Connect with us

ದಿನದ ಸುದ್ದಿ

ಮೇ 15 ರಿಂದ ಭದ್ರಾ ನಾಲೆಗಳಿಗೆ ನೀರು ಬಂದ್

Published

on

ಸುದ್ದಿದಿನ,ಶಿವಮೊಗ್ಗ : ಬೇಸಿಗೆ ಬೆಳೆಗಳಿಗಾಗಿ ಭದ್ರಾ ಅಚ್ಚುಕಟ್ಟು ನಾಲೆಗಳಲ್ಲಿ ಹರಿಸಲಾಗುತ್ತಿರುವ ನೀರನ್ನು ಮೇ 15 ಕ್ಕೆ ನಿಲ್ಲಿಸಲಾಗುವುದು. ಹಾಗೂ ನೀರಿನ ಅವಶ್ಯಕತೆಗನುಸಾರವಾಗಿ ಮೇ 20 ರವರೆಗೆ ಹೆಚ್ಚುವರಿಯಾಗಿ ನೀರು ಹರಿಸಲಾಗುವುದು ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ತೀರ್ಮಾನಿಸಿತು.

ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಪವಿತ್ರಾ ರಾಮಯ್ಯ ಇವರ ಅಧ್ಯಕ್ಷತೆಯಲ್ಲಿ ಇಂದು ಮಲವಗೊಪ್ಪದ ಕಚೇರಿಯಲ್ಲಿ ನಡೆದ 80 ನೇ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.

ಅಧ್ಯಕ್ಷತೆ ವಹಿಸಿದ್ದ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಮಾತನಾಡಿ, ನೀರಾ ಸಲಹಾ ಸಮಿತಿ ಮತ್ತು ರೈತ ಸಂಘಟನೆಗಳ ಮುಖಂಡರೊಂದಿಗೆ ಚರ್ಚಿಸಿ ಎಲ್ಲ ರೈತರ ಹಿತದೃಷಿಯಿಂದ ಭದ್ರಾ ಜಲಾಶಯದ ಬೇಸಿಗೆ ಬೆಳೆಗಳಿಗೆ ಹರಿಸುತ್ತಿದ್ದ ನೀರನ್ನು ಮೇ 15 ಕ್ಕೆ ನಿಲ್ಲಿಸಲಾಗುತ್ತಿದೆ. ಹಾಗೂ ನೀರಿನ ಅವಶ್ಯಕತೆಗನುಗುಣವಾಗಿ ಮೇ 20 ರವರೆಗೆ ನೀರನ್ನು ಹರಿಸಲು ಸಮಿತಿ ನಿರ್ಧಾರ ಕೈಗೊಂಡಿದೆ.

ನಾನು ಪ್ರಾಧಿಕಾರದ ಅಧ್ಯಕ್ಷೆಯಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೀನಿ. ಅಧಿಕಾರಿಗಳಿಗೆ ಚುರುಕು ಮುಟ್ಟಿಸಿ ಕೆಲಸ ಮಾಡಿಸಿದ್ದೇನೆ. ನಾವು ಕೇವಲ ಅಧಿಕಾರಿಗಳ ಮೇಲೆ ಅವಲಂಬಿತರಾಗದೇ ಕೆಲಸ ಮಾಡಬೇಕು. ಹಿಂದೆ ಬರ ಇಲ್ಲದಿದ್ದ ಸಮಯದಲ್ಲೂ ಸಹ ಕಡೆಯ ಭಾಗಕ್ಕೆ ನೀರು ಸಿಕ್ಕಿರಲಿಲ್ಲ. ಆದರೆ ಕಾಳಜಿ ಮತ್ತು ಜವಾಬ್ದಾರಿ ವಹಿಸಿದಲ್ಲಿ ಎಲ್ಲರಿಗೆ ನ್ಯಾಯ ಒದಗಿಸಬಹುದು. ಜೊತೆಗೆ ಅಧಿಕಾರಿಗಳು ಸರಿ ಹೋಗ್ತಾರೆ.

ಕಳೆದ ಬಾರಿ ಹಾಗೂ ಈ ಬಾರಿ ಎರಡೂ ಸಲ ಜಲಾಶಯದಲ್ಲಿ ನೀರು ಉಳಿಕೆ ಮಾಡಿದ್ದೇವೆ. ಅನಾವಶ್ಯಕವಾಗಿ ಹರಿಯುತ್ತಿದ್ದ ನೀರನ್ನು ವಾಣಿವಿಲಾಸ ಜಲಾಶಯಕ್ಕೆ ಹರಿಸಿದ್ದೇವೆ. ಭದ್ರಾ ಮೇಲ್ದಂಡೆ ಯೋಜನೆಯ ಡಿಪಿಆರ್ ನಲ್ಲಿ ಬದಲಾವಣೆ ಆಗಬೇಕು. ಶಾಸಕರು ಸಹ ಈ ಬಗ್ಗೆ ಇಚ್ಚಾಶಕ್ತಿ ತೋರಬೇಕೆಂದರು.

ಸಮಿತಿ ಸದಸ್ಯರು ಹಾಗೂ ರೈತ ಮುಖಂಡರಾದ ಹೆಚ್.ಆರ್.ಬಸವರಾಜಪ್ಪ ಮಾತನಾಡಿ, ಕಡೆಯ ಭಾಗದ ರೈತರು ಸೇರಿದಂತೆ ಎಲ್ಲರ ಹಿತದೃಷ್ಟಿಯಿಂದ ನೀರನ್ನು ಮೇ 15 ಕ್ಕೆ ನಿಲ್ಲಿಸುವ ನಿರ್ಧಾರಕ್ಕೆ ಬರಲಾಗಿದೆ. 29.9 ಟಿಎಂಸಿ ನೀರು ಹರಿಸುವ ಭದ್ರಾ ಮೇಲ್ದಂತೆ ಯೋಜನೆಗೆ ತುಂಗಾದಿಂದ 17.4 ಟಿಂಎಂಸಿ ಮತ್ತು ಭದ್ರಾ ಜಲಾಶಯದಿಂದ 12.5 ಟಿಎಂಸಿ ನೀರು ಬಿಡಬೇಕೆಂದು ಡಿಪಿಆರ್ ಆಗಿದೆ. ಆದರೆ ಭದ್ರಾದ ಬದಲಾಗಿ ಸಂಪೂರ್ಣ 29.9 ಟಿಎಂಸಿ ನೀರು ತುಂಗಾದಿಂದಲೇ ಹರಿಸುವಂತೆ ಆಗಬೇಕೆಂದು ಮನವಿ ಮಾಡಿದರು.


  • ರೈತರ ಹಿತವೇ ನಮ್ಮ ಮೂಲ ಉದ್ದೇಶ. ಕಾಡಾ ಅಧ್ಯಕ್ಷರು ಈ ಪ್ರಾಧಿಕಾರಕ್ಕೆ ಸೂಕ್ತವಾದ ವ್ಯಕ್ತಿಗಳಾಗಿದ್ದು, ಅತ್ಯುತ್ತಮವಾಗಿ ನೀರಿನ ನಿರ್ವಹಣೆ ಮಾಡಿ, ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಗೆ ಸಂಪೂರ್ಣವಾಗಿ ತುಂಗಾದಿಂದಲೇ ನೀರು ಹರಿಸುವ ಸಂಬಂಧ ಹಾಗೂ ನೀರಾವರಿಗೆ ಸಂಬಂಧಿಸಿದ ಇತರೆ ಸಮಸ್ಯೆಗಳ ಕುರಿತು ನೀರಾವರಿ ಸಚಿವರೊಂದಿಗೆ ಮಾತನಾಡುತ್ತೇನೆ. ಹಾಗೂ ಅನುದಾನ, ಮತ್ತಿತರೆ ಸಮಸ್ಯೆಗಳ ಪರಿಹಾರದ ಕುರಿತು ಪ್ರಯತ್ನ ಮಾಡುತ್ತೇನೆ ಹಾಗೂ ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ಸಹ ತರುತ್ತೇನೆ. ನನ್ನ ಸಹಕಾರ ಸದಾ ಪ್ರಾಧಿಕಾರಕ್ಕೆ ಇದೆ.

    | ಡಿ.ಎಸ್.ಅರುಣ್, ವಿಧಾನ ಪರಿಷರ್ ಶಾಸಕರು


ಸಮಿತಿ ಸದಸ್ಯರಾದ ಷಡಕ್ಷರಪ್ಪ ಗೌಡ್ರು ಮಾತನಾಡಿ, ಸಭೆಗೆ ಕೃಷಿ ಇಲಾಖೆ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಸಮರ್ಪಕ ಮಾಹಿತಿಯೊಂದಿಗೆ ಹಾಜರಾಗಬೇಕೆಂದು ಠರಾವು ಮಾಡಿ ಸರ್ಕಾರಕ್ಕೆ ಕಳುಹಿಸಬೇಕು ಹಾಗೂ ಶಾಸಕರೂ ಸಹ ಸಭೆಗೆ ಹಾಜರಾಗಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸದಸ್ಯರಾದ ಲಿಂಗರಾಜ್ ಮಾತನಾಡಿ, ಭದ್ರಾ ಮೇಲ್ದಂಡೆ ಯೋಜನೆ ಎಂಬ ಹೆಸರಿನಿಂದ ಕರೆಯಲಾಗುತ್ತಿರುವ ಈ ಯೋಜನೆಯು ಏತ ನೀರಾವರಿ ಆಗಿರುವುದರಿಂದ ಸದರಿ ಯೋಜನೆಗೆ ಭದ್ರಾ ಏತ ನೀರಾವರಿ ಯೋಜನೆ ಎಂದು ನೇಮಕ ಮಾಡಬೇಕೆಂದು ಸಲಹೆ ನೀಡಿದರು.

ಸದಸ್ಯರಾದ ತೇಜಸ್ವಿ ಪಟೇಲ್, ವೈ.ಸಿ.ಮಲ್ಲಿಕಾರ್ಜುನ, ರುದ್ರಮೂರ್ತಿ, ಮಂಜುನಾಥ್ ರೆಡ್ಡಿ, ಮಹೇಶ್ ಇತರೆ ಸದಸ್ಯರು ಹಾಗೂ ರೈತ ಸಂಘಟನೆ ಪದಾಧಿಕಾರಿಗಳು, ರೈತ ಮುಖಂಡರು ಮಾತನಾಡಿ. ಸಲಹೆ ಸೂಚನೆಗಳನ್ನು ನೀಡಿದರು.

ಭದ್ರಾ ಜಲಾಶಯದ ನೀರಿನ ಪ್ರಮಾಣ

ದಿ: 27.04.2022 ರಂದು ಹಾಲಿ ಬಳಕೆಗೆ ಬರುವ ನೀರಿನ ಪ್ರಮಾಣ 25.894 ಟಿಎಂಸಿ. 2021-22 ನೇ ಸಾಲಿನ ಬೇಸಿಗೆ ಬೆಳೆಗಳಿಗೆ ಹೆಚ್ಚುವರಿ ದಿನಗಳಿಗೆ ಹರಿಸಲು ಬೇಕಾಗಬಹುದಾದ ಸರಾಸರಿ ನೀರಿನ ಪ್ರಮಾಣ 6.20 ಟಿಂಎಂಸಿ. ಒಟ್ಟು ಬಳಕೆಯಾಗುವ ನೀರಿನ ಪ್ರಮಾಣ 17.24 ಟಿಂಎಂಸಿ. ಭದ್ರಾ ಜಲಾಶಯದಲ್ಲಿ ಉಳಿಯಬಹುದಾದ ನೀರಿನ ಪ್ರಮಾಣ 8.65 ಟಿಎಂಸಿ.

ಸಭೆಯಲ್ಲಿ ಭದ್ರಾ ನೀರಾವರಿ ಸಲಹಾ ಸಮಿತಿ ಸದಸ್ಯರು, ರೈತ ಮುಖಂಡರು, ಆಡಳಿತಾಧಿಕಾರಿ ಅರುಣ್, ಕನೀನಿನಿ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರ ಚಂದ್ರಹಾಸ್, ಇತರೆ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಕೆ.ಆರ್.ಐ.ಡಿ.ಎಲ್, ಮಾಯಕೊಂಡ ವ್ಯಾಪ್ತಿ ; 20 ಕೋಟಿ ಅನುದಾನ : ತನಿಖೆಗೆ ಒಳಪಡಿಸಲು ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಕೆ‌ಆರ್.ಐ.ಡಿ.ಎಲ್  ವಿಭಾಗ-2ರ ವ್ಯಾಪ್ತಿಗೆ 2023-24ನೇ ಸಾಲಿನಲ್ಲಿ ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಮಂಜೂರಾತಿ ಕಾರ್ಯಕ್ರಮದಡಿ ದಾವಣಗೆರೆ ಜಿಲ್ಲೆ ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬಿಡುಗಡೆಯಾದ ರೂ. 20 ಕೋಟಿ ಮೊತ್ತದ 51 ಕಾಮಗಾರಿಗಳನ್ನು ಸೂಕ್ತ ತನಿಖೆಗೆ ಒಳಪಡಿಸುವಂತೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಮಾಯಕೊಂಡ  ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ 2023-24ನೇ ಸಾಲಿನಲ್ಲಿ ಬಿಡುಗಡೆಯಾಗಿರುವ ರೂ. 20 ಕೋಟಿ ಅನುದಾನದಲ್ಲಿ ನಡೆದಿರುವ 51 ಕಾಮಗಾರಿಗಳ ಬಗ್ಗೆ ಅನುಮಾನ ಕಂಡುಬಂದಿದ್ದು, ಮಾಹಿತಿಹಕ್ಕು ಅಡಿಯಲ್ಲಿ ದಾಖಲೆ ಕೋರಿದಾಗ ಬಹುತೇಕ ಕಾಮಗಾರಿಗಳು ನಡೆದಿರುವುದಿಲ್ಲ ಎಂಬುದಾಗಿ ಹಿಂಬರಹ ನೀಡಿರುತ್ತಾರೆ. ಹೀಗಾಗಿ 51 ಕಾಮಗಾರಿಗೆ ಸಂಬಂಧಿಸಿದಂತೆ ನಿತೀನ್ ಎಸ್. ಜಾಧವ್, ಸಹಾಯಕ ಕಾರ್ಯಪಾಲಕ ಅಭಿಯಂತರು, ಕೆ.ಆರ್.ಐ.ಡಿ.ಎಲ್, ಮಾಯಕೊಂಡ ಇವರ ವಿರುದ್ಧ ಪ್ರಕರಣ ದಾಖಲಿಸಿ ರೂ. 20 ಕೋಟಿ ಮೊತ್ತದಲ್ಲಿ ನಡೆದಿರುವ 51 ಕಾಮಗಾರಿಗಳನ್ನು ನಿಯಮಾನುಸಾರ ತನಿಖೆಗೆ ಒಳಪಡಿಸುವಂತೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಕಾಲೇಜು ಶಿಕ್ಷಣ ಇಲಾಖೆ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ:ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕ ಹುದ್ದೆಗೆ ನೀಡಿರುವ ಮುಂಬಡ್ತಿಯ ಸ್ಥಳ ನಿಯುಕ್ತಿಗೆ ಸಂಬAಧಿಸಿದ ಆನ್‌ಲೈನ್ ಕೌನ್ಸಿಲಿಂಗ್‌ನಲ್ಲಿ ಪಾರದರ್ಶಕತೆಯನ್ನು ಉಲ್ಲಂಘಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಅಡಿಯಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಹಿಂದಿನ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ಲೋಕಾಯುಕ್ತಗೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳನ್ನು ಸೇವಾ ಜೇಷ್ಠತೆ ಹಾಗೂ ಅರ್ಹತೆ ಆಧಾರದ ಮೇಲೆ ಅರ್ಹ ದ್ವಿತೀಯ ದರ್ಜೆ ಸಹಾಯಕರ ವೃಂದದಿAದ ಮುಂಬಡ್ತಿ ಮೂಲಕ ಭರ್ತಿ ಮಾಡಲು ಮುಂದಾಗಿದ್ದು, ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ ದಿನಾಂಕ: 12-11-2025 ರಂದು ಆನ್‌ಲೈನ್ ಕೌನ್ಸಿಲಿಂಗ್ ನಡೆಸಿ, ಸ್ಥಳ ನಿಯುಕ್ತಿ ಮಾಡಿ, ಕೌನ್ಸಿಲಿಂಗ್ ಮೂಲಕ ಸ್ಥಳ ಆಯ್ಕೆ ಮಾಡಿಕೊಂಡ ಪ್ರಥಮ ದರ್ಜೆ ಸಹಾಯಕರ ಪಟ್ಟಿಯನ್ನು ಬಿಡುಗಡೆಗೊಸಲಾಗಿರುತ್ತದೆ.

ಆದರೆ ಕಾಲೇಜು ಶಿಕ್ಷಣ ಇಲಾಖೆಯಿಂದ ಹೊರಡಿಸಿರುವ ಪಟ್ಟಿಯಲ್ಲಿ ಆಯುಕ್ತರ ಕಛೇರಿ, ಬೆಂಗಳೂರು ಇಲ್ಲಿ 03 ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಯನ್ನು ಗುರುತಿಸಲಾಗಿರುತ್ತದೆ. ಆದರೆ ಆದೇಶ ಪ್ರತಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕರ ಮುಂಬಡ್ತಿಯಲ್ಲಿ 10 ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ ಅವಕಾಶ ಕಲ್ಪಿಸಲಾಗಿದೆ. ಕೇಂದ್ರ ಕಛೇರಿ, ಬೆಂಗಳೂರು ಇಲ್ಲಿಗೆ ಆಯ್ಕೆ ಮಾಡಿಕೊಂಡಿರುವ 10 ಅಭ್ಯರ್ಥಿಗಳಲ್ಲಿ 05 ಅಭ್ಯರ್ಥಿಗಳನ್ನು ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ ಮುಂಬಡ್ತಿ ನೀಡಿ ಯಥಾ ಪ್ರಕಾರ ಮುಂದುವರೆಸಲಾಗಿರುತ್ತದೆ.

ಹೀಗಾಗಿ ಸದರಿ ಮುಂಬಡ್ತಿ ಪ್ರಕ್ರಿಯೆಯು ನಿಯಮಬಾಹಿರವಾಗಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ನೀಡಿ 10 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾಲೇಜು ಶಿಕ್ಷಣ ಇಲಾಖೆಯ ಹಿಂದಿನ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026 : ಕತಾ ಸ್ಪರ್ಧೆ ; ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನ ಅಮಾನ್ಯ ; ಪರಿಷ್ಕೃತ ಫಲಿತಾಂಶ ‌ಪ್ರಕಟ

Published

on

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026ರ ಕತಾ ಸ್ಪರ್ಧೆಯ ನಿಯಮಾವಳಿಯನ್ನು ಉಲಂಘಿಸಿರುವ ಕಾರಣ ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನವನ್ನು ಅಮಾನ್ಯ ಮಾಡಲಾಗಿದೆ ಎಂದು ಪತ್ರಿಕೆಯ ಸಂಪಾದಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕತೆ-ಕವಿತೆ ಸ್ಪರ್ಧೆಯ ನಿಯಮಾವಳಿಗಳ ಪ್ರಕಾರ ‘ “ಸ್ವತಂತ್ರ ರಚನೆಯಾಗಿರ ಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು” ಎನ್ನುವ ನಿಯಮಾವಳಿಗಳನ್ನು ಉಲಂಘಿಸಿರುವುದರಿಂದ ಪ್ರಥಮ ಸ್ಥಾನ ಪಡೆದ ” ಸಂಸ” ಕತೆಯನ್ನು ಅಮಾನ್ಯಗೊಳಿಸಲಾಗಿದೆ.

‘ಸಂಸ’ ಕತೆಯ ಕತೆಗಾರರಾದ ಅನಂತ ಕುಣಿಗಲ್ ಅವರು
ಸ್ವತಃ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ‘ ಸಂಸ’ ಕತೆಯು ಈ ಹಿಂದೆ ಯಾವುದೋ ಕತಾ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿತ್ತು. ಮತ್ತೊಂದೆಡೆ ತೃತೀಯ, ಮಗದೊಂದೆಡೆ ದ್ವಿತೀಯ ಬಹುಮಾನ ಲಭಿಸಿತ್ತು, ಅಲ್ಲದೆ ‘ಟೋಟೋ’ ಅವಾರ್ಡ್ ನ ಅಂತಿಮ ಸುತ್ತಿಗೆ ಎರಡು ಬಾರಿ ಶಾರ್ಟ್ ಲಿಸ್ಟ್ ಆಗಿತ್ತು ಎಂದು ಬರೆದು ಕೊಂಡಿರುತ್ತಾರೆ. ಆದಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ.

ಕತಾ ಸ್ಪರ್ಧೆಯ ಪರಿಷ್ಕೃತ ಫಲಿತಾಂಶ

ಕತಾ ಸ್ಪರ್ಧೆಯಲ್ಲಿ ರವಿಮುಡೋಡಿ ಅವರ ʼಅರ್ಧ ರೇಖೆಯ ಚಿತ್ರʼ  ಕತೆಗೆ ಪ್ರಥಮ ಬಹುಮಾನ, ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ದ್ವಿತೀಯ ಬಹುಮಾನ ಹಾಗೂ ಅಜೇಯ ಸಿಂಹ ಕೆ.ವಿ ಅವರ ‘ ಮಾರ್ಜಕದ ಶ್ರೀಮುಡಿ’ ಕತೆಗೆ  ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕ ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending