Connect with us

ರಾಜಕೀಯ

ರಾಜ್ಯಸಭೆಗೆ 41 ಅಭ್ಯರ್ಥಿಗಳು ಅವಿರೋಧ ಆಯ್ಕೆ; 4 ರಾಜ್ಯಗಳ 16 ಸ್ಥಾನಗಳಿಗೆ ಇಂದು ಚುನಾವಣೆ

Published

on

ಸುದ್ದಿದಿನ ಡೆಸ್ಕ್ : ರಾಜ್ಯಸಭೆಯ ದ್ವೈವಾರ್ಷಿಕ ಚುನಾವಣೆಯಲ್ಲಿ 41 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿದಂತೆ 4 ರಾಜ್ಯಗಳ 16 ಸ್ಥಾನಗಳಿಗೆ ಇಂದು ಚುನಾವಣೆ ನಡೆಯಲಿದೆ.

ಇಂದು ಮತದಾನದ ನಂತರ ಮತ ಎಣಿಕೆ ನಡೆಯಲಿದ್ದು, ಇಂದೇ ಫಲಿತಾಂಶ ಪ್ರಕಟಗೊಳ್ಳುವ ನಿರೀಕ್ಷೆ ಇದೆ. ಮತದಾನ ನಡೆಯಲಿರುವ 16 ಸ್ಥಾನಗಳ ಪೈಕಿ ಕರ್ನಾಟಕ ಮತ್ತು ರಾಜಸ್ತಾನದ ತಲಾ 4, ಮಹಾರಾಷ್ಟ್ರದ 6 ಮತ್ತು ಹರಿಯಾಣದ 3 ಸ್ಥಾನಗಳು ಸೇರಿವೆ.

ಅವಿರೋಧವಾಗಿ ಆಯ್ಕೆಯಾದ 41 ಅಭ್ಯರ್ಥಿಗಳಲ್ಲಿ ಉತ್ತರಪ್ರದೇಶದ 11, ತಮಿಳುನಾಡಿನ 6, ಬಿಹಾರದ 5, ಆಂಧ್ರಪ್ರದೇಶದ 4, ಮಧ್ಯಪ್ರದೇಶ ಮತ್ತು ಒಡಿಶಾದ 3, ಚತ್ತೀಸ್‌ಗಢ, ಪಂಜಾಬ್, ತೆಲಂಗಾಣ, ಜಾರ್ಖಂಡ್‌ನ ತಲಾ ಇಬ್ಬರು ಮತ್ತು ಉತ್ತರಾಖಂಡದ ಒಬ್ಬರು ಅಭ್ಯರ್ಥಿ ಸೇರಿದ್ದಾರೆ.

ಅವಿರೋಧವಾಗಿ ಆಯ್ಕೆಯಾಗಿರುವ 41 ಸ್ಥಾನಗಳಲ್ಲಿ ಬಿಜೆಪಿಯ 14 ಹಾಗೂ ಕಾಂಗ್ರೆಸ್‌ನ 4 ಅಭ್ಯರ್ಥಿಗಳು ಸೇರಿದ್ದಾರೆ. ಕರ್ನಾಟಕದ 4ಸ್ಥಾನಗಳಿಗೆ ಬಿಜೆಪಿಯಿಂದ ನಿರ್ಮಲಾ ಸೀತಾರಾಮನ್, ನಟ ಜಗ್ಗೇಶ್ ಮತ್ತು ಲೆಹರ್ ಸಿಂಗ್, ಕಾಂಗ್ರೆಸ್‌ನಿಂದ ಜಯರಾಮ್ ರಮೇಶ್ ಮತ್ತು ಮನ್ಸೂರ್ ಅಲಿಖಾನ್ ಹಾಗೂ ಜೆಡಿಎಸ್‌ನಿಂದ ಕುಪೇಂದ್ರ ರೆಡ್ಡಿ ಸೇರಿದಂತೆ ಒಟ್ಟು 6 ಅಭ್ಯರ್ಥಿಗಳು ಕಣದಲಿದ್ದಾರೆ.

ವಿಧಾನಸಭೆಯ ಸದಸ್ಯರ ಸಂಖ್ಯಾ ಬಲದ ಆಧಾರದ ಮೇಲೆ ಬಿಜೆಪಿಯಿಂದ ಇಬ್ಬರು ಹಾಗೂ ಕಾಂಗ್ರೆಸ್ ನಿಂದ ಓರ್ವ ಅಭ್ಯರ್ಥಿ ನಿರಾಯಾಸವಾಗಿ ಗೆಲ್ಲುವ ಅವಕಾಶವಿದೆ. ನಾಲ್ಕನೇ ಅಭ್ಯರ್ಥಿಯ ಫಲಿತಾಂಶ ಕುತೂಹಲ ಮೂಡಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭಾರತ ಹಿಂದೂ ರಾಷ್ಟ್ರವಲ್ಲ ; ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನಡೆಸ್ಕ್:ಭಾರತ ಹಿಂದೂ ರಾಷ್ಟ್ರವಲ್ಲ, ಎಲ್ಲರಿಗೂ ಸೇರಿದ ರಾಷ್ಟ್ರವೆಂಬುದಕ್ಕೆ ಲೋಕಸಭಾ ಚುನಾವಣೆಯ ಫಲಿತಾಂಶ ಸಾಕ್ಷಿ ಎಂದು ನೋಬೆಲ್ ಪ್ರಶಸ್ತಿ ಪುರಸ್ಕ್ರತ ಅಮಾರ್ತ್ಯ ಸೇನ್ ಅವರು ಹೇಳಿರುವುದು ಸರಿಯಿದೆ. ನಾವೂ ಅದನ್ನೇ ಮೊದಲಿನಿಂದಲೂ ಪ್ರತಿಪಾದಿಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹೇಳಿದ್ದಾರೆ.

ಭಾರತ ಬಹುತ್ವದ ದೇಶ, ಯಾವುದೇ ಒಂದು ಸೀಮಿತ ಧರ್ಮಕ್ಕೆ ಸೇರಿದ ರಾಷ್ಟ್ರವಾಗಲು ಸಾಧ್ಯವಿಲ್ಲ. ಹಲವು ಜಾತಿ, ಧರ್ಮ, ಭಾಷೆಯವರು ಇದ್ದು, ಬಹುತ್ವದ ಸಂಸ್ಕೃತಿ ಇರುವ ರಾಷ್ಟವಾಗಿದೆ ಬಂದಿದ್ದಾರೆ.

https://x.com/siddaramaiah/status/1806541235936710672?t=ZkvvqaUNKnoC-p3Ig3X2aA&s=19

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಏಳನೇ ವೇತನ ; ಸರ್ಕಾರಿ ನೌಕರರಿಗೆ ಸಿಎಂ ಸಿಹಿ ಸುದ್ದಿ

Published

on

ಸುದ್ದಿದಿನಡೆಸ್ಕ್:ಏಳನೇ ವೇತನ ಆಯೋಗದ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ್ದು, ಸಚಿವರು ಅನೌಪಚಾರಿಕವಾಗಿ ಒಪ್ಪಿಗೆ ಸೂಚಿಸಿದ್ದಾರೆ. ಆಯೋಗದ ವರದಿಯನ್ನು ಆದಷ್ಟು ಶೀಘ್ರ ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಜುಲೈ 1 ರಿಂದ ಜಾರಿಗೆ ಬರಲಿರುವ ಮೂರು ಹೊಸ ಕ್ರಿಮಿನಲ್ ಕಾಯ್ದೆಗಳು ಯಾವು ಗೊತ್ತಾ..?

Published

on

ಸುದ್ದಿದಿನಡೆಸ್ಕ್:ಮೂರು ಹೊಸ ಕ್ರಿಮಿನಲ್ ಕಾಯ್ದೆಗಳಾದ ಭಾರತೀಯ ನ್ಯಾಯ ಸಂಹಿತೆ-2023, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ಹಾಗೂ ಭಾರತೀಯ ಸಾಕ್ಷ್ಯಾ ಅಧಿನಿಯಮ್-2023 ಜುಲೈ 1 ರಿಂದ ಜಾರಿಗೆ ಬರಲಿವೆ.

ಕಳೆದ ವರ್ಷದ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ ವಿಧೇಯಕಗಳನ್ನು ಸಂಸತ್ತಿನಲ್ಲಿ ಅಂಗೀಕರಿಸಲಾಗಿತ್ತು. ಹೊಸ ಕ್ರಿಮಿನಲ್ ಕಾನೂನುಗಳು ಭಾರತೀಯ ನಾಗರಿಕರನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ.

ಈ ಕಾನೂನುಗಳು ಪ್ರತಿಯೊಬ್ಬರಿಗೂ ಸುಲಭವಾಗಿ ಲಭಿಸಬಹುದಾದ, ಬೆಂಬಲ ನೀಡುವ ಹಾಗೂ ಸಮರ್ಥ ನ್ಯಾಯ ವ್ಯವಸ್ಥೆ ಸೃಷ್ಟಿಸುವ ಗುರಿಯನ್ನು ಹೊಂದಿದೆ. ಹೊಸ ಕ್ರಿಮಿನಲ್ ಕಾನೂನುಗಳ ಹೊಸ ನಿಬಂಧನೆಗಳಲ್ಲಿ ಘಟನೆಗಳನ್ನು ಆನ್‌ಲೈನ್‌ನಲ್ಲಿ ವರದಿ ಮಾಡುವುದು.

ಯಾವುದೇ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸುವುದು. ಸಂತ್ರಸ್ಥರು ಎಫ್‌ಐಆರ್‌ನ ಉಚಿತ ನಕಲನ್ನು ಪಡೆಯಲು ಸಾಧ್ಯವಾಗಿಸಲಿದೆ. ಇದರ ಹೊರತಾಗಿ ಬಂಧನದ ಸಂದರ್ಭದಲ್ಲಿ ವ್ಯಕ್ತಿಯು ತನ್ನ ಪರಿಸ್ಥಿತಿಯ ಬಗ್ಗೆ ಆಯ್ಕೆಯ ವ್ಯಕ್ತಿಗೆ ಮಾಹಿತಿ ನೀಡುವ ಹಕ್ಕನ್ನು ಹೊಂದಿರುತ್ತಾನೆ. ಹೊಸ ಕಾನೂನುಗಳು ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಅಪರಾಧಗಳ ತನಿಖೆಗೆ ಆದ್ಯತೆ ನೀಡಿದ್ದು, ಮಾಹಿತಿಯನ್ನು ದಾಖಲಿಸಿದ 2 ತಿಂಗಳೊಳಗೆ ಸಮಯೋಚಿತವಾಗಿ ಪೂರ್ಣಗೊಳಿಸುವುದನ್ನು ಖಚಿತಪಡಿಸುತ್ತದೆ.

ಹೊಸ ಕ್ರಿಮಿನಲ್ ಕಾನೂನುಗಳಲ್ಲಿ ವಿಧಿವಿಜ್ಞಾನ ತಜ್ಞರು ಗಂಭೀರ ಅಪರಾಧಗಳು ಘಟಿಸಿದ ಸ್ಥಳಗಳಿಗೆ ಭೇಟಿ ನೀಡುವುದು ಮತ್ತು ಸಾಕ್ಷ್ಯ ಸಂಗ್ರಹಿಸುವುದು ಕಡ್ಡಾಯವಾಗಿದೆ. ಸಮೆನ್ಸ್ಗಳನ್ನು ಈಗ ವಿದ್ಯುನ್ಮಾನವಾಗಿ ರವಾನಿಸಬಹುದು, ಕಾನೂನು ಪ್ರಕ್ರಿಯೆಗಳನ್ನು ತ್ವರಿತಗೊಳಿಸಬಹುದು, ಕಾಗದಪತ್ರಗಳ ದಾಖಲೆಗಳನ್ನು ಕಡಿಮೆ ಮಾಡಬಹುದು, ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲರ ನಡುವೆ ಸಮರ್ಥ ಸಂವಹನ ಖಚಿತಪಡಿಸಿಕೊಳ್ಳಬಹುದು.

ಕೇಂದ್ರ ಸರ್ಕಾರವು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳೊಂದಿಗೆ ನಿಯಮಿತ ಸಭೆಗಳನ್ನು ನಡೆಸಿದ್ದು, ಜುಲೈ 1 ರಿಂದ ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೆ ತರಲು ತಂತ್ರಜ್ಞಾನ, ಸಾಮರ್ಥ್ಯವರ್ಧನೆ ಹಾಗೂ ಜಾಗೃತಿ ಮೂಡಿಸುವ ವಿಷಯದಲ್ಲಿ ಸಂಪೂರ್ಣ ಸಜ್ಜುಗೊಂಡಿವೆ ಎಂದು ಮೂಲಗಳು ಹೇಳಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending