Connect with us

ರಾಜಕೀಯ

ಗುಜರಾತ್ ಗೆ ಒಂದು ಸಾವಿರ ಕೋಟಿ ಪರಿಹಾರ ಘೋಷಣೆ ಮಾಡಿರುವ ಪ್ರಧಾನಿ ಚಂಡಮಾರುತದಿಂದ ತತ್ತರಿಸಿರುವ ಕರ್ನಾಟಕಕ್ಕೆ ನಯಾಪೈಸೆ ಕೊಟ್ಟಿಲ್ಲ, ನಮ್ಮ‌ ಮೇಲೇಕೆ ಮಲತಾಯಿ ಧೋರಣೆ..? : ಸಿದ್ದರಾಮಯ್ಯ ಕಿಡಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಬೆಂಗಳೂರು: ಕೊರೊನಾದಿಂದ ರಾಜ್ಯದಲ್ಲಿ ಉಂಟಾಗಿರುವ ಪರಿಸ್ಥಿತಿ ಮತ್ತು ಸೋಂಕಿತರ ಪ್ರಾಣರಕ್ಷಣೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲು ತಡೆಯೊಡ್ಡಿರುವ ಸರ್ಕಾರದ ವಿರುದ್ಧ ಮುಂಬರುವ ವಿಧಾನ ಮಂಡಲದ ಅಧಿವೇಶನದಲ್ಲಿ ಹಕ್ಕುಚ್ಯುತಿ ನಿರ್ಣಯ ಮಂಡಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷದ ನಾಯಕ ಎಂದರೆ ಅದು ಸಾಂವಿಧಾನಿಕ ಹುದ್ದೆ. ಹೀಗಾಗಿ ಮಾಹಿತಿ ಸಂಗ್ರಹಿಸಲು ಅನುಮತಿ ನಿರಾಕರಿಸಿರುವುದರಿಂದ ಹಕ್ಕುಚ್ಯುತಿ ಆಗಿದೆ.2009ರಲ್ಲಿಯೂ ಸರ್ಕಾರ ಇದೇ ನಿಲುವು ಅನುಸರಿಸಿತ್ತು. ಸರ್ಕಾರದ ಹುಳುಕು ಹೊರ ಬರುತ್ತದೆ ಎಂಬ ಕಾರಣಕ್ಕೆ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲು ಅನುಮತಿ ನೀಡುತ್ತಿಲ್ಲ ಎಂದು ಆಕ್ರೊಶ ವ್ಯಕ್ತಪಡಿಸಿದರು.

ಕೊರೊನಾ ನಿಯಂತ್ರಣ ಮತ್ತು ಸೋಂಕಿತರ ಪ್ರಾಣ ರಕ್ಷಣೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರುಪಯುಕ್ತ ಎಂಬುದು ಸಾಬೀತಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಜನತೆ ಸರ್ಕಾರಕ್ಕೆ ಹಾಗೂ ಸಿಎಂ ಅವರಿಗೆ ಶಾಪ ಹಾಕುತ್ತಿರುವುದೇ ಇದಕ್ಕೆ ಸಾಕ್ಷಿ. 3/6

ಇದನ್ನೂ ಓದಿ | ಜೂನ್ 7 ರವರೆಗೆ ಮತ್ತೆ ಲಾಕ್ ಡೌನ್ ; ಬ್ಲ್ಯಾಕ್ ಫಂಗಸ್ ಸೋಂಕಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ : ಸಿಎಂ ಯಡಿಯೂರಪ್ಪ

ಕೇಂದ್ರ ಹಾಗೂ ರಾಜ್ಯ ಸರ್ಕಾರದ ವೈಫಲ್ಯದಿಂದ ಸಾವಿರಾರು ಜನ ಸಾಯುತ್ತಿದ್ದಾರೆ. ಸತ್ಯ ಹೇಳಿದರೆ ಕೇಸು ದಾಖಲಿಸುವ, ಬಂಧಿಸುವ ಕೆಲಸವನ್ನು ಸರ್ಕಾರಗಳು ಮಾಡುತ್ತಿವೆ. ಇದಕ್ಕೆ ನಮ್ಮ ಪಕ್ಷದ ಕಾರ್ಯಕರ್ತರಾಗಲೀ, ಸಾಮಾಜಿಕ ಕಳಕಳಿಯಿರುವ ಯಾವ ವ್ಯಕ್ತಿಗಳೇ ಆಗಲಿ ಹೆದರಬಾರದು ಎಂದರು.

ಪ್ರವಾಹ ಪರಿಹಾರದ ವಿಚಾರದಲ್ಲಿಯೂ ಕೇಂದ್ರ ಸರ್ಕಾರ ತಾರತಮ್ಯ ಧೊರಣೆ ಅನುಸರಿಸುತ್ತಿದೆ. ಗುಜರಾತ್ ಗೆ ಒಂದು ಸಾವಿರ ಕೋಟಿ ರೂ.ಗಳ ಪರಿಹಾರ ಘೋಷಣೆ ಮಾಡಿರುವ ಪ್ರಧಾನಿಯವರು ಚಂಡಮಾರುತದಿಂದ ತತ್ತರಿಸಿರುವ ಕರ್ನಾಟಕಕ್ಕೆ ನಯಾಪೈಸೆ ಕೊಟ್ಟಿಲ್ಲ. ನಮ್ಮ‌ ಮೇಲೇಕೆ ಮಲತಾಯಿ ಧೋರಣೆ?

ಕೋವಿಡ್ ಲಸಿಕೆ ನೀಡುವುದಕ್ಕೆ ನಾವು ವಿರೋಧ ಮಾಡಿರಲಿಲ್ಲ. ಎಲ್ಲರಿಗೂ ಲಸಿಕೆ ಸಿಗಬೇಕು. ಅದಕ್ಕಾಗಿ ಅಭಿಯಾನ ನಡೆಸಬೇಕು ಎಂದು ಈಗಲೂ ಒತ್ತಾಯ ಮಾಡುತ್ತೇನೆ. ಆದರೆ ಲಸಿಕೆಯೇ ಇಲ್ಲದೆ ಆಂದೋಲನಕ್ಕೆ ಚಾಲನೆ ನೀಡಿದವರು ಯಾರು? ಎಂದು ಪ್ರಶ್ನಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಅಂಗನವಾಡಿ ; ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭ : ಸಿಎಂ ಸೂಚನೆ

Published

on

ಸುದ್ದಿದಿನಡೆಸ್ಕ್:ರಾಜ್ಯದ ಅಂಗನವಾಡಿಗಳಲ್ಲಿ, ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಿಸುವ ಕುರಿತು ಅಧ್ಯಯನಕ್ಕೆ, ತ್ವರಿತವಾಗಿ ತಜ್ಞರ ಸಮಿತಿ ರಚಿಸಿ, ಎರಡು ತಿಂಗಳೊಳಗೆ ವರದಿ ಪಡೆಯುವಂತೆ, ಶಾಲಾ ಶಿಕ್ಷಣ ಖಾತೆ ಸಚಿವರಿಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.


  • ಲ್ಯಾಟರಲ್ ಪ್ರವೇಶ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಡಿಪ್ಲೊಮೊ ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್ ಕಾಲೇಜುಗಳ ಲ್ಯಾಟರಲ್ ಪ್ರವೇಶಕ್ಕೆ ನಡೆಸಿದ್ದ ಪ್ರವೇಶ ಪರೀಕ್ಷೆಯ ತಾತ್ಕಾಲಿಕ ಸರಿ ಉತ್ತರ ಪ್ರಕಟಿಸಿದೆ. ಉತ್ತರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ಕೆಇಎ ಪ್ರಕಟಿಸಿದೆ.


ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಆರೋಗ್ಯ ಇಲಾಖೆ ನೇಮಕಾತಿ ; ಸಚಿವ ದಿನೇಶ್ ಗುಂಡೂರಾವ್ ರಿಂದ ಸಿಹಿ ಸುದ್ದಿ

Published

on

ಸುದ್ದಿದಿನಡೆಸ್ಕ್:ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ವೈದ್ಯರು, ಸಿಬ್ಬಂದಿಗಳ ಕೊರತೆ ಇದ್ದು, ಹಂತ ಹಂತವಾಗಿ ವೈದ್ಯರ ನೇಮಕ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಡಿಕೇರಿಯಲ್ಲಿ ನಿನ್ನೆ ತಿಳಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಯಲ್ಲಿಯೇ ಎಲ್ಲಾ ರೀತಿಯ ಆರೋಗ್ಯ ಸೌಲಭ್ಯ ದೊರೆಯುವಂತಾಗಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಜಿಎಸ್‌ಟಿ ಭಾರತೀಯರ ಜೀವನ ಸುಧಾರಿಸುವ ಸಾಧನ : ಪ್ರಧಾನಿ ಮೋದಿ

Published

on

ಸುದ್ದಿದಿನಡೆಸ್ಕ್:ಸರಕು ಮತ್ತು ಸೇವಾ ತೆರಿಗೆ ಜಿಎಸ್‌ಟಿಗೆ ಏಳು ವರ್ಷ ತುಂಬಿದ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಜಿಎಸ್‌ಟಿ, 140 ಕೋಟಿ ಭಾರತೀಯರ ಜೀವನವನ್ನು ಸುಧಾರಿಸುವ ಸಾಧನವಾಗಿದೆ. ಇದರ ಜಾರಿಯ ಬಳಿಕ ಬಡವರು ಮತ್ತು ಜನಸಾಮಾನ್ಯರಿಗೆ ಗಮನಾರ್ಹ ಉಳಿತಾಯವಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಹೇಳಿದ್ದಾರೆ.

ಜಿಎಸ್‌ಟಿ ಜಾರಿಯಾದ ನಂತರ ಗೃಹಬಳಕೆಯ ವಸ್ತುಗಳು ಹೆಚ್ಚು ಅಗ್ಗವಾಗಿವೆ ಎಂದಿರುವ ಅವರು, ಜನರ ಜೀವನವನ್ನು ಪರಿವರ್ತಿಸುವ ಈ ಸುಧಾರಣೆಗಳ ಪ್ರಯಾಣವನ್ನು ಮುಂದುವರಿಸಲು ನಾವು ಬದ್ಧರಾಗಿದ್ದೇವೆ ಎಂದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending