ದಿನದ ಸುದ್ದಿ
ಹಲವು ತಡೆಗೋಡೆಗಳ ನಡುವೆಯೂ ಪ್ರಪಂಚದಾದ್ಯಂತ 69ಮಹಿಳೆಯರು ದೇಶದ ಚುಕ್ಕಾಣಿ ಹಿಡಿದಿದ್ದಾರೆ : ಸಾಮಜಿಕ ಕಾರ್ಯಕರ್ತೆ ಭವ್ಯಾ ನರಸಿಂಹಮೂರ್ತಿ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2021/03/bhavyanarasimhamurthy_suddidina.jpg&description=ಹಲವು ತಡೆಗೋಡೆಗಳ ನಡುವೆಯೂ ಪ್ರಪಂಚದಾದ್ಯಂತ 69ಮಹಿಳೆಯರು ದೇಶದ ಚುಕ್ಕಾಣಿ ಹಿಡಿದಿದ್ದಾರೆ : ಸಾಮಜಿಕ ಕಾರ್ಯಕರ್ತೆ ಭವ್ಯಾ ನರಸಿಂಹಮೂರ್ತಿ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2021/03/bhavyanarasimhamurthy_suddidina.jpg&description=ಹಲವು ತಡೆಗೋಡೆಗಳ ನಡುವೆಯೂ ಪ್ರಪಂಚದಾದ್ಯಂತ 69ಮಹಿಳೆಯರು ದೇಶದ ಚುಕ್ಕಾಣಿ ಹಿಡಿದಿದ್ದಾರೆ : ಸಾಮಜಿಕ ಕಾರ್ಯಕರ್ತೆ ಭವ್ಯಾ ನರಸಿಂಹಮೂರ್ತಿ', 'pinterestShare', 'width=750,height=350'); return false;" title="Pin This Post">
ಸುದ್ದಿದಿನ, ಬೆಂಗಳೂರು : ದೇಶದ ಜನಸಂಖ್ಯೆಯ ಸುಮಾರು ಅರ್ಧದಷ್ಟಿರುವ ಮಹಿಳೆಯರು ಉನ್ನತ ಸ್ಥಾನಗಳನ್ನು ಅಲಂಕರಿಸುವಲ್ಲಿ ಹಾಗೂ ಮುಂದಿನ ಪೀಳಿಗೆಗೆ ಆದರ್ಶರಾಗಿ ನಿಲ್ಲುವಲ್ಲಿ ಗಂಡಿಗಿಂತ ಹಿಂದುಳಿದಿದ್ದಾಳೆ ಎಂದು ಸಾಮಾಜಿಕ ಕಾರ್ಯಕರ್ತೆ ಹಾಗೂ ಕೆಪಿಸಿಸಿಯ ವಕ್ತಾರೆಯಾದ ಭವ್ಯಾ ನರಸಿಂಹಮೂರ್ತಿ ಆತಂಕ ವ್ಯಕ್ತಪಡಿಸಿದರು.
ಮಹಿಳಾ ದಿನಾಚರಣೆಯ ಅಂಗವಾಗಿ ನಗರದ ಸೇಂಟ್ ಜೋಸೆಫ್ ಈವ್ನಿಂಗ್ ಕಾಲೇಜಿನಲ್ಲಿ ಮಾರ್ಚ್ 8 ರಂದು ನಡೆದ ‘ವುಮೆನ್ಸ್ ಲೀಡರ್ ಶಿಪ್‘ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಕಾಲೇಜು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, ಆಸಕ್ತಿದಾಯಕ ವಿಷಯಗಳನ್ನು ಚರ್ಚಿಸಿ ಹೆಣ್ಣುಮಕ್ಕಳನ್ನು ಸಬಲರಾಗಿರುವಂತೆ ಪ್ರೇರೇಪಿಸಿದರು.
ಮಹಿಳೆಗೆ ಅವಕಾಶಗಳ ಕೊರತೆ ಅಧಿಕಾರವಿಲ್ಲದಿರುವುದು ಪ್ರೋತ್ಸಾಹ ಇಲ್ಲದಂತಹ ಹಲವು ಕಾರಣಗಳಿರಬಹುದು ಆದರೆ ಶಿಕ್ಷಣ ಪಡೆಯುವುದರಿಂದ ಎಲ್ಲಾ ಅಡೆತಡೆಗಳನ್ನು ಮೆಟ್ಟಿ ನಿಂತು ಹೆಣ್ಣು ತನ್ನ ಅಸ್ತಿತ್ವವನ್ನು ಜಗತ್ತಿಗೆ ಸಾಬೀತು ಪಡಿಸಬಲ್ಲಳು ಎಂದರು.
ಮಕ್ಕಳಿಗೆ ಶಿಕ್ಷಣ ಕೊಡಿಸುವುದೇ ಕಷ್ಟವಾಗಿದ್ದ ಸಮಯದಲ್ಲಿ RTE, ಮಧ್ಯಾಹ್ನದ ಬಿಸಿಯೂಟದಂತಹ ಕಾರ್ಯಕ್ರಮಗಳು ಹೆಣ್ಣು ಮಕ್ಕಳನ್ನು ಶಾಲೆಯ ಕಡೆಗೆ ಸೆಳೆಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ. ಇಷ್ಟೆಲ್ಲದರ ಹೊರತಾಗಿಯೂ ಹೆಣ್ಣು ಮಕ್ಕಳ ಸುರಕ್ಷತೆ ಶಾಲೆಯಲ್ಲಿ ಸಂಭವಿಸಬಹುದಾದಂತಹ ಲೈಂಗಿಕ ಕಿರುಕುಳದಿಂದಾಗಿ ಇಂದು ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುವಂತಹ ವಾತಾವರಣವಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಹಲವು ತೊಂದರೆಗಳ ನಡುವೆ ಸಿಕ್ಕಿರುವ ಅವಕಾಶಗಳು ಮಹಿಳೆ ಸದ್ವಿನಿಯೋಗ ಪಡಿಸಿಕೊಂಡು ಶೈಕ್ಷಣಿಕವಾಗಿ ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದ್ದು, ಉದ್ಯೋಗದಲ್ಲಿ ಮಹಿಳೆಯರ ಅವಕಾಶಗಳ ಬಗ್ಗೆ ಬಂದಾಗ ಒಂದೇ ವಿದ್ಯಾರ್ಹತೆಯ ಹೆಣ್ಣು ಗಂಡಿನ ನಡುವೆ ಸ್ಪರ್ಧೆ ಎದುರಾದರೆ ಪುರುಷರಿಗೆ ಆದ್ಯತೆ ನೀಡುವ ಸಾಧ್ಯತೆಗಳೇ ಹೆಚ್ಚಿವೆ, ಹಾಗಾಗಿ ಎಲ್ಲಾ ರಂಗದಲ್ಲೂ ಹೆಣ್ಣಿಗೆ ಮೀಸಲಾತಿ ನೀಡುವ ಮೂಲಕ ಬಾಗಿಲನ್ನು ತೆರೆಯಬೇಕಾಗಿರುವ ಜವಾಬ್ದಾರಿ ಇದೆ ಎಂದು ನುಡಿದರು.
ಸಮೀಕ್ಷೆಗಳ ಪ್ರಕಾರ, ಭಾರತದಲ್ಲಿ 27%ಮಹಿಳೆಯರು 15ವಯಸ್ಸಿಗಿಂತ ಮುಂಚೆಯೇ ಮದುವೆಯಾಗಿ ಸಂಸಾರದ ನೊಗ ಹೊರುತ್ತಿದ್ದಾರೆ.2020ರ ಮಹಿಳಾ ಆಯೋಗದ ವರದಿಯ ಪ್ರಕಾರ 10000 ವರದಕ್ಷಿಣೆ ಕಿರುಕುಳದ ಕೇಸ್ ದಾಖಲಾಗಿದೆ ಜೊತೆಗೆ 15ನಿಮಿಷಕ್ಕೆ ಒಮ್ಮೆ ಒಬ್ಬ ಹೆಣ್ಣು ಮಗಳು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾಳೆ. ಇಷ್ಟೆಲ್ಲಾ ತಡೆಗೋಡೆಗಳ ನಡುವೆಯೂ ಭಾರತದಲ್ಲಿ 1747 ಪುರುಷ ಎಂ.ಪಿ.ಗಳಿಗೆ 67ಮಹಿಳೆಯರಿದ್ದಾರೆ. ಪ್ರಪಂಚದಾದ್ಯಂತ 69ಮಹಿಳೆಯರು ದೇಶದ ಚುಕ್ಕಾಣಿ ಹಿಡಿದು ಮುನ್ನಡೆಸುತ್ತಿದ್ದಾರೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.
ಸಂವಾದದ ವಿಡಿಯೋ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಸುಗಮ ಮತ ಎಣಿಕೆಗೆ ಸಜ್ಜು
ಸುದ್ದಿದಿನ,ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯನ್ನು ಸುಗಮ, ಪಾರದರ್ಶಕ ಮತ್ತು ಅತ್ಯಂತ ಸುರಕ್ಷಿತವಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲಾ ಇಲಾಖಾ ಅಧಿಕಾರಿಗಳು ಸಮನ್ವಯದಿಂದ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ಅವರು ನಿರ್ದೇಶನ ನೀಡಿದರು.
ಅವರು ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಕುರಿತು ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿಧಾನಸಭಾ ಉಪಚುನಾವಣೆಯ ಮತ ಎಣಿಕೆ ಕಾರ್ಯವು ಸುಗಮವಾಗಿ ಮತ್ತು ಶಾಂತಿಯುತವಾಗಿ ನಡೆಯುವ ದೃಷ್ಟಿಯಿಂದ, ಮತ ಎಣಿಕೆ ಕೇಂದ್ರದ ಸುತ್ತಮುತ್ತಲಿನ 100 ಮೀಟರ್ ಪ್ರದೇಶವನ್ನು ‘ವಾಹನ ಮುಕ್ತ ವಲಯ’ ಎಂದು ಘೋಷಿಸಲಾಗಿದೆ, ಎಣಿಕೆ ಕೇಂದ್ರದ ಗೇಟ್‌ನಿಂದ ಸುತ್ತಲಿನ 100 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದ್ದು, ಅಲ್ಲಿ ಸಿಆರ್‌ಪಿಸಿ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಕೇಂದ್ರದ ಸುತ್ತಲೂ ಮೂರು ಹಂತದ ಸಮನ್ವಯ ಭದ್ರತಾ ವ್ಯವಸ್ಥೆಯನ್ನು (Three-tier coordinating security system) ಅಳವಡಿಸಲಾಗುವುದು. ಮತ ಎಣಿಕೆ ಪ್ರಕ್ರಿಯೆಗೆ ಯಾವುದೇ ಅಡ್ಡಿಯಾಗದಂತೆ ಮತ್ತು ಭದ್ರತಾ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಮತ್ತು ಅನುಮತಿ ಪಡೆದ ವಾಹನಗಳನ್ನು ಹೊರತುಪಡಿಸಿ ಉಳಿದ ಯಾವುದೇ ಖಾಸಗಿ ವಾಹನಗಳ ಪ್ರವೇಶವನ್ನು ಈ ವಲಯದಲ್ಲಿ ಕಟ್ಟುನಿಟ್ಟಾಗಿ ನಿಷೇಧಿಸುವಂತೆ ಸೂಚನೆ ನೀಡಿದರು.
ಮತ ಎಣಿಕೆ ಕೇಂದ್ರದ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ಪೊಲೀಸ್ ಇಲಾಖೆಯ ವತಿಯಿಂದ ಪರ್ಯಾಯ ಸಂಚಾರ ಮಾರ್ಗಗಳನ್ನು ಗುರುತಿಸಲಾಗಿದೆ. ವಾಹನ ಸವಾರರು ಪೊಲೀಸ್ ಸಿಬ್ಬಂದಿಯ ಸೂಚನೆಗಳನ್ನು ಪಾಲಿಸಿ, ನಿಗದಿಪಡಿಸಿದ ಪರ್ಯಾಯ ರಸ್ತೆಗಳನ್ನು ಬಳಸುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದರು.
ಮತ ಎಣಿಕೆ ಸಿಬ್ಬಂದಿ ಮತ್ತು ಅಭ್ಯರ್ಥಿಗಳಿಗೆ ಪ್ರತ್ಯೇಕ ವಾಹನ ಪಾಸ್‌ಗಳನ್ನು ವಿತರಿಸಲಾಗುವುದು. ಎಪಿಎಂಸಿ ಆವರಣ ಹಾಗೂ ಬಿಆರ್‌ಸಿ ಕಾಲೇಜು ಮೈದಾನದಲ್ಲಿ ವ್ಯವಸ್ಥಿತ ಪಾರ್ಕಿಂಗ್ ಸೌಲಭ್ಯ ಕಲ್ಪಿಸಲು ಸೂಚಿಸಲಾಗಿದೆ. ಮತ ಎಣಿಕೆ ಕೇಂದ್ರದೊಳಗೆ ಮೊಬೈಲ್ ಫೋನ್ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಸಿಬ್ಬಂದಿಗಳ ಮೊಬೈಲ್‌ಗಳನ್ನು ಸುರಕ್ಷಿತವಾಗಿ ಇರಿಸಲು ಪ್ರತ್ಯೇಕ ಕೌಂಟರ್ ತೆರೆದು, ಟೋಕನ್ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.
ಮುಂದಿನ ಕೆಲವು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ, ಮತ ಎಣಿಕೆ ಕಾರ್ಯಕ್ಕೆ ಯಾವುದೇ ಅಡ್ಡಿಯಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಎಣಿಕೆ ಕೇಂದ್ರದ ಮೇಲ್ಛಾವಣಿ ಮತ್ತು ವಿದ್ಯುತ್ ಸಂಪರ್ಕ ವ್ಯವಸ್ಥೆಯನ್ನು ಕೂಡಲೇ ಮರುಪರಿಶೀಲಿಸುವಂತೆ ಲೋಕೋಪಯೋಗಿ ಹಾಗೂ ಬೆಸ್ಕಾಂ ಇಲಾಖೆಯ ಕಾರ್ಯಪಾಲಕ ಅಭಿಯಂತರರಿಗೆ ಸೂಚನೆ ನೀಡಿದರು.
ಮಳೆಯಿಂದಾಗಿ ಎಣಿಕೆ ಕೇಂದ್ರದ ಒಳಗೆ ನೀರು ಸೋರದಂತೆ ಹಾಗೂ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸುವುದು ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಲೋಕೋಪಯೋಗಿ ಹಾಗೂ ಬೆಸ್ಕಾಂ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ, ವ್ಯವಸ್ಥೆ ಸುಸ್ಥಿತಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಮತ ಎಣಿಕೆಯು ಪಾರದರ್ಶಕತೆ ಮತ್ತು ಭದ್ರತೆಯ ದೃಷ್ಟಿಯಿಂದ ಕೇಂದ್ರದಾದ್ಯಂತ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ ಕಾರ್ಯಕ್ಷಮತೆ ಹಾಗೂ ದೃಶ್ಯೀಕರಣ ವ್ಯಾಪ್ತಿಯನ್ನು ಅಧಿಕಾರಿಗಳು ಪರಿಶೀಲಿಸಿಕೊಂಡು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಖಚಿತ ಪಡಿಸಿಕೊಳ್ಳಬೇಕು. ಪ್ರತಿಯೊಂದು ಎಣಿಕೆ ಟೇಬಲ್ ಹಾಗೂ ಮತಯಂತ್ರಗಳನ್ನು ತರುವ ಹಾದಿಯಲ್ಲಿ ಯಾವುದೇ ‘ಬ್ಲೈಂಡ್ ಸ್ಪಾಟ್’ ಇಲ್ಲದಂತೆ ಕ್ಯಾಮೆರಾಗಳ ಕವರೇಜ್ ಇರಬೇಕು. ಸಿಸಿಟಿವಿ ದೃಶ್ಯಾವಳಿಗಳು ಅಡೆತಡೆಯಿಲ್ಲದೆ ಚಿತ್ರೀಕರಣಗೊಳ್ಳುತ್ತಿರುವುದನ್ನು ತಾಂತ್ರಿಕ ತಂಡವು ದೃಢಪಡಿಸಿಕೊಳ್ಳಬೇಕು ಎಂದು ಅವರು ಸೂಚಿಸಿದರು.
ಮತ ಎಣಿಕೆ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಹಾಗೂ ಅಭ್ಯರ್ಥಿಗಳ ಏಜೆಂಟರ ಆರೋಗ್ಯ ದೃಷ್ಟಿಯಿಂದ ಆರೋಗ್ಯ ಇಲಾಖೆಯ ವತಿಯಿಂದ ಒಬ್ಬ ನುರಿತ ವೈದ್ಯರನ್ನೊಳಗೊಂಡ ವೈದ್ಯಕೀಯ ತಂಡವನ್ನು ನಿಯೋಜಿಸಬೇಕು. ತುರ್ತು ಸಂದರ್ಭ ಎದುರಾದಲ್ಲಿ ತಕ್ಷಣದ ಚಿಕಿತ್ಸೆಗಾಗಿ ಅಗತ್ಯ ಔಷಧೋಪಚಾರಗಳೊಂದಿಗೆ ಸುಸಜ್ಜಿತ ಅಂಬುಲೆನ್ಸ್ ಸೇವೆಯನ್ನು ಸ್ಥಳದಲ್ಲಿ ಸದಾ ಸಿದ್ಧವಾಗಿರಿಸಬೇಕು ಎಂದು ತಿಳಿಸಿದರು.
ಅಗ್ನಿಶಾಮಕ ಇಲಾಖೆಯು ಮತ ಎಣಿಕೆ ಕೇಂದ್ರದ ಒಳಾಂಗಣ ಮತ್ತು ಹೊರಾಂಗಣವನ್ನು ಕೂಲಂಕಷವಾಗಿ ಪರಿಶೀಲಿಸಿ, ಯಾವುದೇ ಅಗ್ನಿ ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ಮುನ್ನೆಚ್ಚರಿಕಾ ಕ್ರಮವಾಗಿ ಕೇಂದ್ರದ ಆವರಣದಲ್ಲಿ ಅಗ್ನಿಶಾಮಕ ವಾಹನಗಳನ್ನು (Fire Engines) ನಿಯೋಜಿಸಬೇಕು ಹಾಗೂ ಅಗ್ನಿಶಾಮಕ ಉಪಕರಣಗಳು ಸುಸ್ಥಿತಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಮತ ಎಣಿಕೆ ಪ್ರಕ್ರಿಯೆಯು ಪಾರದರ್ಶಕವಾಗಿ ಮತ್ತು ಶಾಂತಿಯುತವಾಗಿ ನಡೆಯಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡುವಂತೆ ತಿಳಿಸಿದರು.
ಬಿಗಿ ಪೊಲೀಸ್ ಬಂದೋಬಸ್ತ್ ಮತ್ತು ಭದ್ರತೆ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೇಖರ್ ಹೆಚ್.ಟಿ. ಅವರು ಮಾತನಾಡಿ, ಮತ ಎಣಿಕೆ ಕೇಂದ್ರದ ಒಳಗೆ ಮತ್ತು ಹೊರಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ವ್ಯಾಪಕ ಭದ್ರತಾ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ. ಕೇಂದ್ರದ ಸುತ್ತಮುತ್ತ ಸಶಸ್ತ್ರ ಮೀಸಲು ಪಡೆ ಹಾಗೂ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಸಿಸಿಟಿವಿ ಕ್ಯಾಮೆರಾಗಳ ಮೂಲಕ ನಿರಂತರ ನಿಗಾ ವಹಿಸಲಾಗಿದೆ. ಮತ ಎಣಿಕೆ ಕೇಂದ್ರಕ್ಕೆ ಅನಧಿಕೃತ ಸಾರ್ವಜನಿಕರ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಉಪವಿಭಾಗಾಧಿಕಾರಿ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಚುನಾವಣಾಧಿಕಾರಿ ಸಂತೋಷ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತೆ ಹಾಗೂ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮಮತ ಗೌಡರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ, ಮಹಾನಗರ ಪಾಲಿಕೆ ಕಾರ್ಯಪಾಲಕ ಅಭಿಯಂತರ ಉದಯ್ , ಬೆಸ್ಕಾಂ , ಕೆ.ಎಸ್.ಆರ್.ಟಿ.ಸಿ , ಆಗ್ನಿಶಾಮಕ ದಳ , ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್‌ಎಸ್‌ಎಲ್‌ಸಿ ಫಲಿತಾಂಶ| ಗುರುಕುಲ ಶಾಲೆಯ ವಿದ್ಯಾರ್ಥಿಗಳ ಭರ್ಜರಿ ಸಾಧನೆ; ಶೇ. 98 ಅಂಕಗಳೊಂದಿಗೆ ಮದಿಹಾ ಅಗ್ರಸ್ಥಾನ
ಸುದ್ದಿದಿನ,ದಾವಣಗೆರೆ: 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ನಗರದ ಪ್ರತಿಷ್ಠಿತ ಶಾಲೆಗಲ್ಲಿ ಒಂದಾದ ಗುರುಕುಲ ಶಾಲೆ (Gurukul School) ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತೊಮ್ಮೆ ತನ್ನ ವರ್ಚಸ್ಸನ್ನು ಸಾಬೀತುಪಡಿಸಿದೆ. ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿನಿ ಮದಿಹಾ ಸಾಧನೆಯ ಶಿಖರದಲ್ಲಿ
ಶಾಲೆಯ ಪ್ರತಿಭಾವಂತ ವಿದ್ಯಾರ್ಥಿನಿ ಮದಿಹಾ ಅವರು ಒಟ್ಟು ಶೇ. 98 ಅಂಕಗಳನ್ನು ಗಳಿಸುವ ಮೂಲಕ ಶಾಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಸಾಧನೆಗೈದಿದ್ದಾರೆ. ಈಕೆಯ ಸಾಧನೆಯು ಸಹಪಾಠಿಗಳಿಗೆ ಮತ್ತು ಕಿರಿಯ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕವಾಗಿದೆ. ಅಲ್ಲದೇ ಕುಶಾಲ್ ಶೇ. 97 ದ್ವಿತೀಯ ಹಾಗೂ ಸಮರ್ಥ್ 95.5 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.
ಗಮನ ಸೆಳೆದ ಫಲಿತಾಂಶ: ಈ ಬಾರಿಯ ಫಲಿತಾಂಶದಲ್ಲಿ ವಿದ್ಯಾರ್ಥಿಗಳ ಸಾಧನೆ ಮೆಚ್ಚುವಂತಿದೆ.
ಡಿಸ್ಟಿಂಕ್ಷನ್ ಸಾಧಕರು: 15 ವಿದ್ಯಾರ್ಥಿಗಳು ಶೇ. 90ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿ ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದಾರೆ.
ಪ್ರಥಮ ಶ್ರೇಣಿ: ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ಉತ್ತಮ ಫಲಿತಾಂಶ: ಉಳಿದ ಎಲ್ಲಾ ವಿದ್ಯಾರ್ಥಿಗಳು ಸಹ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗುವ ಮೂಲಕ ಶಾಲೆಯು ನೂರಕ್ಕೆ ನೂರರಷ್ಟು ಫಲಿತಾಂಶದತ್ತ ದಾಪುಗಾಲು ಹಾಕಿದೆ.
ಯಶಸ್ಸಿನ ಹಿಂದಿನ ಶಕ್ತಿ:
ವಿದ್ಯಾರ್ಥಿಗಳ ಈ ಭವ್ಯ ಸಾಧನೆಗೆ ಶಾಲೆಯ ವ್ಯವಸ್ಥಿತ ಮಾರ್ಗದರ್ಶನವೇ ಕಾರಣ ಎಂದು ಆಡಳಿತ ಮಂಡಳಿ ತಿಳಿಸಿದೆ. ಶಾಲಾ ಕಾರ್ಯದರ್ಶಿ ಅಬ್ದುಲ್ ಸರ್ ಅವರ ನಿರಂತರ ಮಾರ್ಗದರ್ಶನ, ಆಡಳಿತ ಮಂಡಳಿಯ ಬೆಂಬಲ, ಮುಖ್ಯೋಪಾಧ್ಯಾಯರ ಸಮರ್ಥ ನಾಯಕತ್ವ ಹಾಗೂ ಶಿಕ್ಷಕ ವೃಂದದವರ ಅವಿರತ ಪರಿಶ್ರಮ ಈ ಯಶಸ್ಸಿಗೆ ಬುನಾದಿಯಾಗಿದೆ.
ಈ ಕುರಿತು ಸಂತಸ ವ್ಯಕ್ತಪಡಿಸಿರುವ ಶಾಲಾ ಕಾರ್ಯದರ್ಶಿ ಅಬ್ದುಲ್, “ವಿದ್ಯಾರ್ಥಿಗಳ ಏಕಾಗ್ರತೆ, ಪೋಷಕರ ಸಹಕಾರ ಮತ್ತು ಶಿಕ್ಷಕರ ಬೋಧನಾ ಶೈಲಿಯಿಂದ ಈ ಮೈಲಿಗಲ್ಲು ಸಾಧ್ಯವಾಗಿದೆ. ಈ ಯಶಸ್ಸು ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಇನ್ನಷ್ಟು ಉನ್ನತ ಗುರಿಗಳನ್ನು ತಲುಪಲು ಪ್ರೇರಣೆಯಾಗಲಿ,” ಎಂದು ಹಾರೈಸಿದ್ದಾರೆ.
ಶಾಲೆಯ ಈ ಸಾಧನೆಗೆ ಪೋಷಕರು ಮತ್ತು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಶುಭಕೋರಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕ್ಷೇತ್ರ ಪುನರ್ವಿಂಗಡಣೆ ಮಸೂದೆ ; ಬಿಜೆಪಿ ಷಡ್ಯಂತ್ರ ಬಯಲು : ಕವಿತಾ ಚಂದ್ರಶೇಖರ್ ಕಿಡಿ
ಸುದ್ದಿದಿನ,ದಾವಣಗೆರೆ: ಬಿಜೆಪಿಯು ಪಂಚರಾಜ್ಯಗಳ ಚುನಾವಣೆಗಮನದಲ್ಲಿಟ್ಟುಕೊಂಡು ತರಾತುರಿಯಲ್ಲಿ ಮಹಿಳಾ ಮೀಸಲಾತಿಯ ಹೆಸರಿನಲ್ಲಿ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಮಂಡನೆ ಮಾಡಲು ಹೋಗಿ ಮುಖಭಂಗಕ್ಕೀಡಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಕವಿತಾ ಚಂದ್ರಶೇಖರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರದ ಹುನ್ನಾರ ದೇಶದ ಜನರ ಮುಂದೆ ಬಯಲಾಗಿದೆ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮಹಿಳಾ ಮೀಸಲಾತಿ ಮಸೂದೆಯನ್ನು ಕಾಂಗ್ರೆಸ್ ವಿರೋಧಿಸುತ್ತಿದೆ. ಮಹಿಳೆಯರ ವಿರೋಧಿ ಕಾಂಗ್ರೆಸ್ ಪಕ್ಷ ಎಂದು ಹೇಳುತ್ತಿರುವ ಬಿಜೆಪಿಯು ಮಹಿಳೆಯರ ಭಾವನೆ ಜೊತೆ ಚೆಲ್ಲಾಟ ಆಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಅವರು ಸುದ್ದಿಗೋಷ್ಟಿಯಲ್ಲಿ ಪ್ರಶ್ನಿಸಿದ್ದಾರೆ.
ಪ್ರತಿಪಕ್ಷಗಳು ಡಿಲಿಮಿಟೇಶನ್ ಮಸೂದೆಗೆ ವಿರೋಧ ವ್ಯಕ್ತಪಡಿಸಿವೆಯೇ ವಿನಾಃ ಮಹಿಳಾ ಮೀಸಲಾತಿ ಮಸೂದೆಗಲ್ಲ. ಕೇಂದ್ರ ಸರ್ಕಾರವು ಪ್ರಾಮಾಣಿಕವಾಗಿದ್ದರೆ 2023 ರ ಕಾನೂನನ್ನು ಜಾರಿಗೆ ತರಬೇಕು.
ನಾರಿ ಶಕ್ತಿ ವಂದನ ಚೌಕಟ್ಟು ಎಂದು ವ್ಯಾಪಕವಾಗಿ ಕರೆಯಲ್ಪಡುವ 2023ರ ಕಾನೂನು, ಶಾಸಕಾಂಗಗಳಲ್ಲಿ ಮಹಿಳೆಯರಿಗೆ ಶೇಕಡಾ 33ರಷ್ಟು ಮೀಸಲಾತಿಯ ಅನುಷ್ಠಾನವನ್ನು ಹೊಸ ಜನಗಣತಿಯನ್ನು ಪೂರ್ಣಗೊಳಿಸಿ ನಂತರ ಡಿಲಿಮಿಟೇಶನ್ ಬಗ್ಗೆ ಚರ್ಚಿಸಿ
ಅನುಷ್ಠಾನಗೊಳಿಸಲಿ. ಅದನ್ನು ಬಿಟ್ಟು ವಿನಾಕಾರಣ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಕೇಂದ್ರ ಸರ್ಕಾರಕ್ಕೆ ಸೋಲಾಗಿರುವುದು “ಪ್ರಜಾಪ್ರಭುತ್ವದ ಗೆಲುವು. ಭಾರತದ ಒಕ್ಕೂಟ ರಚನೆ ಬದಲಾಯಿಸಲು ಮುಂದಾಗಿದ್ದಕ್ಕೆ ತಕ್ಕ ಶಾಸ್ತಿಯಾಗಿದೆ. ಪ್ರಜಾಪ್ರಭುತ್ವ ದುರ್ಬಲಗೊಳಿಸುವ ಕೇಂದ್ರ ಸರ್ಕಾರದ ಪಿತೂರಿಗೆ ತಕ್ಕ ಉತ್ತರ ನೀಡಲಾಗಿದೆ. ಇದು ಸಂವಿಧಾನಕ್ಕೆ ಸಿಕ್ಕ ಗೆಲುವು, ದೇಶಕ್ಕೆ, ವಿರೋಧ ಪಕ್ಷದ ಒಗ್ಗಟ್ಟಿಗೆ ಸಿಕ್ಕ ಗೆಲುವು.
ಉತ್ತರ ಭಾರತದಲ್ಲಿ ಹೆಚ್ಚು ಸ್ಥಾನಗಳನ್ನು ಸೃಷ್ಟಿಸಿ ಹೇಗಾದರೂ ಅಧಿಕಾರದಲ್ಲಿ ಉಳಿಯಬೇಕೆಂಬ ಬಿಜೆಪಿಯ ಪಿತೂರಿ ಜನರಿಗೆ ಅರ್ಥವಾಗಿದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಕಡಿಮೆ ಸ್ಥಾನ ಆಗುವ ಆತಂಕ ಇದೆ. ಯಾವುದೇ ರೀತಿಯಲ್ಲಿಯೂ ಚರ್ಚಿಸದೇ ಏಕಾಏಕಿ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಜಾರಿಗೆ ಮುಂದಾಗಿದ್ದೇಕೆ ಎಂದು ಕವಿತಾ ಚಂದ್ರಶೇಖರ್
ಪ್ರಶ್ನಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


