ದಿನದ ಸುದ್ದಿ
ಪೆಟ್ರೋಲ್‌ನಲ್ಲಿ ಶೇಕಡ 10 ರಷ್ಟು ಎಥೆನಾಲ್ ಬಳಕೆಗೆ ಕ್ರಮ : ಪ್ರಧಾನಿ ನರೇಂದ್ರ ಮೋದಿ
ಸುದ್ದಿದಿನ ಡೆಸ್ಕ್ : ವಿಶ್ವ ಪರಿಸರ ದಿನದ ಅಂಗವಾಗಿ ದೆಹಲಿಯ ವಿಜ್ಞಾನ ಭವನದಲ್ಲಿಂದು ಏರ್ಪಡಿಸಲಾಗಿರುವ ಮಣ್ಣಿನ ರಕ್ಷಣೆ ಕುರಿತ ಆಂದೋಲನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಿದರು.
ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಪೆಟ್ರೋಲ್‌ನಲ್ಲಿ ಎಥೆನಾಲ್ ಬಳಕೆ ಪ್ರಮಾಣವನ್ನು ಶೇಕಡ 10ರಷ್ಟು ಹೆಚ್ಚಿಸುವ ಮೂಲಕ, ಭಾರತ ನಿಗದಿತ ಅವಧಿಗೂ 5ತಿಂಗಳು ಮುಂಚಿತವಾಗಿ ಈ ಗುರಿ ಸಾಧಿಸಿದೆ ಎಂದರು.
ಇಂಧನ ಆಮದು ಪ್ರಮಾಣ ಕಡಿತಗೊಳಿಸಿ, ಎಥೆನಾಲ್ ಮಿಶ್ರಣದಿಂದ ತೈಲದ ಹೊರೆ ಕಡಿಮೆ ಮಾಡುವ ಉದ್ದೇಶ ಹೊಂದಲಾಗಿದೆ ಎಂದರು. ಪರಿಸರ ಸಂರಕ್ಷಣೆಯ ಜತೆಗೆ ಹವಾಮಾನ ವೈಪರಿತ್ಯದಿಂದಾಗುವ ಹಾನಿ ತಡೆಗೆ ಅಗತ್ಯವಾದ ಸುಧಾರಣಾ ಕ್ರಮಗಳನ್ನು ಜಾರಿಗೆ ತರಲಾಗುವುದು; ನೈಸರ್ಗಿಕ ಸಂಪತ್ತು ರಕ್ಷಣೆಯ ಜತೆಗೆ ಅದನ್ನು ಉಳಿಸುವುದು ಎಲ್ಲರ ಕರ್ತವ್ಯವಾಗಿದೆ. ಈಗಾಗಲೇ ಆರಂಭವಾಗಿರುವ ಸ್ವಚ್ಛ ಭಾರತ್ ಮಿಷನ್, ನಮಾಮಿ ಗಂಗಾ, ಒನ್ ಸನ್ ಒನ್ ಗ್ರಿಡ್ ಸಂದೇಶವನ್ನು ಸಾರುವ ಅಗತ್ಯವಿದೆ ಎಂದು ಅವರು ಪ್ರತಿಪಾದಿಸಿದರು.
ದೇಶಾದ್ಯಂತ ಇದುವರೆಗೆ 22 ಕೋಟಿ ಮಣ್ಣು ಆರೋಗ್ಯ ಕಾರ್ಡ್‌ಗಳನ್ನು ರೈತ ಸಮುದಾಯಕ್ಕೆ ವಿತರಿಸಲಾಗಿದೆ. ಗಂಗಾ ನದಿಯ ತಟದಲ್ಲಿರುವ ಗ್ರಾಮಗಳಲ್ಲಿ ಪರಿಸರ ಸಂರಕ್ಷಣೆ ಮತ್ತು ಜಲಮಾಲಿನ್ಯ ತಡೆಗೆ ಅನೇಕ ಯೋಜನೆಗಳನ್ನು ಕಾರ್ಯಗತಗೊಳಿಸಿ, ಅನುಷ್ಠಾನಕ್ಕೆ ತರಲಾಗುತ್ತಿದೆ ಎಂದು ಪ್ರಧಾನಿ ತಿಳಿಸಿದರು.
ಮಣ್ಣಿನ ಆರೋಗ್ಯ ಕ್ಷೀಣಿಸುತ್ತಿರುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ’ಮಣ್ಣು ಉಳಿಸಿ ಚಳವಳಿ ಎಂಬುದನ್ನು ಜಾಗತಿಕ ಆಂದೋಲನವನ್ನಾಗಿಸಲು ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಆಂದೋಲನವನ್ನು ಸದ್ಗುರು ಜಗ್ಗಿ ವಾಸುದೇವ್ ಇದೇ ವರ್ಷದ ಮಾರ್ಚ್‌ನಲ್ಲಿ, 27 ದೇಶಗಳಿಗೆ, 100 ದಿನಗಳ ಕಾಲ ಮೋಟಾರ್ ಸೈಕಲ್‌ನಲ್ಲಿ ಸಂಚರಿಸುವ ಮೂಲಕ ಆರಂಭಿಸಿದ್ದರು.
ದೇಶದಲ್ಲಿ ಮಣ್ಣಿನ ಫಲವತ್ತತೆ ವೃದ್ಧಿಸುವ ನಿಟ್ಟಿನಲ್ಲಿ ಜಗತ್ತಿನಾದ್ಯಂತ ವ್ಯಕ್ತವಾಗುತ್ತಿರುವ ಕಳಕಳಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುವ ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಪಾಲ್ಗೊಳ್ಳುತ್ತಿರುವುದಕ್ಕೆ ವಿಶೇಷ ಮಹತ್ವ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಸದ್ಗುರು ಜಗ್ಗಿ ವಾಸುದೇವ್ ಮಣ್ಣು ಸಂರಕ್ಷಣೆ ಕುರಿತ ವಸ್ತು ಪ್ರದರ್ಶನವನ್ನು ವೀಕ್ಷಿಸಿದರು.
On #WorldEnvironmentDay, let us pledge to make 'LiFE – Lifestyle For Environment' a global mass movement. https://t.co/prxaGXf9R9
— Narendra Modi (@narendramodi) June 5, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


