ರಾಜಕೀಯ
ಎಚ್.ಡಿ.ಕೆ ಸಂಪುಟ ಸೇರಲಿರುವ ಶಾಸಕರು..!
ಸುದ್ದಿದಿನ,ಬೆಂಗಳೂರು : ನೂತನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದು, 20 ಶಾಸಕರು ಸಚಿವಸ್ಥಾನಗಿಟ್ಟಿಸಿಕೊಂಡಿದ್ದಾರೆ. ಅಂತೂ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣರಗೆ ಮಹೂರ್ತ ಕೂಡಿಬಂದಿದೆ.
ಶನಿವಾರ( ಜೂನ್ 02) ರಂದು ನೂತನ ಸಚಿವರ ಪ್ರಮಾಣ ವಚನ ಸಮಾರಂಭವು ರಾಜಭವನದಲ್ಲಿ ನಡೆಯಲಿದೆ. ಮೊದಲನೆಯ ಹಂತದಲ್ಲಿ ಕಾಂಗ್ರೆಸ್ ನ 12 ಶಾಸಕರು ಹಾಗೂ ಜೆಡಿಎಸ್ ನ 8 ಶಾಸಕರು ಕುಮಾರ ಸ್ವಾಮಿಯ ಸಂಪುಟವನ್ನು ಸೇರಲಿದ್ದಾರೆ.
ಸಚಿವರಾಗಲಿರುವ 20 ಶಾಸಕರು
- ಡಾ.ಜಿ. ಪರಮೇಶ್ವರ್ – ಕೊರಗೆರೆ ಕ್ಷೇತ್ರ- ಕಾಂಗ್ರೆಸ್
- ಡಿ.ಕೆ. ಶಿವಕುಮಾರ್ – ಕನಕಪುರ ಕ್ಷೇತ್ರ-ಕಾಂಗ್ರೆಸ್
- ರಾಮಲಿಂಗಾರೆಡ್ಡಿ – ಬಿ.ಟಿ.ಎಂ ಲೇಔಟ್ ಕ್ಚೇತ್ರ- ಕಾಂಗ್ರೆಸ್
- ದಿನೇಶ್ ಗುಂಡೂರಾವ್-ಗಾಂಧಿನಗರ ಕ್ಷೇತ್ರ- ಕಾಂಗ್ರೆಸ್
- ಎಂ.ಬಿ.ಪಾಟೀಲ್- ಬಬಲೇಶ್ವರ ಕ್ಷೇತ್ರ-ಕಾಂಗ್ರೆಸ್
- ಕೆ.ಜೆ.ಜಾರ್ಜ್-ಸರ್ವಜ್ಞ ನಗರ-ಕಾಂಗ್ರೆಸ್
- ಕೃಷ್ಟ ಭೈರೇಗೌಡ-ಬ್ಯಾಟರಾಯನಪುರ ಕ್ಷೇತ್ರ- ಕಾಂಗ್ರೆಸ್
- ಜಮೀರ್ ಅಹಮದ್ ಖಾನ್- ಚಾಮರಾಚಪೇಟೆ- ಕಾಂಗ್ರೆಸ್
- ಡಾ.ಕೆ.ಸುಧಾಕರ್-ಚಿಕ್ಕಬಳ್ಳಾಪುರ-ಕಾಂಗ್ರೆಸ್
- ರೂಪಾ ಶಶಿಧರ್-ಕೆಜಿಎಫ್ ಕ್ಷೇತ್ರ- ಕಾಂಗ್ರೆಸ್
- ಎ.ಕೃಷ್ಣಪ್ಪ-ವಿಜಯನಗರ-ಕಾಂಗ್ರೆಸ್
- ಶಂಕರ್-ರಾಣೇಬೆನ್ನೂರು ಕ್ಷೇತ್ರ- ಪಕ್ಷೇತರ
- ನಾಗೇಶ್-ಮುಳಬಾಗಿಲು-ಪಕ್ಷೇತರ
- ಸಿ.ಎಸ್. ಪುಟ್ಟರಾಜ-ಮೇಲುಕೋಟೆ-ಜೆಡಿಎಸ್
- ಎಚ್.ಡಿ.ರೇವಣ್ಣ-ಹೊಳೆನರಸೀಪುರ-ಜೆಡಿಎಸ್
- ಬಿ.ಎಂ.ಫಾರೂಕ್- ಮುಸ್ಲಿಂ ಕೋಟಾ
- ಜಿ.ಟಿ.ದೇವೇಗೌಡ-ಚಾಮುಂಡೇಶ್ವರಿಕ್ಷೇತ್ರ-ಜೆಡಿಎಸ್
- ಸಾ.ರಾ.ಮಹೇಶ-ಕೆ.ಆರ್.ನಗರ-ಜೆಡಿಎಸ್
- ಎನ್.ಮಹೇಶ್-ಕೊಳ್ಳೇಗಾಲ-ಬಿ.ಎಸ್.ಪಿ
- ಬಂಡೆಪ್ಪ ಕಾಶೆಂಪೂರ- ಬೀದರ್ ದಕ್ಷಿಣ-ಜೆಡಿಎಸ್
- ಎಚ್.ಕೆ.ಕುಮಾರಸ್ವಾಮಿ-ಸಕಲೇಶಪುರ-ಜೆಡಿಎಸ್.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ದಾವಣಗೆರೆ | ಇಂದು ಕರೆಂಟ್ ಇರಲ್ಲ
ಸುದ್ದಿದಿನ,ದಾವಣಗೆರೆ:ಬೆಸ್ಕಾಂ ಜಗಳೂರು ಉಪವಿಭಾಗದ ವ್ಯಾಪ್ತಿಯಲ್ಲಿ ತುರ್ತು ಜಂಗಲ್ ಕಟಿಂಗ್ ಮತ್ತು ಫೀಡರ್‌ಗಳ ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಮೇ 26 ರಂದು ಬೆಳಿಗ್ಗೆ 09-00 ರಿಂದ ಸಂಜೆ 05-00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಕೊರಚರ ಹಟ್ಟಿ ಸರ್ಕಲ್, ಅಂಜನೆಯ ಬಡಾವಣೆ, ಶಕ್ತಿ ನಗರ, ಭಗೀರಥ ಲೇಔಟ್ ಸರ್ಕಲ್, ಕೊಟ್ಟುರೇಶ್ವರ ಬಡಾವಣೆ, , ಡಿ.ಸಿ.ಎಂ ಎಬಿಸಿ ಬ್ಲಾಕ್, ರಾಜೇಂದ್ರ ಬಡಾವಣೆ, ಭೂಮಿಕಾ ನಗರ, ಎಸ್.ಎಸ್ ಹೈ-ಟೆಕ್ ಮೇನ್ ರೋಡ್, ಶೇಶಾಂ ಲೇಔಟ್, ಹೊಂ ಟೈಲಾರ್ ರೋಡ್, ಬನಶಂಕರಿ ದೇವಸ್ಥಾನ, ಶ್ರೀರಾಮ್ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ. ಎ ಬ್ಲಾಕ್, ನಿಜಲಿಂಗಪ್ಪ ಲೇಔಟ್, ಅಶ್ವಿನಿ ಆರ್ಯುವೇಧಿಕ್ ಆಸ್ಪತ್ರೆ, ಜೊಲ್ಲಿಗುರು ಕಾಂಪೌಡ್, ಮುದ್ದೊಳ್ಳಿ ತೋಟ, ನರಹರಿಶೇಟ ಕಲ್ಯಾಣ ಮಂದಿರ, ಪೊಲೀಸ್ ಹಳೆಯ ವಸತಿ ಗೃಹಗಳು, ವಿನೋಬ ನಗರ 1ನೇ ಮತ್ತು 2ನೇಯ ಮುಖ್ಯ ರಸ್ತೆ ಚರ್ಚ್ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಹಾಗೂ ಬೆಳಗ್ಗೆ 10:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಬಿದರಕೆರೆ ವಿದ್ಯುತ್ ವಿತರಣಾ ಕೇಂದ್ರಕ್ಕೆ ಒಳಪಡುವ ಎಫ್- ಕಟ್ಟಿಗೆಹಳ್ಳಿ, ಎನ್‌ಜೆವೈ (NJY) ಜಗಳೂರು ವಿದ್ಯುತ್ ವಿತರಣಾ ಕೇಂದ್ರಕ್ಕೆ ಒಳಪಡುವ ಅರಿಶಿನಗುಂಡಿ ಹಾಗೂ ಜ್ಯೋತಿಪುರ ಎನ್‌ಜೆವೈ (NJY) 11ಕೆವಿ ಮಾರ್ಗಗಳು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಅಲ್ಪಸಂಖ್ಯಾತರ ಇಲಾಖೆ ನಿರ್ದೇಶಕ ಜಿಲಾನಿ ಎಚ್. ಮೊಕಾಶಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಇಲಾಖೆಯ ನಿಯಮಾನುಸಾರ ಬಯೋಟ್ರಿಕ್ ಹಾಜರಾತಿ ಅಳವಡಿಸಿಕೊಳ್ಳದೆ ಸರ್ಕಾರಕ್ಕೆ ವಂಚಿಸಿರುವ ಬಗ್ಗೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರಾದ ಜಿಲಾನಿ ಎಚ್. ಮೊಕಾಶಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರತಿದಿನದ ಹಾಜರಾತಿಯನ್ನು ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯ ಮೂಲಕ ಕಡ್ಡಾಯವಾಗಿ ನಿರ್ವಹಿಸಲು ದಿನಾಂಕ: 12-07-2022 ರಂದು ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ಇವರು ಸುತ್ತೋಲೆ ಹೊರಡಿಸಿದ್ದಾರೆ.
ಸದರಿ ಸುತ್ತೋಲೆಯಲ್ಲಿ ‘ಎಲ್ಲಾ ನಿಲಯಪಾಲಕರು/ ಮೇಲ್ವಿಚಾರಕರು ಬೆಲಗ್ಗೆ ತಿಂಡಿ ಸಮಯದಲ್ಲಿ ಹಾಗೂ ರಾತ್ರಿ ಊಟದ ಸಮಯದಲ್ಲಿ ವಸತಿ ಶಾಲೆ/ಕಾಲೇಜು ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ಕಡ್ಡಾಯವಾಗಿ ಹಾಜರಿದ್ದು, ವಿದ್ಯಾರ್ಥಿಗಳ ಬಯೋಮೆಟ್ರಿಕ್ ಹಾಜರಾತಿಯನ್ನು ಪಡೆಯತಕ್ಕದ್ದು’ ಎಂಬುದಾಗಿ ಸೂಚಿಸಲಾಗಿದೆ.
‘ಬಯೋಮೆಟ್ರಿಕ್ ಹಾಜರಾತಿ ಪಡೆಯದೆ ಆಹಾರ ವೆಚ್ಚ ಭರಿಸಿದ್ದಲ್ಲಿ ಸಂಬAಧಪಟ್ಟ ನಿಲಯಪಾಲಕರು, ಅಲ್ಪಸಂಖ್ಯಾತರ ತಾಲ್ಲೂಕು ವಿಸ್ತರಣಾಧಿಕಾರಿಗಳು/ ಪ್ರಾಂಶುಪಾಲರು, ಜಿಲ್ಲಾ ಅಧಿಕಾರಿಗಳನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಿ ಅವರ ಮೇಲೆ ಶಿಸ್ತಿನ ಕ್ರಮ ಜರುಗಿಸಲಾಗುವುದು’ ಎಂಬುದಾಗಿ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿರುತ್ತದೆ.
ಆದರೆ ದಾವಣಗೆರೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಅಳವಡಿಸಿಕೊಳ್ಳದೆ ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಿರುವ ಮಾಹಿತಿ ಆಧಾರದಲ್ಲಿ ದಿನಾಂಕ: 28-11-2025 ರಂದು ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಇವರಿಗೆ ದಿನಾಂಕ: 28-11-2025 ರಂದು ದೂರು ನೀಡಿ ‘ದಾವಣಗೆರೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಅಳವಡಿಸಿರುವ ಬಯೋಮೆಟ್ರಿಕ್ ಹಾಜರಾತಿ ನಿರ್ವಹಣೆಯನ್ನು ತನಿಖೆಗೆ ಒಳಪಡಿಸುವಂತೆ’ ಕೋರಲಾಗಿತ್ತು.
ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಇವರು ನೀಡಿದ ಹಿಂಬರಹದಲ್ಲಿ ‘ಈ ಸಂಬAಧ ಜಿಲ್ಲೆಯ ಕೆಲವು ವಸತಿ ನಿಲಯಗಳಲ್ಲಿ ಬಯೋಮೆಟ್ರಿಕ್ ಯಂತ್ರದಲ್ಲಿನ ತಾಂತ್ರಿಕ ದೋಷದಿಂದ ವಿದ್ಯಾರ್ಥಿಗಳ ಹಾಜರಾತಿಯನ್ನು ದಾಖಲಿಸಲು ಸಾಧ್ಯವಾಗಿರುವುದಿಲ್ಲವೆಂದು ಹಾಗೂ ಮತ್ತೆ ಕೆಲವು ವಸತಿ ಶಾಲೆ ಮತ್ತು ವಸತಿ ನಿಲಯಗಳಿಗೆ ಹೊಸ ಬಯೋಮೆಟ್ರಿಕ್ ಯಂತ್ರವನ್ನು ಪೂರೈಕೆ ಮಾಡುವಂತೆ ಪ್ರಾಂಶುಪಾಲರುಗಳು ಮತ್ತು ತಾಲ್ಲೂಕು ವಿಸ್ತರಣಾಧಿಕಾರಿಗಳು ಕೋರಿರುವ ಪತ್ರವನ್ನು ಲಗತ್ತಿಸಿ’ ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶಕರು, ಬೆಂಗಳೂರು ಇವರಿಗೆ ಪತ್ರ ಬರೆಯಲಾಗಿದೆ ಎಂಬುದಾಗಿ ತಿಳಿಸಿರುತ್ತಾರೆ.
ಆದ ಕಾರಣ ದಿನಾಂಕ: 17-02-2026 ರಂದು ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ಇವರಿಗೆ ದೂರು ನೀಡಿ ದಾವಣಗೆರೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಇಲಾಖೆಯ ನಿಯಮಾನುಸಾರ ಬಯೋಟ್ರಿಕ್ ಹಾಜರಾತಿ ಅಳವಡಿಸಿಕೊಳ್ಳದೆ ಸರ್ಕಾರಕ್ಕೆ ವಂಚಿಸಿರುವ ಬಗ್ಗೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ಒಂದು ತಿಂಗಳ ಒಳಗಾಗಿ ನೀಡುವಂತೆ ಸಾರ್ವಜನಿಕ ಹಿತಾಸಕ್ತಿ ಅಡಿಯಲ್ಲಿ ಕೋರಲಾಗಿತ್ತು. ಆದರೆ ದೂರು ನೀಡಿ 3 ತಿಂಗಳು ಕಳೆದರೂ ಅಲ್ಪಸಂಖ್ಯಾತರ ನಿರ್ದೇಶನಾಲಯ ನಿರ್ದೇಶಕರಾದ ಜಿಲಾನಿ ಎಚ್. ಮೊಕಾಶಿ ಇವರು ಯಾವುದೇ ಕ್ರಮ ಕೈಗೊಳ್ಳದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ ಮತ್ತು ನಿಸಾರ್ ಅಹಮದ್ ಬಿನ್ ಮಹಮ್ಮದ್ ಅಬಿದ್ ಮತ್ತು ಇನ್ನೊಬ್ಬರು, ಬೇತೂರು ರೋಡ್, ಸಿದ್ಧರಾಮೇಶ್ವರ ಬಡಾವಣೆ ಇವರು ತಮ್ಮ ಮಗ ತಾಜು @ ತಾಜುದ್ದೀನ್ ಇವರು ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜಾಡುವ ಸಂಧರ್ಭದಲ್ಲಿ ಮರಣ ಹೊಂದಿರುತ್ತಾರೆ.
ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 4ನೇ ಎದುರುದಾರರಾದ ಸದಾನಂದ ವಗಲೆ ಹಾಗೂ 1 ರಿಂದ 3ನೇ ಎದುರುದಾರರ ವಿರುದ್ಧ, ತಮ್ಮ ಸೇವೆಯಲ್ಲಿನ ನಿರ್ಲಕ್ಷತೆಯಿಂದ ಘಟನೆ ಸಂಭವಿಸಿದ್ದು ಎಂಬ ತೀರ್ಮಾನಕ್ಕೆ ಆಯೋಗವು ಬಂದಿದ್ದು, ಈಗಾಗಲೇ, 1 ರಿಂದ 3ನೇ ಎದುರುದಾರರು, ದೂರುದಾರರಿಗೆ ರೂ.500,000/- ಲಕ್ಷವನ್ನು ಪರಿಹಾರವಾಗಿ ಈಗಾಗಲೆ ಕೊಟ್ಟಿದ್ದು, ಆದ್ದರಿಂದ 1 ರಿಂದ 3ನೇ ಎದುರುದಾರರ ವಿರುದ್ಧ ಪ್ರಕರಣವನ್ನು ವಜಾ ಮಾಡಿದೆ.
4ನೇ ಎದುರುದಾರರಾದ ಸದಾನಂದ ವಗಲೆ, ಕಾಂಟ್ರಕ್ಟರ್, ಇವರು ಈ ಎರಡು ಪ್ರಕರಣದ ದೂರುದಾರರಿಗೆ ಆದೇಶಿಸಿದ ದಿನದಿಂದ ಒಂದು ತಿಂಗಳೊಳಗೆ ಆದೇಶದ ಪ್ರಕಾರ ಪಾವತಿಸುವಂತೆ ಮೇ.19 ರಂದು ಆದೇಶಿಸಿ ರೂ. 5 ಲಕ್ಷಗಳನ್ನು ಶೇಕಡಾ 6 ವಾರ್ಷಿಕ ಬಡ್ಡಿಯೊಂದಿಗೆ ಹಾಗೂ ದೂರು ಖರ್ಚು ಹಾಗೂ ಮಾನಸಿಕ ಯಾತನೆಗೆ ತಲಾ ರೂ.5 ಸಾವಿರದಂತೆ, ಒಟ್ಟು ರೂ.10,000/-ಗಳನ್ನು ಪರಿಹಾರ ರೂಪವಾಗಿ ದೂರುದಾರರಿಗೆ ನೀಡುವಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪ್ರತ್ಯೇಕವಾಗಿ ಪಾವತಿಸುವಂತೆ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಹೆಚ್.ಎನ್.ಮೀನಾ ಮತ್ತು ಸದಸ್ಯರಾದ ಸಿ.ಎಸ್. ತ್ಯಾಗರಾಜನ್ ಆದೇಶಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಪಂಚಪಾಡಿ ಪದ್ಧತಿಯಲ್ಲಿ ವಿದ್ಯಾಭ್ಯಾಸ | ತ್ಯಾವಣಿಗೆಯ ಮಂದಾರ ಶಾಲೆಯಲ್ಲಿ ಪ್ರವೇಶ ಪ್ರಾರಂಭ
-
ದಿನದ ಸುದ್ದಿ6 days agoಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ
-
ದಿನದ ಸುದ್ದಿ4 days agoಬಳ್ಳಾರಿ ಗಾಂಧಿನಗರ ಠಾಣೆಯ ವ್ಯಾಪ್ತಿ ಜೂಜಾಟ | ಠಾಣೆಯ ಅಧಿಕಾರಿಗಳು ಮೌನ ; ಕ್ರಮ ಕೈಗೊಳ್ತಾರಾ ಎಸ್ ಪಿ..?
-
ಅಂಕಣ4 days agoಗೆಳೆತನದ ಮಹತ್ವ ಸಾರುವ ಕುಚುಕು ಇಂದಿನಿಂದ ಅಮೋಘ ಪ್ರಾರಂಭ ; ದಾವಣಗೆರೆ ಹುಡುಗ ಅರ್ಜುನ್ ಚೌಹಾಣ್ ಅವರ ಮೂರನೇ ಚಿತ್ರ ತೆರೆಗೆ
-
ದಿನದ ಸುದ್ದಿ3 days agoಅಲ್ಪಸಂಖ್ಯಾತರ ಇಲಾಖೆ ನಿರ್ದೇಶಕ ಜಿಲಾನಿ ಎಚ್. ಮೊಕಾಶಿ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoದಾವಣಗೆರೆ | ಇದೇ 22 ರಂದು ಕರ್ನಾಟಕ ಎಜುಕೇಶನ್ ಎಕ್ಸ್ ಪೋ – 2026 ಕಾರ್ಯಕ್ರಮ
-
ದಿನದ ಸುದ್ದಿ5 days agoಕೀಲು ಮತ್ತು ಮೂಳೆ ಚಿಕಿತ್ಸೆ ; ರೋಬೋಟಿಕ್ ಮತ್ತು ಮಿನಿಮಲಿ ಇನ್ನೇಸಿವ್ ಸರ್ಜರಿಗಳಲ್ಲಿ ಮಹತ್ವದ ಬದಲಾವಣೆ : ಡಾ.ಲೋಕೇಶ್ ಎ. ವೀರಪ್ಪ
-
ದಿನದ ಸುದ್ದಿ2 hours agoದಾವಣಗೆರೆ | ಇಂದು ಕರೆಂಟ್ ಇರಲ್ಲ

