Connect with us

ದಿನದ ಸುದ್ದಿ

ಉಕ್ರೇನ್‍ನಿಂದ ಸುರಕ್ಷಿತವಾಗಿ ಹಿಂದಿರುಗಿದ ವಿದ್ಯಾರ್ಥಿಗಳ ಯೋಗಕ್ಷೇಮ ವಿಚಾರಿಸಿದ ಸಂಸದ ಡಾ.ಜಿ.ಎಂ.ಸಿದ್ದೇಶ್ವರ್

Published

on

ಸುದ್ದಿದಿನ,ದಾವಣಗೆರೆ :‌ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಉಕ್ರೇನ್‍ನಲ್ಲಿ ವೈದ್ಯಕೀಯ ಶಿಕ್ಷಣ ಪಡೆಯಲು ತೆರಳಿದ್ದ ಜಿಲ್ಲೆಯ ಕೆಲವು ವಿದ್ಯಾರ್ಥಿಗಳು ಸುರಕ್ಷಿತವಾಗಿ ಮರಳಿ ಬಂದಿದ್ದು, ಇನ್ನುಳಿದ ವಿದ್ಯಾರ್ಥಿಗಳನ್ನು ಕೂಡ ಕರೆತರಲು ವಿದೇಶಾಂಗ ಸಚಿವರ ಜೊತೆಗೆ ನಿರಂತರವಾಗಿ ಮಾತುಕತೆ ನಡೆಸುತ್ತಿದ್ದೇವೆ ಎಂದು ಸಂಸದ ಡಾ ಜಿ.ಎಂ ಸಿದ್ದೇಶ್ವರ್ ಹೇಳಿದರು.

ಶನಿವಾರ ನಗರದಲ್ಲಿ ಉಕ್ರೇನ್‍ನಿಂದ ವಾಪಾಸ್ಸಾದ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ, ನಂತರ ಪೋಷಕರು ಮತ್ತು ವಿದ್ಯಾರ್ಥಿಗಳೊಂದಿಗೆ ಯೋಗಕ್ಷೇಮ ವಿಚಾರಿಸಿ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಯುದ್ಧಪೀಡಿತ ಉಕ್ರೇನ್ ದೇಶದ ವಿವಿಧ ನಗರಗಳಲ್ಲಿರುವ ಭಾರತೀಯರನ್ನು ತೆರವುಗೊಳಿಸುವ ಬಗ್ಗೆ ಭಾರತದ ವಿದೇಶಾಂಗ ಸಚಿವಾಲಯ ಅಧಿಕಾರಿಗಳು ಉಕ್ರೇನ್ ಹಾಗೂ ರಷ್ಯಾ ಎರಡೂ ದೇಶಗಳ ಅಧಿಕಾರಿಗಳ ಸಂಪರ್ಕದಲ್ಲಿದ್ದಾರೆ, ಉಕ್ರೇನ್‍ನಿಂದ ವಾಪಾಸ್ಸಾದ ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸದ ಬಗ್ಗೆ ನಮ್ಮ ಸರ್ಕಾರ ಚಿಂತನೆ ನಡೆಸುತ್ತಿದೆ, ಹೀಗಾಗಿ ವಿದ್ಯಾರ್ಥಿಗಳು ಆತಂಕ ಪಡದೇ ಧೈರ್ಯವಾಗಿರಿ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಅವರು ಹೇಳಿದರು.

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ಭಾರತ ಸರ್ಕಾರ ತನ್ನ ಸ್ವಂತ ಖರ್ಚಿನಲ್ಲಿ ಬಸ್, ವಿಮಾನ, ರೈಲುಗಳ ಮೂಲಕ ವಿದ್ಯಾರ್ಥಿಗಳನ್ನು ಮರಳಿ ಭಾರತಕ್ಕೆ ಕರೆತರುತ್ತಿದೆ, ಜಿಲ್ಲೆಯ ಕೆಲವು ವಿದ್ಯಾರ್ಥಿಗಳು ಈಗಾಗಲೇ ಮರಳಿದ್ದು, ಇನ್ನುಳಿದ ವಿದ್ಯಾರ್ಥಿಗಳನ್ನು ಕೂಡ ಸುರಕ್ಷಿತವಾಗಿ ಕರೆತರುವ ಪ್ರಯತ್ನ ಮಾಡುತ್ತಿದ್ದೇವೆ. ಪೋಷಕರು ಭಯಪಡದೇ ಧೈರ್ಯವಾಗಿರಬೇಕು ಎಂದರು.

ಉಕ್ರೇನ್‍ನಿಂದ ವಾಪಾಸ್ಸಾದ ವಿದ್ಯಾರ್ಥಿಗಳಾದ ಸಂಜಯ್‍ಕುಮಾರ್, ಸಯ್ಯದ್ ಹಬೀಬಾ ಹಾಗೂ ವಿನಯ್ ಕಲ್ಲಿಹಾಳ್ ಮಾತನಾಡಿ, ಉಕ್ರೇನ್ ತೊರೆಯುವಂತೆ ವಿದ್ಯಾರ್ಥಿಗಳಿಗೆ ಭಾರತದ ರಾಯಭಾರಿ ಕಚೇರಿಯೂ ಸೂಚಿಸಿತ್ತು. ಆದರೆ ನಾವು ಓದುತ್ತಿದ್ದ ಕಾಲೇಜಿನವರು ವಾಪಸ್ ಹೋಗದಂತೆ ಹೇಳಿದ್ದರು, ಹಾಜರಾತಿಯೂ ಕಡ್ಡಾಯವಾಗಿತ್ತು. ಆನ್‍ಲೈನ್ ತರಗತಿಯ ಅವಕಾಶವು ಕೂಡ ಇರಲಿಲ್ಲ. ಹಾಗಾಗಿ ವಾಪಸ್ ಬರಲು ಪರಿಸ್ಥಿತಿ ಕಷ್ಟಕರವಾಗಿತ್ತು. ರಷ್ಯಾ ದಾಳಿ ಆರಂಭಿಸಿದ ನಂತರ ವಿಮಾನ ಸಂಚಾರ ರದ್ದಾದವು, ಆಗ ನಾವು ಬಂಕರ್‍ಗಳಲ್ಲಿ ಆಶ್ರಯ ಪಡೆದಿದ್ದೆವು ಎಂದು ತಿಳಿಸಿದರು.

ದೇಶಕ್ಕೆ ಸುರಕ್ಷಿತವಾಗಿ ಮರಳುವ ನಂಬಿಕೆ ಕಳೆದುಕೊಂಡಿದ್ದೆವು, ಕಷ್ಟಪಟ್ಟು ಉಕ್ರೇನ್ ಗಡಿ ದಾಟಿ ಬಂದೆವು, ಅಲ್ಲಿಂದ ಭಾರತ ಸರ್ಕಾರ ಮತ್ತು ಸೇನೆಯ ಅಧಿಕಾರಿಗಳು ನಮ್ಮನ್ನು ಸುರಕ್ಷಿತವಾಗಿ ಜಿಲ್ಲೆಗೆ ಕರೆತಂದರು. ಹೀಗಾಗಿ ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸುತ್ತೇವೆ ಎಂದು ಹೇಳಿದರು.

ಇದೆ ವೇಳೆ ಉಕ್ರೇನ್‍ನಲ್ಲಿ ಸಿಲುಕಿಕೊಂಡಿರುವ ಜಿಲ್ಲೆಯ ವಿದ್ಯಾರ್ಥಿ ಕುಶಾಲ್ ಶಂಕರಣ್ಣನವರ್ ಮನೆಗೆ ಸಂಸದರು ಹಾಗೂ ಜಿಲ್ಲಾಧಿಕಾರಿಗಳು ಭೇಟಿ ನೀಡಿ ಆದಷ್ಟು ಬೇಗ ಅವರನ್ನು ಉಕ್ರೇನ್‍ನಿಂದ ಕರೆ ತರುವ ಎಲ್ಲಾ ಪ್ರಯತ್ನ ಮಾಡಲಾಗುವುದು ಎಂದು ಪೋಷಕರಿಗೆ ಭರವಸೆ ನೀಡಿ ಧೈರ್ಯ ತುಂಬಿದರು.

ಇದೇ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮೇಯರ್ ಜಯಮ್ಮ ಗೋಪಿನಾಯ್ಕ್ ಹಾಗೂ ಉಪ ಮೇಯರ್ ಗಾಯಿತ್ರಿಬಾಯಿ, ಧೂಡಾ ಮಾಜಿ ಅಧ್ಯಕ್ಷ ಯಶವಂತ್‍ರಾವ್ ಜಾಧವ್, ಡಿವೈಎಸ್ಪಿ ನರಸಿಂಹ ತಾಮ್ರಧ್ವಜ ಹಾಗೂ ಇತರರು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ ಮತ್ತು ನಿಸಾರ್ ಅಹಮದ್ ಬಿನ್ ಮಹಮ್ಮದ್ ಅಬಿದ್ ಮತ್ತು ಇನ್ನೊಬ್ಬರು, ಬೇತೂರು ರೋಡ್, ಸಿದ್ಧರಾಮೇಶ್ವರ ಬಡಾವಣೆ ಇವರು ತಮ್ಮ ಮಗ ತಾಜು @ ತಾಜುದ್ದೀನ್ ಇವರು ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜಾಡುವ ಸಂಧರ್ಭದಲ್ಲಿ ಮರಣ ಹೊಂದಿರುತ್ತಾರೆ.

ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 4ನೇ ಎದುರುದಾರರಾದ ಸದಾನಂದ ವಗಲೆ ಹಾಗೂ 1 ರಿಂದ 3ನೇ ಎದುರುದಾರರ ವಿರುದ್ಧ, ತಮ್ಮ ಸೇವೆಯಲ್ಲಿನ ನಿರ್ಲಕ್ಷತೆಯಿಂದ ಘಟನೆ ಸಂಭವಿಸಿದ್ದು ಎಂಬ ತೀರ್ಮಾನಕ್ಕೆ ಆಯೋಗವು ಬಂದಿದ್ದು, ಈಗಾಗಲೇ, 1 ರಿಂದ 3ನೇ ಎದುರುದಾರರು, ದೂರುದಾರರಿಗೆ ರೂ.500,000/- ಲಕ್ಷವನ್ನು ಪರಿಹಾರವಾಗಿ ಈಗಾಗಲೆ ಕೊಟ್ಟಿದ್ದು, ಆದ್ದರಿಂದ 1 ರಿಂದ 3ನೇ ಎದುರುದಾರರ ವಿರುದ್ಧ ಪ್ರಕರಣವನ್ನು ವಜಾ ಮಾಡಿದೆ.

4ನೇ ಎದುರುದಾರರಾದ ಸದಾನಂದ ವಗಲೆ, ಕಾಂಟ್ರಕ್ಟರ್, ಇವರು ಈ ಎರಡು ಪ್ರಕರಣದ ದೂರುದಾರರಿಗೆ ಆದೇಶಿಸಿದ ದಿನದಿಂದ ಒಂದು ತಿಂಗಳೊಳಗೆ ಆದೇಶದ ಪ್ರಕಾರ ಪಾವತಿಸುವಂತೆ ಮೇ.19 ರಂದು ಆದೇಶಿಸಿ ರೂ. 5 ಲಕ್ಷಗಳನ್ನು ಶೇಕಡಾ 6 ವಾರ್ಷಿಕ ಬಡ್ಡಿಯೊಂದಿಗೆ ಹಾಗೂ ದೂರು ಖರ್ಚು ಹಾಗೂ ಮಾನಸಿಕ ಯಾತನೆಗೆ ತಲಾ ರೂ.5 ಸಾವಿರದಂತೆ, ಒಟ್ಟು ರೂ.10,000/-ಗಳನ್ನು ಪರಿಹಾರ ರೂಪವಾಗಿ ದೂರುದಾರರಿಗೆ ನೀಡುವಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪ್ರತ್ಯೇಕವಾಗಿ ಪಾವತಿಸುವಂತೆ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಹೆಚ್.ಎನ್.ಮೀನಾ ಮತ್ತು ಸದಸ್ಯರಾದ ಸಿ.ಎಸ್. ತ್ಯಾಗರಾಜನ್ ಆದೇಶಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸ್ವಾಮಿ ವಿವೇಕಾನಂದರ ಚಿಂತನೆಗಳಿಂದ ಯುವಜನತೆಗೆ ಪ್ರೇರಣೆ ; ವಿಶ್ವನಾಥ.ಡಿ. ಅರ್

Published

on

ಸುದ್ದಿದಿನ,ಬನ್ನಿಕೋಡು:ಮಾ.ಸ.ಬ. ಕಾಲೇಜ್, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್‌.ಎಸ್‌.ಎಸ್‌. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಎರಡನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ. ರಂಗಸ್ವಾಮಿ ಟಿ.ಆರ್. ವಹಿಸಿ, ವಿದ್ಯಾರ್ಥಿಗಳಿಗೆ ಲಭ್ಯವಾಗಿರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ವಿಶೇಷ ಉಪನ್ಯಾಸದಲ್ಲಿ ಶ್ರೀ ವಿಶ್ವನಾಥ್ ಡಿ.ಆರ್., ಉಪನ್ಯಾಸಕರು ಹಾಗೂ ಪತ್ರಿಕಾ ವರದಿಗಾರರು, ಕೆ. ಬೇವಿನಹಳ್ಳಿ ಅವರು “ಸ್ವಾಮಿ ವಿವೇಕಾನಂದ ಮತ್ತು ಯುವಜನತೆ” ವಿಷಯದ ಕುರಿತು ಪ್ರೇರಣಾದಾಯಕ ಉಪನ್ಯಾಸ ನೀಡಿದರು. ಸ್ವಾಮಿ ವಿವೇಕಾನಂದರ ಜೀವನ ಸಾಧನೆ, ವ್ಯಕ್ತಿತ್ವ ಹಾಗೂ ದೇಶಭಕ್ತಿ ಕುರಿತು ವಿವರಿಸಿ, ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಅನುಸರಿಸಿ ಉತ್ತಮ ಆಚಾರ-ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಯುವಜನತೆ ತಮ್ಮ ಶಕ್ತಿಯನ್ನು ಸಮಾಜಸೇವೆ ಹಾಗೂ ದೇಶದ ಅಭಿವೃದ್ಧಿಗೆ ಬಳಸಬೇಕು ಎಂದು ಕರೆ ನೀಡಿದರು.

“ಎದ್ದು ನಿಲ್ಲಿ, ಜಾಗ್ರತವಾಗಿರಿ, ಗುರಿ ಸಾಧಿಸುವ ತನಕ ನಿಲ್ಲಬೇಡಿ” ಎಂಬ ಸ್ವಾಮಿ ವಿವೇಕಾನಂದರ ಅಮೂಲ್ಯ ವಾಕ್ಯವನ್ನು ಉಲ್ಲೇಖಿಸಿ, ಯುವಕರಲ್ಲಿ ಆತ್ಮವಿಶ್ವಾಸ ಮತ್ತು ಗುರಿನಿಷ್ಠೆ ಬೆಳೆಸುವಂತೆ ಪ್ರೇರೇಪಿಸಿದರು.

ಶ್ರೀ ಎ. ಜಯಪ್ಪ ಅವರು ಎನ್‌.ಎಸ್‌.ಎಸ್‌. ಕಾರ್ಯಚಟುವಟಿಕೆಗಳು ಸಮಾಜಸೇವೆ ಹಾಗೂ ಸಾಮಾಜಿಕ ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.

ಶ್ರೀ ಪಿ.ವಿ. ಸತೀಶ್ ಅವರು ಹಳ್ಳಿ ಜೀವನದ ಮಹತ್ವ ಹಾಗೂ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಿದರು.

ಉಪನ್ಯಾಸಕಿ ಕಾವ್ಯ ಶ್ರೀ ಅವರು ಮಹಿಳಾ ಸಬಲೀಕರಣದ ಕುರಿತು ಮಾತನಾಡಿ, ಮಹಿಳೆಯರು ಶಿಕ್ಷಣ ಹಾಗೂ ಆತ್ಮವಿಶ್ವಾಸದಿಂದ ಸಮಾಜದಲ್ಲಿ ತಮ್ಮದೇ ಆದ ಸ್ಥಾನಮಾನವನ್ನು ಪಡೆಯಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು ಹಾಗೂ ಮುಖಂಡರಾದ ವಾಗೀಶ್ ಸುದರ್ಶನ ಎಸ್.ಸಿ., ವಿಜಯ, ಹನುಮಂತಪ್ಪ ಯು., ಕೆ.ಎಸ್‌. ಬಸವರಾಜು, ಕೆ. ರೇವಣಸಿದ್ಧಪ್ಪ ಮುಂತಾದವರು ಭಾಗವಹಿಸಿದ್ದರು.

ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಹಾಗೂ ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್ ಹಾಗೂ ಉಪನ್ಯಾಸಕರಾದ ಶ್ರೀ ಶಾಂತಕುಮಾರ್ ಉಪಸ್ಥಿತರಿದ್ದರು.

ವೇದಿಕೆ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಮೂಲಕ ಎರಡನೇ ದಿನದ ಶಿಬಿರವು ಮುಕ್ತಾಯಗೊಂಡಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಲೋಕಾಯುಕ್ತ ಪೋಲಿಸ್ ಇನ್ಸ್‌ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು

Published

on

ಸುದ್ದಿದಿನ,ಬನ್ನಿಕೋಡು: ಮಾ.ಸ.ಬ. ಕಾಲೇಜು, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್‌.ಎಸ್‌.ಎಸ್‌. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಅಧ್ಯಕ್ಷತೆಯನ್ನು ಮಾ.ಸ.ಬ. ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ವಿಜಯಕುಮಾರ್ ಎ.ಬಿ. ವಹಿಸಿದ್ದರು.

ಮುಖ್ಯ ಉಪನ್ಯಾಸಕರಾಗಿ ಕರ್ನಾಟಕ ಲೋಕಾಯುಕ್ತ, ದಾವಣಗೆರೆ ಇವರ ಪೋಲಿಸ್ ಇನ್ಸ್‌ಪೆಕ್ಟರ್ ಶ್ರೀ ಪ್ರಭು ಬಿ. ಸೂರಿನ ಭಾಗವಹಿಸಿ “ಕರ್ನಾಟಕ ಲೋಕಾಯುಕ್ತ ಕಾಯ್ದೆ ಮತ್ತು ಭ್ರಷ್ಟಾಚಾರ ನಿಗ್ರಹ ಕಾಯ್ದೆ” ಕುರಿತು ಸಮಗ್ರ ಮಾಹಿತಿ ನೀಡಿದರು. ಕರ್ನಾಟಕ ಲೋಕಾಯುಕ್ತದ ಸ್ಥಾಪನೆ ಮತ್ತು ಹಿನ್ನೆಲೆ, ಸಂಸ್ಥೆಯ ವ್ಯಾಪ್ತಿ, ದೂರು ಸಲ್ಲಿಸುವ ವಿಧಾನ, ವಿಚಾರಣೆ ಕ್ರಮ, ಭ್ರಷ್ಟಾಚಾರ ತಡೆ ಕಾಯ್ದೆಯ ಪ್ರಮುಖ ಅಂಶಗಳು, ಲೋಕಾಯುಕ್ತ ಸಂಸ್ಥೆಯ ವೈಶಿಷ್ಟ್ಯತೆಗಳು, ಹಗರಣಗಳ ತನಿಖಾ ವಿಧಾನ ಹಾಗೂ ಸರ್ಕಾರಿ ಹಣದ ದುರುಪಯೋಗ ತಡೆ ಕ್ರಮಗಳ ಬಗ್ಗೆ ವಿವರಿಸಿದರು. ಉಪನ್ಯಾಸದ ಅಂತ್ಯದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರ ನೀಡಿದರು.

ಜಿಲ್ಲಾ ನೋಡಲ್ ಅಧಿಕಾರಿಗಳಾದ ಡಾ. ಹೆಚ್.ಆರ್. ತಿಪ್ಪೇಸ್ವಾಮಿ ಅವರು ಯುವಜನತೆ ಹಾಗೂ ಸಾಮಾಜಿಕ ಸಾಮರಸ್ಯ ಕುರಿತು ಪ್ರೇರಣಾದಾಯಕ ಸಂದೇಶ ನೀಡಿದರು.

ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಮತ್ತು ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್, ಗ್ರಾಮದವರಾದ ಬಸವರಾಜ್, ಹಾಲಪ್ಪ, ಮಹದೇವಪ್ಪ, ಕುರಿಯರ್ ದುರುಗಪ್ಪ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಕಾನೂನು ಜಾಗೃತಿ ಹಾಗೂ ಭ್ರಷ್ಟಾಚಾರ ವಿರೋಧಿ ಮನೋಭಾವ ಬೆಳೆಸುವಲ್ಲಿ ಯಶಸ್ವಿಯಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending