Connect with us

ದಿನದ ಸುದ್ದಿ

ಯಾವುದೇ ಗೊಂದಲ ಬೇಡ, ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯುತ್ತೆ : ಸಿಎಂ ಬಿ.ಎಸ್ ಯಡಿಯೂರಪ್ಪ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಬೆಂಗಳೂರು: ಯಾವುದೇ ಗೊಂದಲ ಬೇಡ, ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯುತ್ತೆ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಆಂಧ್ರ ಪ್ರದೇಶ ಸರಕಾರವು 10 ನೇ ತರಗತಿ‌ ಪರೀಕ್ಷೆ‌ ನಡೆಸುವ ವಿಷಯದ ವಿರುದ್ಧ ಪೋಷಕರು ಸುಪ್ರೀಂ ಕೋರ್ಟ್​ ಕದ ತಟ್ಟಿದಾಗ, ಕೋರ್ಟ್ ಛೀಮಾರಿ‌ ಹಾಕಿತ್ತು. ಇನ್ನು ಕರ್ನಾಟಕದಲ್ಲಿಯೂ ಕೊರೊನಾ ಸೋಂಕಿನ ನಡುವೆ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುವುದು ಬೇಡ ಎಂಬುದು ಬಹುತೇಕ ಪೋಷಕರ ಅಭಿಪ್ರಾಯವಾಗಿದೆ.

ಆದರೂ ನಿನ್ನೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪರೀಕ್ಷಾ ದಿನಾಂಕ ಘೋಷಿಸಿದ್ದರು. ಅದರಿಂದ ಸಚಿವ ಸುರೇಶ್‌ ಕುಮಾರ್ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿದ್ದಾರೆ ಎಂಬ ಕೂಗು ಎದ್ದಿದೆ.

ಇದನ್ನೂ ಓದಿ | ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆ ಜಾರಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶ 

ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಸ್ಪಷ್ಟನೆ ನೀಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸುರೇಶ್‌ಕುಮಾರ್ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿಲ್ಲ. ಎಸ್ ಎಸ್ ಎಲ್ ಸಿ ಪರೀಕ್ಷೆ ಸಂಬಂಧ ಸಚಿವ ಸುರೇಶ್ ಕುಮಾರ್ ನನ್ನ ಜೊತೆ ಚರ್ಚೆ ಮಾಡಿದ್ದಾರೆ. ಚರ್ಚೆ ಮಾಡಿಯೇ ಎಸ್ ಎಸ್ ಎಲ್ ಸಿ ಪರೀಕ್ಷಾ ದಿನಾಂಕ ಘೋಷಿಸಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ:ಪ್ರಾಚಾರ್ಯರು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರ ಸಹಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಹುಬ್ಬಳ್ಳಿಯ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕರಾದ ರಮೇಶ್ ದೇಸಾಯಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಸರ್ಕಾರದಿಂದ ವಿತರಣೆಯಾದ ಟೂಲ್‌ಕಿಟ್‌ಗಳನ್ನು ನಿಯಮಾನುಸಾರ ವಿತರಣೆ ಮಾಡದೆ ವಂಚಿಸಿರುವ ಅಧಿಕೃತ ಮಾಹಿತಿಯ ಆಧಾರದ ಮೇಲೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ, ಮಾಹಿತಿ ಕೋರಲಾಗಿತ್ತು.

ಪ್ರಾಚಾರ್ಯರು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿ ಫಾರ್ ಸಹಿಯೊಂದಿಗೆ ಹಿಂಬರಹ ನೀಡಲಾಗಿರುತ್ತದೆ. ಮಾಹಿತಿ ಅಧಿಕಾರಿ, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿರುವ ಫಾರ್ ಸಹಿಯೇ ಪ್ರಾಚಾರ್ಯರ ಹೆಸರಿನ ಪತ್ರದಲ್ಲಿ ನಮೂದಾಗಿರುತ್ತದೆ. ಸದರಿ ಸಂಸ್ಥೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಪ್ರಾಚಾರ್ಯರೇ ಆಗಿರುತ್ತಾರೆ.

ಹೀಗಿರುವಾಗ ಪಾಚಾರ್ಯರ ಮುದ್ರೆ ಇರುವಲ್ಲಿ ಫಾರ್ ಎಂಬುದಾಗಿ ನಮೂದಿಸಿ ಸಹಿ ಮಾಡಿ, ಮಾಹಿತಿ ಅಧಿಕಾರಿ ಎಂಬ ಮುದ್ರೆಗೆ ಫಾರ್ ಬಳಸದೆ ಸಹಿ ಮಾಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಜಂಟಿ ನಿರ್ದೇಶಕರಿಗೆ ದೂರು ನೀಡಲಾಗಿತ್ತು.

ಆದರೆ ಜಂಟಿ ನಿರ್ದೇಶಕರು, ಕೌಶಲ್ಯ ಅಭಿವೃದ್ದಿ ಮತ್ತು ಉದ್ಯೋಗ ಇಲಾಖೆ, ಹುಬ್ಬಳ್ಳಿ ಇವರಿಗೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿತ್ರದುರ್ಗ | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮರ್‌ನಾಥ್ ಜೈನ್ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಿತ್ರದುರ್ಗ ಜಿಲ್ಲೆಯ 6 ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಇಲಾಖಾ ತನಿಖೆ ನಡೆಸದೆ ಕಾಲ ವಿಳಂಬ ಮಾಡುತ್ತಿರುವ ಚಿತ್ರದುರ್ಗ ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಅಮರ್‌ನಾಥ್ ಜೈನ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ 06 ಅರ್ಜಿ ಸಲ್ಲಿಸಿ, ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಉಪವಿಭಾಗಗಳಿಗೆ ಬಿಡುಗಡೆಯಾದ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿದ್ದರು.

ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ಸದರಿ ಪ್ರಕರಣವನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿದ್ದರು.

ನಿಯಮಾನುಸಾರ ಇಲಾಖೆ ತನಿಖೆ ನಡೆಸದೆ ಕಾಲ ವಿಳಂಬ ಮಾಡುವ ಉದ್ದೇಶದಿಂದ 6 ತಾಲ್ಲೂಕು ಉಪ ವಿಭಾಗಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯುವಂತೆ ಆದೇಶ ಹೊರಡಿದ್ದು, ಇದರಂತೆ ವಕೀಲ ಡಾ.ಕೆ.ಎ.ಓಬಳಪ್ಪ ಇವರು ಎಲ್ಲಾ ಉಪವಿಭಾಗಗಳಿಗೆ ಭೇಟಿ ನೀಡಿ ದಾಖಲೆ ಪರಿಶೀಲನೆ ಮಾಡಿದಾಗ ದಾಖಲೆಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ.

ಈ ಬಗ್ಗೆ ಕಾರ್ಯಪಾಲಕ ಅಭಿಯಂತರರಿಗೆ ದೂರು ನೀಡಿದರೂ ನಿರ್ಲಕ್ಷö್ಯ ತೋರಿದ ಕಾರಣ, ಕರ್ತವ್ಯ ಲೋಪದ ಅಡಿಯಲ್ಲಿ ಕಾರ್ಯಪಾಲಕ ಅಭಿಯಂತರರಾದ ಅಮರ್‌ನಾಥ್ ಜೈನ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending