Connect with us

ರಾಜಕೀಯ

“40% ಕಮಿಷನ್ ದೂರು ಕೇಂದ್ರ” ಎಂದು ಪ್ರಧಾನಿ ಕಚೇರಿಯ ಹೆಸರು ಬದಲಿಸಿ ಮೋದಿ ಅವರೇ : ಬಿಕೆ ಹರಿಪ್ರಸಾದ್ ಕಿಡಿ

Published

on

ಸುದ್ದಿಗಳು ಡೆಸ್ಕ್ : ರಾಜ್ಯದ 40% ಕಮಿಷನ್ ಸರ್ಕಾರದ ಆರೋಪಗಳು ದಾಖಲೆ ಸಮೇತ ಸಾಲು ಸಾಲು ಪತ್ರಗಳು ಪ್ರಧಾನಿ ಕಚೇರಿಗೆ ತಲುಪುತ್ತಿವೆ. “40% ಕಮಿಷನ್ ದೂರು ಕೇಂದ್ರ” ಎಂದು ಪ್ರಧಾನಿ ಕಚೇರಿಯ ಹೆಸರು ಬದಲಾಯಿಸಿ ಪ್ರಧಾನಿಗಳೇ. ನಿಮ್ಮ 18 ಗಂಟೆಗಳ ಕೆಲಸದ ಬಿಡುವಿನ ವೇಳೆಯಲ್ಲಿ ಪುರಸೊತ್ತು ಮಾಡಿ ಒಮ್ಮೆ ಕಣ್ಣಾಡಿಸಿ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕರಾದ ಬಿಕೆ ಹರಿಪ್ರಸಾದ್ ಕಿಡಿಕಾರಿದ್ದಾರೆ.

ತಮ್ಮ ಫೇಸ್ ಬುಕ್ ಖಾತೆಯಲ್ಲಿ ಅವರು, ಲಂಕೆಯ ಸುಟ್ಟರೂ ಖಾಲಿಯಾಗದ ಹನುಮಂತನ ಬಾಲದಂತೆ ಕಮಿಷನ್ ಸರ್ಕಾರದ ಹಗರಣಗಳ ದಾಖಲೆಗಳು ದಿನಕ್ಕೊಂದು ಧಾರಾವಾಹಿಗಳಂತೆ ಕುತೂಹಲಕಾರಿಯಾಗಿ ಜಗಜ್ಜಾಹೀರಾಗುತ್ತಿದೆ. ಧಾರಾವಾಹಿಯ ಕ್ಲೈಮ್ಯಾಕ್ಸ್ ನಿಮ್ಮ ಬುಡದಲ್ಲಿಯೇ ಬರುವ ಎಲ್ಲಾ ಮುನ್ಸೂಚನೆ ದಟ್ಟವಾಗಿ ಗೋಚರಿಸುತ್ತಿದೆ,ಎದುರಿಸಲು ಸಿದ್ದರಾಗಿ ಎಂದಿದ್ದಾರೆ.

ಈಗಾಗಲೇ ಪ್ರಧಾನಿ ಕಚೇರಿಯ ಬಾಗಿಲು ಬಾಡಿದು, ಬಂದ ದಾರಿಗೆ ಸುಂಕವಿಲ್ಲದೆ ಅಮಾಯಕ ಗುತ್ತಿಗೆದಾರ ಸಂತೋಷ್ ಪಾಟೀಲ್ ಸಚಿವರಿಗೆ 40% ಕಮಿಷನ್ ಕೊಡಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಜೆಗಳ ಹಿತಾಸಕ್ತಿಯನ್ನ ಕಾಪಾಡದ ಸರ್ಕಾರ ಆತ್ಮಹತ್ಯೆಗೆ ದೂಡಿದೆ ಎಂದರೆ ಆತ್ಮಹತ್ಯೆ ಎನ್ನಲಾಗದು. ಅದರಲ್ಲೂ ಸಚಿವರೇ ಪ್ರಕರಣದಲ್ಲಿ A1 ಆರೋಪಿ ಎಂದರೆ ಇದೊಂದು ಸರ್ಕಾರಿ ಪ್ರಾಯೋಜಿತ ಕೊಲೆ..! ಎಂದು ಆರೋಪಿಸಿದ್ದಾರೆ.

ಗೋಮಾತೆ, ಗೋ ರಕ್ಷಕರು ಎಂದು ಪುಂಗಿ ಊದುವ ನಿಮ್ಮ ಸರ್ಕಾರ ಗೋವು ತಿನ್ನುವ ಮೇವಿನಲ್ಲಿ ಕಮಿಷನ್ ಪಡೆಯುತ್ತಿದೆ ಎಂದು ಮೇವು ಸರಬರಾಜು ಮಾಡುವ ಗುತ್ತಿದಾರರು ನಿಮ್ಮ ಕಚೇರಿಗೆ ಪತ್ರ ಬರೆದಿದ್ದಾರೆ. ಎಪ್ಪತ್ತು ವರ್ಷಗಳಲ್ಲಿ ಏನೂ ಮಾಡಿಲ್ಲ ಎಂದು ಅಬ್ಬರಿಸಿ ಬೊಬ್ಬೆ ಹಾಕುತ್ತಿದ್ದ ನಿಮ್ಮ ಟೆಲಿಪ್ರಾಂಪ್ಟರ್ ಭಾಷಣದಲ್ಲಿ ಇಂತಹ ಆರೋಪಗಳನ್ನ ತಾವೇ ಮಾಡಿರುವುದಕ್ಕೆ ಸಾಧ್ಯವಿಲ್ಲ, ಬೇಕಿದ್ರೆ ಒಮ್ಮೆ ಚೆಕ್ ಮಾಡಿಕೊಳ್ಳಿ.

ಸರ್ಕಾರದ ಪ್ರತಿಯೊಂದು ಇಲಾಖೆಗಳ ಕಾಮಗಾರಿಗಳಲ್ಲಿ 40% ಕಮಿಷನ್, ಗೋವುಗಳ ಮೇವಿನಲ್ಲಿ 40% ಕಮಿಷನ್, ಮಠಗಳ ಅನುದಾನದಲ್ಲೂ 30% ಕಮಿಷನ್, ಪರೀಕ್ಷೆ ನಿರ್ವಹಣೆಯಲ್ಲೂ 20% ಕಮಿಷನ್ ಕಡ್ಡಾಯಗೊಳಿಸಿದ್ದಾರೆ. ಮಠಾದೀಶರೇ ಕಮಿಷನ್ ಗೆ ಬೇಸತ್ತು ಬಹಿರಂಗ ಹೇಳಿಕೆ ನೀಡುತ್ತಿರುವುದು ಕರ್ನಾಟಕದ ಇತಿಹಾಸದಲ್ಲಿಯೇ ಮೊದಲು. ಬಹುಶಃ ನಿಮ್ಮ ಪಕ್ಷದ ನೇತೃತ್ವದ ಸರ್ಕಾರ ಮುಂದಿನ ವಿಧಾನಸಭೆ ಅಧಿವೇಶನದಲ್ಲಿ “ಕಾಮಗಾರಿಗಳಲ್ಲಿ ಕಮಿಷನ್ ಕಡ್ಡಾಯ ಕಾಯ್ದೆ” ತರಬಹುದೇ? ಎಂದು ಪ್ರಶ್ನಿಸಿದ್ದಾರೆ.

ರಾಜ್ಯದ ಪ್ರಮುಖ ಇಲಾಖೆಗಳ ಕಾಮಗಾರಿ‌ ನಡೆದು ವರ್ಷಗಳೇ ಕಳೆಯುತ್ತಿದ್ದರು ಬಿಲ್ ಬಾಕಿ ಉಳಿಯುತ್ತಿವೆ. ನೀರಾವರಿ ಇಲಾಖೆಯೊಂದರಲ್ಲಿಯೇ ಕಳೆದ ಎರಡು ವರ್ಷಗಳಲ್ಲಿ 12,845.91 ಕೋಟಿ ಬಿಲ್ ಬಾಕಿ ಇದೆ. ಬಾಕಿ ಉಳಿಸಿಕೊಂಡಿರುವ ಹಿಂದೆ 40% ಕಮಿಷನ್ ನೀಡದೆ ಇರುವುದೊಂದೇ ಕಾರಣವೇ? ಕಾಮಗಾರಿ ನಡೆಸಲು ಗುತ್ತಿಗೆದಾರರಿಗೆ ಹಲವಾರು ಮಾನದಂಡಗಳಿವೆ. ಆದರೆ ಬಿಜೆಪಿ ಸರ್ಕಾರದಲ್ಲಿ 40% ಕಮಿಷನ್ ಮಾತ್ರವೇ ಮಾನದಂಡವಾಗಿದೆ.

ನೇಮಕಾತಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ. ಪತ್ರಿಕೆಗಳ ಮುಖಪುಟದಲ್ಲಿ ಭ್ರಷ್ಟಾಚಾರದ ಮುಖವಾಡಗಳು ಬಯಲಾಗುತ್ತಿವೆ. PSI ನೇಮಕಾತಿಯಲ್ಲಿ ನೂರಾರು ಕೋಟಿ ಭ್ರಷ್ಟಾಚಾರ ಎಸೆಗಿದ್ದಾರೆ. ಸ್ವಪಕ್ಷದ ಸಚಿವರು, ಶಾಸಕರುಗಳೇ ಸಿಎಂ ಗೆ ಪತ್ರ ಬರೆಯುತ್ತಿದ್ದಾರೆ. ನಮ್ಮ‌ಇಲಾಖೆಯಲ್ಲಿ ಭ್ರಷ್ಟಾಚಾರವೇ ನಡೆದಿಲ್ಲ ಎಂದು ವಿಧಾನ ಪರಿಷತ್ ನಲ್ಲಿ ನನ್ನ ಪ್ರಶ್ನೆಗೆ ಉತ್ತರ ಕೊಟ್ಟ ಗೃಹ ಸಚಿವರು ಈಗ ತನಿಖೆ ನಡೆಸುತ್ತಿದ್ದಾರೆ. ತನಿಖೆಯಲ್ಲಿ ಬಿಜೆಪಿಯ ಮುಖಂಡರುಗಳೇ ಬಂಧನವಾಗುತ್ತಿದ್ದಾರೆ. ಇದು ಯಾವ ನಾಲಿಗೆ ಎಂದು ಒಮ್ಮೆ ಸ್ಪಷ್ಟಪಡಿಸಲು ಗೃಹ ಸಚಿವರಿಗೆ ನಿರ್ದೇಶನ ನೀಡಿ. ಎರಡೆರಡು ನಾಲಿಗೆ ಇರುವುದು ಹಾವಿಗೆ, ಈ ಎರಡು ನಾಲಿಗೆ ಇರುವ “ಹಾವಿನ ಪುರ” ಯಾವುದು? ಆಕ್ರೋಶ ವ್ಯಕ್ತಪಡಿಸಿದ್ದಾರೆ.,

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸಿದ್ರಾಮಯ್ಯನವರದ್ದು 10% ಕಮಿಷನ್ ಸರ್ಕಾರ ಎಂದು ತಲೆಯೂ ಇಲ್ಲದ ಬುಡವೂ ಇಲ್ಲದ ಆರೋಪವೊಂದನ್ನೂ ಗಾಳಿಯಲ್ಲಿ ತೇಲಿ ಬಿಟ್ಟಿರಿ. ಬಿಜೆಪಿ ಸರ್ಕಾರ ಬಂದರೆ ಭ್ರಷ್ಟ ಸರ್ಕಾರದ ದಾಖಲೆಗಳನ್ನ ಬಿಡುಗಡೆ ಮಾಡುತ್ತೇವೆ ಎಂದು ತೌಡು ಕುಟ್ಟಿದ್ದೀರಿ. ರಾಜ್ಯದಲ್ಲಿ ನಿಮ್ಮದೇ ಸರ್ಕಾರ ಬಂದು ಎರಡು ವರ್ಷಗಳೇ ಕಳೆದಿವಿ ಹಗರಣಗಳು ಬರುತ್ತಿರುವುದು ನಿಮ್ಮ ಮಂತ್ರಿ ಮಹಾಶಯರುಗಳದ್ದೇ ಹೊರತು ಕಾಂಗ್ರೆಸ್ ಸರ್ಕಾರದ್ದಲ್ಲ.

ನೀವೇ ಚುನಾವಣೆಯಲ್ಲಿ ಅಬ್ಬರಿಸಿದ್ದ “ನಾ ಖಾನೇ ದೂಂಗಾ, ನಾ ಖಾವೂಂಗಾ” ಹೇಳಿಕೆಯಲ್ಲಿ ಕರ್ನಾಟಕ ಬಿಟ್ಟು ಹೇಳಿದ್ದಾ? ಇನ್ನೊಮ್ಮೆ ಸ್ಪಷ್ಟಪಡಿಸಿಬಿಡಿ. ಇಲ್ಲದಿದ್ದರೆ ಕಮಿಷನ್ ದಂಧೆಯಲ್ಲಿ ನಿಮ್ಮ‌ ಪಾಲೆಷ್ಟಿದೆ ಖಚಿತಪಡಿಸಿ ಎಂದು ಸವಾಲೆಸೆದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಚನ್ನಗಿರಿ | ಕೊರಟಿಕೆರೆ ಗ್ರಾಮ ಪಂಚಾಯಿತಿಯಲ್ಲಿ ಅವ್ಯವಹಾರ | ಪಿ.ಡಿ.ಓ ಶಿವಕುಮಾರ, ಇ.ಒ ಪ್ರಕಾಶ್ ವಿರುದ್ಧ ಲೋಕಾಗೆ ದೂರು

Published

on

ದಾವಣಗೆರೆ, ಸುದ್ದಿದಿನ; ದಾವಣಗೆರೆ ಜಿಲ್ಲಾ ಚನ್ನಗಿರಿ ತಾಲ್ಲೂಕು ಕೊರಟಿಕೆರೆ ಗ್ರಾಮ ಪಂಚಾಯಿತಿಗೆ 15ನೇ ಹಣಕಾಸಿನ ಯೋಜನೆಯ ಅಡಿಯಲ್ಲಿ ಬಿಡುಗಡೆಯಾದ ಅನುದಾನದಲ್ಲಿ ನಡೆದಿರುವ ಕಾಮಗಾರಿ ಮತ್ತು ಖರೀದಿಯಲ್ಲಿನ ಅವ್ಯವಹಾರವನ್ನು ಸೂಕ್ತ ತನಿಖೆಗೆ ಒಳಪಡಿಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಕಾಲಾವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚನ್ನಗಿರಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ್ ಎಂ.ಆರ್ ಹಾಗೂ ಅವ್ಯವಹಾರದಲ್ಲಿ ಭಾಗಿಯಾಗಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ.ಜಿ ಶಿವಕುಮಾರ ವಿರುದ್ಧ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕು ಕೊರಟಿಕೆರೆ ಗ್ರಾಮ ಪಂಚಾಯಿತಿ ಕಾರ್ಯಾಲಯ ಇಲ್ಲಿಗೆ 15ನೇ ಹಣಕಾಸು ಯೋಜನೆಯ ಅಡಿಯಲ್ಲಿ ಬಿಡುಗಡೆಯಾದ ಅನುದಾನದಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಅಕ್ರಮಗಳು ನಡೆದಿರುವ ಅಧಿಕೃತ ಮಾಹಿತಿಯ ಮೇರೆಗೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಕಾರ್ಯಾಲಯ, ಕೊರಟಿಕೆರೆ ಚನ್ನಗಿರಿ ತಾಲ್ಲೂಕು ಇವರಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ ಮಾಹಿತಿ ಕೋರಲಾಗಿದ್ದು, ಅರ್ಜಿದಾರರು ಹಣ ಪಾವತಿಸಿದರೂ ನಿಗಧಿತ ಕಾಲಾವಧಿಯಲ್ಲಿ ಸಾರ್ವಜನಿಕ ಮಾಹಿತಿ ಅಧಿಕಾರಿ ಮಾಹಿತಿ ನೀಡದ ಕಾರಣ ಇ-ಗ್ರಾಮ ಸ್ವರಾಜ್ ಮೂಲಕ ಮಾಹಿತಿ ಪಡೆದು ದಿನಾಂಕ: 03-10-2026 ರಂದು ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ಚನ್ನಗಿರಿ ಇವರಿಗೆ ದೂರು ನೀಡಿ ಇಲಾಖಾ ತನಿಖೆಗೆ ಒಳಪಡಿಸುವಂತೆ ಕೋರಲಾಗಿತ್ತು. ನಿಗಧಿತ ಕಾಲಾವಧಿ ಮುಕ್ತಾಯವಾದರೂ ಯಾವುದೇ ತನಿಖೆ ನಡೆಸದ ಕಾರಣ ಲೋಕಾಯುಕ್ತಗೆ ದೂರು ನೀಡಿ, ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ನೀತಿ ಸಂಹಿತೆ ಉಲ್ಲಘನೆ, ಬೋಧನೆ ಶೂನ್ಯ ; ಚಳ್ಳಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಲೇಪಾಕ್ಷ ವಿರುದ್ಧ ದೂರು

Published

on

ದಾವಣಗೆರೆ,ಸುದ್ದಿದಿನ: ಪ್ರಥಮ ದರ್ಜೆ ಕಾಲೇಜು, ಚಳ್ಳಕೆರೆ ಇಲ್ಲಿನ ಸಮಾಜಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಲೇಪಾಕ್ಷ ಎಸ್.ಆರ್ ಇವರು ಸಮಯಕ್ಕೆ ಸರಿಯಾಗಿ ಕಾಲೇಜಿಗೆ ಹಾಜರಾಗದೆ ಇರುವುದು ಮಾತ್ರವಲ್ಲದೆ ವೇಳಾಪಟ್ಟಿಯಂತೆ ಇವರಿಗೆ ನಿಗಧಿಪಡಿಸಿದ ಯಾವುದೇ ತರಗತಿಗಳನ್ನು ತೆಗೆದುಕೊಳ್ಳದೆ ರಾಜಕೀಯ ಪಕ್ಷವೊಂದರ ಪ್ರಚಾರ ಹಾಗೂ ಸ್ಥಳೀಯ ರಾಜಕಾರಣದಲ್ಲಿ ಸಕ್ರಿಯವಾಗಿ ವಿದ್ಯಾರ್ಥಿಗಳಿಗೆ ವಂಚಿಸುತ್ತಿರುವ ನಡೆಯನ್ನು ಸೂಕ್ತ ತನಿಖೆಗೆ ಒಳಪಡಿಸಿ, ಕ್ರಮ ಕೈಗೊಳ್ಳುವಂತೆ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ, ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರು ಹಾಗೂ ಜಂಟಿ ನಿರ್ದೇಶಕರಿಗೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ಮಾಹಿತಿ ನೀಡಿದ್ದಾರೆ.

ಡಾ. ಲೇಪಾಕ್ಷ ಎಸ್.ಆರ್ ಇವರನ್ನು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬೋಧನೆ ಮಾಡಲು ತರಗತಿಗಳನ್ನು ಹಂಚಿಕೆ ಮಾಡಿದ್ದು, ಯಾವುದೇ ತರಗತಿಗಳನ್ನು ತೆಗೆದುಕೊಳ್ಳದ ಮಾಹಿತಿಯ ಮೇರೆಗೆ ಕಾಲೇಜಿನಲ್ಲಿ ಅಳವಡಿಸಿದ ಸಿ.ಸಿ.ಟಿ.ವಿ ಹಾಗೂ ಬಯೋಮೆಟ್ರಿಕ್ ಹಾಜರಾತಿಯನ್ನು ನೀಡುವಂತೆ ಮಾಹಿತಿ ಕೋರಿದ್ದು, ಕಾಲೇಜಿನ ಪ್ರಾಂಶುಪಾಲರು ಕಾಲೇಜಿಗೆ ಸರಿಯಾಗಿ ಹಾಜರಾಗದ ಮತ್ತು ಬೋದನೆ ಮಾಡದ ಅಧ್ಯಾಪಕರನ್ನು ರಕ್ಷಿಸುವ ಸಲುವಾಗಿ ನಿಯಮಬಾಹಿರವಾಗಿ ಹಿಂಬರಹ ನೀಡಿರುತ್ತಾರೆ. ಈ ಎಲ್ಲಾ ಅಂಶಗಳನ್ನು ಉಲ್ಲೇಖಿಸಿ, ಲೇಪಾಕ್ಷ ಇವರು ರಾಜಕೀಯ ಪಕ್ಷದ ಪ್ರಚಾರ ಮತ್ತು ಸಂಭ್ರಮದಲ್ಲಿ ಭಾಗಿಯಾಗಿರುವ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿರುವ ದಾಖಲೆಗಳನ್ನು ಲಗತ್ತಿಸಿ ಸೂಕ್ತ ತನಿಖೆ ನಡೆಸಿ, ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಚಿವರಿಗೆ ದೂರು ನೀಡಿರುತ್ತಾರೆ.

Continue Reading

ದಿನದ ಸುದ್ದಿ

ಮಂಗಳೂರು | ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕಿ ಕೆ.ಆರ್ ಕವಿತಾ ವಿರುದ್ಧ ಲೋಕಾಗೆ ದೂರು

Published

on

ಮಂಗಳೂರು | ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕಿ ಕೆ.ಆರ್ ಕವಿತಾ ವಿರುದ್ಧ ಲೋಕಾಗೆ ದೂರು:

ದಾವಣಗೆರೆ, ಸುದ್ದಿದಿನ; ಕಾಲೇಜು ಶಿಕ್ಷಣ ಇಲಾಖೆ, ಪ್ರಾದೇಶಿಕ ಜಂಟಿ ನಿರ್ದೇಶಕರ ಕಛೇರಿ, ಮಂಗಳೂರು ಇಲ್ಲಿನ ಕಛೇರಿ ನಿರ್ವಹಣೆಗೆ 2024-25 ರಿಂದ 2025-26ನೇ ಸಾಲಿನ ಅವಧಿಯಲ್ಲಿ ಬಿಡುಗಡೆಯಾದ ಅನುದಾನದಲ್ಲಿ ನಡೆದಿರುವ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಜಂಟಿ ನಿರ್ದೇಶಕರಾದ ಶ್ರೀಮತಿ ಕೆ.ಆರ್.ಕವಿತಾ ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಕಾಲೇಜು ಶಿಕ್ಷಣ ಇಲಾಖೆ, ಪ್ರಾದೇಶಿಕ ಜಂಟಿ ನಿರ್ದೇಶಕರ ಕಛೇರಿ, ಮಂಗಳೂರು ಇಲ್ಲಿಗೆ 2024-25 ರಿಂದ 2025-26ನೇ ಸಾಲಿನ ಅವಧಿಯಲ್ಲಿ ಬಿಡುಗಡೆಯಾಗಿರುವ ಕಛೇರಿಯ ನಿರ್ವಹಣೆಯ ಅನುದಾನದಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಕೆ.ಟಿ.ಪಿ.ಪಿ ನಿಯಮವನ್ನು ಉಲ್ಲಂಘಿಸಿ ನಡೆದಿರುವ ಕಾನೂನುಬಾಹಿರ ಚಟುವಟಿಕೆಗಳ ಅಧಿಕೃತ ಮಾಹಿತಿಯ ಮೇರೆಗೆ 2024-25 ರಿಂದ 2025-26ನೇ ಸಾಲಿನ ಅವಧಿಯಲ್ಲಿ ಕಛೇರಿ ನಿರ್ವಹಣೆಗಾಗಿ ಸರ್ಕಾರದಿಂದ ಮಂಜೂರಾದ ಅನುದಾನದ ಖರ್ಚು ವೆಚ್ಚದ ದಾಖಲೆಗಳನ್ನು ಮಾಹಿತಿಹಕ್ಕು ಅಡಿ ಪಡೆದು ಪರಿಶೀಲನೆ ಮಾಡಿದಾಗ ಸಾಕಷ್ಟು ಲೋಪಗಳು ಕಂಡುಬಂದಿರುತ್ತವೆ. ಆದ ಕಾರಣ ಲೋಕಾಯುಕ್ತದಲ್ಲಿ ಜಂಟಿ ನಿರ್ದೇಶಕರಾದ ಕೆ.ಆರ್.ಕವಿತಾ ಹಾಗೂ ಸಂಬಂಧಿಸಿದ ಅಧಿಕಾರಿಗಳನ್ನು ತನಿಖೆಗೆ ಒಳಪಡಿಸುವಂತೆ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ಮಾಹಿತಿ ನೀಡಿದ್ದಾರೆ.

Continue Reading

Trending