ಕ್ರೀಡೆ
ಬೆಳಗಿನ ಪ್ರಮುಖ ಸುದ್ದಿಗಳು
ಬೆಳಗಿನ ಪ್ರಮುಖ ಸುದ್ದಿಗಳು
- ರಾಜ್ಯಸಭೆಯ ದ್ವೈವಾರ್ಷಿಕ ಚುನಾವಣೆಯಲ್ಲಿ 41 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿದಂತೆ 4 ರಾಜ್ಯಗಳ 16 ಸ್ಥಾನಗಳಿಗೆ ಇಂದು ಚುನಾವಣೆ ನಡೆಯಲಿದೆ. ಕರ್ನಾಟಕದ ೪ ಸ್ಥಾನಗಳಿಗೆ ಬಿಜೆಪಿಯಿಂದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ನಟ ಜಗ್ಗೇಶ್ ಮತ್ತು ಲೆಹರ್ ಸಿಂಗ್, ಕಾಂಗ್ರೆಸ್‌ನಿಂದ ಜಯರಾಮ್ ರಮೇಶ್ ಮತ್ತು ಮನ್ಸೂರ್ ಅಲಿಖಾನ್ ಹಾಗೂ ಜೆಡಿಎಸ್‌ನಿಂದ ಕುಪೇಂದ್ರ ರೆಡ್ಡಿ ಸೇರಿದಂತೆ ಒಟ್ಟು 6 ಅಭ್ಯರ್ಥಿಗಳು ಕಣದಲಿದ್ದಾರೆ. ವಿಧಾನಸಭೆಯ ಸದಸ್ಯರ ಸಂಖ್ಯಾ ಬಲದ ಆಧಾರದ ಮೇಲೆ ಬಿಜೆಪಿಯಿಂದ ಇಬ್ಬರು ಹಾಗೂ ಕಾಂಗ್ರೆಸ್ ನಿಂದ ಓರ್ವ ಅಭ್ಯರ್ಥಿ ನಿರಾಯಾಸವಾಗಿ ಗೆಲ್ಲುವ ಅವಕಾಶವಿದೆ. ನಾಲ್ಕನೇ ಅಭ್ಯರ್ಥಿ ಫಲಿತಾಂಶ ಕುತೂಹಲ ಮೂಡಿಸಿದೆ.
- ಭತ್ತ, ಜೋಳ, ರಾಗಿ ದ್ವಿದಳ ಧಾನ್ಯಗಳು ಸೇರಿದಂತೆ ೧೪ ಕೃಷಿ ಉತ್ಪನ್ನಗಳಿಗೆ ಕೇಂದ್ರ ಸರ್ಕಾರ 2022-23ನೇ ಸಾಲಿಗಾಗಿ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಿದೆ. ಬೇಸಾಯದ ಪ್ರದೇಶವನ್ನು ವಿಸ್ತರಿಸಲು ಹಾಗೂ ವಿವಿಧ ಬೆಳೆಗಳನ್ನು ಬೆಳೆಯಲು ರೈತರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಕೃಷಿ ಸಚಿವ ಬಿ. ಸಿ. ಪಾಟೀಲ್ ಹಾವೇರಿ ಜಿಲ್ಲೆ ಹಿರೇಕೆರೂರಿನಲ್ಲಿ ಹೇಳಿದ್ದಾರೆ.
- ಮಂಗಳೂರು ಹೊರವಲಯದ ಪಿಲಿಕುಳ ನಿಸರ್ಗಧಾಮದಲ್ಲಿ ನಾಳೆ(11) ಮತ್ತು ನಾಡಿದ್ದು(12) ಹಣ್ಣುಗಳ ಉತ್ಸವ ಹಾಗೂ ಹಲಸು ಮೇಳ ಆಯೋಜಿಸಲಾಗಿದೆ. ಪ್ರಾದೇಶಿಕ ಹಾಗೂ ಇತರೆ ರಾಜ್ಯಗಳ ವಿವಿಧ ತಳಿಯ ಹಣ್ಣುಗಳೊಂದಿಗೆ ಔಷಧೀಯ ಗಿಡಗಳು, ಕಸಿ ಗಿಡಗಳು, ಬೀಜಗಳು, ಸಾವಯವ ಬಳಗದ ವಿವಿಧ ಆಹಾರ ಪದಾರ್ಥಗಳು ಹಾಗೂ ಹಣ್ಣುಗಳಿಂದ ತಯಾರಿಸಿದ ಖಾದ್ಯ, ಪಾನೀಯಗಳನ್ನು ಬೆಳೆಗಾರರೇ ತಂದು ಮಾರಾಟ ಮಾಡಲಿದ್ದಾರೆ.
- ದೇಶದ 16ನೇ ರಾಷ್ಟ್ರಪತಿ ಆಯ್ಕೆಗಾಗಿ ಜುಲೈ 18ರಂದು ಚುನಾವಣೆ ನಡೆಯಲಿದೆ. ದೆಹಲಿಯಲ್ಲಿ ನಿನ್ನೆ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಇದೇ ಜೂನ್ 15ರಂದು ಅಧಿಸೂಚನೆ ಪ್ರಕಟವಾಗಲಿದ್ದು, ನಾಮಪತ್ರ ಸಲ್ಲಿಕೆಗೆ ಇದೇ 29ರಂದು ಕಡೆಯ ದಿನ ಎಂದರು. ಜುಲೈ ೨೧ರಂದು ಮತ ಎಣಿಕೆ ನಡೆಯಲಿದೆ.
- ಎರಡು ದಿನಗಳ ವಿಶೇಷ ಆಸಿಯಾನ್-ಭಾರತ ವಿದೇಶಾಂಗ ಸಚಿವರ ಸಮಾವೇಶ ಇದೇ 16ರಂದು ದೆಹಲಿಯಲ್ಲಿ ಆರಂಭಗೊಳ್ಳಲಿದೆ. ಇದೇ ಪ್ರಥಮ ಬಾರಿಗೆ ಭಾರತ ಈ ಸಮಾವೇಶ ಆಯೋಜಿಸಿದ್ದು, ಇದರೊಂದಿಗೆ ದೆಹಲಿ ಮಾತುಕತೆಯ 12ನೇ ಆವೃತ್ತಿ ಸಹ ನಡೆಯಲಿದೆ ಎಂದು ವಿದೇಶಾಂಗ ವಕ್ತಾರ ಅರಿಂದಮ್ ಬಾಗ್ಚಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
2024ರ ಕ್ರೀಡಾ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಸುದ್ದಿದಿನಡೆಸ್ಕ್:ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ 2025ರ ಕ್ರೀಡಾ ಪ್ರಶಸ್ತಿಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.
ಕ್ರೀಡೆಗಳಲ್ಲಿನ ಶ್ರೇಷ್ಠತೆಯನ್ನು ಗುರುತಿಸಲು ಮತ್ತು ಗೌರವಿಸಲು ಪ್ರತಿ ವರ್ಷ ಕ್ರೀಡಾ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಯನ್ನು ಕ್ರೀಡಾ ಕ್ಷೇತ್ರದಲ್ಲಿ ಅದ್ಭುತ ಮತ್ತು ಅತ್ಯುತ್ತಮ ಪ್ರದರ್ಶನಕ್ಕಾಗಿ ನೀಡಲಾಗುತ್ತದೆ. ಕ್ರೀಡೆಯಲ್ಲಿ ಜೀವಮಾನದ ಕೊಡುಗೆಗಾಗಿ ಅರ್ಜುನ ಪ್ರಶಸ್ತಿಯನ್ನು ಪರಿಚಯಿಸಲಾಗಿದೆ.
ಪ್ರತಿಷ್ಠಿತ ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರನ್ನು ತರಬೇತಿ ನೀಡಿದ ತರಬೇತುದಾರರಿಗೆ ದ್ರೋಣಾಚಾರ್ಯ ಪ್ರಶಸ್ತಿ ನೀಡಲಾಗುತ್ತದೆ. ಪ್ರಶಸ್ತಿಗಾಗಿ ಅರ್ಹ ಕ್ರೀಡಾಪಟುಗಳು, ತರಬೇತುದಾರರು ಮತ್ತು ಸಂಘಗಳು ಅರ್ಜಿಗಳನ್ನು ಆನ್ಲೈನ್ ಪೋರ್ಟಲ್ https://dbtyas-sports.gov.in/ ನಲ್ಲಿ ನವೆಂಬರ್ 14 ರೊಳಗೆ ಸಲ್ಲಿಸಬೇಕು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ದಾವಣಗೆರೆ | ಜೂಡೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ; ರಾಜ್ಯ ಮಟ್ಟಕ್ಕೆ ಆಯ್ಕೆ
ಸುದ್ದಿದಿನ,ದಾವಣಗೆರೆ:2024 -25 ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಮಹಿಳಾ ಸೇವಾ ಸಮಾಜದ ಟಿ.ಎಂ. ಚಿನ್ನಮ್ಮ ಮಹೇಶ್ವರಯ್ಯ ಮೆಮೋರಿಯಲ್ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಪೂರ್ಣಿಮ ಎಂ ರವರು ಜಿಲ್ಲಾಮಟ್ಟದ ಜೂಡೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ಹಾಗೂ ರಾಜನಹಳ್ಳಿ ಸೀತಮ್ಮ ಬಾಲಕಿಯರ ಪದವಿ ಪೂರ್ವ ಕಾಲೇಜು ದಾವಣಗೆರೆ ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾಗಿತ್ತು.
ದೈಹಿಕ ಶಿಕ್ಷಕರಾದ ಎಂ ಎನ್ ಮರಳ ಸಿದ್ದಪ್ಪರವರ ಮಾರ್ಗದರ್ಶನದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
Olympic Games Paris 2024 | ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ ; ಇಲ್ಲಿದೆ ಇಂದಿನ ಆಟಗಳ ಸಂಪೂರ್ಣ ಮಾಹಿತಿ
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಎರಡನೇ ದಿನವಾದ ಇಂದು ಮಹಿಳೆಯರ 10 ಮೀಟರ್ ಏರ್ ರೈಫಲ್ ಫೈನಲ್ಸ್ ಪಂದ್ಯದಲ್ಲಿ ಮನು ಭಾಕರ್ ಕಂಚು ಪದಕ ಗೆಲ್ಲುವ ಮೂಲಕ ಭಾರತಕ್ಕೆ ಮೊದಲ ಪದಕ ಗೆದ್ದುಕೊಟ್ಟಿದ್ದಾರೆ.
ಈ ಮೂಲಕ ಅವರು, ಒಲಿಂಪಿಕ್ಸ್ನ ಮಹಿಳೆಯರ ಶೂಟಿಂಗ್ ವಿಭಾಗದಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಫೈನಲ್ ಪಂದ್ಯದಲ್ಲಿ ಹೆಚ್ಚಿನ ಕಾಲ 2ನೇ ಸ್ಥಾನದಲ್ಲಿದ್ದು, ಬೆಳ್ಳಿ ಗೆಲ್ಲುವ ಸನಿಹದಲ್ಲಿದ್ದ ಅವರನ್ನು ಕೊನೆ ಕ್ಷಣದಲ್ಲಿ ಕೊರಿಯಾದ ಕಿಮ್‌ಯೆಜಿ ಹಿಂದಿಕ್ಕಿದರು. ಫೈನಲ್ಸ್ನಲ್ಲಿ ಮನುಬಾಕರ್ 221.7 ಅಂಕಗಳ ಮೂಲಕ ಕಂಚು ಪದಕ ಗೆದ್ದರೆ ದಕ್ಷಿಣ ಕೊರಿಯಾದ ಕಿಮ್‌ಯೆಜಿ 241.3 ಅಂಕಗಳ ಮೂಲಕ ಬೆಳ್ಳಿ ಹಾಗೂ ಅದೇ ರಾಷ್ಟ್ರದ ಒಹ್ ಯೆ ಜಿನ್, ದಾಖಲೆಯ 243.2 ಅಂಕಗಳ ಮೂಲಕ ಸ್ವರ್ಣ ಪದಕ ತಮ್ಮದಾಗಿಸಿಕೊಂಡರು. ಮನು ಭಾಕರ್ ಅವರ ಈ ಸಾಧನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಮಹಿಳೆಯರ ಶೂಟಿಂಗ್ ಸ್ಪರ್ಧೆಯಲ್ಲಿ ಪದಕ ಗೆದ್ದ ಭಾರತದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಮನು ಭಾಕರ್ ಪಾತ್ರರಾಗಿದ್ದಾರೆ. ಅವರ ಈ ಸಾಧನೆಯ ಕುರಿತು ಭಾರತಕ್ಕೆ ಹೆಮ್ಮೆಯಿದ್ದು, ಅವರು ಅನೇಕ ಕ್ರೀಡಾಪಟುಗಳು ಹಾಗೂ ವಿಶೇಷವಾಗಿ ಮಹಿಳೆಯರಿಗೆ ಸ್ಫೂರ್ತಿದಾಯಕರಾಗಿದ್ದಾರೆ ಎಂದು ರಾಷ್ಟ್ರಪತಿಯವರು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮನು ಭಾಕರ್ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದು, ಭಾರತಕ್ಕೆ ಇದು ಐತಿಹಾಸಿಕ ಪದಕವಾಗಿದೆ. ಮಹಿಳಾ ಶೂಟಿಂಗ್‌ನಲ್ಲಿ ಭಾರತಕ್ಕೆ ಮೊದಲ ಪದಕ ತಂಡುಕೊಟ್ಟಿರುವುದರಿAದ ಇದೊಂದು ಅಸಾಮಾನ್ಯ ಹಾಗೂ ವಿಶೇಷ ಸಾಧನೆಯಾಗಿದೆ ಎಂದು ತಿಳಿಸಿದ್ದಾರೆ.
ಇಂದು ನಡೆದ ಪುರುಷರ 10 ಮೀಟರ್ ಏರ್ ರೈಫಲ್‌ನಲ್ಲಿ ಭಾರತದ ಅರ್ಜುನ್ ಬಬೂಟ 630.1 ಅಂಕಗಳೊAದಿಗೆ 7ನೇ ಸ್ಥಾನಗಳಿಸಿ ಫೈನಲ್ ಪ್ರವೇಶಿಸಿದ್ದಾರೆ. ಹಾಗೆಯೇ ಮಹಿಳೆಯರ 10 ಮೀಟರ್ ಏರ್ ರೈಫಲ್‌ನಲ್ಲಿ ರಮಿತಾ ಜಿಂದಾಲ್ ಫೈನಲ್ ಪ್ರವೇಶಿಸಿದ್ದಾರೆ. ರಮಿತಾ ಜಿಂದಾಲ್, 631.5 ಅಂಕಗಳೊAದಿಗೆ 5ನೇ ಸ್ಥಾನ ಪಡೆದು ಫೈನಲ್‌ಗೆ ಅರ್ಹತೆ ಪಡೆದರು. ಮತ್ತೊರ್ವ ಮಹಿಳಾ ಶೂಟರ್ ಎಲವೆನಿಲ್ ವಲರಿವನ್ 630.7 ಅಂಕಗಳೊAದಿಗೆ 10ನೇ ಸ್ಥಾನ ಪಡೆದು ಫೈನಲ್ ಪ್ರವೇಶಿಸಲು ವಿಫಲರಾದರು.
ಇಂದು ನಡೆದ ಮಹಿಳೆಯರ ಬ್ಯಾಡ್ಮಿಂಟನ್‌ನ ಸಿಂಗಲ್ಸ್ ವಿಭಾಗದ ತಮ್ಮ ಮೊದಲ ಪಂದ್ಯದಲ್ಲಿ 2 ಒಲಿಂಪಿಕ್ ಪದಕ ವಿಜೇತೆ ಭಾರತದ ಪಿ.ವಿ. ಸಿಂಧೂ, ಮಾಲ್ಡೀವ್ಸ್ನ ಫಾತಿಮತ್ ನಬಾಹ ಅಬ್ದುಲ್ ರಜಾಕ್ ಅವರನ್ನು 21-9, 21-6 ಅಂಕಗಳ ಅಂತರದಲ್ಲಿ ಮಣಿಸಿ ಶುಭಾರಂಭ ಕಂಡಿದ್ದಾರೆ. ಟೆಬಲ್ ಟೆನಿಸ್‌ನ 64ರ ಸುತ್ತಿನಲ್ಲಿ ಭಾರತದ ಶ್ರೀಜಾ ಅಕುಲಾ, ಸ್ವೀಡನ್‌ನ ಕ್ರಿಸ್ಟಿನಾ ಕಾಲ್ಬರ್ಗ್ ವಿರುದ್ಧ ಗೆಲುವು ಸಾಧಿಸಿ ಮುಂದಿನ ಹಂತಕ್ಕೆ ಅರ್ಹತೆ ಪಡೆದರು.
ಮಹಿಳಾ ಬಿಲ್ಲುಗಾರಿಕೆಯಲ್ಲಿ ದೀಪಿಕಾ ಕುಮಾರಿ, ಅಂಕಿತಾ ಭಕತ್ ಹಾಗೂ ಭಜನ್ ಕೌರ್ ಈ ಮೂವರನ್ನೊಳಗೊಂಡ ಭಾರತೀಯ ತಂಡ ಕ್ವಾಟರ್ ಫೈನಲ್‌ನಲ್ಲಿ ನೆದರ್‌ಲ್ಯಾಂಡ್ ತಂಡದ ವಿರುದ್ಧ 0-6 ಅಂಕಗಳಿಂದ ಪರಾಭವಗೊಂಡಿದೆ. ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ವಿಭಾಗದಲ್ಲಿ ಎಚ್.ಎಸ್. ಪ್ರಣೋಯ್, ಜರ್ಮನಿಯ ಫೇಬಿಯನ್ ರೋತ್ ವಿರುದ್ಧ ಹೋರಾಟ ನಡೆಸಲಿದ್ದಾರೆ.
ಪುರುಷರ ಡಬಲ್ಸ್ ವಿಭಾಗದ ಮೊದಲ ಸುತ್ತಿನಲ್ಲಿ ಭಾರತದ ಅನುಭವಿ ಆಟಗಾರರಾದ ರೋಹನ್ ಬೋಪಣ್ಣ ಹಾಗೂ ಶ್ರೀರಾಂ ಬಾಲಾಜಿ ಜೋಡಿ ಫ್ರಾನ್ಸ್ನ ಗೇಲ್ ಮೋನ್ಫಿಲ್ಸ್ ಮತ್ತು ಎಡ್ವರ್ಡ್ ರೋಜರ್ ವ್ಯಾಸೆಲಿನ್ ಜೋಡಿ ವಿರುದ್ಧ ಸೆಣಸಲಿದೆ. ಪ್ಯಾರಿಸ್ ಒಲಿಂಪಿಕ್ಸ್ನ ಟೇಬಲ್ ಟಿನ್ನಿಸ್ ಪಂದ್ಯದ ಮಹಿಳಾ ಸಿಂಗಲ್ಸ್ನಲ್ಲಿ ಭಾರತದ ಶ್ರೀಜಾ ಅಕುಲಾ ಹಾಗೂ ಮಹಿಳಾ ಬಾಕ್ಸಿಂಗ್‌ನ 50 ಕೆಜಿ ವಿಭಾಗದಲ್ಲಿ ನಿಕತ್ ಝರೀನ್ ಮುಂದಿನ ಸುತ್ತಿಗೆ ಪ್ರವೇಶ ಪಡೆದಿದ್ದಾರೆ.
https://x.com/siddaramaiah/status/1817536595970650154?t=otcDD00kQUBeN84H7DvrEA&s=19
ಸುದ್ದಿದಿನ.ಕಾಂ|ವಾಟ್ಸಾಪ್|9980346243