ದಿನದ ಸುದ್ದಿ
ದಾವಣಗೆರೆ | ಲಾಕ್‌ಡೌನ್ ಅವಧಿಯಲ್ಲಿ ಅಕ್ರಮ ಮದ್ಯ ಮಾರಾಟ ತಡೆಗೆ ಕ್ರಮ ; 67 ಪ್ರಕರಣ ದಾಖಲು, 4.63 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯ, ವಾಹನ ವಶ
ಸುದ್ದಿದಿನ,ದಾವಣಗೆರೆ : ಕೊರೊನಾ ವೈರಸ್ ಎರಡನೇ ಅಲೆಯ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಸರ್ಕಾರ ಜಾರಿಗೊಳಿಸಿದ ಲಾಕ್‌ಡೌನ್ ಸಂದರ್ಭಲ್ಲಿ ಅನುಮತಿಸಿದ ಅವಧಿಯನ್ನು ಹೊರತುಪಡಿಸಿ, ಅಕ್ರಮ ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆಯ ಒಟ್ಟು 67 ಪ್ರಕರಣಗಳನ್ನು ದಾಖಲಿಸಿ, 4.63 ಲಕ್ಷ ರೂ. ಮೌಲ್ಯದ ಮದ್ಯ, ಬಿಯರ್ ಹಾಗೂ ವಾಹನ ವಶಕ್ಕೆ ಪಡೆಯಲಾಗಿದೆ.
ರಾಜ್ಯ ಸರ್ಕಾರ ಹಾಗೂ ಅಬಕಾರಿ ಆಯುಕ್ತರ ನಿರ್ದೇಶನದ ಮೆರೆಗೆ ಜಿಲ್ಲಾಧಿಕಾರಿಗಳ ಆದೇಶದಂತೆ ಜಿಲ್ಲಾದ್ಯಂತ ಜೂ. 07 ರವರೆಗೆ ಎಲ್ಲ ಬಗೆಯ ಮದ್ಯ ಮಾರಾಟ ನಿಷೇಧಿಸಲಾಗಿದೆ. ಈ ನಡುವೆ ಇತ್ತೀಚೆಗೆ ಮೇ.31 ಹಾಗೂ ಜೂನ್ 3 ರಂದು ಬೆಳಿಗ್ಗೆ 06 ಗಂಟೆಯಿಂದ ಮಧ್ಯಾಹ್ನ 12 ರವರೆಗೆ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿತ್ತು.
ಅನುಮತಿಸಿದ ಅವಧಿ ಹೊರತುಪಡಿಸಿ, ಉಳಿದಂತ ಅವಧಿಯಲ್ಲಿ ಜಿಲ್ಲೆಯಲ್ಲಿ ಎಲ್ಲಾ ಬಗೆಯ ಮದ್ಯದ ಮಾರಾಟವನ್ನು ನಿಷೇಧಿಸಿ, ನಿಷೇಧಿತ ಅವಧಿಯಲ್ಲಿ ಎಲ್ಲಾ ವಿಧದ ಮದ್ಯದ ಸನ್ನದುಗಳನ್ನು ಇಲಾಖೆಯಿಂದ ಸೀಲ್ ಮಾಡಿ ಬಂದ್ ಮಾಡಲಾಗಿರುತ್ತದೆ.
ಮದ್ಯ ಮಾರಾಟದ ನಿಷೇಧಿತ ಅವಧಿಯ ಜೊತೆಗೆ ಲಾಕ್‌ಡೌನ್ ಅವಧಿ ಏ.23 ರಿಂದ ಮೇ 31 ರವರೆಗಿನ ಅವಧಿಯಲ್ಲಿ ಅಕ್ರಮ ಮದ್ಯ ಮಾರಾಟ ಹಾಗೂ ನಿಯಮ ಉಲ್ಲಂಘನೆಯನ್ನು ಪತ್ತೆಹಚ್ಚಲು ಜಿಲ್ಲೆಯಲ್ಲಿ ಜಾರಿ ಮತ್ತು ತನಿಖಾ ಕಾರ್ಯಗಳನ್ನು ಚುರುಕುಗೊಳಿಸಿ ದಾವಣಗೆರೆ ಜಿಲ್ಲೆಯಾದ್ಯಂತ ದಾಳಿ ನಡೆಸಲಾಗಿತ್ತು.
ಕಳೆದ ಏ.23 ರಿಂದ ಮೇ.31 ರವರೆಗೆ ಜಿಲ್ಲೆಯಲ್ಲಿ ಒಟ್ಟು 147 ದಾಳಿ ಸಂಘಟಿಸಿದ್ದ್ದು, 19 ಘೋರ ಹಾಗೂ 15(ಎ) ಅಡಿಯಲ್ಲಿ 48 ಸೇರಿದಂತೆ ಒಟ್ಟು 67 ಪ್ರಕರಣಗಳನ್ನು ದಾಖಲಿಸಲಾಗಿದೆ. ಅಲ್ಲದೇ 385.930 ಲೀ ಮದ್ಯ, 113.930 ಲೀ ಬಿಯರ್, 4 ವಾಹನ ಸೇರಿದಂತೆ ಒಟ್ಟು 4,63,487 ರೂ. ಮೌಲ್ಯದ ಅಬಕಾರಿ ಪದಾರ್ಥ ಮತ್ತು ವಸ್ತುಗಳನ್ನು ಜಪ್ತು ಮಾಡಲಾಗಿದೆ.
ಲಾಕ್‌ಡೌನ್ ಜಾರಿಯಲ್ಲಿರುವ ಕಾರಣ ಮದ್ಯದ ಅಲಭ್ಯತೆಯಿಂದಾಗಿ ಪಾನೀಕರು ತಮ್ಮ ವ್ಯಸನದ ಹಿನ್ನೆಲೆಯಲ್ಲಿ ಇತರೆ ಮಾದಕ ವಸ್ತುಗಳಾದ ನಕಲಿ ಮದ್ಯ, ಕಳ್ಳಭಟ್ಟಿ, ಸಾರಾಯಿ, ಸ್ಯಾನಿಟೈಸರ್, ವಾರ್ನಿಶ್, ಸರ್ಜಿಕಲ್ ಸ್ಪಿರಿಟ್ ಇತ್ಯಾದಿಗಳನ್ನು ಸೇವನೆ ಮಾಡಬಾರದು.
ಇದರ ಸೇವನೆಯಿಂದ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುವುದರೊಂದಿಗೆ ಪ್ರಾಣಹಾನಿಯಾಗುವ ಸಂಭವವಿರುತ್ತದೆ. ಇಂತಹ ಪ್ರಕರಣಗಳು ಕಂಡುಬಂದಲ್ಲಿ ಸಾರ್ವಜನಿಕರು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರುವ ಮೂಲಕ ಸಾವು-ನೋವುಗಳನ್ನು ತಡೆಗಟ್ಟಲು ಸಹಕಾರ ನೀಡಬೇಕು.
ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ ದಾವಣಗೆರೆ ವಲಯ ನಂ.1 ರ ಅಬಕಾರಿ ನಿರೀಕ್ಷಕರಾದ ವಿನೋದ್ ಕಳಸಪ್ಪ ಗೋಳ್ 7795323230, ದಾವಣಗೆರೆ ವಲಯ ನಂ 2 ರ ಅಬಕಾರಿ ನಿರೀಕ್ಷಕ ಶಂಕರಪ್ಪ 9448532551, ಹರಿಹರ ವಲಯದ ಅಬಕಾರಿ ನಿರೀಕ್ಷಕ ಶೀಲಾ.ಜೆ.ಕೆ 8861411339, ಹೊನ್ನಾಳಿ ವಲಯದ ಅಬಕಾರಿ ನಿರೀಕ್ಷಕ ಎಸ್.ಆರ್.ಮುರುಡೇಶ್ 9449686222.
ಚನ್ನಗಿರಿ ವಲಯದ ಅಬಕಾರಿ ನಿರೀಕ್ಷಕ ನೌಷದ್ ಅಹಮ್ಮದ್ ಖಾನ್ 9380891915, ಅಬಕಾರಿ ಉಪ ಆಯುಕ್ತರ ಕಚೇರಿ ಅಬಕಾರ ನಿರೀಕ್ಷಕಿ ರಶ್ಮೀ ಕೆ.ಆರ್ 8970560049, ದಾವಣಗೆರೆ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕ ಕೆ.ಎ.ನಾಗರಾಜ್ 9449597064, ಹೊನ್ನಾಳಿ ಉಪವಿಭಾಗ ಅಬಕಾರಿ ಉಪ ನಿರೀಕ್ಷಕ ವೀರೇಶ್ ಬ. ಚಿಕ್ಕರೆಡ್ಡಿ 9449597066, ದಾವಣಗೆರೆ ಜಿಲ್ಲೆ ಅಬಕಾರಿ ಉಪ ಆಯುಕ್ತ ಶಿವಪ್ರಸಾದ್.ಬಿ 9449597061 ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ನಕಲಿ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 6 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಟಿ. ಸೋಮ್ಲನಾಯ್ಕ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 2023-24 ಮತ್ತು 2024-25ನೇ ಸಾಲಿನ ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬAಧಿಸಿದ ಕಾಮಗಾರಿಗಳಿಗೆ ಸಂಬAಧಿಸಿದAತೆ ಹೊನ್ನಾಳಿ ಉಪವಿಭಾಗದ ಅಡಿಯಲ್ಲಿ ನಡೆದಿರುವ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ನಾಲ್ಕು ಹಂತದ ತುರ್ತು ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಸಂಪೂರ್ಣ ಕಡತವನ್ನು ಪಡೆದು ಪರಿಶೀಲನೆ ಮಾಡಿದಾಗ, ಇಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಲೋಪಗಳು ಕಂಡುಬAದಿರುತ್ತವೆ. ಅಂತಹ ಪ್ರಮುಖ ಲೋಪಗಳನ್ನು ಉಲ್ಲೇಖಿಸಿ ಸೂಕ್ತ ತನಿಖೆಗೆ ಒಳಪಡಿಸುವಂತೆ ದಿನಾಂಕ: 01-12-2025 ರಂದು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರಿಗೆ ದೂರು ನೀಡಲಾಗಿತ್ತು.
ಈ ದೂರು ಅರ್ಜಿಗೆ ಸಂಬಂಧಿಸಿದಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು 2 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ದಿನಾಂಕ: 27-01-2026 ರಂದು ಜ್ಞಾಪನವನ್ನು ನೀಡಲಾಗಿರುತ್ತದೆ. ಆದರೆ ಜ್ಞಾಪನ ನೀಡಿ 6 ತಿಂಗಳು ಕಳೆಯುತ್ತ ಬಂದರೂ ಈ ದೂರು ಅರ್ಜಿಗೆ ಸಂಬAಧಿಸಿದAತೆ ಕಾರ್ಯಪಾಲಕ ಅಭಿಯಂತರರು (ಪ್ರಭಾರ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿರುತ್ತಾರೆ.
ಈ ದೂರು ಅರ್ಜಿಯನ್ನು ತನಿಖೆಗೆ ಒಳಪಡಿಸುವಲ್ಲಿ ತೋರಿದ ನಿರ್ಲಕ್ಷö್ಯಕ್ಕೆ ಪ್ರಮುಖ ಕಾರಣವೆಂದರೆ, ಹೊನ್ನಾಳಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರೇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯನಿರ್ವಹಿಸಿರುತ್ತಾರೆ. ಈ ಕಾರಣಕ್ಕಾಗಿ ತನ್ನ ಮೇಲಿನ ಆರೋಪವನ್ನು ತನಿಖೆಗೆ ಒಳಪಡಿಸುವಲ್ಲಿ ನಿರ್ಲಕ್ಷö್ಯ ತೋರಿ, ಈ ದೂರು ಅರ್ಜಿಯನ್ನು ಮೂಲೆ ಗುಂಪಾಗಿಸಿರುತ್ತಾರೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಸೋಮ್ಲನಾಯ್ಕ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
ಸುದ್ದಿದಿನಡೆಸ್ಕ್:ಜಪಾನ್‌ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿತು. ಅವರನ್ನು ಬಂಧಿಸಿ 19 ದಿನ ಜೈಲಿನಲ್ಲಿ ಇರಿಸಲಾಯಿತು.
ತಮ್ಮ ಬಂಧನ ಸರಿಯಲ್ಲ ಎಂದು ತನಕಾ ಮಾನವ ಹಕ್ಕುಗಳ ಆಯೋಗದ ಮೊರೆ ಹೋದರು. ವೀಸಾ ಅವಧಿ ಮುಗಿಯುತ್ತಿದ್ದಂತೆ, ಪ್ರಕರಣ ಮುಗಿಯುವವರೆಗೂ ಭಾರತದಲ್ಲೇ ಇರಲು ವಿಚಿತ್ರ ಪ್ರಯತ್ನವೂ ಮಾಡಿದರು. ಪೊಲೀಸ್ ಠಾಣೆಯಿಂದ ಪ್ಲಾಸ್ಟಿಕ್ ಕುರ್ಚಿಯೊಂದನ್ನು ತೆಗೆದುಕೊಂಡು ಹೋಗಿ, ಮತ್ತೆ ಬಂಧನಕ್ಕೊಳಗಾಗಲು ಪ್ರಯತ್ನಿಸಿದರು!
ಅದು ಆಗದೇ ಇದ್ದಾಗ ಜಪಾನ್ ಗೆ ಮರಳಿ . ಅಲ್ಲಿಂದಲೇ ತಮ್ಮ ಹೋರಾಟ ಮುಂದುವರಿಸಿದ ತನಕಾ ಅವರ ಹೋರಾಟಕ್ಕೆ ಜಯ ಸಿಕ್ಕಿದೆ ಸಿಕ್ಕಿದೆ. ಕರ್ನಾಟಕದಿಂದ 75,000 ಪರಿಹಾರವನ್ನು ಪಡೆದುಕೊಂಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಡಾಲಿಯ ಕನಸು ಒಂದೇ ಹೀರೋ ಆಗೋದು
ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು!
ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು ಗುರಿಯ ಮೇಲೆ ಸಂಪೂರ್ಣ ಗಮನ ಹೊಂದಿದ್ದವರು. ಯಾವುದೇ ಡೈವರ್ಷನ್ ಇಲ್ಲ, ಸಿನಿಮಾ ಕನಸಿನ ಕಡೆ ಮಾತ್ರ ಗಮನ!
ಇಂದು ಬಹುಭಾಷಾ ನಟನಾಗಿ ದೊಡ್ಡ ಎತ್ತರಕ್ಕೇರಿದ್ದರೂ, ತಮ್ಮ ಬೇರುಗಳನ್ನು ಅವರು ಮರೆತಿಲ್ಲ. ಇಂದಿಗೂ ತಮ್ಮ ಹಳೆಯ ಸ್ನೇಹಿತರ ಜೊತೆಗೂಡಿ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿರ್ಮಾಪಕರಾಗಿಯೂ ಗುರುತಿಸಿಕೊಂಡಿರುವ ಅವರು, ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ.
ಅಂದಿನ ಅದೇ ಸರಳತೆ, ಅದೇ ನಡವಳಿಕೆ ಇಂದಿಗೂ ಇದೆ!
ಒಬ್ಬ ಕಾಲೇಜು ಯುವಕನಿಂದ ಬಹುಭಾಷಾ ತಾರೆಯವರೆಗೆ—ಎಂತಹ ಸ್ಪೂರ್ತಿದಾಯಕ ಪಯಣ! ಹ್ಯಾಪಿ ಬರ್ತ್ಡೇ ಡಾಲಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ3 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ5 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ದಿನದ ಸುದ್ದಿ1 day agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ1 day agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ14 hours agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ1 day agoಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
-
ದಿನದ ಸುದ್ದಿ1 day agoತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ

