ದಿನದ ಸುದ್ದಿ
ದಾವಣಗೆರೆ – ಹರಿಹರ ನಗರಾಭಿವೃದ್ದಿ ಪ್ರಾಧಿಕಾರ 2022-23ನೇ ಸಾಲಿನ ಆಯ-ವ್ಯಯ ಸಭೆ ; ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್
ಸುದ್ದಿದಿನ,ದಾವಣಗೆರೆ : ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಎಂ.ಸುರೇಶ್ ಇವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಪ್ರಾಧಿಕಾರದ 2022-23ನೇ ಸಾಲಿನ ಯೋಜಿತ ಆಯವ್ಯಯ ಸಭೆ ನಡೆಸಲಾಯಿತು.
ದೂಡಾ ಕಚೇರಿಯಲ್ಲಿ ನಡೆದ ಆಯವ್ಯಯ ಸಭೆಯಲ್ಲಿ ಆಯುಕ್ತರಾದ ಕುಮಾರಸ್ವಾಮಿಯವರು ರೂ.18258.76 ಲಕ್ಷಗಳ ಆದಾಯದ ಹಾಗೂ 18136.03 ಲಕ್ಷಗಳ ನಿರೀಕ್ಷಿತ ವೆಚ್ಚದ ಅಂದಾಜನ್ನು ಮಂಡಿಸಿದರು.
ಈ ಕೆಳಕಂಡಂತೆ 2022-23ರ ಆಯ-ವ್ಯಯದ ಪ್ರಮುಖ ಅಂಶ
- 2022-23ನೇ ಸಾಲಿನಲ್ಲಿ ಪ್ರಾಧಿಕಾರವು ತನ್ನ ವಿವಿಧ ಬ್ಯಾಂಕ್‍ಗಳಲ್ಲಿ ನಿಶ್ಚಿತ ಠೇವಣಿ ಒಳಗೊಂಡಂತೆ ಪ್ರಸಕ್ತ ಸಾಲಿನಲ್ಲಿನ ಆದಾಯವು ರೂ.18258.76 ಲಕ್ಷಗಳು ಬರುವುದಾಗಿ ನಿರೀಕ್ಷಿಸಿರುತ್ತದೆ.
- 2022-23ನೇ ಸಾಲಿನಲ್ಲಿ ಪ್ರಾಧಿಕಾರವು ತನ್ನ ಸಾಮಾನ್ಯ ಆಡಳಿತದ ನಿಶ್ಚಿತ ವೆಚ್ಚಗಳನ್ನು ಒಳಗೊಂಡಂತೆ ಪ್ರಾಧಿಕಾರದ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ರೂ.18136.03 ಲಕ್ಷಗಳ ವೆಚ್ಚವನ್ನು ವಹಿಸಲು ಉದ್ದೇಶಿಸಲಾಗಿದೆ.
- 2022-23ನೇ ಸಾಲಿನಲ್ಲಿ ಪ್ರಾಧಿಕಾರವು ರೂ.122.73 ಲಕ್ಷಗಳ ಉಳಿತಾಯದ ಆಯಾವ್ಯಯವನ್ನು ಮಂಡಿಸಲಾಗಿರುತ್ತದೆ.
- 2022-23ನೇ ಸಾಲಿನಲ್ಲಿ ಉದ್ದೇಶಿಸಲಾಗಿರುವ ಅಭಿವೃದ್ಧಿ ಕಾಮಗಾರಿಗಳ ವಿವರ
2021-22ನೇ ಸಾಲಿನಲ್ಲಿ ಕೈಗೊಂಡ ಕಾಮಗಾರಿಗಳು, ಕಾಮಗಾರಿಗಳು ಚಾಲ್ತಿಯಲ್ಲಿದ್ದು ಮುಂದುವರೆದ ಕಾಮಗಾರಿಗಳಾಗಿರುವುದರಿಂದ ದಾವಣಗೆರೆ ಹಾಗೂ ಹರಿಹರ ವ್ಯಾಪ್ತಿಯಲ್ಲಿನ ವಿವಿಧ ಕಾಮಗಾರಿಗಳಿಗೆ ಒಟ್ಟು ರೂ.10543.37 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ಪ್ರಾಧಿಕಾರವು ಪ್ರಸಕ್ತ ಸಾಲಿನಲ್ಲಿ ಕುಂದುವಾಡ ಗ್ರಾಮದಲ್ಲಿ ಅಂದಾಜು 53.00 ಎಕರೆಯಲ್ಲಿ ನೂತನ ವಸತಿ ಬಡಾವಣೆ ನಿರ್ಮಾಣಕ್ಕಾಗಿ 2021-22ನೇ ಸಾಲಿನಲ್ಲಿ ರೂ.6000.00ಲಕ್ಷಗಳನ್ನು ಕಾಯ್ದಿರಿಸಿದ್ದು, ಇದರೊಂದಿಗೆ ಪ್ರಸಕ್ತ ಅವಧಿಯಲ್ಲಿ ರೂ.4000.00 ಲಕ್ಷಗಳನ್ನು ಕಾಯ್ದಿರಿಸಿದ್ದು, ಒಟ್ಟು ರೂ.10,000-00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿರುತ್ತದೆ.
- ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಬಾತಿ ಕೆರೆಯನ್ನು ಕೆರೆ ಸಂರಕ್ಷಣಾ ಪ್ರಾಧಿಕಾರದ ಅನುಮೋದನೆಯಂತೆ ಅಭಿವೃದ್ಧಿ ಪಡಿಸಿ ಸೌಂದರ್ಯಕರಣಗೊಳಿಸಿ ಹಾಗೂ ಆಕರ್ಷಕ ಪ್ರವಾಸೋದ್ಯಮ ತಾಣವನ್ನಾಗಿ ಅಭಿವೃದ್ದಿ ಪಡಿಸುವ ಸಲುವಾಗಿ ರೂ.846.00 ಲಕ್ಷಗಳ ಮೊತ್ತವನ್ನು ಮುಂದುವರೆದ ಕಾಮಗಾರಿಯಲ್ಲಿ ಕಾಯ್ದಿರಿಸಿದ್ದು, ಈಗ ದರಗಳ ಏರಿಳಿತದಿಂದ 2022-23ನೇ ಸಾಲಿನ ಆಯಾವ್ಯಯದಲ್ಲಿ ರೂ.44.00 ಲಕ್ಷಗಳನ್ನು ಸೇರಿಸಿಕೊಂಡು ಒಟ್ಟು ರೂ.890.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿರುತ್ತದೆ.
- ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಹಾಗೂ ದಾವಣಗೆರೆ ಮಹಾನಗರಕ್ಕೆ ಕುಡಿಯುವ ನೀರಿನ ಜಲ ಮೂಲವಾದ ಟಿ.ವಿ.ಸ್ಟೇಷನ್ ಕೆರೆಯನ್ನು ಅಭಿವೃದ್ಧಿ ಪಡಿಸುವ ಸಲುವಾಗಿ ರೂ.275.00 ಲಕ್ಷಗಳನ್ನು ಮುಂದುವರೆದ ಕಾಮಗಾರಿಯಲ್ಲಿ ಕಾಯ್ದಿರಿಸಲಾಗಿದೆ.
- ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಹೊನ್ನೂರು ಕೆರೆಯನ್ನು ಅಭಿವೃದ್ಧಿ ಪಡಿಸುವ ಸಲುವಾಗಿ ರೂ.35.00 ಲಕ್ಷಗಳ ಮೊತ್ತವನ್ನು ಮುಂದುವರೆದ ಕಾಮಗಾರಿಯಲ್ಲಿ ಕಾಯ್ದಿರಿಸಲಾಗಿದೆ.
- ದಾ-ಹ ನಗರಾಭಿವೃದ್ಧಿ ಪ್ರಾಧಿಕಾರವು ಮಹಾಯೋಜನೆ ವ್ಯಾಪ್ತಿಯಲ್ಲಿರುವ ಅಂದಾಜು 25.00 ಎಕರೆ ಭೂಮಿಯನ್ನು ಪ್ರಾಧಿಕಾರ ಮಹಾಯೋಜನೆಯಲ್ಲಿ ಉದ್ಯಾನವನಕ್ಕೆ ಕಾಯ್ದಿರಿಸಿರುವ ಜಮೀನುಗಳಲ್ಲಿ ಅಂದಾಜು 25.00 ಎಕರೆ ಜಮೀನನ್ನು ಭೂ ಸ್ವಾಧೀನ/ನೇರ ಖರೀದಿ ಮಾಡಿಕೊಂಡು ದಾವಣಗೆರೆ ನಾಗರೀಕರಿಗೆ ಒಂದು ಬೃಹತ್ ಅತ್ಯುತ್ತಮ ಉದ್ಯಾನವನ್ನು ನಿರ್ಮಿಸುವ ಸಲುವಾಗಿ ರೂ.1050.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ಶ್ರೀ ಜೆ.ಹೆಚ್.ಪಟೇಲ್ ಬಡಾವಣೆಯಲ್ಲಿ ಪ್ರಾಧಿಕಾರದ ವಶದಲ್ಲಿರುವ ನಿವೇಶನದಲ್ಲಿ ಅಧಿಕಾರಿ/ನೌಕರರಿಗಾಗಿ ವಸತಿ ಸಮುಚ್ಛಯ ಹಾಗೂ ಅತಿಥಿ ಗೃಹ ನಿರ್ಮಾಣಕ್ಕಾಗಿ ರೂ.500.00 ಲಕ್ಷಗಳ ಮೊತ್ತವನ್ನು ಮುಂದುವರೆದ ಕಾಮಗಾರಿಯಲ್ಲಿ ಕಾಯ್ದಿರಿಸಲಾಗಿದೆ.
- ಆರ್.ಟಿ.ಓ. ಕಛೇರಿ ಎದುರುಗಡೆಯಲ್ಲಿರುವ ಪ್ರಾಧಿಕಾರದ ಜಾಗದಲ್ಲಿ ನೂತನ ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕಾಗಿ ರೂ.500.00 ಲಕ್ಷಗಳ ಮೊತ್ತವನ್ನು ಮುಂದುವರೆದ ಕಾಮಗಾರಿಯಲ್ಲಿ ಕಾಯ್ದಿರಿಸಲಾಗಿದೆ.
- ಪ್ರಾಧಿಕಾರದ ವ್ಯಾಪ್ತಿಯ ಪಿ.ಬಿ. ರಸ್ತೆಯ ಡಿ.ಸಿ.ಎಂ. ಟೌನ್‍ಶಿಫ್‍ನ ರೈಲ್ವೆ ಅಂಡರ್ ಪಾಸ್ ನಿಂದ ಚಿಂದೋಡಿಲೀಲಾ ರಂಗ ಮಂದಿರದವರೆಗೆ ದ್ವಿಪಥ ರಸ್ತೆಯ ರಸ್ತೆ ವಿಭಜಕದಲ್ಲಿ ಅಲಂಕಾರಿಕ ಕೋನಿಕಲ್ ವಿದ್ಯುತ್ ದೀಪಗಳನ್ನು ಅಳವಡಿಸುವ ಕಾಮಗಾರಿಗೆ ರೂ.179.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ಪ್ರಾಧಿಕಾರ ವ್ಯಾಪ್ತಿಯಲ್ಲಿ ಪ್ರಾಧಿಕಾರದ ಮಹಾಯೋಜನೆಯಲ್ಲಿರುವ ಶ್ರೀ ಜಿ. ಮಲ್ಲಿಕಾರ್ಜುನಪ್ಪ ದ್ವಿಪಥ ರಸ್ತೆಯು ಪಿ.ಬಿ. ರಸ್ತೆಗೆ ಕೂಡುವ ಶ್ರೀ ಜಿ.ಮಲ್ಲಿಕಾರ್ಜುನ ವೃತ್ತದ ಅಭಿವೃದ್ಧಿ ಪಡಿಸುವ ಕಾಮಗಾರಿಗೆ ರೂ.50.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ಪ್ರಾಧಿಕಾರದಿಂದ ನಿರ್ಮಾಣ ಮಾಡಲಾದ ಶ್ರೀ ಜೆ.ಹೆಚ್.ಪಟೇಲ್ ಬಡಾವಣೆಯ ಸಂಪೂರ್ಣ ಅಭಿವೃದ್ಧಿ ರಸ್ತೆಗಳ ಡಾಂಬರೀಕರಣ, ವೃತ್ತಗಳ ಅಭಿವೃದ್ಧಿ, ಉದ್ಯಾನವನಗಳ ಅಭಿವೃದ್ಧಿ ಮತ್ತು ಸೋಲಾರ್ ದೀಪ ಅಳವಡಿಸಲು, ವಿದ್ಯುತ್ ದೀಪಗಳ ಅಳವಡಿಕೆ, ಕುಡಿಯುವ ನೀರು ಒಳಚರಂಡಿ ಹಾಗೂ ಸ್ವಚ್ಛತೆ ಸಂಬಂಧಿಸಿದ ಕಾಮಗಾರಿಗಳಿಗಾಗಿ ರೂ.975.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ದಾವಣಗೆರೆ-ಹರಿಹರ ಮಹಾಯೋಜನೆ ಪರಿಷ್ಕøತ-2 ತಯಾರಿಕೆಗೆ ರೂ.50.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ಪ್ರಾಧಿಕಾರದ ವ್ಯಾಪ್ತಿಯ ಹರಿಹರ ನಗರಕ್ಕೆ ಸಂಬಂಧಿಸಿದಂತೆ ವಿವಿಧ ರಸ್ತೆ ನಿರ್ಮಾಣ ಕಾಮಗಾರಿಗಳಿಗಾಗಿ ರೂ.100.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ನಾಗನೂರು, ಶಿರಮಗೊಂಡನಹಳ್ಳಿ ಕೆರೆ ಅಭಿವೃದ್ಧಿ ಪಡಿಸುವ ಸಲುವಾಗಿ ರೂ.200.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ಪ್ರಾಧಿಕಾರದ ವ್ಯಾಪ್ತಿಯ ತರಳಬಾಳು ಬಡಾವಣೆಯಲ್ಲಿ 10ನೇ ಕ್ರಾಸ್‍ನಲ್ಲಿ ಸಿ.ಸಿ. ರಸ್ತೆ ನಿರ್ಮಾಣಕ್ಕಾಗಿ ರೂ.75.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ಪ್ರಾಧಿಕಾರದ ವ್ಯಾಪ್ತಿಯ ತರಳಬಾಳು ಬಡಾವಣೆಯಲ್ಲಿ 11ನೇ ಕ್ರಾಸ್‍ನಲ್ಲಿ ಸಿ.ಸಿ. ರಸ್ತೆ ನಿರ್ಮಾಣಕ್ಕಾಗಿ ರೂ.75.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯ ವಾರ್ಡ್ ನಂ.33 ರಲ್ಲಿ ಬರುವ ದುರ್ಗಾಂಭಿಕಾ ಬಡಾವಣೆಯ ಮುಖ್ಯ ಮತ್ತು ಅಡ್ಡ ರಸ್ತೆ ಹಾಗೂ ಡಾಬಾ ಸ್ಟಾಪ್ ಎದುರಿನ ಮುಖ್ಯ ರಸ್ತೆಗಳಲ್ಲಿ ಸಿ.ಸಿ ರಸ್ತೆ ಅಭಿವೃದ್ದಿ ಕಾಮಗಾರಿ ಮತ್ತು ನಿಟುವಳ್ಳಿ ಮುಖ್ಯ ರಸ್ತೆಯಲ್ಲಿ ಹದಡಿ ರಸ್ತೆಯಿಂದ ಎಸ್.ಬಿ.ಐ. ಬ್ಯಾಂಕ್ ವರೆಗೂ ಮಳೆ ನೀರು ಚರಂಡಿ ನಿರ್ಮಾಣ ಕಾಮಗಾರಿಗೆ ರೂ.140.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯ ವಿಜಯನಗರ ಬಡಾವಣೆಯ 1ನೇ ಮೇನ್, 2ನೇ ಕ್ರಾಸ್ ರಸ್ತೆಯಲ್ಲಿ ಸಿ.ಸಿ. ಚರಂಡಿ ಮತ್ತು ಸಿ.ಸಿ. ರಸ್ತೆ ನಿರ್ಮಾಣ ಕಾಮಗಾರಿಗೆ ರೂ.50.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ದಾವಣಗೆರೆ ನಗರದ ಶ್ರೀ ಎಸ್.ನಿಜಲಿಂಗಪ್ಪ ಬಡಾವಣೆಯ ಅಮೃತಮಯಿ ಶಾಲೆಯ ಪಕ್ಕದಲ್ಲಿರುವ ಆಟದ ಮೈದಾನಕ್ಕೆ ಆವರಣ ಗೋಡೆ ನಿರ್ಮಿಸುವ ಕಾಮಗಾರಿಗೆ ರೂ.10.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ದಾವಣಗೆರೆ ನಗರದ ಪಿ.ಬಿ. ರಸ್ತೆಯಿಂದ ಕುಂದುವಾಡ ರಸ್ತೆ ಕೂಡುವ ರಸ್ತೆಯಲ್ಲಿ ಅಡ್ಡಲಾಗಿ ಬಂದಿರುವ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸಲು ರೂ.10.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ಮಹಾಯೋಜನೆಯಲ್ಲಿರುವ ದಾವಣಗೆರೆ ನಗರದ ವಾರ್ಡ್ ನಂ: 28 ಕಸ್ತೂರಿ ಬಾ ಬಡಾವಣೆ ಅಜ್ಜಂಪುರ ಶೆಟ್ರು ಲೇಔಟ್ ನಲ್ಲಿರುವ ರಸ್ತೆಯನ್ನು ಶಿವಪ್ಪ ಸರ್ಕಲ್‍ನಿಂದ ನಿಟುವಳ್ಳಿಗೆ ಹೋಗುವ ರಸ್ತೆಯಿಂದ ಕೆ.ಬಿ. ಬಡಾವಣೆಗೆ ಹೋಗುವ ರಸ್ತೆಯ ವರೆಗೆ ಅಭಿವೃದ್ಧಿ ಪಡಿಸುವ ಕಾಮಗಾರಿಗೆ ರೂ.23.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ಮಹಾಯೋಜನೆಯಲ್ಲಿರುವ ದಾವಣಗೆರೆ ನಗರದ ವಾರ್ಡ್ ನಂ: 33ರ ಸರಸ್ವತಿ ನಗರ ಬಿ ಬ್ಲಾಕ್‍ನಲ್ಲಿ ಮನೆ ನಂ: 780/83/2ರ ಮುಂಭಾಗದ ರಸ್ತೆ ಹಾಗೂ ಪಂಚಮುಖಿ ಆಂಜನೇಯ ದೇವಸ್ಥಾನದ ಮುಂಭಾಗದ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ಕಾಮಗಾರಿಗೆ ರೂ.27.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ದಾವಣಗೆರೆ ಮಹಾಯೋಜನೆಯಲ್ಲಿರುವ ವಾರ್ಡ್ ನಂ: 33 ಸರಸ್ವತಿ ನಗರ ಬಿ ಬ್ಲಾಕ್ 9ನೇ ಕ್ರಾಸ್‍ನಲ್ಲಿ ಕೆ.ಎಸ್.ಎಸ್. ಕಾಲೇಜು ಹತ್ತಿರ ಇರುವ ಪಾರ್ಕ್ ಅಭಿವೃದ್ಧಿಗಾಗಿ ರೂ.50.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ದಾವಣಗೆರೆ ಮಹಾಯೋಜನೆಯಲ್ಲಿರುವ ವಾರ್ಡ್ ನಂ: 13 ಶ್ರೀ ಡಿ.ದೇವರಾಜ ಕ್ವಾಟರ್ಸ್ ಹತ್ತಿರ ಇರುವ ಮುಖ್ಯ ರಸ್ತೆಯಲ್ಲಿ ಬೇತೂರು ಮುಖ್ಯ ರಸ್ತೆಯಿಂದ ಇಂದಿರಾ ನಗರ, ಎ.ಕೆ. ಹಟ್ಟಿಯವರೆಗೂ ಸಿ.ಸಿ. ರಸ್ತೆ ನಿರ್ಮಿಸಿ ಎರಡು ಬದಿಯಲ್ಲಿ ಸಿ.ಸಿ. ಚರಂಡಿ ನಿರ್ಮಿಸಿ ಪಾದಚಾರಿ ರಸ್ತೆ ನಿರ್ಮಿಸುವ ಕಾಮಗಾರಿಗಾಗಿ ರೂ.50.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ಶ್ರೀ ಎಸ್.ನಿಜಲಿಂಗಪ್ಪ ಬಡಾವಣೆಯ ಅಮರ್ ಜವಾನ್ ಉದ್ಯಾನವನದಲ್ಲಿ ಬಯಲು ವೇದಿಕೆ ಮುಂಭಾಗದಲ್ಲಿ ಪೇವರ್ ಅಳವಡಿಸಿ ಅಭಿವೃದ್ಧಿ ಪಡಿಸುವ ಕಾಮಗಾರಿಗಾಗಿ ರೂ.8.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ಮಹಾಯೋಜನೆಯಲ್ಲಿರುವ ದಾವಣಗೆರೆ ವಾರ್ಡ್ ನಂ: 29 ಆನಗೋಡು ಹೋಟೇಲ್ ನಿಂದ ಡಿ.ಸಿ.ಎಂ. ಕಾಂಪೌಂಡ್ ವರೆಗೂ (ಕೊಟ್ಟೂರೇಶ್ವರ ಬಡಾವಣೆ) ರಸ್ತೆ ಅಭಿವೃದ್ಧಿ ಕಾಮಗಾರಿಗೆ ರೂ.30.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
- ಮಹಾಯೋಜನೆಯಲ್ಲಿರುವ ದಾವಣಗೆರೆ ನಗರದ ಬಾಡಾ ಕ್ರಾಸ್‍ನಿಂದ ಬೇತೂರು ಗ್ರಾಮದವರೆಗೆ ರಿಂಗ್ ರಸ್ತೆ ನಿರ್ಮಿಸಲು ಡಿ.ಪಿ.ಆರ್. ತಯಾರಿಸಲು ರೂ.10.00 ಲಕ್ಷಗಳ ಮೊತ್ತವನ್ನು ಕಾಯ್ದಿರಿಸಲಾಗಿದೆ.
ಸಭೆಯಲ್ಲಿ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎ.ರವೀಂದ್ರನಾಥ್, ದೂಡಾ ಸದಸ್ಯರುಗಳಾದ ಮಾರುತಿರಾವ್ ಘಾಟ್ಗೆ, ಲಕ್ಷ್ಮಣ, ಬಾತಿ ಚಂದ್ರಶೇಖರ್, ಗೌರಮ್ಮ.ವಿ.ಪಾಟೀಲ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮಗೊಂಡ ಬಸರಗಿ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಕೆ.ಹೆಚ್.ಶ್ರೀಕರ್, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಪ್ರಾಧಿಕಾರದ ಜಂಟಿ ನಿರ್ದೇಶಕರು, ಸಹಾಯಕ ನಿರ್ದೇಶಕರು ಮತ್ತು ಲೆಕ್ಕಪರಿಶೋಧನಾಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ನಕಲಿ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 6 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಟಿ. ಸೋಮ್ಲನಾಯ್ಕ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 2023-24 ಮತ್ತು 2024-25ನೇ ಸಾಲಿನ ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬAಧಿಸಿದ ಕಾಮಗಾರಿಗಳಿಗೆ ಸಂಬAಧಿಸಿದAತೆ ಹೊನ್ನಾಳಿ ಉಪವಿಭಾಗದ ಅಡಿಯಲ್ಲಿ ನಡೆದಿರುವ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ನಾಲ್ಕು ಹಂತದ ತುರ್ತು ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಸಂಪೂರ್ಣ ಕಡತವನ್ನು ಪಡೆದು ಪರಿಶೀಲನೆ ಮಾಡಿದಾಗ, ಇಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಲೋಪಗಳು ಕಂಡುಬAದಿರುತ್ತವೆ. ಅಂತಹ ಪ್ರಮುಖ ಲೋಪಗಳನ್ನು ಉಲ್ಲೇಖಿಸಿ ಸೂಕ್ತ ತನಿಖೆಗೆ ಒಳಪಡಿಸುವಂತೆ ದಿನಾಂಕ: 01-12-2025 ರಂದು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರಿಗೆ ದೂರು ನೀಡಲಾಗಿತ್ತು.
ಈ ದೂರು ಅರ್ಜಿಗೆ ಸಂಬಂಧಿಸಿದಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು 2 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ದಿನಾಂಕ: 27-01-2026 ರಂದು ಜ್ಞಾಪನವನ್ನು ನೀಡಲಾಗಿರುತ್ತದೆ. ಆದರೆ ಜ್ಞಾಪನ ನೀಡಿ 6 ತಿಂಗಳು ಕಳೆಯುತ್ತ ಬಂದರೂ ಈ ದೂರು ಅರ್ಜಿಗೆ ಸಂಬAಧಿಸಿದAತೆ ಕಾರ್ಯಪಾಲಕ ಅಭಿಯಂತರರು (ಪ್ರಭಾರ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿರುತ್ತಾರೆ.
ಈ ದೂರು ಅರ್ಜಿಯನ್ನು ತನಿಖೆಗೆ ಒಳಪಡಿಸುವಲ್ಲಿ ತೋರಿದ ನಿರ್ಲಕ್ಷö್ಯಕ್ಕೆ ಪ್ರಮುಖ ಕಾರಣವೆಂದರೆ, ಹೊನ್ನಾಳಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರೇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯನಿರ್ವಹಿಸಿರುತ್ತಾರೆ. ಈ ಕಾರಣಕ್ಕಾಗಿ ತನ್ನ ಮೇಲಿನ ಆರೋಪವನ್ನು ತನಿಖೆಗೆ ಒಳಪಡಿಸುವಲ್ಲಿ ನಿರ್ಲಕ್ಷö್ಯ ತೋರಿ, ಈ ದೂರು ಅರ್ಜಿಯನ್ನು ಮೂಲೆ ಗುಂಪಾಗಿಸಿರುತ್ತಾರೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಸೋಮ್ಲನಾಯ್ಕ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
ಸುದ್ದಿದಿನಡೆಸ್ಕ್:ಜಪಾನ್‌ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿತು. ಅವರನ್ನು ಬಂಧಿಸಿ 19 ದಿನ ಜೈಲಿನಲ್ಲಿ ಇರಿಸಲಾಯಿತು.
ತಮ್ಮ ಬಂಧನ ಸರಿಯಲ್ಲ ಎಂದು ತನಕಾ ಮಾನವ ಹಕ್ಕುಗಳ ಆಯೋಗದ ಮೊರೆ ಹೋದರು. ವೀಸಾ ಅವಧಿ ಮುಗಿಯುತ್ತಿದ್ದಂತೆ, ಪ್ರಕರಣ ಮುಗಿಯುವವರೆಗೂ ಭಾರತದಲ್ಲೇ ಇರಲು ವಿಚಿತ್ರ ಪ್ರಯತ್ನವೂ ಮಾಡಿದರು. ಪೊಲೀಸ್ ಠಾಣೆಯಿಂದ ಪ್ಲಾಸ್ಟಿಕ್ ಕುರ್ಚಿಯೊಂದನ್ನು ತೆಗೆದುಕೊಂಡು ಹೋಗಿ, ಮತ್ತೆ ಬಂಧನಕ್ಕೊಳಗಾಗಲು ಪ್ರಯತ್ನಿಸಿದರು!
ಅದು ಆಗದೇ ಇದ್ದಾಗ ಜಪಾನ್ ಗೆ ಮರಳಿ . ಅಲ್ಲಿಂದಲೇ ತಮ್ಮ ಹೋರಾಟ ಮುಂದುವರಿಸಿದ ತನಕಾ ಅವರ ಹೋರಾಟಕ್ಕೆ ಜಯ ಸಿಕ್ಕಿದೆ ಸಿಕ್ಕಿದೆ. ಕರ್ನಾಟಕದಿಂದ 75,000 ಪರಿಹಾರವನ್ನು ಪಡೆದುಕೊಂಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಡಾಲಿಯ ಕನಸು ಒಂದೇ ಹೀರೋ ಆಗೋದು
ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು!
ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು ಗುರಿಯ ಮೇಲೆ ಸಂಪೂರ್ಣ ಗಮನ ಹೊಂದಿದ್ದವರು. ಯಾವುದೇ ಡೈವರ್ಷನ್ ಇಲ್ಲ, ಸಿನಿಮಾ ಕನಸಿನ ಕಡೆ ಮಾತ್ರ ಗಮನ!
ಇಂದು ಬಹುಭಾಷಾ ನಟನಾಗಿ ದೊಡ್ಡ ಎತ್ತರಕ್ಕೇರಿದ್ದರೂ, ತಮ್ಮ ಬೇರುಗಳನ್ನು ಅವರು ಮರೆತಿಲ್ಲ. ಇಂದಿಗೂ ತಮ್ಮ ಹಳೆಯ ಸ್ನೇಹಿತರ ಜೊತೆಗೂಡಿ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿರ್ಮಾಪಕರಾಗಿಯೂ ಗುರುತಿಸಿಕೊಂಡಿರುವ ಅವರು, ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ.
ಅಂದಿನ ಅದೇ ಸರಳತೆ, ಅದೇ ನಡವಳಿಕೆ ಇಂದಿಗೂ ಇದೆ!
ಒಬ್ಬ ಕಾಲೇಜು ಯುವಕನಿಂದ ಬಹುಭಾಷಾ ತಾರೆಯವರೆಗೆ—ಎಂತಹ ಸ್ಪೂರ್ತಿದಾಯಕ ಪಯಣ! ಹ್ಯಾಪಿ ಬರ್ತ್ಡೇ ಡಾಲಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ3 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ5 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ದಿನದ ಸುದ್ದಿ1 day agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ1 day agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ16 hours agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ1 day agoಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ
-
ದಿನದ ಸುದ್ದಿ2 days agoಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!

