ಕ್ರೀಡೆ
ಬೆಳಗಿನ ಪ್ರಮುಖ ಸುದ್ದಿಗಳು
ಬೆಳಗಿನ ಪ್ರಮುಖ ಸುದ್ದಿಗಳು
- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ಇಂದು ನಡೆಯಲಿದೆ. ಆಯವ್ಯಯದಲ್ಲಿ ಅಂಗೀಕಾರವಾಗಿರುವ ಹಲವಾರು ಯೋಜನೆಗಳಿಗೆ ಸಂಪುಟ ಅನುಮೋದನೆ ನೀಡುವ ಸಾಧ್ಯತೆ ಎಂದು ಮೂಲಗಳು ತಿಳಿಸಿವೆ.
- ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ನಾಲ್ಕು ಸ್ಥಾನಗಳ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಜಯರಾಮ್ ರಮೇಶ್ ಆಯ್ಕೆಯಾಗಿದ್ದು, ಇಂದು ನಾಮಪತ್ರ ಸಲ್ಲಿಸುವ ನಿರೀಕ್ಷೆ ಇದೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ. ನಾಮಪತ್ರ ಸಲ್ಲಿಸಲು ನಾಳೆ ಕೊನೆಯ ದಿನ. ಬಿಜೆಪಿ ಎರಡು ಸ್ಥಾನದ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಚಿತ್ರನಟ ಜಗ್ಗೇಶ್ ಅವರ ಹೆಸರನ್ನು ಅಖೈರಗೊಳಿಸಿದ್ದು, ಇಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿದೆ. ನಾಲ್ಕನೇ ಅಭ್ಯರ್ಥಿ ಜೆಡಿಎಸ್ ಬೆಂಬಲ ಅನಿವಾರ್ಯವಾಗಿದ್ದು, ಅಭ್ಯರ್ಥಿ ಯಾರು ಎಂಬುದು ಕುತೂಹಲ ಮೂಡಿಸಿದೆ.
- ಸ್ವಿಡ್ಜೆರ್‌ಲ್ಯಾಂಡಿನ ಜಿನಿವಾದಲ್ಲಿ ನಡೆಯುತ್ತಿರುವ ವರ್ಲ್ಡ್ ಸಮ್ಮಿಟ್ ಆನ್ ಇನ್ಫಾರ್ಮೇಶನ್ ಶೃಂಗಸಭೆ ಇಂದಿನ ವರ್ಚುವಲ್ ಅಧಿವೇಶನದಲ್ಲಿ ದಾವಣಗೆರೆ ಮೂಲದ ಹಾಗೂ ಬೆಂಗಳೂರು ಸಾಪ್ಟ್ ವೇರ್ ಕಂಪನಿಯೊಂದರ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ.ಎಲ್ ರಾಕೇಶ್ ಭಾಗವಹಿಸಲಿದ್ದಾರೆ. ಸಾಧನೆಗಳು, ಒಪ್ಪಂದಗಳು ಮತ್ತು ಫಲಿತಾಂಶಗಳ ಕುರಿತು ಅಧಿವೇಶನದಲ್ಲಿ ಚರ್ಚಿಸಲಾಗುತ್ತಿದೆ. ಮಾಹಿತಿ ತಂತ್ರಜ್ಞಾನ ಮತ್ತು ಹಣಕಾಸು ಸೇವೆ ವಿಚಾರವಾಗಿ ಡಾ.ಎಲ್.ರಾಕೇಶ್ ವಿಷಯ ಮಂಡಿಸಲಿದ್ದಾರೆ. ವಿಶ್ವದ 194ದೇಶಗಳ ಪ್ರತಿನಿಧಿಗಳು ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.
- 17ನೇ ಮುಂಬೈ ಡಾಕ್ಯುಮೆಂಟ್ರಿ ಚಲನಚಿತ್ರ ಹಾಗೂ ಅನಿಮೇಷನ್ ಫಿಲ್ಮ್ 2022ಕ್ಕೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಚಾಲನೆ ನೀಡಿದರು. ಈ ಉತ್ಸವದಲ್ಲಿ 30 ದೇಶಗಳ 102ಚಲನಚಿತ್ರಗಳು ಪ್ರದರ್ಶನವಾಗಲಿವೆ. ಹಲವಾರು ಚಲನಚಿತ್ರ ವಿಮರ್ಶಕರು ಹಾಗೂ ಅಂತಾರಾಷ್ಟ್ರೀಯ ಚಲನಚಿತ್ರ ಝೂರಿಗಳು ಭಾಗವಹಿಸಿದ್ದಾರೆ.
- ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ದೇಶಾದ್ಯಂತ ಇರುವ ಅನಾಥ ಮಕ್ಕಳೊಂದಿಗೆ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಲಿದ್ದಾರೆ. ಪ್ರಧಾನಮಂತ್ರಿ ಮಕ್ಕಳ ಪಾಲನಾ ಯೋಜನೆಯ ಫಲಾನುಭವಿಗಳಾದ ಥಾಣೆ ಜಿಲ್ಲೆಯ 43 ಅನಾಥರು ಸಹ ಜಿಲ್ಲಾಧಿಕಾರಿಗಳ ಕಚೇರಿಯಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಪೈಕಿ, 18 ವರ್ಷಕ್ಕಿಂತ ಮೇಲ್ಪಟ್ಟವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಾಜರಿರುತ್ತಾರೆ ಮತ್ತು 18ವರ್ಷಕ್ಕಿಂತ ಕಡಿಮೆ ವಯಸ್ಸಿನವರು ವೆಬ್‌ಕಾಸ್ಟ್ ಮೂಲಕ ಪಾಲ್ಗೊಳ್ಳಲಿದ್ದಾರೆ.
- ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಇಲಾಖೆಗಳ ವ್ಯಾಪ್ತಿಯ ಸುಮಾರು 16 ಯೋಜನೆಗಳು ಮತ್ತು ಕಾರ್ಯಕ್ರಮಗಳ ಫಲಾನುಭವಿಗಳು ಹಾಗೂ ಒಂಬತ್ತು ಸಚಿವಾಲಯಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಗರೀಬ್‌ಕಲ್ಯಾಣ್ ಸಮ್ಮೇಳನ’ ಎಂಬ ಹೆಸರಿನ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮ ಅಂದು ಶಿಮ್ಲಾದಲ್ಲಿ ನಡೆಯಲಿದೆ. ಎಲ್ಲಾ ರಾಜ್ಯಗಳ ರಾಜಧಾನಿ ಹಾಗೂ ಜಿಲ್ಲಾ ಕೇಂದ್ರಗಳಲ್ಲೂ ಕಾರ್ಯಕ್ರಮ ಏಕಕಾಲಕ್ಕೆ ಆಯೋಜಿಸಲಾಗಿದೆ.
- ಕೈಮಗ್ಗ ನೇಕಾರಿಕೆ ಪ್ರೋತ್ಸಾಹಿಸಲು ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಪ್ರಸಕ್ತ ಹಣಕಾಸು ವರ್ಷದಲ್ಲಿ ಮುದ್ರಾ ಯೋಜನೆಯಡಿಯಲ್ಲಿ ನೇಕಾರರಿಗೆ ಬ್ಯಾಂಕ್ ಸಾಲ ಸೌಲಭ್ಯ ಒದಗಿಸಲು ಚಾಮರಾಜನಗರ ಜಿಲ್ಲೆಯ ಅರ್ಹ ನೇಕಾರರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
- ಮಂಗಳೂರು ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ 931 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕೈಗೊಂಡಿರುವ ಕಾಮಗಾರಿಗಳು ಮುಂಬರುವ ಡಿಸೆಂಬರ್ ಅಥವಾ ಜನವರಿಯೊಳಗೆ ಪೂರ್ಣಗೊಳ್ಳಲಿವೆ. 48 ಕಾಮಗಾರಿಗಳು ಪ್ರಾರಂಭವಾಗಿ ಕೆಲವು ಭಾಗಶಃ ಹಾಗೂ ಕೆಲವು ಪೂರ್ಣಗೊಳ್ಳುವ ಹಂತದಲ್ಲಿವೆ, ಈ ಕಾಮಗಾರಿಗಳು ಕೇವಲ ಮಂಗಳೂರು ನಗರಕ್ಕೆ ಮಾತ್ರ ಸೀಮಿತವಾಗಿಲ್ಲ, ಅವುಗಳ ಲಾಭ ಸಂಪೂರ್ಣವಾಗಿ ಜಿಲ್ಲೆಯ ಜನತೆಗೆ ದೊರೆಯಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.
- 17ನೇ ಮುಂಬೈ ಡಾಕ್ಯೂಮೆಂಟ್ರಿ ಚಲನಚಿತ್ರ ಹಾಗೂ ಅನಿಮೇಷನ್ ಫಿಲ್ಮ್ 2022ಕ್ಕೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಚಾಲನೆ ನೀಡಿದರು. ಈ ಉತ್ಸವದಲ್ಲಿ 30 ದೇಶಗಳ 102 ಚಲನಚಿತ್ರಗಳು ಪ್ರದರ್ಶನವಾಗಲಿವೆ. ಹಲವಾರು ಚಲನಚಿತ್ರ ವಿಮರ್ಶಕರು ಹಾಗೂ ಅಂತಾರಾಷ್ಟ್ರೀಯ ಚಲನಚಿತ್ರ ಝೂರಿಗಳು ಭಾಗವಹಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಹಿರಿಯ ಕ್ರಿಕೆಟ್ ಪಟು ಎನ್ಆರ್‌ಎಚ್ ರಮೇಶ್ ನಿಧನ
ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್‌ಎಚ್ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್‌ನ ನಾಯಕನಾಗಿದ್ದ ಎನ್.ಆರ್.ಎಚ್.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್, 2ನೇ ಮೇನ್‌ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.
90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್ಆರ್‌ಎಚ್ ರಮೇಶ ನಿಧನಕ್ಕೆ ಎಫ್‌ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್‌ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ3 days agoಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
-
ದಿನದ ಸುದ್ದಿ4 days agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
-
ದಿನದ ಸುದ್ದಿ5 days agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ


