ದಿನದ ಸುದ್ದಿ
ರಾಜ್ಯ ಬಜೆಟ್ ನ ಪಾವಿತ್ರ್ಯವನ್ನೇ ಹಾಳು ಮಾಡಿದ ಬಿ.ಎಸ್.ಯಡಿಯೂರಪ್ಪ : ಸಿದ್ದರಾಮಯ್ಯ ಕಿಡಿ
ಸುದ್ದಿದಿನ, ಬೆಂಗಳೂರು: ‘ಆಪರೇಷನ್ ಕಮಲ’ ಎಂಬ ಅನೈತಿಕ ರಾಜಕೀಯದ ಮೂಲಕ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರ ರಾಜ್ಯವನ್ನು ದಶಕಗಳ ಹಿಂದಕ್ಕೆ ಒಯ್ಯುವ “ಆಪರೇಷನ್ ಬರ್ಬಾದ್” ಕಾರ್ಯಕ್ರಮವನ್ನು ಯಶಸ್ವಿಯಾಗಿ ಮಾಡುತ್ತಿದೆ. ಇದಕ್ಕೆ ಕಳೆದ ಮತ್ತು ಈ ವರ್ಷದ ಎರಡು ಬಜೆಟ್‍ಗಳೇ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಇಂದು ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಡಿಸಿದ ಬಜೆಟ್ -2021 ರ ಬಗ್ಗೆ ಪ್ರತಿಜ್ರಿಯಿಸಿದ ಅವರು,
ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾಯಿತ ಸರ್ಕಾರ ಪಾರದರ್ಶಕವಾಗಿ ಕೆಲಸ ಮಾಡಬೇಕೆನ್ನುವುದು ಸಂವಿಧಾನಬದ್ಧ ಬದ್ಧತೆ. ಆದರೆ, ಇದೊಂದು ಮುಚ್ಚುಮರೆಯ ಸರ್ಕಾರ. ಈ ಬಜೆಟ್‍ನಲ್ಲಿ ಸರ್ಕಾರ ಬಿಚ್ಚಿಟ್ಟಿದ್ದಕ್ಕಿಂತ ಮುಚ್ಚಿಟ್ಟಿದ್ದೇ ಹೆಎಂದರು.ಎಂದು ಕಿಡಿಕಾರಿದರು.
ಆಯವ್ಯಯವನ್ನು ಇಲಾಖಾವಾರು ನೀಡದೆ ಆರು ವಲಯಗಳಾಗಿ ವಿಂಗಡಿಸಿ ಯಾವ ಇಲಾಖೆಗೆ ಎಷ್ಟು ಅನುದಾನ ನೀಡಲಾಗಿದೆ. ಇಲಾಖೆಗಳ ಕಾರ್ಯಕ್ರಮಗಳೇನು, ಕಳೆದ ವರ್ಷದ ಸಾಧನೆಗಳೇನು, ಹೊಸ ಯೋಜನೆಗಳೇನು ಎಂಬ ವಿವರಗಳೇ ಇಲ್ಲ.
ಬಿ.ಎಸ್.ಯಡಿಯೂರಪ್ಪನವರು ರಾಜ್ಯದ ಬಜೆಟ್‍ಗೆ ಇದ್ದ ಮಹತ್ವ ಮತ್ತು ಪಾವಿತ್ರ್ಯವನ್ನೇ ಹಾಳು ಮಾಡಿದ್ದಾರೆ. ರಾಜ್ಯದಲ್ಲಿರುವ 33 ಇಲಾಖೆಗಳನ್ನು ಆರು ವಲಯಗಳನ್ನಾಗಿ ಮಾಡಿ ಗೊಂದಲ ಸೃಷ್ಟಿಸಲಾಗಿದೆ. ಈ ಆರೂ ವಲಯಗಳಿಗೆ ಕಳೆದ ಬಜೆಟ್‍ನಲ್ಲಿ ನಿಗದಿಪಡಿಸಲಾಗಿದ್ದ ಅನುದಾನಕ್ಕಿಂತ ಕಡಿಮೆ ಹಣ ನಿಗದಿಪಡಿಸಲಾಗಿದೆ.
ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ ರೂ 1231 ಕೋಟಿ , ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ ವಲಯಕ್ಕೆ ರೂ 9943 ಕೋಟಿ, ಆರ್ಥಿಕ ಅಭಿವೃದ್ಧಿ ಪ್ರಚೋದನೆ ವಲಯಕ್ಕೆ ರೂ 3203 ಕೋಟಿ, ಬೆಂಗಳೂರು ಸಮಗ್ರ ಅಭಿವೃದ್ಧಿಗೆ ರೂ 997 ಕೋಟಿ, ಸಂಸ್ಕೃತಿ – ಪರಂಪರೆ ಹಾಗೂ ನೈಸರ್ಗಿಕ ಸಂಪನ್ಮೂಲ ವಲಯಕ್ಕೆ 1907 ಕೋಟಿ ಕಡಿಮೆ ಅನುದಾನವನ್ನು ನಿಗದಿಪಡಿಸಲಾಗಿದೆ ಎಂದರು.
ಆಡಳಿತ ಸುಧಾರಣಾ ವಲಯಕ್ಕೆ ಮಾತ್ರ ರೂ.42,325 ಕೋಟಿಯಷ್ಟು ಅನುದಾವನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಈ ಹೆಚ್ಚುವರಿ ಅನುದಾನಕ್ಕೆ ಯಾವ ಹೊಸ ಯೋಜನೆಗಳನ್ನೂ ಪ್ರಕಟಮಾಡಿಲ್ಲ.
ಸಂಕಷ್ಟಗಳ ಸರಮಾಲೆಗೆ ಸಿಲುಕಿರುವ ರೈತರು ದೇಶಾದ್ಯಂತ ಬೀದಿಗಿಳಿದಿದ್ದಾರೆ. ಕೃಷಿ ವಿರೋಧಿ ಕಾಯ್ದೆಗಳ ಮೂಲಕ ರೈತರನ್ನು ದಿವಾಳಿ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ಜೊತೆ ಸೇರಿರುವ ರಾಜ್ಯ ಸರ್ಕಾರ ತನ್ನ ಬಜೆಟ್‍ನಲ್ಲೂ ಕೃಷಿ ಕ್ಷೇತ್ರವನ್ನು ನಿರ್ಲಕ್ಷಿಸಿದೆ ಎಂದು ಆರೋಪಿಸಿದರು.
ಕಳೆದ ವಿಧಾನಸಭಾ ಚುನಾವಣೆಯ ಪೂರ್ವದಲ್ಲೂ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ‘ಒಂದು ಲಕ್ಷದವರೆಗಿನ ರಾಷ್ಟ್ರೀಕೃತ ಬ್ಯಾಂಕ್ ಮತ್ತು ಸಹಕಾರ ಬ್ಯಾಂಕ್‍ಗಳಲ್ಲಿನ ಕೃಷಿ ಸಾಲವನ್ನು ಮನ್ನಾ ಮಾಡುತ್ತೇವೆ’ ಎಂದು ಭರವಸೆ ನೀಡಿತ್ತು. ಈ ಸರಕಾರ ಅಧಿಕಾರಕ್ಕೆ ಬಂದ ನಂತರ ಮಂಡಿಸಿದ ಎರಡೂ ಬಜೆಟ್‍ಗಳಲ್ಲೂ ರೈತರ ಸಾಲ ಮನ್ನಾದ ಪ್ರಸ್ತಾಪವೇ ಇಲ್ಲ.
ಕೃಷಿ, ತೋಟಗಾರಿಕೆ, ಜಲಸಂಪನ್ಮೂಲ, ಸಹಕಾರ, ಮೀನುಗಾರಿಕೆ, ರೇಷ್ಮೆ ಮೊದಲಾದ ಕೃಷಿ ಸಂಬಂಧಿತ ಇಲಾಖೆಗಳಿಗೆ ಕಳೆದ ಬಜೆಟ್‍ನಲ್ಲಿ ರೂ. 32,259 ಕೋಟಿ ಅನುದಾನ ನೀಡಿದ್ದರೆ ಪ್ರಸಕ್ತ ಬಜೆಟ್‍ನಲ್ಲಿ ರೂ 31,028 ಕೋಟಿ ಅನುದಾನ ಒದಗಿಸಲಾಗಿದೆ. ಅಂದರೆ, ರೂ 1,231 ಕೋಟಿ ಅನುದಾನ ಕಡಿಮೆ ಮಾಡಲಾಗಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ತನ್ನ ಎರಡನೇ ಬಜೆಟ್‍ನಲ್ಲಿ ಕೂಡ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಜಾತಿ ಹಾಗೂ ಅಲ್ಪಸಂಖ್ಯಾತ ವರ್ಗಗಳನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ ಎಂದು ಹೇಳಿದರು.
2020-21 ನೇ ಸಾಲಿನಲ್ಲಿ ಎಸ್‍ಸಿಎಸ್‍ಪಿ/ಟಿಎಸ್‍ಪಿ ಯೋಜನೆಗೆ 26,930 ಕೋಟಿ ಅನುದಾನ ಒದಗಿಸಲಾಗಿತ್ತು. ಈ ಬಾರಿ ಬಜೆಟ್ ಗಾತ್ರ ಹೆಚ್ಚಳಕ್ಕೆ ಅನುಗುಣವಾಗಿ ಈ ಯೋಜನೆಗೆ ಅನುದಾನವನ್ನು ಹೆಚ್ಚಿಸಬೇಕಿತ್ತು. ಆದರೆ ಈ ವರ್ಷದ ಬಜೆಟ್‍ನಲ್ಲಿ ನೀಡಲಾಗಿರುವ ಅನುದಾನ ರೂ 26,005 ಕೋಟಿ ಮಾತ್ರ.
ವೀರಶೈವ ಲಿಂಗಾಯತ ಮತ್ತು ಒಕ್ಕಲಿಗ ಸಮಾಜದ ಅಭಿವೃದ್ಧಿಗಾಗಿ ನಿಗಮವನ್ನು ಸ್ಥಾಪಿಸಿ ತಲಾ ರೂ.500 ಕೋಟಿ ಅನುದಾನ ನಿಗದಿಪಡಿಸಿರುವುದನ್ನು ನಾನು ಸ್ವಾಗತಿಸುತ್ತೇನೆ. ಅಂಬೇಡ್ಕರ್, ವಾಲ್ಮೀಕಿ, ಆದಿಜಾಂಬವ, ಬೋವಿ, ವಿಶ್ವಕರ್ಮ, ಕಾಡುಗೊಲ್ಲರ, ಅಂಬಿಗರ ಚೌಡಯ್ಯ, ಸವಿತಾ ಸಮಾಜ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳಿಗೆ ಒಟ್ಟು ಕೇವಲ 500 ಕೋಟಿ ಅನುದಾನ ನೀಡುವ ಮೂಲಕ ತಳಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ.
ಮುಖ್ಯಮಂತ್ರಿಗಳು ಆರ್ಥಿಕತೆ ಸಕಾರಾತ್ಮಕ ಹಾದಿಯಲ್ಲಿ ಇದೆ ಎಂದು ಬಜೆಟ್‍ನಲ್ಲಿ ಹೇಳಿದ್ದಾರೆ. ಆದರೆ ಶೇ.14 ರಷ್ಟು ಪ್ರಗತಿಯಲ್ಲಿದ್ದ ರಾಜ್ಯದ ಆರ್ಥಿಕತೆ ಈ ಬಾರಿಯ ಬಜೆಟ್‌ನಲ್ಲಿರುವ ಅಂಕಿಅಂಶಗಳನ್ನು ನೋಡಿದರೆ ಗಾಬರಿ ಹುಟ್ಟಿಸುವಂತೆ ಇವೆ.
ರಾಜ್ಯ ಆದಾಯ ಎಂದು ಹೇಳುತ್ತಿರುವುದು ಬರಿ ಸಾಲವನ್ನು. ತೆರಿಗೆ ಸಂಗ್ರಹವು ಮುಖ್ಯಮಂತ್ರಿಗಳ ಭಾಷಣದ ಪ್ರಕಾರ ಕರ್ನಾಟಕದಲ್ಲಿ ತುಸು ಸಮಾಧಾನಕರವಾಗಿದ್ದರೂ ಕೇಂದ್ರ ಸರ್ಕಾರ ರಾಜ್ಯಕ್ಕೆ ನ್ಯಾಯಯುತವಾಗಿ ನೀಡಬೇಕಾದ ಪ್ರಮಾಣದಲ್ಲಿ ನೀಡದೆ ಹೋದ ಕಾರಣಕ್ಕೆ ರಾಜ್ಯವು ಭೀಕರ ಹಣಕಾಸಿನ ಸಮಸ್ಯೆಯನ್ನು ಎದುರಿಸುತ್ತಿದೆ.
ರಾಜ್ಯದ ಇತ್ತೀಚಿನ ವರ್ಷಗಳಲ್ಲಿಯೆ ಪ್ರಥಮ ಬಾರಿ ರೂ.19,485.84 ಕೋಟಿ ರಾಜಸ್ವ ಕೊರತೆ 2020-21 ರಲ್ಲಿ ಎದುರಾಗಿದೆ. 2021-22 ಕ್ಕೆ ರೂ.15,133 ಕೋಟಿ ರಾಜಸ್ವದ ಕೊರತೆ ಆಗುವುದೆಂದು ಬಜೆಟ್‍ನಲ್ಲಿ ತಿಳಿಸಿದ್ದಾರೆ. 2020-21 ರಲ್ಲಿ ಬಜೆಟ್ ಮಂಡಿಸಿದಾಗ ರೂ.143 ಕೋಟಿ ರಾಜಸ್ವ ಉಳಿಕೆ ಇರುತ್ತದೆ ಎಂದು ಅಂದಾಜಿಸಲಾಗಿತ್ತು ನಂತರದ ಪರಿಷ್ಕೃತ ಬಜೆಟ್‌ನಲ್ಲಿ ರಾಜಸ್ವ ಕೊರತೆ ಎದುರಾಯಿತು. 5 ವರ್ಷದ ನಮ್ಮ ಸರ್ಕಾರದಲ್ಲಿ ರಾಜಸ್ವದ ಕೊರತೆ ಎಂದೂ ಆಗಿಲ್ಲ.
ಬಜೆಟ್‍ನ ಅಂದಾಜಿನ ಪ್ರಕಾರ ವಿತ್ತೀಯ ಕೊರತೆ ಜಿ.ಎಸ್.ಡಿ.ಪಿ.ಯ ಶೇ.3.48 ರಷ್ಟು ಇರುತ್ತದೆ. ಇದರ ಪ್ರಕಾರ 2021-22 ರಲ್ಲಿ ವಿತ್ತೀಯ ಕೊರತೆ ರೂ.59,240 ಕೋಟಿ ಇರುತ್ತದೆ. ಈ ವರ್ಷ ರೂ.71,332 ಕೋಟಿಗಳಷ್ಟು ರಾಜ್ಯ ಸರ್ಕಾರ ಸಾಲ ಪಡೆಯುವುದಾಗಿ ಘೋಷಿಸಿದೆ. ಇದರಿಂದ ಸರ್ಕಾರದ ಮೇಲೆ ಬಹಳಷ್ಟು ಹೊರೆಯಾಗುತ್ತದೆ.
ಎಫ್.ಆರ್.ಬಿ.ಎಂ. ಕಾಯ್ದೆ ಪ್ರಕಾರ ವಿತ್ತೀಯ ಕೊರತೆಯು ಜಿ.ಡಿ.ಪಿ.ಯ ಶೇ.3 ಕ್ಕಿಂತ ಕಡಿಮೆ ಇರಬೇಕೆಂದು ನಿಯಮವಿದೆ. ಆದರೆ ಸರ್ಕಾರವು ಕೊರೋನಾ ಸಂದರ್ಭದಲ್ಲಿ ಸರಿಯಾದ ಆಡಳಿತವನ್ನು ನಡೆಸದೇ ಸರ್ಕಾರದ ವೈಫಲ್ಯವನ್ನು ಮುಚ್ಚಿ ಹಾಕಲು ಜಿ.ಎಸ್.ಡಿ.ಪಿ.ಯ ಶೇ.4 ರಷ್ಟು ಹೆಚ್ಚಿಗೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಿಕೊಳ್ಳಲಾಗಿದೆ. ಇದು ಒಳ್ಳೆಯ ಆರ್ಥಿಕ ನೀತಿಯ ಲಕ್ಷಣವಲ್ಲ.
5 ವರ್ಷದ ನಮ್ಮ ಸರ್ಕಾರದಲ್ಲಿ ವಿತ್ತೀಯ ಕೊರತೆಯು ಜಿ.ಎಸ್.ಡಿ.ಪಿಯ. ಶೇ.2.5 ರ ಆಸುಪಾಸಿನಲ್ಲೇ ಇತ್ತು.
2020-21 ರಲ್ಲಿ ಬಿಡುಗಡೆ ಮಾಡಿದ ಮಧ್ಯಮಾವಧಿ ವಿತ್ತೀಯ ಯೋಜನೆ – 2020-2024 ರ ಪ್ರಕಾರ ಹೆಚ್ಚುವರಿ ರಾಜಸ್ವ ನಿರೀಕ್ಷೆಯಲ್ಲಿದ್ದ ರಾಜ್ಯ 2020-21 ರಲ್ಲೇ ದೊಡ್ಡ ಮಟ್ಟದ ರಾಜಸ್ವ ಕೊರತೆಯನ್ನು ಎದುರಿಸುತ್ತಿದೆ.
2022-23 ರಿಂದ ಜಿ.ಎಸ್.ಟಿ. ಪರಿಹಾರ ಸ್ಥಗಿತಗೊಳ್ಳುವುದರಿಂದ ಇದರ ಜೊತೆಗೆ ರೂ.30,743 ಕೋಟಿ ರಾಜಸ್ವ ಕೊರತೆಯಾಗಲಿದೆ ಎಂದು ಅಂದಾಜು ಮಾಡಲಾಗಿದೆ. 2023-24 ರಲ್ಲಿ ಈ ರಾಜಸ್ವ ಕೊರತೆಯು ರೂ.46,831 ಕೋಟಿಯಾಗಲಿದೆ.
2020-21 ರಲ್ಲಿ ರೂ.70,411 ಕೋಟಿ ಸಾಲ ಮಾಡಿದೆ. 2019-20 ರವರೆಗೆ ರೂ.3,27,209 ಕೋಟಿ ಸಾಲ ರಾಜ್ಯದ ಮೇಲಿತ್ತು. ನಮ್ಮ ಸರ್ಕಾರದ ಅಂತಿಮ ವರ್ಷದಲ್ಲಿ (2017-18)ರಲ್ಲಿ ರೂ.2,42,420 ಕೋಟಿ ಸಾಲ ಮಾಡಲಾಗಿತ್ತು. ಜಿ.ಎಸ್.ಡಿ.ಪಿಯ ಮೇಲೆ ಸಾಲದ ಪ್ರಮಾಣ ಶೇ.18.93 ಇತ್ತು.
2020-21 ರ ಫೆಬ್ರವರಿ ಅಂತ್ಯಕ್ಕೆ ರಾಜ್ಯದ ಸಾಲ ರೂ.3,97,881 ಕೋಟಿ ಇದೆ. ಮುಂದಿನ ವರ್ಷಕ್ಕೆ ರೂ.4,57,889 ಕೋಟಿಗಳಷ್ಟು ಸಾಲ ರಾಜ್ಯದ ಜನರ ಮೇಲೆ ಇರುತ್ತದೆ ಎಂದು ಅಂದಾಜಿಸಲಾಗಿದೆ. ಇದು ಜಿ.ಎಸ್.ಡಿ.ಪಿ.ಯ ಶೇ.26.9 ರಷ್ಟು ಆಗಿದೆ. ಎಫ್.ಆರ್.ಬಿ.ಎಂ. ಕಾಯ್ದೆಯ ನಿಯಮದ ಪ್ರಕಾರ ಜಿ.ಎಸ್.ಡಿ.ಪಿಯ ಶೇ.25 ರಷ್ಟು ಕಡಿಮೆ ಇರಬೇಕು. 5 ವರ್ಷದ ನಮ್ಮ ಸರ್ಕಾರವು ಅದು ಶೇ.20 ರ ಆಸುಪಾಸಿನಲ್ಲಿ ಇತ್ತು.
ರಾಜಸ್ವ ಆದಾಯವು ಕಳೆದ ಬಜೆಟ್ ಅಂದಾಜಿಗಿಂತ ಈ ವರ್ಷದ ಅಂದಾಜಿನಲ್ಲಿ ಸುಮಾರು ರೂ.7,000 ಕೋಟಿಯಷ್ಟು ಕಡಿಮೆಯಾಗಿದೆ. ಕಳೆದ ಬಜೆಟ್‍ನ ಅಂದಾಜು ಮತ್ತು ಪರಿಷ್ಕೃತ ರಾಜಸ್ವ ಸ್ವೀಕೃತಿಯಲ್ಲಿ ರೂ.20,000 ಕೋಟಿಯಷ್ಟು ಕಡಿಮೆಯಾಗಿದೆ. ಕೇಂದ್ರ ಸರ್ಕಾರದ ತೆರಿಗೆ ಹಂಚಿಕೆ ಮತ್ತು ಅನುದಾನದ ಕೊರತೆಯೇ ಇದಕ್ಕೆ ಹೊಣೆ.
2020-21 ರ ಪರಿಷ್ಕೃತ ವೆಚ್ಚವು ರೂ.2,29,924.73 ಕೋಟಿ ಇರುತ್ತದೆ ಎಂದು ಅಂದಾಜಿಸಲಾಗಿದೆ. ಇದು ಬಜೆಟ್‍ನ ಅಂದಾಜಿಗಿಂತ ರೂ.8,000 ಕೋಟಿಯಷ್ಟು ಕಡಿಮೆಯಾಗಿದೆ.
2020-21 ರಲ್ಲಿ ರೂ.2,37,893 ಕೋಟಿಗಳಷ್ಟು ಬಜೆಟ್ ಅನ್ನು ಮಂಡಿಸಿದ್ದರೂ ಕಡೆಯದಾಗಿ ಇಲಾಖೆಗಳಿಗೆ ನೀಡಲು ಉದ್ದೇಶಿಸಿದ್ದ ಮೊತ್ತ ರೂ.1,96,369.2 ಕೋಟಿ. ಅದರಲ್ಲಿ ಹಳೆಯ ಬಾಕಿ ರೂ.13,491.7 ಕೋಟಿ. ಒಟ್ಟಿಗೆ ಸೇರಿ ಖರ್ಚು ಮಾಡಲು ಲಭ್ಯವಿದ್ದ ಅನುದಾನ ರೂ.2,09,860 ಕೋಟಿ.
ಇಲಾಖೆಗಳಿಗೆ ಜನವರಿಯವರೆಗೆ ಬಿಡುಗಡೆ ಮಾಡಿದ್ದು ರೂ.1,42,851 ಕೋಟಿ. ಖರ್ಚಾಗಿರುವುದು ರೂ.1,30,998 ಕೋಟಿ ಮಾತ್ರ. 2020-21 ರಲ್ಲಿ ರೂ.2,37,893 ಕೋಟಿಯನ್ನು ಪರಿಷ್ಕರಿಸಿ ರೂ.2,29,925 ಕೋಟಿಗಳಿಗೆ ಇಳಿಸಿಕೊಂಡರು.
ಇದನ್ನೂ ಓದಿ | ರಾಜ್ಯ ಬಜೆಟ್-2021 ವಿಶ್ಲೇಷಣೆ | ಯಡ್ಡಿ ಬಜೆಟ್ – ಉತ್ಪ್ರೇಕ್ಷೆ, ತಾರತಮ್ಯ ಮತ್ತು ಸುಳ್ಳು ಅಂಕಿಅಂಶಗಳ ಕಣ್ಕಟ್ಟು..!
ಕೊರೋನಾ ನಿರ್ವಹಣೆಗಾಗಿ ರೂ.5,372 ಕೋಟಿ ಖರ್ಚು ಮಾಡಿಯೂ ಒಟ್ಟು ಖರ್ಚು ಅವರ ಬಜೆಟ್ ಅಂದಾಜಿಗಿಂತ ಕಡಿಮೆಯಿದೆ. ಇದರಲ್ಲಿ ಇಲಾಖೆಗಳಿಗೆ ಖರ್ಚು ಮಾಡಲು ಸಿಕ್ಕಿದ್ದು ರೂ.1,96,369 ಕೋಟಿ. ಇನ್ನು ಉಳಿದ ರೂ.33,556 ಕೋಟಿಗಳು ಸಾಲ ಮರುಪಾವತಿ ಮತ್ತು ಬಡ್ಡಿ ಪಾವತಿಗೆ ಖರ್ಚಾಗಿದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು 2021-22 ರಲ್ಲಿ ಜಿ.ಡಿ.ಪಿ.ಯು ಶೇ.11 ರಷ್ಟು ಬೆಳವಣಿಗೆ ಕಾಣುವುದಾಗಿ ಹೇಳಿಕೊಳ್ಳುತ್ತಿದ್ದಾರೆ. ಆದರೆ ರಾಜ್ಯದ ಸ್ವಂತ ತೆರಿಗೆಗಳ ಸಂಗ್ರಹಗಳ ಗುರಿಯು 2020-21 ರ ಮೂಲ ಬಜೆಟ್‍ಗೆ ಹೋಲಿಸಿದರೆ ಶೇ.3.12 ರಷ್ಟು ಕಡಿಮೆಯಾಗಿದೆ.
ಕೇಂದ್ರದ ತೆರಿಗೆ ಪಾಲು 2020-21ರ ಮೂಲ ಬಜೆಟ್‍ನಲ್ಲಿ ರೂ.28,591.23 ಕೋಟಿ ನಿರೀಕ್ಷೆ ಮಾಡಲಾಗಿತ್ತು. 2021-22 ರ ಆಯವ್ಯಯದಲ್ಲಿ ಇದು ರೂ.24,273.6 ಕೋಟಿಗೆ ಇಳಿಯಲಿದೆ. ರೂ.4,318 ಕೋಟಿಗಳಷ್ಟು ಕಡಿಮೆಯಾಗಿದೆ. ಅಂದರೆ ಶೇ.15 ರಷ್ಟು ಕಡಿಮೆಯಾಗಿದೆ.
ದೇಶದ ಜಿ.ಡಿ.ಪಿ.ಯು ಶೇ.11 ಕ್ಕೂ ಹೆಚ್ಚು ಪ್ರಗತಿಯಾಗುವುದಾದರೆ ನಮಗೆ ನೀಡಬೇಕಾದ ತೆರಿಗೆ ಹಂಚಿಕೆಯೂ ಅಷ್ಟೇ ಪ್ರಮಾಣದಲ್ಲಿ ಹೆಚ್ಚಾಗಿ ರಾಜ್ಯಕ್ಕೆ ದೊಡ್ಡ ಪ್ರಮಾಣದಲ್ಲಿ ಆದಾಯ ಬರಬೇಕಿತ್ತು ಅಲ್ಲವೇ? ಕೇಂದ್ರ ಮತ್ತು ರಾಜ್ಯಗಳಲ್ಲಿನ ಎರಡೂ ಬಿ.ಜೆ.ಪಿ. ಸರ್ಕಾರಗಳು ಜನರ ತಲೆಗೆ ಟೋಪಿ ಹಾಕುತ್ತಿವೆ ಎಂದರು.
ರಾಜ್ಯ ಬಜೆಟ್‌ನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ವಿಧಿಸಲಾಗುತ್ತಿದ್ದ ಮಾರಾಟ ತೆರಿಗೆಯನ್ನು ಕಡಿಮೆ ಮಾಡುವ ಮೂಲಕ ಜನರಿಗೆ ನೆರವಾಗಬೇಕಿತ್ತು ಹಾಗೂ ಕೇಂದ್ರ ಸರ್ಕಾರದ ಮೇಲೆ ತೆರಿಗೆ ಕಡಿತಗೊಳಿಸುವಂತೆ ಒತ್ತಡ ಹೇರಬೇಕಿತ್ತು. ಈ ಅಂಶಗಳೇ ಇಂದಿನ ಬಜೆಟ್‌ನಲ್ಲಿ ಇಲ್ಲ ಎಂದು ಆರೋಪಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026 : ಕತಾ ಸ್ಪರ್ಧೆ ; ಅನಂತ ಕುಣಿಗಲ್ ಅವರ ಸಂಸ ಕತೆ ಪಡೆದ ಪ್ರಥಮ ಸ್ಥಾನ ಅಮಾನ್ಯ ; ಪರಿಷ್ಕೃತ ಫಲಿತಾಂಶ ಪ್ರಕಟ
ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026ರ ಕತಾ ಸ್ಪರ್ಧೆಯ ನಿಯಮಾವಳಿಯನ್ನು ಉಲಂಘಿಸಿರುವ ಕಾರಣ ಅನಂತ ಕುಣಿಗಲ್ ಅವರ ಸಂಸ ಕತೆ ಪಡೆದ ಪ್ರಥಮ ಸ್ಥಾನವನ್ನು ಅಮಾನ್ಯ ಮಾಡಲಾಗಿದೆ ಎಂದು ಪತ್ರಿಕೆಯ ಸಂಪಾದಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕತೆ-ಕವಿತೆ ಸ್ಪರ್ಧೆಯ ನಿಯಮಾವಳಿಗಳ ಪ್ರಕಾರ ‘ “ಸ್ವತಂತ್ರ ರಚನೆಯಾಗಿರ ಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು” ಎನ್ನುವ ನಿಯಮಾವಳಿಗಳನ್ನು ಉಲಂಘಿಸಿರುವುದರಿಂದ ಪ್ರಥಮ ಸ್ಥಾನ ಪಡೆದ ” ಸಂಸ” ಕತೆಯನ್ನು ಅಮಾನ್ಯಗೊಳಿಸಲಾಗಿದೆ.
‘ಸಂಸ’ ಕತೆಯ ಕತೆಗಾರರಾದ ಅನಂತ ಕುಣಿಗಲ್ ಅವರು
ಸ್ವತಃ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ‘ ಸಂಸ’ ಕತೆಯು ಈ ಹಿಂದೆ ಯಾವುದೋ ಕತಾ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿತ್ತು. ಮತ್ತೊಂದೆಡೆ ತೃತೀಯ, ಮಗದೊಂದೆಡೆ ದ್ವಿತೀಯ ಬಹುಮಾನ ಲಭಿಸಿತ್ತು, ಅಲ್ಲದೆ ‘ಟೋಟೋ’ ಅವಾರ್ಡ್ ನ ಅಂತಿಮ ಸುತ್ತಿಗೆ ಎರಡು ಬಾರಿ ಶಾರ್ಟ್ ಲಿಸ್ಟ್ ಆಗಿತ್ತು ಎಂದು ಬರೆದು ಕೊಂಡಿರುತ್ತಾರೆ. ಆದಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ.
ಕತಾ ಸ್ಪರ್ಧೆಯ ಪರಿಷ್ಕೃತ ಫಲಿತಾಂಶ
ಕತಾ ಸ್ಪರ್ಧೆಯಲ್ಲಿ ರವಿಮುಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ಪ್ರಥಮ ಬಹುಮಾನ, ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ದ್ವಿತೀಯ ಬಹುಮಾನ ಹಾಗೂ ಅಜೇಯ ಸಿಂಹ ಕೆ.ವಿ ಅವರ ‘ ಮಾರ್ಜಕದ ಶ್ರೀಮುಡಿ’ ಕತೆಗೆ ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕ ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವನಗರಿ ಸುದ್ದಿದಿನ ಪತ್ರಿಕೆಯ ದೀಪಾವಳಿ ವಿಶೇಷಾಂಕ- 2026 ರ ಕತೆ – ಕವಿತೆ ಫಲಿತಾಂಶ ಪ್ರಕಟ
ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ ಹಾಗೂ ಶ್ಯಾಮ್ ಪ್ರಕಾಶನ, ನವಿಲೇಹಾಳು ವತಿಯಿಂದ ದೀಪಾವಳಿ ವಿಶೇಷಾಂಕ-2026 ರ ಕತೆ ಮತ್ತು ಕವಿತೆ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದ್ದು, ಕತಾ ಸ್ಪರ್ಧೆಯಲ್ಲಿ ಅನಂತ್ ಕುಣಿಗಲ್ ಅವರ ́ಸಂಸʼ ಕತೆಗೆ ಪ್ರಥಮ ಬಹುಮಾನ,. ರವಿ ಮಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ದ್ವಿತೀಯ ಬಹುಮಾನ ಹಾಗೂ ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕರಾದ ಗೋವರ್ಧನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಜೇಯ ಸಿಂಹ ಕೆ.ವಿ. ಅವರ ʼಮಾರ್ಜಕದ ಶ್ರೀಮುಡಿʼ, ಟಿ.ಆರ್. ಪ್ರಕಾಶ ಭಾಗವತ ಅವರ ʼಸಮಾಧಿʼ , ರಘುನಂದನ್ ಅವರ ʼಹೀಗೊಂದು ಕಛೇರಿʼ , ಡಾ||. ಮಿರ್ಜಾ ಬಷೀರ್ ಅವರ ʼ ಒಂದು ಸದ್ದಿಲ್ಲದ ಕ್ರಾಂತಿʼ, ಸುಜಾತ ಎಸ್. ಎನ್ ರೆಡ್ಡಿ ಅವರ ʼ ಸತ್ಯ ದರ್ಶನʼ, ಚಂದ್ರಿಕಾ ನಾಗರಾಜ್ ಹಿರಿಯಡಕ ಅವರ ʼ ವೆಂಕಟನ ಸ್ವೆಟರ್, ರೈಹಾನ ಅವರ ʼಬಾವಿಗೆ ಬಿದ್ದರೂʼ, ಒಟ್ಟು ಈ ಏಳುಕತೆಗಳು ತೀರ್ಪುಗಾರ ಮೆಚ್ಚುಗೆ ಪಡೆದಿವೆ.
ಕತಾ ಸ್ಪರ್ಧೆಯ ತೀರ್ಪುಗಾರರಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಕತೆಗಾರ ಹಾಗೂ ನಿವೃತ್ತ ಪ್ರಾಧ್ಯಾಪಕ ಅಮರೇಶ ನುಗಡೋಣಿ, ಹೊಸಪೇಟೆ, ಕವಿ ಕತೆಗಾರ , ಜಿ. ಮುದ್ದುವೀರಸ್ವಾಮಿ, ದಾವಣಗೆರೆ, ಕತೆಗಾರ್ತಿ ಹಾಗೂ ಕನ್ನಡ ಪ್ರಾಧ್ಯಾಪಕಿ, ಸುಜಾತ ಚಲಾವಾದಿ, ತಾಳಿಕೋಟೆ, ಕತೆಗಾರ ಹಾಗೂ ಅಕ್ಷರ ಸಂಗಾತ ಮಾಸ ಪತ್ರಿಕೆಯ ಸಂಪಾದಕ ಡಾ. ಟಿ ಎಸ್. ಗೊರವರ, ಗಜೇಂದ್ರಘಡ ಇವರು ಕಾರ್ಯನಿವಹಿದ್ದರು ಎಂದು ಮಾಹಿತಿ ನೀಡಿದ್ಧಾರೆ.
ಪ್ರಥಮ ಬಹುಮಾನ ಹತ್ತು ಸಾವಿರ ರೂ (10000 ರೂ ) ನಗದು, ದ್ವೀತೀಯ ಬಹುಮಾನ ಐದು ಸಾವಿರ ನಗದು, (5000 ರೂ), ತೃತೀಯ ಬಹುಮಾನ ಮೂರು ಸಾವಿರ (3000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ನೀಡಲಾಗುವುದು.
ಕವಿತೆ ಸ್ಪರ್ಧೆ ಫಲಿತಾಂಶ
ಕವಿತೆ ಸ್ಪರ್ಧೆಯಲ್ಲಿ ಆನಂದ ಕುಂಚನೂರ ಅವರ ʼ ಬೆತ್ತಲೆ ಶಿಖರʼ ಕವಿತೆಗೆ ಪ್ರಥಮ ಬಹುಮಾನ, ಅಜಯ್ ಅಂಗಡಿ ಅವರ ʼಒಂದು ಶ್ರಾವಣ ಸಂಜೆಗೆʼ ದ್ವಿತೀಯ ಬಹುಮಾನ, ಭಾಗ್ಯ ಜ್ಯೋತಿ ಹಿರೇಮಠ ಅವರ ʼ ಗೋಡೆ ಕವಿತೆಗೆ ತೃತೀಯ ಬಹುಮಾನ ದೊರೆತಿದೆ.
ಫೈಜ್ನಟ್ರಾಜ್ ಅವರ ʼಅವ್ವ ತಟ್ಟಿದ ರೊಟ್ಟಿಯಲ್ಲಿ ಬೆರಳಿನ ಗುರುತುʼ, ಹೊನ್ನಪ್ಪ. ನೀ. ಕರೆಕನ್ನಮ್ಮನವರ ಅವರ ʼಒಂಟಿಯಾನದ ಸರಕುʼ, ಕವಿತ ಎ.ವಿ ಅವರ ʼಬಂದಿದ್ದಾರೆ ಸಿಕ್ಕಿಲ್ಲʼ, ರಮ್ಯ ಕೆ.ಜಿ. ಅವರ ʼಬಿಡಿಸಿಕೊಳ್ಳುತ್ತದೊಂದು ಚಿತ್ರ,ʼ, ಮುರ್ತುಜಾ ಬೇಗಂ ಕೊಡಗಲಿ ಅವರ ʼಒಂದು ಕನ್ನಡಿ ಮೂರು ಬಿಂಬಗಳುʼ, ಮನಸ್ವಿ ಎಂ ಸ್ವಾಮಿ ಅವರ ʼ ರಾಜಧಾನಿಯಲ್ಲಿ ರಾಜʼ, ವೀಣಾ ರಾವ್ ಅವರ ʼಬಣ್ಣಗಳ ಆಚೆಗೆʼ ಒಟ್ಟು ಏಳು ಕವಿತೆಗಳು ತೀರ್ಪುಗಾರರ ಮೆಚ್ಚುಗೆ ಪಡೆದಿವೆ.
ಕವಿತೆ ಸ್ಪರ್ಧೆಯ ತೀರ್ಪುಗಾರರಾಗಿ ಕವಿ ಚಂದ್ರಶೇಖರ ತಾಳ್ಯ, ಹೊಳಲ್ಕೆರೆ, ಕವಯಿತ್ರಿ ಸವಿತಾ ನಾಗಭೂಷಣ, ಶಿವಮೊಗ್ಗ, ಕವಿ ವಿಲ್ಸನ್ ಕಟೀಲು ಅವರು ಕಾರ್ಯನಿರ್ವಹಿಸಿದ್ದರು.
ಪ್ರಥಮ ಬಹುಮಾನ ಐದು ಸಾವಿರ ರೂ (5000 ರೂ ) ನಗದು, ದ್ವೀತೀಯ ಬಹುಮಾನ ಮೂರು ಸಾವಿರ ನಗದು, (3000 ರೂ), ತೃತೀಯ ಬಹುಮಾನ ಎರಡು ಸಾವಿರ (2000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ಇದೇ ಅಕ್ಟೋಬರ್ 24 ರಂದು ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ʼ ನಡೆಯುವ ದೀಪಾವಳಿ ವಿಶೇಷಾಂಕ-2026 ರ ಬಿಡುಗಡೆ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ: 9980346243 ಸಂಪರ್ಕಿಸಲು ಈ ಮೂಲಕ ತಿಳಿಸಲಾಗಿದೆ.

ದಿನದ ಸುದ್ದಿ
ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ
ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು.
ತೀರ್ಪುಗಾರರ ಮೆಚ್ಚುಗೆ ಪಡೆದ ಸಿದ್ಧಗಂಗಾ ಸಂಸ್ಥೆಯ ನಯಾಸ ಡಿ.ಎಸ್. ಪ್ರಥಮ ಬಹುಮಾನವಾಗಿ ಒಂದು ಸಾವಿರ, ದ್ವಿತೀಯ ಬಹುಮಾನ ಗಳಿಸಿದ ಜಾಹ್ನವಿ ರೂ. 750 ಮತ್ತು ತೃತೀಯ ಬಹುಮಾನ ಗಳಿಸಿದ ಚೈತನ್ಯ ವಿ. ಎಸ್. ರೂ. 500 ನಗದು ಬಹುಮಾನ ಪಡೆದರು. ಜೊತೆಗೆ ಈ ಮಕ್ಕಳಿಗೆ ಆಯೋಜಕರು ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಎಳೆಯರ ಪ್ರಬುದ್ಧತೆಯನ್ನು ಶ್ಲಾಘಿಸಿದರು.
ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್ ಡಿಸೌಜ ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಪಾಲಕರ ಪ್ರೋತ್ಸಾಹ ಈ ಯಶಸ್ಸಿಗೆ ಕಾರಣವಾಗಿದೆ ಎಂದರು.
ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯಪುಸ್ತಕಗಳ ಜೊತೆಗೆ ಉತ್ತಮ ಕಾದಂಬರಿಗಳು, ಕಥಾಸಂಕಲನಗಳು, ಸಾಧಕರ ಆತ್ಮಕಥೆ ಕುರಿತಾದ ಪುಸ್ತಕಗಳನ್ನು ಓದುವ ಹವ್ಯಾಸ ಅತ್ಯಂತ ಮಹತ್ವದ್ದು, ಓದಿನ ಮೂಲಕ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಚಿಂತನೆ, ವಿಶ್ಲೇಷಣೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಮುಂದೆಯೂ ಇಂತಹ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಹೆಚ್ಚಿನ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


