Connect with us

ದಿನದ ಸುದ್ದಿ

ಅಶ್ವತ್ಥ ನಾರಾಯಣ್ ಅಲ್ಲ ಗುಳುಂ ನಾರಾಯಣ : ಬಿ.ಕೆ‌. ಹರಿಪ್ರಸಾದ್ ವಾಗ್ದಾಳಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಬೆಂಗಳೂರು : ಅಶ್ವತ್ಥ ನಾರಾಯಣ್ ಮಲ್ಲೇಶ್ವರಂನಲ್ಲಿ ಗುಳುಂ ನಾರಾಯಣ ಎಂದು ಖ್ಯಾತಿ ಪಡೆದಿದ್ದಾರೆ ಎಂದು ಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ ವಾಗ್ದಾಳಿ ನಡೆಸಿದ್ದಾರೆ.

ಮಲ್ಲೇಶ್ವರಂನ ಪ್ರತಿಭಟನೆಯಲ್ಲಿ ಮಾತನಾಡಿದ ಅವರು ಬಿಜೆಪಿ ಸರ್ಕಾರ 40% ಕಮಿಷನ್ ಸರ್ಕಾರ. ಪ್ರತಿಯೊಂದು ಯೋಜನೆಯಲ್ಲಿ ಮಂತ್ರಿಗಳಿಗೆ ಕಮಿಷನ್ ಹೋಗ್ತಾ ಇದೆ. ಮಲ್ಲೇಶ್ವರಂನಲ್ಲಿ ಪ್ರತಿಯೊಂದು ಕಾಮಗಾರಿಗಳಲ್ಲಿ ಅಶ್ವತ್ಥ ನಾರಾಯಣನಿಗೆ ಕಮಿಷನ್ ಹೋಗ್ತಿದೆ. ಮಲ್ಲೇಶ್ವರಂನ ಬಹುತೇಕ ಕಾಂಟ್ರಾಕ್ಟರ್ ಗಳು ಸಚಿವರ ಸಂಬಂಧಿಗಳೇ ಇದ್ದಾರೆ ಎಂದು ಆರೋಪಿಸಿದರು.

ಈಗ ಪಿಎಸೈ ನೇಮಕಾತಿಯಲ್ಲಿ ಸಚಿವರ ಸಹೋದರನೇ ಭಾಗಿಯಾಗಿರುವ ಗಂಭೀರ ಆರೋಪ‌ ಕೇಳಿ ಬಂದಿದ್ದು, ಭ್ರಷ್ಟಾಚಾರಕ್ಕೆ ಆರ್ ಎಸ್ ಎಸ್ ಕುಮ್ಮಕ್ಕು ಇದೆ.ಅದರ ಹಣದಿಂದಲೇ ಶ್ರೀಮಂತ ಎನ್ ಜಿಓ ಆಗಿ ಆರ್ ಎಸ್ ಎಸ್ ಇದೆ. ಪ್ರತಿಯೊಬ್ಬ ಸಚಿವರ ಬಳಿ ಆರ್ ಎಸ್ ಎಸ್ ಒಎಸ್ ಡಿ ಇದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಣ ಕಲೆಕ್ಷನ್ ಮಾಡುವುದೇ ಒಎಸ್ಡಿಗಳ ಫುಲ್ ಟೈಂ ಡ್ಯುಟಿ ಆಗಿದ್ದು, ಹಾವಿನಪುರದಲ್ಲಿ ಕುಳಿತು ಹಣ ಕಲೆಕ್ಷನ್ ಮಾಡ್ತಾರೆ.
ನಿನ್ನೆ ಅಮಿತ್ ಶಾ ಬಂದಿದ್ರು, ಯಾವುದೇ ಕ್ರಮ ಕೈಗೊಂಡಿಲ್ಲ.
40% ಕಮಿಷನ್ ಹಾಗೂ ಅಕ್ರಮ ಪಿಎಸೈ ನೇಮಕಾತಿಯಲ್ಲಿ ಅಮಿತ್ ಶಾ ಪಾಲು ತೆಗೆದುಕೊಳ್ಳಲು ಬಂದಿದ್ದಾರೆ ಎಂದು ಕಿಡಿಕಾರಿದರು.

ಅಮಿತ್ ಶಾ ಆಗಮನದಿಂದ ರಾಜ್ಯದ ಜನರಿಗೆ ನಯಾಪೈಸೆ ಪ್ರಯೋಜನವಾಗಿಲ್ಲ. ಈ ಕೂಡಲೆ ಅಶ್ವಥ್ ನಾರಾಯಣ್ ರಾಜೀನಾಮೆ ನೀಡಬೇಕು. ಸ್ವ ಇಲಾಖೆಯಲ್ಲಿ ಗಂಭೀರವಾದ ಆರೋಪ‌ ಎದುರಿಸುತ್ತಿರುವ ಗೃಹ ಸಚಿವ ಆರಗ ಜ್ಞಾನೆಂದ್ರ ರಾಜೀನಾಮೆ ನೀಡಬೇಕು. ಪ್ರಕರಣದ ಬಗ್ಗೆ ಸಂಪೂರ್ಣವಾಗಿ ತನಿಖೆಯಾಗಬೇಕು, ಗೃಹ ಸಚಿವರ ಮೇಲೆ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಚನ್ನಗಿರಿ | ಎಸ್ ಎಸ್ ಎಲ್ ಸಿ ಫಲಿತಾಂಶ ; ಕಬ್ಬಳ ಶಾಲೆಯ ವಿದ್ಯಾರ್ಥಿ ಭರತ್ ಜಿ ರಾಜ್ಯಕ್ಕೆ ಟಾಪರ್

Published

on

ಸುದ್ದಿದಿನ,ದಾವಣಗೆರೆ: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಕಣಿವೆಬಿಳಚಿ ಗ್ರಾಮದ ವಿದ್ಯಾರ್ಥಿ ಭರತ್ ಜಿ. ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.

625ಕ್ಕೆ 625 ಅಂಕಗಳನ್ನು ಪಡೆದ ಭರತ್ ಅವರು ಕಬ್ಬಳ ಗ್ರಾಮದ ವಿದ್ಯಾಲಕ್ಷ್ಮಿ ಇಂಗ್ಲಿಷ್ ಮೀಡಿಯಂ ಪ್ರೌಢಶಾಲೆಯ ವಿದ್ಯಾರ್ಥಿ. ರಾಜ್ಯದ ಇತರ ಐದು ವಿದ್ಯಾರ್ಥಿಗಳೊಂದಿಗೆ ಅಗ್ರಸ್ಥಾನವನ್ನು ಭರತ್ ಅವರು ಹಂಚಿಕೊಂಡಿದ್ದಾರೆ. ಭರತ್ ಅವರ ತಂದೆ ಗಿರೀಶ್ ಕೃಷಿ ಹಾಗೂ ಗುತ್ತಿಗೆ ದಾರರು, ತಾಯಿ ಶಿಲ್ಪ ಗೃಹಿಣಿ.

ಗ್ರಾಮೀಣ ಭಾಗದಿಂದ ಬಂದ ಭರತ್ ರಾಜ್ಯಕ್ಕೆ ಟಾಪರ್ ಆಗಿ ದೊಡ್ಡ ಸಾಧನೆ ಮಾಡಿದ್ದಾರೆ.ನಮ್ಮ ಶಾಲೆಯು ಎರಡು ಬಾರಿ ಜಿಲ್ಲೆಗೆ ಹಾಗೂ ಎರಡು ಬಾರಿ ತಾಲ್ಲೂಕಿಗೆ ಟಾಪ‌ರ್ ಆಗಿತ್ತು. ಇದೀಗ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶಾಲೆಯು ನಿರಂತರವಾಗಿ ಸಾಧನೆ ಮಾಡುತ್ತಿದ್ದು ಈ ಬಾರಿಯೂ ಶೇ 100ರಷ್ಟು ಫಲಿತಾಂಶ ನೀಡಿದೆ ಎಂದು ಮುಖ್ಯ ಶಿಕ್ಷಕಿ ಲಕ್ಷ್ಮೀದೇವಿ ಎ.ಎನ್ ಹರ್ಷ ವ್ಯಕ್ತಪಡಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ

Published

on

ಸುದ್ದಿದಿನ,ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 23) ಮಧ್ಯಾಹ್ನ 12ಕ್ಕೆ ಪ್ರಕಟಿಸಲಾಗುತ್ತದೆ.

ಫಲಿತಾಂಶವನ್ನು ವೆಬ್‌ಸೈಟ್ (https://karresults.nic.in) ಲಿಂಕ್ ಮೂಲಕ ಹಾಗೂ KarnatakaOne mobile app ಮೂಲಕವೂ ಪಡೆಯಬಹುದಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್‌ಗೆ ವಾಟ್ಸ್‌ಆ್ಯಪ್/ ಎಸ್‌ಎಂಎಸ್‌ ಮೂಲಕ ಫಲಿತಾಂಶದ ಮಾಹಿತಿಯನ್ನು ಮಂಡಳಿಯಿಂದ ರವಾನಿಸಲಾಗುತ್ತದೆ.

ಈ ವರ್ಷ ಪ್ರಥಮ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು ಡಿಜಿಲಾಕರ್‌ (https://www.digilocker.gov.in) ಮೂಲಕ ಲಭ್ಯಗೊಳಿಸಲಾಗುತ್ತದೆ. ಈ ಮೂಲಕವೂ ಡೌನ್‌ಲೋಡ್ ಮಾಡಿಕೊಳ್ಳಬಹುದು. ಫಲಿತಾಂಶ ಪಟ್ಟಿಯನ್ನು ಸಂಬಂಧಿತ ಶಾಲೆಗಳಿಗೆ ಮಧ್ಯಾಹ್ನ 12 ಗಂಟೆಗೆ ಲಭ್ಯಗೊಳಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಮ್ಮ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಆದರೆ ತಮ್ಮ ಶ್ರೇಣಿಗಳ ಬಗ್ಗೆ ಅತೃಪ್ತರಾಗಿರುವ ವಿದ್ಯಾರ್ಥಿಗಳು ಮಂಡಳಿಯು ಏರ್ಪಡಿಸಿದ ಕರ್ನಾಟಕ SSLC ಸುಧಾರಣಾ ಪರೀಕ್ಷೆಗಳನ್ನು ತೆಗೆದುಕೊಳ್ಳುವ ಆಯ್ಕೆಯನ್ನು ಹೊಂದಿರುತ್ತಾರೆ. ಇದು ನಿರ್ದಿಷ್ಟ ವಿಷಯಗಳಲ್ಲಿ ಅಂಕಗಳನ್ನು ಸುಧಾರಿಸಲು ಅವಕಾಶವನ್ನು ನೀಡುತ್ತದೆ.

ಒಂದು ಅಥವಾ ಹೆಚ್ಚಿನ ವಿಷಯಗಳಲ್ಲಿ ಒಬ್ಬ ವಿದ್ಯಾರ್ಥಿ ಅನುತ್ತೀರ್ಣನಾದರೆ, ಅವರು ಶೈಕ್ಷಣಿಕ ವರ್ಷವನ್ನು ಕಳೆದುಕೊಳ್ಳದೆ ಪೂರಕ ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಾಳೆ ಸಸಿಗಳ ಮಾರಾಟ : ಸಂಪರ್ಕಿಸಿ

Published

on

ಸುದ್ದಿದಿನ,ದಾವಣಗೆರೆ: ಉತ್ತಮ ಗುಣಮಟ್ಟದ ಜಿ-9 ತಳಿಯ ಅಂಗಾಂಶ ಕೃಷಿ ಬಾಳೆಗಳನ್ನು ಕೃಷಿ ಇಲಾಖೆ ಮಾರಾಟ ಮಾಡಲಾಗುತ್ತಿದೆ.

ಆಸಕ್ತ ರೈತರು ಸಹಾಯಕ ತೋಟಗಾರಿಕಾ ಅಧಿಕಾರಿ, ಅಂಗಾಂಶ ಕೃಷಿ ಬಾಳೆ, ಜೈವಿಕ ಕೇಂದ್ರ, ಎಪಿಎಂಸಿ ಈ ಬ್ಲಾಕ್, ಹಣ್ಣಿನ ಮಾರುಕಟ್ಟೆ ಹತ್ತಿರ ಮೊ.ಸಂ:6360950904, 8192296196 ಸಂಪರ್ಕಿಸಿ ಇಲಾಖೆ ದರದಲ್ಲಿ ಬಾಳೆಸಸಿಗಳನ್ನು ಕೊಂಡುಕೊಳ್ಳುವಂತೆ ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending