ಕ್ರೀಡೆ
ಮಧ್ಯಾಹ್ನದ ಪ್ರಮುಖ ಸುದ್ದಿಗಳು
ಮಧ್ಯಾಹ್ನದ ಪ್ರಮುಖ ಸುದ್ದಿಗಳು
- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸಂಜೆ ನಡೆಯಲಿರುವ ವಿಶ್ವ ಆರ್ಥಿಕ ವೇದಿಕೆಯ ಪ್ರಾಥಮಿಕ ಸಭೆಯಲ್ಲಿ ವರ್ಚುವಲ್ ರೂಪದಲ್ಲಿ ಭಾಗವಹಿಸಲಿದ್ದಾರೆ. ಈ ಸಭೆಯ ಅಧ್ಯಕ್ಷತೆಯನ್ನು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ವಹಿಸಲಿದ್ದಾರೆ.
- ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆಯಾಗುತ್ತಿದ್ದು, ಹಲವೆಡೆ ಕೆರೆ, ಕಟ್ಟೆಗಳು ತುಂಬಿ ಹರಿಯುತ್ತಿವೆ. ನದಿಗಳಲ್ಲಿ ನೀರಿನ ಒಳ ಹರಿವು ಹೆಚ್ಚಾಗಿದೆ. ಈ ಮಧ್ಯೆ ಇಂದೂ ಸಹ ರಾಜ್ಯದ 7 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಬಹುದೆಂಬ ಹವಾಮಾನ ಇಲಾಖೆ ರೆಡ್ ಆಲರ್ಟ್ ಘೋಷಿಸಿದ್ದು, ಚಿಕ್ಕಮಗಳೂರು, ಹಾಸನ, ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ಬೆಂಗಳೂರು ಸುತ್ತಮುತ್ತ ಮಳೆಯಾಗುತ್ತಿದೆ.
- ಬೆಂಗಳೂರು ನಗರದಲ್ಲೂ ಮಳೆ ಮುಂದುವರೆದಿದ್ದು, ಇನ್ನೂ 2 ದಿನ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿ, ಯಲ್ಲೋ ಅಲರ್ಟ್ ಘೋಷಿಸಿದೆ.
- ಎಸ್‌ಎಸ್‌ಎಲ್‌ಸಿ ಫಲಿತಾಂಶದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿಮ್ಹಾನ್ಸ್ ಸಹಯೋಗದಲ್ಲಿ ಮಾನಸಿಕ ಆರೋಗ್ಯ ಸಹಾಯವಾಣಿ ಆರಂಭಿಸಿದೆ. ಒತ್ತಡದಲ್ಲಿರುವ ವಿದ್ಯಾರ್ಥಿಗಳು ಸಹಾಯವಾಣಿ ಸಂಖ್ಯೆ : 080-46110007ಕ್ಕೆ ಕರೆ ಮಾಡಿ ಸಹಾಯ ಪಡೆದುಕೊಳ್ಳಬಹುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಪ್ರಕಟಿಸಿದ್ದಾರೆ.
- ಕಳೆದ 24ಗಂಟೆಗಳಲ್ಲಿ ದೇಶದಲ್ಲಿ ಹೊಸದಾಗಿ 2 ಸಾವಿರದ 364 ಕೋವಿಡ್ ಸೋಂಕು ಪ್ರಕರಣಗಳು ಧೃಡಪಟ್ಟಿವೆ. ಇದರಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 15 ಸಾವಿರದ 419ಕ್ಕೆ ತಲುಪಿದೆ. ದಿನದ ಪಾಸಿಟಿವಿಟಿ ದರ ಶೇಕಡ 0.50ಯಷ್ಟಿದೆ. ಈವರೆಗೆ 4 ಕೋಟಿ 25ಲಕ್ಷ 89 ಸಾವಿರದ 841 ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟು 191.79 ಕೋಟಿಗೂ ಅಧಿಕ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.
- 2022ನೇ ಅಂತಾರಾಷ್ಟ್ರೀಯ ಯೋಗದಿನದ ಅಂಗವಾಗಿ ದೆಹಲಿಯಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಅವರು ಸಧ್ಯದ ಜೀವನ ಶೈಲಿಯಲ್ಲಿ ಒತ್ತಡದಿಂದ ಪಾರಾಗುವಲ್ಲಿ ಯೋಗ ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ. ಜೊತೆಗೆ ಯೋಗ ಜನರಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತಿದೆ ಎಂದು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಕಲ್ಲು-ಮುಳ್ಳಿನ ದಾರಿಯಲ್ಲೂ ನಿಲ್ಲದ ಹೆಜ್ಜೆ; ತಾಯಿಯ ಛಲಕ್ಕೆ ಮ್ಯಾರಥಾನ್‌ನಲ್ಲಿ ಪ್ರಥಮ ಸ್ಥಾನ
ಸುದ್ದಿದಿನ,ಮುಂಬಯಿ: ಬದುಕಿನಲ್ಲಿ ಎದುರಾಗುವ ಸಂಕಷ್ಟಗಳು ಕೆಲವೊಮ್ಮೆ ಮನುಷ್ಯನನ್ನು ಕುಗ್ಗಿಸುತ್ತವೆ. ಆದರೆ ತಾಯಿಯೊಬ್ಬಳಿಗೆ ಮಕ್ಕಳ ಭವಿಷ್ಯದ ಕನಸು ದೊಡ್ಡದಾಗಿದ್ದರೆ, ಆಕೆಯ ಮುಂದೆ ನೋವು, ಬಡತನ, ಅಡೆತಡೆ ಯಾವುದೂ ನಿಲ್ಲುವುದಿಲ್ಲ. ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಅಂಬಾಜೋಗೈನ 47 ವರ್ಷದ ರಮಾಬಾಯಿ ರಣವೀರ್ ಅವರ ಕಥೆ ಇದಕ್ಕೆ ಜೀವಂತ ಸಾಕ್ಷಿಯಾಗಿದೆ. ಪತಿಯ ಅಕಾಲಿಕ ಅಗಲಿಕೆಯ ಬಳಿಕ ಇಬ್ಬರು ಹೆಣ್ಣುಮಕ್ಕಳ ಭವಿಷ್ಯಕ್ಕಾಗಿ ಹೋರಾಟ ನಡೆಸುತ್ತಿರುವ ರಮಾಬಾಯಿ, ಬರಿಗಾಲಿನಲ್ಲಿ ಮ್ಯಾರಥಾನ್ ಓಡಿ ಪ್ರಥಮ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ.
http://Visit : www.suddidina.com
ಕೂಲಿ ಕೆಲಸದಿಂದ ಅಡುಗೆ ಕೆಲಸದವರೆಗೆ
ಮುಂಬಯಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಪತಿಯನ್ನು ಕಳೆದುಕೊಂಡ ಬಳಿಕ ರಮಾಬಾಯಿ ಕುಟುಂಬದ ಜವಾಬ್ದಾರಿಯನ್ನು ಸಂಪೂರ್ಣವಾಗಿ ತಮ್ಮ ಹೆಗಲ ಮೇಲೆ ಹೊತ್ತರು. ಗದ್ದೆಗಳಲ್ಲಿ ಕೂಲಿ ಕೆಲಸ ಮಾಡುತ್ತಾ ಮಕ್ಕಳನ್ನು ಬೆಳೆಸಿದ ಅವರು, ಹೆಣ್ಣುಮಕ್ಕಳ ಉನ್ನತ ಶಿಕ್ಷಣಕ್ಕಾಗಿ ಅಂಬಾಜೋಗೈನ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವೊಂದರಲ್ಲಿ ಅಡುಗೆ ಕೆಲಸಕ್ಕೂ ಸೇರಿದರು.
ದಿನವಿಡೀ ಅಡುಗೆ ಮಾಡುವುದು, ಪಾತ್ರೆ ತೊಳೆಯುವುದು ಸೇರಿದಂತೆ ದುಡಿಮೆಯ ನಡುವೆಯೂ ಅವರ ಮನಸ್ಸಿನಲ್ಲಿದ್ದದ್ದು ಒಂದೇ ಕನಸು—ತಮ್ಮ ಇಬ್ಬರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಸ್ವಾವಲಂಬಿಗಳನ್ನಾಗಿ ಮಾಡುವುದು.
₹3 ಸಾವಿರಕ್ಕಾಗಿ ಆರಂಭವಾದ ಓಟ
ಮಕ್ಕಳ ವಿದ್ಯಾಭ್ಯಾಸದ ಅಗತ್ಯಕ್ಕೆ ಪುಸ್ತಕಗಳನ್ನು ಖರೀದಿಸಲು ಹಣ ಬೇಕಾಗಿತ್ತು. ಇದೇ ಸಂದರ್ಭದಲ್ಲಿ ‘ಅಮೃತ್ ದೌಡ್’ ಮ್ಯಾರಥಾನ್ ಕುರಿತು ಅವರಿಗೆ ಮಾಹಿತಿ ದೊರೆಯಿತು. ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವಾಗಿ ₹3 ಸಾವಿರ ನೀಡಲಾಗುತ್ತದೆ ಎಂಬುದು ತಿಳಿದ ತಕ್ಷಣ ರಮಾಬಾಯಿ ಓಟದಲ್ಲಿ ಭಾಗವಹಿಸಲು ನಿರ್ಧರಿಸಿದರು.
ಯುವಕರು ಟ್ರ್ಯಾಕ್‌ಸೂಟ್ ಮತ್ತು ಶೂ ಧರಿಸಿ ಓಟಕ್ಕೆ ಸಜ್ಜಾಗಿದ್ದರೆ, ರಮಾಬಾಯಿ ಮಾತ್ರ ಸಾಮಾನ್ಯ ಸೀರೆಯಲ್ಲೇ ಸ್ಪರ್ಧೆಯ ಕಣಕ್ಕಿಳಿದರು. ಆರಂಭದಲ್ಲಿ ಕಾಲಿಗೆ ಚಪ್ಪಲಿ ಇದ್ದರೂ ಓಟದ ವೇಗ ಹೆಚ್ಚಾದಂತೆ ಅದು ಜಾರಲಾರಂಭಿಸಿತು.
ಚಪ್ಪಲಿ ಬಿಟ್ಟು ಬರಿಗಾಲಿನಲ್ಲಿ ಓಟ
ಗುರಿ ಮುಟ್ಟಬೇಕೆಂಬ ಛಲದ ಮುಂದೆ ಚಪ್ಪಲಿ ಅಡ್ಡಿಯಾಗಬಾರದು ಎಂದು ನಿರ್ಧರಿಸಿದ ರಮಾಬಾಯಿ, ಚಪ್ಪಲಿಯನ್ನು ಕೈಗೆತ್ತಿಕೊಂಡು ಬರಿಗಾಲಿನಲ್ಲೇ ಓಡತೊಡಗಿದರು. ರಸ್ತೆಯ ಕಲ್ಲು-ಮುಳ್ಳುಗಳು ಕಾಲಿಗೆ ಚುಚ್ಚಿದರೂ ಅವರು ಓಟ ನಿಲ್ಲಿಸಲಿಲ್ಲ.
ಸೀರೆಯ ಅಂಚನ್ನು ಸರಿಪಡಿಸಿಕೊಳ್ಳುತ್ತಾ, ನೋವನ್ನು ಮರೆತು ಗುರಿಯತ್ತ ಮುನ್ನುಗ್ಗಿದ ಅವರು ಎಲ್ಲ ಸ್ಪರ್ಧಿಗಳನ್ನು ಹಿಂದಿಕ್ಕಿ ಮೊದಲಿಗರಾಗಿ ಫಿನಿಶ್ ಲೈನ್ ತಲುಪಿದರು. ಈ ಗೆಲುವಿನ ಹಿಂದೆ ಬಹುಮಾನದ ಹಣಕ್ಕಿಂತಲೂ ದೊಡ್ಡದಾದ ಒಂದು ಕನಸು—ಮಕ್ಕಳ ಭವಿಷ್ಯ—ಇತ್ತು.
ತಾಯಿಯ ಹಾದಿಯಲ್ಲೇ ಮಗಳ ಗೆಲುವು
ಈ ಮ್ಯಾರಥಾನ್‌ನಲ್ಲಿ ರಮಾಬಾಯಿಯ ಮಗಳು ಪೂಜಾ ಕೂಡ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿರುವುದು ವಿಶೇಷ. ತಾಯಿಯ ಪರಿಶ್ರಮದಿಂದ ಪ್ರೇರಣೆ ಪಡೆದ ಪೂಜಾ, ಭವಿಷ್ಯದಲ್ಲಿ ಪೊಲೀಸ್ ಅಧಿಕಾರಿಯಾಗುವ ಸಂಕಲ್ಪ ಮಾಡಿದ್ದಾರೆ. ಮತ್ತೊಬ್ಬ ಮಗಳು ಬ್ಯಾಂಕಿಂಗ್ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದಾರೆ.
ಪೂಜಾಳ ಪರಿಶ್ರಮ ಮತ್ತು ರಮಾಬಾಯಿಯ ತ್ಯಾಗವನ್ನು ಗಮನಿಸಿದ ತರಬೇತಿ ಅಕಾಡೆಮಿಯ ನಿರ್ದೇಶಕರು ಪೂಜಾಳ ಶಿಕ್ಷಣ ಶುಲ್ಕವನ್ನು ಸಂಪೂರ್ಣ ಮನ್ನಾ ಮಾಡಿದ್ದಾರೆ. ಹೀಗಾಗಿ ಒಂದು ಮ್ಯಾರಥಾನ್ ಗೆಲುವು ಕೇವಲ ₹3 ಸಾವಿರದ ಬಹುಮಾನಕ್ಕೆ ಸೀಮಿತವಾಗದೆ, ಕುಟುಂಬದ ಭವಿಷ್ಯಕ್ಕೆ ಹೊಸ ಆಶಾಕಿರಣವನ್ನೇ ಮೂಡಿಸಿದೆ.

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಹಿರಿಯ ಕ್ರಿಕೆಟ್ ಪಟು ಎನ್ಆರ್‌ಎಚ್ ರಮೇಶ್ ನಿಧನ
ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್‌ಎಚ್ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್‌ನ ನಾಯಕನಾಗಿದ್ದ ಎನ್.ಆರ್.ಎಚ್.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್, 2ನೇ ಮೇನ್‌ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.
90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್ಆರ್‌ಎಚ್ ರಮೇಶ ನಿಧನಕ್ಕೆ ಎಫ್‌ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್‌ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ3 days agoಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ
-
ದಿನದ ಸುದ್ದಿ2 days agoಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
-
ದಿನದ ಸುದ್ದಿ2 days agoರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
-
ದಿನದ ಸುದ್ದಿ2 days agoಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
-
ದಿನದ ಸುದ್ದಿ3 days agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ3 days ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ3 days agoವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್
-
ದಿನದ ಸುದ್ದಿ3 days agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ



