ದಿನದ ಸುದ್ದಿ
ನೆರೆಯ ರಾಜ್ಯಗಳಲ್ಲಿ ಕೋವಿಡ್ ಹೆಚ್ಚಳ ಹಿನ್ನೆಲೆ : ಕಳೆದ 15 ದಿನದಲ್ಲಿ ಮಹಾರಾಷ್ಟ್ರ ಮತ್ತು ಕೇರಳದಿಂದ ಮರಳಿದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ
ಸುದ್ದಿದಿನ,ಕಲಬುರಗಿ :ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಈ ರಾಜ್ಯಗಳಿಂದ ಕಳೆದ 15 ದಿನದಲ್ಲಿ ಕಲಬುರಗಿ ಜಿಲ್ಲೆಗೆ ಮರಳಿದವರು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ತೆರಳಿ ಕೋವಿಡ್-19 ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜಶೇಖರ ಮಾಲಿ ಅವರು ಮನವಿ ಮಾಡಿದ್ದಾರೆ.
ಇನ್ನು ಜಿಲ್ಲೆಯಿಂದ ಇತರೆ ರಾಜ್ಯ ಮತ್ತು ದೇವಸ್ಥಾನಗಳಿಗೆ ಪ್ರಯಾಣ ಬೆಳೆಸುವರು ಸಹ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ಪ್ರಯಾಣಿಸುವುದು ಒಳ್ಳೆಯದು ಎಂದಿದ್ದಾರೆ.
ಕೋವಿಡ್-19 ಸೋಂಕಿನ ಲಕ್ಷಣಗಳಾದ ನೆಗಡಿ, ಕೆಮ್ಮು, ಜ್ವರ, ತಲೆನೋವು, ಗಂಟಲು ಬೇನೆ, ಉಸಿರಾಟದ ಸಮಸ್ಯೆ, ತೀವ್ರ ಮೈಕೈನೋವು ಕಂಡು ಬಂದರೆ ಕೂಡಲೆ ಸಮೀಪದ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್-19 ಟೆಸ್ಟ್ ಮಾಡಿಸಿಕೊಳ್ಳಬೇಕು ಎಂದು ಡಾ. ರಾಜಶೇಖರ್ ಮಾಲಿ ಅವರು ಸಾರ್ವಜನಿಕರಲ್ಲಿ ಕೋರಿದ್ದಾರೆ.
ಕೋವಿಡ್-19 ಸೋಂಕು ತಡೆಗಟ್ಟಲು ಮುಂಜಾಗ್ರತಾ ಕ್ರಮಗಳಾದ 2 ಮೀಟರ್ ಶಾರೀರಿಕ ಅಂತರ, ಮುಖಕ್ಕೆ ಮಾಸ್ಕ್ ಧರಿಸುವುದು, ಆಗಾಗ ಕೈಗಳನ್ನು ತೊಳೆದುಕೊಳ್ಳುವುದು ಅಥವಾ ಆಲ್ಕೊಹಾಲ್ ಆಧಾರಿತ ಹ್ಯಾಂಡ್ ಸಾನಿಟೈಜರ್‍ನಿಂದ ಕೈಗಳನ್ನು ಸ್ವಚ್ಚಗೊಳಿಸಬೇಕು.
ಕೆಮ್ಮುವಾಗ, ಸೀನುವಾಗ ಮೂಗು ಮತ್ತು ಬಾಯಿಯನ್ನು ಕರವಸ್ತ್ರಗಳಿಂದ ಮುಚ್ಚಿಕೊಳ್ಳುವುದು. ತರಕಾರಿ, ಹಣ್ಣುಗಳನ್ನು ಮುಂಚಿತವಾಗಿ ತೊಳೆದು ಸೇವಿಸಬೇಕು ಎಂದ ಅವರು ಸಭೆ-ಸಮಾರಂಭಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸದಂತೆ ಎಚ್ಚರ ವಹಿಸಬೇಕೆಂದು ಅವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್‌ಲೈನ್ ರಸ್ತೆಯಲ್ಲಿ ನಡೆದಿದೆ.
23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.
ಆದರೆ ರಾಜೀವ್‌ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್‌ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್‌ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್ ಸಂಜೀವ್ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.
ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.
ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್, ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಜೊತೆಗೆ ಒಂದು ಮೊಬೈಲ್ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು
ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ.
ಮೃತರನ್ನು ದೇವದುರ್ಗ ತಾಲೂಕಿನ ಸಮುದ್ರ ಗ್ರಾಮದ ರವಿಚಂದ್ರ (35), ಕ್ಯಾದಿಗೆರಾ ಗ್ರಾಮದ ನಾಗರಾಜ್ (30) ಹಾಗೂ ಕೊತ್ತಿಗುಡ್ಡದ ಅರ್ಜುನ್ (21) ಎಂದು ಗುರುತಿಸಲಾಗಿದೆ.
ಕಟ್ಟಡದ ಅವಶೇಷಗಳಡಿ ಸಿಲುಕಿ ರವಿಚಂದ್ರ ಹಾಗೂ ನಾಗರಾಜ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅರ್ಜುನ್ ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿಯ ಪ್ರಕಾರ, ಯುವಕರು ತಾವೇ ನಿರ್ಮಿಸಿದ್ದ ‘ಅಂತ್ಯವಾಯ್ತು’ ಎಂಬ ಕಿರುಚಿತ್ರದ ಪೋಸ್ಟರ್ ಅಂಟಿಸಲು ಕಟ್ಟಡದ ಬಳಿ ತೆರಳಿದ್ದ ವೇಳೆ ಈ ದುರಂತ ಸಂಭವಿಸಿದೆ.
ಕಟ್ಟಡದ ಮೇಲ್ಛಾವಣಿಯ ಒಂದು ಭಾಗವು, ಅದಕ್ಕೆ ಜೋಡಣೆಯಾಗಿದ್ದ ಕಬ್ಬಿಣದ ಮೆಟ್ಟಿಲುಗಳ ಸಹಿತ ಕುಸಿದು ಬಿದ್ದಿದೆ. ಘಟನೆಯಲ್ಲಿ ಉಮೇಶ್, ಪ್ರಭು ಹಾಗೂ ಅಭಿಷೇಕ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಘಟನಾ ಸ್ಥಳಕ್ಕೆ ದೇವದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯ ನಂತರ ನಿಖರ ಕಾರಣ ತಿಳಿಯಲಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ದೇವದುರ್ಗ ಶಾಸಕಿ ಕರೆಮ್ಮ ನಾಯಕ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ20 hours agoನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
-
ದಿನದ ಸುದ್ದಿ1 day agoಪಲ್ಸ್ ಪೋಲಿಯೋದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮವಹಿಸಿ: ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್
-
ದಿನದ ಸುದ್ದಿ16 hours agoಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
-
ದಿನದ ಸುದ್ದಿ1 day agoದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು

