Connect with us

ದಿನದ ಸುದ್ದಿ

ಅತಿಥಿ ಶಿಕ್ಷಕರ ಪ್ರಕರಣವನ್ನು ಕಾನೂನಾತ್ಮಕವಾಗಿ ಅಂತ್ಯಗೊಳಿಸಲು ಆಗ್ರಹ

Published

on

ಸುದ್ದಿದಿನ, ದಾವಣಗೆರೆ : ಅತಿಥಿ ಶಿಕ್ಷಕರಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಘನ ಉಚ್ಛ ನ್ಯಾಯಾಲಯವು ದಿನಾಂಕ : 11.09.2019 ರಂದು ನೀಡಿರುವ ತೀರ್ಪಿನ ಆದೇಶವನ್ನು ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಪಾಲಿಸಿ ಬೇಕು ಅಥವಾ ಘನ ನ್ಯಾಯಾಲಯಕ್ಕೆ ಶೀಘ್ರ ಲಿಖಿತ ಉತ್ತರ ನೀಡುವ ಮೂಲಕ ಕಾನೂನಿಗೆ ಗೌರವಿಸಿ ಅತಿಥಿ ಶಿಕ್ಷಕರ ಪ್ರಕರಣವನ್ನು ಕಾನೂನಾತ್ಮಕವಾಗಿಯೇ ಅಂತ್ಯಗೊಳಿಸಲಿ ಎಂದು ಕರ್ನಾಟಕ ರಾಜ್ಯ ಕ್ರೈಸ್ ವಸತಿ ಶಾಲೆಗಳ ಅತಿಥಿ ಶಿಕ್ಷಕರ ಸಂಘ ಆಗ್ರಹಿಸಿದೆ .

ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಮತ್ತು ಆ ವ್ಯಾಪ್ತಿಗೆ ಸೇರಿರುವ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಪ್ರಾಂಶುಪಾಲರುಗಳು ದಿನಾಂಕ : 11/09/2019 ರಂದು ಕರ್ನಾಟಕ ರಾಜ್ಯ ಘನ ಉಚ್ಛ ನ್ಯಾಯಾಲಯವು ಅತಿಥಿ ಶಿಕ್ಷಕರರಿಗೆ ಸಂಬಂಧಿಸಿದಂತೆ ನೀಡಿರುವ ತೀರ್ಪಿಗೆ ನ್ಯಾಯಾಲಯದ ಮುಂದೆ ತಕ್ಷಣ ಪ್ರತ್ಯುತ್ತರ ನೀಡಿ ಎಲ್ಲಾ ಗೊಂದಲವನ್ನು ಕಾನೂನಾತ್ಮಕವಾಗಿ ಅಂತ್ಯಗೊಳಿಸಲು ಕ್ರಮ ಕೈಗೊಳ್ಳಲಿ ಎಂದು ಸಂಘ ಒತ್ತಾಯಿಸಿದೆ.

ಕರ್ನಾಟಕ ರಾಜ್ಯ ಘನ ಉಚ್ಛ ನ್ಯಾಯಾಲಯವು ನೀಡಿದ ಮಧ್ಯಂತರ ಆದೇಶವನ್ನು ಆಯಾ ಶಾಲಾ ಪ್ರಾಂಶುಪಾಲರಿಗೆ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಗೆ ಹಾಗೂ ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘಕ್ಕೂ ಆಯಾ ಸಂಧರ್ಭದಲ್ಲೇ ಮನವಿ ಪತ್ರದೊಂದಿಗೆ ಸಲ್ಲಿಸಲಾಗಿದೆ. ಅಂತಿಮವಾಗಿ ದಿನಾಂಕ : 11/09/2019 ರಂದು ನೀಡಲಾದ ತೀರ್ಪಿನ ಪ್ರತಿಯನ್ನು ನ್ಯಾಯಾಲಯದ ಆದೇಶದ ಅನ್ವಯ ಹೊಸ REPRESENTATION ನೊಂದಿಗೆ ಮೇಲ್ಕಂಡ ಸದರಿ ಅಧಿಕಾರಿಗಳಿಗೆ ಸಕಾಲದಲ್ಲೇ ಸಲ್ಲಿಸಲಾಗಿದೆ.

ಅಷ್ಟೇ ಅಲ್ಲದೇ ಅಂದಿನ ಮುಖ್ಯಮಂತ್ರಿಗಳಾಗಿದ್ದ ಸನ್ಮಾನ್ಯ ಶ್ರೀ ಯಡಿಯೂರಪ್ಪನವರಿಗೆ, ಅವರ ಆಪ್ತ ಕಾರ್ಯದರ್ಶಿಯವರಿಗೆ, ಸರ್ಕಾರದ ಅಧೀನ ಕಾರ್ಯದರ್ಶಿಗಳಿಗೆ, ಅಂದಿನ ಸಮಾಜ ಕಲ್ಯಾಣ ಇಲಾಖೆಯ ಸಚಿವರಾಗಿದ್ದ ಶ್ರೀಯುತ ಗೋವಿಂದ ಕಾರಜೋಳ ಅವರು ಮತ್ತು ಅವರ ಆಪ್ತ ಕಾರ್ಯದರ್ಶಿಗಳಿಗೆ , ಅಂದಿನ ಗ್ರಾಮೀಣ ಅಭಿವೃದ್ಧಿ ಇಲಾಖೆಯ ಸಚಿವರಾದ ಸನ್ಮಾನ್ಯ ಶ್ರೀ ಈಶ್ವರಪ್ಪ ನವರಿಗೆ, ಕಾನೂನು ಸೇವಾ ಪ್ರಾಧಿಕಾರ, ಮಾನವ ಹಕ್ಕುಗಳ ಆಯೋಗ , ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಸೇರಿದಂತೆ ಸರ್ಕಾರ ಹಾಗೂ ಇಲಾಖೆಯ ಗಮನಕ್ಕೆ ತರಲಾಗಿದೆ.


  • ಶೀಘ್ರ ಕ್ರಮ ಕೈಗೊಳ್ಳದಿದ್ದರೆ ದಾಖಲೆ ಸಮೇತ ಮನವಿ ಸಲ್ಲಿಕೆ ಇತ್ಯಾದಿ ಮೂಲಕ ಆಯಾ ಸಮಯದಲ್ಲೇ ಗಮನಕ್ಕೆ ತಂದರೂ ಸ್ಪಂದಿಸದೆ ಅಸಡ್ಡೆ ತೋರಿರುವ ರಾಜ್ಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ಡಿಸಿಓಗಳು ಹಾಗೂ ಪ್ರಾಂಶುಪಾಲರು ಸೇರಿದಂತೆ ಪ್ರತಿಯೊಬ್ಬರ ಹೆಸರಿನಲ್ಲಿ ಕಾನೂನು ಉಲ್ಲಂಘನೆಯ ದೂರು ಸಲ್ಲಿಸುವುದು ಅನಿವಾರ್ಯವಾಗುತ್ತದೆ.

| ನಿಂಗಪ್ಪ ಬನ್ನಿಹಟ್ಟಿ , ರಾಜ್ಯಧ್ಯಕ್ಷ, ಕರ್ನಾಟಕ ರಾಜ್ಯ ಕ್ರೈಸ್ ವಸತಿ ಶಾಲೆಗಳ ಸಂಘ, ದಾವಣಗೆರೆ


ನ್ಯಾಯಾಲಯವು 11.09.2019 ರ ತೀರ್ಪಿನಲ್ಲಿ ಅತಿಥಿ ಶಿಕ್ಷಕರನ್ನು ಅವರು ಕಾರ್ಯ ನಿರ್ವಹಿಸುತ್ತಿದ್ದ ಸ್ಥಳದಲ್ಲೇ ಮುಂದುವರಿಸಬೇಕು ಹಾಗೂ ಖಾಯಂ ಗೊಳಿಸುವ ಸಂಬಂಧ 6 ವಾರಗಳ ಒಳಗೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದೆ. ಆದರೆ ಎರಡು ವರ್ಷ ಕಳೆದರೂ ಘನ ನ್ಯಾಯಾಲಯದ ಆದೇಶ ಪಾಲಿಸಿಲ್ಲ. ಸ್ವಲ್ಪವೂ ವಿಳಂಬ ಮಾಡದೆ ಆಯಾ ಸಂಧರ್ಭದಲ್ಲೇ ನಾವು ನ್ಯಾಯಾಲಯದ ಪ್ರಕ್ರಿಯೆಯನ್ನು ಎಲ್ಲರ ಗಮನಕ್ಕೆ ತರುವ ಪ್ರಯತ್ನ ನಡೆಸಿದ್ದರೂ ನಮ್ಮ ಆ ಮನವಿಗಳನ್ನಾಗಲಿ, ನ್ಯಾಯಾಲಯದ ಮಧ್ಯಂತರ ಆದೇಶ ಹಾಗೂ ತೀರ್ಪಿನ ಪ್ರತಿಯನ್ನು ಇಲ್ಲಿಯವರೆಗೂ ಗಂಭೀರವಾಗಿ ಪರಿಗಣಿಸಿಲ್ಲ . ಅತಿಥಿ ಶಿಕ್ಷಕರಿಗೆ ಸಮರ್ಪಕ ಲಿಖಿತ ಉತ್ತರ ನೀಡದೆ ವಂಚಿಸುತ್ತಲೇ ಬಂದಿದ್ದಾರೆ ಎಂದು ಸಂಘದ ಪದಾಧಿಕಾರಿಗಳು ಅಳಲು ತೋಡಿಕೊಂಡಿದ್ದಾರೆ .


  • ಇದು ಡಿಜಿಟಲ್ ಯುಗ. ಸದರಿ ವಿಷಯಕ್ಕೆ ಸಂಬಂಧಿಸಿದಂತೆ ಮಾನ್ಯ ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಮಾನ್ಯ ಕಾರ್ಯನಿರ್ವಾಹಕ ನಿರ್ದೇಶಕರು ಜಿಲ್ಲಾ ಮಟ್ಟದ ಅಧಿಕಾರಿಗಳು, ಡಿಸಿಓಗಳು ಹಾಗೂ ಪ್ರಾಂಶುಪಾಲರುಗಳನ್ನು conference ಕಾಲ್ ಮೂಲಕವೋ, zoom / google meeting ಮೂಲಕವೋ ಎಲ್ಲರನ್ನೂ ಒಂದೇ ಬಾರಿಗೆ ಸಂಪರ್ಕಕ್ಕೆ ತೆಗೆದುಕೊಂಡು ಚರ್ಚಿಸಿ ಅತಿಥಿ ಶಿಕ್ಷಕರಿಗೆ ಆಯಾ ಸ್ಥಳದಲ್ಲೇ ಕರ್ತವ್ಯಕ್ಕೆ ಹಾಜರು ಪಡಿಸಿಕೊಳ್ಳುವಂತೆ ಶೀಘ್ರ ನೇರ ಆದೇಶಿಸಿ ಸುತ್ತೋಲೆ ಹೊರಡಿಸಲಿ. ಆ ಮೂಲಕ ನ್ಯಾಯಾಲಯದ ಆದೇಶ ವನ್ನು ಗೌರವಿಸಲಿ.

| ಗಂಗಾಧರ ಬಿ ಎಲ್ ನಿಟ್ಟೂರ್, ಪ್ರಧಾನ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಕ್ರೈಸ್ ವಸತಿ ಶಾಲೆಗಳ ಸಂಘ, ದಾವಣಗೆರೆ.


ನ್ಯಾಯಾಲಯ ತೀರ್ಪು ನೀಡಿಯೇ 2 ವರ್ಷಗಳು ಕಳೆದಿವೆ. ಮಕ್ಕಳಿಗೆ ಅರ್ಥ ಮಾಡಿಸುವ ಸಲುವಾಗಿ ಪಾಠ ಮಾಡುವ ಮುನ್ನವೇ ಹತ್ತಾರು ಬಾರಿ ಓದಿ ನಂತರ ಬೋಧಿಸುವ ಶಿಕ್ಷಕರರಾದ ನಾವಂತೂ ಓದಿ ಮನನ ಮಾಡಿಕೊಂಡಿದ್ದೇವೆ. ಆದರೆ DISSOLVE, DISPOSAL, DISMISS ಎಂಬ ಪದಗಳ ಬಳಸಿ ಅಧಿಕಾರಿಗಳು ಹಾದಿ ತಪ್ಪಿಸಲುತ್ತಿದ್ದಾರೆ ಎಂದಿರುವ ಸಂಘ ಉಚ್ಛ ನ್ಯಾಯಾಲಯದ ತೀರ್ಪನ್ನು ಈಗಲಾದರೂ ಓದಬೇಕಾಗಿ ಹಾಗೂ ಇಲಾಖೆ ವತಿಯಿಂದ ನೇಮಿಸಿಕೊಂಡಿರುವ ವಕೀಲರರೊಂದಿಗೆ ಈಗಲಾದರೂ ಚರ್ಚಿಸಿ ಮಾಹಿತಿ ಪಡೆಯಬೇಕು ಎಂದು ವಿನಂತಿಸಿದೆ.

2 ವರ್ಷದಿಂದ ಬೆಂಗಳೂರಿನ ಕಚೇರಿಗೆ ಅನೇಕ ಬಾರಿ ಹೋಗಿ ಬೆಳಗ್ಗೆಯಿಂದ ಸಂಜೆವರೆಗೂ ಕಾರ್ಯನಿರ್ವಾಹಕ ನಿರ್ದೇಶಕರ ಛೇಂಬರ್ ಹೊರಗೆ ಸರದಿಯಲ್ಲಿ ನಿಂತು ಕಾದು ಒಳ ಹೋಗಿ ಸಂಪರ್ಕಿಸಿದಾಗ – ” ಹೊರ ಉಳಿದಿರುವ ನಿಮಗೆ ಅನ್ಯಾಯ ಮಾಡುವುದಿಲ್ಲ. ಖಾಲಿ ಇರುವ ಜಾಗ ಹುಡುಕಿಕೊಂಡು ಬನ್ನಿ ” ಎಂದು ಒಂದೇ ಮಾತಲ್ಲಿ ಉತ್ತರಿಸಿ ಬೇರೇನೂ ಮಾತಾಡದೆ ಹೊರಗೆ ಕಳಿಸಿದರು . ಅದೇ ಮಾತನ್ನು ಜಿಲ್ಲಾ ಮಟ್ಟದ ಅಧಿಕಾರಿಗಳು ಸಹ ಎಷ್ಟೋ ಬಾರಿ ಹೇಳಿದರು.


  • ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಅಧಿವೇಶನದಲ್ಲಿ ಈ ವಿಚಾರ ಪ್ರಸ್ತಾಪಿಸಿ ನಮ್ಮ ಅಳಲನ್ನು ಮುಟ್ಟಿಸಿ ಸರ್ಕಾರ ಆದೇಶ ಹೊರಡಿಸುವಂತೆ ಸಹಕರಿಸಬೇಕು.

|ಮಧುಮತಿ ಎಂ, ಉಪಾಧ್ಯಕ್ಷರು, ರಾಜ್ಯ ಕ್ರೈಸ್ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ದಾವಣಗೆರೆ


ಈ ಮಾತನ್ನು ಕೇಳಲು ನಮಗೆ ತುಂಬಾ ನಾಚಿಕೆ ಎನಿಸಿದೆ. ಪ್ರತಿ ತಿಂಗಳು ಕೂಡ ಮಾಹೆವಾರಿ ತರಿಸಿಕೊಳ್ಳುವ ಅವರಿಗೆ ಇಡೀ ರಾಜ್ಯದ ಎಲ್ಲಾ ಶಾಲೆಗಳ ಮಾಹಿತಿ ಕೂಡ ಲಭ್ಯ ಇರುತ್ತದೆ. ಸಂಬಂಧಿಸಿದ ಕೇಸ್ ವರ್ಕರ್ ಕರೆದು ಕ್ಷಣ ಮಾತ್ರದಲ್ಲಿ ಮಾಹಿತಿ ಪಡೆದು ಅಲ್ಲೇ ಇತ್ಯರ್ಥ ಪಡಿಸಿಕಳಿಸಬಹುದು. ಆದರೆ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಸಲ್ಲದ ಸಬೂಬು ಹೇಳಿ ಯಾಮಾರಿಸಿದ್ದಾರೆ ಎಂದು ಸಂಘ ದೂರಿದೆ. ಸುಮಾರು 400 ಕ್ಕೂ ಹೆಚ್ಚು ಅತಿಥಿ ಶಿಕ್ಷಕರು ಸೇವೆ ಸಲ್ಲಿಸುತ್ತಿದ್ದಾರೆ. 143 ಅತಿಥಿ ಶಿಕ್ಷಕರಿಗೆ ನ್ಯಾಯಾಲಯ ತೀರ್ಪು ನೀಡಿದೆ. ಸುಮಾರು 235 ಜನ ತೀರ್ಪಿಗಾಗಿ ಕಾಯುತಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ

Published

on

ಸುದ್ದಿದಿನ,ದೆಹಲಿ:2027ರ ಜನಗಣತಿಯನ್ನು ನಡೆಸಲು ಸಂಪುಟವು 11 ಸಾವಿರದ 718 ಕೋಟಿ ರೂಪಾಯಿಗಳ ಬಜೆಟ್‌ಅನ್ನು ಅಂಗೀಕರಿಸಿದೆ. ಈ ಕುರಿತು ಮಾಹಿತಿ ನೀಡಿದ ಸಚಿವರು, 2027ರ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುವುದು ಎಂದು ಹೇಳಿದರು.

ಇದು ಮೊದಲ ಡಿಜಿಟಲ್ ಜನಗಣತಿಯಾಗಲಿದೆ. 2027 ರ ಜನಗಣತಿಯು ಒಟ್ಟಾರೆ 16ನೇ ಮತ್ತು ಸ್ವಾತಂತ್ರ‍್ಯದ ನಂತರದ 8 ನೇ ಜನಗಣತಿಯಾಗಲಿದೆ. ಭಾರತದ ಜನಗಣತಿಯನ್ನು ವಿಶ್ವದ ಅತಿದೊಡ್ಡ ಆಡಳಿತಾತ್ಮಕ ಮತ್ತು ಸಂಖ್ಯಾಶಾಸ್ತ್ರೀಯ ಕ್ರಮವೆಂದು ಪರಿಗಣಿಸಲಾಗಿದೆ ಎಂದು ಅವರು ತಿಳಿಸಿದರು.

ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 2026ರ ಹಂಗಾಮಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಗೆ ಅನುಮೋದನೆ ನೀಡಿದೆ. ಬೆಳೆಗಾರರಿಗೆ ಲಾಭದಾಯಕ ಬೆಲೆಗಳನ್ನು ಒದಗಿಸುವ ಸಲುವಾಗಿ, ಸರ್ಕಾರವು 2018-19 ರ ಕೇಂದ್ರ ಬಜೆಟ್‌ನಲ್ಲಿ ಎಲ್ಲಾ ಕಡ್ಡಾಯ ಬೆಳೆಗಳ ಎಂಎಸ್‌ಪಿ ಅನ್ನು ಅಖಿಲ ಭಾರತ ಸರಾಸರಿ ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು ಮಟ್ಟದಲ್ಲಿ ನಿಗದಿಪಡಿಸಲಾಗುವುದು ಎಂದು ಘೋಷಿಸಿತ್ತು. ಮಿಲ್ಲಿಂಗ್ ಕೊಬ್ಬರಿಗೆ ಎಂಎಸ್‌ಪಿಯನ್ನು ಕ್ವಿಂಟಲ್‌ಗೆ 445 ರೂಪಾಯಿಗಳಿಂದ 12 ಸಾವಿರದ 27 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ ಮತ್ತು ಅದೇ ಅವಧಿಗೆ ಉಂಡೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ 2026ರ ಹಂಗಾಮಿಗೆ ಕ್ವಿಂಟಲ್‌ಗೆ 400 ರೂಪಾಯಿಗಳಿಂದ 12 ಸಾವಿರದ 500 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ.

ಹೆಚ್ಚಿನ ಕನಿಷ್ಠ ಬೆಂಬಲ ಬೆಲೆಯು ತೆಂಗಿನ ಬೆಳೆಗಾರರಿಗೆ ಉತ್ತಮ ಲಾಭದಾಯಕ ಆದಾಯವನ್ನು ಖಚಿತಪಡಿಸುವುದಲ್ಲದೆ, ದೇಶೀಯವಾಗಿ ಮತ್ತು ಅಂತಾರಾಷ್ಟ್ರೀಯವಾಗಿ ತೆಂಗಿನ ಉತ್ಪನ್ನಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಕೊಬ್ಬರಿ ಉತ್ಪಾದನೆಯನ್ನು ವಿಸ್ತರಿಸಲು ರೈತರನ್ನು ಪ್ರೋತ್ಸಾಹಿಸುತ್ತದೆ ಎಂದು ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೋಲ್‌ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು

Published

on

ಸುದ್ದಿದಿನ,ದೆಹಲಿ:ಕೇಂದ್ರ ಸರ್ಕಾರವು ’ಕೋಲ್‌ಸೇತು’ ನೀತಿಯನ್ನು ಅನುಮೋದಿಸಿದೆ. ಇದು ವಿವಿಧ ಕೈಗಾರಿಕಾ ಬಳಕೆಗಳು ಮತ್ತು ರಫ್ತಿಗೆ ಕಲ್ಲಿದ್ದಲು ಸಂಪರ್ಕಗಳ ಹರಾಜಿಗೆ ಹೊಸ ವ್ಯವಸ್ಥೆ ಸೃಷ್ಟಿಸುತ್ತದೆ, ಹಾಗೂ ಸಂಪನ್ಮೂಲಗಳ ನ್ಯಾಯಯುತ ಪ್ರವೇಶ ಮತ್ತು ಅತ್ಯುತ್ತಮ ಬಳಕೆಯನ್ನು ಖಚಿತಪಡಿಸುತ್ತದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು ನಿನ್ನೆ ತಡೆರಹಿತ, ದಕ್ಷ ಮತ್ತು ಪಾರದರ್ಶಕ ಬಳಕೆಗಾಗಿ ಕಲ್ಲಿದ್ದಲು ಸಂಪರ್ಕದ ಹರಾಜು ನೀತಿಗೆ ಅನುಮೋದನೆ ನೀಡಿತು.

ನವದೆಹಲಿಯಲ್ಲಿ ನಿನ್ನೆ ಸಂಜೆ ಸಂಪುಟದ ನಿರ್ಧಾರಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್, 2016ರ ಎನ್‌ಆರ್‌ಎಸ್ ನಿಯಂತ್ರಿತವಲ್ಲದ ವಲಯದ ಸಂಪರ್ಕ ಹರಾಜು ನೀತಿಯಲ್ಲಿ ’ಕೋಲ್‌ಸೇತು’ ಎಂಬ ಪ್ರತ್ಯೇಕ ವ್ಯವಸ್ಥೆಯನ್ನು ಸೇರಿಸುವ ಮೂಲಕ ಯಾವುದೇ ಕೈಗಾರಿಕಾ ಬಳಕೆ ಮತ್ತು ರಫ್ತಿಗೆ ದೀರ್ಘಾವಧಿಯವರೆಗೆ ಹರಾಜು ಆಧಾರದ ಮೇಲೆ ಕಲ್ಲಿದ್ದಲು ಸಂಪರ್ಕಗಳ ಹಂಚಿಕೆಗೆ ಈ ನೀತಿಯು ಅವಕಾಶ ನೀಡುತ್ತದೆ ಎಂದು ಹೇಳಿದರು.

ಕಲ್ಲಿದ್ದಲು ಅಗತ್ಯವಿರುವ ಯಾವುದೇ ದೇಶೀಯ ಖರೀದಿದಾರರು ಅಂತಿಮ ಬಳಕೆಯನ್ನು ಲೆಕ್ಕಿಸದೆ ಸಂಪರ್ಕ ಹರಾಜಿನಲ್ಲಿ ಭಾಗವಹಿಸಬಹುದು ಎಂದು ಅವರು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ

Published

on

ಸುದ್ದಿದಿನ,ದಾವಣಗೆರೆ: ಪ್ರಸಕ್ತ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಪುನರ್ ವಸತಿ ಯೋಜನೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು 15 ಜನವರಿ 2026 ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending