Connect with us

ದಿನದ ಸುದ್ದಿ

ಬಳ್ಳಾರಿ ಮಹಾನಗರ ಪಾಲಿಕೆ ವಾರ್ಡ್ ಸಮಿತಿ ರಚನೆಗೆ ಅಸ್ತು

Published

on

ಮಹಾನಗರ ಪಾಲಿಕೆ ಆಯುಕ್ತೆ | ಪ್ರೀತಿ ಗೆಹ್ಲೋಟ್

ಸುದ್ದಿದಿನ,ಬಳ್ಳಾರಿ: ವಾರ್ಡ್ ಸಮಿತಿಗಳನ್ನು ರಚಿಸಬೇಕೆಂಬ ಬಳ್ಳಾರಿ ನಗರದ ಸಾರ್ವಜನಿಕರ ಬೇಡಿಕೆಗೆ ಮನ್ನಣೆ ನೀಡಿರುವ ಬಳ್ಳಾರಿ ಮಹಾನಗರ ಪಾಲಿಕೆಗೆ ವಾರ್ಡ್ ಸಮಿತಿ ರಚನೆಗೆ ಅನುಮೋದನೆ ನೀಡಿದ್ದು ವಾರ್ಡ್ ಸಮಿತಿ ರಚನೆಗೆ ಅಧಿಸೂಚನೆ ಹೊರಡಿಸಿದೆ.

ಪಾಲಿಕೆಯ 39 ವಾರ್ಡ್‍ಗಳಿಗೆ ಸಾರ್ವಜನಿಕರು ಒಳಗೊಂಡಂತೆ 11 ಸದಸ್ಯರ ಸಮಿತಿ ರಚನೆಗೆ ಅರ್ಹ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ವಾರ್ಡ್ ಪ್ರತಿನಿಧಿಸುವಂತಹ ಮಹಾನಗರ ಪಾಲಿಕೆಯ ಸದಸ್ಯನು ವಾರ್ಡ್ ಸಮಿತಿಯ ಅಧ್ಯಕ್ಷರಾಗಿರಲಿದ್ದು, ಇತರೆ ಹತ್ತು ಸದಸ್ಯರನ್ನು ಮಹಾನಗರ ಪಾಲಿಕೆ ನಾಮನಿರ್ದೇಶನ ಮಾಡಲಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರಾದ ಪ್ರೀತಿ ಗೆಹ್ಲೋಟ್ ಅವರು ತಿಳಿಸಿದ್ದಾರೆ.

ನಾಮನಿರ್ದೇಶಿತ 10 ಸದಸ್ಯರ ಪೈಕಿ ಕನಿಷ್ಟ ಇಬ್ಬರು ಸದಸ್ಯರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ಸೇರಿದವರಾರಿತಕ್ಕದ್ದು.ಕನಿಷ್ಟ ಮೂರು ಮಂದಿ ಮಹಿಳಾ ಸದಸ್ಯರು ಮತ್ತು ನಿವಾಸಿ ಕ್ಷೇಮಾಭಿವೃದ್ದಿ ಸಂಘಗಳನ್ನು ಪ್ರತಿನಿಧಿಸುವಂತಹ ಕನಿಷ್ಟ ಇಬ್ಬರು ಸದಸ್ಯರನ್ನು ಆಯ್ಕೆ ಮಾಡಲಾಗುತ್ತದೆ.

ಕ್ಷೇಮಾಭಿವೃದ್ಧಿ ಸಂಘಗಳು ಯಾವುದೇ ಹೆಸರುಳ್ಳದಾಗಿದ್ದು, ಈ ಷರತ್ತುಗಳನ್ನು ಪೂರೈಸಿರತಕ್ಕದ್ದು( ಅದರ ನೋಂದಾಯಿತ ಕಛೇರಿಯ ಅ ವಾರ್ಡಿನ ಭೌಗೋಳಿಕ ವ್ಯಾಪ್ತಿಯಲ್ಲಿರತಕ್ಕದ್ದು. ಅದು ಬಹುತೇಕ ನಿವಾಸಿಗಳು, ಆಥವಾ ಪೌರಸಂಬಂಧಿ ಗುಂಪು ಅಥವಾ ವಾಣಿಜ್ಯ ಗುಂಪು ಅಥವಾ ಕೈಗಾರಿಕಾ ಗುಂಪುಗಳನ್ನು ಪ್ರತಿನಿಧಿಸುತ್ತಿರತಕ್ಕದ್ದು.

ಕನಿಷ್ಟ ಮೂರು ವರ್ಷ ಕಾಲ ತನ್ನ ಕಾರ್ಯಚಟುವಟಿಕೆಗಳಲ್ಲಿ ನಿರತವಾಗಿರತಕ್ಕದ್ದು. ಯಾವುದೇ ಹೆಸರಿನಿಂದ ನೊಂದಾಯಿಸಲ್ಪಟ್ಟಿದ್ದು, ಧರ್ಮದರ್ಶಿತ್ವದ ಮಟ್ಟದಲ್ಲಿ ಕಾರ್ಯನಿರ್ವಹಿಸುವಂತಹ ವ್ಯಕ್ತಿಗಳನ್ನು ಒಳಗೊಂಡಿರತಕ್ಕದ್ದು).ಇನ್ನುಳಿದಂತೆ ಮೂವರು ಸದಸ್ಯರನ್ನು ಮಹಾನಗರ ಪಾಲಿಕೆ ನೇಮಿಸಲಿದ್ದು, ಇದಕ್ಕೆ ಮಹಾನಗರ ಪಾಲಿಕೆ ಸದಸ್ಯನಾಗಿ ಆಯ್ಕೆಯಾಗಲು ಅನರ್ಹನಾಗಿರತಕ್ಕ ವ್ಯಕ್ತಿಯನ್ನು ಹೊರತುಪಡಿಸಿ ನೇಮಿಸಲಾಗುತ್ತದೆ ಎಂದು ಮಹಾನಗರ ಪಾಲಿಕೆ ಕಚೇರಿ ತಿಳಿಸಿದೆ.

ಅರ್ಜಿಗಳು ಎಲ್ಲಿ ಲಭ್ಯ..?

ಮಹಾನಗರಪಾಲಿಕೆಯ Website: www.bellarycity.mrc.gov.in
ನಲ್ಲಿ ಇತ್ತೀಚಿನ ಸುದ್ದಿಗಳು ಕಾಲಂನಲ್ಲಿ ಅರ್ಜಿ ನಮೂನೆಯನ್ನು ಅಪ್‍ಡೇಟ್ ಮಾಡಿದ್ದು ಅದನ್ನು ಡೌನ್‍ಲೋಡ್ ಮಾಡಿಕೊಳ್ಳಬಹುದಾಗಿದೆ ಅಥವಾ ಬಳ್ಳಾರಿ ಮಹಾನಗರಪಾಲಿಕೆಯ ವಲಯ ಕಛೇರಿ 1,2 ಹಾಗೂ 3 ರಲ್ಲಿ ಅರ್ಜಿ ನಮೂನೆಗಳು ಲಭ್ಯವಿದ್ದು ಅಲ್ಲಿಯು ಸಹಾ ಪಡೆದು ಭರ್ತಿ ಮಾಡಿ ಮೇ 2ರೊಳಗೆ ಸಂಬಂಧಪಟ್ಟ ವಾರ್ಡಿನ ವಲಯ ಕಛೇರಿಗಳಿಗೆ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಏನೇನು ದಾಖಲೆಗಳು ಬೇಕು…?

ಅರ್ಜಿ ಸಲ್ಲಿಸಲು ಇಚ್ಚಿಸುವ ಅರ್ಹ ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರ (ಮೀಸಲಾತಿ ಕ್ಲೇಮ್ ಮಾಡಿದ್ದಲ್ಲಿ ತಹಸೀಲ್ದಾರರವರಿಂದ ಪಡದ ಪ್ರಮಾಣ ಪತ್ರ ಲಗತ್ತಿಸುವುದು), ಕುಟುಂಬದ ವಾರ್ಷಿಕ ವರಮಾನ (ತಹಶೀಲ್ದಾರರವರಿಂದ ಪಡೆದ ಪ್ರಮಾಣ ಪತ್ರ ಲಗತ್ತಿಸುವುದು),ದೈಹಿಕ ನ್ಯೂನ್ಯತೆ ಹೊಂದಿದ ಬಗ್ಗೆ ಪತ್ರ (ಪ್ರಾಥಮಿಕ ಆರೋಗ್ಯ ಕೇಂದ್ರ ದೃಢೀಕರಣ ಪತ್ರ), ಆರ್‍ಡಬ್ಲ್ಯೂಎ/ಎನ್‍ಜಿಓ ವರ್ಗದಲ್ಲಿ ಮೀಸಲಾತಿ ಕೋರಿದ್ದಲ್ಲಿ ಅಧ್ಯಕ್ಷರು/ಸಂಘ-ಸಂಸ್ಥೆಯ ಕಾರ್ಯದರ್ಶಿರವರಿಂದ ಶಿಫಾರಸ್ಸು ಪತ್ರ ಲಗತ್ತಿಸುವುದು. ವಿವಿಧ ಕ್ಷೇತ್ರಗಳಲ್ಲಿ ಅನುಭವ ಹೊಂದಿದ ಬಗ್ಗೆ ಪ್ರಶಸ್ತಿ/ಮನ್ನಣೆ ಪಡೆದಿರುವ ಕುರಿತು ಸಮರ್ಥಿಸುವಂತಹ ದಾಖಲೆಗಳು.

ವರ್ಗ ಅಧಾರಿತ ದಾಖಲೆಗಳು (ಆಸಕ್ತಿ/ಅನುಭವ ಹೊಂದಿದ ಕ್ಷೇತ್ರಗಳಿಂದ).ಚುನಾವಣಾ ಗುರುತಿನ ಚೀಟಿಯ ದೃಢೀಕರಣ ಪ್ರತಿಗಳನ್ನು ಭರ್ತಿ ಮಾಡಿದ ಅರ್ಜಿಯೊಂದಿಗೆ ಲಗತ್ತಿಸಬೇಕು.
ಹೆಚ್ಚಿನ ಮಾಹಿತಿ ಹಾಗೂ ವಾರ್ಡ್ ಸಮಿತಿ ಸದಸ್ಯರ ಷರತ್ತುಗಳ ಕುರಿತು ಕಛೇರಿ ಅವಧಿಯಲ್ಲಿ ಮಹಾನಗರಪಾಲಿಕೆಯ ವಲಯ ಕಛೇರಿ-1,2 ಹಾಗೂ 3 ರ ವಲಯ ಆಯುಕ್ತರಿಗೆ ಭೇಟಿಯಾಗಿ ಪಡೆಯಬಹುದು ಎಂದು ಪಾಲಿಕೆ ಆಯುಕ್ತರಾದ ಪ್ರೀತಿ ಗೆಹ್ಲೋಟ್ ಅವರು ಸ್ಪಷ್ಟಪಡಿಸಿದ್ದಾರೆ.

ವಾರ್ಡ್ ಸಮಿತಿ ರಚನೆ ; ಜನರ ಅಭಿಪ್ರಾಯ ಮಂಡಿಸಲು ವೇದಿಕೆ

ವಾರ್ಡ್ ಮಟ್ಟದಲ್ಲಿ ಜನರು ತಮ್ಮ ಅಭಿಪ್ರಾಯಗಳನ್ನು ಮಂಡಿಸಲು ಮತ್ತು ವಾರ್ಡ್‍ನ ಅಭಿವೃದ್ಧಿ ಕುರಿತು ಚರ್ಚಿಸಲು ವಾರ್ಡ್ ಸಮಿತಿ ರಚನೆ ಒಂದೊಳ್ಳೆ ವೇದಿಕೆ ಎನ್ನುತ್ತಾರೆ ಮಹಾನಗರ ಪಾಲಿಕೆ ಆಯುಕ್ತರಾದ ಪ್ರೀತಿ ಗೆಹ್ಲೋಟ್ ಅವರು. ವಾರ್ಡ್‍ನ ಎಲ್ಲ ಸಮಸ್ಯೆಗಳನ್ನು ಪ್ರತಿ ಬಾರಿ ಪಾಲಿಕೆ ಕಚೇರಿಗೆ ಹೋಗಿ ತಿಳಿಸಲು ಜನರಿಗೆ ಕಷ್ಟವಾಗಬಹುದು. ವಾರ್ಡ್ ಸಮಿತಿ ರಚನೆ ಆದ್ರೇ ವಾರ್ಡ್‍ನಲ್ಲಿಯೇ ಅವುಗಳನ್ನು ಪರಿಹರಿಸಿಕೊಳ್ಳಬಹುದು ಮತ್ತು ವಾರ್ಡ್‍ನ ಅಭಿವೃದ್ಧಿಗೂ ಸಹಕಾರಿಯಾಗಲಿದೆ. ಸಾರ್ವಜನಿಕರು ಬೇಗ ಅರ್ಜಿ ಸಲ್ಲಿಸಿದರೇ ಆದಷ್ಟು ಬೇಗ ಸಮಿತಿ ರಚಿಸಲು ಸಾಧ್ಯವಾಗುತ್ತದೆ ಎಂಬ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸುತ್ತಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.

ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

Published

on

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ

ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.

ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

Published

on

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.

ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್‌ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್‌ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.

ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ತಾಲ್ಲೂಕು ತಹಶೀಲ್ದಾರ್‌ ರಾಜೇಶ್‌ ಕುಮಾರ್‌ ಸಿ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending