Connect with us

ದಿನದ ಸುದ್ದಿ

ಜೂ.21 ರಂದು ಸಂತೆಬೆನ್ನೂರಿನಲ್ಲಿ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ

Published

on

ಸುದ್ದಿದಿನ,ದಾವಣಗೆರೆ : ಜೂ.21 ರಂದು ಬೆಳಿಗ್ಗೆ 5.30ಕ್ಕೆ ಪುಷ್ಕರಣೆ, ಸಂತೆಬೆನ್ನೂರು, ಚನ್ನಗಿರಿ ಇಲ್ಲಿ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಜಿಲ್ಲಾ ಆಯಷ್ ಇಲಾಖೆ ದಾವಣಗೆರೆ ಭಾರತೀಯ ಪುರಾತತ್ವ ಇಲಾಖೆ, ಸ್ಮಾರ್ಟ್‍ಸಿಟಿ ಲಿ., ಹಾಗೂ ಜಿಲ್ಲಾ ಯೋಗ ಒಕ್ಕೂಟ, ಜಿಲ್ಲಾ ಪ್ರವಾಸೋದ್ಯಮ ಇಲಾಖೆ, ಜಿಲ್ಲಾ ಪೋಲಿಸ್ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ತಾಲ್ಲೂಕು ಆಡಳಿತ ಚನ್ನಗಿರಿ, ರಾಜ್ಯ ಎನ್.ಸಿ.ಸಿ ಘಟಕ, ರಾಜ್ಯ ಎನ್.ಸಿ.ಸಿ ಘಟಕ, ಪ್ರಜಾಪಿತ ಬ್ರಹ್ಮಕುಮಾರೀಸ್, ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿ, ಪತಂಜಲಿ ಯೋಗ ಸಮಿತಿ ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ ಉದ್ಘಾಟಿಸುವರು. ಚನ್ನಗಿರಿ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ಅಧ್ಯಕ್ಷ ಕೆ.ಮಾಡಾಳ್ ವಿರೂಪಾಕ್ಷಪ್ಪ ಅಧ್ಯಕ್ಷತೆ ವಹಿಸುವರು.

ಗೌರವಾನ್ವಿತ ಉಪಸ್ಥಿತಿರಾಗಿ ಸಂಸದ ಡಾ.ಜಿ.ಎಂ.ಸಿದ್ದೇಶ್ವರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ, ಜಗಳೂರು ಕ್ಷೇತ್ರದ ಶಾಸಕ ಹಾಗೂ ಕನಾಟಕ ಮಹರ್ಷಿ ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ವಿ.ರಾಮಚಂದ್ರ, ಮಾಯಕೊಂಡ ಕ್ಷೇತ್ರದ ಶಾಸಕ ಹಾಗೂ ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರಾದ ಪ್ರೊ.ಎನ್.ಲಿಂಗಣ್ಣ , ಹಾಗೂ ಕರ್ನಾಟಕ ವಿಧಾನ ಪರಿಷತ್‍ನ ಸರ್ಕಾರಿ ಮುಖ್ಯ ಸಚೇತಕರಾದ, ವೈ.ಎ.ನಾರಾಯಣಸ್ವಾಮಿ ಪಾಲ್ಗೊಳ್ಳುವರು.

ಮುಖ್ಯ ಅತಿಥಿಗಳಾಗಿ ದಾವಣಗೆರೆ ದಕ್ಷಿಣ ವಿಧಾನ ಸಭೆ ಕ್ಷೇತ್ರದ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ, ದಾವಣಗೆರೆ ಉತ್ತರ ವಿಧಾನ ಸಭೆ ಕ್ಷೇತ್ರದ ಶಾಸಕರಾದ ಎಸ್.ಎ ರವೀಂದ್ರನಾಥ್, ಹರಿಹರ ಕ್ಷೇತ್ರದ ಶಾಸಕರಾದ ಎಸ್.ರಾಮಪ್ಪ, ಹಾಗೂ ವಿಧಾನ ಪರಿಷತ್ ಶಾಸಕರಾದ ಆಯನೂರು ಮಂಜುನಾಥ್, ಎಸ್.ಎಲ್.ಭೋಜೇಗೌಡ, ಚಿದಾನಂದ ಎಂ.ಗೌಡ, ಮೋಹನ್ ಕುಮಾರ್ ಕೊಂಡಜ್ಜಿ, ಆರ್.ಶಂಕರ್, ಕೆ.ಪಿ.ನಂಜುಂಡಿ ವಿಶ್ವಕರ್ಮ, ಡಿ.ಎಸ್ ಅರುಣ್, ರವಿಕುಮಾರ್.ಎನ್, ಕೆ.ಎಸ್ ನವೀನ್, ಡಾ.ತೇಜಸ್ವಿನಿಗೌಡ, ಸಂತೇಬೆನ್ನೂರು ಗ್ರಾ.ಪಂ ಅಧ್ಯಕ್ಷರಾದ ಶಿಲ್ಪಮರುಳಸಿದ್ದೇಶ್ ಭಾಗವಹಿಸುವರು.

ಸರ್ಕಾರದ ಪ್ರಧಾನ ಕಾರ್ಯದರ್ಶಿ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿ.ಪಂ ಆಡಳಿತಾಧಿಕಾರಿಗಳಾದ ಎಸ್.ಆರ್, ಉಮಾಶಂಕರ್, ಆಯುಷ್ ಇಲಾಖೆಯ ಆಯುಕ್ತರಾದ ರಾಮಚಂದ್ರ, ಪೂರ್ವವಲಯದ ಪೊಲೀಸ್ ಮಹಾನಿರೀಕ್ಷಕರಾದ ಡಾ.ಕೆ.ತ್ಯಾಗರಾಜನ್ ಹಾಗೂ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎ ಚೆನ್ನಪ್ಪ, ಜಿಲ್ಲಾ ಆಯುಷ್ ಅಧಿಕಾರಿ ಹಾಗೂ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿವರ್ಗದವರು ಭಾಗವಹಿಸುವರೆಂದು ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಸತಿ ಯೋಜನೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.

ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

Published

on

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.

2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.

3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.

5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.

6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.

7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.

8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.

9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.

10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.

ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರ ಪುರಷ್ಕೃತ ಕೃಷಿಯೋನ್ನತಿ ಯೋಜನೆಯಡಿ ‘’ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು’’ (National Mission on Edible Oil – Oilseeds (NMEO-OS) ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದೆ.

ಎಣ್ಣೆಕಾಳು ಬೆಳೆಗಾರರು ಮತ್ತು ಮೌಲ್ಯ ಸರಪಳಿ ಪಾಲುದಾರರನ್ನು (Value Chain Partners) ಸಂಸ್ಕರಣಾದಾರರೊಂದಿಗೆ ಸಂಪರ್ಕಿಸಲು ಮತ್ತು ಅವರಿಗೆ ಮಾರುಕಟ್ಟೆ ಕಲ್ಪಿಸುವುದರೊಂದಿಗೆ ಉತ್ತಮ ಲಾಭವನ್ನು ಪಡೆಯುವಂತೆ ಖಾತ್ರಿಪಡಿಸುವುದು ಯೋಜನೆಯ ಗುರಿಗಳಲ್ಲಿ ಒಂದಾಗಿದೆ.

ಸದರಿ ಯೋಜನೆಯಡಿ ಸ್ಥಳೀಯವಾಗಿ ಉದ್ಯೋಗಾವಕಾಶ ಕಲ್ಪಿಸಲು ಹಾಗೂ ಶುದ್ಧ ಖಾದ್ಯ ತೈಲ ಉಪಯೋಗಿಸಲು ಅನುಕೂಲವಾಗುವಂತೆ ಪ್ರೇರೇಪಿಸಲು ಸೂಕ್ತವಾಗುವಂತೆ ಹಾಗೂ ಮೌಲ್ಯ ಸರಪಳಿಯನ್ನು ಉತ್ತೇಜಿಸಲು, ಸಂಸ್ಕರಣಾ ಘಟಕಗಳಿಗೆ ಅವಶ್ಯವಿರುವ ಯಂತ್ರೋಪಕರಣಗಳನ್ನು ಪಡೆಯಲು/ಪ್ರಾಥಮಿಕ ಮತ್ತು ದ್ವಿತೀಯ ಎಣ್ಣೆಕಾಳು ಕೊಯ್ಲೋತ್ತರ ಮೂಲ ಸೌಕರ್ಯ ಸೌಲಭ್ಯ ಪಡೆಯಲು ಗರಿಷ್ಠ ಯೋಜನಾ ವರದಿಯ ಶೇ.33 ರಷ್ಟು ಅಥವಾ ರೂ.9.99 ಲಕ್ಷಕ್ಕೆ ಮೀರದಂತೆ ಅನುದಾನವನ್ನು ನೀಡಲಾಗುವುದು. ಸದರಿ ಯೋಜನೆಯ ಘಟಕದಡಿ ಕಟ್ಟಡ ವೆಚ್ಚ ಮತ್ತು ಭೂಮಿ ಬಾಡಿಗೆಯನ್ನು ಪರಿಗಣಿಸಲಾಗುವುದಿಲ್ಲ.

ಸದರಿ ಯೋಜನೆಯಡಿ ಸೌಲಭ್ಯ ಪಡೆಯಲು ಸರ್ಕಾರ / ಸರ್ಕಾರೇತರ ಸಂಸ್ಥೆಗಳು, FPOs ಗಳು ಜುಲೈ 04 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಯೋಜನೆಯ ಮಾರ್ಗಸೂಚಿಯನ್ವಯ ಜಿಲ್ಲಾ ಕಾರ್ಯಕಾರಿ ಸಮಿತಿಯಲ್ಲಿ ಫಲಾನುಭವಿ ಆಯ್ಕೆ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಉಪ ಕೃಷಿ ನಿರ್ದೇಶಕರ ಕಛೇರಿ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗಳನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending