ದಿನದ ಸುದ್ದಿ
ವಸತಿ ಯೋಜನೆಗಳಿಗೆ ಅರ್ಜಿ ಆಹ್ವಾನ : ಅವಧಿ ವಿಸ್ತರಣೆ
ಸುದ್ದಿದಿನ,ದಾವಣಗೆರೆ : ಹರಿಹರ ನಗರಸಭೆ ವ್ಯಾಪ್ತಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ 2021-22 ನೇ ಸಾಲಿಗೆ ರಾಜೀವ್‍ಗಾಂಧಿ ವಸತಿ ನಿಗಮವು ಪರಿಶಿಷ್ಟ ಜಾತಿಯವರಿಗೆ 17 ಹಾಗೂ ಪರಿಶಿಷ್ಟ ಪಂಗಡದವರಿಗೆ 07 ಸೇರಿದಂತೆ ಒಟ್ಟು 24 ಮನೆಗಳ ಗುರಿ. ವಾಜಪೇಯಿ ನಗರ ವಸತಿ ಯೋಜನೆಯಡಿ ಸಾಮಾನ್ಯ ವರ್ಗಕ್ಕೆ 66 ಮತ್ತು ಅಲ್ಪಸಂಖ್ಯಾತರಿಗೆ 10 ಸೇರಿದಂತೆ ಒಟ್ಟು 77 ಮನೆಗಳ ಗುರಿ ನಿಗದಿಪಡಿಸಿದ್ದು. ಅರ್ಜಿ ಸಲ್ಲಿಕೆ ಅವಧಿಯನ್ನು ಫೆ. 25 ರವರೆಗೆ ವಿಸ್ತರಿಸಲಾಗಿದೆ.
ಈ ಮೊದಲು ಅರ್ಜಿ ಸಲ್ಲಿಸಲು ಜ. 31 ಕೊನೆಯ ದಿನವಾಗಿತ್ತು. ಇದೀಗ ಅರ್ಜಿ ಸಲ್ಲಿಕೆ ಅವಧಿಯನ್ನು ಫೆ. 25 ರವರೆಗೆ ವಿಸ್ತರಿಸಲಾಗಿದೆ. ಅರ್ಹರು ಸೂಕ್ತ ದಾಖಲಾತಿಗಳೊಂದಿಗೆ ನಿಗದಿಪಡಿಸಿದ ನಮೂನೆಯಲ್ಲಿ ನಗರಸಭೆಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಖಾಲಿ ನಿವೇಶನ ಹೊಂದಿರಬೇಕು, ಕುಟುಂದ ವಾರ್ಷಿಕ ಆದಾಯ 87600 ರೂ. ಮೀರಿರಬಾರದು. ಗುಡಿಸಲು ವಾಸಿಗಳು, ತಾತ್ಕಾಲಿಕ ಶೇಡ್, ಶಿಥಿಲಗೊಂಡ ಮನೆ, ಕಚ್ಚಾ ಮನೆಗಳಲ್ಲಿ ವಾಸಿಸುತ್ತಿರುವವರು, ಒಂದು ಕೊಣೆಯಿಲ್ಲದ 4ಕ್ಕಿಂತ ಹೆಚ್ಚು ಸದಸ್ಯರುಳ್ಳ ಕುಟುಂಬದವರು ಅರ್ಜಿ ಸಲ್ಲಿಸಲು ಅರ್ಹರು.
ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣಪತ್ರ, ನಗರಸಭೆಯ ಅಸೆಸ್‍ಮೆಮಟ್ 2021-22 ನೇ ಸಾಲಿನ ಖಾತಾ ನಕಲು, ಮತದಾರರ ಗುರುತಿನ ಚೀಟಿ, ಕುಟುಂಬದ ಪಡಿತರ ಚೀಟಿ, ಕುಟುಂಬದ ಪಡಿತರ ಚೀಟಿ, ಕುಟುಂಬ ಸದಸ್ಯರ ಆಧಾರ್ ಕಾರ್ಡ್, ಫೋಟೋ, ಬ್ಯಾಂಕ್ ಖಾತೆ ಪಾಸ್‍ಬುಕ್ ಪ್ರತಿ ಲಗತ್ತಿಸಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಛೇರಿಯ ಸಮಯದಲ್ಲಿ ಆಶ್ರಯ ಶಾಖೆಯ ವಿಷಯ ನಿರ್ವಾಹಕರನ್ನು ಸಂಪರ್ಕಿಸಬಹುದು ಎಂದು ಹರಿಹರ ಶಾಸಕರು ಹಾಗೂ ನಗರ ಆಶ್ರಯ ಸಮಿತಿ ಅಧ್ಯಕ್ಷರಾದ ಎಸ್. ರಾಮಪ್ಪ ಮತ್ತು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆ ಅಣುಕು ಅಭ್ಯಾಸ
ಸುದ್ದಿದಿನ, ಹರಿಹರ :ಇದೇ 14 ರಂದು ಗುರುವಾರ (ನಾಳೆ) ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆಯ ಅಣುಕು ಅಭ್ಯಾಸವನ್ನು ಬೆಳಗ್ಗೆ 8:30 ಕ್ಕೆ ನಡೆಸಲಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಹಾಗೂ ರಾಜ್ಯ ಸರ್ಕಾರದ ಅಧಿಕಾರಿಗಳ ಸಮನ್ವಯದಲ್ಲಿ ಅಣಕು ಅಭ್ಯಾಸವು ನಡೆಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು
ಸುದ್ದಿದಿನಡೆಸ್ಕ್:ಕನ್ನಡ ಚಿತ್ರರಂಗದ ಖ್ಯಾತ ನಟ ದಿಲೀಪ್ ರಾಜ್ (47) ಅವರ ಅಕಾಲಿಕ ನಿಧನವು ಇಡೀ ಸ್ಯಾಂಡಲ್‌ವುಡ್ ಅನ್ನು ದಿಗ್ಭ್ರಮೆಗೊಳಿಸಿದೆ. ಕೇವಲ 47 ವರ್ಷ ವಯಸ್ಸಿನ ಈ ಪ್ರತಿಭಾನ್ವಿತ ಕಲಾವಿದ ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಆದರೆ ಅವರ ಈ ಸಾವಿನ ಹಿಂದೆ ಒಂದು ಬೇಸರದ ಸಂಗತಿಯೂ ಅಡಗಿದೆ, ಅದೇನೆಂದರೆ ಅವರ ಆರೋಗ್ಯದ ಕುರಿತು ತೋರಿದ ಒಂದು ನಿರ್ಲಕ್ಷ್ಯ!
ನಟ ನಿರ್ಮಾಪಕ ದಿಲೀಪ್ ರಾಜ್ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಇಡೀ ಸ್ಯಾಂಡಲ್‌ವುಡ್ ದಿಗ್ಭ್ರಮೆಗೊಂಡಿದೆ. ಕೆಲವು ದಿನಗಳ ಹಿಂದೆ ಗೋವಾ ಪ್ರವಾಸದಲ್ಲಿದ್ದಾಗಲೇ ಅವರಿಗೆ ಆಗಾಗ ಎದೆನೋವು ಕಾಣಿಸಿಕೊಂಡಿತ್ತು, ಆದರೆ ಪ್ರವಾಸದ ಖುಷಿಯಲ್ಲಿದ್ದ ಅವರು ಅದನ್ನ ಗಂಭೀರವಾಗಿ ಪರಿಗಣಿಸಿರಲಿಲ್ಲ.. ಬೆಂಗಳೂರಿಗೆ ಮರಳಿದ ನಂತರ ಇಂದು ವೈದ್ಯಕೀಯ ತಪಾಸಣೆಗೆ ಅಪಾಯಿಂಟ್‌ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು;
ತಪಾಸಣೆಗೆ ಹೋಗುವ ಮುನ್ನವೇ ರಾತ್ರಿ ತೀವ್ರ ಎದೆನೋವು ಕಾಣಿಸಿಕೊಂಡು ಕುಮಾರಸ್ವಾಮಿ ಲೇಔಟ್‌ನ ಅಪೋಲೋ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.ನೋವು ಕಾಣಿಸಿಕೊಂಡ ತಕ್ಷಣವೇ ಆಸ್ಪತ್ರೆಗೆ ದಾಖಲಾಗಿದ್ದರೆ ಇಂದು ಪರಿಸ್ಥಿತಿ ಬೇರೆಯೇ ಇರುತ್ತಿತ್ತು ಎಂದು ಅವರ ಕುಟುಂಬಸ್ಥರು ಮತ್ತು ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ.
ನಟ ದಿಲೀಪ್ ರಾಜ್ ಅವರು ಕೆಲವೇ ದಿನಗಳ ಹಿಂದೆ ಗೋವಾಗೆ ಪ್ರವಾಸ ತೆರಳಿದ್ದರು.
ಅಲ್ಲಿ ಗೆಳೆಯರೊಂದಿಗೆ ಕಾಲ ಕಳೆಯುವಾಗಲೇ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು ಎನ್ನಲಾಗುತ್ತಿದೆ. ಅಂದೇ ಹೃದಯವು ಅಪಾಯದ ಮುನ್ಸೂಚನೆ ನೀಡಿದ್ದರೂ, ದಿಲೀಪ್ ಅವರು ಅದನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ತೋರಿದ್ದರು. ಗೋವಾ ಟ್ರಿಪ್‌ನಲ್ಲಿದ್ದಾಗಲೇ ಆಗಾಗ ನೋವು ಕಾಣಿಸಿಕೊಂಡರೂ, ಅವರು ಅದನ್ನು ಕೇರ್ ಮಾಡಿರಲಿಲ್ಲ.
ಬೆಂಗಳೂರಿಗೆ ಮರಳಿದ ನಂತರ ಅವರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ನಿರ್ಧರಿಸಿದ್ದರು. ವಿಪರ್ಯಾಸವೆಂದರೆ, ಇಂದು ಅವರು ಆಸ್ಪತ್ರೆಗೆ ತೆರಳಿ ಹೃದಯ ತಪಾಸಣೆ ಮಾಡಿಸಿಕೊಳ್ಳಬೇಕಿತ್ತು ಮತ್ತು ಅದಕ್ಕಾಗಿ ವೈದ್ಯರ ಅಪಾಯಿಂಟ್‌ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು. ನಿನ್ನೆ ರಾತ್ರಿ ಕೂಡ ಧಾರಾವಾಹಿ ಕಲಾವಿದರ ಜೊತೆ ಫೋನ್‌ನಲ್ಲಿ ಆತ್ಮೀಯವಾಗಿ ಮಾತನಾಡಿದ್ದ ನಟನಿಗೆ, ಮಧ್ಯರಾತ್ರಿ ತೀವ್ರವಾದ ಎದೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ತೆರಳುವ ಮುನ್ನವೇ ಅವರು ಏಕಾಏಕಿ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!
ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.
ನಡೆದಿದ್ದೇನು?
ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.
ಡೆತ್ ನೋಟ್‌ನಲ್ಲಿತ್ತು ಕೊನೆಯ ಆಸೆ
ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.
ತಮಿಳುನಾಡಿನಲ್ಲಿ ಅಂತ್ಯಕ್ರಿಯೆ
ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.
ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ಅಂಕಣ3 days agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ದಿನದ ಸುದ್ದಿ3 days agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
-
ದಿನದ ಸುದ್ದಿ4 days agoಮಾನಸಿಕ ಆರೋಗ್ಯ ಅರಿವು ಅಗತ್ಯ : ಡಾ. ಪ್ರಭು ಎಂ. ಬಿಸ್ಲೇರಿ
-
ದಿನದ ಸುದ್ದಿ2 days agoಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!
-
ದಿನದ ಸುದ್ದಿ1 day agoನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು
-
ದಿನದ ಸುದ್ದಿ4 days agoಬದುಕಿನಲ್ಲಿ ಪ್ರಾಮಾಣಿಕತೆ ಮತ್ತು ಪರಿಶ್ರಮವಿದ್ದರೆ ಯಶಸ್ಸು ನಿಶ್ಚಿತ

