Connect with us

ಲೈಫ್ ಸ್ಟೈಲ್

ಸಾಧಕ ದಂಪತಿಗಳಿಗೆ ಅಭಿನಂದನೆ

Published

on

  • ಗಂಗಾಧರ್ ಬಿ ಎಲ್ ನಿಟ್ಟೂರ್

ದಾವಣಗೆರೆ ಜಿಲ್ಲೆ, ಚನ್ನಗಿರಿ ತಾಲ್ಲೂಕಿನ ಬೆಳಲಗೆರೆ ಗ್ರಾಮದ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ದಿನಾಂಕ : 21.06.2022 ರ ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಮೋದಿಕೇರ್ ಸಕ್ಸಸ್ ಚಾಂಪಿಯನ್ಸ್ ತಂಡದ ವತಿಯಿಂದ ಕರ್ನಾಟಕ ಮೋದಿಕೇರ್ ಇತಿಹಾಸದಲ್ಲಿ ಕೇವಲ 365 ದಿನಗಳಲ್ಲಿ ಅದ್ಭುತ ಯಶಸ್ಸಿನ ಪಯಣದೊಂದಿಗೆ ಪ್ಲಾಟಿನಮ್ ಡೈರೆಕ್ಟರ್ ಆಗಿ ಹೊರ ಹೊಮ್ಮುವ ಮೂಲಕ ಮಾದರಿ ಸಾಧಕರೆಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಬೆಳಲಗೆರೆ ಗ್ರಾಮದ ದೊಡ್ಡೇಶ್ ಹಾಗೂ ಕವಿತಾ ದಂಪತಿಗಳಿಗೆ ಅದ್ದೂರಿ ಕಾರು ಅರ್ಪಣೆ ಹಾಗೂ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ವಿಶೇಷ ಅತಿಥಿಗಳಾಗಿ ಆಗಮಿಸಲಿರುವ ಯಶಸ್ವಿ ಚಾಂಪಿಯನ್ಸ್ ಸಂಸ್ಥಾಪಕ, ಕಿರಿಯ ಮಿಲಿಯನೇರ್ ಓ. ಎಸ್ . ಚಂದ್ರಹಾಸ್, ಡೈಮಂಡ್ ಡೈರೆಕ್ಟರ್ ಗಳಾದ ಓಂಕಾರಮೂರ್ತಿ ಎಸ್.ಎಸ್, ಶ್ರೀಮತಿ ನಂದಾ ಬಿ ಜೆ , ನಟರಾಜ್ ಡಿ ಬಿ ಮತ್ತು ಶ್ರೀಮತಿ ಶೋಭಾ ಜೆ ಇವರ ಸಮ್ಮುಖದಲ್ಲಿ ಮೆರವಣಿಗೆಯೊಂದಿಗೆ ದೊಡ್ಡೇಶ್ ದಂಪತಿಗಳಿಗೆ ಹೊಸ ಕಾರು ಅರ್ಪಿಸಿ ಅಭಿನಂದಿಸಲಾಗುತ್ತಿದೆ .

ಅತಿ ಕಡುಬಡತನದ ಕುಟುಂಬಕ್ಕೆ ಸೇರಿದ ಬೆಳಲಗೆರೆ ಗ್ರಾಮದ ದೊಡ್ಡೇಶ್ ಅವರು ಎಂ.ಎ, ಬಿ.ಇಡಿ ಪದವೀಧರರು. ಜೀವನೋಪಾಯಕ್ಕಾಗಿ ಈ ಹಿಂದೆ ಮೆಡಿಕಲ್ ಶಾಪ್ ಹಾಗೂ ಗಾರ್ಮೆಂಟ್ ಕೆಲಸ ಮಾಡಿ ನಂತರ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕ ವೃತ್ತಿಯಲ್ಲಿ ತೊಡಗಿದ್ದ ಅವರಿಗೆ ಪತ್ನಿ ಕವಿತಾ ಟೈಲರಿಂಗ್ ಮೂಲಕ ಕುಟುಂಬ ನಿರ್ವಹಣೆಗೆ ಸಹಕರಿಸುತ್ತಿದ್ದರು. ನಿರಂತರ ಆರ್ಥಿಕ ಏಳುಬೀಳು ನಡುವೆ ಮನ ನೊಂದು ಖಾಸಗಿ ನೌಕರಿಗೆ ಗುಡ್ ಬೈ ಹೇಳಿದ ದೊಡ್ಡೇಶ್ ಕಳೆದ ವರ್ಷ ಪತ್ನಿ ಸಮೇತ ಮೋದಿಕೇರ್ ಬಿಜಿನೆಸ್ ಗೆ ಇಳಿದಿದ್ದರು.

ಅತಿ ಕಡಿಮೆ ಅವಧಿಯಲ್ಲಿ ಪ್ಲಾಟಿನಮ್ ಡೈರೆಕ್ಟರ್ ಹಂತ ತಲುಪಿ ” ಮೋದಿ ಕೇರ್ ಕರ್ನಾಟಕದ ಸಿಂಹ ” ಎಂಬ ಅಭಿದಾನದೊಂದಿಗೆ ಕಾರ್ ಅಚಿವರ್ ಆಗಿರುವ ಇವರ ಅವಿರತ ಪರಿಶ್ರಮದ ಫಲ ಮನಸ್ಸಿದ್ದರೆ ಮಾರ್ಗ ಎಂಬ ಮಾತಿಗೆ ಸಾಕ್ಷಿಯಾಗಿದೆ. ತಾವು ಓದಿದ ವಿದ್ಯಾಭಾಸದ ಅಂಕಪಟ್ಟಿ ಹಿಡಿದು ನೌಕರಿಗಾಗಿಯೇ ಕಾದು ಕುಳಿತುಕೊಳ್ಳುವ ನಿರುದ್ಯೋಗಿಗಳಿಗೆ ಇವರ ಸಾಧನೆ ಪ್ರೇರಣಾದಾಯಕ ಯಶೋಗಾಥೆಯಾಗಿದೆ.

(- ಗಂಗಾಧರ್ ಬಿ ಎಲ್ ನಿಟ್ಟೂರ್
ಮೊ ಸಂ : 8867702396)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಆತ್ಮಕತೆ | ಭದ್ರಾವತಿಯಲ್ಲಿ ಮತ್ತೆ ಪ್ರೊ.ಬಿ. ಕೃಷ್ಣಪ್ಪನವರ ಭೇಟಿ

Published

on

  • ರುದ್ರಪ್ಪ ಹನಗವಾಡಿ

1968ರಲ್ಲಿ ಕೃಷ್ಣಪ್ಪ ಅವರನ್ನು ಲಾಲ್ ಬಹಾದ್ದೂರ್ ಶಾಸ್ತ್ರಿ ಕಾಲೇಜಿನಲ್ಲಿ ಪಿಯುಸಿ ಓದುವಾಗ ಕಂಡಿದ್ದ ನಾನು ಅವರನ್ನು ಮತ್ತೆ ಭೇಟಿಯಾಗಿದ್ದು, ನಾನು ಮೈಸೂರಿನಲ್ಲಿ ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸಕನಾಗಿ ಸೇರಿದಾಗ ಈ ಸಮಯದಲ್ಲಿ ಸಮಾಜವಾದಿ ಯುವಜನ ಸಭಾ ಮತ್ತು ಜಾತಿ ವಿನಾಶ ಸಮ್ಮೇಳನ ಮತ್ತು ಬೂಸಾ ಗಲಾಟೆ ಸಂದರ್ಭದಲ್ಲಿ ಅವರು ಮೈಸೂರಿಗೆ ಬಂದಾಗ ಸಿಗುತ್ತಿದ್ದೆ.

ಮಾದೇವ, ರಾಜಶೇಖರ ಕೋಟಿ, ನೆಲಮನೆ ದೇವೇಗೌಡ, ಎಂ.ಡಿ. ನಂಜುಂಡಸ್ವಾಮಿ, ಪಿ. ಮಲ್ಲೇಶ್ ಇನ್ನು ಅನೇಕರು ಸೇರಿ ಜಾತಿ ವಿನಾಶ, ಸಮಾಜವಾದ, ರೈತ ಸಂಘ ಆ ಕಾಲದಲ್ಲಿನ ಸಾರ್ವಜನಿಕ ಜೀವನದಲ್ಲಿದ್ದ ಭ್ರಷ್ಟಾಚಾರ, ವಿಶ್ವವಿದ್ಯಾಲಯದಲ್ಲಿನ ಜಾತೀಯತೆ ಎಲ್ಲವೂ ಚರ್ಚೆಗೆ ಬರುತ್ತಿದ್ದವು. ಮಹೇಶ, ನಾನು, ಭಕ್ತ, ಅರ್ಕೇಶ ಸಾಮಾನ್ಯವಾಗಿ ಕೇಳುಗರಾಗಿರುತ್ತಿದ್ದೆವು. ಮತ್ತೆ ಆ ಕ್ಷಣದಲ್ಲಿ ಆ ಸಂಘಟನೆಗಳ ಸಮಿತಿಯವರು ವಹಿಸಿದ ಕೆಲಸಗಳಿಗೆ ಸಜ್ಜಾಗಿರುತ್ತಿದ್ದೆವು.

ನಾನು ಬಿಆರ್‌ಪಿಗೆ ಬಂದಾಗ ಕೃಷ್ಣಪ್ಪನವರು ಅದಾಗಲೇ ಭದ್ರಾವತಿಯಲ್ಲಿದ್ದು, ತಮ್ಮ ಅಂತರ್‌ಜಾತಿ ಮದುವೆಯ ಕಾರಣದಿಂದಲೂ, ಸಮಾಜವಾದಿ ಹೋರಾಟಗಳಿಂದಲೂ, ವಿಶ್ವವಿದ್ಯಾಲಯ ಮತ್ತು ಕರ್ನಾಟಕದ ಸಾರ್ವಜನಿಕ ಜೀವನದಲ್ಲಿ ಪರಿಚಿತರಾಗಿದ್ದರು ಕೃಷ್ಣಪ್ಪ ಅವರ ಜೊತೆ, ಸಮಾಜವಾದಿಗಳಾಗಿದ್ದ ಶಿವಮೊಗ್ಗದ ಮುನೀರ್,
ನಿಸಾರ್ ಅಹಮದ್, ದಿವಾಕರ ಹೆಗ್ಗಡೆ, ರೈತ ಸಂಘದ ಎನ್.ಡಿ. ಸುಂದರೇಶ್, ಬಿ. ರಾಜಣ್ಣ, ಎಂ. ಚಂದ್ರಶೇಖರಯ್ಯ, ಎನ್. ಗಿರಿಯಪ್ಪ, ಡುಮ್ಮ ರಾಜಣ್ಣ ಎಂಬೆಲ್ಲ ಇನ್ನೂ ಅನೇಕ ಸ್ನೇಹಿತರಿದ್ದರು. ಅರ‍್ಯಾರೂ ಒಂದು ಜಾತಿಯ, ಇಲ್ಲವೇ ಒಂದು ಕಸುಬಿನವರಾಗಿರಲಿಲ್ಲ. ಕೃಷ್ಣಪ್ಪನವರ ಸಮಾಜವಾದಿ ಚಿಂತನೆಯಲ್ಲಿ ತೀವ್ರ ಆಸಕ್ತಿಯಿಂದ ಪಾಲ್ಗೊಂಡ ಎಲ್ಲ ಜಾತಿಯಿಂದ ಬಂದ ಸ್ನೇಹಿತರಾಗಿದ್ದರು. ನಾನು ಬಿಆರ್‌ಪಿಯಿಂದ ಬಿಡುವಿನ ಸಮಯದಲ್ಲಿ ಭದ್ರಾವತಿಗೆ ಕೃಷ್ಣಪ್ಪನವರನ್ನು ನೋಡಲು ಹೋಗುತ್ತಿದ್ದೆ. ಆಗ ಭದ್ರಾವತಿಯ ಸಮಾಜವಾದಿ ಗೆಳೆಯರನೇಕರು ಪರಿಚಯವಾಗಿ, ನನಗೂ ಅವರುಗಳು ಕೂಡ ಆತ್ಮೀಯ ಗೆಳೆಯರಾದರು.

ಕೃಷ್ಣಪ್ಪನವರ ಶ್ರೀಮತಿ ಇಂದಿರಾ ಅವರು ಅದಾಗಲೇ ಕೆ.ಪಿ.ಎಸ್.ಸಿ.ಯಿಂದ ಆಯ್ಕೆಯಾಗಿ ತಾಲ್ಲೂಕು ಕಛೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು. ಕೃಷ್ಣಪ್ಪನವರ ಮನೆಯಲ್ಲಿ ಅವರ ತಂದೆ ಬಸಜ್ಜ, ತಾಯಿ ಚೌಡಮ್ಮನವರ ಜೊತೆ ತಂಗಿ ರೇಣುಕ ಮತ್ತು ಹಿರಿಯ ತಂಗಿಯ ಮಕ್ಕಳಾದ ಮೈತ್ರೇಯಿ, ಶಿವು ಮತ್ತು ತಮ್ಮ ತಿಪ್ಪೇಶಿ ಕೂಡ ಇದ್ದು ಅವರೆಲ್ಲ ವಿವಿಧ ತರಗತಿಗಳಲ್ಲಿ ಓದುತ್ತಿದ್ದರು. ಕೃಷ್ಣಪ್ಪ ಅವರ ಮನೆಯೊಂದು ಮಿನಿ ಹಾಸ್ಟೆಲ್ ತರ ಇತ್ತು.
ಭದ್ರಾ ಕಾಲೇಜಿನಲ್ಲಿ ಶಿಸ್ತಿನ ಅಧ್ಯಾಪಕರಾಗಿದ್ದ ಕೃಷ್ಣಪ್ಪನವರು ಬಿಡುವಿನ ಸಮಯದಲ್ಲಿ ಸಮಾಜದಲ್ಲಿನ ಅಂಧ ಶ್ರದ್ಧೆ ಮತ್ತು ಮೌಢ್ಯಗಳ ಬಗ್ಗೆ, ಸಾಮಾಜಿಕ ಅಸಮಾನತೆಗಳ ಬಗ್ಗೆ ಮಿತ್ರರೊಡನೆ ಒಡಗೂಡಿ, ಸಾರ್ವಜನಿಕ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದರು. ಅವರ ಹೋರಾಟಗಳನ್ನು ಕ್ರಮವಾಗಿ ಜೋಡಿಸಿದರೆ ಅದೊಂದು ಪ್ರಮುಖ ಬೃಹತ್ ಗ್ರಂಥವಾಗಿ ರೂಪುಗೊಳ್ಳುತ್ತದೆ. (ಇಂದಿರಾ ಕೃಷ್ಣಪ್ಪ ಬರೆದ ಕೃತಿ ‘ನನ್ನ ಕಣ್ಣಿನ ಕ್ಯಾಮೆರಾದಲ್ಲಿ ಕೃಷ್ಣಪ್ಪ’ ಪುಸ್ತಕದಲ್ಲಿ ಸಂಕ್ಷಿಪ್ತ ಹೋರಾಟದ ವಿವರಗಳು ಇವೆ.)

ನನಗೆ ಮೈಸೂರಿನ ಹೋರಾಟದ ಗೆಳೆಯರ ಜೊತೆಗೆ ಕೃಷ್ಣಪ್ಪನವರ ಒಡನಾಟ ಮತ್ತು ಹೋರಾಟದ ಸಂಪರ್ಕ ದೊರೆತದ್ದು ಒಂದು ಸುವರ್ಣ ಅವಕಾಶವೆಂದೇ ಭಾವಿಸಿದ್ದೇನೆ. ನಮ್ಮಿಬ್ಬರ ಸಂಬಂಧ, ನನ್ನ ಮದುವೆ, ಮಕ್ಕಳು, ನಂತರ ನನ್ನೂರು ಕೇರಿಗಳಿಗೆ ವಿಸ್ತಾರಗೊಂಡು ಎರಡು ಮನೆತನಗಳ ಕಥನದಲ್ಲಿ ಒಬ್ಬರಿಗೊಬ್ಬರು ಸೇರಿ ಹೋಗಿದ್ದೇವೆ.

ಮುಂದುವರಿಯುವುದು

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಮಾದಕ ವಸ್ತುಗಳಿಗೆ ಕಡಿವಾಣ ; ಸ್ವಾಸ್ಥ್ಯ ಬದುಕಿಗೆ ಸೋಪಾನ

Published

on

  • ಡಾ.ಗೀತಾ ಬಸವರಾಜು, ಉಪನ್ಯಾಸಕರು, ಎ.ವಿ.ಕೆ ಮಹಿಳಾ ಕಾಲೇಜು, ದಾವಣಗೆರೆ

ಗತ್ತಿನಲ್ಲಿರುವ 84 ಕೋಟಿ ಜೀವರಾಶಿಗಳಲ್ಲಿ ಮಾನವ ಶ್ರೇಷ್ಟ ಪ್ರಾಣಿ. ಏಕೆಂದರೆ ಮಾತನಾಡುವ, ಆಲೋಚಿಸುವ, ಭಾವನೆಗಳನ್ನು ಅಭಿವ್ಯಕ್ತಿಸುವ ವಿಶೇಷವಾದ ಸಾಮರ್ಥ್ಯ ಅವನಿಗಿದೆ.

ಈ ಶಕ್ತಿಯ ಮೂಲಕ ತುಂಬಾ ಶ್ರೇಷ್ಟನಾಗಬೇಕಾದ ಮಾನವ ನಗರೀಕರಣ, ಕೈಗಾರಿಕೀಕರಣ, ಪಾಶ್ಚಾತ್ಯೀಕರಣದ ಪ್ರಭಾವದಿಂದ ಪ್ರೇರಿತನಾಗಿ ಮೂಲ ಸಂಸ್ಕೃತಿಯನ್ನು ಮರೆತು ಮೃಗೀಯ ವರ್ತನೆಗೆ ದಾಸನಾಗಿದ್ದಾನೆ. ಪ್ರಸ್ತುತ ವೈಜ್ಞಾನಿಕವಾಗಿ, ತಾಂತ್ರಿಕವಾಗಿ ಎಷ್ಟೇ ಮುಂದುವರೆದಿದ್ದರೂ, 20ನೇ ಶತಮಾನದಿಂದೀಚೆಗೆ ಜಗತ್ತನ್ನೇ ತಲ್ಲಣಗೊಳಿಸುವ ಸಾಮಾಜಿಕ ಪಿಡುಗುಗಳಾದ ಬಡತನ, ಭಿಕ್ಷಾಟನೆ, ನಿರುದ್ಯೋಗ, ವರದಕ್ಷಿಣೆ, ಅಪರಾಧ ಮಾದಕ ವಸ್ತು ವ್ಯಸನವು ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿವೆ.

ಈ ಸಮಸ್ಯೆಗಳನ್ನು ಪರಿಹರಿಸಬೇಕಾಧ ಯುವಜನತೆ ಇಂತಹ ದುಶ್ಚಟಗಳ ಸೆಲೆಯಲ್ಲಿ ಸಿಕ್ಕು ತಮ್ಮ ಅಮೂಲ್ಯ ಬದುಕನ್ನು ಹಾಳು ಮಾಡಿಕೊಳ್ಳುತ್ತಿರುವುದು ಆತಂಕಕಾರಿ.
ಯುವಶಕ್ತಿಯೇ ದೇಶದ ಶಕ್ತಿಯಾಗಿದ್ದು ಭವ್ಯಭಾರತ ನಿರ್ಮಾಣದಲ್ಲಿ ತೊಡಗಿಸಿಕೊಳ್ಳಬೇಕಾದ ಯುವಜನತೆ ಮಾದಕ ವಸ್ತುಗಳ ದುಶ್ಚಟಕ್ಕೆ ಒಳಗಾಗಿ ಮಾನವೀಯ ಮೌಲ್ಯಗಳನ್ನು ಕಳೆದುಕೊಂಡು ಅಂಧಕಾರದಲ್ಲಿ ಜೀವನ ನಡೆಸುತ್ತ ಚಿಕ್ಕ ವಯಸ್ಸಿನಲ್ಲಿಯೇ ಮರಣ ಹೊಂದುತ್ತಿರುವುದು ಆಘಾತದ ವಿಷಯ.

ಜೋಸೆಫ್ ಜ್ಯೂಲಿಯನ್ ರವರ ಪ್ರಕಾರ ಮಾದಕ ವಸ್ತುಗಳೆಂದರೆ ಯಾವುದೇ ರಾಸಾಯನಿಕ ವಸ್ತುವಾಗಿದ್ದು ಅದರ ಸೇವನೆಯಿಂದ ದೈಹಿಕ ಕಾರ್ಯ, ಮನಸ್ಥಿತಿ, ಗ್ರಹಣ ಶಕ್ತಿಯ ಮೇಲೆ ಪರಿಣಾಮ ಬೀರುತ್ತದೆ. ಇದನ್ನು ಪದೇ ಪದೇ ಬಳಸುವುದರಿಂದ ವ್ಯಕ್ತಿ ಮಾದಕ ವಸ್ತು ವ್ಯಸನಿಯಾಗುತ್ತಾನೆ. ಮಾದಕ ವಸ್ತುವು ಮನಸ್ಸಿಗೆ ಗೊಂದಲವನ್ನು ತರುವ ಪದಾರ್ಥವಾಗಿದ್ದು ಅಮಲು ರೋಗವಾಗಿದೆ. ಭಾರತದ ನಗರ ಪ್ರದೇಶಗಳಲ್ಲಷ್ಟೇ ಅಲ್ಲದೆ ಹಳ್ಳಿ ಹಳ್ಳಿಗಳಲ್ಲಿಯೂ ಇದರ ಬಳಕೆ ಕಂಡುಬರುತ್ತದೆ. ಶ್ರೀಮಂತರು, ಮಧ್ಯಮ ವರ್ಗದವರು, ವಿದ್ಯಾವಂತರು, ಯುವಕರು, ಮಹಿಳೆಯರು ಎಂಬ ಭೇದವಿಲ್ಲದೆ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಆರೋಗ್ಯವನ್ನು ಕಳೆದುಕೊಳ್ಳುತ್ತಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯವರು ನಡೆಸಿದ ಸಮೀಕ್ಷೆಯ ಪ್ರಕಾರ ಭಾರತದ ವಿದ್ಯಾರ್ಥಿಗಳಲ್ಲಿ ಶೇ 10 ರಷ್ಟು ಒಂದಿಲ್ಲೊAದು ದುಶ್ಚಟಕ್ಕೆ ಒಳಗಾಗಿದ್ದು ಅದರಲ್ಲಿ 14 ರಿಂದ 22 ರ ವಯೋಮಾನದವರು ಹೆಚ್ಚಿದ್ದಾರೆ. ಸ್ವಾತಂತ್ಯç ಪೂರ್ವದಲ್ಲಿ ಶೇ 2 ರಷ್ಟಿದ್ದ ವ್ಯಸನಿಗಳು ಪ್ರಸ್ತುತ ಶೇ 30 ಕ್ಕಿಂತ ಹೆಚ್ಚಿದ್ದಾರೆ. ಜಗತ್ತಿನ ಸುಮಾರು 20 ಕೋಟಿಯಷ್ಟು ಇರುವ ಮಾದಕ ವ್ಯಸನಿಗಳಲ್ಲಿ ಭಾರತದಲ್ಲಿ ಶೇ 7.5 ಕೋಟಿ ವ್ಯಸನಿಗಳಿದ್ದಾರೆಂದು ಅಂದಾಜಿಸಲಾಗಿದೆ.

ನಶೆಯ ಅಲೆ ಸಾವಿನ ಬಲೆಯಾಗುತ್ತಿದ್ದರೂ ಕೂಡ ಈ ದೇಶದಲ್ಲಿ ಊಟವಿಲ್ಲದೆ ಸಾಯುವವರ ಸಂಖ್ಯೆಗಿAತಲೂ ಚಟವನ್ನು ಬೆಳೆಸಿಕೊಂಡು ಸಾಯುವವರು ಹೆಚ್ಚಾಗಿದ್ದಾರೆ.
ಮಾದಕ ವಸ್ತು ಬಳಸುವ ಆತಂಕದ ರಾಷ್ಟçಗಳಲ್ಲಿ ಭಾರತ ಪ್ರಥಮ ಸ್ಥಾನದಲ್ಲಿದೆ. ಅಮಲು ಪದಾರ್ಥಗಳಿಗೆ ಬಲಿಯಾಗುತ್ತಿರುವವರಲ್ಲಿ ವಿದ್ಯಾರ್ಥಿಗಳನ್ನೂ ಒಳಗೊಂಡAತೆ ಯುವಜನತೆ ಹೆಚ್ಚಾಗಿದ್ದು ಇದು ದೇಶದ ಭವಿಷ್ಯಕ್ಕೆ ಮಾರಕವಾಗಿದೆ.

ಡಾ.ಗೀತಾ ಬಸವರಾಜು, ಉಪನ್ಯಾಸಕರು,
ಎ.ವಿ.ಕೆ ಮಹಿಳಾ ಕಾಲೇಜು, ದಾವಣಗೆರೆ

ದುಶ್ಚಟಗಳ ಆರಂಭಕ್ಕೆ ಕಾರಣಗಳು

• ಕ್ಷಣಕಾಲ ಸುಖ ಅನಂತಕಾಲ ದು:ಖಕ್ಕೆ ಕಾರಣ ಎನ್ನುವುದು ಗೊತ್ತಿದ್ದೂ ಅಫೀಮು, ಹೆರಾಯಿನ್, ಬೀಡಿ, ಸಿಗರೇಟು, ಮದ್ಯಪಾನ ಮುಂತಾದ ದುಶ್ಚಟಗಳಿಗೆ ವಿದ್ಯಾವಂತ ಯುವಕರೇ ಬಲಿಯಾಗುತ್ತಿದ್ದಾರೆ.
• ಉಲ್ಲಾಸಕ್ಕಾಗಿ, ಫ್ಯಾಷನ್‌ಗಾಗಿ, ದುರ್ಬಲ ಮನಸ್ಸು, ಏಕಾಂಗಿತನ, ಒತ್ತಡ ನಿವಾರಣೆ ಮಾಡಿಕೊಳ್ಳಲು
• ನೋವು, ದು:ಖಕ್ಕೆ ಪರಿಹಾರವೆಂಬ ಭ್ರಮೆಗೆ ಒಳಗಾಗಿ ತನಗೆ ಅರಿವಿಲ್ಲದಂತೆ ದೊಡ್ಡ ಕಂದಕಕ್ಕೆ ಬಿದ್ದು ನರಳಾಡುವಂತ ಸಂದರ್ಭ ತಂದುಕೊಂಡು ಮಾದಕ ವಸ್ತುಗಳ ಮಾಯಾಜಾಲಕ್ಕೆ ಒಳಗಾಗುತ್ತಿದ್ದಾರೆ. ತೆರಣಿಯ ಹುಳು ತಾನು ಸುತ್ತಿದ ಬಲೆಯಲ್ಲಿ ತಾನೇ ಬಿದ್ದು ಹೊರಳಾಡುವಂತೆ ಅವರ ಪರಿಸ್ಥಿತಿಯಾಗಿದೆ.

ದುಶ್ಚಟಗಳಿಂದಾಗುವ ಪರಿಣಾಮಗಳು

• ದೇಹ ಮತ್ತು ಮನಸ್ಸಿನ ಸಮತೋಲನ ಕಳೆದುಕೊಳ್ಳುವುದು.
• ವ್ಯಕ್ತಿ ತನ್ನನ್ನು ದಹಿಸಿಕೊಳ್ಳುವುದರ ಜೊತೆಗೆ ಕುಟುಂಬದ ನೆಮ್ಮದಿಗಿ ಭಂಗ ತರುತ್ತಾನೆ.
• ಕುಟುಂಬ, ಸಮಾಜದಿಂದ ನಿಂದನೆಗೆ ಒಳಗಾಗುವನು.
• ಜ್ಞಾನೇಂದ್ರಿಯಗಳ ಮೇಲೆ ಹತೋಟಿ ಕಳೆದುಕೊಳ್ಳುವನು
• ಸಮಾಜಬಾಹಿರ ಚಟುವಟಿಕೆಗಳಾದ ಕಳ್ಳತನ, ಅತ್ಯಾಚಾರ, ಕೊಲೆ ಇಂತಹ ದುಷ್ಕೃತ್ಯಗಳನ್ನು ಮಾಡುವನು.
• ದಾಂಪತ್ಯದಲ್ಲಿ ವಿರಸವುಂಟಾಗಿ ವಿಚ್ಚೇದನಗಳಾಗುವ ಸಾಧ್ಯತೆ.
• ರಸ್ತೆ ಅಪಘಾತಗಳಲ್ಲಿ ಶೇ 1/3 ರಷ್ಟು ಮದ್ಯಪಾನ ಮತ್ತು ಮಾದಕ ವಸ್ತು ಸೇವನೆಯಿಂದಾಗುತ್ತದೆ. ಈ ಹಿನ್ನೆಲೆಯಲ್ಲಿ ಮಹಾತ್ಮ ಗಾಂಧೀಜಿಯವರು ಬೆಂಕಿ ದೇಹವನ್ನು ನಾಶ ಮಾಡಿದರೆ ಕುಡಿತ ದೇಹ ಮತ್ತು ಆತ್ಮಗಳೆರಡನ್ನೂ ನಾಶ ಮಾಡುತ್ತದೆ ಎಂದಿದ್ದಾರೆ.

ಪರಿಹಾರ ಕ್ರಮಗಳು

• ಮಾದಕ ವಸ್ತುಗಳ ಹಿಡಿತಕ್ಕೆ ಸಿಲುಕದೆ ಅದರಿಂದ ದೂರವಿರುವುದು.
• ಮಾದಕ ವಸ್ತು ಸೇವಿಸುವುದಿಲ್ಲವೆಂದು ಪ್ರತಿಜ್ಞೆ ಮಾಡುವುದು.
• ಸಹೋದ್ಯೋಗಿ, ಸ್ನೇಹಿತರಿಗೆ ತಿಳುವಳಿಕೆ ನೀಡುವುದು.
• 18 ವರ್ಷ ವಯಸ್ಸಿನವರೆಗೂ ಪೋಷಕರು ಮಕ್ಕಳ ಬಗ್ಗೆ ಗಮನ ನೀಡಿ ಮಾರ್ಗದರ್ಶನ ಮಾಡುವುದು.
• ಶಾಲೆ ಕಾಲೇಜುಗಳಲ್ಲಿ ಶಿಕ್ಷಕರು ಮಕ್ಳಳಲ್ಲಿ ಜೀವನ ಕೌಶಲಗಳನ್ನು ಬೆಳೆಸುವ ರಾಯಭಾರಿಗಳಾಗಿ ಕಾರ್ಯನಿರ್ವಹಿಸುವುದು.
• ವಿದ್ಯಾರ್ಥಿಗಳನ್ನು ಸಹಪಠ್ಯ ಚಟುವಟಿಕೆಗಳಲ್ಲಿ ತೊಡಗಿಸಿ ಆರೋಗ್ಯಕರವಾದ ಹವ್ಯಾಸಗಳನ್ನು ಬೆಳೆಸುವುದು.

ಭಾರತ ಸರ್ಕಾರವು 1951ರಲ್ಲಿ ಅಪಾಯಕಾರಿ ವಸ್ತುಗಳ ಕಾಯ್ದೆಯನ್ನು ಜಾರಿಗೆ ತಂದಿತು. ಈ ಕಾಯ್ದೆ ಮಾದಕ ವಸ್ತು ತಯಾರಿಕೆ, ಸಾಗಾಣಿಕೆ, ಮಾರಾಟ ಮತ್ತು ಬಳಕೆಯ ಮೇಲೆ ನಿರ್ಬಂಧ ಹೇರಿದೆ. 1985 ರಲ್ಲಿ ಡ್ರಗ್ಸ್ ಆಕ್ಟ್ ಜಾರಿಗೊಳಿಸಿದೆ. ಈ ಕಾಯ್ದೆ ಮಾದಕ ವಸ್ತುಗಳ ಕಳ್ಳ ವ್ಯಾಪಾರದಲ್ಲಿ ತೊಡಗಿದ ಅಪರಾಧಿಗಳಿಗೆ ಕನಿಷ್ಠ 10 ರಿಂದ 20 ವರ್ಷ ಕಠಿಣ ಶಿಕ್ಷೆ, 1 ರಿಂದ 2 ಲಕ್ಷದವರೆಗೆ ದಂಡ ಘೋಷಿಸಿದೆ.

ಡಿಸೆಂಬರ್-7 1987 ರ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾದಕ ವಸ್ತುಗಳ ದುರ್ಬಳಕೆಯನ್ನು ತಡೆಗಟ್ಟುವ ನಿಯಮಾವಳಿಗಳ ಅಂಗೀಕಾರವನ್ನು ಹಲವಾರು ರಾಷ್ಟçಗಳು ಒಪ್ಪಿಕೊಂಡು ವಿಶ್ವದಾದ್ಯಂತ ಮಾದಕ ವಸ್ತುಗಳ ದುರ್ಬಳಕೆ ನಿಯಂತ್ರಿಸುವ ತೀರ್ಮಾನವನ್ನು ಮಾಡಿದವು.

ಜೂನ್-26 ವಿಶ್ವಸಂಸ್ಥೆಯು ಮಾದಕ ವಸ್ತು ದುರ್ಬಳಕೆ ಮತ್ತು ಕಳ್ಳಸಾಗಣೆ ವಿರುದ್ಧದ ಅಂತರರಾಷ್ಟ್ರೀಯ ದಿನವನ್ನು ಆಚರಿಸಿ ಈ ಸಮಸ್ಯೆಯ ನಿಯಂತ್ರಣ ಮತ್ತು ಪರಿಹಾರದ ಕುರಿತು ನಿವಾರಣೆಯಲ್ಲಿ ಸಮುದಾಯ, ಸಮವಯಸ್ಕರು, ಕುಟುಂಬ, ಸಂಘ ಸಂಸ್ಥೆಗಳವರು ಪ್ರಮುಖ ಪಾತ್ರ ವಹಿಸಬೇಕಾಗಿದೆಎಂದು ಮನವರಿಕೆ ಮಾಡಿತು. ಮಾದಕ ವಸ್ತು ದುರ್ಬಳಕೆ ಒಂದು ಮಾನಸಿಕ, ಸಾಮಾಜಿಕ ಸಮಸ್ಯೆಯಾಗಿದ್ದು ಇಡೀ ಸಮುದಾಯವೇ ಇದರ ನಿವಾರಣೋಪಾಯದಲ್ಲಿ ಪಾಲ್ಗೊಳ್ಳಬೇಕೆಂದು ಸೂಚಿಸಿತು.

ವ್ಯಕ್ತಿ ಒಮ್ಮೆ ಈ ಚಕ್ರವ್ಯೂಹದಲ್ಲಿ ಸಿಲುಕಿಕೊಂಡರೆ ಹೊರಬರುವುದು ಕಷ್ಟಸಾಧ್ಯ. ಆರೋಗ್ಯ ಜೀವನ ನಡೆಸಲು ಮಾದಕ ವಸ್ತುಗಳನ್ನು ತ್ಯಜಿಸಿ ಸುಂದರ ಜೀವನ ನಡೆಸಿ ಎಂಬ ಸಂದೇಶ ಸಾರುತ್ತ ನಾವೆಲ್ಲರೂ ಸಂಘಟಿತರಾಗಿ ಸಮಾಜದಲ್ಲಿ ಜಾಗೃತಿ ಮೂಡಿಸಿದಾಗ ದುಶ್ಚಟಮುಕ್ತ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. (ಜೂನ್-26 ರಂದು ಅಂತರರಾಷ್ಟೀಯ ಮಾದಕ ವಸ್ತುಗಳ ದುರ್ಬಳಕೆ ವಿರೋಧಿ ದಿನ ತನ್ನಿಮಿತ್ತ ಈ ಲೇಖನ – ಡಾ. ಗೀತಾ ಬಸವರಾಜು,ಉಪನ್ಯಾಸಕರು,ಎ.ವಿ.ಕೆ ಮಹಿಳಾ ಕಾಲೇಜು,ದಾವಣಗೆರೆ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಹಿರಿಯ ನಾಗರಿಕರಿಗಿರುವ ಸರ್ಕಾರಿ ಸೌಲಭ್ಯಗಳೇನು..? ; ಮಾಹಿತಿಗೆ ಸಂಪರ್ಕಿಸಿ

Published

on

ಸುದ್ದಿದಿನ,ದಾವಣಗೆರೆ:ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಇಲಾಖೆಯ ವತಿಯಿಂದ ಹಾಗೂ ಇತರೆ ಇಲಾಖೆಗಳಿಂದ ಹಿರಿಯ ನಾಗರಿಕರಿಗೆ ದೊರೆಯುತ್ತಿರುವ ಸೌಲಭ್ಯಗಳ ಅರಿವು ಮೂಡಿಸುವ ಮತ್ತು ಸೌಲಭ್ಯಗಳನ್ನು ಪಡೆಯಲು ಸಹಾಯ ಮಾಡುವ ಉದ್ದೇಶದಿಂದ ತಾಲ್ಲೂಕು ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಿಂದ ಹಿರಿಯ ನಾಗರಿಕರಿಗೆ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆಯಬಹುದು.

ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರ ವಿವರ:ಹೊನ್ನಾಳಿ ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ಶೈಲಜಾ ಕೆ.ಎಂ. ಮೊ.ಸಂ: 9482158005, ಚನ್ನಗಿರಿ ತಾಲ್ಲೂಕು ಪಂಚಾಯಿತಿ ಕಾರ್ಯಾಲಯ ಕೆ ಸುಬ್ರಮಣ್ಯಂ ಮೊ.ಸಂ: 9945738141, ಜಗಳೂರು ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ಎಂ ಕೆ ಶಿವನಗೌಡ ಮೊ.ಸಂ: 9902105734 ಹರಿಹರ ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ಶಶಿಕಲಾ ಟಿ. ಮೊ.ಸಂ: 9945458058, ದಾವಣಗೆರೆ ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ಚನ್ನಪ್ಪ. ಬಿ ಮೊ.ಸಂ: 9590829024 ಸಂಪರ್ಕಿಸಬೇಕೆಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ|| ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending