Connect with us

ದಿನದ ಸುದ್ದಿ

ಬೆಳಗಿನ ಪ್ರಮುಖ ಸುದ್ದಿಗಳು ; ಮಿಸ್ ಮಾಡ್ದೆ ಓದಿ

Published

on

ಬೆಳಗಿನ ಪ್ರಮುಖ ಸುದ್ದಿಗಳು ; ಮಿಸ್ ಮಾಡ್ದೆ ಓದಿ

  • ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಸಿದ್ಧತೆ ದೃಷ್ಟಿಯಿಂದ ಇಂದು ಮತ್ತು ನಾಳೆ, ಹೊಸಪೇಟೆಯಲ್ಲಿ ಬಿಜೆಪಿಯ ರಾಜ್ಯ ಕಾರ್ಯಕಾರಿಣಿಯ ಮಹತ್ವದ ಸಭೆ ನಡೆಯಲಿದೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಭಾಗವಹಿಸಲಿರುವ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೇರಿ ಹಲವು ಹಿರಿಯ ನಾಯಕರು ಪಾಲ್ಗೊಳ್ಳಲಿದ್ದಾರೆ. ಪಕ್ಷ ಸಂಘಟನೆ ಮತ್ತು ಮುಂಬರುವ ಚುನಾವಣೆ ಕಾರ್ಯತಂತ್ರಗಳ ಕುರಿತು ಸಮಗ್ರವಾಗಿ ಚರ್ಚೆ ನಡೆಸುವ ಸಾಧ್ಯತೆ ಇದೆ.
  • ಕೃಷಿ ವಿಶ್ವವಿದ್ಯಾಲಯಗಳಲ್ಲಿ ರೈತರ ಮಕ್ಕಳಿಗೆ ಸೀಟುಗಳು ಮೀಸಲು ಪ್ರಮಾಣ ಶೇಕಡಾ 50ಕ್ಕೆ ಹೆಚ್ಚಿಸಿದ್ದರಿಂದ ಹೆಚ್ಚುವರಿಯಾಗಿ 186ಮಕ್ಕಳಿಗೆ ಸೀಟು ಲಭಿಸಿದೆ. ಕೇಂದ್ರ ಪುರಸ್ಕೃತ ಜಲಾನಯನ ಪುನರುಜ್ಜೀವನ ಯೋಜನೆಗೆ ರಾಜ್ಯ ಆಯ್ಕೆಯಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹಿರೇಕೆರೂರಿನಲ್ಲಿ ಹೇಳಿದ್ದಾರೆ.
  • ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನಾಥಸ್ವಾಮಿ ದೇವಾಲಯದ ಬ್ರಹ್ಮ ರಥೋತ್ಸವ ಇಂದು ನಡೆಯಲಿದೆ. ರಥೋತ್ಸವ ಹಿನ್ನೆಲೆಯಲ್ಲಿ ಬೆಟ್ಟದ ತಪ್ಪಲಿನಿಂದ ಮೇಲ್ಭಾಗಕ್ಕೆ ಖಾಸಗಿ ವಾಹನಗಳ ಪ್ರವೇಶವನ್ನು ನಿಷೇಧಿಸಿದ್ದು, ಸಾರ್ವಜನಿಕರಿಗೆ ಉಚಿತವಾಗಿ ಕೆ.ಎಸ್.ಆರ್.ಟಿ.ಸಿ ಬಸ್‌ಗಳ ವ್ಯವಸ್ಥೆ ಕಲ್ಪಿಸಲಾಗಿದೆ.
  • ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಾಗೂ ಆಯುಷ್ಮಾನ್ ಭಾರತ್ ಕಾರ್ಯಕ್ರಮ ಪ್ರಾರಂಭಿಸಿದ ನಾಲ್ಕನೇ ವರ್ಷದ ಅಂಗವಾಗಿ ಇದೇ ತಿಂಗಳ 18ರಿಂದ 22ರವರೆಗೆ ರಾಜ್ಯದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಆರೋಗ್ಯ ಮೇಳವನ್ನು ಆಯೋಜಿಸಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
  • 5 ಆಯುಷ್ಮಾನ್ ಭಾರತ್ ಆರೋಗ್ಯ ಹಾಗೂ ಕ್ಷೇಮ ಯೋಜನೆಯ 4ನೇ ವರ್ಷಾಚರಣೆಯ ಅಂಗವಾಗಿ ಸರ್ಕಾರ ಇಂದು ದೇಶದ ಒಂದು ಲಕ್ಷ ಕೇಂದ್ರಗಳಲ್ಲಿ ಇ-ಸಂಜೀವಿನಿ ಟೆಲಿ ಸಮಾಲೋಚನೆ ಸೌಲಭ್ಯಗಳಿಗೆ ಚಾಲನೆ ನೀಡಲಿದೆ. ಇದರಿಂದಾಗಿ ಈಗ ಸಾಮಾನ್ಯ ಜನರೂ ಕೂಡ ದೇಶದ ದೊಡ್ಡ ವೈದ್ಯರುಗಳಿಂದ ಸಲಹೆ-ಸೂಚನೆಗಳನ್ನು ಪಡೆಯಲು ಸಾಧ್ಯವಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸುಖ್ ಮಾಂಡವೀಯ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
  • ಭಾರತ 2023 ರ ಬೀದಿಬದಿ ಮಕ್ಕಳ ವಿಶ್ವಕಪ್ ಕ್ರಿಕೆಟ್‌ನ ಆತಿಥ್ಯವನ್ನು ವಹಿಸಲಿದೆ. ಇದನ್ನು ಸ್ಟ್ರೀಟ್ ಚೈಲ್ಡ್ ಯುನೈಟೆಡ್ ಮತ್ತು ಸೇವ್ ದಿ ಚಿಲ್ಡ್ರನ್ ಇಂಡಿಯಾ ಸಂಸ್ಥೆಗಳು ಜಂಟಿಯಾಗಿ ಆಯೋಜಿಸಿದೆ. ಈ ಕ್ರಿಕೆಟ್ ಪಂದ್ಯಾವಳಿಯಲ್ಲಿ 16 ರಾಷ್ಟ್ರಗಳ 22 ತಂಡಗಳು ಭಾಗವಹಿಸಲಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಈ ಮೂರು ದಿನದಂದು ‘ಡಾ.ಬಿ.ಆರ್.ಅಂಬೇಡ್ಕರ್ ಫೋಟೋ ಕಡ್ಡಾಯ’ ; ರಾಜ್ಯ ಸರ್ಕಾರ ಸೂಚನೆ

Published

on

ಸುದ್ದಿದಿನ,ಬೆಂಗಳೂರು:ಜನವರಿ 26ರ ಗಣರಾಜ್ಯೋತ್ಸವ ದಿನದೊಂದಿಗೆ ಆಗಸ್ಟ್-15ರ ಸ್ವಾತಂತ್ರ್ಯ ದಿನಾಚರಣೆ ಹಾಗೂ ನವೆಂಬರ್-26ರ ಸಂವಿಧಾನದ ದಿನಾಚರಣೆಯಂದು ಸಂವಿಧಾನದ ಪಿತಾಮಹ, ಭಾರತ ರತ್ನ ಡಾ||ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರದೊಂದಿಗೆ ಕಡ್ಡಾಯವಾಗಿ ಇಡುವಂತೆ ರಾಜ್ಯ ಸರ್ಕಾರ ಸೂಚಿಸಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ವಿಜಯ್ ಕುಮಾರ್ ಹೆಚ್. ಬಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ (ಪಿ.ಯು.ಸಿ ಮತ್ತು ಪಿ.ಯು.ಸಿ ಸಮಾನಾಂತರ ಕೋರ್ಸ್ ನ ವಿದ್ಯಾರ್ಥಿಗಳಿಗೆ ಪ್ರವೇಶಕ್ಕಾಗಿ ಅರ್ಜಿಗಳನ್ನು ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶದ https://shp.karnataka.gov.in ನ ಮೂಲಕ ಆಹ್ವಾನಿಸಲಾಗಿದೆ.

ಆಗಸ್ಟ್ 8 ರೊಳಗಾಗಿ ರಾಜ್ಯ ವಿದ್ಯಾರ್ಥಿನಿಲಯದ ತಂತ್ರಾಂಶದ ಆನ್‍ಲೈನ್‍ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.

ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿನಿಲಯಗಳ ವಿವರ: ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯ, ಕುಂದುವಾಡ ರಸ್ತೆ, 1 & 2, ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿನಿಲಯ, ಶಿವಕುಮಾರ್ ಸ್ವಾಮಿ ಬಡಾವಣೆ, ದಾವಣಗೆರೆ 1 & 2, ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕ ವಿದ್ಯಾರ್ಥಿನಿಲಯ, ಗುತ್ತೂರು ಕಾಲೋನಿ,ಹರಿಹರ, ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯ, ಕೆರೆಬಿಳಚಿ, ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿನಿಲಯ, ಜಗಳೂರು ಟೌನ್.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ ದೂ.ಸಂ:08192-250022 ಹಾಗೂ ತಾಲ್ಲೂಕು ವಿಸ್ತರಣಾಧಿಕಾರಿಗಳ ಕಚೇರಿ ದೂ.ಸಂ : 08192-250066 ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಮಲ್ಲಿಕಾರ್ಜುನ್ ಮಠದ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಂತೆಕಲ್ಲೂರು | ಶ್ರೀ ಪೂಜ್ಯ ಮಹಾಂತ ಶಿವಾಚಾರ್ಯ 33ನೇ ಪುಣ್ಯ ಸ್ಮರಣೆ ; ಮಹಾ ರುದ್ರಭಿಷೇಕ ಅಯ್ಯಾಚಾರ ಕಾರ್ಯಕ್ರಮ

Published

on

ಸುದ್ದಿದಿನ,ಮಸ್ಕಿ:ಇಂದು ತಾಲೂಕಿನ ಸುಕ್ಷೇತ್ರ ಸಂತೆಕಲ್ಲೂರಿನಲ್ಲಿ ಪೂಜ್ಯ ಶ್ರೀ ಮಹಾಂತ ಶಿವಾಚಾರ್ಯರು ಮಹಾ ಸ್ವಾಮಿಗಳ 33ನೆಯ ಪುಣ್ಯ ಸ್ಮರಣೆ ಹಾಗೂ ಜಂಗಮ ಸಮಾಜದ ಓಟುಗಳಿಗೆ ಅಯ್ಯಾಚಾರ ಕಾರ್ಯಕ್ರಮ.

ಶ್ರೀಗಳ ಕತೃ ಗದ್ದಿಗೆ ಮಹಾ ರುದ್ರಭಿಷೇಕ ವಿಶೇಷ ಪೂಜೆ ಹಾಗೂ ವಿಶೇಷ ಕಾರ್ಯಕ್ರಮಗಳು ಹಿರೇಮಠದಲ್ಲಿ ಜರುಗುವವು ಈ ಕಾರ್ಯಕ್ರಮಕ್ಕೆ ಜಂಗಮ ಸಮಾಜದ ಬಂಧುಗಳು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಶಿಷ್ಯಂದರು ಶ್ರೀಗಳ ಪೂಜ್ಯಶ್ರೀ ಮಹಾಂತ ಶಿವಾಚಾರ್ಯರು ದೇವರು ಮಹಾಂತನ ಮಠ ಸಂತೆಕಲ್ಲೂರಿನಲ್ಲಿ ಬೆಳಗ್ಗೆ ವಿಶೇಷ ಪೂಜಾ ಕಾರ್ಯಕ್ರಮಗಳೊಂದಿಗೆ ವಿವಿಧ ಮಠಾಧೀಶರು ಪೂಜ್ಯರು ಹಾಗೂ ಜನಪ್ರತಿನಿಧಿಗಳು ಹಾಗೂ ರಾಜಕೀಯ ಮುಖಂಡರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವರೆಂದು ಶ್ರೀ ಶರಣ ಬಸವರಾಜ್ ಸ್ವಾಮಿ ಹಿರೇಮಠ ಕಾರಲ್ಕುಂಟೆ ಲಿಂಗಸೂರ್ ಅವರು ಶರಣರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನೀವು ಬನ್ನಿ ಬರುವರನ್ನು ಕರೆತನ್ನಿ ಶ್ರೀಗಳ ಕೃಪೆಗೆ ಪಾತ್ರರಾಗಬೇಕೆಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending