ದಿನದ ಸುದ್ದಿ
ಕೃಷ್ಣ, ಮಲಪ್ರಭಾ, ಘಟಪ್ರಭಾ ಯೋಜನೆಗಳ ಅನುಷ್ಠಾನಕ್ಕೆ ನೀರಾವರಿ ತಜ್ಞ ಎಸ್.ಜಿ.ಬಾಳೆಕುಂದ್ರಿ ಕೊಡುಗೆ ಅಪಾರ : ಎಸ್.ಬಿ.ಕೊಯಿಮತ್ತೂರ
ಸುದ್ದಿದಿನ,ಧಾರವಾಡ : ಕಡಿಮೆ ಮಳೆ ಮತ್ತು ಭೀಕರ ಬರಪ್ರದೇಶವಾದ ಉತ್ತರ ಕರ್ನಾಟಕ ಭಾಗಕ್ಕೆ ಕೃಷಿಗೆ ನೀರಾವರಿ ಕಲ್ಪಿಸುವ ನಿಟ್ಟಿನಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ರೂಪುರೇಷೆ ಮತ್ತು ನಾರಾಯಣಪೂರ ಜಲಾಶಯ ಸ್ಥಳ ಬದಲಾವಣೆ, ಘಟಪ್ರಭಾ ಯೋಜನೆ, ಮಲಪ್ರಭಾ ಬಲದಂಡೆ ಯೋಜನೆಗಳೊಂದಿಗೆ ಮಲಪ್ರಭಾ ಎಡದಂಡೆ ಕಾಲುವೆ ನಿರ್ಮಾಣ ಯೋಜನೆ ಅನುಷ್ಠಾನಗೊಳಿಸಿದ ಶ್ರೇಯಸ್ಸು ನೀರಾವರಿ ತಜ್ಞ ಎಸ್. ಜಿ. ಬಾಳೆಕುಂದ್ರಿ ಅವರಿಗೆ ಸಲ್ಲುತ್ತದೆ ಎಂದು ನಿವೃತ್ತ ಅಧೀಕ್ಷಕ ಅಭಿಯಂತರ ಎಸ್. ಬಿ. ಕೊಯಿಮತ್ತೂರ ಹೇಳಿದರು.
ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ (ವಾಲ್ಮಿ)ಯಲ್ಲಿ ಇತ್ತೀಚೆಗೆ (ಮೇ. 5) ನಡೆದ ನೀರಾವರಿ ತಜ್ಞ ಎಸ್. ಜಿ. ಬಾಳೆಕುಂದ್ರಿ ಜನ್ಮ ಶತಮಾನೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಎಸ್.ಜಿ.ಬಾಳೆಕುಂದ್ರಿಯವರೊಂದಿಗೆ ಸೇವೆ ಸಲ್ಲಿಸಿದ ತಮ್ಮ ಅನುಭವಗಳನ್ನು ಹಂಚಿಕೊಂಡ ನಿವೃತ್ತ ಅಧೀಕ್ಷಕ ಅಭಿಯಂತರ ಎಸ್.ಬಿ.ಕೊಯಿಮತ್ತೂರ ಮಾತನಾಡಿ, ವೃತ್ತಿ ಜೀವನದಲ್ಲಿ ಅವರೊಂದಿಗೆ ಕೈಗೊಂಡ ಕಾರ್ಯಗಳನ್ನು ಹೆಮ್ಮೆಯಿಂದ ವಿವರಿಸಿದರು.
ಘಟಪ್ರಭಾ ಆಣೆಕಟ್ಟು ನಿರ್ಮಿಸುವಲ್ಲಿ ಉಂಟಾದ ತಾಂತ್ರಿಕ ತೊಂದರೆಗಳನ್ನು ಆಸ್ಟ್ರೇಲಿಯಾ ಮತ್ತು ಸ್ಪೇನ್ ದೇಶಗಳಲ್ಲಿಯ ತಂತ್ರಜ್ಞಾನವನ್ನು ಅಳವಡಿಸಿಕೊಂಡು, ತಾಂತ್ರಿಕ ದೋಷವನ್ನು ಸರಿಪಡಿಸಿ, ಎರಡು ವರ್ಷಗಳಿಂದ ನಿಂತುಹೋಗಿದ್ದ ಆಣೆಕಟ್ಟು ನಿರ್ಮಾಣ ಕಾರ್ಯಕ್ಕೆ ಕೇಂದ್ರ ಜಲ ಆಯೋಗದಿಂದ ಅನುಮೋದನೆ ಪಡೆದು 1970 ರಲ್ಲಿ ಆಣೆಕಟ್ಟು ನಿರ್ಮಿಸಿದ ಗೌರವ ಎಸ್.ಜಿ.ಬಾಳೆಕುಂದ್ರ ರವರಿಗೆ ಸಲ್ಲುತ್ತದೆ.
ಧಾರವಾಡದ ಇನಸ್ಟಿಟ್ಯೂಟ್ ಆಫ್ ಇಂಜಿನೀಯರ್ಸ್ ಕಟ್ಟಡಕ್ಕೆ ಬಾಳೆಕುಂದ್ರಿ ಭವನ ಎಂದು ನಾಮಕರಣ ಮಾಡಿ, ಪುತ್ಥಳಿಯನ್ನು ಸ್ಥಾಪಿಸಿ ಗೌರವ ಸಲ್ಲಿಸಿದ್ದನ್ನು ಸ್ಮರಿಸಿದರು.
ಲೋಕೋಪಯೋಗಿ ಇಲಾಖೆ ನಿವೃತ್ತ ಕಾರ್ಯದರ್ಶಿ ಜಿ.ಸಿ.ತಲ್ಲೂರ ಮಾತನಾಡಿ, ಎಸ್.ಜಿ.ಬಾಳೆಕುಂದ್ರಿ ಅವರಿಂದ ಜೀವನದ ಮೌಲ್ಯಗಳನ್ನು ಕಲಿತು. ಇಂಜನೀಯರಿಂಗ್ ವೃತ್ತಿಯ ಅನೇಕ ಅನುಭವಗಳನ್ನು ಅರಿತಿದ್ದನ್ನು ಸ್ಮರಿಸಿದರು.
ಮಲಪ್ರಭಾ ಬಲದಂಡೆ ಕಾಲುವೆ ಯೋಜನೆಯೊಂದಿಗೆ, ಮಲಪ್ರಭಾ ಎಡದಂಡೆ ಕಾಲುವೆ ಯೋಜನೆ ಕೂಡಾ ಆಗಲು ಬಾಳೆಕುಂದ್ರಿಯವರು ಶಿಫಾರಸ್ಸು ಮಾಡಿ, ಅನುಮೋದನೆ ಪಡೆಯುವಲ್ಲಿ ಯಶಸ್ವಿಯಾದರು. ಈ ಕಾರಣಕ್ಕಾಗಿ ಮಲಪ್ರಭಾ ಎಡದಂಡೆ ಕಾಲುವೆಗೆ ಎಸ್.ಜಿ.ಬಾಳೆಕುಂದ್ರಿ ಕಾಲುವೆ ಎಂದು ನಾಮಕರಣ ಮಾಡಲಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಾಲ್ಮಿ ನಿರ್ದೇಶಕ ಡಾ. ರಾಜೇಂದ್ರ ಪೋದ್ದಾರ ಮಾತನಾಡಿ, ವಾಲ್ಮಿ ಸಂಸ್ಥೆಯು ಎಸ್.ಜಿ.ಬಾಳೆಕುಂದ್ರಿ ಅವರ ಜನ್ಮ ಶತಮಾನೋತ್ಸವ ಆಚರಿಸುವ ಮೂಲಕ ಅವರೊಂದಿಗೆ ಒಡನಾಟದಲ್ಲಿದ್ದ ಎಸ್.ಬಿ.ಕೊಯಿಮತ್ತೂರ ಹಾಗೂ ಜಿ.ಸಿ.ತಲ್ಲೂರ ಅವರ ಅನುಭವಗಳನ್ನು ನೇರವಾಗಿ ಪಡೆಯಲು ಸಾಧ್ಯವಾಗಿದ್ದು ಸಂತಸ ತಂದಿದೆ.
ಬಾಳೆಕುಂದ್ರಿ ಅವರು ಉತ್ತರ ಕರ್ನಾಟದಲ್ಲಿ ಅನೇಕ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸುವದರೊಂದಿಗೆ, ಕಾವೇರಿ ಜಲ ವಿವಾದದಲ್ಲಿ ಮಾರ್ಗದರ್ಶಕರಾಗಿ ರಾಜ್ಯಕ್ಕೆ ಅನುಪಮ ಸೇವೆ ಸಲ್ಲಿಸಿದ್ದಾರೆ. ಎಸ್.ಜಿ.ಬಾಳೆಕುಂದ್ರಿಯವರ ತಾಂತ್ರಿಕ ಪರಿಣಿತಿ ಹಾಗೂ ಸಾಮಾಜಿಕ ಧೋರಣೆಗಳು ಮತ್ತು ವೈಯಕ್ತಿಕ ನಡುವಳಿಕೆಗಳು ನಮ್ಮ ಇಂದಿನ ಪೀಳಿಗೆಯ ಅಭಿಯಂತರರ ಆತ್ಮಶಕ್ತಿಯನ್ನು ಹೆಚ್ಚಿಸುವಂತಿವೆ. ಬಾಳೆಕುಂದ್ರಿಯವರ ದಕ್ಷತೆ, ಪ್ರಾಮಾಣಿಕತೆ ಮತ್ತು ಪರಿಶ್ರಮದಂತಹ ಆದರ್ಶಗಳು ನಮ್ಮ ಇಂದಿನ ಪೀಳಿಗೆಗೆ ಮಾರ್ಗದರ್ಶನವಾಗಲಿ ಎಂದರು.
ಮಲಪ್ರಭಾ ಮತ್ತು ಘಟಪ್ರಭಾ ಯೋಜನೆಗಳ ರೈತ ಫಲಾನುಭವಿಗಳ ಪರವಾಗಿ ಶಿರೂರಿನ ದ್ಯಾಮನಗೌಡ ಬಲ್ಲರವಾಡ ಮತ್ತು ಎಸ್.ಜಿ.ಬಾಳೆಕುಂದ್ರಿ ಪ್ರಶಸ್ತಿ ಪುರಸ್ಕøತ ವಾಲ್ಮಿ ಸಹಾಯಕ ಪ್ರಾಧ್ಯಾಪಕ ಪ್ರದೀಪ ದೇವರಮನಿ ನುಡಿ ನಮನ ಸಲ್ಲಿಸಿದರು. ಮಹಾರಾಷ್ಟ್ರದ ಔರಂಗಾಬಾದಿನ ಅವಿನಾಶ ಗರುಡಕರ ಕಾರ್ಯಕ್ರಮದ ವಿಶೇಷ ಅತಿಥಿಗಳಾಗಿದ್ದರು.
ರೈತರು, ಅಭಿಯಂತರು, ವಿಜ್ಞಾನಿಗಳು ವಾಲ್ಮಿ ಸಂಸ್ಥೆಯ ಬೋಧಕರು ಹಾಗೂ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಪ್ರೊ.ಬಿ.ವೈ.ಬಂಡಿವಡ್ಡರ ಸ್ವಾಗತಿಸಿದರು, ಮಹದೇವಗೌಡ ಹುತ್ತನಗೌಡರ ಕಾರ್ಯಕ್ರಮ ನಿರೂಪಿಸಿದರು. ಪ್ರಭಾಕರ ಹಾದಿಮನಿ ವಂದಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ
ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.
ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ
ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.
ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಸುದ್ದಿದಿನ,ದಾವಣಗೆರೆ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.
ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ರಾಜೇಶ್ ಕುಮಾರ್ ಸಿ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


