Connect with us

ದಿನದ ಸುದ್ದಿ

ಪರಿಶಿಷ್ಟ ಪಂಗಡದ ಪಟ್ಟಿಯಿಂದ ‘ನಾಯಕ’ ಪದ ಕೈಬಿಟ್ಟಿರುವುದನ್ನು ಖಂಡಿಸಿ ಚಿಗಟೇರಿಯಲ್ಲಿ ಪ್ರತಿಭಟನೆ

Published

on

ಸುದ್ದಿದಿನ, ಹರಪನಹಳ್ಳಿ : ಪರಿಶಿಷ್ಟ ಪಂಗಡದ ಪಟ್ಟಿಯಿಂದ “ನಾಯಕ” ಪದ ಕೈಬಿಟ್ಟಿರುವುದನ್ನು ಕೂಡಲೇ ನಾಡ ಕಛೇರಿ (ಅಟಲ್‌ ಜೀ ಜನಸ್ನೇಹಿ) ಕೇಂದ್ರದ ಅಂತರ್ಜಾಲದಲ್ಲಿ ಸೇರಿಸಿ “ನಾಯಕ” (ಪರಿಶಿಷ್ಟ ಪಂಗಡ) ಪ್ರಮಾಣ ಪತ್ರ ನೀಡಲು ಒತ್ತಾಯಿಸಿ ಇಂದು ಹರಪನಹಳ್ಳಿ ತಾಲ್ಲೂಕಿನ,ಚಿಗಟೇರಿ ನಾಡ ಕಛೇರಿಯ ಉಪ-ತಹಶೀಲ್ದಾರರಿಗೆ ಪ್ರತಿಭಟನೆ ಮೂಲಕ ಸಲ್ಲಿಸುತ್ತಿರುವ ಮನವಿ ಸಲ್ಲಿಸಲಾಯಿತು.

ಕರ್ನಾಟಕದ ಬಳ್ಳಾರಿ, ವಿಜಯನಗರ, ಹಾಗೂ ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ನಾಯ್ಕಡ ಬುಡಕಟ್ಟಿಗೆ ಸೇರಿದ ನಾಯಕ ಅಥವಾ ನಾಯ್ಕ ಪಂಗಡದವರಾದ ಮ್ಯಾಸ ನಾಯಕ ಅಥವಾ ಮ್ಯಾಸ ಬೇಡರಿಗೆ 1976 ಮತ್ತು 1991 ನೇ ಸಾಲಿನಿಂದ 2021ನೇ ಸಾಲಿನವರೆಗೂ ಪರಿಶಿಷ್ಟ ಪಂಗಡದ “ನಾಯಕ” ಪ್ರಮಾಣ ಪತ್ರ ಕೋರಿ ಅರ್ಜಿ ಸಲ್ಲಿಸಿದರೆ ಪರಿಶಿಷ್ಟ ಪಂಗಡದ “ನಾಯಕ” ಪ್ರಮಾಣ ಪತ್ರವನ್ನು ನೀಡಲಾಗುತ್ತಿತ್ತು. ಆದರೆ ಈಗ್ಗೆ ಸುಮಾರು 5-6 ತಿಂಗಳಿಂದ ನಾಡ ಕಛೇರಿ (ಅಟಲ್‌ ಜಿ ಜನಸ್ನೇಹಿ) ಕೇಂದ್ರದ ಅಂತರ್ಜಾಲದಲ್ಲಿ ಪರಿಶಿಷ್ಟ ಪಂಗಡದ “ನಾಯಕ “ ಎಂಬ ಪದವನ್ನು ಕೈ ಬಿಡಲಾಗಿದೆ ಮತ್ತು ನಾಯಕ ಎಂದು ಎಸ್‌ ಟಿ ಪ್ರಮಾಣ ಪತ್ರವನ್ನು ನೀಡುತ್ತಿಲ್ಲ.

ನಾಯಕ Nayaka ಬದಲಾಗಿ (Nayaka (Including Parivara and Talawara)) (ನಾಯಕ(ಪರಿವಾರ ತಳವಾರ ಸೇರಿದಂತೆ)) ಅಥವಾ ನಾಯಕ(ಪರಿವಾರ) ಅಥವಾ ನಾಯಕ(ತಳವಾರ) ಎಂದು ನೀಡಲಾಗುತ್ತಿದೆ. ಸರ್ಕಾರದ ಈ ಸಂವಿಧಾನ ವಿರೋಧಿ ಕ್ರಮವು ನಿಜವಾದ ನಾಯ್ಕಡ-ನಾಯಕ ಪಂಗಡದವರಿಗೆ ಕಾನೂನಿನ ಹಾನಿಯುಂಟು ಮಾಡಿದೆ. 1976ನೇ ಸಾಲಿನಿಂದಲೂ ನಾಯ್ಕಡ,ನಾಯಕ ಎಂಬುದು ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿ ಇರುತ್ತದೆ.

2020 ರಲ್ಲಿ ಭಾರತೀಯ ಸಂಸತ್‌ ಸೇರ್ಪಡೆ ಮಾಡಿರುವುದು ನಾಯಕ ಜೊತೆಯಲ್ಲಿ ಪರಿವಾರ ಮತ್ತು ತಳವಾರ ಸೇರಿರುತ್ತಾರೆ ಎಂದು ತಿದ್ದುಪಡಿ ಕಾಯ್ದೆ ಮಾಡಿರುತ್ತದೆ. ತಿದ್ದುಪಡಿ ಆದೇಶದ ಪ್ರಕಾರ ಸರ್ಕಾರ ಪರಿವಾರ ಮತ್ತು ತಳವಾರ ಎಂದು ನೀಡಬೇಕು. ನಾಯ್ಕಡ ನಾಯಕ ಪಂಗಡದ ಹೆಸರನ್ನು ಬದಲಾಯಿಸಲು ಸಂವಿಧಾನದಲ್ಲಿ ಅವಕಾಶವಿಲ್ಲ. 1991 ರಲ್ಲಿ ಭಾರತೀಯ ಸಂಸತ್‌ Naikda, Nayaka ಸಮಾನಾರ್ಥಕ ಪದಗಳಾಗಿ “Naik, Nayak, Beda, Bedar and Valmiki ಎಂಬ ಪದಗಳನ್ನು ಸೇರಿಸಿ ತಿದ್ದುಪಡಿ ಕಾಯ್ದೆಯನ್ನು ಮಾಡಿರುತ್ತದೆ. ಆ ಕಾಯ್ದೆ ಪ್ರಕಾರ ಮೂಲ ನಾಯ್ಕಡ,ನಾಯಕ ಎಂಬುದನ್ನು ಬದಲಾಯಿಸಿರುವುದಿಲ್ಲ.

ಆದರೆ ರಾಜ್ಯ ಸರ್ಕಾರವು ಕಾನೂನನ್ನು ತಪ್ಪಾಗಿ ಅರ್ಥೈಸಿ ತಳವಾರ ಮತ್ತು ಪರಿವಾರ ಜಾತಿಯವರಿಗೆ ನಾಯಕ ಎಂದು ಪ್ರಮಾಣ ಪತ್ರ ಕೊಡುತ್ತಿದ್ದಿರಿ ಇದು ಸಂವಿಧಾನ ಬಾಹಿರವಾಗಿರುತ್ತದೆ. ಮೂಲ ನಾಯಕ ಪಂಗಡದವರಾದ ನಮಗೆ ನಾಯಕ ಪ್ರಮಾಣ ಪತ್ರವನ್ನು ಕೊಡದೇ ಹೊಸ ಜಾತಿಯನ್ನು ಬರೆದುಕೊಳ್ಳುವಂತೆ ಮಾಡಿರುವುದನ್ನು ನಾವು ಉಗ್ರವಾಗಿ ಖಂಡಿಸುತ್ತೇವೆ ಎಂದರು.

ಕೂಡಲೇ ಸರ್ಕಾರ ನಾಯಕ (ಪರಿಶಿಷ್ಟ ಪಂಗಡ) ಎಂದು ಪ್ರಮಾಣ ಪತ್ರವನ್ನು ನೀಡುವಂತೆ ಕೋರುತ್ತೇವೆ. 1976 ರಿಂದ ಮ್ಯಾಸ ನಾಯಕರ ಬುಡಕಟ್ಟು ಲಕ್ಷಣಗಳನ್ನು ಆಧಾರಿಸಿ ಪರಿಶಿಷ್ಟ ಪಂಗಡಕ್ಕೆ ಸೇರಿದವರೆಂದು ಮ್ಯಾಸ ನಾಯಕರಿಗೆ “ನಾಯಕ” ಎಂದೇ ಎಸ್‌ ಟಿ ಪ್ರಮಾಣ ಪತ್ರ ಕೊಡಲಾಗುತ್ತಿತ್ತು. ಆದರೆ ನಮಗೆ ನಮ್ಮ ಪಂಗಡದ ಹೆಸರನ್ನೆ ಬದಲಾವಣೆ ಮಾಡಿ ನಾಯಕ (ಪರಿವಾರ ಮತ್ತು ತಳವಾರ) ಎಂದು ನಮೂದಿಸಿ ನಮ್ಮ ಬುಡಕಟ್ಟಿನ ಮೂಲ ಹೆಸರನ್ನೆ ಇಲ್ಲದಂತೆ ಮಾಡಿರುತ್ತೀರಿ ಎಂದು ಆರೋಪಿಸಿದರು.

ನಮಗೂ ಪರಿವಾರ ಮತ್ತು ತಳವಾರ ಜಾತಿಯವರಿಗೂ ಯಾವುದೇ ಸಂಬಂಧವಿರುವುದಿಲ್ಲ. ದುರುದ್ದೇಶದಿಂದ ಈ ರೀತಿ ಕಾನೂನನ್ನು ಮಾಡಿ ಮೂಲ ಬುಡಕಟ್ಟು ಜನರಿಗೆ ಕಾನೂನು ತೊಡಕನ್ನು ಉಂಟು ಮಾಡುತ್ತಿರುವುದಲ್ಲದೆ ನಮ್ಮ ಮೂಲ ಪಂಗಡದ ಹೆಸರನ್ನೆ ನಿರ್ನಾಮ ಮಾಡಲು ಹೊರಟಿರುತ್ತಿರಿ ಎಂದು ಕಿಡಿಕಾರಿದರು.

ಆದ್ದರಿಂದ ಮ್ಯಾಸ ನಾಯಕರಿಗೆ “ನಾಯಕ” ಎಂದೇ ಪರಿಶಿಷ್ಟ ಪಂಗಡದ ಪ್ರಮಾಣ ಪತ್ರವನ್ನು ಮಾತ್ರ ನೀಡಲು ಒತ್ತಾಯಪೂರ್ವಕವಾಗಿ ವಿನಂತಿಸುತ್ತಿದ್ದೇವೆ. ನಮ್ಮ ಪರಿಶಿಷ್ಟ ಪಂಗಡದ “ನಾಯಕ” ಪ್ರಮಾಣ ಪತ್ರಗಳಲ್ಲಿ ತಳವಾರ ಮತ್ತು ಪರಿವಾರ ಎಂಬ ಹೆಸರಗಳನ್ನು ನಮೂದಿಸುವಂತಿಲ್ಲ. ಇತ್ತೀಚೇಗೆ ಸಂಸತ್‌ ನಲ್ಲಿ ಮಾಡಿರುವ The Counstitution (Scheduled Tribes) Order (Amendment) Act,2020ರ ಪ್ರಕಾರ ನಮ್ಮ ಮೂಲ ನಾಯ್ಕಡ,ನಾಯಕ ಪಂಗಡದ ಹೆಸರನ್ನು ಬದಲಾವಣೆ ಮಾಡುವ ಬಗ್ಗೆ ಯಾವುದೇ ಕಾನೂನನ್ನು ಮಾಡಿರುವುದಿಲ್ಲ.

ಆದರೂ ಸಹ ತಪ್ಪು ತಪ್ಪಾಗಿ ಕಾನೂನನ್ನು ಅರ್ಥೈಸಿ ಬುಡಕಟ್ಟು ಜನರ ಅಸ್ತಿತ್ವವನ್ನು ನಿರ್ನಾಮ ಮಾಡುತ್ತಾ ಹಕ್ಕುಗಳನ್ನು ಅಪಹರಿಸಲು ಸಂಚನ್ನು ಮಾಡಲಾಗುತ್ತಿದೆ. ಆದ್ದರಿಂದ ಎಲ್ಲಾ ರೀತಿಯಿಂದ ರಾಜ್ಯ ಸರ್ಕಾರದ ಈ ನಡೆಯನ್ನು ಪರಿವಾರ ಮತ್ತು ತಳವಾರ ಜಾತಿಯವರ ಕುಯಿಕ್ತಿಯಂತೆ ಮಾಡುತ್ತಿರುವುದು ನಮ್ಮ ಮ್ಯಾಸ ನಾಯಕರಿಗೆ ಬಾರಿ ಅನ್ಯಾವಾಗುತ್ತಿದೆ. ಆದ್ದರಿಂದ ಈ ಕೂಡಲೇ ಮೊದಲಿನ ರೀತಿಯಲ್ಲಿ ನಾಯಕ (ಪರಿಶಿಷ್ಟ ಪಂಗಡ) ಎಂದು ಮಾತ್ರ ಪ್ರಮಾಣ ಪತ್ರ ನೀಡಬೇಕು ಎಂದು ಪ್ರತಿಭಟನೆಯ ಮೂಲಕ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸುತ್ತಿದ್ದೇವೆ ಎಂದರು.

ಬೇಡಿಕೆಗಳು

  1. ನಾಡ ಕಛೇರಿ ಅಂತರ್ಜಾಲದಲ್ಲಿ ಕೈಬಿಟ್ಟಿರುವ “ನಾಯಕ: ಪದವನ್ನು ಸೇರಿಸಿ ಈ ಕೂಡಲೇ ಮೊದಲಿನ ರೀತಿಯಲ್ಲಿ ನಾಯಕ (ಪರಿಶಿಷ್ಟ ಪಂಗಡ) ಎಂದು ಮಾತ್ರ ಪ್ರಮಾಣ ಪತ್ರ ನೀಡಬೇಕು.
  2. ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿರುವ “ನಾಯ್ಕಡ” “ನಾಯಕ” ಸಮಾನಾರ್ಥಕ ಪದಗಳಾಗಿ “ಮ್ಯಾಸ ನಾಯ್ಕ”, “ಮ್ಯಾಸ ನಾಯಕ”, “ಮ್ಯಾಸ ಬೇಡ”, “ಮ್ಯಾಸ ಬ್ಯಾಡ್ರು”, “ಮ್ಯಾಸ ಬೇಡರ”, “ಮ್ಯಾಸರು” ಎಂಬ ಪದಗಳನ್ನು ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿ ಸೇರ್ಪಡೆ ಮಾಡಲು ಈ ಕೂಡಲೇ ಕ್ರಮ ಕೈಗೊಳ್ಳಬೇಕು.
  3. “ನಾಯಕ” ಪಂಗಡದ ನಿಜವಾದ ಸಮಾನಾರ್ಥಕ “ಮ್ಯಾಸ ನಾಯಕ” ಪದವನ್ನು ಸಂವಿಧಾನ ಬಾಹಿರವಾಗಿ ಓಬಿಸಿಪಟ್ಟಿಗೆ ಸೇರ್ಪಡೆ ಮಾಡಿರುವುದನ್ನು ಈ ಕೂಡಲೇ ತೆಗೆದುಹಾಕಿ ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿ ಸೇರ್ಪಡೆ ಮಾಡಬೇಕು.
  4. 1976 ನೇ ಸಾಲಿನಿಂದಲೂ “ನಾಯಕ” ಎಂಬುದು ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿ ಇರುತ್ತದೆ. ಭಾರತೀಯ ಸಂಸತ್‌ ಸೇರ್ಪಡೆ ಮಾಡಿರುವುದು ನಾಯಕ ಜೊತೆಯಲ್ಲಿ ಪರಿವಾರ ಮತ್ತು ತಳವಾರ ಸೇರಿರುತ್ತಾರೆ ಎಂದು ತಿದ್ದುಪಡಿ ಕಾಯ್ದೆ ಮಾಡಿರುತ್ತದೆ. ತಿದ್ದುಪಡಿ ಆದೇಶದ ಪ್ರಕಾರ ರಾಜ್ಯ ಸರ್ಕಾರ ಪರಿವಾರ ಮತ್ತು ತಳವಾರ ಎಂದು ನೀಡಬೇಕು.

ನಾಯ್ಕಡ ನಾಯಕ ಪಂಗಡದ ಹೆಸರನ್ನು ಬದಲಾಯಿಸಲು ಸಂವಿಧಾನದಲ್ಲಿ ಅವಕಾಶವಿಲ್ಲ. ಆದರೆ ರಾಜ್ಯ ಸರ್ಕಾರವು ಕಾನೂನನ್ನು ತಪ್ಪಾಗಿ ಅರ್ಥೈಸಿ ತಳವಾರ ಮತ್ತು ಪರಿವಾರದವರಿಗೆ ನಾಯಕ ಎಂದು ಪ್ರಮಾಣ ಪತ್ರ ಕೊಡುತ್ತಿದ್ದಿರಿ ಇದು ಸಂವಿಧಾನ ಬಾಹಿರವಾಗಿರುತ್ತದೆ.

ಈ ಸಂದರ್ಭದಲ್ಲಿ ಮ್ಯಾಸ ನಾಯಕ ಬುಡಕಟ್ಟು ಸಂಸ್ಕೃತಿ ಸಂರಕ್ಷಣಾ ಸಮಿತಿ(ರಿ)ಯ ಸಂಚಾಲಕರುಗಳಾದ ಜಿ ನಾಗರಾಜ, ಗಾಮ ಪಂಚಾಯಿತಿ ಉಪಾಧ್ಯಕ್ಷರು, ಕೋಟೆ ನಾಗರಾಜ, ಎಂ ದ್ವಾರಕೇಶ,ವಕೀಲರಾದ ಬಿ.ಕರಿಯಪ್ಪ, ಡಿ.ನಾಗರಾಜ್ ಚಿಗಟೇರಿ ಗ್ರಾಮದ ಮುಖಂಡರುಗಳಾದ ಎಂ.ರಾಜಪ್ಪ, ಎಂ.ತಿಪ್ಪೇಸ್ವಾಮಿ, ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಗ್ರಾಮ ಪಂಚಾಯತಿ ಸದಸ್ಯರುಗಳಾದ ಎ.ಬಸವರಾಜ್, ಎಂ.ದುರುಗಪ್ಪ, ಜಿ. ಅಡವಿಪ್ಪ, ಬಿ. ನಾಗರಾಜ, ಎಸ್ ನಾಗೇಂದ್ರಪ್ಪ, ಜಿ.ಬಸಪ್ಪ, ಶೇಖರಪ್ಪ, ಎಂ ಹಾಲಪ್ಪ, ದುರುಗಪ್ಪ,ಮಂಜುನಾಥ್, ಎಸ್ ದಿವಾಕರ, ಎಂ.ಹೇಮಪ್ಪ, ಎಂ.ಮಾರಪ್ಪ, ಸುಖವಪ್ಪ, ಎಂ.ಬಸವರಾಜ, ಬಿ. ಮನ್ನೇಪ್ಪ, ಎ.ದಾಸಪ್ಪ, ಭೀಮಪ್ಪ ನಿವೃತ್ತ ಶಿಕ್ಷಕರು, ಹೆಚ್.ಕಂಪಾಲೆಪ್ಪ, ಎಂ.ಹಳ್ಳೆಪ್ಪ, ಎಂ ಸೂರಪ್ಪ, ಎಸ್.ಬೊಮ್ಮಪ್ಪ, ಎಂ.ಡಿ.ನಾಗರಾಜಪ್ಪ ಇತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ

Published

on

ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು.

ತೀರ್ಪುಗಾರರ ಮೆಚ್ಚುಗೆ ಪಡೆದ ಸಿದ್ಧಗಂಗಾ ಸಂಸ್ಥೆಯ ನಯಾಸ ಡಿ.ಎಸ್.‌ ಪ್ರಥಮ ಬಹುಮಾನವಾಗಿ ಒಂದು ಸಾವಿರ, ದ್ವಿತೀಯ ಬಹುಮಾನ ಗಳಿಸಿದ ಜಾಹ್ನವಿ ರೂ. 750 ಮತ್ತು ತೃತೀಯ ಬಹುಮಾನ ಗಳಿಸಿದ ಚೈತನ್ಯ ವಿ. ಎಸ್‌. ರೂ. 500 ನಗದು ಬಹುಮಾನ ಪಡೆದರು. ಜೊತೆಗೆ ಈ ಮಕ್ಕಳಿಗೆ ಆಯೋಜಕರು ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಎಳೆಯರ ಪ್ರಬುದ್ಧತೆಯನ್ನು ಶ್ಲಾಘಿಸಿದರು.

ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್‌ ಡಿಸೌಜ ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಪಾಲಕರ ಪ್ರೋತ್ಸಾಹ ಈ ಯಶಸ್ಸಿಗೆ ಕಾರಣವಾಗಿದೆ ಎಂದರು.

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯಪುಸ್ತಕಗಳ ಜೊತೆಗೆ ಉತ್ತಮ ಕಾದಂಬರಿಗಳು, ಕಥಾಸಂಕಲನಗಳು, ಸಾಧಕರ ಆತ್ಮಕಥೆ ಕುರಿತಾದ ಪುಸ್ತಕಗಳನ್ನು ಓದುವ ಹವ್ಯಾಸ ಅತ್ಯಂತ ಮಹತ್ವದ್ದು, ಓದಿನ ಮೂಲಕ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಚಿಂತನೆ, ವಿಶ್ಲೇಷಣೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಮುಂದೆಯೂ ಇಂತಹ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಹೆಚ್ಚಿನ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.

ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.

ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ

Published

on

ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್‌ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್‌ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್‌ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್‌ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್‌, ಚೇತನ್‌ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.

ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್‌ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್‌ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್‌ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.

ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending