Connect with us

ರಾಜಕೀಯ

ಈಶ್ವರಪ್ಪನವರ ರಕ್ಷಣೆಗೆ ನಿಂತ ಸರ್ಕಾರ ; 40% ಕಮಿಷನ್ ನಲ್ಲಿ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ಪಾಲುದಾರರಾ? : ಬಿ ಕೆ ಹರಿಪ್ರಸಾದ್

Published

on

ಸುದ್ದಿದಿನ,ಬೆಂಗಳೂರು : ಸಂತೋಷ್ ಪಾಟೀಲ್ ಆತ್ಮಹತ್ಯೆ ವಿಷಯಕ್ಕೆ ಕ್ರಿಮಿನಲ್ ಆರೋಪ ಹೊತ್ತಿರುವ ಸಚಿವ ಈಶ್ವರಪ್ಪನವರನ್ನ ಸಚಿವ ಸಂಪುಟದಿಂದ ವಜಾ ಮಾಡಲು ರಾಜ್ಯಪಾಲರನ್ನ ಕಾಂಗ್ರೆಸ್ ನಿಯೋಗ ಭೇಟಿ ನೀಡಿ ಮನವಿ ಮಾಡಿದ್ದೇವೆ. ಸೆಕ್ಷನ್ 306ರಡಿಯಲ್ಲಿ ಈಶ್ವರಪ್ಪನವರನ್ನ ಬಂಧಿಸಿ ತನಿಖೆ ನಡೆಸಲು ಸರ್ಕಾರಕ್ಕೆ ಸೂಚನೆ ನೀಡಬೇಕೆಂದು ಒತ್ತಾಯಿಸಿದ್ದೇವೆ ಎಂದುವಿ ಧಾನ ಪರಿಷತ್ ವಿಪಕ್ಷ ನಾಯಕರಾದ ಬಿಕೆ ಹರಿಪ್ರಸಾದ್ ಹೇಳಿದ್ದಾರೆ

ಸಚಿವ ಈಶ್ವರಪ್ಪನವರ ಪರವಾಗಿ ವಕಲಾತ್ತು ವಹಿಸುತ್ತಿರುವ ಸಿಎಂ ಬೊಮ್ಮಾಯಿಯವರು, ಹಾಗೂ ನಾ ಖಾನೇ ದುಂಗಾ, ನಾ ಖಾವೂಂಗಾ ಎಂದು ಘೋಷಣೆ ಮಾಡಿದ್ದ ಮೋದಿಯವರು ಮೌನವಹಿಸಿದ್ದಾರೆ. ಸಚಿವರ ಕಮಿಷನ್ ಪಡೆಯುತ್ತಿರುವುದರಲ್ಲಿ ಸಿಎಂ ಹಾಗೂ ಪಿಎಂಗೂ ಪಾಲುದಾರಿಕೆ ಇರಬೇಕು. ಇಲ್ಲದಿದ್ದರೇ ಈ ಕೂಡಲೇ ಸಚಿವ ಸಂಪುಟದಿಂದ ವಜಾ ಮಾಡಿ ಎಂದರು.

ಸಂತೋಷ್ ಪಾಟೀಲ್ ಸೇರಿದಂತೆ ಗುತ್ತಿಗೆದಾರರ ಸಂಘ ರಾಜ್ಯದಲ್ಲಿ 40% ಕಮಿಷನ್ ಪಡೆಯುತ್ತಿದೆ ಎಂದು ಪ್ರಧಾನಿಗಳಿಗೂ ಪತ್ರ ಬರೆದಿದ್ದರೂ ಕಮಿಷನ್ ಬಗ್ಗೆ ರಾಜ್ಯ ಸರ್ಕಾರ ಹಾಗೂ ಪ್ರಧಾನಿ ಮೌನವಹಿಸಿದ್ದಾರೆ. ಆರೋಪ ಬಂದ ಕೂಡಲೇ ಕ್ರಮವಹಿಸಿದ್ದರೆ ಅಮಾಯಕ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಳ್ಳುತ್ತಿರಲಿಲ್ಲ. ಸರ್ಕಾರದ ನಿರ್ಲಕ್ಷ್ಯವೇ ಸಂತೋಷ್ ಆತ್ಮಹತ್ಯೆಗೆ ಕಾರಣ, ಇದೊಂದು ಪ್ರಾಯೋಜಿತ ಕೊಲೆ ಎಂದು ಕಿಡಿ ಕಾರಿದರು.

ಸಂತೋಷ್ ಪಾಟೀಲ್ ಪತ್ನಿ ಸೇರಿದಂತೆ ಇಡೀ ಕುಟುಂಬ ಸಚಿವ ಈಶ್ವರಪ್ಪನೇ ನೇರ ಕಾರಣ ಎಂದು ಆರೋಪಿಸಿದ್ದಾರೆ. ಸರ್ಕಾರಕ್ಕೆ ನೈತಿಕತೆ ಇದ್ರೆ ಈಶ್ವರಪ್ಪನವರನ್ನ ವಜಾ ಮಾಡಿ ಕೂಡಲೇ ಬಂಧಿಸಿಬೇಕು. ಬಿಜೆಪಿ ಸರ್ಕಾರದ ಕಮಿಷನ್ ದಂಧೆಯಿಂದ ರಾಜ್ಯದಲ್ಲಿ ಗುತ್ತಿಗೆದಾರರು ಕಿರುಕುಳ ಅನುಭವಿಸುವಂತಾಗಿದೆ.

ಈಶ್ಬರಪ್ಪನವರ ರಾಜಕೀಯ ಆರಂಭವೇ ಅಮಾಯಕ ಹೆಣಗಳ ಮೇಲೆ ರಾಜಕೀಯ ನಡೆಸಿದ್ದು. ಕಾಂಗ್ರೆಸ್ ಪಕ್ಷಕ್ಕೆ ಹೆಣದ ಮೇಲೆ ರಾಜಕೀಯ ಮಾಡಿದ ಇತಿಹಾಸವೇ ಇಲ್ಲ. ಈಶ್ವರಪ್ಪನವರನ್ನ ವಜಾ‌ಮಾಡಿ, ಬಂಧಿಸಿ ತನಿಖೆ ನಡೆಸದೇ ಇದ್ದರೇ ಕಾಂಗ್ರೆಸ್ ಪಕ್ಷ ರಾಜ್ಯಾದ್ಯಂತ ಹೋರಾಟ ನಡೆಸಲಿದೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಅಂಗನವಾಡಿ ; ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭ : ಸಿಎಂ ಸೂಚನೆ

Published

on

ಸುದ್ದಿದಿನಡೆಸ್ಕ್:ರಾಜ್ಯದ ಅಂಗನವಾಡಿಗಳಲ್ಲಿ, ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಿಸುವ ಕುರಿತು ಅಧ್ಯಯನಕ್ಕೆ, ತ್ವರಿತವಾಗಿ ತಜ್ಞರ ಸಮಿತಿ ರಚಿಸಿ, ಎರಡು ತಿಂಗಳೊಳಗೆ ವರದಿ ಪಡೆಯುವಂತೆ, ಶಾಲಾ ಶಿಕ್ಷಣ ಖಾತೆ ಸಚಿವರಿಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.


  • ಲ್ಯಾಟರಲ್ ಪ್ರವೇಶ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಡಿಪ್ಲೊಮೊ ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್ ಕಾಲೇಜುಗಳ ಲ್ಯಾಟರಲ್ ಪ್ರವೇಶಕ್ಕೆ ನಡೆಸಿದ್ದ ಪ್ರವೇಶ ಪರೀಕ್ಷೆಯ ತಾತ್ಕಾಲಿಕ ಸರಿ ಉತ್ತರ ಪ್ರಕಟಿಸಿದೆ. ಉತ್ತರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ಕೆಇಎ ಪ್ರಕಟಿಸಿದೆ.


ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಆರೋಗ್ಯ ಇಲಾಖೆ ನೇಮಕಾತಿ ; ಸಚಿವ ದಿನೇಶ್ ಗುಂಡೂರಾವ್ ರಿಂದ ಸಿಹಿ ಸುದ್ದಿ

Published

on

ಸುದ್ದಿದಿನಡೆಸ್ಕ್:ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ವೈದ್ಯರು, ಸಿಬ್ಬಂದಿಗಳ ಕೊರತೆ ಇದ್ದು, ಹಂತ ಹಂತವಾಗಿ ವೈದ್ಯರ ನೇಮಕ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಡಿಕೇರಿಯಲ್ಲಿ ನಿನ್ನೆ ತಿಳಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಯಲ್ಲಿಯೇ ಎಲ್ಲಾ ರೀತಿಯ ಆರೋಗ್ಯ ಸೌಲಭ್ಯ ದೊರೆಯುವಂತಾಗಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಜಿಎಸ್‌ಟಿ ಭಾರತೀಯರ ಜೀವನ ಸುಧಾರಿಸುವ ಸಾಧನ : ಪ್ರಧಾನಿ ಮೋದಿ

Published

on

ಸುದ್ದಿದಿನಡೆಸ್ಕ್:ಸರಕು ಮತ್ತು ಸೇವಾ ತೆರಿಗೆ ಜಿಎಸ್‌ಟಿಗೆ ಏಳು ವರ್ಷ ತುಂಬಿದ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಜಿಎಸ್‌ಟಿ, 140 ಕೋಟಿ ಭಾರತೀಯರ ಜೀವನವನ್ನು ಸುಧಾರಿಸುವ ಸಾಧನವಾಗಿದೆ. ಇದರ ಜಾರಿಯ ಬಳಿಕ ಬಡವರು ಮತ್ತು ಜನಸಾಮಾನ್ಯರಿಗೆ ಗಮನಾರ್ಹ ಉಳಿತಾಯವಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಹೇಳಿದ್ದಾರೆ.

ಜಿಎಸ್‌ಟಿ ಜಾರಿಯಾದ ನಂತರ ಗೃಹಬಳಕೆಯ ವಸ್ತುಗಳು ಹೆಚ್ಚು ಅಗ್ಗವಾಗಿವೆ ಎಂದಿರುವ ಅವರು, ಜನರ ಜೀವನವನ್ನು ಪರಿವರ್ತಿಸುವ ಈ ಸುಧಾರಣೆಗಳ ಪ್ರಯಾಣವನ್ನು ಮುಂದುವರಿಸಲು ನಾವು ಬದ್ಧರಾಗಿದ್ದೇವೆ ಎಂದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending