Connect with us

ದಿನದ ಸುದ್ದಿ

ಮೇ.21 ಹಾಗೂ 22 ರಂದು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ : ಡಿಸಿ ಮಹಾಂತೇಶ ಬೀಳಗಿ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಮೇ.21 ಮತ್ತು 22 ರಂದು ಜರಗುವ ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಮುಂಜಾಗ್ರತೆ ವಹಿಸಿ ಪರೀಕ್ಷೆ ಯಶಸ್ವಿಗೊಳಿಸಿ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.

ಬುಧವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಆಯೋಜಿಸಿದ್ದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯ ಕುರಿತು ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಮೂರು ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 600 ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಪರೀಕ್ಷಾ ಕೇಂದ್ರದ ಸುತ್ತ 144 ಸೆಕ್ಷನ್ ಜಾರಿಯಲ್ಲಿರುತ್ತದೆ. ಪ್ರತಿ ಕೊಠಡಿಯಲ್ಲಿ 20 ಅಭ್ಯರ್ಥಿಗಳಿಗೆ ಕುಳಿತುಕೊಳ್ಳುವ ವ್ಯವಸ್ಥೆ ಮಾಡಿದ್ದು, ಕೋವಿಡ್ ನಿಯಾಮನುಸಾರ ಪರೀಕ್ಷಾ ಅಭ್ಯರ್ಥಿಗಳಿಗೆ ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನಿಂಗ್ ಮಾಡಿ ಉಚಿತ ಮಾಸ್ಕ್ ನೀಡಿ ಪರೀಕ್ಷೆ ನಡೆಸಲಾಗುವುದು ಎಂದರು.

ಪರೀಕ್ಷಾ ಕೇಂದ್ರದಲ್ಲಿ ಮೆಟಲ್ ಡಿಟೆಕ್ಟರ್ ಅಳವಡಿಸಿಲಾಗುವುದು. ಪರೀಕ್ಷಾ ಕೇಂದ್ರಗಳಲ್ಲಿ ಕೊಠಡಿ ಮೇಲ್ವಿಚಾರಕರು ಹಾಗೂ ಅಭ್ಯರ್ಥಿಗಳು ಮೊಬೈಲ್, ಶೂ, ಎಲೆಕ್ಟ್ರಾನಿಕ್ ವಾಚ್ ಸೇರಿದಂತೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣ ತೆಗೆದುಕೊಂಡು ಹೋಗಲು ಅವಕಾಶ ಇರುವುದಿಲ್ಲ. ಪ್ರತಿ ಕೊಠಡಿಯಲ್ಲೂ ಸಮಯ ಪಾಲನೆಗಾಗಿ ಗೋಡೆ ಗಡಿಯಾರಗಳನ್ನು ಅಳವಡಿಸುವುದು.

ಜಾಮಿಟ್ರಿ ಬಾಕ್ಸ್ ಇದ್ದಲ್ಲಿ ಕಡ್ಡಾಯವಾಗಿ ತಪಾಸಣೆಗೊಳಪಡಿಸಿ ರೇಖಾ ಗಣಿತ ಪರಿಕರಗಳನ್ನು ಮಾತ್ರ ಅನುಮತಿಸಲಾಗುವು. ಒಂದು ವೇಳೆ ತಂದಿರುವುದು ಕಂಡುಬಂದಲ್ಲಿ ತಕ್ಷಣವೇ ಅವರನ್ನು ಪರೀಕ್ಷೆಯಿಂದ ಅಮಾನತು ಮಾಡಲಾಗುವುದು. ಜಿಲ್ಲೆಯಲ್ಲಿ ಈವರೆಗೆ ಎಲ್ಲಾ ಪರೀಕ್ಷೆಗಳು ಸುಗಮವಾಗಿ ನಡೆದಿವೆ, ಸರ್ಕಾರಕ್ಕೆ ಒಳ್ಳೆಯ ಹೆಸರು ತರಬೇಕು ಯಾವುದೇ ರೀತಿಯ ಲೋಪ ಬರದಂತೆ ಕಾರ್ಯನಿರ್ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಇ.ಎನ್.ಟಿ ಸ್ಪೆಷಲಿಸ್ಟ್ ಗಳನ್ನು ನೇಮಿಸಿ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅವಘಡಗಳು ಸಂಭವಿಸದಂತೆ ನೋಡಿಕೊಳ್ಳಬೇಕು. ಪರೀಕ್ಷಾ ಆವರಣ ಮತ್ತು ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿದ್ದು ಪರೀಕ್ಷಾರ್ಥಿಗಳ ಸಂಬಂಧಿಗಳು ಸಂಬಂಧಿತ ಕಾರ್ಯಗಳಲ್ಲಿ ಭಾಗವಹಿಸುವಂತಿಲ್ಲ ಎಂದರು.

ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಸಿ.ಬಿ ರಿಷ್ಯಂತ್ ಮಾತನಾಡಿ, ಇತ್ತೀಚಿಗೆ ಪಿ.ಎಸ್.ಐ ನೇಮಕದಲ್ಲಿ ಸಾಕಷ್ಟು ಅಕ್ರಮಗಳು ಕಂಡುಬಂದಿರುವುದರಿಂದ ಜಿಲ್ಲೆಯಲ್ಲಿ ನಡೆಯಲಿರುವ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಅತ್ಯಂತ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಒಬ್ಬ ಅಭ್ಯರ್ಥಿ ಅಕ್ರಮ ನಡೆಯುವಂತ ಒಂದು ಸಣ್ಣ ಸಂದೇಹ ಕಂಡುಬಂದರೂ ಸಹ ಅವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ಪರೀಕ್ಷಾ ಕೇಂದ್ರಗಳಲ್ಲಿ ನಡೆಯಬಹುದಾದ ಪರೀಕ್ಷಾ ಪ್ರಕ್ರಿಯೆಗಳ ಬಗ್ಗೆ ಕಾಲಕಾಲಕ್ಕೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಡಳಿತದ ಕಂಟ್ರೋಲ್ ರೂಮ್ ಸಂಖ್ಯೆ:08192-257778 ಸಂಪರ್ಕಿಸಬಹುದು. ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಎ ಚನ್ನಪ್ಪ. ಡಿಯುಡಿಸಿ ಅಧಿಕಾರಿ ನಜ್ಮಾ, ಡಿಡಿಪಿಐ ತಿಪ್ಪೇಶಪ್ಪ, ಶಿಕ್ಷಣ ಇಲಾಖೆಯ ನೋಡಲ್ ಅಧಿಕಾರಿಗಳು ಸೇರಿದಂತೆ ಹಲವಾರು ಶಿಕ್ಷಣ ತಜ್ಞರು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ನಕಲಿ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 6 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಟಿ. ಸೋಮ್ಲನಾಯ್ಕ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 2023-24 ಮತ್ತು 2024-25ನೇ ಸಾಲಿನ ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬAಧಿಸಿದ ಕಾಮಗಾರಿಗಳಿಗೆ ಸಂಬAಧಿಸಿದAತೆ ಹೊನ್ನಾಳಿ ಉಪವಿಭಾಗದ ಅಡಿಯಲ್ಲಿ ನಡೆದಿರುವ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ನಾಲ್ಕು ಹಂತದ ತುರ್ತು ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಸಂಪೂರ್ಣ ಕಡತವನ್ನು ಪಡೆದು ಪರಿಶೀಲನೆ ಮಾಡಿದಾಗ, ಇಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಲೋಪಗಳು ಕಂಡುಬAದಿರುತ್ತವೆ. ಅಂತಹ ಪ್ರಮುಖ ಲೋಪಗಳನ್ನು ಉಲ್ಲೇಖಿಸಿ ಸೂಕ್ತ ತನಿಖೆಗೆ ಒಳಪಡಿಸುವಂತೆ ದಿನಾಂಕ: 01-12-2025 ರಂದು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರಿಗೆ ದೂರು ನೀಡಲಾಗಿತ್ತು.

ಈ ದೂರು ಅರ್ಜಿಗೆ ಸಂಬಂಧಿಸಿದಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು 2 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ದಿನಾಂಕ: 27-01-2026 ರಂದು ಜ್ಞಾಪನವನ್ನು ನೀಡಲಾಗಿರುತ್ತದೆ. ಆದರೆ ಜ್ಞಾಪನ ನೀಡಿ 6 ತಿಂಗಳು ಕಳೆಯುತ್ತ ಬಂದರೂ ಈ ದೂರು ಅರ್ಜಿಗೆ ಸಂಬAಧಿಸಿದAತೆ ಕಾರ್ಯಪಾಲಕ ಅಭಿಯಂತರರು (ಪ್ರಭಾರ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿರುತ್ತಾರೆ.

ಈ ದೂರು ಅರ್ಜಿಯನ್ನು ತನಿಖೆಗೆ ಒಳಪಡಿಸುವಲ್ಲಿ ತೋರಿದ ನಿರ್ಲಕ್ಷö್ಯಕ್ಕೆ ಪ್ರಮುಖ ಕಾರಣವೆಂದರೆ, ಹೊನ್ನಾಳಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರೇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯನಿರ್ವಹಿಸಿರುತ್ತಾರೆ. ಈ ಕಾರಣಕ್ಕಾಗಿ ತನ್ನ ಮೇಲಿನ ಆರೋಪವನ್ನು ತನಿಖೆಗೆ ಒಳಪಡಿಸುವಲ್ಲಿ ನಿರ್ಲಕ್ಷö್ಯ ತೋರಿ, ಈ ದೂರು ಅರ್ಜಿಯನ್ನು ಮೂಲೆ ಗುಂಪಾಗಿಸಿರುತ್ತಾರೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಸೋಮ್ಲನಾಯ್ಕ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ

Published

on

ಸುದ್ದಿದಿನಡೆಸ್ಕ್:ಜಪಾನ್‌ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿತು. ಅವರನ್ನು ಬಂಧಿಸಿ 19 ದಿನ ಜೈಲಿನಲ್ಲಿ ಇರಿಸಲಾಯಿತು.

ತಮ್ಮ ಬಂಧನ ಸರಿಯಲ್ಲ ಎಂದು ತನಕಾ ಮಾನವ ಹಕ್ಕುಗಳ ಆಯೋಗದ ಮೊರೆ ಹೋದರು. ವೀಸಾ ಅವಧಿ ಮುಗಿಯುತ್ತಿದ್ದಂತೆ, ಪ್ರಕರಣ ಮುಗಿಯುವವರೆಗೂ ಭಾರತದಲ್ಲೇ ಇರಲು ವಿಚಿತ್ರ ಪ್ರಯತ್ನವೂ ಮಾಡಿದರು. ಪೊಲೀಸ್ ಠಾಣೆಯಿಂದ ಪ್ಲಾಸ್ಟಿಕ್ ಕುರ್ಚಿಯೊಂದನ್ನು ತೆಗೆದುಕೊಂಡು ಹೋಗಿ, ಮತ್ತೆ ಬಂಧನಕ್ಕೊಳಗಾಗಲು ಪ್ರಯತ್ನಿಸಿದರು!

ಅದು ಆಗದೇ ಇದ್ದಾಗ ಜಪಾನ್ ಗೆ ಮರಳಿ . ಅಲ್ಲಿಂದಲೇ ತಮ್ಮ ಹೋರಾಟ ಮುಂದುವರಿಸಿದ ತನಕಾ ಅವರ ಹೋರಾಟಕ್ಕೆ ಜಯ ಸಿಕ್ಕಿದೆ ಸಿಕ್ಕಿದೆ. ಕರ್ನಾಟಕದಿಂದ 75,000 ಪರಿಹಾರವನ್ನು ಪಡೆದುಕೊಂಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಡಾಲಿಯ ಕನಸು ಒಂದೇ ಹೀರೋ ಆಗೋದು

Published

on

ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು!

ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು ಗುರಿಯ ಮೇಲೆ ಸಂಪೂರ್ಣ ಗಮನ ಹೊಂದಿದ್ದವರು. ಯಾವುದೇ ಡೈವರ್ಷನ್ ಇಲ್ಲ, ಸಿನಿಮಾ ಕನಸಿನ ಕಡೆ ಮಾತ್ರ ಗಮನ!

ಇಂದು ಬಹುಭಾಷಾ ನಟನಾಗಿ ದೊಡ್ಡ ಎತ್ತರಕ್ಕೇರಿದ್ದರೂ, ತಮ್ಮ ಬೇರುಗಳನ್ನು ಅವರು ಮರೆತಿಲ್ಲ. ಇಂದಿಗೂ ತಮ್ಮ ಹಳೆಯ ಸ್ನೇಹಿತರ ಜೊತೆಗೂಡಿ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿರ್ಮಾಪಕರಾಗಿಯೂ ಗುರುತಿಸಿಕೊಂಡಿರುವ ಅವರು, ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ.

ಅಂದಿನ ಅದೇ ಸರಳತೆ, ಅದೇ ನಡವಳಿಕೆ ಇಂದಿಗೂ ಇದೆ!

ಒಬ್ಬ ಕಾಲೇಜು ಯುವಕನಿಂದ ಬಹುಭಾಷಾ ತಾರೆಯವರೆಗೆ—ಎಂತಹ ಸ್ಪೂರ್ತಿದಾಯಕ ಪಯಣ! ಹ್ಯಾಪಿ ಬರ್ತ್ಡೇ ಡಾಲಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending