ದಿನದ ಸುದ್ದಿ
ಮಧ್ಯಾಹ್ನದ ಪ್ರಮುಖ ಸುದ್ದಿಗಳು
ಮಧ್ಯಾಹ್ನದ ಪ್ರಮುಖ ಸುದ್ದಿಗಳು
- ಉದ್ಘಾಟನೆಯಾದ ಕೇವಲ ಎರಡು ತಿಂಗಳಲ್ಲಿಯೇ ಕುಸಿದ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದ ಚಾವಣಿ ಕುಸಿತಕ್ಕೆ ಸಂಬಂಧಿಸಿದಂತೆ ತನಿಖೆ ಪ್ರಗತಿಯಲ್ಲಿದೆ. ಕ್ರೀಡಾಂಗಣದ ರಚನೆಯಲ್ಲಿ ದೋಷವಿದೆಯೇ ಅಥವಾ ಬೇರೆ ಕಾರಣದಿಂದ ಕುಸಿತವಾಗಿಯೇ ಎಂಬುದನ್ನು ನಾವು ಇನ್ನೂ ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದೇವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು.
- ಬೆಂಗಳೂರಿನ ನೆಲಮಂಗಲ ಸಮೀಪ ಇಂದು ಜೆಡಿಎಸ್ ಜನತಾ ಜಲಧಾರೆ ಸಮಾರೋಪ ಸಮಾವೇಶ ನಡೆಯಲಿದೆ. ಸಮಾವೇಶಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದರು.
- ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಪೂರ್ವಭಾವಿಯಾಗಿ ಬೆಂಗಳೂರಿನ ದೂರದರ್ಶನ ಕೇಂದ್ರದ ಆವರಣದಲ್ಲಿ ಇಂದು ದೂರದರ್ಶನ ಹಾಗೂ ಆಕಾಶವಾಣಿಯ ಸಿಬ್ಬಂದಿ ವರ್ಗಕ್ಕೆ ವಿಶೇಷ ಯೋಗ ಶಿಬಿರ ಆಯೋಜಿಸಲಾಗಿತ್ತು. ಯೋಗ ಗುರು ರಾಜೇಶ್ ಆಚಾರ್ಯ ಅವರ ನೇತೃತ್ವದಲ್ಲಿ ಯೋಗಾಭ್ಯಾಸ ನಡೆಯಿತು. ಚಿತ್ರನಟರಾದ ರಾಧಿಕಾ ನಾರಾಯಣ, ಸೂರಜ್ ಗೌಡ ಪಾಲ್ಗೊಂಡಿದ್ದರು.
- ತುರ್ತು ಕಾಮಗಾರಿ ಹಾಗೂ ಪಂಪ್‌ಹೌಸ್‌ನಲ್ಲಿ ದುರಸ್ಥಿ ಕಾರ್ಯ ಕೈಗೊಳ್ಳುತ್ತಿರುವುದರಿಂದ ಬೆಂಗಳೂರಿನ ಹಲವು ಬಡಾವಣೆಗಳಲ್ಲಿ ನಾಳೆ ನೀರಿನ ಪೂರೈಕೆಯ ವ್ಯತ್ಯಯ ಉಂಟಾಗಲಿದೆ ಎಂದು ಜಲಮಂಡಳಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
- ಪ್ರಸ್ತುತ ಕೈಗೊಂಡಿರುವ ಟ್ರಾನ್ಸ್‌ಫಾರ್ಮರ್ ನಿರ್ವಹಣಾ ಅಭಿಯಾನದ ಜೊತೆಗೆ ಬೆಂಗಳೂರು ನಗರ ಜಿಲ್ಲೆಯಲ್ಲಿ 2 ಸಾವಿರದ 500ಕ್ಕೂ ಹೆಚ್ಚು ವಿನೂತನ ವಿನ್ಯಾಸದ ಟ್ರಾನ್ಸ್‌ಫಾರ್ಮರ್‌ಗಳನ್ನು ಅಳವಡಿಸಲು ತಯಾರಿ ನಡೆಸಲಾಗಿದೆ. ಅತಿ ಶೀರ್ಘದಲ್ಲೇ ಈ ಕಾರ್ಯಾಚರಣೆ ಕೈಗೊತ್ತಿಕೊಳ್ಳಲಾಗುವುದು ಎಂದು ಬೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
- ಇತಿಹಾಸ ಪ್ರಸಿದ್ದ ಚಾಮರಾಜನಗರದ ಚಾಮರಾಜೇಶ್ವರ ನೂತನ ರಥ ಇಂದು ಚಾಮರಾಜನಗರಕ್ಕೆ ಬರಲಿದೆ. ಸುಮಾರು 1ಕೋಟಿ 20 ಲಕ್ಷ ರೂಪಾಯಿ ವೆಚ್ಚದಲ್ಲಿ ಹೊಸ ರಥವನು ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ನಿರ್ಮಾಣ ಮಾಡಲಾಗಿದೆ. ಇಂದು ಚಾಮರಾಜನಗರದ ಆದಿಶಕ್ತಿ ದೇವಸ್ಥಾನದ ಬಳಿ ವಿವಿಧ ಕಲಾತಂಡಗಳೊಡನೆ ರಥ ಮೆರವಣಿಗೆ ಮೂಲಕ ಹೊರಡಲಿದೆ.
- ದೇಶದಲ್ಲಿ ಇದುವರೆಗೆ ಸುಮಾರು 190 ಕೋಟಿ 97 ಲಕ್ಷಕ್ಕೂ ಅಧಿಕ ಕೋವಿಡ್ ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ ಹಾಗೂ ಒಂದೇ ದಿನದಲ್ಲಿ 12ಲಕ್ಷದ 15ಸಾವಿರ ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ.
- ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಾಚರಣೆ ಈಗಿನಿಂದಲೇ ಆರಂಭವಾಗಿದೆ. ನಾಳೆ ಬಿಜೆಪಿ ಕೋರ್ ಕಮಿಟಿ ಸಭೆ ಆಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ಬೇರೆ ಬೇರೆ ಜಿಲ್ಲೆಗಳಲ್ಲಿಯೂ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
- ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ತುಸು ಕಡಿಮೆಯಾಗಿದೆ. ಒಂದೇ ದಿನದಲ್ಲಿ 3 ಸಾವಿರದ 841ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಒಂದೇ ದಿನದಲ್ಲಿ ಮೂರು ಸಾವಿರದ 295ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
- ಬೆಂಗಳೂರಿನ ನೆಲಮಂಗಲ ಸಮೀಪ ಇಂದು ಜೆಡಿಎಸ್ ಜನತಾ ಜಲಧಾರೆ ಸಮಾರೋಪ ಸಮಾವೇಶ ನಡೆಯಲಿದೆ. ಸಮಾವೇಶಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದರು.
- ರಾಜ್ಯದಲ್ಲಿರುವ ವಕ್ಫ್ ಆಸ್ತಿಗಳ ಸಮೀಕ್ಷೆಯನ್ನು ನಡೆಸಲು ಕ್ರಮ ಕೈಗೊಳ್ಳಲಾಗಿದೆ. ಈ ಬಾರಿ ಡ್ರೋಣ್ ಮೂಲಕ ಸರ್ವೇ ನಡೆಸಲು ಸಿದ್ಧತೆ ಕೈಗೊಳ್ಳಲಾಗಿದೆ. ಆಸ್ತಿಗಳ ನಕ್ಷೆಯನ್ನು ಗುರುತಿಸಿ, ಸಂರಕ್ಷಿಸಲು ಸರ್ಕಾರ 2.5 ಕೋಟಿ ಅನುದಾನ ಬಿಡುಗಡೆ ಮಾಡಲಿದೆ ಎಂದು ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಎನ್.ಕೆ. ಮೊಹಮ್ಮದ್ ಶಾಫಿ ತಿಳಿಸಿದ್ದಾರೆ.
- ಸರ್ಕಾರಿ ನೌಕರರು ಆತ್ಮಸಾಕ್ಷಿಗೆ ಅನುಗುಣವಾಗಿ ಕಾರ್ಯನಿರ್ವಹಿಸಬೇಕಿದೆ. ನಿವೃತ್ತಿಯ ಅಂಚಿನಲ್ಲಿದ್ದಾಗ ಕೆಲಸದ ಬಗ್ಗೆ ಹೆಮ್ಮೆ ಮೂಡುವಂತೆ ಇರಬೇಕು ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ತಿಳಿಸಿದ್ದಾರೆ.
- ದೇಶದಲ್ಲಿ ಕೊರೊನಾ ಲಸಿಕೆ ಅಭಿಯಾನ ಮುಂದುವರಿದೆ. ಕೊರೊನಾ ನಾಲ್ಕನೇ ಅಲೆಯ ಆತಂಕ ಕೊಂಚ ನಿವಾರಣೆಯಾಗುತ್ತಿರುವ ಬೆನ್ನಲ್ಲೇ ಕೊರೊನಾ ಲಸಿಕೆ ಅಭಿಯಾನವನ್ನು ಇನ್ನಷ್ಟು ಹೆಚ್ಚುಗೊಳಿಸಲಾಗಿದೆ. ದೇಶದಲ್ಲಿ ಇದುವರೆಗೆ ಸುಮಾರು 190ಕೋಟಿ 97ಲಕ್ಷಕ್ಕೂ ಅಧಿಕ ಕೋವಿಡ್ ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ ಹಾಗೂ ಒಂದೇ ದಿನದಲ್ಲಿ 12 ಲಕ್ಷದ 15 ಸಾವಿರ ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ4 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ6 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ4 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ1 day agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ1 day agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

