ಕ್ರೀಡೆ
ಬೆಳಗಿನ ಪ್ರಮುಖ ಸುದ್ದಿಗಳು
ಬೆಳಗಿನ ಪ್ರಮುಖ ಸುದ್ದಿಗಳು
- ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ಜೂನ್ 10ರಂದು ನಡೆಲಿರುವ ಚುನಾವಣೆಯಲ್ಲಿ ಬಿಜೆಪಿಯಿಂದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪುನರಾಯ್ಕೆ ಬಯಸಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ ಇನ್ನೊರ್ವ ಅಭ್ಯರ್ಥಿ ಚಿತ್ರನಟ ಜಗ್ಗೇಶ್ ಅವರೂ ಸಹ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಬುಧವಾರ ನಾಮಪತ್ರ ಪರಿಶೀಲನೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ಜೆಡಿಎಸ್ ಸಹ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ ಎಂದು ವರದಿಯಾಗಿದೆ.
- ಕೇಂದ್ರ ಸರ್ಕಾರದ ಅಭಿವೃದ್ಧಿ ಯೋಜನೆ ಗರೀಬ್ ಕಲ್ಯಾಣ್ ಸಮ್ಮೇಳನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂದು ಹಿಮಾಚಲ ಪ್ರದೇಶದ ಸಿಮ್ಲಾದಲ್ಲಿ ಭಾಗವಹಿಸಿ ಫಲನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಆಯಾ ರಾಜ್ಯದ ರಾಜಧಾನಿಯಲ್ಲಿ ಹಾಗೂ ಜಿಲ್ಲಾ ಕೇಂದ್ರಗಳಲ್ಲಿಯೂ ಈ ಕಾರ್ಯಕ್ರಮ ನಡೆಯಲಿದೆ. 21 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು 10ಕೋಟಿ ರೈತ ಸಮುದಾಯಕ್ಕೆ ವರ್ಗಾವಣೆ ಮಾಡಲಿದೆ ಎಂದು ಪ್ರಕಟಣೆ ತಿಳಿಸಿದೆ.
- ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವ ಭಗವಂತ್ ಕೂಬ, ಬೀದರ್‌ನ ಡಾ.ಚನ್ನಬಸವೇಶ್ವರ ಪಟ್ಟದೇವರು ರಂಗಮಂದಿರದಲ್ಲಿ, ಪ್ರಹ್ಲಾದ್ ಜೋಷಿ, ಧಾರವಾಡದಲ್ಲಿ, ಸಚಿವ ಎ. ನಾರಾಯಣಸ್ವಾಮಿ ಚಿತ್ರದುರ್ಗದಿಂದ ಹಾಗೂ ಸಚಿವೆ ಶೋಭಾ ಕರಂದ್ಲಾಜೆ ಉಡುಪಿಯಿಂದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
- ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ನಿವೃತ್ತಿಯಾಗಲಿರುವ ಹಿನ್ನೆಲೆಯಲ್ಲಿ ಸೋಮವಾರದಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವಿಕುಮಾರ್ ಅವರನ್ನು ಸನ್ಮಾನಿಸಿದರು. ನಿಯೋಜಿತ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸಂಪುಟದ ಸಹೋದ್ಯೋಗಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
- ಬೆಂಗಳೂರಿನ ರಾಜಭವನದಲ್ಲಿ ನೂತನವಾಗಿ ಪ್ರತಿಷ್ಠಾಪಿಸಲಾದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಕಂಚಿನ ಪುತ್ಥಳಿಯನ್ನು ರಾಜ್ಯಪಾಲ ಥಾವರ್‌ಚೆಂದ್ ಗೆಹ್ಲೋಟ್ ನಿನ್ನೆ ಅನಾವರಣ ಗೊಳಿಸಿದರು. ಏಪ್ರಿಲ್ 14ರಂದು ಆಚರಿಸಲ್ಪಡುವ ಅಂಬೇಡ್ಕರ್ ಜಯಂತಿಯನ್ನು ವಿಶ್ವ ಜ್ಞಾನದಿನವನ್ನಾಗಿ ಆಚರಿಸಲು ಅವರ 125ನೇ ಜನ್ಮದಿನದ ಮುನ್ನಾ ದಿನದಂದು ವಿಶ್ವ ಸಂಸ್ಥೆ ಘೋಷಿಸಿರುವುದು ಸ್ಮರಣೀಯ.
- ಬೆಂಗಳೂರಿನ ಕಂದಾಯ ಭವನದಲ್ಲಿ ನಗರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್‌ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ 10 ಲಕ್ಷ ರೂಪಾಯಿ ಠೇವಣಿ ಹಾಗೂ 10ನೇ ತರಗತಿಯಲ್ಲಿ ಉತ್ತೀರ್ಣರಾದ ಮಕ್ಕಳಿಗೆ ಲ್ಯಾಪ್‌ಟಾಪ್ ನೀಡಲಾಯಿತು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಪಿಎಂ ಕೇರ‍್ಸ್ ಅನುಮೋದಿತ ಮಕ್ಕಳಿಗೆ ಎಲ್ಲಾ ಸೌಲಭ್ಯ ಒದಗಿಸಲು ಪ್ರಧಾನಮಂತ್ರಿ ನೇತೃತ್ವದಲ್ಲಿ ವಿಡಿಯೋ ಸಂವಾದ ನಡೆಯಿತು.
- ಕೇಂದ್ರ ಸರ್ಕಾರದ ಅಭಿವೃದ್ಧಿ ಯೋಜನೆ ಗರೀಬ್ ಕಲ್ಯಾಣ್ ಸಮ್ಮೇಳನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂದು ಹಿಮಾಚಲ ಪ್ರದೇಶದ ಸಿಮ್ಲಾದಲ್ಲಿ ಭಾಗವಹಿಸಿ ಫಲನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಆಯಾ ರಾಜ್ಯದ ರಾಜಧಾನಿಯಲ್ಲಿ ಹಾಗೂ ಜಿಲ್ಲಾ ಕೇಂದ್ರಗಳಲ್ಲಿಯೂ ಈ ಕಾರ್ಯಕ್ರಮ ನಡೆಯಲಿದೆ. 21 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು 10 ಕೋಟಿ ರೈತ ಸಮುದಾಯಕ್ಕೆ ವರ್ಗಾವಣೆ ಮಾಡಲಿದೆ ಎಂದು ಪ್ರಕಟಣೆ ತಿಳಿಸಿದೆ.
- ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವ ಭಗವಂತ್ ಕೂಬ, ಬೀದರ್‌ನ ಡಾ.ಚನ್ನಬಸವೇಶ್ವರ ಪಟ್ಟದೇವರು ರಂಗಮಂದಿರದಲ್ಲಿ, ಪ್ರಹ್ಲಾದ್ ಜೋಷಿ, ಧಾರವಾಡದಲ್ಲಿ, ಸಚಿವ ಎ. ನಾರಾಯಣಸ್ವಾಮಿ ಚಿತ್ರದುರ್ಗದಿಂದ ಹಾಗೂ ಸಚಿವೆ ಶೋಭಾ ಕರಂದ್ಲಾಜೆ ಉಡುಪಿಯಿಂದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
- ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ಜೂನ್ 10ರಂದು ನಡೆಲಿರುವ ಚುನಾವಣೆಯಲ್ಲಿ ಬಿಜೆಪಿಯಿಂದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪುನರಾಯ್ಕೆ ಬಯಸಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ ಇನ್ನೊರ್ವ ಅಭ್ಯರ್ಥಿ ಚಿತ್ರನಟ ಜಗ್ಗೇಶ್ ಅವರೂ ಸಹ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಬುಧವಾರ ನಾಮಪತ್ರ ಪರಿಶೀಲನೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ಜೆಡಿಎಸ್ ಸಹ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ ಎಂದು ವರದಿಯಾಗಿದೆ.
- ಕೇಂದ್ರದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ಜನಪರ ಹಾಗೂ ಜನಕಲ್ಯಾಣ ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿ ದಾಪುಗಾಲು ಹಾಕುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ ಸರ್ಕಾರ ಅಧಿಕಾರಕ್ಕೆ ಬಂದು 8 ವರ್ಷ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಸೋಮವಾರ ದೆಹಲಿಯಲ್ಲಿ ಕೇಂದ್ರ ಸರ್ಕಾರದ ಸಾಧನೆಗಳ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಿ ಈ ವಿಷಯ ತಿಳಿಸಿದರು.
- ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ 8 ವರ್ಷಗಳು ಪೂರ್ಣಗೊಂಡಿದೆ. ಬಡವರ ಕಲ್ಯಾಣ, ಉತ್ತಮ ಆಡಳಿತ, ಸೇವೆಯ ಪರಿಕಲ್ಪನೆಗೆ ಒತ್ತು ನೀಡಿ, ಸರ್ಕಾರ ಮಹತ್ವದ ಮೈಲಿಗಲ್ಲು ಸಾಧಿಸಿದೆ. ಸರ್ಕಾರದ ಸೌಲಭ್ಯಗಳನ್ನು ಶೇಕಡ 100ರಷ್ಟು ಜನರಿಗೆ ತಲುಪಿಸುವ ಗುರಿಯೊಂದಿಗೆ ಕಾರ್ಯನಿರ್ವಹಿಸುತ್ತಿದೆ. ದೇಶದ ಪ್ರತಿಯೊಬ್ಬ ನಾಗರಿಕರ ಪರವಾಗಿ ಆಡಳಿತ ನಡೆಸುವುದಾಗಿ ಪ್ರಧಾನಮಂತ್ರಿ ಅವರು ಪ್ರಕಟಿಸಿದ್ದು, ಬಡವರಿಗಾಗಿ ಮೀಸಲಾಗಿರುವ ಕಾರ್ಯಕ್ರಮಗಳಲ್ಲಿ ಯಾವುದೇ ಫಲಾನುಭವಿ ಹೊರಗುಳಿಯಬಾರದು ಎಂದು ನೀಡಿದ್ದ ಹೇಳಿಕೆಯನ್ನು ಸಾಕಾರಗೊಳಿಸುವತ್ತ ಮುನ್ನಡೆಯುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ರಾಘವೇಂದ್ರ ಎನ್ ಬಿ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ದಾವಣಗೆರೆ ವಿಶ್ವವಿದ್ಯಾಲಯದ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ರಾಘವೇಂದ್ರ ಚಿನ್ನದ ಪದಕ ಗೆಲ್ಲುವ ಮೂಲಕ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ..
ದಾವಣಗೆರೆ ನಗರದ ಜಿಎಫ್ ಜಿಸಿ ಕಾಲೇಜಿನಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದಿಂದ ದೇಹದಾರ್ಢ್ಯ ಸ್ಪರ್ಧೆ ಹಾಗೂ ಆಯ್ಕೆ ಗಳು ನಡೆದವು, ಕಾಲೇಜಿನಲ್ಲಿ ಪ್ರಥಮ ಬಿಎ ವ್ಯಾಸಂಗ ಮಾಡುತ್ತಿರುವ ರಾಘವೇಂದ್ರ, ಹಳೇ ಕುಂದುವಾಡದ ಬಸವರಾಜ್, ಲಕ್ಷ್ಮಿದೇವಿ ದಂಪತಿಯ ಪುತ್ರನಾಗಿದ್ದು, ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ದೇಹ ಪ್ರದರ್ಶಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾನೆ.
ಓದಿನ ಜೊತೆಗೆ ತನ್ನ ತಂದೆಯ ಕಿರಾಣಿ ಅಂಗಡಿಯಲ್ಲಿ ಕೆಲಸ ಮಾಡುತ್ತಾ ತನ್ನ ಕನಸನ್ನು ನನಸು ಮಾಡಿಕೊಳ್ಳಲು ಬಿಡುವಿನ ವೇಳೆಯಲ್ಲಿ ಕೋಚ್ ಮಧು ಪೂಜಾರ್ ಮಾರ್ಗದರ್ಶನದಲ್ಲಿ ದೇಹ ಹುರಿಗೊಳಿಸಿ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಗಳಿಸಿದ್ದಾನೆ, ಸ್ಪರ್ಧೆಯಲ್ಲಿ ಬೈಸಿಪ್ಸ್, ಲ್ಯಾಟ್ ಸ್ಟ್ರೈಡ್ ಪೋಸ್ ಕೊಟ್ಟು ನೋಡುಗರನ್ನು, ತೀರ್ಪುಗಾರರನ್ನು ಬೆರಗುಗೊಳಿಸಿದ್ದಾನೆ.
ಇನ್ನೂ ರಾಘವೇಂದ್ರನ ದೇಹ ಪ್ರದರ್ಶನ ವೇಳೆ ಶಿಳ್ಳೆ, ಚಪ್ಪಾಳೆ ಕೇಳಿ ಬಂದವು, ರಾಘವೇಂದ್ರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದು ಬರುವ ಫೆಬ್ರುವರಿಯಲ್ಲಿ ಮಂಗಳೂರಿನಲ್ಲಿ ಸ್ಪರ್ಧೆ ನಡೆಯಲಿದೆ, ಇನ್ನೂ ಚಿನ್ನದ ಪದಕ ಗಳಿಸಿರುವ ರಾಘವೇಂದ್ರನಿಗೆ ಜಿಎಫ್ ಜಿಸಿ ಕಾಲೇಜು ಆಡಳಿತ ಮಂಡಳಿ, ಮಾರ್ಗದರ್ಶಕರು, ಹಳೇ ಕುಂದುವಾಡ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ಅದ್ವಿತೀಯ 2024ರಲ್ಲಿ ಜಿಎಂಐಟಿ ಕಾಲೇಜಿನ ಸಿಎಸ್ಇ ವಿದ್ಯಾರ್ಥಿಗಳ ಪೋಸ್ಟರ್ ಪ್ರಸ್ತುತಿಯಲ್ಲಿ ತೃತೀಯ ಸ್ಥಾನ
ಸುದ್ದಿದಿನ,ದಾವಣಗೆರೆ:ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ (ಸಿ.ಎಸ್.ಇ) ವಿಭಾಗದ 5ನೇ ಸೆಮಿಸ್ಟರ್ ‘ಎ’ ವಿಭಾಗದ ವಿದ್ಯಾರ್ಥಿಗಳಾದ ಅಭಿಷೇಕ್ ಯು. ಮತ್ತು ಅಫ್ರಿದ್ ಆರ್.ಕೆ. ಈ ಇಬ್ಬರು ಇತ್ತೀಚಿಗೆ ಹುಬ್ಬಳ್ಳಿಯ ಕೆಎಲ್‌ಇ ತಾಂತ್ರಿಕ ಸಂಸ್ಥೆಯಲ್ಲಿ ನಡೆದ ಅದ್ವಿತೀಯ 2024ರಲ್ಲಿ ಪೋಸ್ಟರ್ ಪ್ರಸ್ತುತಿಯಲ್ಲಿ ತೃತೀಯ ಸ್ಥಾನವನ್ನು ಗಳಿಸಿದ್ದಾರೆ.
ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಎಂ.ಬಿ. ಸಂಜಯ್ ಪಾಂಡೆ, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಬಿ.ಎನ್. ವೀರಪ್ಪ, ಇನ್ಫಾರ್ಮಶನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಎಸ್. ನೀಲಾಂಬಿಕೆ, ವಿದ್ಯಾರ್ಥಿ ವ್ಯವಹಾರಗಳ ವಿಭಾಗದ ಉಪ ನಿರ್ದೇಶಕರಾದ ಎಂ. ಸಂತೋಷ ಕುಮಾರ್, ಜಿಎಂ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಕೆ.ಎಸ್. ಓಂಕಾರಪ್ಪ ಸೇರಿದಂತೆ ಆಡಳಿತ ಮಂಡಳಿ, ವಿಭಾಗದ ಮುಖ್ಯಸ್ಥರು ಮತ್ತು ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ತುಮಕೂರು:ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ತುಮಕೂರಿನಲ್ಲಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಲಾಗಿದ್ದು ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ತುಮಕೂರಿನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಆದಷ್ಟು ಶೀಘ್ರವೇ ಕ್ರೀಡಾಂಗಣ ನಿರ್ಮಾಣ ಮುಗಿಸಿ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಪೂರೈಸಲಾಗುವುದು ಎಂದು ಹೇಳಿದ್ದಾರೆ. ಮೈಸೂರಿನಲ್ಲೂ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಬೇಡಿಕೆ ಮುಂದಿಟ್ಟಿದ್ದು ಮೈಸೂರಿನಲ್ಲೂ ಜಾಗ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ಚೆನ್ನೈ-ಮುಂಬೈ ಇಂಡಸ್ಟ್ರೀಯಲ್ ಕಾರಿಡಾರ್ ಗಾಗಿ ಆರು ಹಂತದಲ್ಲಿ 20 ಸಾವಿರ ಎಕರೆ ಸ್ವಾಧೀನ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ವಸಂತನರಸಾಪುರದಲ್ಲಿ ಏಷ್ಯಾದಲ್ಲಿಯೇ ಅತಿ ದೊಡ್ಡ ಟೌನ್ ಶಿಪ್ ಪ್ರಾರಂಭವಾಗಿದೆ ಎಂದು ತಿಳಿಸಿದ ಅವರು, ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂದು ಕೈಗಾರಿಕೆಗಳಿಗೆ ಮನವಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243