Connect with us

ನಿತ್ಯ ಭವಿಷ್ಯ

ತಮ್ಮ ಜನ್ಮ ಜಾತಕದಲ್ಲಿ( ಕುಂಡಲಿ) ಸಂತಾನಯೋಗ ಫಲ ಮತ್ತು ಪರಿಹಾರ”

Published

on

 

ಸೋಮಶೇಖರ್B.Sc
ವಂಶಪಾರಂಪರಿತ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403

ಜೀವನದಲ್ಲಿ ಒಂದೇ ಒಂದು ಸಾರಿ ಮದುವೆ ಆಗುತ್ತದೆ. ಮದುವೆ ಕ್ಷಣದಿಂದ ತುಂಬಾ ಉಲ್ಲಾಸ ಜೀವನ ಮಾಡುತ್ತೀರಿ, ನಂತರ ಎರಡು ವರ್ಷ ,ಮೂರು ವರ್ಷ ಕಳೆದು ಹೋಗುತ್ತದೆ. ನಂತರ ನಿಮಗೆ ಮಕ್ಕಳಿಲ್ಲದ ಸಂಕಟ ಪ್ರಾರಂಭವಾಗುತ್ತದೆ. ಆಗ ನೀವು ಆ ದೇವರು ದರ್ಶನ, ವೈದ್ಯರ ಭೇಟಿ ಮಾಡಲು ಪ್ರಾರಂಭಿಸುತ್ತೀರಿ. ವೈದ್ಯರು ಕೆಲವು ವೈದ್ಯಕೀಯ ಪರೀಕ್ಷೆಗಳು ನಡೆಸುತ್ತಾರೆ . ಅದರಲ್ಲಿ ಯಾವುದೇ ತರಹದ ನ್ಯೂನ್ಯತೆ ಕಾಣುವುದಿಲ್ಲ . ಎಲ್ಲ ನಿಮ್ಮ ಆರೋಗ್ಯ ಚೆನ್ನಾಗಿದೆ ಹೌಷಧಿ ತಗೊಳ್ಳಿ ಅಂತ ಸಲಹೆ ನೀಡುತ್ತಾರೆ. ಆದ್ರೂ ನಿರಾಶೆ ಆಗುವ ಸಾಧ್ಯತೆ. ಆಗ ತಮಗೆ ಸಹಾಯಸ್ತ ನೀಡುವುದು ದೈವ ಭಾಗ್ಯ ಅದೇ ಜನ್ಮಜಾತಕ ಅಥವಾ ಜನ್ಮ ಕುಂಡಲಿ.
ತಮ್ಮ ಜನ್ಮಕುಂಡಲಿ ಪರೀಕ್ಷಿಸಬೇಕು. ಅದರಲ್ಲಿ ಲಗ್ನದಿಂದ ಪಂಚಮ ಸ್ಥಾನ ನೋಡಿ ಸರಿಯಾಗಿ ಪರೀಕ್ಷಿಸಬೇಕು.ಪಂಚಮ ಸ್ಥಾನಕ್ಕೆ ಯಾರು ಅಧಿಪತಿ ಇದ್ದಾನೆ ,ಶುಭಗ್ರಹಗಳು ನೋಡಬೇಕು. ಲಗ್ನಾಧಿಪತಿ ಮತ್ತು ಪಂಚಮಾಧಿಪತಿಯು ಏಕರಾಶಿಯಲ್ಲಿ ಕೂಡಿರಬೇಕು. ಒಳ್ಳೆ ದೃಷ್ಟಿಯಿಂದ ಕೂಡಿಕೊಂಡಿರಬೇಕು. ಲಗ್ನಾಧಿಪತಿ ಮತ್ತು ಪಂಚಮಾಧಿಪತಿಯು ಯಾವುದೇ ಕಾರಣಕ್ಕೂ ಪರಿವರ್ತನೆಯಾಗಿ ಇರಬಾರದು, ದಂಪತಿಗಳಿಗೆ ಸಂತಾನಭಾಗ್ಯ ಲಭಿಸುತ್ತದೆ.
ಲಗ್ನ ಸ್ಥಾನದಲ್ಲಿ ಗುರು ಮತ್ತು ಪಂಚಮ ಸ್ಥಾನದಲ್ಲಿ ಗುರುಬಲ ಇದ್ದರೆ ಸಂತತಿ ಭಾಗ್ಯ ಲಭಿಸುತ್ತದೆ.
ಪಂಚಮ ಭಾವದಲ್ಲಿ ಪಾಪ ಗ್ರಹಗಳು ಇದ್ದರೆ ಅವರಿಗೆ ಸಂತತಿ ಆಗುವುದಿಲ್ಲ. ಪಂಚಮಾಧಿಪತಿ ನಿಶಕ್ತ ನಾಗಿದ್ದರೂ ಕೂಡ ಸಂತಾನಭಾಗ್ಯ ಇರುವುದಿಲ್ಲ.
ರವಿ ಗ್ರಹವು ವೃಶ್ಚಿಕ ರಾಶಿ ವೃಷಭ ಕನ್ಯಾ ರಾಶಿಲ್ಲಿರುವಾಗ ಇದು ಪಂಚಮ ಭಾವವಾಗಿ ಎಂಟರಲ್ಲಿ ಶನಿ ಲಗ್ನದಲ್ಲಿ ಮಂಗಳನಿದ್ದರೆ ಇವರಿಗೆ ಬಹಳ ತಡವಾಗಿ ಮಕ್ಕಳ ಭಾಗ್ಯ ಲಭಿಸಲಿದೆ.
ಲಗ್ನದಲ್ಲಿ ಪಾಪಗ್ರಹ ಇದ್ದರೆ, ಪಂಚಮಾಧಿಪತಿಯು ಮೂರನೇ ಸ್ಥಾನ 4ನೇ ಸ್ಥಾನ ಚಂದ್ರನೊಂದಿಗೆ ಇದ್ದರೆ ಲಗ್ನಾಧಿಪತಿಯು ಪಂಚಮದಲ್ಲಿದ್ದರೆ ಇಂತಹವರಿಗೆ ಮಕ್ಕಳಾಗುವುದಿಲ್ಲ.
ಸಂತಾನಭಾಗ್ಯ ಲಭಿಸಲು ಪೂಜಾ ಮತ್ತು ಪರಿಹಾರ
1)ನವಗ್ರಹ ಶಾಂತಿ ಮಾಡಿಸಿರಿ
2) ಪ್ರತಿ ಅಮಾವಾಸ್ಯೆ ಮತ್ತು ಹುಣ್ಣಿಮೆ ಪಿತೃಕಾರ್ಯ ಮಾಡಿರಿ.
3) ದ್ವಾದಶಿ ತಿಥಿಯಲ್ಲಿ ಅನ್ನದಾನ ,ಬ್ರಾಹ್ಮಣ ಪೂಜಾರಿಗೆ ನವಧಾನ್ಯ ಸಂತರ್ಪಣೆ ಮಾಡಿರಿ.
4) ಚತುರ್ದಶಿ ತಿಥಿಯಲ್ಲಿ ರುದ್ರಾಭಿಷೇಕ ಮಾಡಿಸಿ
5) ಅಷ್ಟಮಿ ತಿಥಿಯಲ್ಲಿ ಶ್ರವಣ ಉಪವಾಸಮಾಡಿ ಮಾಡಿರಿ.
6) ನವಮಿ ತಿಥಿಯಲ್ಲಿ ರಾಮಾಯಣ ಪುರಾಣ ಓದಿರಿ.
7) ಚತುರ್ಥಿ ತಿಥಿ ದಿನದಂದು ನಾಗ ದೇವತೆಯ ಆರಾಧನೆ ಮಾಡಿರಿ.
8) ಸಂತಾನ ದೋಷವುಳ್ಳವರು ಷಷ್ಠಿ ತಿಥಿಯಾದರೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಆರಾಧಿಸಿರಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ

Published

on

ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.

ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.

ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.

ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.

ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.

ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.

ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ9 hours ago

ಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್

ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಹೆಮ್ಮೆಯ ಶಿಕ್ಷಣ ತಜ್ಞೆ, ಉದ್ಯಮಿ ಹಾಗೂ Parvatha Global Ventures LLP ಸಂಸ್ಥೆಯ ಸಂಸ್ಥಾಪಕಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (Founder & CEO)...

ದಿನದ ಸುದ್ದಿ2 days ago

ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ

ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು...

ದಿನದ ಸುದ್ದಿ2 days ago

ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ‌.ಕೆ.ಎ.ಓಬಳಪ್ಪ ಲೋಕಾಗೆ ದೂರು

ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7...

ದಿನದ ಸುದ್ದಿ2 days ago

ಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರಾಜ್ಯಾದ್ಯಂತ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಬಿಡುಗಡೆಯಾದ ರೂ. 695 ಲಕ್ಷಗಳ ಅನುದಾನದ ಖರ್ಚು ವೆಚ್ಚವನ್ನು ಇಲಾಖಾ...

ದಿನದ ಸುದ್ದಿ1 week ago

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,...

ದಿನದ ಸುದ್ದಿ1 week ago

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ....

ದಿನದ ಸುದ್ದಿ1 week ago

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು...

ದಿನದ ಸುದ್ದಿ2 weeks ago

ಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ

ಸುದ್ದಿದಿನ,ದಾವಣಗೆರೆ: ದೇಶದ ಪ್ರಮುಖ ಆರೋಗ್ಯ ವಿಮೆ ಸಂಸ್ಥೆಗಳಲ್ಲಿ ಒಂದಾಗಿರುವ ಸ್ಟಾರ್ ಹೆಲ್ತ್ ಅಂಡ್ ಅಲೈಡ್ ಇನ್ಶುರನ್ಸ್ ಕಂಪನಿ ಲಿಮಿಟೆಡ್, ಕರ್ನಾಟಕದಲ್ಲಿ ಮಳೆಗಾಲದಲ್ಲಿ ಜನರನ್ನು ಕಾಡುವ ವಿವಿಧ ಬಗೆಯ...

ದಿನದ ಸುದ್ದಿ2 weeks ago

ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ...

ದಿನದ ಸುದ್ದಿ2 weeks ago

ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್‌ಗೌಡ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ...

Trending