Connect with us

ದಿನದ ಸುದ್ದಿ

ದೆಹಲಿ, ಹರಿಯಾಣ ಸೇರಿ ಕೆಲವು ರಾಜ್ಯಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚಳ; ಅಗತ್ಯ ಮುಂಜಾಗ್ರತಾ ಕ್ರಮಕ್ಕೆ ಕೇಂದ್ರ ಆರೋಗ್ಯ ಕಾರ್ಯದರ್ಶಿ ಪತ್ರ

Published

on

ಸುದ್ದಿದಿನ ಡೆಸ್ಕ್ : ಹರಿಯಾಣ, ಉತ್ತರ ಪ್ರದೇಶ, ದೆಹಲಿ, ಮಹಾರಾಷ್ಟ್ರ ಮತ್ತು ಮಿಜೋರಾಂ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಮತ್ತು ಪಾಸಿಟಿವಿಟಿ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಪತ್ರ ಬರೆದಿದ್ದಾರೆ.

ಸೋಂಕಿನ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಮೇಲ್ವಿಚಾರಣೆ ಮುಂದುವರಿಸಲು ಮತ್ತು ಕೋವಿಡ್‌ನ ತ್ವರಿತ ಮತ್ತು ಪರಿಣಾಮಕಾರಿ ನಿರ್ವಹಣೆಗೆ ಅಗತ್ಯವಾದ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಕಾರ್ಯದರ್ಶಿ ಸಲಹೆ ನೀಡಿದ್ದಾರೆ.

ಸೋಂಕಿನ ಹರಡುವಿಕೆ ನಿಯಂತ್ರಿಸಲು, ಕಟ್ಟುನಿಟ್ಟಾದ ನಿಗಾ ವಹಿಸುವುದು ಮತ್ತು ಪೂರ್ವಭಾವಿ ಕ್ರಮಗಳನ್ನು ಕೈಗೊಳ್ಳುವುದು ಅತ್ಯಗತ್ಯ ಎಂದು ಅವರು ಹೇಳಿದ್ದಾರೆ. ಪರೀಕ್ಷೆ-ಪತ್ತೆ-ಚಿಕಿತ್ಸೆ-ಲಸಿಕೆ ಮತ್ತು ಕೋವಿಡ್ ನಿಯಮಾವಳಿಗಳ ಸೂಕ್ತ ಅನುಸರಣೆಯ ಐದು ಹಂತದ ಕಾರ್ಯತಂತ್ರಕ್ಕೆ ಕೇಂದ್ರ ಒತ್ತು ನೀಡಿದೆ.

ಯಾವುದೇ ಹಂತದಲ್ಲಿ ಸಡಿಲಿಕೆ ಉಂಟಾದರೂ, ಸಾಂಕ್ರಾಮಿಕ ನಿರ್ವಹಣೆ ಸಫಲತೆ ಕಾಣದು ಹಾಗಾಗಿ ನಿಯಮಿತ ಮೇಲ್ವಿಚಾರಣೆ ಹಾಗೂ ತ್ವರಿತ ಅನುಸರಣಾ ಕ್ರಮಕ್ಕೆ ಒತ್ತು ನೀಡುವಂತೆ ಸರ್ಕಾರ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿಗಳ ಅವ್ಯವಹಾರ ನಡೆಸಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇಲ್ಲಿನ ಪ್ರಾಂಶುಪಾಲರಾದ ನಾಗರಾಜ ಜಿ.ಎಂ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿ ನಕಲಿ ಬಿಲ್ಲುಗಳ ಮೂಲಕ ಸರ್ಕಾರದ ಅನುದಾನವನ್ನು ವಂಚಿಸುತ್ತಿರುವ ವಿಷಯ ತಿಳಿದು ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇವರು ನೀಡಿರುವ 37 ಬಿಲ್ಲುಗಳನ್ನು ಪರಿಶೀಲನೆ ಮಾಡಿದಾಗ, ಇವುಗಳಲ್ಲಿನ ಬಹುತೇಕ ಜಿ.ಎಸ್.ಟಿ ಬಿಲ್ಲುಗಳಲ್ಲಿ ದಿನಾಂಕವೇ ಇರುವುದಿಲ್ಲ.

ಇನ್ನೂ ಕೆಲವು ಬಿಲ್ಲುಗಳನ್ನು ಹೊರ ರಾಜ್ಯದಿಂದ ಪಡೆಯಲಾಗಿರುತ್ತದೆ. ಆದ್ದರಿಂದ ಮರು ಲೆಕ್ಕಪರಿಶೋಧನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆ ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆ ಅಣುಕು ಅಭ್ಯಾಸ

Published

on

ಸುದ್ದಿದಿನ, ಹರಿಹರ :ಇದೇ 14 ರಂದು ಗುರುವಾರ (ನಾಳೆ) ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆಯ ಅಣುಕು ಅಭ್ಯಾಸವನ್ನು ಬೆಳಗ್ಗೆ 8:30 ಕ್ಕೆ ನಡೆಸಲಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್‌ ಹಾಗೂ ರಾಜ್ಯ ಸರ್ಕಾರದ ಅಧಿಕಾರಿಗಳ ಸಮನ್ವಯದಲ್ಲಿ ಅಣಕು ಅಭ್ಯಾಸವು ನಡೆಸಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು

Published

on

ಸುದ್ದಿದಿನಡೆಸ್ಕ್:ಕನ್ನಡ ಚಿತ್ರರಂಗದ ಖ್ಯಾತ ನಟ ದಿಲೀಪ್ ರಾಜ್ (47) ಅವರ ಅಕಾಲಿಕ ನಿಧನವು ಇಡೀ ಸ್ಯಾಂಡಲ್‌ವುಡ್ ಅನ್ನು ದಿಗ್ಭ್ರಮೆಗೊಳಿಸಿದೆ. ಕೇವಲ 47 ವರ್ಷ ವಯಸ್ಸಿನ ಈ ಪ್ರತಿಭಾನ್ವಿತ ಕಲಾವಿದ ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಆದರೆ ಅವರ ಈ ಸಾವಿನ ಹಿಂದೆ ಒಂದು ಬೇಸರದ ಸಂಗತಿಯೂ ಅಡಗಿದೆ, ಅದೇನೆಂದರೆ ಅವರ ಆರೋಗ್ಯದ ಕುರಿತು ತೋರಿದ ಒಂದು ನಿರ್ಲಕ್ಷ್ಯ!

ನಟ ನಿರ್ಮಾಪಕ ದಿಲೀಪ್ ರಾಜ್ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಇಡೀ ಸ್ಯಾಂಡಲ್‌ವುಡ್ ದಿಗ್ಭ್ರಮೆಗೊಂಡಿದೆ. ಕೆಲವು ದಿನಗಳ ಹಿಂದೆ ಗೋವಾ ಪ್ರವಾಸದಲ್ಲಿದ್ದಾಗಲೇ ಅವರಿಗೆ ಆಗಾಗ ಎದೆನೋವು ಕಾಣಿಸಿಕೊಂಡಿತ್ತು, ಆದರೆ ಪ್ರವಾಸದ ಖುಷಿಯಲ್ಲಿದ್ದ ಅವರು ಅದನ್ನ ಗಂಭೀರವಾಗಿ ಪರಿಗಣಿಸಿರಲಿಲ್ಲ.. ಬೆಂಗಳೂರಿಗೆ ಮರಳಿದ ನಂತರ ಇಂದು ವೈದ್ಯಕೀಯ ತಪಾಸಣೆಗೆ ಅಪಾಯಿಂಟ್‌ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು;

ತಪಾಸಣೆಗೆ ಹೋಗುವ ಮುನ್ನವೇ ರಾತ್ರಿ ತೀವ್ರ ಎದೆನೋವು ಕಾಣಿಸಿಕೊಂಡು ಕುಮಾರಸ್ವಾಮಿ ಲೇಔಟ್‌ನ ಅಪೋಲೋ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.ನೋವು ಕಾಣಿಸಿಕೊಂಡ ತಕ್ಷಣವೇ ಆಸ್ಪತ್ರೆಗೆ ದಾಖಲಾಗಿದ್ದರೆ ಇಂದು ಪರಿಸ್ಥಿತಿ ಬೇರೆಯೇ ಇರುತ್ತಿತ್ತು ಎಂದು ಅವರ ಕುಟುಂಬಸ್ಥರು ಮತ್ತು ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ.
ನಟ ದಿಲೀಪ್ ರಾಜ್ ಅವರು ಕೆಲವೇ ದಿನಗಳ ಹಿಂದೆ ಗೋವಾಗೆ ಪ್ರವಾಸ ತೆರಳಿದ್ದರು.

ಅಲ್ಲಿ ಗೆಳೆಯರೊಂದಿಗೆ ಕಾಲ ಕಳೆಯುವಾಗಲೇ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು ಎನ್ನಲಾಗುತ್ತಿದೆ. ಅಂದೇ ಹೃದಯವು ಅಪಾಯದ ಮುನ್ಸೂಚನೆ ನೀಡಿದ್ದರೂ, ದಿಲೀಪ್ ಅವರು ಅದನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ತೋರಿದ್ದರು. ಗೋವಾ ಟ್ರಿಪ್‌ನಲ್ಲಿದ್ದಾಗಲೇ ಆಗಾಗ ನೋವು ಕಾಣಿಸಿಕೊಂಡರೂ, ಅವರು ಅದನ್ನು ಕೇರ್ ಮಾಡಿರಲಿಲ್ಲ.

ಬೆಂಗಳೂರಿಗೆ ಮರಳಿದ ನಂತರ ಅವರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ನಿರ್ಧರಿಸಿದ್ದರು. ವಿಪರ್ಯಾಸವೆಂದರೆ, ಇಂದು ಅವರು ಆಸ್ಪತ್ರೆಗೆ ತೆರಳಿ ಹೃದಯ ತಪಾಸಣೆ ಮಾಡಿಸಿಕೊಳ್ಳಬೇಕಿತ್ತು ಮತ್ತು ಅದಕ್ಕಾಗಿ ವೈದ್ಯರ ಅಪಾಯಿಂಟ್‌ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು. ನಿನ್ನೆ ರಾತ್ರಿ ಕೂಡ ಧಾರಾವಾಹಿ ಕಲಾವಿದರ ಜೊತೆ ಫೋನ್‌ನಲ್ಲಿ ಆತ್ಮೀಯವಾಗಿ ಮಾತನಾಡಿದ್ದ ನಟನಿಗೆ, ಮಧ್ಯರಾತ್ರಿ ತೀವ್ರವಾದ ಎದೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ತೆರಳುವ ಮುನ್ನವೇ ಅವರು ಏಕಾಏಕಿ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending