Connect with us

ದಿನದ ಸುದ್ದಿ

ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕಾಗಿ ಮೇ 12ರಿಂದ ಆನ್‍ಲೈನ್ ಪಾಠ; ಲಾಕ್‍ಡೌನ್ ನಂತರ ಸ್ನಾತಕೋತ್ತರ ಪದವಿ ಪರೀಕ್ಷೆ: ಪ್ರೊ.ಹಲಸೆ

Published

on

ಸುದ್ದಿದಿನ,ದಾವಣಗೆರೆ : ದಾವಣಗೆರೆ ವಿಶ್ವವಿದ್ಯಾನಿಲಯ ವ್ಯಾಪ್ತಿಯ ಶಿವಗಂಗೋತ್ರಿ ಆವರಣ, ಚಿತ್ರದುರ್ಗದ ಸ್ನಾತಕೋತ್ತರ ಸೇರಿದಂತೆ ಎಲ್ಲ ಸ್ನಾತಕೋತ್ತರ ಅಧ್ಯಯನ ಕೇಂದ್ರಗಳಲ್ಲಿ ಮೇ 12ರಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಆನ್‍ಲೈನ್ ಪಾಠಗಳು ನಡೆಯಲಿವೆ ಎಂದು ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ತಿಳಿಸಿದ್ದಾರೆ.

ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರ ಜೊತೆ ಸೋಮವಾರ ಆನ್‍ಲೈನ್‍ನಲ್ಲಿ ಸಭೆ ನಡೆಸಿದ ಕುಲಪತಿ ಹಲಸೆ ಅವರು, ಕೋವಿಡ್ ಕಾರಣಕ್ಕಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ತೊಂದರೆ ಆಗಬಾರದು ಎಂಬ ವಿಚಾರವನ್ನು ಗಮನದಲ್ಲಿ ಇಟ್ಟುಕೊಂಡು ಎರಡು ಮತ್ತು ನಾಲ್ಕನೇ ಸೆಮಿಸ್ಟರ್‍ಗೆ ಆನ್‍ಲೈನ್ ತರಗತಿ ಮುಂದುವರಿಸುವುದು ಅನಿವಾರ್ಯ. ಈ ನಿಟ್ಟಿನಲ್ಲಿ ಎಲ್ಲ ಪ್ರಾಧ್ಯಾಪಕರು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.

ಒಂದು ಮತ್ತು ಮೂರನೇ ಸೆಮಿಸ್ಟರ್‍ಗೆ ಪರೀಕ್ಷೆ ನಡೆಯಬೇಕಿತ್ತು. ಆದರೆ ಕೋವಿಡ್-19 ಪ್ರಕರಣಗಳು ಹೆಚ್ಚಿದ್ದರಿಂದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಆರೋಗ್ಯದ ರಕ್ಷಣೆಯ ಉದ್ದೇಶದಿಂದ ಪರೀಕ್ಷೆ ಮುಂದೂಡಲಾಯಿತು. ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಂದ ನಂತರ ಮತ್ತು ಸರ್ಕಾರದ ಸೂಚನೆಯನ್ನು ಆಧರಿಸಿ ಪಠ್ಯ ಮತ್ತು ಪ್ರಾಯೋಗಿಕ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ | ದಾವಣಗೆರೆ | ಇಂದು-ನಾಳೆ ಎಂ.ಪಿ.ರೇಣುಕಾಚಾರ್ಯರ ಜಿಲ್ಲಾ ಪ್ರವಾಸ

ಬಹುತೇಕ ಪ್ರಾಧ್ಯಾಪಕರು ಕೋವಿಡ್-19 ನಿಯಂತ್ರಣಕ್ಕಾಗಿ ಜಿಲ್ಲಾಡಳಿತದ ನಿಯೋಜನೆ ಮನವಿ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆನ್‍ಲೈನ್ ತರಗತಿ ನಡೆಸಲು ಅವರಿಗೆ ತೊಂದರೆ ಆಗಲಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಅವರನ್ನು ಕೋವಿಡ್ ಕರ್ತವ್ಯದಿಂದ ಬಿಡುಗಡೆ ಮಾಡುವಂತೆ ಪ್ರಸ್ತಾವ ಸಲ್ಲಿಸಲಾಗುವುದು ಎಂದು ಭರವಸೆ ನೀಡಿದರು.

ಕೋವಿಡ್-19ರ ಎರಡನೇ ಅಲೆ ತೀವ್ರವಾಗಿದೆ. ಈ ಸಂದರ್ಭದಲ್ಲಿ ಸರ್ಕಾರದ ಸೂಚನೆಗಳನ್ನು ಕೇಂದ್ರ ಸ್ಥಳದಲ್ಲಿದ್ದು ಎಲ್ಲ ಪ್ರಾಧ್ಯಾಪಕರೂ ಪಾಲಿಸುವುದು ಕಡ್ಡಾಯ. ಆದ್ದರಿಂದ ವಿಶ್ವವಿದ್ಯಾನಿಲಯ ವ್ಯಾಪ್ತಿಯ ಯಾವ ಪ್ರಾಧ್ಯಾಪಕರೂ ಅನುಮತಿ ಇಲ್ಲದೆ ಕೇಂದ್ರ ಸ್ಥಳವನ್ನು ಬಿಟ್ಟು ಹೊರಗೆ ಹೋಗಬಾರದು. ತಪ್ಪಿದಲ್ಲಿ ಕಾನೂನು ರೀತಿ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಲಿದೆ ಎಂದು ಸೂಚಿಸಿದರು.

ವಿಶ್ವವಿದ್ಯಾನಿಲಯ ಮತ್ತು ಸಂಲಗ್ನ ಕಾಲೇಜುಗಳ ಎಲ್ಲ ಪ್ರಾಧ್ಯಾಪಕರು ಕೋವಿಡ್ ಸಂದರ್ಭದಲ್ಲಿ ತಮ್ಮ ಹಾಗೂ ವಿದ್ಯಾರ್ಥಿಗಳ ಸಂಚಾರ, ಆರೋಗ್ಯದ ಕುರಿತು ಟ್ರ್ಯಾಕ್ ವರದಿಯನ್ನು ಸಲ್ಲಿಸಬೇಕು. ಪ್ರತಿ ವಾರವೂ ವರದಿಯನ್ನು ವಿಭಾಗದ ಮುಖ್ಯಸ್ಥರ ಮೂಲಕ ಕುಲಸಚಿವರಿಗೆ ತಲುಪಿಸಬೇಕು ಎಂದು ಕುಲಪತಿ ಪ್ರೊ. ಹಲಸೆ ತಿಳಿಸಿದರು.

ದಾವಣಗೆರೆ ವಿಶ್ವವಿದ್ಯಾನಿಲಯದ ವಿವಿಧ ವಿಭಾಗಗಳಲ್ಲಿ ಪಿಎಚ್.ಡಿ ಪದವಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಮೇ. 31 ರವರೆಗೆ ವಿಸ್ತರಿಸಿದ್ದು, ಅರ್ಜಿ ಸಲ್ಲಿಸಲು ಬ್ಯಾಂಕ್ ಡಿಡಿ ತೆಗೆಸಲು ಕಷ್ಟವಾಗುತ್ತಿದೆ ಎಂಬ ಆಕ್ಷೇಪಗಳನ್ನು ಗಮನಿಸಿ, ಆನ್‍ಲೈನ್‍ನಲ್ಲಿ ಹಣ ಪಾವತಿಸಿ, ರಸೀದಿಯನ್ನು ಅರ್ಜಿ ಜೊತೆಗೆ ಲಗತ್ತಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ಕುಲಸಚಿವೆ ಪ್ರೊ. ಗಾಯತ್ರಿ ದೇವರಾಜ ಸ್ವಾಗತಿಸಿದರು. ಕುಲಸಚಿವೆ ಪ್ರೊ. ಎಚ್.ಎಸ್. ಅನಿತಾ, ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ನಕಲಿ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 6 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಟಿ. ಸೋಮ್ಲನಾಯ್ಕ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 2023-24 ಮತ್ತು 2024-25ನೇ ಸಾಲಿನ ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬAಧಿಸಿದ ಕಾಮಗಾರಿಗಳಿಗೆ ಸಂಬAಧಿಸಿದAತೆ ಹೊನ್ನಾಳಿ ಉಪವಿಭಾಗದ ಅಡಿಯಲ್ಲಿ ನಡೆದಿರುವ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ನಾಲ್ಕು ಹಂತದ ತುರ್ತು ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಸಂಪೂರ್ಣ ಕಡತವನ್ನು ಪಡೆದು ಪರಿಶೀಲನೆ ಮಾಡಿದಾಗ, ಇಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಲೋಪಗಳು ಕಂಡುಬAದಿರುತ್ತವೆ. ಅಂತಹ ಪ್ರಮುಖ ಲೋಪಗಳನ್ನು ಉಲ್ಲೇಖಿಸಿ ಸೂಕ್ತ ತನಿಖೆಗೆ ಒಳಪಡಿಸುವಂತೆ ದಿನಾಂಕ: 01-12-2025 ರಂದು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರಿಗೆ ದೂರು ನೀಡಲಾಗಿತ್ತು.

ಈ ದೂರು ಅರ್ಜಿಗೆ ಸಂಬಂಧಿಸಿದಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು 2 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ದಿನಾಂಕ: 27-01-2026 ರಂದು ಜ್ಞಾಪನವನ್ನು ನೀಡಲಾಗಿರುತ್ತದೆ. ಆದರೆ ಜ್ಞಾಪನ ನೀಡಿ 6 ತಿಂಗಳು ಕಳೆಯುತ್ತ ಬಂದರೂ ಈ ದೂರು ಅರ್ಜಿಗೆ ಸಂಬAಧಿಸಿದAತೆ ಕಾರ್ಯಪಾಲಕ ಅಭಿಯಂತರರು (ಪ್ರಭಾರ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿರುತ್ತಾರೆ.

ಈ ದೂರು ಅರ್ಜಿಯನ್ನು ತನಿಖೆಗೆ ಒಳಪಡಿಸುವಲ್ಲಿ ತೋರಿದ ನಿರ್ಲಕ್ಷö್ಯಕ್ಕೆ ಪ್ರಮುಖ ಕಾರಣವೆಂದರೆ, ಹೊನ್ನಾಳಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರೇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯನಿರ್ವಹಿಸಿರುತ್ತಾರೆ. ಈ ಕಾರಣಕ್ಕಾಗಿ ತನ್ನ ಮೇಲಿನ ಆರೋಪವನ್ನು ತನಿಖೆಗೆ ಒಳಪಡಿಸುವಲ್ಲಿ ನಿರ್ಲಕ್ಷö್ಯ ತೋರಿ, ಈ ದೂರು ಅರ್ಜಿಯನ್ನು ಮೂಲೆ ಗುಂಪಾಗಿಸಿರುತ್ತಾರೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಸೋಮ್ಲನಾಯ್ಕ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ

Published

on

ಸುದ್ದಿದಿನಡೆಸ್ಕ್:ಜಪಾನ್‌ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿತು. ಅವರನ್ನು ಬಂಧಿಸಿ 19 ದಿನ ಜೈಲಿನಲ್ಲಿ ಇರಿಸಲಾಯಿತು.

ತಮ್ಮ ಬಂಧನ ಸರಿಯಲ್ಲ ಎಂದು ತನಕಾ ಮಾನವ ಹಕ್ಕುಗಳ ಆಯೋಗದ ಮೊರೆ ಹೋದರು. ವೀಸಾ ಅವಧಿ ಮುಗಿಯುತ್ತಿದ್ದಂತೆ, ಪ್ರಕರಣ ಮುಗಿಯುವವರೆಗೂ ಭಾರತದಲ್ಲೇ ಇರಲು ವಿಚಿತ್ರ ಪ್ರಯತ್ನವೂ ಮಾಡಿದರು. ಪೊಲೀಸ್ ಠಾಣೆಯಿಂದ ಪ್ಲಾಸ್ಟಿಕ್ ಕುರ್ಚಿಯೊಂದನ್ನು ತೆಗೆದುಕೊಂಡು ಹೋಗಿ, ಮತ್ತೆ ಬಂಧನಕ್ಕೊಳಗಾಗಲು ಪ್ರಯತ್ನಿಸಿದರು!

ಅದು ಆಗದೇ ಇದ್ದಾಗ ಜಪಾನ್ ಗೆ ಮರಳಿ . ಅಲ್ಲಿಂದಲೇ ತಮ್ಮ ಹೋರಾಟ ಮುಂದುವರಿಸಿದ ತನಕಾ ಅವರ ಹೋರಾಟಕ್ಕೆ ಜಯ ಸಿಕ್ಕಿದೆ ಸಿಕ್ಕಿದೆ. ಕರ್ನಾಟಕದಿಂದ 75,000 ಪರಿಹಾರವನ್ನು ಪಡೆದುಕೊಂಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಡಾಲಿಯ ಕನಸು ಒಂದೇ ಹೀರೋ ಆಗೋದು

Published

on

ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು!

ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು ಗುರಿಯ ಮೇಲೆ ಸಂಪೂರ್ಣ ಗಮನ ಹೊಂದಿದ್ದವರು. ಯಾವುದೇ ಡೈವರ್ಷನ್ ಇಲ್ಲ, ಸಿನಿಮಾ ಕನಸಿನ ಕಡೆ ಮಾತ್ರ ಗಮನ!

ಇಂದು ಬಹುಭಾಷಾ ನಟನಾಗಿ ದೊಡ್ಡ ಎತ್ತರಕ್ಕೇರಿದ್ದರೂ, ತಮ್ಮ ಬೇರುಗಳನ್ನು ಅವರು ಮರೆತಿಲ್ಲ. ಇಂದಿಗೂ ತಮ್ಮ ಹಳೆಯ ಸ್ನೇಹಿತರ ಜೊತೆಗೂಡಿ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿರ್ಮಾಪಕರಾಗಿಯೂ ಗುರುತಿಸಿಕೊಂಡಿರುವ ಅವರು, ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ.

ಅಂದಿನ ಅದೇ ಸರಳತೆ, ಅದೇ ನಡವಳಿಕೆ ಇಂದಿಗೂ ಇದೆ!

ಒಬ್ಬ ಕಾಲೇಜು ಯುವಕನಿಂದ ಬಹುಭಾಷಾ ತಾರೆಯವರೆಗೆ—ಎಂತಹ ಸ್ಪೂರ್ತಿದಾಯಕ ಪಯಣ! ಹ್ಯಾಪಿ ಬರ್ತ್ಡೇ ಡಾಲಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending