ದಿನದ ಸುದ್ದಿ
ದಾವಣಗೆರೆ | ಜಿಲ್ಲೆಯ 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ವಾರದೊಳಗೆ ಲಸಿಕೆ
ಸುದ್ದಿದಿನ,ದಾವಣಗೆರೆ : ಸರ್ಕಾರದ ಸೂಚನೆಯಂತೆ ಜಿಲ್ಲೆಯಲ್ಲಿನ 18 ವರ್ಷ ಮೇಲ್ಪಟ್ಟ ಎಲ್ಲ ವಿದ್ಯಾರ್ಥಿಗಳು, ಬೋಧಕರು ಹಾಗೂ ಬೋಧಕೇತರ ಸಿಬ್ಬಂದಿಗೆ ಒಂದು ವಾರದೊಳಗಾಗಿ ಆದ್ಯತೆ ಮೇರೆಗೆ ಕೋವಿಡ್ ನಿರೋಧಕ ಲಸಿಕೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.
ವಿದ್ಯಾರ್ಥಿಗಳಿಗೆ ಕೋವಿಡ್ ನಿರೋಧಕ ಲಸಿಕೆ ನೀಡುವುದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ರಾಜ್ಯ ಮಟ್ಟದ ವಿಡಿಯೋ ಸಂವಾದದ ಬಳಿಕ, ಮಾತನಾಡಿದ ಅವರು, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಅಭಿವೃದ್ಧಿ ಆಯುಕ್ತರ ನಿರ್ದೇಶನದಂತೆ ಜಿಲ್ಲೆಯಲ್ಲಿನ ಎಲ್ಲ ಸರ್ಕಾರಿ ಹಾಗೂ ಖಾಸಗಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಐಟಿಐ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು, ಬೋಧಕರು ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ಒಂದು ವಾರದ ಒಳಗಾಗಿ ಕೋವಿಡ್ ನಿರೋಧಕ ಲಸಿಕೆಯನ್ನು, ಲಸಿಕೆಯ ಲಭ್ಯತೆಯ ಆಧಾರದ ಮೇಲೆ ಆದ್ಯತೆ ಮೇರೆಗೆ ನೀಡಲಾಗುವುದು.
ಜಿಲ್ಲೆಯಲ್ಲಿ ಲಸಿಕೆ ನೀಡಲು ಅರ್ಹರಿರುವ ವಿದ್ಯಾರ್ಥಿಗಳನ್ನು ಗುರುತಿಸಲಾಗಿದ್ದು, 50132 ವಿದ್ಯಾರ್ಥಿಗಳು, 3619 ಬೋಧಕರು ಹಾಗೂ 1905 ಬೋಧಕೇತರ ಸಿಬ್ಬಂದಿಗಳು ಸೇರಿದಂತೆ ಒಟ್ಟು 55656 ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಈಗಾಗಲೆ ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಿಕೆ ಆರಂಭವಾಗಿದ್ದು, ಕೆಲವು ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮೊದಲನೆ ಡೋಸ್ ಲಸಿಕೆ ಪಡೆದಿರಬಹುದು.
ಲಸಿಕೆ ಪಡೆಯದೆ ಇರುವ ಎಲ್ಲ ಅರ್ಹ ವಿದ್ಯಾರ್ಥಿಗಳಿಗೂ ಲಸಿಕೆ ನೀಡಲಾಗುವುದು. ಇದಕ್ಕಾಗಿ ಎಲ್ಲ ಕಾಲೇಜುಗಳಲ್ಲಿ ಲಸಿಕಾ ಕ್ಯಾಂಪ್ ಆಯೋಜಿಸಲಾಗುವುದು. ಲಸಿಕೆ ಲಭ್ಯತೆ ಆಧಾರದ ಮೇಲೆ ಲಸಿಕೆ ಕ್ಯಾಂಪ್ ಏರ್ಪಡಿಸುವ ಸ್ಥಳ, ದಿನವನ್ನು ಆರೋಗ್ಯ ಇಲಾಖೆ ನಿಗದಿಪಡಿಸಲಿದೆ. ಲಸಿಕೆ ಕಾರ್ಯಕ್ರಮ ಯಶಸ್ವಿಗೊಳಿಸಲು ಇದಕ್ಕಾಗಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುವುದು.
ದಾವಣಗೆರೆ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಬರುವ ಕಾಲೇಜುಗಳಲ್ಲಿ ಪದವಿ-29485 ಹಾಗೂ ಸ್ನಾತಕೋತ್ತರ ಪದವಿ-2227 ವಿದ್ಯಾರ್ಥಿಗಳಿಗೆ ಲಸಿಕೆ ಹಾಕಬೇಕಿದೆ. ಈ ಕಾರ್ಯಕ್ರಮಕ್ಕೆಂದೇ ಪ್ರತ್ಯೇಕವಾಗಿ ಲಸಿಕೆಯನ್ನು ಹಂಚಿಕೆ ಮಾಡಲಾಗುವುದಿಲ್ಲ, ಸರ್ಕಾರದ ಸೂಚನೆಯಂತೆ ಜಿಲ್ಲೆಯಲ್ಲಿ ಈಗಾಗಲೆ ನಡೆಯುತ್ತಿರುವ ಲಸಿಕಾ ಕಾರ್ಯಕ್ರಮದ ಜೊತೆ ಜೊತೆಗೆ, ವಿದ್ಯಾರ್ಥಿಗಳಿಗೂ ಲಸಿಕೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಕಾಲೇಜುಗಳ ಪಟ್ಟಿಯನ್ನು ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಾಲೇಜುಗಳಲ್ಲಿ ನಡೆಸಲಾಗುವ ಲಸಿಕಾ ಕ್ಯಾಂಪ್ ಕಾರ್ಯಕ್ರಮದ ಸಂದರ್ಭದಲ್ಲಿ ಕೋವಿಡ್ಗೆ ಸಂಬಂಧಿಸಿದಂತೆ ಹಾಗೂ ಲಸಿಕೆ ನೀಡಿಕೆಗಾಗಿ ಸರ್ಕಾರ ಹೊರಡಿಸಿರುವ ಎಲ್ಲ ಮಾರ್ಗಸೂಚಿಗಳನ್ನು ಅಧಿಕಾರಿಗಳು ತಪ್ಪದೆ ಪಾಲಿಸಬೇಕು, ಇದಕ್ಕಾಗಿ ಕಾಲೇಜುಗಳಲ್ಲಿ ಸೂಕ್ತ ಕೊಠಡಿಗಳನ್ನು ಪರಿಶೀಲಿಸಿ, ನಿಗದಿಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಗೆ ಸರ್ಕಾರದಿಂದ ಹಂಚಿಕೆ ಮಾಡಲಾಗುವ ಕೋವಿಡ್ ನಿರೋಧಕ ಲಸಿಕೆಯ ಪ್ರಮಾಣವನ್ನು ಪರಿಗಣಿಸಿ, ವಿದ್ಯಾರ್ಥಿಗಳಿಗೆ ಲಸಿಕೆ ನೀಡಲು ಅಗತ್ಯವಿರುವ ಲಸಿಕೆಯನ್ನು ಹಂಚಿಕೆ ಮಾಡಬೇಕು. ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ನೀಡುವ ಲಸಿಕೆ ಕಾರ್ಯಕ್ರಮಕ್ಕೆ ಯಾವುದೇ ರೀತಿಯಲ್ಲಿ ಪರಿಣಾಮ ಬೀರುವಂತಾಗಬಾರದು, ಈ ನಿಟ್ಟಿನಲ್ಲಿ ಸೂಕ್ತ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಆರ್ಸಿಹೆಚ್ ಅಧಿಕಾರಿ ಡಾ. ಮೀನಾಕ್ಷಿ ಅವರಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಸಭೆಯಲ್ಲಿ ಡಿಹೆಚ್ಒ ಡಾ. ನಾಗರಾಜ್, ಜಿಲ್ಲಾ ಆರ್ಸಿಹೆಚ್ ಅಧಿಕಾರಿ ಡಾ. ಮೀನಾಕ್ಷಿ, ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ. ಶಶಿಧರ್ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ 10:35 ಕ್ಕೆ ಅನಾರೋಗ್ಯದಿಂದ ನಿಧನರಾದರು.
ಮೃತರು ಪತ್ನಿ, ಸಹೋದರ, ಸಹೋದರಿಯರು ಸೇರಿದಂತೆ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಇವರ ಅಂತ್ಯ ಕ್ರಿಯೆಯನ್ನು ಹೊಳಲ್ಕೆರೆ ಸಮೀಪದ ನೆಹರು ಕಾಲೋನಿಯ ಜಮೀನಿನಲ್ಲಿ ಇಂದು (ಭಾನುವಾರ, ಜೂನ್ 07 ರಂದು ಮಧ್ಯಾಹ್ನ 2 ಗಂಟೆಗೆ) ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಸಂಪರ್ಕ ಮೊಬೈಲ್ ಸಂಖ್ಯೆ : 9740114246
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಆಶ್ರಯ ಯೋಜನೆ – ಆವಧಿ ವಿಸ್ತರಣೆ
ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್ 30 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.
ದಾವಣಗೆರೆ ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿನ ಅರ್ಹ ನಿವೇಶನ ಹಾಗೂ ವಸತಿ ರಹಿತ ಅಂಗವಿಕಲರು, ಹಿರಿಯ ನಾಗರಿಕರು, ಒಂಟಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ತೃತೀಯ ಲಿಂಗಿಗಳು, ಸ್ವಚ್ಛತಾ ಕಾರ್ಮಿಕರು, PM SVanidhi (ಪಿ ಎಂ -ಸ್ವ ನಿಧಿ )ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ವಲಸೆ ಬಂದ ಕುಟುಂಬದವರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಅರ್ಜಿಗಳನ್ನು http://pmayurban.gov.in ಆನ್ಲೈನ್ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದು ಅಥವಾ ಖುದ್ದಾಗಿ ಮಹಾನಗರ ಪಾಲಿಕೆಯ ಆಶ್ರಯ ಶಾಖೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು ಎಂದು ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್ ಅವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗರಿಕೆ ಹುಲ್ಲಿನ ಜ್ಯೂಸ್ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ
ಗಿರೀಶ್ ಮುತ್ತು
ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು ಸಹಾಯ ಮಾಡುತ್ತದೆ. ಇದು ಜ್ವರದಂತಹ ಸಮಸ್ಯೆಗಳ ನಿವಾರಣೆಗೆ ಸಹಾಯ ಮಾಡುತ್ತದೆ. ಹಾಗಾಗೊ ವಾರಕೊಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಗರಿಕೆ ಹುಲ್ಲಿನ ರಸ ಅಥವಾ ಕಷಾಯದ ಸೇವನೆ ಮಾಡಬೇಕು
ನಾವು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಲವಾರು ರೀತಿಯ ವ್ಯಾಯಾಮ ಮತ್ತು ಡಯಟ್ ಮಾಡುತ್ತೇವೆ. ಈ ಮಳೆಗಾಲದಲ್ಲಿ ಅನೇಕ ಜನರು ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಹಲವು ಬಗೆಯ ಜ್ಯೂಸ್ ಕುಡಿಯುತ್ತಾರೆ. ಹಣ್ಣು, ತರಕಾರಿ ರಸ ಕುಡಿದು ಆರೋಗ್ಯವಾಗಿರಲು ಪ್ರಯತ್ನಿಸುತ್ತಾರೆ. ಆದರೆ ಈ ಒಂದು ಜ್ಯೂಸ್ ಅನ್ನು ನೀವು ಕುಡಿದರೆ ನಿಮ್ಮತ್ತ ಕಾಯಿಲೆಗಳು ಸುಳಿಯುವುದೇ ಇಲ್ಲ. ಅದುವೇ ಗರಿಕೆ ಹುಲ್ಲುನ ಜ್ಯೂಸ್.
ಹೌದು… ಆಯುರ್ವೇದ ವೈದ್ಯರು ಈ ಮೂಲಿಕೆಯು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ ಎನ್ನುತ್ತಾರೆ. ಇದನ್ನು ಸೇವಿಸುವುದರಿಂದ ದೇಹದಲ್ಲಿನ ಕ್ಯಾನ್ಸರ್ ಪ್ರಮಾಣವನ್ನು ಕಡಿಮೆ ಮಾಡಬಹುದು. ಅಲ್ಲದೆ ಈ ಹುಲ್ಲಿನ ರಸವನ್ನು ಕುಡಿಯುವುದರಿಂದ ರಕ್ತದಲ್ಲಿರುವ ಕ್ಯಾನ್ಸರ್ ಕೋಶಗಳು ಕಡಿಮೆಯಾಗುವುದು ಮಾತ್ರವಲ್ಲದೆ ರಕ್ತ ಶುದ್ಧವಾಗಿರುತ್ತದೆ.
ಈ ಗರಿಕೆ ಹುಲ್ಲಿನಲ್ಲಿ ವಿಟಮಿನ್ ಎ, ಕೆ, ಸಿ ಮತ್ತು ವಿಟಮಿನ್ ಇ ಗಳು ಸಮೃದ್ಧವಾಗಿದೆ. ಇದು ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ರಕ್ತದೊತ್ತಡ, ರಕ್ತಹೀನತೆ ಮತ್ತು ರಕ್ತ ಸಂಬಂಧಿತ ಕಾಯಿಲೆಗಳನ್ನು ಗುಣಪಡಿಸುತ್ತದೆ. ಹಾಗಾದರೆ ಗರಿಕೆ ಹುಲ್ಲಿನ ಜ್ಯೂಸ್ನ ಇತರ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯೋಣ.
ಗರಿಕೆ ರಸದ ಪ್ರಯೋಜನಗಳು
1. ಈ ಗರಿಕೆ ಹುಲ್ಲಿನ ಜ್ಯೂಸ್ ಎಲ್ಲಿಯೂ ಸಿಗುವುದಿಲ್ಲ. ಕೆಲವೆಡೆ ಮಾತ್ರ ಸಿಗುತ್ತದೆ. ಬೇರು ಮತ್ತು ಎಲೆಗಳು ಸೇರಿದಂತೆ ಗರಿಕೆ ಎಲ್ಲಾ ಭಾಗಗಳು ಔಷಧೀಯ ಗುಣಗಳನ್ನು ಹೊಂದಿದೆ. ಇದು ಕೆಲವು ಹಾನಿಕಾರಕ ವ್ಯಾಕ್ಸಿನಿಯಾ ವೈರಸ್ ಎಂಬ ಸೂಕ್ಷ್ಮಜೀವಿಯನ್ನು ನಾಶಪಡಿಸುವ ಗುಣವನ್ನು ಹೊಂದಿದೆ. ಹೀಗಾಗಿ ಈ ಜ್ಯೂಸ್ ಕುಡಿಯುವವರೂ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುತ್ತಾರೆ.
2. ಮೂತ್ರಕೋಶದ ಕಲ್ಲುಗಳು, ದೇಹದ ಊತ, ಮಕ್ಕಳಲ್ಲಿ ದೀರ್ಘಕಾಲದ ನೆಗಡಿ, ಮೂಗು ಸೋರುವಿಕೆ, ನೆಗಡಿ, ಅತಿಸಾರ, ಕಣ್ಣಿನ ದೋಷಗಳು, ಮೆದುಳಿನ ರಕ್ತಸ್ರಾವದಂತಹ ಕಾಯಿಲೆಗಳಿಗೆ ಈ ರಸ ತುಂಬಾ ಒಳ್ಳೆಯದು.
3. ಅಲ್ಲದೆ ತೂಕ ನಷ್ಟ, ಕೊಲೆಸ್ಟ್ರಾಲ್ ಕಡಿತ, ನರರೋಗ, ರಕ್ತದ ಕ್ಯಾನ್ಸರ್ ಚಿಕಿತ್ಸೆ, ಕೆಮ್ಮು, ಹೊಟ್ಟೆ ನೋವು, ರಕ್ತಹೀನತೆ, ಸಂಧಿವಾತ, ಹೃದಯ ಅಸ್ವಸ್ಥತೆ, ಚರ್ಮ ರೋಗಗಳು ಇತ್ಯಾದಿಗಳಿಗೆ ಅತ್ಯುತ್ತಮ ಔಷಧವಾಗಿ ಕಾರ್ಯನಿರ್ವಹಿಸುತ್ತದೆ
4. ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಮತ್ತು ರಕ್ತದಿಂದ ವಿಷವನ್ನು ತೆಗೆದುಹಾಕುವಲ್ಲಿ ಗರಿಕೆ ರಸವು ಪರಿಣಾಮಕಾರಿಯಾಗಿದೆ.
5. ಗರಿಕೆ ಹುಲ್ಲಿನ ರಸ ಮತ್ತು ಕೊಬ್ಬರಿ ಎಣ್ಣೆಯನ್ನು ಸಮಪ್ರಮಾಣದಲ್ಲಿ ಬೆರೆಸಿ ಕುದಿಸಬೇಕು.. ನಂತರ ಚರ್ಮರೋಗಗಳಾದ ರಿಂಗ್ವರ್ಮ್ ಮತ್ತು ಒಣ ಚರ್ಮವನ್ನು ತ್ವರಿತವಾಗಿ ಗುಣ ಪಡಿಸುತ್ತದೆ.
6. ಗರಿಕೆ ಹುಲ್ಲು ಬೇಕಾದಷ್ಟು ಸಂಗ್ರಹಿಸಿ, ಸ್ವಲ್ಪ ಅರಿಶಿನವನ್ನು ಸೇರಿಸಿ ಪೇಸ್ಟ್ ಮಾಡಿ ದೇಹಕ್ಕೆ ಉಜ್ಜಿಕೊಂಡರೆ, ಒಂದು ಗಂಟೆ ಬಿಟ್ಟು ನಂತರ ಸ್ನಾನ ಮಾಡಿ. ಇದರಿಂದ ದೇಹದ ತುರಿಕೆ ನಿವಾರಣೆಯಾಗುತ್ತದೆ.
ಗರಿಕೆ ಹುಲ್ಲಿನ ರಸ ತಯಾರಿಸುವುದು ಹೇಗೆ?
*ತಾಜಾ ಗರಿಕೆ ಹುಲ್ಲು ಒಂದು ಹಿಡಿಯಷ್ಟು ತೆಗೆದುಕೊಂಡು ಸ್ವಚ್ಚವಾಗಿ ತೊಳೆದುಕೊಳ್ಳಿ.
* ಬಳಿಕ ಇದನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಕತ್ತರಿಸಿಕೊಳ್ಳಿ.
* ಬಳಿಕ ಇದನ್ನು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಬೇಕು.
* ಚೆನ್ನಾಗಿ ಪೇಸ್ಟ್ ಆದ ಬಳಿಕ ಇದನ್ನು ಸೋಸಿಕೊಳ್ಳಬೇಕು.
* ಬಳಿಕ ಇದನ್ನು ಕುಡಿಯಬೇಕು. ಆದರೆ ಇದು ತಕ್ಷಣದ ಮನೆಮದ್ದಾಗಿದೆ. ಆದರೆ ಯಾವುದೇ ಆರೋಗ್ಯ ಸಮಸ್ಯೆಗಳಿಗೆ ಇದು ಕೊನೆಯ ಮದ್ದು ಅಲ್ಲ. ಹೀಗಾಗಿ ಯಾವುದೇ ಆರೋಗ್ಯ ಸಮಸ್ಯೆಗಳು ಉಂಟಾದಾಗ ಮೊದಲು ವೈದ್ಯರನ್ನು ಸಂಪರ್ಕಿಸುವುದು ತುಂಬಾ ಅವಶ್ಯಕ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ವಕೀಲ ಎಲ್.ಎಚ್.ಅರುಣಕುಮಾರ್ ಮನವಿ
-
ದಿನದ ಸುದ್ದಿ3 days agoಮೊದಲ ಸಂಪುಟ ಸಭೆಯಲ್ಲೇ ಮಹತ್ವದ 5 ಘೋಷಣೆ ಮಾಡಿದ ಸಿಎಂ ಡಿಕೆಶಿ
-
ದಿನದ ಸುದ್ದಿ5 days agoದಾವಣಗೆರೆ ವಿಶ್ವವಿದ್ಯಾಲಯ | ಜೂನ್ 2 ರಿಂದ 4 ರವರೆಗೆ ‘ಭಾಷಾಂತರ ಕೌಶಲ್ಯ ತರಬೇತಿ ಶಿಬಿರ’
-
ಅಂಕಣ3 days agoಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
-
ದಿನದ ಸುದ್ದಿ3 days agoಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ
-
ದಿನದ ಸುದ್ದಿ3 days agoಬಿ.ಕೆ. ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ
-
ದಿನದ ಸುದ್ದಿ3 days agoಧನ್ಯವಾದಗಳು ಕರ್ನಾಟಕ : ಸಿಎಂ ಡಿಕೆ ಶಿವಕುಮಾರ್
-
ದಿನದ ಸುದ್ದಿ5 days agoಕುಂಬಳಕಾಯಿ ಬೀಜದಲ್ಲಿ ‘ ಜೀವ ಸಂಜೀವಿನಿ’ : ಮಿಸ್ ಮಾಡ್ದೆ ಓದಿ ; ಆರೋಗ್ಯದ ಗುಟ್ಟು ತಿಳಿಯಿರಿ

