಡುಹಿಡಿದು ಹೇಗೆ ಚಿಕಿತ್ಸೆ ನೀಡುತ್ತಾರೋ ಅದೇ ರೀತಿಯಲ್ಲಿ ಮಣ್ಣು ಪರೀಕ್ಷೆ ಮಾಡಿ ಯಾವ ಬೆಳೆ ಬೆಳೆದರೆ ನಿಮಗೆ ಅನುಕೂಲ ಎಂಬುದನ್ನು ರೈತರಿಗೆ ಮನವರಿಕೆ ಮಾಡಿಕೊಡಿ ಎಂದು ಸಚಿವ ಬಿ.ಸಿ.ಪಾಟೀಲ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲೆಗಳಿಗೆ 108 ಮಾದರಿಯಲ್ಲಿ ಕೃಷಿ ರೈತನ ಸಮಸ್ಯೆಗಳ ತಕ್ಷಣಕ್ಕೆ ಸ್ಪಂದಿಸಲೆಂದೆ ರೈತ ಸಂಜೀವಿನಿ ವಾಹನಗಳನ್ನು ನೀಡಲಾಗಿದ್ದು, ಇದರ ಸದ್ಬಳಕ್ಕೆ ಮಾಡಿಕೊಳ್ಳಬೇಕು. ಪ್ರತಿ ರೈತನ ಕರೆಗೆ ಸ್ಪಂದಿಸಬೇಕು. ಇದು ರೈತಪರ ಸರ್ಕಾರವಾಗಿದ್ದು, ರೈತ ಸ್ನೇಹಿಯಾಗಿ ಆಡಳಿತ ನೀಡಿ ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ವರ್ಷ ಬೆಳೆ ಸಮೀಕ್ಷೆಯನ್ನು ರೈತರಿಂದಲೆ ಮಾಡಿಸಲಾಗುತ್ತದೆ. ಇವರಿಗೆ ನೆರವು ನೀಡಲು 10 ತಿಂಗಳ ಸೇವೆಗೆ ರಾಜ್ಯಾದ್ಯಂತ 6000 ಕೃಷಿಯಲ್ಲಿ ಡಿಪ್ಲೋಮಾ ಪಡೆದ ಯುವಕರನ್ನು ನೇಮಿಸಿಕೊಳ್ಳಲಾಗುತ್ತಿದೆ. ಈ ಸಂಬಂಧ ಈಗಾಗಲೆ ಸಚಿವ ಸಂಪುಟಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಒಪ್ಪಿಗೆ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಷ್ಟ್ರೀಯ ಸುಸ್ಥಿರ ಕೃಷಿ ಅಭಿಯಾನದ ಯೋಜನೆಯಡಿ ಜಿಲ್ಲೆಯಲ್ಲಿ ಹಸು, ಕುರಿ ಖರೀದಿಗೆ ಪ್ರೋತ್ಸಾಹಧನ ನೀಡಬೇಕು. ರೈತರು ಖರೀದಿ ಮಾಡಿದ ನಂತರವೇ ಹಣ ಪಾವತಿಸಬೇಕು ಎಂದರು.

ನಕಲಿ ಬೀಜ, ಗೊಬ್ಬರ ಹಾವಳಿಗೆ ಕಡಿವಾಣ ಹಾಕಿ: ಮುಂದೆ ಏಪ್ರಿಲ್-ಮೇ ನಲ್ಲಿ ಬರುವ ಮುಂಗಾರು ಹಂಗಾಮಿಗೆ ಈಗಲೆ ಸಿದ್ಧತೆ ಮಾಡಿಕೊಳ್ಳಬೇಕು. ರೈತರಿಗೆ ಮಾರಕವಾಗಿರುವ ಮತ್ತು ಅವರ ಜೀವ ಹಿಂಡುವ ನಕಲಿ ಬೀಜ, ಗೊಬ್ಬರ, ಔಷಧಿ ಮಾರಾಟಕ್ಕೆ ಕಡಿವಾಣ ಹಾಕಬೇಕು. ರಾಜ್ಯದಲ್ಲಿ ನಕಲಿ ಕೀಟನಾಶಕ ಮಾರಾಟದ ಸರಾಸರಿ ನೋಡಿದಾಗ ಜಿಲ್ಲೆಯಲ್ಲಿ ಇದರ ಪ್ರಮಾಣ ಶೇ.45 ರಷ್ಟಿದ್ದು, ನಕಲಿ ಮಾರಾಟದ ಜಾಲಕ್ಕೆ ಇತಿಶ್ರೀ ಹಾಡಬೇಕು.

ಇದನ್ನೂ ಓದಿ | ಸಿದ್ದರಾಮಯ್ಯ ರಾಮನ ವಿರೋಧಿ ಅಂತಾರೆ, ನನ್ನ ಹೆಸರಿನಲ್ಲೇ ರಾಮನಿದ್ದಾನೆ : ಸಿದ್ದರಾಮಯ್ಯ 

ನಕಲಿ ಮಾರಾಟ ಪ್ರಕರಣಗಳಲ್ಲಿ ಮುಲಾಜಿಲ್ಲದೆ ಮಾರಾಟಗಾರರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದ ಸಚಿವರು ಕಳೆದ ವರ್ಷ 17 ಕೋಟಿ ರೂ. ಮೊತ್ತದ ನಕಲಿ ಬೀಜಗಳನ್ನು ಇಲಾಖೆಯ ಜಾಗೃತ ದಳ ಪತ್ತೆ ಹಚ್ಚಿದೆ ಎಂಬುದನ್ನು ಯಾರು ಮರೆಯದಿರಿ ಎಂದರು.

ಅಭಾವ ಸೃಷ್ಠಿಸುವ ವ್ಯಾಪರಸ್ಥರ ಮೇಲೆ ನಿಗಾ ಇಡಿ: ರೈತರಿಗೆ ಸಕಾಲದಲ್ಲಿ ಗೊಬ್ಬರ ಸಿಗದಂತೆ ಯೂರಿಯಾ ಅಭಾವ ಸೃಷ್ಠಿ ಮಾಡುವ ವ್ಯಾಪಾರಸ್ಥರ ಮೇಲೆ ನಿಗಾ ಇಡಿ. ಕಳೆದ ವರ್ಷ ಇಂತಹ 158 ವ್ಯಾಪಾರಸ್ಥರ ಲೈಸೆನ್ಸ್ ಸರ್ಕಾರ ರದ್ದುಗೊಳಿಸಿದೆ ಎಂದರು.

ಬೆಳೆ ವಿಮೆ ಕಚೇರಿ ಸ್ಥಾಪನೆಗೆ ತಾಕೀತು

ಬೆಳೆ ವಿಮೆ ವಿಚಾರವಾಗಿ ಪರಿಹಾರ ಕೋರಿ ರೈತರು ಕೃಷಿ ಇಲಾಖೆಗೆ ಅಲೆಯುವುದನ್ನು ತಪ್ಪಿಸಲು ಮತ್ತು ನೇರವಾಗಿ ವಿಮಾ ಕಚೇರಿಗೆ ಸಂಪರ್ಕಿಸಲೆಂದು ವಿಮಾ ಸಂಸ್ಥೆಗಳ ಕಚೇರಿಯನ್ನು ಪ್ರತಿ ತಾಲೂಕಿನಲ್ಲಿ ತೆರೆಯಬೇಕು ಎಂದು ಈಗಾಗಲೆ ಆಯಾ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದ್ದು, ಕೂಡಲೆ ಕಚೇರಿ ತೆರೆಯಬೇಕು ಎಂದು ಸಭೆಯಲ್ಲಿದ್ದ ವಿಮಾ ಸಂಸ್ಥೆಗಳ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಪ್ರತಿ ತಾಲೂಕಿನಲ್ಲಿ ವಿಮಾ ಕಚೇರಿ ಸ್ಥಾಪಿಸಿರುವ ಬಗ್ಗೆ ಜಂಟಿ ಕೃಷಿ ನಿರ್ದೇಶಕರು ಖಾತ್ರಿ ಪಡಿಸಿಕೊಳ್ಳಬೇಕು. ಮುಂದಿನ ಒಂದು ವಾರದಲ್ಲಿ ವಿಮಾ ಕಚೇರಿ ಸ್ಥಾಪನೆ ಮಾಡದಿದ್ದಲ್ಲಿ ಈ ಬಗ್ಗೆ ವರದಿ ಕೊಡಿ ಎಂದು ಜಂಟಿ ಕೃಷಿ ನಿರ್ದೇಶಕರಿಗೆ ಕೃಷಿ ಸಚಿವ ಬಿ.ಸಿ.ಪಟೀಲ ಖಡಕ್ ಸೂಚನೆ ನೀಡಿದರು.

ಜಂಟಿ ಕೃಷಿ ನಿರ್ದೇಶಕ ಡಾ. ರವಿಂದ್ರನಾಥ ಸುಗೂರು ಅವರು ಇಲಾಖೆಯಿಂದ ವಿವಿಧ ಯೋಜನೆಗಳಲ್ಲಿ ಸಾಧಿಸಲಾದ ಆರ್ಥಿಕ ಮತ್ತು ಭೌತಿಕ ಪ್ರಗತಿಯ ವಿವರವನ್ನು ಪಿ.ಪಿ.ಟಿ. ಮೂಲಕ ಸಭೆಗೆ ಅಂಕ-ಸಂಖ್ಯೆಯೊಂದಿಗೆ ವಿವರಿಸಿದರು.

ಸಭೆಯಲ್ಲಿ ವಿಧಾನ ಪರಿಷತ್ತಿನ ಸದಸ್ಯ ಬಿ.ಜಿ.ಪಾಟೀಲ, ಕರ್ನಾಟಕ ತೊಗರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಲಿಂಗಾರೆಡ್ಡಿ ಭಾಸರೆಡ್ಡಿ, ಕಾಡಾ ಅಧ್ಯಕ್ಷ ಶರಣಪ್ಪ ತಳವಾರ, ಜಿಲ್ಲಾ ಪಂಚಾಯತಿಯ ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಗುರುಶಾಂತ ಪಾಟೀಲ, ಕೃಷಿಕ ಸಮಾಜದ ಜಿಲ್ಲಾಧ್ಯಕ್ಷ ಸಿದ್ರಾಮಪ್ಪ ಧಂಗಾಪೂರ, ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ, ಜಿಲ್ಲಾ ಪಂಚಾಯತ್ ಸಿ.ಇ.ಓ ಡಾ.ದಿಲೀಶ್ ಸಾಸಿ, ಅಪರ ಕೃಷಿ ನಿರ್ದೇಶಕರಾದ ವೆಂಕಟರಾಮರೆಡ್ಡಿ, ಅಂಟೋನಿ ಎಂ.ಇ. ಸೇರಿದಂತೆ ಜಿಲ್ಲೆಯ ಕೃಷಿ ಅಧಿಕಾರಿಗಳು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ

Published

on

ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ 10:35 ಕ್ಕೆ ಅನಾರೋಗ್ಯದಿಂದ ನಿಧನರಾದರು.

ಮೃತರು ಪತ್ನಿ, ಸಹೋದರ, ಸಹೋದರಿಯರು ಸೇರಿದಂತೆ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಇವರ ಅಂತ್ಯ ಕ್ರಿಯೆಯನ್ನು ಹೊಳಲ್ಕೆರೆ ಸಮೀಪದ ನೆಹರು ಕಾಲೋನಿಯ ಜಮೀನಿನಲ್ಲಿ ಇಂದು (ಭಾನುವಾರ, ಜೂನ್ 07 ರಂದು ಮಧ್ಯಾಹ್ನ  2 ಗಂಟೆಗೆ) ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಸಂಪರ್ಕ ಮೊಬೈಲ್ ಸಂಖ್ಯೆ : 9740114246

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಆಶ್ರಯ ಯೋಜನೆ – ಆವಧಿ ವಿಸ್ತರಣೆ

Published

on

ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್‌ 30 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.

ದಾವಣಗೆರೆ ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿನ ಅರ್ಹ ನಿವೇಶನ ಹಾಗೂ ವಸತಿ ರಹಿತ ಅಂಗವಿಕಲರು, ಹಿರಿಯ ನಾಗರಿಕರು, ಒಂಟಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ತೃತೀಯ ಲಿಂಗಿಗಳು, ಸ್ವಚ್ಛತಾ ಕಾರ್ಮಿಕರು, PM SVanidhi (ಪಿ ಎಂ -ಸ್ವ ನಿಧಿ )ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ವಲಸೆ ಬಂದ ಕುಟುಂಬದವರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಅರ್ಜಿಗಳನ್ನು http://pmayurban.gov.in ಆನ್ಲೈನ್ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದು ಅಥವಾ ಖುದ್ದಾಗಿ ಮಹಾನಗರ ಪಾಲಿಕೆಯ ಆಶ್ರಯ ಶಾಖೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು ಎಂದು ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್‌ ಅವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗರಿಕೆ ಹುಲ್ಲಿನ ಜ್ಯೂಸ್‌ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ

Published

on

ಗಿರೀಶ್ ಮುತ್ತು

ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು ಸಹಾಯ ಮಾಡುತ್ತದೆ. ಇದು ಜ್ವರದಂತಹ ಸಮಸ್ಯೆಗಳ ನಿವಾರಣೆಗೆ ಸಹಾಯ ಮಾಡುತ್ತದೆ. ಹಾಗಾಗೊ ವಾರಕೊಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಗರಿಕೆ ಹುಲ್ಲಿನ ರಸ ಅಥವಾ ಕಷಾಯದ ಸೇವನೆ ಮಾಡಬೇಕು

ನಾವು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಲವಾರು ರೀತಿಯ ವ್ಯಾಯಾಮ ಮತ್ತು ಡಯಟ್ ಮಾಡುತ್ತೇವೆ. ಈ ಮಳೆಗಾಲದಲ್ಲಿ ಅನೇಕ ಜನರು ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಹಲವು ಬಗೆಯ ಜ್ಯೂಸ್ ಕುಡಿಯುತ್ತಾರೆ. ಹಣ್ಣು, ತರಕಾರಿ ರಸ ಕುಡಿದು ಆರೋಗ್ಯವಾಗಿರಲು ಪ್ರಯತ್ನಿಸುತ್ತಾರೆ. ಆದರೆ ಈ ಒಂದು ಜ್ಯೂಸ್ ಅನ್ನು ನೀವು ಕುಡಿದರೆ ನಿಮ್ಮತ್ತ ಕಾಯಿಲೆಗಳು ಸುಳಿಯುವುದೇ ಇಲ್ಲ. ಅದುವೇ ಗರಿಕೆ ಹುಲ್ಲುನ ಜ್ಯೂಸ್.

ಹೌದು… ಆಯುರ್ವೇದ ವೈದ್ಯರು ಈ ಮೂಲಿಕೆಯು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ ಎನ್ನುತ್ತಾರೆ. ಇದನ್ನು ಸೇವಿಸುವುದರಿಂದ ದೇಹದಲ್ಲಿನ ಕ್ಯಾನ್ಸರ್ ಪ್ರಮಾಣವನ್ನು ಕಡಿಮೆ ಮಾಡಬಹುದು. ಅಲ್ಲದೆ ಈ ಹುಲ್ಲಿನ ರಸವನ್ನು ಕುಡಿಯುವುದರಿಂದ ರಕ್ತದಲ್ಲಿರುವ ಕ್ಯಾನ್ಸರ್ ಕೋಶಗಳು ಕಡಿಮೆಯಾಗುವುದು ಮಾತ್ರವಲ್ಲದೆ ರಕ್ತ ಶುದ್ಧವಾಗಿರುತ್ತದೆ.

ಈ ಗರಿಕೆ ಹುಲ್ಲಿನಲ್ಲಿ ವಿಟಮಿನ್ ಎ, ಕೆ, ಸಿ ಮತ್ತು ವಿಟಮಿನ್ ಇ ಗಳು ಸಮೃದ್ಧವಾಗಿದೆ. ಇದು ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ರಕ್ತದೊತ್ತಡ, ರಕ್ತಹೀನತೆ ಮತ್ತು ರಕ್ತ ಸಂಬಂಧಿತ ಕಾಯಿಲೆಗಳನ್ನು ಗುಣಪಡಿಸುತ್ತದೆ. ಹಾಗಾದರೆ ಗರಿಕೆ ಹುಲ್ಲಿನ ಜ್ಯೂಸ್‌ನ ಇತರ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯೋಣ.

ಗರಿಕೆ ರಸದ ಪ್ರಯೋಜನಗಳು

1. ಈ ಗರಿಕೆ ಹುಲ್ಲಿನ ಜ್ಯೂಸ್ ಎಲ್ಲಿಯೂ ಸಿಗುವುದಿಲ್ಲ. ಕೆಲವೆಡೆ ಮಾತ್ರ ಸಿಗುತ್ತದೆ. ಬೇರು ಮತ್ತು ಎಲೆಗಳು ಸೇರಿದಂತೆ ಗರಿಕೆ ಎಲ್ಲಾ ಭಾಗಗಳು ಔಷಧೀಯ ಗುಣಗಳನ್ನು ಹೊಂದಿದೆ. ಇದು ಕೆಲವು ಹಾನಿಕಾರಕ ವ್ಯಾಕ್ಸಿನಿಯಾ ವೈರಸ್ ಎಂಬ ಸೂಕ್ಷ್ಮಜೀವಿಯನ್ನು ನಾಶಪಡಿಸುವ ಗುಣವನ್ನು ಹೊಂದಿದೆ. ಹೀಗಾಗಿ ಈ ಜ್ಯೂಸ್ ಕುಡಿಯುವವರೂ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುತ್ತಾರೆ.

2. ಮೂತ್ರಕೋಶದ ಕಲ್ಲುಗಳು, ದೇಹದ ಊತ, ಮಕ್ಕಳಲ್ಲಿ ದೀರ್ಘಕಾಲದ ನೆಗಡಿ, ಮೂಗು ಸೋರುವಿಕೆ, ನೆಗಡಿ, ಅತಿಸಾರ, ಕಣ್ಣಿನ ದೋಷಗಳು, ಮೆದುಳಿನ ರಕ್ತಸ್ರಾವದಂತಹ ಕಾಯಿಲೆಗಳಿಗೆ ಈ ರಸ ತುಂಬಾ ಒಳ್ಳೆಯದು.
3. ಅಲ್ಲದೆ ತೂಕ ನಷ್ಟ, ಕೊಲೆಸ್ಟ್ರಾಲ್ ಕಡಿತ, ನರರೋಗ, ರಕ್ತದ ಕ್ಯಾನ್ಸರ್ ಚಿಕಿತ್ಸೆ, ಕೆಮ್ಮು, ಹೊಟ್ಟೆ ನೋವು, ರಕ್ತಹೀನತೆ, ಸಂಧಿವಾತ, ಹೃದಯ ಅಸ್ವಸ್ಥತೆ, ಚರ್ಮ ರೋಗಗಳು ಇತ್ಯಾದಿಗಳಿಗೆ ಅತ್ಯುತ್ತಮ ಔಷಧವಾಗಿ ಕಾರ್ಯನಿರ್ವಹಿಸುತ್ತದೆ

4. ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಮತ್ತು ರಕ್ತದಿಂದ ವಿಷವನ್ನು ತೆಗೆದುಹಾಕುವಲ್ಲಿ ಗರಿಕೆ ರಸವು ಪರಿಣಾಮಕಾರಿಯಾಗಿದೆ.

5. ಗರಿಕೆ ಹುಲ್ಲಿನ ರಸ ಮತ್ತು ಕೊಬ್ಬರಿ ಎಣ್ಣೆಯನ್ನು ಸಮಪ್ರಮಾಣದಲ್ಲಿ ಬೆರೆಸಿ ಕುದಿಸಬೇಕು.. ನಂತರ ಚರ್ಮರೋಗಗಳಾದ ರಿಂಗ್‌ವರ್ಮ್ ಮತ್ತು ಒಣ ಚರ್ಮವನ್ನು ತ್ವರಿತವಾಗಿ ಗುಣ ಪಡಿಸುತ್ತದೆ.

6. ಗರಿಕೆ ಹುಲ್ಲು ಬೇಕಾದಷ್ಟು ಸಂಗ್ರಹಿಸಿ, ಸ್ವಲ್ಪ ಅರಿಶಿನವನ್ನು ಸೇರಿಸಿ ಪೇಸ್ಟ್ ಮಾಡಿ ದೇಹಕ್ಕೆ ಉಜ್ಜಿಕೊಂಡರೆ, ಒಂದು ಗಂಟೆ ಬಿಟ್ಟು ನಂತರ ಸ್ನಾನ ಮಾಡಿ. ಇದರಿಂದ ದೇಹದ ತುರಿಕೆ ನಿವಾರಣೆಯಾಗುತ್ತದೆ.

ಗರಿಕೆ ಹುಲ್ಲಿನ ರಸ ತಯಾರಿಸುವುದು ಹೇಗೆ?

*ತಾಜಾ ಗರಿಕೆ ಹುಲ್ಲು ಒಂದು ಹಿಡಿಯಷ್ಟು ತೆಗೆದುಕೊಂಡು ಸ್ವಚ್ಚವಾಗಿ ತೊಳೆದುಕೊಳ್ಳಿ.

* ಬಳಿಕ ಇದನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಕತ್ತರಿಸಿಕೊಳ್ಳಿ.

* ಬಳಿಕ ಇದನ್ನು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಬೇಕು.

* ಚೆನ್ನಾಗಿ ಪೇಸ್ಟ್ ಆದ ಬಳಿಕ ಇದನ್ನು ಸೋಸಿಕೊಳ್ಳಬೇಕು.

* ಬಳಿಕ ಇದನ್ನು ಕುಡಿಯಬೇಕು. ಆದರೆ ಇದು ತಕ್ಷಣದ ಮನೆಮದ್ದಾಗಿದೆ. ಆದರೆ ಯಾವುದೇ ಆರೋಗ್ಯ ಸಮಸ್ಯೆಗಳಿಗೆ ಇದು ಕೊನೆಯ ಮದ್ದು ಅಲ್ಲ. ಹೀಗಾಗಿ ಯಾವುದೇ ಆರೋಗ್ಯ ಸಮಸ್ಯೆಗಳು ಉಂಟಾದಾಗ ಮೊದಲು ವೈದ್ಯರನ್ನು ಸಂಪರ್ಕಿಸುವುದು ತುಂಬಾ ಅವಶ್ಯಕ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending