Connect with us

ಬಹಿರಂಗ

ಭಾರತ ಸರ್ವಾಧಿಕಾರಿ ಆಡಳಿತದತ್ತ ಜಾರಿಕೆ : ಸ್ವಿಡನ್ ಸ್ವಾಯತ ಸಂಸ್ಥೆಯೊಂದರ ಸರ್ವೇಕ್ಷಣಾ ವರದಿ

Published

on

  • ಡಾ. ಜೆ ಎಸ್ ಪಾಟೀಲ

ಅಂತರಾಷ್ಟ್ರೀಯ ಸಂಸ್ಥೆಯೊಂದರ ಸರ್ವೇಕ್ಷಣಾ ವರದಿಯ ಪ್ರಕಾರ ಭಾರತವು ಪ್ರಜಾಪ್ರಭುತ್ವದಿಂದ ಸರ್ವಾಧಿಕಾರಿ ಆಡಳಿತಕ್ಕೆ ಜಾರುತ್ತಿರುವ ಜಗತ್ತಿನ ಹತ್ತು ರಾಷ್ಟ್ರಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಭಾರತವು ಈಗ ಪಾಕಿಸ್ತಾನದಂತೆ ಸರ್ವಾಧಿಕಾರಿಯಾಗಿದೆ ಮತ್ತು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯು ಬಾಂಗ್ಲಾದೇಶಕ್ಕಿಂತ ಕೆಟ್ಟದಾಗಿದೆ ಎನ್ನುತ್ತದೆ ಸ್ವೀಡನ್ ಸಂಸ್ಥೆಯ ಒಂದು ಪ್ರಜಾಪ್ರಭುತ್ವ ವರದಿ.

ಫ್ರೀಡಂ ಹೌಸ್ ವರದಿಯು ಭಾರತವು ಈಗ ‘ಭಾಗಶಃ ಮುಕ್ತ ಸ್ವಾತಂತ್ರ ದೇಶವಾಗಿದೆ’ ಎಂದು ಹೇಳಿದ ನಂತರ, ವಿ-ಡೆಮ್ ಸಂಸ್ಥೆಯ ಪ್ರಜಾಪ್ರಭುತ್ವ ವರದಿಯು ಭಾರತವು ‘ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯಿಂದ ಚುನಾವಣಾ ಸರ್ವಾಧಿಕಾರಿ ಆಡಳಿತ ವ್ಯವಸ್ಥೆಗೆ ಇಳಿಸಿದೆ ಎಂದಿದೆ*

ದಿ ಪ್ರಿಂಟ್ ಜಾಲತಾಣ ಮಾಧ್ಯಮದಲ್ಲಿ ಶುಭಂಗಿ ಮಿಶ್ರಾ ಎನ್ನುವ ಅಂಕಣಕಾರರು ಇದೇ 11 ಮಾರ್ಚ್ ರಂದು ಈ ಕುರಿತು ಒಂದು ರೋಚಕ ಮತ್ತು ಅಷ್ಟೇ ಭಯಾನಕ ವರದಿಯನ್ನು ಮಾಡಿದ್ದಾರೆ. ಸ್ವೀಡನ್‌ನ ವಿ-ಡೆಮ್ ಇನ್‌ಸ್ಟಿಟ್ಯೂಟ್‌ನ ಐದನೇ ವಾರ್ಷಿಕ ಪ್ರಜಾಪ್ರಭುತ್ವ ವರದಿಯು ಭಾರತದಲ್ಲಿ ‘ಸರ್ವಾಧಿಕಾರಿ ಆಡಳಿತೀಕರಣ ವೈರಲ್ ಆಗುತ್ತದೆ’ ಎಂಬ ಶೀರ್ಷಿಕೆಯ ಅಡಿಯಲ್ಲಿ ಪ್ರಸ್ತುತ ಆಡಳಿತವು ಭಾರತವನ್ನು “ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ” ವ್ಯವಸ್ಥೆಯಿಂದ “ಚುನಾವಣಾ ಸರ್ವಾಧಿಕಾರ” ವ್ಯವಸ್ಥೆಗೆ ಇಳಿಸಿದೆ ಎಂದಿದೆಯಲ್ಲದೆ ಈಗ ಭಾರತದಲ್ಲಿ ಮಾಧ್ಯಮಗಳು ಗೊಂದಲದಲ್ಲಿದ್ದು ಸರಕಾರ ಅತಿಯಾಗಿ ಮಾನಹಾನಿ ಮತ್ತು ದೇಶದ್ರೋಹ ಕಾನೂನುಗಳ ದುರ್ಬಳಕೆ ಮಾಡುತ್ತಿರುವ ಕುರಿತು ವಿಸ್ತ್ರತವಾಗಿ ಟಿಪ್ಪಣಿ ಮಾಡಿದೆ.

ವಿ-ಡೆಮ್ (ವೈವಿಧ್ಯತೆಯ ಪ್ರಜಾಪ್ರಭುತ್ವ) 1789 ರಿಂದ 2020 ರವರೆಗೆ 202 ದೇಶಗಳಿಗೆ ಸುಮಾರು 30 ಮಿಲಿಯನ್ ಡಾಟಾ ಪಾಯಿಂಟ್‌ಗಳನ್ನು ಹೊಂದಿರುವ ಪ್ರಜಾಪ್ರಭುತ್ವದ ಅತಿದೊಡ್ಡ ಡೇಟಾಸೆಟ್ ಅನ್ನು ಉತ್ಪಾದಿಸುತ್ತದೆ ಎಂದು ಹೇಳಿಕೊಂಡಿದೆ. ಅಮೆರಿಕೆಯ ವಾಚ್‌ಡಾಗ್ ಫ್ರೀಡಂ ಹೌಸ್ ತನ್ನ ‘ವಿಶ್ವದ ಸ್ವಾತಂತ್ರ್ಯ’ ಎಂಬ ಸವಿವರ ವರದಿಯಲ್ಲಿ ಭಾರತದ ಸ್ಥಿತಿಯು “ಭಾಗಶಃ ಜನತಂತ್ರ ಮುಕ್ತ” ಕ್ಕೆ ಇಳಿದಿದೆ ಎಂದು ಪ್ರಕಟಿಸಿದ ಒಂದು ವಾರದೊಳಗೆ ವಿ-ಡೆಮ್ ಇನ್ಸ್ಟಿಟ್ಯೂಟ್ ನ ಈ ಅಘಾತಕಾರಿ ವರದಿ ಹೊರಬಿದ್ದಿದೆ.

ಇದನ್ನೂ ಓದಿ | ಶಿಷ್ಯವೇತನ | ಆನ್‍ಲೈನ್ ಅರ್ಜಿ ಅವಧಿ ವಿಸ್ತರಣೆ

ಭಾರತದ ಸ್ಕೋರ್ 2013 ರಲ್ಲಿ ಸಾರ್ವಕಾಲಿಕ ಗರಿಷ್ಠ 0.57 (0-1 ರ ಸ್ಕೇಲಿನಲ್ಲಿ) ಆಗಿರುತ್ತಿದ್ದು, 2020 ರ ಅಂತ್ಯದ ವೇಳೆಗೆ ಅದು 0.34 ಕ್ಕೆ ಕುಸಿದಿದೆ. ಅಂದರೆ ಏಳು ವರ್ಷಗಳಲ್ಲಿ 23 ಶೇಕಡ ಪಾಯಿಂಟ್‌ಗಳ ನಷ್ಟ ಅನುಭವಿಸಿದೆ. 2014 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ಗೆಲುವು ಮತ್ತು ಆ ಪಕ್ಷದ ಹಿಂದೂ ರಾಷ್ಟ್ರೀಯವಾದಿ ಗುಪ್ತ ಕಾರ್ಯಸೂಚಿಯ ಪರಿಣಾಮದಿಂದ ಭಾರತದಲ್ಲಿ ಜನತಂತ್ರ ವ್ಯವಸ್ಥೆಯು ಹೆಚ್ಚಿನ ಮಟ್ಟದಲ್ಲಿ ಕುಸಿತ ಕಂಡಿದೆ ಎಂದು ಈ ವರದಿ ಹೇಳುತ್ತದೆ.

ಭಾರತವು ಈ ದಿಶೆಯಲ್ಲಿ ಈಗ ಪಾಕಿಸ್ತಾನದಂತೆ ಧಾರ್ಮಿಕ ಉನ್ಮಾದವನ್ನು ಹುಟ್ಟಿಸುತ್ತ, ನಕಲಿ ದೇಶಭಕ್ತಿಯನ್ನು ಪ್ರತಿಪಾದಿಸಿ ಸರ್ವಾಧಿಕಾರಿಯಾಗಿ ಬದಲಾಗಿದೆ ಮತ್ತು ಭಾರತದ ಜನತಂತ್ರ ವ್ಯವಸ್ಥೆಯು ಅದರ ನೆರೆಯ ಮತ್ತೆರಡು ರಾಷ್ಟ್ರಗಳಾದ ಬಾಂಗ್ಲಾದೇಶ ಮತ್ತು ನೇಪಾಳಕ್ಕಿಂತ ಕೆಟ್ಟದಾಗಿದೆ. ಸಾಮಾನ್ಯವಾಗಿ, ಕಳೆದ ಏಳು ವರ್ಷಗಳ ಮೋದಿ ನೇತೃತ್ವದ ಸರ್ಕಾರವು ತನ್ನನ್ನು ಪ್ರಶ್ನಿಸುವ ಮತ್ತು ಸರಕಾರದ ಹುಳುಕುಗಳನ್ನು ಎತ್ತಿ ತೋರಿಸುವ ಜನರ ವಿರುದ್ಧ ದೇಶದ್ರೋಹ, ಮಾನಹಾನಿ ಮತ್ತು ಭಯೋತ್ಪಾದನಾ ನಿಗ್ರಹದ ಕಾನೂನುಗಳನ್ನು ಬಳಸುವ ಮೂಲಕ ಜನತಂತ್ರ ಹಾಗು ಅಭಿವ್ಯಕ್ತಿ ಸ್ವಾತಂತ್ರದ ಧ್ವನಿಯನ್ನು ಅಡಗಿಸಲು ಪ್ರಯತ್ನಿಸಿದೆ.

ಬಹುತೇಕ ಸ್ವತಂತ್ರ ಮತ್ತು ನಿರ್ಬಿಡೆಯ ಮಾಧ್ಯಮಗಳ ವರದಿಗಳನ್ನು ಸೆನ್ಸಾರ್ ಮಾಡಲಾಗುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ, ಬಿಜೆಪಿ ಅಧಿಕಾರ ವಹಿಸಿಕೊಂಡ ನಂತರ 7,000 ಕ್ಕೂ ಹೆಚ್ಚು ಜನರ ಮೇಲೆ ದೇಶದ್ರೋಹದ ಆರೋಪ ಹೊರಿಸಲಾಗಿದೆ ಮತ್ತು ಹೆಚ್ಚಿನ ಆರೋಪಿಗಳು ಆಡಳಿತ ಪಕ್ಷದ ಕಟು ವಿಮರ್ಶಕರು ಎಂದು ವರದಿ ಹೇಳುತ್ತದೆ.

ಮೋದಿ ಸರಕಾರವು ಗರಿಷ್ಠ ಮಟ್ಟದಲ್ಲಿ ಮಾನಹಾನಿ ಕಾನೂನಿನ ದುರ್ಬಳಕೆಯನ್ನು ಸರಕಾರದ ಭ್ರಷ್ಟಾಚಾರ, ಸ್ವಜನಪಕ್ಷಪಾತ, ಮುಂತಾದ ಸಂಗತಿಗಳ ಕುರಿತು ನೈಜ ವರದಿ ಮಾಡುವ ಪತ್ರಕರ್ತರನ್ನು ದಮನಿಸಲು ಬಳಸಿದೆ. ಅದಲ್ಲದೆ, ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆಯ (ಯುಎಪಿಎ) ದುರ್ಬಳಕೆಯ ಮೂಲಕ ಮೋದಿ ಸರಕಾರ ನಾಗರಿಕ ಸಮಾಜದ ಮೇಲೆ ಅನೇಕ ಬಗೆಯ ನಿರ್ಬಂಧಗಳನ್ನು ಹೇರಿದೆ. ಸರಕಾರದ ಈ ದಮನಕಾರಿ ನಡೆಯು ದೇಶದ ಸಂವಿಧಾನದ ಬದ್ಧತೆ ಮತ್ತು ಜಾತ್ಯತೀತತೆಗೆ ವಿರುದ್ಧವಾಗಿದೆ ಎಂದು ಆ ವರದಿ ಹೇಳುತ್ತದೆ.

ಆಗಸ್ಟ್ 2019 ರಲ್ಲಿ ತಿದ್ದುಪಡಿ ಮಾಡಲಾದ ಕಾನೂನನ್ನು ರಾಜಕೀಯ ವಿರೋಧಿಗಳಿಗೆ ಹಣಿಯಲು, ಬೆದರಿಸಲು ಮತ್ತು ಬಂಧಿಸಲು ಬಳಸಲಾಗುತ್ತಿದೆ. ಜೊತೆಗೆ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಪ್ರತಿಭಟಿಸುವ ಜನರನ್ನು ದಮನಿಸಲು ಬಳಸಲಾಗಿದೆ. ಶೈಕ್ಷಣಿಕ ಸಂಸ್ಥೆಗಳಲ್ಲಿನ ಭಿನ್ನಾಭಿಪ್ರಾಯಗಳ ಧ್ವನಿಯಡಗಿಸಲು ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆಯ(ಯುಎಪಿಎ)ನ್ನು ದುರ್ಬಳಕೆ ಮಾಡಲಾಗುತ್ತಿದೆ.

ದೇಶದ ವಿಶ್ವವಿದ್ಯಾನಿಲಯಗಳಲ್ಲಿನ ವಿದ್ಯಾರ್ಥಿಗಳು ಮತ್ತು ಸಾಮಾನ್ಯ ನಾಗರಿಕರು ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯ(ಸಿಎಎ) ವಿರುದ್ಧ ಪ್ರತಿಭಟನೆಯಲ್ಲಿ ತೊಡಗಿದ್ದಾಗ ಸಾಮಾಜಿಕ ಕಾರ್ಯಕರ್ತರು ಮತ್ತು ವಿಶ್ವವಿದ್ಯಾಲಯಗಳಲ್ಲಿನ ವಿದ್ಯಾರ್ಥಿಗಳನ್ನು ಇದೇ ಕಾಯ್ದೆಯಡಿಯಲ್ಲಿ ಶಿಕ್ಷೆ ವಿಧಿಸಲಾಗಿದೆ.

ಸರಕಾರ ಮತ್ತು ಸರಕಾರವನ್ನು ನಿಯಂತ್ರಿಸುತ್ತಿರುವ ಹಿಂದುತ್ವ ಸಿದ್ಧಾಂತದ ಸಂಘಟನೆ ಮತ್ತು ಅವುಗಳ ಅಪಾಯಕಾರಿ ಕಾರ್ಯಸೂಚಿಗಳೊಡನೆ ಹೊಂದಾಣಿಕೆ ಮಾಡಿಕೊಳ್ಳದ ವ್ಯಕ್ತಿ, ಸಂಸ್ಥೆಗಳು ಹಾಗು ದೇಶದ ಸಂವೇದನಾಶೀಲ ನಾಗರಿಕ ಸಮಾಜವು ಮೋದಿ ಸರಕಾರದ ಈ ದಮನಕಾರಿ ನೀತಿಯಿಂದ ಹೆಚ್ಚು ಗೊಂದಲಕ್ಕೊಳಗಾಗಿದೆ ಎಂದು ವರದಿ ಹೇಳುತ್ತದೆ.

ಸಿವಿಲ್ ಸೊಸೈಟಿ ಸಂಸ್ಥೆಗಳ (ಸಿಎಸ್ಒ) ಪ್ರವೇಶ, ನಿರ್ಗಮನ ಮತ್ತು ಕಾರ್ಯನಿರ್ವಹಣೆಯನ್ನು ನಿರ್ಬಂಧಿಸಲು ಬಿಜೆಪಿ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ (ಎಫ್‌ಸಿಆರ್‌ಎ) ಯನ್ನು ಹೆಚ್ಚು ದುರ್ಬಳಕೆ ಮಾಡಿಕೊಂಡಿದೆ ಎಂದು ಈ ವರದಿ ಹೇಳಿದೆ.

ಸಂಘಟನೆಯ ಐದನೇ ವಾರ್ಷಿಕ ವರದಿಯು ಕಳೆದ ಒಂದು ದಶಕದಲ್ಲಿ ನಡೆದ ಜಾಗತಿಕ ಬೆಳವಣಿಗೆಗಳ ಹಿನ್ನೆಲೆಯಲ್ಲಿ ವಿಶ್ವದ ಪ್ರಜಾಪ್ರಭುತ್ವ ರಾಷ್ಟ್ರಗಳ ಸ್ಥಿತಿಯು ಆತಂಕಕ್ಕೀಡು ಮಾಡಿದೆ ಎಂದಿದೆ. ಜಾಗತಿಕ ಮಟ್ಟದಲ್ಲಿ ಉದಾರವಾದಿ ಪ್ರಜಾಪ್ರಭುತ್ವ ರಾಷ್ಟ್ರಗಳ ಸಂಖ್ಯೆ ಕಳೆದ ಒಂದು ದಶಕದಲ್ಲಿ 41 ರಿಂದ 32 ಕ್ಕೆ ಕುಸಿದಿದೆ ಎಂದು ವರದಿ ಬಹಿರಂಗಗೊಳಿಸಿದೆ.

ಕಳೆದ ಒಂದು ದಶಕದ ಅವಧಿಯಲ್ಲಿ ಜಾಗತಿಕ ಜನತಂತ್ರದ ಕುಸಿತವು ತುಂಬಾ ಕಡಿದಾಗಿದೆ ಮತ್ತು 2020 ರಲ್ಲೂ ಅದು ಯಥಾಸ್ಥಿತಿಯಲ್ಲಿ ಮುಂದುವರೆದಿದೆ. ಈ ಜನತಂತ್ರದ ಕುಸಿತವು ವಿಶೇಷವಾಗಿ ಏಷ್ಯಾ-ಪೆಸಿಫಿಕ್ ಪ್ರದೇಶ, ಮಧ್ಯ ಏಷ್ಯಾ, ಪೂರ್ವ ಯುರೋಪ್ ಮತ್ತು ಲ್ಯಾಟಿನ್ ಅಮೆರಿಕಾದಲ್ಲಿ ಹೆಚ್ಚು ಗಮನ ಸೆಳೆದಿದೆ. 2020 ರಲ್ಲಿ ಸರಾಸರಿ ಜಾಗತಿಕ ನಾಗರಿಕರು ಅನುಭವಿಸಿದ ಪ್ರಜಾಪ್ರಭುತ್ವ ವ್ಯವಸ್ಥೆಯ ಮಟ್ಟವು 1990ರ ಸುಮಾರಿಗೆ ಕೊನೆಯದಾಗಿ ಕಂಡುಬಂದ ಮಟ್ಟಕ್ಕೆ ಕುಸಿದಿದೆ ಎಂದು ವರದಿ ಹೇಳುತ್ತದೆ.

ಈ ವರದಿಯು ವಿಶ್ವದ ಜನಸಂಖ್ಯೆಯ ಮೂರನೇ ಒಂದು ಭಾಗದಷ್ಟು ಜನರು ವಾಸಿಸುವ 25 ರಾಷ್ಟ್ರಗಳು ಆವರಿಸಿರುವ ವೇಗವರ್ಧಿತ ಸರ್ವಾಧೀಕರಣದ ಅಲೆಯನ್ನು ಸೂಚಿಸುತ್ತದೆ. ಅಂದರೆ 2.6 ಬಿಲಿಯನ್ ಜನರುˌ ಹಲವು ಜಿ 20 ರಾಷ್ಟ್ರಗಳಾದ ಬ್ರೆಜಿಲ್, ಭಾರತ, ಟರ್ಕಿ ಮತ್ತು ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ ಈ ದಿಕ್ಚ್ಯುತಿಯ ಭಾಗವಾಗಿದೆ ಎಂದು ವರದಿ ಹೇಳುತ್ತದೆ. ಜಾಗತಿಕ ಜನಸಂಖ್ಯೆಯ ಕೇವಲ 4 ಪ್ರತಿಶತದಷ್ಟು ಆತಿಥ್ಯ ವಹಿಸುವ ಪ್ರಜಾಪ್ರಭುತ್ವ ರಾಷ್ಟ್ರಗಳ ಸಂಖ್ಯೆ ಅರ್ಧದಷ್ಟು ಅಂದರೆ 16 ಕ್ಕೆ ಕುಸಿದಿದೆ ಎಂಬುದನ್ನು ಈ ವರದಿಯು ಗಮನಿಸಿದೆ.

ಈ ವರದಿಯಲ್ಲಿ ಇನ್ನೂ ಅನೇಕ ಸಂಗತಿಗಳ ಮೇಲೆ ಬೆಳಕು ಚೆಲ್ಲಲಾಗಿಲ್ಲ. ಕಳೆದ ಏಳು ವರ್ಷಗಳಲ್ಲಿ ಸ್ವಾಯತ ಮತ್ತು ತನಿಖಾ ಸಂಸ್ಥೆಗಳ ಗರಿಷ್ಠ ದುರುಪಯೋಗ ಮೋದಿ ಸರಕಾರ ಮಾಡಿದ್ದನ್ನು ನಾವು ಗಮನಿಸಬಹುದಾಗಿದೆ. ಯೋಜನಾ ಆಯೋಗ ಎನ್ನುವುದು ಈಗ ಅಕ್ಷರಶಃ ಮುಳುಗಿಹೋಗಿದೆ. ಚುನಾವಣಾ ಆಯೋಗವಂತೂ ಸರಕಾರದ ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ. ಇನ್ನು ರಿಜರ್ವ್ ಬ್ಯಾಂಕ್ ಆಫ್ ಇಂಡಿಯಾ ಯಾವ ಸ್ವಾತಂತ್ರವನ್ನೂ ಹೊಂದಿಲ್ಲ.

ಆರ್ಬಿಐನಲ್ಲಿ ಹಿಂದಿನ ಸರಕಾರ ಇಡಲಾಗಿದ್ದ ಚಿನ್ನ ಮತ್ತು ಆಪತ್ಕಾಲಿನ ಫಂಡು ಸರಕಾರ ಯಾವ ಅಳುಕು ಇಲ್ಲದೆ ಎತ್ತಿಕೊಂಡು ನುಂಗಿ ನೀರು ಕುಡಿದಿದೆ. ಸರಕಾರದ ಕಾರ್ಯಕ್ಷಮತೆ ಮತ್ತು ಆರ್ಥಿಕ ಸ್ಥಿತಿಗತಿಯ ಸರ್ವೇಕ್ಷಣಾ ವರದಿ ಮಾಡುತ್ತಿದ್ದ ಮಹಾಲೇಖಾಪಾಲಕರ ವರದಿ ಈಗ ಸ್ಥಗಿತಗೊಂಡಿದೆ.

ಮೊದಲೆಲ್ಲ ವಾರ್ಷಿಕ 40-50 ಸಿಎಜಿ ರಿಪೋರ್ಟ್ ಸಲ್ಲಿಕೆಯಾಗುತ್ತಿತ್ತು. ಈಗ ಅವುಗಳ ಸಂಖ್ಯೆ 10-15 ಕ್ಕೆ ಕುಸಿದಿದೆ. ಇನ್ನು ನ್ಯಾಯಾಂಗವಂತೂ ಸಂಪೂರ್ಣ ಅಪಾರದರ್ಶಕ ಸ್ಥಿತಿ ತಲುಪಿದೆ. ಸಾಕ್ಷ್ಯಗಳ ಬದಲಿಗೆ ನಂಬಿಕೆ ಆಧಾರದ ಮೇಲೆ ನ್ಯಾಯ ತೀರ್ಪುಗಳು ಹೊರಬೀಳುತ್ತಿವೆ.

ಮೋದಿ ಆಡಳಿತದ ಜನ ವಿರೋಧಿ ನೀತಿಗಳನ್ನು ಮುಚ್ಚಿಟ್ಟು ಮೋದಿ ಭಜನೆಯಲ್ಲಿ ಮಾಧ್ಯಮಗಳು ತೊಡಗಿಕೊಂಡಿವೆ. ಬಹುತೇಕ ಎಲ್ಲ ಬಗೆಯ ಮಾಧ್ಯಮಗಳ ಒಡೆತನ ಕಾರ್ಪೋರೇಟ್ ಕಳ್ಳೋದ್ಯಮಿಗಳ ಕೈಯಲ್ಲಿದ್ದರೆ, ಅವುಗಳ ಸಂಪಾದಕ ಸ್ಥಾನಮಾನವು ಅರ್ಬನ್ ನಾಜಿಗಳು ವಶಪಡಿಸಿಕೊಂಡು ಕುಳಿತಿದ್ದಾರೆ.

ಒಟ್ಟಾರೆ ಮೋದಿ ನೇತ್ರತ್ವದ ಹಿಂದುತ್ವ ಪ್ರತಿಪಾದಿಸುವ ಯಥಾಸ್ಥಿತಿವಾದಿˌ ಸಂಪ್ರದಾಯವಾದಿˌ ಮೂಲಭೂತವಾದಿ ಸಂಘ ಪರಿವಾರ ನಿಯಂತ್ರಿತ ಬಿಜೆಪಿ ಸರಕಾರದ ಆಡಳಿತ ಕಾಲವು ಮೆಲ್ಲನೆ ದೇಶದ ಸಂವಿಧಾನದ ಆಶಯಗಳನ್ನು ಗಾಳಿಗೆ ತೂಳಿ ಜನತಂತ್ರವನ್ನು ಮುಗಿಸಿಬಿಡುವ ಕಾರ್ಯ ಮಾಡುತ್ತಿರುವುದು ಗಮನಿಸಬಹುದಾಗಿದೆ. ಇದು ದೇಶ ಸರ್ವಾಧಿಕಾರಿ ಆಡಳಿತದತ್ತ ಜಾರುತ್ತಿರುವುದಕ್ಕೆ ಸಾಕ್ಷಿಯಾಗಿದೆ. ಇದನ್ನು ಅಂತರಾಷ್ಟ್ರೀಯ ಸಮುದಾಯ ಬಹಳ ಗಂಭೀರವಾಗಿ ಮತ್ತು ಆತಂಕದಿಂದ ಗಮನಿಸುತ್ತಿರುದುವು ನಾವು ನೋಡಬಹುದಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

Mysuru Dasara Elephants: ದಸರಾ ಗಜಪಡೆಯ ತೂಕ ಪರೀಕ್ಷೆ: ಶ್ರೀಕಂಠ ಭಾರೀ ಗಜ, ಏಕಲವ್ಯಕ್ಕೆ 2ನೇ ಸ್ಥಾನ; ಅಂಬಾರಿ ಆನೆ ಆಯ್ಕೆ ಇನ್ನೂ ಬಾಕಿ

Published

on

mysuru-dasara-elephants-srikanta-5790-kg-ekalavya-elephant-weight
Mysuru Dasara Elephants: 5,790 ಕೆಜಿ ತೂಕದ ಶ್ರೀಕಂಠ ನಂಬರ್ 1; ಗಜಪಡೆಯ ಆನೆಗಳ ತೂಕ ಎಷ್ಟು?

ಸುದ್ದಿದಿನ,ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಮೊದಲ ಹಂತದಲ್ಲಿ ಆಗಮಿಸಿರುವ 9 ಆನೆಗಳಿಗೆ ಸಾಂಪ್ರದಾಯಿಕ ತೂಕ ಪರೀಕ್ಷೆ ನಡೆಸಲಾಗಿದೆ. ಈ ಬಾರಿ ಮತ್ತಿಗೋಡು ಶಿಬಿರದ 57 ವರ್ಷದ ಶ್ರೀಕಂಠ 5,790 ಕೆಜಿ ತೂಕದೊಂದಿಗೆ ಗಜಪಡೆಯಲ್ಲೇ ಅತ್ಯಂತ ಭಾರವಾದ ಆನೆಯಾಗಿ ಮೊದಲ ಸ್ಥಾನ ಪಡೆದುಕೊಂಡಿದ್ದಾನೆ. ಭೀಮನಕಟ್ಟೆ ಶಿಬಿರದ 41 ವರ್ಷದ ಏಕಲವ್ಯ 5,600 ಕೆಜಿ ತೂಗಿ ಎರಡನೇ ಸ್ಥಾನದಲ್ಲಿದ್ದಾನೆ.

ನಗರದ ಧನ್ವಂತರಿ ರಸ್ತೆಯಲ್ಲಿರುವ ಎಲೆಕ್ಟ್ರಾನಿಕ್ ವೇ ಬ್ರಿಡ್ಜ್‌ನಲ್ಲಿ ಭಾನುವಾರ ಬೆಳಗ್ಗೆ ಎಲ್ಲ 9 ಆನೆಗಳ ತೂಕ ಪರೀಕ್ಷೆ ನಡೆಸಲಾಯಿತು. ಕಳೆದ ವರ್ಷ ಭೀಮ ಮತ್ತು ಅಭಿಮನ್ಯು ಕ್ರಮವಾಗಿ ಮೊದಲ ಎರಡು ಸ್ಥಾನದಲ್ಲಿದ್ದರು. ಆದರೆ ಈ ಬಾರಿ ಇವರಿಬ್ಬರನ್ನೂ ದಸರಾಗೆ ಕರೆತಂದಿಲ್ಲ. ಹೀಗಾಗಿ ಶ್ರೀಕಂಠನ ತೂಕವೇ ಈ ವರ್ಷದ ಗಜಪಡೆಯ ಗಮನ ಸೆಳೆದಿದೆ.

ಹೈಲೈಟ್ಸ್: 57 ವರ್ಷದ ಶ್ರೀಕಂಠನೇ ಗಜಪಡೆಯ ತೂಕದ ಬಾದ್‌ಷಾ

  • ಶ್ರೀಕಂಠ 5,790 ಕೆಜಿ ತೂಕದೊಂದಿಗೆ ಮೊದಲ ಸ್ಥಾನ
  • ಏಕಲವ್ಯ 5,600 ಕೆಜಿ ತೂಕದೊಂದಿಗೆ ಎರಡನೇ ಸ್ಥಾನ
  • ಮೊದಲ ಹಂತದಲ್ಲಿ ಒಟ್ಟು 9 ಆನೆಗಳಿಗೆ ತೂಕ ಪರೀಕ್ಷೆ
  • ಆನೆಗಳ ತೂಕದ ಆಧಾರದ ಮೇಲೆ ಆಹಾರ ಮತ್ತು ತಾಲೀಮು ನಿರ್ಧಾರ
  • ಅಂತಿಮ ತಾಲೀಮಿನ ಬಳಿಕವೇ ಚಿನ್ನದ ಅಂಬಾರಿ ಆನೆ ಆಯ್ಕೆ

http://Visit : www.suddidina.com

ಗಂಡಾನೆಗಳ ತೂಕ 5 ಸಾವಿರ ಕೆಜಿಗೂ ಅಧಿಕ

ಈ ಬಾರಿಯ ಮೊದಲ ಹಂತದ ಗಜಪಡೆಯ ವಿಶೇಷತೆಯೆಂದರೆ ಬಹುತೇಕ ಗಂಡಾನೆಗಳು 5 ಸಾವಿರ ಕೆಜಿಗೂ ಹೆಚ್ಚು ತೂಕ ಹೊಂದಿರುವುದು. ಆದರೆ ಆನೆಗಳ ತೂಕ ಹೆಚ್ಚಿಸುವುದೇ ಅರಣ್ಯ ಇಲಾಖೆಯ ಮುಖ್ಯ ಗುರಿಯಲ್ಲ. ಬದಲಿಗೆ ಅವುಗಳ ಆರೋಗ್ಯ, ದೈಹಿಕ ಸಾಮರ್ಥ್ಯ ಮತ್ತು ತಾಲೀಮಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.

ಡಿಸಿಎಫ್ ಡಾ. ಐ.ಬಿ. ಪ್ರಭುಗೌಡ ಅವರ ಪ್ರಕಾರ, ಆನೆಗಳ ತೂಕದ ಆಧಾರದ ಮೇಲೆ ಅವುಗಳಿಗೆ ನೀಡಬೇಕಾದ ಆಹಾರದ ಪ್ರಮಾಣ ಮತ್ತು ಪೌಷ್ಟಿಕ ಆಹಾರವನ್ನು ನಿರ್ಧರಿಸಲಾಗುತ್ತದೆ. ಪ್ರತಿಯೊಂದು ಆನೆಯ ದೈಹಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ತಾಲೀಮು ರೂಪಿಸಲಾಗುತ್ತದೆ.

9 ಆನೆಗಳ ತೂಕದ ಆಧಾರದಲ್ಲೇ ಆಹಾರ

ದಸರಾ ಗಜಪಡೆಯಲ್ಲಿರುವ ಆನೆಗಳ ಆರೋಗ್ಯ ಕಾಪಾಡುವುದು ಪ್ರಮುಖ ಆದ್ಯತೆಯಾಗಿದೆ. ತೂಕ ಪರೀಕ್ಷೆಯ ಮೂಲಕ ಆನೆಗಳ ದೈಹಿಕ ಸ್ಥಿತಿಯ ಬಗ್ಗೆ ಅಗತ್ಯ ಮಾಹಿತಿ ಪಡೆಯಲಾಗುತ್ತದೆ. ಅದರ ಆಧಾರದ ಮೇಲೆ ಪೌಷ್ಟಿಕ ಆಹಾರ, ದಿನನಿತ್ಯದ ಚಟುವಟಿಕೆ ಹಾಗೂ ತಾಲೀಮಿನಲ್ಲಿ ಅಗತ್ಯ ಬದಲಾವಣೆ ಮಾಡಲಾಗುತ್ತದೆ.

ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಈಗಿರುವ ಎಲ್ಲ ಆನೆಗಳೂ ಅಂಬಾರಿ ಹೊರುವ ಸಾಮರ್ಥ್ಯ ಹೊಂದಿವೆ. ಅನುಭವಿ ಆನೆಗಳಾಗಿರುವುದರಿಂದ ಅಂತಿಮ ತಾಲೀಮು ಅತ್ಯಂತ ಮಹತ್ವ ಪಡೆಯಲಿದೆ.

ಅಂಬಾರಿ ಆನೆ ಯಾರು? ಕುತೂಹಲ

ಈ ಬಾರಿಯ ದಸರಾ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುವ ಆನೆ ಯಾರು ಎಂಬ ಕುತೂಹಲ ಈಗಾಗಲೇ ಹೆಚ್ಚಾಗಿದೆ. ಕೇವಲ ತೂಕದ ಆಧಾರದ ಮೇಲೆ ಅಂಬಾರಿ ಆನೆಯನ್ನು ಆಯ್ಕೆ ಮಾಡುವುದಿಲ್ಲ. ಆನೆಯ ಆರೋಗ್ಯ, ಸಾಮರ್ಥ್ಯ, ಅನುಭವ, ತಾಲೀಮು ಮತ್ತು ಅಂತಿಮ ಹಂತದ ಪ್ರದರ್ಶನವನ್ನು ಪರಿಗಣಿಸಿ ಆಯ್ಕೆ ಮಾಡಲಾಗುತ್ತದೆ.

ಮೊದಲ ಹಂತದ ತಾಲೀಮು ಮುಗಿದ ಬಳಿಕ ನಡೆಯುವ ಅಂತಿಮ ತಾಲೀಮಿನ ನಂತರವೇ ಚಿನ್ನದ ಅಂಬಾರಿ ಹೊರುವ ಆನೆಯನ್ನು ಅಂತಿಮಗೊಳಿಸಲಾಗುತ್ತದೆ. ಹೀಗಾಗಿ ಶ್ರೀಕಂಠ ತೂಕದಲ್ಲಿ ನಂಬರ್‌ 1 ಆಗಿದ್ದರೂ, ಅಂಬಾರಿ ವಿಚಾರದಲ್ಲಿ ಅಂತಿಮ ನಿರ್ಧಾರ ಇನ್ನೂ ಬಾಕಿಯಿದೆ.

ಆನೆಗಳ ಬಳಿ ಸಾರ್ವಜನಿಕರಿಗೆ ನಿರ್ಬಂಧ

ದಸರಾ ಆನೆಗಳ ವೀಕ್ಷಣೆಗೆ ಯಾವುದೇ ಟಿಕೆಟ್‌ ವ್ಯವಸ್ಥೆ ಮಾಡಿಲ್ಲ ಎಂದು ಡಿಸಿಎಫ್ ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರು ಆನೆಗಳ ಬಳಿ ತೆರಳದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ದಸರಾ ಆನೆಗಳ ಕುರಿತು ಸುಳ್ಳು ಮಾಹಿತಿ ಹರಡಿದರೆ ಕ್ರಮ ಕೈಗೊಳ್ಳುವುದಾಗಿಯೂ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.

“ಆನೆಗಳಿಗೆ ಹಂತ ಹಂತವಾಗಿ ತಾಲೀಮು ಮಾಡಲಾಗುತ್ತದೆ. ಸದ್ಯಕ್ಕೆ ಎಲ್ಲ ಆನೆಗಳ ಆರೋಗ್ಯ ಚೆನ್ನಾಗಿದೆ. ಅಂತಿಮ ಹಂತದ ತಾಲೀಮಿನ ಬಳಿಕ ಅಂಬಾರಿ ಹೊರುವ ಆನೆ ಆಯ್ಕೆ ಮಾಡಲಾಗುವುದು.”

                                                   – ಡಾ.ಐ.ಬಿ.ಪ್ರಭುಗೌಡ, ಡಿಸಿಎಫ್‌ 

ದಸರಾ ಗಜಪಡೆಯ ತೂಕದ ವಿವರ

  • ಶ್ರೀಕಂಠ: 5,790 ಕೆಜಿ
  • ಏಕಲವ್ಯ: 5,600 ಕೆಜಿ
  • ಧನಂಜಯ: 5,530 ಕೆಜಿ
  • ಮಹೇಂದ್ರ: 5,490 ಕೆಜಿ
  • ಪ್ರಶಾಂತ: 5,205 ಕೆಜಿ
  • ಗೋಪಿ: 5,170 ಕೆಜಿ
  • ಶ್ರೀರಾಮ: 4,820 ಕೆಜಿ
  • ಲಕ್ಷ್ಮೀ: 3,990 ಕೆಜಿ
  • ಕಾವೇರಿ: 3,075 ಕೆಜಿ
Continue Reading

ದಿನದ ಸುದ್ದಿ

ಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್‌ಮೆಂಟ್‌ಗೆ ‘ಡೆಮಾಲಿಷನ್’ ಶುರು!

Published

on

bengaluru-koodlugate-snn-raj-eternia-18-floor-building-demolition
ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್‌ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ

ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್‌ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ


ಸುದ್ದಿದಿನ,ಬೆಂಗಳೂರು:
ನಗರದ ಪ್ರಮುಖ ವಸತಿ ಯೋಜನೆಗಳಲ್ಲಿ ಒಂದಾಗಿರುವ ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ಎಸ್ಟೇಟ್‌ ಒಡೆತನದ 18 ಅಂತಸ್ತಿನ ಕಟ್ಟಡದ ತೆರವು ಕಾರ್ಯಾಚರಣೆ ಶುಕ್ರವಾರದಿಂದ ಆರಂಭವಾಗಿದೆ. ಬೆಂಗಳೂರಿನ ಗಮನ ಸೆಳೆದಿದ್ದ ಈ ಪ್ರಕರಣದಲ್ಲಿ ಎಸ್‌ಎನ್‌ಎನ್‌ ರಾಜ್‌ ಕಾರ್ಪ್‌ ಸಂಸ್ಥೆಯು ಎಚ್‌ಎಸ್‌ಆರ್‌ ಲೇಔಟ್‌ನಲ್ಲಿರುವ ತನ್ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಪ್ರೀಮಿಯಂ ವಸತಿ ಸಂಕೀರ್ಣದ 49 ಅಪಾರ್ಟ್‌ಮೆಂಟ್‌ ಘಟಕಗಳನ್ನು ನಿಯಂತ್ರಿತ ರೀತಿಯಲ್ಲಿ ಕೆಡವುವ ಪ್ರಕ್ರಿಯೆಗೆ ಚಾಲನೆ ನೀಡಿದೆ.

ಒಟ್ಟು 972 ಮನೆಗಳನ್ನು ಹೊಂದಿರುವ ಈ ವಸತಿ ಯೋಜನೆಯಲ್ಲಿನ 49 ಘಟಕಗಳ ತೆರವು ಈಗ ಭಾರಿ ಕುತೂಹಲ ಮೂಡಿಸಿದೆ. ಕಟ್ಟಡದ ಸುರಕ್ಷತೆ ಕುರಿತು ತಾಂತ್ರಿಕ ಪರಿಶೀಲನೆ ನಡೆಸಿದ ಬಳಿಕ ಈ ಕ್ರಮಕ್ಕೆ ಮುಂದಾಗಲಾಗಿದೆ.

₹200 ಕೋಟಿ ವೆಚ್ಚದ ಕಟ್ಟಡದಲ್ಲಿ ದೋಷ ಪತ್ತೆ

ಸುಮಾರು ₹200 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕಟ್ಟಡ ಇದಾಗಿದೆ. ತಾಂತ್ರಿಕ ಪರಿಶೀಲನೆ ವೇಳೆ ಕಟ್ಟಡದ ರಚನೆಯಲ್ಲಿ ಹಾನಿಯಾಗಿರುವುದು ಹಾಗೂ ಕಟ್ಟಡ ವಾಲಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ನಿವಾಸಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಟ್ಟಡದ ನಿರ್ದಿಷ್ಟ ಭಾಗಗಳನ್ನು ತೆರವುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.

ತೆರವು ಕಾರ್ಯಾಚರಣೆಯನ್ನು ಯಾವುದೇ ರೀತಿಯ ಆತಂಕ ಅಥವಾ ಅಪಾಯ ಉಂಟಾಗದಂತೆ ಅತ್ಯಂತ ನಿಯಂತ್ರಿತ ರೀತಿಯಲ್ಲಿ ನಡೆಸಲಾಗುತ್ತಿದೆ. ಕಟ್ಟಡ ತೆರವು ಸಂದರ್ಭದಲ್ಲಿ ಸುತ್ತಮುತ್ತಲಿನ ಪ್ರದೇಶಕ್ಕೂ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ

ತೆರವು ಕಾರ್ಯವನ್ನು ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ ನೀಡಲಾಗಿದೆ ಎಂದು ಎಸ್‌ಎನ್‌ಎನ್‌ ಅಪಾರ್ಟ್‌ಮೆಂಟ್‌ ನಿರ್ದೇಶಕ ಅನೂಜ್‌ ತಿಳಿಸಿದ್ದಾರೆ. ಫ್ಲ್ಯಾಟ್‌ಗಳನ್ನು ಹಂತ ಹಂತವಾಗಿ ತೆರವುಗೊಳಿಸುವ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಈ ಕುರಿತು ಮಾತನಾಡಿರುವ ಅವರು, ಬಿಬಿಎಂಪಿಗೂ ಸಂಸ್ಥೆಯ ವತಿಯಿಂದ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ. ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ತೆರವು ಕಾರ್ಯ ನಡೆಸಲಾಗುವುದು ಎಂಬ ಭರವಸೆಯನ್ನೂ ನೀಡಿದ್ದಾರೆ.

ಅದೇ ಜಾಗದಲ್ಲಿ ಹೊಸ ಅಪಾರ್ಟ್‌ಮೆಂಟ್‌ ನಿರ್ಮಾಣ

ಪ್ರಸ್ತುತ ಕಟ್ಟಡದ ತೆರವು ಕಾರ್ಯ ಪೂರ್ಣಗೊಂಡ ಬಳಿಕ ಅದೇ ಜಾಗದಲ್ಲಿ ಹೊಸ ಅಪಾರ್ಟ್‌ಮೆಂಟ್‌ ನಿರ್ಮಿಸುವ ಯೋಜನೆ ಇದೆ ಎಂದು ಸಂಸ್ಥೆ ತಿಳಿಸಿದೆ. ಈಗಾಗಲೇ ಕೆಲವು ಫ್ಲ್ಯಾಟ್‌ಗಳು ಮುಂಗಡವಾಗಿ ಬುಕ್‌ ಆಗಿದ್ದ ಹಿನ್ನೆಲೆಯಲ್ಲಿ ಖರೀದಿದಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವುದಾಗಿ ಸಂಸ್ಥೆ ಹೇಳಿದೆ.

ಯಾರಿಗೂ ತೊಂದರೆಯಾಗದಂತೆ ಸಂಪೂರ್ಣ ಪ್ರಕ್ರಿಯೆ ನಡೆಸುವುದಾಗಿ ಸ್ಪಷ್ಟಪಡಿಸಿರುವ ಸಂಸ್ಥೆ, ನಿವಾಸಿಗಳು ಹಾಗೂ ಖರೀದಿದಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮ ಕೈಗೊಳ್ಳಲಿದೆ.

Continue Reading

ದಿನದ ಸುದ್ದಿ

ಪಾಕ್‌ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್‌ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ

Published

on

ಪಾಕ್‌ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್‌ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ

ಸುದ್ದಿದಿನ,ಜಮ್ಮುಕಾಶ್ಮೀರ: ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಮತ್ತೆ ಡ್ರೋನ್ ಹಾರಾಟದ ಆತಂಕ ಎದುರಾಗಿದೆ. ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್‌ನಲ್ಲಿ ಪಾಕಿಸ್ತಾನ ಮೂಲದ್ದೆಂದು ಶಂಕಿಸಲಾದ ಡ್ರೋನ್‌ವೊಂದು ಕಾಣಿಸಿಕೊಂಡಿರುವುದು ಭದ್ರತಾ ಪಡೆಗಳನ್ನು ಅಲರ್ಟ್ ಮಾಡಿದೆ. ಗಡಿಯಾಚೆಯಿಂದ ನಡೆಯಬಹುದಾದ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳನ್ನು ತಡೆಯಲು ಸೇನೆ ಹಾಗೂ ಭದ್ರತಾ ಪಡೆಗಳು ನಿಗಾ ಮತ್ತಷ್ಟು ಬಿಗಿಗೊಳಿಸಿವೆ.

ಹೈಲೈಟ್ಸ್

  • ಪೂಂಚ್‌ನ ಮೆಂಧರ್ ಸೆಕ್ಟರ್‌ನಲ್ಲಿ ಶಂಕಿತ ಡ್ರೋನ್ ಹಾರಾಟ
  • 🇵🇰 ಡ್ರೋನ್ ಪಾಕಿಸ್ತಾನದ ದಿಕ್ಕಿಗೆ ವಾಪಸ್ ತೆರಳಿದ ಶಂಕೆ
  • ಡ್ರೋನ್‌ನಿಂದ ವಸ್ತುಗಳನ್ನು ಕೆಳಗೆ ಹಾಕಲಾಗಿದೆಯೇ ಎಂದು ಶೋಧ
  • ಉಧಂಪುರ, ಕಥುವಾ, ರಾಜೌರಿಯಲ್ಲಿ ಜಂಟಿ ಸರ್ಚ್ ಆಪರೇಷನ್
  • ಶಸ್ತ್ರಸಜ್ಜಿತ ವ್ಯಕ್ತಿಗಳ ಮಾಹಿತಿ ಹಿನ್ನೆಲೆ ರಾಜೌರಿಯಲ್ಲೂ ಹೈ ಅಲರ್ಟ್

http://Visit : www.suddidina.com

ಬೆಹ್ರೂಟಿ ಗ್ರಾಮದ ಬಳಿ ಕಾಣಿಸಿಕೊಂಡ ಶಂಕಿತ ಡ್ರೋನ್

ಶುಕ್ರವಾರ ಸಂಜೆ ಬಾಲಕೋಟೆ ಪ್ರದೇಶದ ಬೆಹ್ರೂಟಿ ಗ್ರಾಮದ ಸಮೀಪ ಆಕಾಶದಲ್ಲಿ ಶಂಕಿತ ಡ್ರೋನ್ ಹಾರಾಟ ನಡೆಸಿರುವುದು ಸ್ಥಳೀಯರ ಹಾಗೂ ಭದ್ರತಾ ಪಡೆಗಳ ಗಮನಕ್ಕೆ ಬಂದಿದೆ. ಬಳಿಕ ಅದು ಮಂಗಲ್ನಾರ್-ದಬ್ರೋಟ್ ಪ್ರದೇಶದತ್ತ, ಅಂದರೆ ಗಡಿ ಪ್ರದೇಶದ ಸಮೀಪಕ್ಕೆ ತೆರಳಿ ಪಾಕಿಸ್ತಾನದ ದಿಕ್ಕಿನಲ್ಲಿ ವಾಪಸ್ ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡ್ರೋನ್ ಕಾಣಿಸಿಕೊಂಡ ಮಾಹಿತಿ ಸಿಗುತ್ತಿದ್ದಂತೆ LoC ವ್ಯಾಪ್ತಿಯಲ್ಲಿ ಭದ್ರತಾ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ಬೆಳಗ್ಗೆಯಿಂದಲೇ ಸರ್ಚ್ ಆಪರೇಷನ್ ಆರಂಭಿಸಲಾಗಿದ್ದು, ಡ್ರೋನ್ ಮೂಲಕ ಯಾವುದೇ ವಸ್ತು, ಶಸ್ತ್ರಾಸ್ತ್ರ ಅಥವಾ ಅನುಮಾನಾಸ್ಪದ ಸಾಮಗ್ರಿಗಳನ್ನು ಕೆಳಗೆ ಇಳಿಸಲಾಗಿದೆಯೇ ಎಂಬುದರ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ.

3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಶೋಧ

ಡ್ರೋನ್ ಆತಂಕದ ನಡುವೆಯೇ ಜಮ್ಮು-ಕಾಶ್ಮೀರದ ಉಧಂಪುರ, ಕಥುವಾ ಮತ್ತು ರಾಜೌರಿ ಜಿಲ್ಲೆಗಳ ವಿಶಾಲ ಅರಣ್ಯ ಪ್ರದೇಶಗಳಲ್ಲೂ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ತೀವ್ರಗೊಳಿಸಿವೆ.

ಉಧಂಪುರ-ಕಥುವಾ ಅರಣ್ಯ ಪ್ರದೇಶದ ಖುಬನ್, ನಾಗೈನ್, ಖ್ಟ್ರೈಲ್, ಗೋಡು ಫಲಾಲ್, ಪದೇತಾರ್, ಚೋರ್ ಮೊಟ್ಟು, ಕಿಯಾ, ಖೇಬಾ, ಭೇದ್, ಮಾರ್ತಾ ಹಾಗೂ ಜೋಫರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪೊಲೀಸರು, ಸೇನೆ ಮತ್ತು ಅರೆಸೇನಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ.

ರಾಜೌರಿಯಲ್ಲಿ ಶಸ್ತ್ರಸಜ್ಜಿತರ ಶಂಕೆ

ರಾಜೌರಿ ಜಿಲ್ಲೆಯ ಗೈಬಾಸ್, ಮಿಥಿಯಾನಿ, ಮೊಗ್ಲಾ ಮತ್ತು ನಾರ್ಲಾ ಪ್ರದೇಶಗಳಲ್ಲೂ ಪ್ರತ್ಯೇಕ ಸರ್ಚ್ ಆಪರೇಷನ್ ಕೈಗೊಳ್ಳಲಾಗಿದೆ. ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳು ಸಂಚರಿಸುತ್ತಿರುವುದನ್ನು ಗ್ರಾಮಸ್ಥರು ಗಮನಿಸಿ ಭದ್ರತಾ ಪಡೆಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಮಾಹಿತಿ ಆಧರಿಸಿ ಭದ್ರತಾ ಪಡೆಗಳು ವ್ಯಾಪಕ ಶೋಧ ನಡೆಸಿದರೂ, ಇದುವರೆಗೆ ಯಾವುದೇ ಶಂಕಿತ ವ್ಯಕ್ತಿಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಡಿಯಲ್ಲಿ ಹೆಚ್ಚಿದ ಕಣ್ಗಾವಲು

ಡ್ರೋನ್ ಹಾರಾಟ ಹಾಗೂ ಅರಣ್ಯ ಪ್ರದೇಶಗಳಲ್ಲಿ ಶಂಕಿತ ವ್ಯಕ್ತಿಗಳ ಚಲನವಲನದ ಮಾಹಿತಿ ಹಿನ್ನೆಲೆಯಲ್ಲಿ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೂ ತಕ್ಷಣ ಮಾಹಿತಿ ನೀಡುವಂತೆ ಸ್ಥಳೀಯರಿಗೂ ಸೂಚನೆ ನೀಡಲಾಗಿದೆ.

ಪ್ರಸ್ತುತ ಕಾರ್ಯಾಚರಣೆಯ ಪ್ರಮುಖ ಉದ್ದೇಶ ಗಡಿಯಾಚೆಯಿಂದ ಸಂಭವಿಸಬಹುದಾದ ಒಳನುಸುಳುವಿಕೆ ಅಥವಾ ಅನುಮಾನಾಸ್ಪದ ಸಾಗಾಟವನ್ನು ತಡೆಯುವುದು ಮತ್ತು ಪ್ರದೇಶದಲ್ಲಿ ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದಾಗಿದೆ.

Continue Reading

Trending