ದಿನದ ಸುದ್ದಿ
ಪ್ರಮುಖ ಸುದ್ದಿ ಮುಖ್ಯಾಂಶಗಳು
ಪ್ರಮುಖ ಸುದ್ದಿ ಮುಖ್ಯಾಂಶಗಳು
- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಧಾರವಾಡ, ಹಾವೇರಿ ಮತ್ತು ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಅವರು, ಶಿಗ್ಗಾವಿಯಲ್ಲಿ ಮಧ್ಯಾಹ್ನ ಸಿದ್ಧ ಉಡುಪು ತಯಾರಿಕಾ ಘಟಕಕ್ಕೆ ಭೂಮಿ ಪೂಜೆ ನೆರವೇರಿಸುವರು. ನಂತರ ಬೆಳಗಾವಿಯಲ್ಲಿ ಜಗನ್ನಾಥ ರಾವ್ ಜೋಶಿ ಅವರ ಜನ್ಮ ಶತಾಬ್ಧಿ ಸ್ಮಾರಕ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
- ಬೆಂಗಳೂರು ನಗರದಲ್ಲಿ ಕೋವಿಡ್ ಲಸಿಕಾ ಕಾರ್ಯಕ್ರಮದಲ್ಲಿ ಗಮನಾರ್ಹ ಪ್ರಗತಿ ಸಾಧಿಸಲಾಗಿದೆ. 18 ವರ್ಷ ಮೇಲ್ಪಟ್ಟ ಶೇಕಡ 102ರಷ್ಟು ಮಂದಿಗೆ ಮೊದಲ ಡೋಸ್ ಹಾಗೂ ಶೇಕಡ 96ರಷ್ಟು ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ ಎಂದು ಬಿಬಿಎಂಪಿ ಪ್ರಕಟಣೆ ತಿಳಿಸಿದೆ.
- ಇಸ್ಕಾನ್‌ನ ಅಕ್ಷಯ ಪಾತ್ರ ಪ್ರತಿಷ್ಠಾನದ ಮುಖ್ಯಸ್ಥ ಮಧುಪಂಡಿತ ದಾಸ್, ದೃಶ್ಯಕಲೆ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿರುವ ಕಲಾವಿದ ಎಸ್.ಜಿ. ವಾಸುದೇವ್, ಸಾಮಾಜಿಕ ಅಸಮಾನತೆ ತೊಡೆದು ಹಾಕಲು ಶ್ರಮಿಸುತ್ತಿರುವ ಸಮಾಜ ಸೇವಕ ಎನ್.ಎಸ್. ಮುತ್ತುರಾಜ್ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಲು ಬೆಂಗಳೂರು ವಿಶ್ವವಿದ್ಯಾಲಯ ನಿರ್ಧರಿಸಿದೆ. ನಾಳೆ ನಡೆಯಲಿರುವ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು.
- 545 ಪಿಎಸ್‌ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ಮಧ್ಯೆಯೇ ಪೊಲೀಸ್ ನೇಮಕಾತಿ ಮಂಡಳಿಯ ಎಡಿಜಿಪಿ ಅಮೃತ್ ಪಾಲ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಎಡಿಜಿಪಿ ಆರ್. ಹಿತೇಂದ್ರ ಅವರಿಗೆ ನೇಮಕಾತಿ ಮಂಡಳಿಯ ಹೊಸ ಜವಾಬ್ದಾರಿ ನೀಡಲಾಗಿದೆ.
- ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಅಸ್ಸಾಂಗೆ ಭೇಟಿ ನೀಡಲಿದ್ದಾರೆ. ಅವರು ಕರ್ಬಿ ಅಂಗ್ಲಾಂಗ್ ಜಿಲ್ಲೆಯ ದಿಫುನಲ್ಲಿ ಬೆಳಗ್ಗೆ 11 ಗಂಟೆಗೆ ’ಶಾಂತಿ, ಏಕತೆ ಮತ್ತು ಅಭಿವೃದಿ’ ರ್‍ಯಾಲಿ ಉದ್ದೇಶಿಸಿ ಮಾತನಾಡಲಿದ್ದಾರೆ. ಆ ಭಾಗದಲ್ಲಿ ಶಾಂತಿ ಉಪಕ್ರಮಗಳಿಗೆ ಪ್ರಮುಖ ಉತ್ತೇಜನ ನೀಡಲಿದೆ ಎಂದು ನಿರೀಕ್ಷಿಸಲಾಗಿದೆ. ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರು ಶೈಕ್ಷಣಿಕ ವಲಯದ 500 ಕೋಟಿ ರೂಪಾಯಿಗಿಂತ ಹೆಚ್ಚಿನ ಮೊತ್ತದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
- ಜಮ್ಮು-ಕಾಶ್ಮೀರದ ಕಿಶ್ತ್‌ವಾರ್ ಜಿಲ್ಲೆಯ ಚೆನಾಬ್ ನದಿ ತೀರದಲ್ಲಿ 4 ಸಾವಿರದ 500 ಕೋಟಿ ರೂಪಾಯಿ ವೆಚ್ಚದಲ್ಲಿ 540 ಮೆಗಾವ್ಯಾಟ್ ಜಲವಿದ್ಯುತ್ ಯೋಜನೆ ನಿರ್ಮಿಸಲು ಕೇಂದ್ರ ಸಚಿವ ಸಂಪುಟ ನಿನ್ನೆ ಅನುಮೋದನೆ ನೀಡಿದೆ. ಯೋಜನೆಯಡಿ 1ಸಾವಿರದ 975 ದಶಲಕ್ಷ ಯೂನಿಟ್ ವಿದ್ಯುತ್ ಉತ್ಪಾದಿಸಲಿದ್ದು, 54ತಿಂಗಳಲ್ಲಿ ಘಟಕ ಕಾರ್ಯಾರಂಭ ಮಾಡಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
ಸುದ್ದಿದಿನ,ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ “ಕುಕಿಂಗ್ ವಿಥೌಟ್ ಫೈರ್” ಎಂಬ ಬೆಂಕಿ ರಹಿತ ಆಹಾರ ತಯಾರಿ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಹಲವಾರು ತಂಡಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದರು. ಕಾರ್ಯಕ್ರಮದ ಅಂಗವಾಗಿ ಆಹಾರ ಮೇಳವೂ ಏರ್ಪಡಿಸಲಾಯಿತು. ವಿದ್ಯಾರ್ಥಿನಿಯರು ಕಾರಟ್ ಹಲ್ವಾ, ಫ್ರೂಟ್ ಸಲಾಡ್, ಚುರಿ ಮುರಿ, ಮೊಸರು ಅವಲಕ್ಕಿ, ವಿವಿಧ ರುಚಿಯ ಜ್ಯೂಸ್‌ಗಳು, ಕೊಕೊನೆಟ್ ಬರ್ಫಿ, ಕುಕುಂಬರ್ ಬೋಟ್, ಟೊಮೇಟೊ ಚಾಟ್, ಆಪಲ್ ಪೇಡ ಮತ್ತು ಅವಲಕ್ಕಿ ಚಿತ್ರಾನ್ನ ಸೇರಿದಂತೆ ಹಲವಾರು ಪೌಷ್ಟಿಕ ಹಾಗೂ ರುಚಿಕರ ಆಹಾರಗಳನ್ನು ತಯಾರಿಸಿ ಪ್ರದರ್ಶನೆ ಮತ್ತು ಮಾರಾಟ ಮಾಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿನಿಯರು ಪಾಲ್ಗೊಂಡು ಯಶಸ್ವಿ ಕಾರ್ಯಕ್ರಮವನ್ನಾಗಿ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
ಸುದ್ದಿದಿನ,ದಾವಣಗೆರೆ: ಜಿಲ್ಲೆಯ 5 ರಿಂದ 7 ವರ್ಷ ಹಾಗೂ 15 ರಿಂದ 17 ವರ್ಷದ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್‌ಡೇಟ್ (Mandatory Biometric Update) ಮಾಡಿಸಲು ಜಿಲ್ಲಾಡಳಿತವು ವಿಶೇಷ ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30, 2026 ರವರೆಗೆ ಈ ಸೇವೆಯು ಸಂಪೂರ್ಣ ಉಚಿತವಾಗಿ ಲಭ್ಯವಿರಲಿದೆ.
ಆಧಾರ್ ನಿಯಮಗಳ ಪ್ರಕಾರ, ಮಕ್ಕಳಿಗೆ 5 ಮತ್ತು 15 ವರ್ಷ ತುಂಬಿದಾಗ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸುವುದು ಕಡ್ಡಾಯವಾಗಿದೆ. ಈ ನವೀಕರಣದಿಂದ ಶಾಲಾ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ.
ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಮತ್ತು ಪೂರಕ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಜಿಲ್ಲೆಯ ಎಲ್ಲಾ ಪೋಷಕರು ಈ ಜವಾಬ್ದಾರಿಯನ್ನು ಅರಿತು, ನಿಗದಿತ ಅವಧಿಯೊಳಗೆ ತಮ್ಮ ಮಕ್ಕಳ ಆಧಾರ್ ನವೀಕರಿಸುವ ಮೂಲಕ ಸರ್ಕಾರದ ಯೋಜನೆಗಳು ತಲುಪಲು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಹಿರಿಯ ಕ್ರಿಕೆಟ್ ಪಟು ಎನ್ಆರ್‌ಎಚ್ ರಮೇಶ್ ನಿಧನ
ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್‌ಎಚ್ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್‌ನ ನಾಯಕನಾಗಿದ್ದ ಎನ್.ಆರ್.ಎಚ್.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್, 2ನೇ ಮೇನ್‌ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.
90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್ಆರ್‌ಎಚ್ ರಮೇಶ ನಿಧನಕ್ಕೆ ಎಫ್‌ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್‌ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಸುಗಮ ಮತ ಎಣಿಕೆಗೆ ಸಜ್ಜು
-
ಅಂಕಣ3 days agoಸಮರ್ಥ್ ಶಾಮನೂರು ಪ್ರಯಾಸದ ಗೆಲುವು ಮತ್ತು ಮುಂದಿನ ಸವಾಲುಗಳು
-
ದಿನದ ಸುದ್ದಿ6 days agoದಾವಣಗೆರೆ | ದೇಗುಲಗಳಲ್ಲಿ ನಿಧಿ ಶೋಧನೆ ಯತ್ನ ; ಆರು ಜನರ ಬಂಧನ
-
ದಿನದ ಸುದ್ದಿ2 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ದಿನದ ಸುದ್ದಿ21 hours agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ1 day agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ಕ್ರೀಡೆ1 day agoಹಿರಿಯ ಕ್ರಿಕೆಟ್ ಪಟು ಎನ್ಆರ್‌ಎಚ್ ರಮೇಶ್ ನಿಧನ

