Connect with us

ಅಸಾಮಾನ್ಯಳು

ಅನಾಥ ಮಕ್ಕಳ ಸ್ವಾವಲಂಬಿ ಬದುಕಿನ ಆಶ್ರಯದಾತೆ ಪ್ರೇಮಾ ನಾಗರಾಜ್

Published

on

ತಾವೇ ಹೆತ್ತ ಒಂದೋ – ಎರಡೋ ಮಕ್ಕಳನ್ನು ಸಹ ಸಾಕಲಾಗದೆ ಬೀದಿಗೆ ಬಿಡುವ ಅದೆಷ್ಟೋ ತಂದೆ ತಾಯಿಯರಿರುವ ಈ ಸಮಾಜದಲ್ಲಿ, ಹಲವು ಮಕ್ಕಳಿಗೆ ಆಶ್ರಯ ನೀಡಿ ಬದುಕು ಕಟ್ಟಿ ಕೊಡಲು ಮುಂದೆ ಬರುವವರಿದ್ದಾರೆಯೇ ಎಂದು ಊಹಿಸಲು ಸಹ ಅಸಾಧ್ಯವಾದ ಕಾಲವಿದು. ಅದರಲ್ಲೂ ಪುರುಷ ಪ್ರಧಾನವಾದ ನಮ್ಮ ಸಮಾಜದಲ್ಲಿ ಸ್ವತಂತ್ರವಾಗಿ ಯೋಚಿಸಲು ಸಹ ಭಯಪಡುವ ಮಹಿಳೆಯರ ನಡುವೆ ಪರರ ಮಕ್ಕಳ ಪೋಷಣೆಯ ಜವಬ್ದಾರಿ ಹೊತ್ತು ಕೃತಿಗಿಳಿವ ಹೃದಯ ವೈಶಾಲ್ಯತೆ ಅದೆಷ್ಟು ಸ್ತ್ರಿಯರಿಗಿರಲು ಸಾಧ್ಯ…!?

ನಮ್ಮ ಇಂತಹ ಅದೆಷ್ಟೋ ಸಂದೇಹ ಮತ್ತು ಪ್ರಶ್ನೆಗಳಿಗೆ ಉತ್ತರವೆಂಬಂತೆ ಹಾಗೂ ಊಹೆಗೂ ನಿಲುಕದ ಮಾನವೀಯ ಮೌಲ್ಯವುಳ್ಳ ವ್ಯಕ್ತಿತ್ವಕ್ಕೆ ಸಾಕ್ಷಿಯಾಗಿ ನಿಂತಿದ್ದಾರೆ ದಾವಣಗೆರೆ ರಶ್ಮಿ ವಸತಿ ಶಾಲೆಯ ಶ್ರೀಮತಿ ಪ್ರೇಮಾ ನಾಗರಾಜ್. ಬೆಂಗಳೂರಿನಲ್ಲಿ ಹುಟ್ಟಿ ಬೆಳೆದ ಪ್ರೇಮಾ ಅವರು, ಇಂಜಿನಿಯರ್ ಮುದೇಗೌಡ್ರು ಬಸವರಾಜಪ್ಪ ಹಾಗೂ ಸುಶೀಲಮ್ಮ ದಂಪತಿಗಳ ಸುಪುತ್ರಿ ಹಾಗೂ ದಾವಣಗೆರೆಯ ವೈದ್ಯರಾದ ಡಾ.ನಾಗರಾಜ ಅವರ ಧರ್ಮಪತ್ನಿ.

ಓದಿದ್ದು ಬಿ.ಎ ಬಿ.ಇಡಿ ಮತ್ತು ಡಿಪ್ಲೋಮಾ ಇನ್ ಮಾಂಟೇಸರಿ.ಅನಾಥ ಮಕ್ಕಳ ಆಶಾ ಕಿರಣವಾದ ಶ್ರೀಮತಿ ಪ್ರೇಮಾ ಡಾ .ನಾಗರಾಜ್ ಅವರು, ಎಸ್.ಎಸ್ ಮೆಡಿಕಲ್ ಕಾಲೇಜಿನ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ 2 ವರ್ಷಗಳ ಹಿಂದೆ ನಿವೃತ್ತಿ ಹೊಂದಿರುವ ಪ್ರೇಮಾ ಅವರ ಪತಿ ಡಾ.ನಾಗರಾಜ್ ಅವರ ಸಹೋದರ ಡಾ.ಪಿ.ಸುರೇಂದ್ರ ಅವರು ಇಂಗ್ಲೆಂಡ್‍ನಲ್ಲಿ ನೆಲೆಸಿದ್ದಾರೆ. 1999 ನೇ ಇಸ್ವಿಯ ಆ ಒಂದು ದಿನ ಅವರ ಬದುಕಿನಲ್ಲಿ ಕರಾಳ ಛಾಯೆ ಮೂಡಿಸಿ ಮಾಯವಾಯಿತು. ಡಾ.ಸುರೇಂದ್ರರ ಮಗಳು ರಶ್ಮಿಯನ್ನು ಕಾರ್ ಅಪಘಾತದ ನೆಪದಲ್ಲಿ ಆ ವಿಧಿ ಎಳೆದೊಯ್ದಿತ್ತು. ಮಗಳನ್ನು ಕಳೆದುಕೊಂಡು ದುಃಖದ ಮಡುವಿನಲ್ಲಿದ್ದರೂ ಸುರೇಂದ್ರರ ಹೃದಯದಲ್ಲಿ ತಮ್ಮ ಮಗಳ ಹೆಸರಿನಲ್ಲಿ ತನ್ನ ದೇಶಕ್ಕೆ ಏನಾದರೊಂದು ಕೊಡುಗೆ ನೀಡಬೇಕೆಂಬ ಸಾಮಾಜಿಕ ಸೇವೆಯ ಕನಸೊಂದು ಚಿಗುರೊಡೆದಿತ್ತು. ಈ ಬಯಕೆಯನ್ನು ಅವರು ತಮ್ಮ ಸಹೋದರನ ಬಳಿ ಹಂಚಿಕೊಂಡರು. ಅಣ್ಣನ ಆ ಕನಸನ್ನು ನನಸು ಮಾಡುವ ಸಲುವಾಗಿ ದಾವಣಗೆರೆಯಲ್ಲಿ ರಶ್ಮಿ ಹೆಣ್ಣು ಮಕ್ಕಳ ವಸತಿಯುತ ಶಾಲೆಗೆ ಅಡಿಪಾಯ ಹಾಕಿದರು ಡಾ.ನಾಗರಾಜ್. ಆ ಅಡಿಪಾಯಕ್ಕೆ ಬುನಾದಿಯಾಗಿದ್ದಲ್ಲದೆ, ಅದರ ಮುನ್ನೆಡೆಗೂ ಸೇತು ಆದರು ಪ್ರೇಮಾ ಅವರು.

1999ರಲ್ಲಿ ಬಾಡಿಗೆ ಕಟ್ಟಡ ಒಂದರಲ್ಲಿ ಆರಂಭವಾದ ರಶ್ಮಿ ಶಾಲೆ ಇಂದು ದಾವಣಗೆರೆ ಹೊರವಲಯದಲ್ಲಿ ಪಿ.ಬಿ ರಸ್ತೆಯ ಜಿಲ್ಲಾಡಳಿತ ಭವನದ ಹತ್ತಿರ, ಜಿಎಂಐಟಿ ಕಾಲೇಜ್ ಬಳಿ ಕುಂದವಾಡ ಕೆರೆಗೆ ಕೂಡಿಕೊಳ್ಳುವ ಜಾಗವೊಂದರಲ್ಲಿ ಬೃಹತ್ ಸ್ವರೂಪ ತಾಳಿ ನಿಂತು ಅನೇಕ ಬಡ ಹೆಣ್ಣು ಮಕ್ಕಳ ಬಾಳನ್ನು ಬೆಳಗುತ್ತಿದೆ. ಆರಂಭದಿಂದ ಈವರೆಗೂ ಇದರ ನಿರ್ವಹಣೆಯ ಬಹುಪಾಲು ಜವಬ್ದಾರಿಯನ್ನು ಹೊತ್ತು ಅಲ್ಲಿಯ ಮಕ್ಕಳನ್ನು ತಾಯಿಯಂತೆ ಸಲಹುತಿದ್ದಾರೆ ಪ್ರೇಮಾ ಮೇಡಂ.

ಅನಾಥ ಮಕ್ಕಳ ಆಶ್ರಯ ತಾಣ – ರಶ್ಮಿ ಶಾಲೆ

ಅತ್ಯಂತ ಕಡು ಬಡವರು, ನಿರ್ಗತಿಕರು, ಅನಾಥರು, ತಂದೆ ಇದ್ದು ತಾಯಿ ಇಲ್ಲದ ಅಥವಾ ತಾಯಿ ಇದ್ದು ತಂದೆ ಇಲ್ಲದ ಏಕ ಪೋಷಕ ಬಡ ಹೆಣ್ಣು ಮಕ್ಕಳು ರಶ್ಮಿ ಶಾಲೆಯಲ್ಲಿ ಆಶ್ರಯ ಪಡೆದಿದ್ದಾರೆ. ಸುಮಾರು 250-300ಕ್ಕೂ ಅಧಿಕ ಹೆಣ್ಣು ಮಕ್ಕಳಿರುವ ಈ ಶಾಲೆಯಲ್ಲಿ 1 ರಿಂದ 10ನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ಸಂಪೂರ್ಣ ಉಚಿತ ಶಿಕ್ಷಣದ ಸೌಲಭ್ಯ ಕಲ್ಪಿಸಲಾಗಿದೆ. ಪ್ರತಿ ವರ್ಷ 25 ಅರ್ಹ ಕಡು ಬಡ ಮಕ್ಕಳಿಗೆ 1ನೇ ತರಗತಿಗೆ ಪ್ರವೇಶಾತಿ ನೀಡುತ್ತಿದ್ದು, ಕಾರಣಾಂತರದಿಂದ ಖಾಲಿ ಉಳಿದಿದ್ದಲ್ಲಿ ಬಡ ಮಕ್ಕಳಿಗೆ ಇತರೆ ತರಗತಿಗಳಿಗೂ ಪ್ರವೇಶವಕಾಶ ಕಲ್ಪಿಸಿಕೊಡಲಾಗುತ್ತಿದೆ.

ಪ್ರಸ್ತುತ 2017-18ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶಾಲೆಯ ಒಬ್ಬ ವಿದ್ಯಾರ್ಥಿನಿ 79% ಕ್ಕೂ ಅಧಿಕ, 7 ಮಕ್ಕಳು 70% ಕ್ಕೂ ಅಧಿಕ ಹಾಗೂ 16 ಮಕ್ಕಳು 75 ಕ್ಕೂ ಅಧಿಕ ಶೇಕಡವಾರು ಅಂಕ ಗಳಿಸುವ ಮೂಲಕ ಉಚಿತ ಶಿಕ್ಷಣಕ್ಕೆ ಆಯ್ಕೆಯಾಗಿದ್ದಾರೆ. ಬಡ ಪ್ರತಿಭಾವಂತ ವಿದ್ಯಾರ್ಥಿನಿಯರ ವಿದ್ಯಾಭ್ಯಾಸ ಮುಂದುವರೆಯಲಿ ಎಂಬ ಕಾರಣಕ್ಕಾಗಿ ಈ ಬಾರಿ 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರ ಪಿಯುಸಿ ಶಿಕ್ಷಣಕ್ಕೂ ಸಹ ನೆರವು ನೀಡಿದೆ ಈ ಶಾಲೆ. ಹಸಿರ ಹಾಸಿಗೆಯೊಳಗೆ ಆವೃತವಾಗಿರುವ ಸುಸಜ್ಜಿತ ಶಾಲಾ ಕಟ್ಟಡ, ಪ್ರತಿ ತರಗತಿಗೂ ಪ್ರತ್ಯೇಕ ಕೊಠಡಿಗಳು, ಗ್ರಂಥಾಲಯ, ಕಂಪ್ಯೂಟರ್, ನಿರ್ಮಲ ಗಾಳಿ, ಬೆಳಕಿನಿಂದ ಕೂಡಿದ ಪ್ರಶಾಂತ ವಾತಾವರಣ, ಎಲ್ಲಾ ವಿದ್ಯಾರ್ಥಿನಿಯರ ಬಗ್ಗೆಯೂ ವೈಯಕ್ತಿಕ ಕಾಳಜಿ, ಸಿಸಿ ಟಿವಿಯ ಕಣ್ಗಾವಲು ಸೇರಿದಂತೆ ಅಕ್ಷರಶಃ ಹೈಟೆಕ್ ಮಾದರಿಯ ಸಕಲ ಸೌಲಭ್ಯಗಳು ಸಂಪೂರ್ಣ ಉಚಿತವಾಗಿ ಸಿಗುವ ಜೊತೆ ಪ್ರೇಮಾ ಅವರ ತಾಯ್ತನದ ಮಮತೆ, ನಾಗರಾಜ್ ಅವರ ತಂದೆಯ ಹಾರೈಕೆ – ಪ್ರೀತಿಯ ಪೋಷಣೆ ಸೇರಿದಂತೆ ಎಲ್ಲವೂ ಒಂದೇ ಸೂರಿನಡಿ ಸಿಗುತ್ತಿರುವಾಗ ಇಲ್ಲಿನ ಮಕ್ಕಳಿಗೆ ಅನಾಥ ಪ್ರಜ್ಞೆ ಕಾಡುವ ಮಾತಾದರೂ ಎಲ್ಲಿ ! ತಾವು ಅನಾಥರು ಅಥವಾ ಬಡವರೆಂಬ ಭಾವನೆ ಕೂಡ ಇಲ್ಲಿನ ಮಕ್ಕಳ ಮನಸಿನಲ್ಲಿ ಎಂದಿಗೂ ಸುಳಿಯದಂತೆ ಸದಾ ಜಾಗೃತಿ ವಹಿಸಿರುವುದರ ಹಿಂದೆ ಪ್ರೇಮಾ ಅವರ ಅಪಾರ ಕಾಳಜಿ ಮತ್ತು ಪರಿಶ್ರಮವಿದೆ.

ಅನಾಥರಿಗೆ ದಯೆ ಬದಲು ಸಹಕಾರ ನೀಡಬೇಕು

ಅನಾಥರು, ಬಡವರು, ಮತ್ತು ನಿರ್ಗತಿಕರಿಗೆ ದಯೆ, ಅನುಕಂಪ ತೋರಿದರೆ ಸಾಲದು. ಉಳ್ಳವರು ಅವರ ಜೀವನೋನ್ನತಿಗೆ ಕೈಲಾದ ಸಹಾಯ, ಸಹಕಾರದ ಹಸ್ತ ಚಾಚಬೇಕು. ಅವರ ಬದುಕಿನ ಸ್ಥಿತಿ ಸುಧಾರಣೆಗೆ ಸಲಹೆ, ಮಾರ್ಗದರ್ಶನವನ್ನು ಸಹ ನೀಡಿ ಅವರನ್ನು ಅಸಹಾಯಕ ಪರಿಸ್ಥಿತಿಯಿಂದ ಹೊರ ತರಬೇಕು ಎಂಬ ಉದಾತ್ತ ಚಿಂತನೆ – ದ್ಯೇಯೋದ್ದೇಶಗಳನ್ನು ಹೊಂದಿರುವ ಪ್ರೇಮಾ ನಾಗರಾಜ್ ದಂಪತಿಗಳು ಈ ಶಾಲೆಯ ಮಕ್ಕಳಿಗೆ ಗುಣಮಟ್ಟದ ಶಿಕ್ಷಣದೊಂದಿಗೆ ಸ್ವಾವಲಂಬಿ ಬದುಕಿನ ತರಬೇತಿಯ ವ್ಯವಸ್ಥೆ ಕೂಡ ಮಾಡಿದ್ದಾರೆ. ಆಟ – ಪಾಠ, ಯೋಗ, ಧ್ಯಾನ, ಸಾಂಸ್ಕøತಿಕ ಕಾರ್ಯಕ್ರಮಗಳು, ಉತ್ತಮ ಸಂಸ್ಕಾರ – ಸಂಸ್ಕøತಿ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾದ ವಿವಿಧ ಕಾರ್ಯಾಗಾರಗಳು ಹಾಗೂ ಚಟುವಟಿಕೆಗಳ ಆಯೋಜನೆ ಜೊತೆ ಟೈಲರಿಂಗ್, ಎಂಬ್ರಾಯಿಡರಿ, ಕಸೂತಿಯಂತಹ ಸ್ವಾವಲಂಬಿತನ ರೂಢಿಸುವ ಚಟುವಟಿಕೆಗಳನ್ನು ಸಹ ಕಲಿಸಲಾಗುತ್ತಿದೆ.

ದುಡಿಮೆಯ ಹಣವೆಲ್ಲವೂ ಸೇವೆಗೆ ಮೀಸಲು

ಕುಕ್ಕವಾಡ ಗ್ರಾಮದ ಡಾ.ಡಿ ಪರ್ವತಪ್ಪ ಮತ್ತು ನಂಜಮ್ಮ ದಂಪತಿಗಳ ಕುಟುಂಬ ಹಿಂದಿನಿಂದಲೂ ಸದಾ ಸೇವೆಗೆ ಹೆಸರಾದ ಮನೆತನ. ತಾವು ದುಡಿದ ದುಡ್ಡಿನಲ್ಲಿ ಸಂತೃಪ್ತಿಯ ಜೀವನಕ್ಕೆ ಎಷ್ಟು ಬಳಸಬೇಕೋ ಅಷ್ಟನ್ನು ಹಿತ ಮಿತವಾಗಿ ಬಳಸಿ ಉಳಿದ ಹಣವನ್ನು ದಾನ – ಧರ್ಮ ಮತ್ತು ಸತ್ಕಾರ್ಯಕ್ಕೆ ಮೀಸಲಿಡಬೇಕು ಎಂಬ ಚಿಂತನೆ ನಂಜಪ್ಪನವರದಾಗಿತ್ತು. ಅಂತೆಯೇ ಅವರ ಮಕ್ಕಳಾದ ಡಾ.ಸುರೇಂದ್ರ, ಡಾ.ನಾಗರಾಜ್ ಹಾಗೂ ಅವರ ಸಹೋದರಿಯರು ಸೇರಿದಂತೆ ಕುಟುಂಬದ ಸರ್ವ ಸದಸ್ಯರು ಸಹ ಅದೇ ನಿಯಮವನ್ನು ಪಾಲಿಸುತ್ತಾ ರಶ್ಮಿ ಶಾಲೆಯನ್ನು ಇಂದಿಗೂ ಅದೇ ಹಾದಿಯಲ್ಲಿ ಮುನ್ನಡೆಸುತ್ತಿದ್ದಾರೆ.

ಒಮ್ಮೆ ಯೋಚಿಸೋಣ

ಈ ದುಬಾರಿ ಕಾಲದಲ್ಲಿ ಒಂದು ಕುಟುಂಬದ ಜವಬ್ದಾರಿ ನಿರ್ವಹಿಸುವುದೇ ಕಷ್ಟ. ಅಂಥದ್ರಲ್ಲಿ 250-300 ಮಕ್ಕಳ ಸಂಪೂರ್ಣ ಜವಬ್ದಾರಿ ಹೊತ್ತು ಶಿಕ್ಷಣ, ಊಟ – ಬಟ್ಟೆ, ವಸತಿಯ ಜೊತೆ ಎಲ್ಲವನ್ನೂ ಉಚಿತವಾಗಿಯೇ ನೀಡುತ್ತಾ ಸಾಕಿ ಸಲುಹುವುದೆಂದರೆ ಸುಲಭದ ಮಾತೇನು.., ನಿಜಕ್ಕೂ ಅದು ಅಚ್ಚರಿಯ ಸಾಹಸ ಮತ್ತು ಸಾಧನೆಯೇ ಸರಿ!. ಇದರ ಹಿಂದಿರುವ ಪ್ರೇಮಾ ಅವರ ಧೀ ಶಕ್ತಿ, ನಿರ್ವಹಣೆಯ ಕೌಶಲ್ಯ ಹಾಗೂ ಏನೇ ಸಂಕಷ್ಟಗಳು ಎದುರಾದರೂ ಸಹ ಧೈರ್ಯಗುಂದದೆ ಅಣ್ಣನಿಗೆ ಕೊಟ್ಟ ಮಾತನ್ನು ಪಾಲಿಸಲು ಆ ಸಂಸ್ಥೆಯನ್ನು ಕಟ್ಟಿ, ಬೆಳೆಸಿ ಅದರ ಅಸ್ತಿತ್ವ ಕಾಪಾಡುತ್ತಿರುವ ಅವರ ಪತಿ ಡಾ.ನಾಗರಾಜ್ ಅವರ ಆ ಕೆಚ್ಚೆದೆ ಔದಾರ್ಯ – ಆದರ್ಶಗಳು ಸಮಾಜಕ್ಕೆ ಮಾದರಿಯಲ್ಲದೇ ಮತ್ತೇನು…?

ಗೌರವ ಪುರಸ್ಕಾರ

ಶ್ರೀಮತಿ ಪ್ರೇಮಾ ಅವರ ನಿಸ್ವಾರ್ಥ ಸೇವೆ, ಹೆಣ್ಣು ಮಕ್ಕಳ ಬಗೆಗಿನ ಕಳಕಳಿ ಹಾಗೂ ಸ್ವಾವಲಂಬಿ ಬದುಕಿಗೆ ಆಸರೆಯಾಗಿರುವ ಅವರ ಸೇವೆಯ ತುಡಿತವನ್ನು ಗುರುತಿಸಿ ದಾವಣಗೆರೆ ಜಿಲ್ಲಾ ಸಮಾಚಾರ್ ಪತ್ರಿಕೆಯು ಅವರಿಗೆ “ 2017 ರ ವರ್ಷದ ವ್ಯಕ್ತಿ ” ಎಂಬ ಪುರಸ್ಕಾರ ನೀಡಿ ಗೌರವಿಸಿರುವ ಸ್ತುತ್ಯಾರ್ಹ ಕಾರ್ಯವನ್ನು ಇಲ್ಲಿ ಸ್ಮರಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಗಂಗಾಧರ ಬಿ.ಎಲ್ ನಿಟ್ಟೂರ್ ಅವರು, ಮೂಲತಃ ದಾವಣಗೆರೆ ಜಿಲ್ಲೆಯ,ಹರಿಹರ ತಾಲ್ಲೂಕಿನ, ನಿಟ್ಟೂರು ಗ್ರಾಮದವರು. ಹಲವು ಶಾಲಾ-ಕಾಲೇಜುಗಳಲ್ಲಿ ಸುಮಾರು 20 ವರ್ಷದಿಂದ ಶಿಕ್ಷಕ ವೃತ್ತಿ ನಿರ್ವಹಿಸುತ್ತಿದ್ದಾರೆ. ದಾವಣಗೆರೆ ಕೇಬಲ್ ಫಸ್ಟ್ ನೆಟ್ ನ 'ಕಾವ್ಯಧಾರೆ' ಪ್ರೋಗ್ರಾಂ ಆರ್ಗನೈಸರ್ ಮತ್ತು ನಿರೂಪಕರಾಗಿ 5 ವರ್ಷ ಹಾಗೂ ಜನಮಿಡಿತ, ಜನತಾ ಬಳಗ, ಕನ್ನಡ ಭಾರತಿ ಪತ್ರಿಕೆಗಳಲ್ಲಿ ಸಹ ಸಂಪಾದಕರಾಗಿ ಸೇವೆ ಮತ್ತು ವಿವಿಧ ವಿಷಯಗಳ ಉಪನ್ಯಾಸಕರಾಗಿ, ನಿರೂಪಕರಾಗಿ, ನಾಟಕ-ನೃತ್ಯ ನಿರ್ದೇಶಕರಾಗಿ, ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಿದ್ದಾರೆ. E- Mail : blgnittur123@gmail.com Mobile : 8867702396

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಸಾಮಾನ್ಯಳು

ಭಾರತದ ಕಿರಿಯ ಲೇಖಕಿ ‘ಮಾನ್ಯ ಹರ್ಷ’..!

Published

on

ಮಾನ್ಯ ಹರ್ಷ

ತ್ತು ವರ್ಷದ ಈ ಪುಟ್ಟ ಲೇಖಕಿ ಮಾನ್ಯ ಹರ್ಷ ಗೆ ಓದುವುದು ಬರೆಯುವುದು ಎಂದರೆ ತುಂಬಾ ಇಷ್ಟವಂತೆ. ಬೆಂಗಳೂರಿನ ಚಿತ್ರ ಮತ್ತು ಹರ್ಷ ದಂಪತಿಗಳ ಮಗಳಾದ ಮಾನ್ಯ ಹತ್ತು ವರ್ಷಕ್ಕೆ ಕನ್ನಡದಲ್ಲಿ ಪುಸ್ತಕ ಬರೆದು ಕನ್ನಡದ ಕಿರಿಯ ಲೇಖಕಿ ಎಂಬ ಹೆಗ್ಗಳಿಕೆಗೆ ಪಾತ್ರಳಾಗಿದ್ದಾಳೆ.

ಈಕೆ ಬರೆದಿರುವ “ ನೀರಿನ ಪುಟಾಣಿ ಸಂರಕ್ಷಕರು ” ಮಕ್ಕಳ ಕಾದಂಬರಿಗೆ , ಇಂಡಿಯಾ ಬುಕ್ ಆಫ್ ರೆಕಾರ್ಡ್ ವತಿಯಿಂದ ” ಕನ್ನಡದಲ್ಲಿ ಪುಸ್ತಕ ಬರೆದಿರುವ ಕಿರಿಯ ಲೇಖಕಿ “ ಎಂಬ ಬಿರುದಿಗೆ ಪಾತ್ರಳಾಗಿದ್ದಾಳೆ ಮಾನ್ಯ.

ಬೆಂಗಳೂರಿನ ಬಿ.ಟಿ.ಎಮ್ ಬಡಾವಣೆ ಯ ವಿಬ್ಗಯಾರ್ ಶಾಲೆಯ ಐದನೇ ತರಗತಿಯಲ್ಲಿ ಓದುತ್ತಿರುವುದು ಮಾನ್ಯ ತಾನು ಅಪ್ಪಟ ಕನ್ನಡತಿ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಾಳೆ. ಚಿಕ್ಕ ವಯಸ್ಸಿನಲ್ಲೇ ಸಾಹಿತ್ಯ ಆಸಕ್ತಿ ಯನ್ನು ಬೆಳಸಿಕೊಂಡಿರುವ ಮಾನ್ಯ, ತನ್ನ ಅಜ್ಜಿಯ ಬಾಯಿಂದ ಕನ್ನಡ ಕಥೆ-ಕವನಗಳನ್ನು ಕೇಳಿ ಬೆಳೆದ ಹುಡುಗಿ. ಕನ್ನಡದಲ್ಲಿ ಪುಸ್ತಕ ಬರೆಯಲು ನನ್ನ ಅಜ್ಜಿಯೇ ನನಗೆ ಸ್ಫೂರ್ತಿ ಎನ್ನುತ್ತಾಳೆ ಮಾನ್ಯ.

ಈಗಾಗಲೇ ” ನೇಚರ್ ಅವರ್ ಫ್ಯೂಚರ್” ಪುಸ್ತಕ ಬರೆದು ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಐದು ರೆಕಾರ್ಡ್ ಬುಕ್ಗಳಲ್ಲಿ ಹೆಸರು ಮಾಡಿರುವ ಈ ಪುಟ್ಟ ಲೇಖಕಿ, ವಜ್ರ ಬುಕ್ ಆಫ್ ರೆಕಾರ್ಡ್ ವತಿಯಿಂದ ” ಭಾರತದ ಕಿರಿಯ ಕವಿಯಿತ್ರಿ” ಎಂಬ ಬಿರುದನ್ನೂ ಮುಡಿಗೇರಿಸಿಕೊಂಡಿದ್ದಾಳೆ.

ನೀರಿನ ಪುಟಾಣಿ ಸಂರಕ್ಷಕರು” ಈಕೆಯ ಎರಡನೆಯ ಪುಸ್ತಕವಾಗಿದ್ದು , ಕನ್ನಡ ಮತ್ತು ಆಂಗ್ಲ ಭಾಷೆಗಳೆರಡರಲ್ಲೂ ಬರೆದಿದ್ದಾಳೆ.
ಆಂಗ್ಲ ಅವತರಣಿಕೆ ” ದಿ ವಾಟರ್ ಹೀರೋಸ್” ಮತ್ತು ಕನ್ನಡದಲ್ಲಿ ” ನೀರಿನ ಪುಟಾಣಿ ಸಂರಕ್ಷಕರು ” ಹೆಸರಲ್ಲಿ ರಚಿತವಾಗಿರುವ ಈ ಪುಸ್ತಕ ಸದ್ಯ ಕಾಡುತ್ತಿರುವ ನೀರಿನ ಕೊರತೆ ಮತ್ತು ಇದರ ಸಂರಕ್ಷಣೆಯ ತೀವ್ರತೆಯ ಮೇಲೆ ಬೆಳಕು ಚೆಲ್ಲುತ್ತದೆ.

ಈ ಪುಸ್ತಕ ಮಾರ್ಚ್ 22 ಕ್ಕೆ , ವಿಶ್ವ ಜಲ ದಿನದಂದು ಬಿಡುಗಡೆ ಆಗಬೇಕಿತ್ತು. ಆದ್ರೆ ವಿಶ್ವವನ್ನು ಕಾಡುತ್ತಿರುವ ಕರೋನ ಕಾಟದಿಂದಾಗಿ ಪುಸ್ತಕ ಬಿಡುಗಡೆ ತುಂಬಾ ಕಷ್ಟ ಆಯ್ತು. ಲಾಕ್ಡೌನ್ ನಡುವೆಯೂ ಪುಸ್ತಕವನ್ನು ಆನ್ಲೈನ್ ನಲ್ಲೇ ಬಿಡುಗಡೆ ಮಾಡಿದೆವು ಎಂದು ತಮ್ಮ ಅಳಲು ವ್ಯಕ್ತ ಪಡಿಸಿದರು.

ಪುಟ್ಟ ಲೇಖಕಿಯು, ದೈನಂದಿನ ಜೀವನದ ಸರಳ ನಿದರ್ಶನಗಳ ಮೂಲಕ ನೀರಿನ ಸಮಸ್ಯೆ ಯನ್ನು ಸ್ವಾರಸ್ಯಕರವಾಗಿ ನಿರೂಪಿಸಲು ಪ್ರಯತ್ನಿಸಿದ್ದಾರೆ.

ನೀರನ್ನು ಉಳಿಸಲು ಪ್ರತಿಯೊಬ್ಬರೂ ಅನುಸರಿಸಬೇಕಾದ ಅತ್ಯಂತ ಸರಳ ಮತ್ತು ಸುಲಭ ನಿಯಮಗಳನ್ನು ಈ ಪುಸ್ತಕ ಒಳಗೊಂಡಿದೆ.

ಇಂದಿನ ಮಕ್ಕಳೇ ನಾಳೆಯ ಪ್ರಜೆಗಳು. ಚಿಕ್ಕ ವಯಸ್ಸಿನಲ್ಲೇ ಪ್ರಕೃತಿಯ ಬಗೆಗಿನ ಜವಾಬ್ದಾರಿ ಅರಿತ ಮಕ್ಕಳು ಹೇಗೆ ತಮ್ಮ ಪುಟ್ಟ ಕೈಗಳಿಂದ ದೊಡ್ಡ ಕೆಲಸ ಮಾಡಿ ತೋರಿಸುತ್ತಾರೆ ಎಂಬುದರ ಕಥಾಸಂಗಮವೇ ” ” ಪುಟಾಣಿ ಸಂರಕ್ಷಕರು ” .

ನೀರು ಪ್ರಕೃತಿಯ ಅಮೂಲ್ಯ ದ್ರವವಾಗಿದೆ. ನೀರು ಇಲ್ಲದೆ ಜೀವನವು ಅಸ್ತಿತ್ವದಲ್ಲಿಲ್ಲ. 3/4 ನೇ ಭಾಗದಷ್ಟು ಭೂಮಿಯ ಮೇಲ್ಮೈ ಜಲಮೂಲಗಳಿಂದ ಆವರಿಸಿದ್ದರೂ, ಈ ನೀರಿನ 97 ಪ್ರತಿಶತ ಉಪ್ಪು ನೀರಿನ ರೂಪದಲ್ಲಿ ಸಾಗರಗಳಲ್ಲಿದೆ, ಮತ್ತು ಮಾನವ ಬಳಕೆಗೆ ಅನರ್ಹವಾಗಿದೆ.

ಕೇವಲ 2.7% ಮಾತ್ರ ಶುದ್ದ ನೀರು ಇದ್ದು ಭ ಇದರಲ್ಲಿ ಸುಮಾರು 70% ರಷ್ಟು ನೀರು
ಹಿಮನದಿಗಳಾಗಿವೆ. ಅದರಲ್ಲಿ ಕೇವಲ 1% ಶುದ್ಧ ನೀರು ಲಭ್ಯವಿದ್ದು ಮಾನವ ಬಳಕೆಗೆ ಯೋಗ್ಯವಾಗಿದೆ. ಆದ್ದರಿಂದ ಈ ಅಮೂಲ್ಯವಾದ ಸಂಪನ್ಮೂಲವನ್ನು ಸಂರಕ್ಷಿಸುವುದು ಬಹಳ ಮುಖ್ಯ ಎಂದು ಸಾರಿ ಹೇಳುತ್ತಿದ್ದಾರೆ ಈ ಪುಟ್ಟ ಲೇಖಕಿ. ಈ ಪುಸ್ತಕವು ಪ್ರಕೃತಿ ತಾಯಿಗೆ ಅರ್ಪಿತವಾಗಿವೆ.

ವಿಶ್ವ ಜಲ ದಿನಾಚರಣೆ, ಮಾರ್ಚ್ 22, 2018 ರಂದು, ಮಾನ್ಯ , 38 ಮಕ್ಕಳು ಮತ್ತು 36 ಪೋಷಕರೊಂದಿಗೆ ನೀರು ಉಳಿಸಿ ಮೆರವಣಿಗೆ ಜಾತಾ ಹಮ್ಮಿಕೊಂಡಿದ್ದಳು. ದೊರೆಸಾನಿ ಅರಣ್ಯ ಪ್ರದೇಶ ದಿಂದ ಪ್ರಾರಂಭವಾದ ಜಾತಾ ಪುಟ್ಟನ್‌ಹಳ್ಳಿ ಕೆರೆ ಯಲ್ಲಿ ಸಸಿಗಳನ್ನು ನೆಡುವ ಮೂಲಕ ಕೊನೆಗೊಂಡಿತು. ಮಕ್ಕಳು ನೀರನ್ನು ಉಳಿಸುವ ವಾಗ್ದಾನ ಮಾಡಿದರು ಮತ್ತು ನೀರು ಸಂರಕ್ಷಣೆ ಬಗ್ಗೆ ಸ್ಥಳೀಯರಲ್ಲಿ ಜಾಗೃತಿ ಮೂಡಿಸಿದರು.

ಮನ್ಯಾ ಕನ್ನಡದಲ್ಲಿ ರಾಪ್ ಹಾಡನ್ನು ಬರೆದು ಹಾಡಿದ್ದಾರೆ. ಪ್ರಕೃತಿಯ ಸಂರಕ್ಷಣೆ ಬಗೆಗಿನ ಈ ರಾಪ್ ಸಂಗ ಸಾಮಾಜಿಕ ಮಾಧ್ಯಮ ಮತ್ತು ಪತ್ರಿಕಾ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ವಿಬ್ಗಿಯರ್ ಬಿಟಿಎಂ ಶಾಲೆಯ ವಿದ್ಯಾರ್ಥಿಗಳು ಹಾಡಿದ ಸ್ಟ್ರೈಕ್ ಆಫ್ ಪ್ಲಾಸ್ಟಿಕ್ ಗೀತೆಯ ಸಾಹಿತ್ಯವನ್ನೂ ಮಾನ್ಯಾ ಬರೆದಿದ್ದಾರೆ. ಇದೇ ಶಾಲೆಯ ಮ್ಯೂಸಿಕ್ ಸರ್ ಈ ಹಾಡುಗಳಿಗೆ ಸಂಗೀತ ಸಂಯೋಜಿಸಿದ್ದು , ದೊಡ್ಡ ಹಿಟ್ ಆಗಿದೆ.

ಭಾರತ ಕೇಂದ್ರ ಸರಕಾರ ಹಮ್ಮಿಕೊಂಡಿದ್ದ #WaterHeroes ಸ್ಪರ್ಧೆ ಯಲ್ಲಿ ಕೂಡ ಮಾನ್ಯಳ ನೀರಿನ ಹೋರಾಟ ಮತ್ತು ಕಳಕಳಿ ಗೆ ಪ್ರಶಸ್ತಿ ಬಂದಿದೆ.

UN -Water ನ ಫೇಸ್ ಬುಕ್ ಖಾತೆಯಲ್ಲಿ ಈ ಪುಟ್ಟ ಬಾಲೆಯ ನೀರಿನ ಹೋರಾಟ ಹಾಗೂ ನೀರಿನ ಸಂರಕ್ಷಣೆ ಕಳಕಳಿ ಬಗ್ಗೆ ಹಂಚಿಕೊಳ್ಳಲಾಗಿದೆ.

ಈ ಕಿರಿಯ ಕವಿಯಿತ್ರಿಯ ಕಿವಿಮಾತು

ನೀವು ಉಪದೇಶ ಮಾಡುವ ಮೊದಲು ಸ್ವಯಂ
ಅಭ್ಯಾಸ ಮಾಡಿ”.

ಅಪ್ರತಿಮ ಪ್ರತಿಭೆಯ ಈ ಪುಟ್ಟ ಬಾಲೆ ಹೆಚ್ಚು ಹೆಚ್ಚು ಪ್ರಶಸ್ತಿಗಳನ್ನು ಮುಡಿಗೇರಿಸಲಿ. ಮತ್ತಷ್ಟು
ಯಶಸ್ಸ ಈಕೆಯದಾಗಲಿ ಎಂದು ಹಾರೈಸೋಣ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಸಾಮಾನ್ಯಳು

ಗ್ರಾಂಡ್ ಮಾಸ್ಟರ್ ಮಾನ್ಯ ಹರ್ಷ ; ಈಕೆ ಭಾರತದ ಅತ್ಯಂತ ಕಿರಿಯ ಕವನಗಾರ್ತಿ..!

Published

on

  • ಸುದ್ದಿದಿನ ಡೆಸ್ಕ್

ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎಂಬ ನಾನ್ನುಡಿಯಂತೆ, ಒಂಭತ್ತನೇ ವಯಸ್ಸಿಗೇ ಪುಸ್ತಕ ಬರೆದು, ಭಾರತದ ಅತ್ಯಂತ ಕಿರಿಯ ಕವನಗಾರ್ತಿ ಎಂಬ ಬಿರುದಿಗೆ ಪಾತ್ರರಾಗಿದ್ದಾಳೆ ಬೆಂಗಳೂರಿನ ಚಿತ್ರ ಹಾಗೂ ಹರ್ಷ ದಂಪತಿಗಳ ಮುದ್ದಿನ ಮಗಳು ಮಾನ್ಯ ಹರ್ಷ. ಬೆಂಗಳೂರಿನ ವಿಬ್ಗಯಾರ್ ಹೈ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿರುವ ಈಕೆ , ಮೂರು ದಾಖಲೆಗಳ‌ ಒಡತಿ. ಏಷಿಯಾ ಬುಕ್ ಆಫ್ ರೆಕಾರ್ಡ್ಸ್, ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್, ವಜ್ರ ವರ್ಲ್ಡ್ ರೆಕಾರ್ಡ್, ವತಿಯಿಂದ ಮೂರು ಬಿರುದುಗಳು ಈ ಪುಟ್ಟ ಪೋರಿಗೆ ಪ್ರಾಪ್ತ ವಾಗಿದೆ.

ಚಿಕ್ಕ ವಯಸ್ಸಿನಲ್ಲೇ, ಪರಿಸರ ಪ್ರಜ್ಞೆ ಹಾಗೂ ಕಾಳಜಿ ಬೆಳೆಸಿಕೊಂಡಿರುವ ಒಂಬತ್ತರ ಹರೆಯದ ಮಾನ್ಯ ಹರ್ಷ,ಈ ಸಣ್ಣ ವಯಸ್ಸಿನಲ್ಲೇ “ ನೇಚರ್ ಅವರ್ ಫ್ಯೂಚರ್” ಪುಸ್ತಕ ಬರೆದು “ಭಾರತದ ಕಿರಿಯ ಕವನಗಾರ್ತಿ ” ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾಳೆ.

ಜುಲೈ 5, 2019ರಂದು ಮುದ್ರಣಗೊಂಡ “ನೇಚರ್ ಅವರ್ ಫ್ಯೂಚರ್” ಪುಸ್ತಕ ಮಾರುಕಟ್ಟೆಯಲ್ಲಿ ಭಾರಿ ಬೇಡಿಕೆ ಗಿಟ್ಟಿಸಿಕೊಂಡಿದೆ. 55 ಕವನಗಳನ್ನು ಒಳಗೊಂಡಿರುವ ಈ ಪುಸ್ತಕ, ಚಿನ್ನರಲ್ಲಿ ಪರಿಸರ ಪ್ರಜ್ಞೆ ಮೂಡಿಸಿದೆ. ದೇಶ, ದೇಶ ಪ್ರೇಮ,ಸೈನಿಕರ‌ ತ್ಯಾಗ-ಬಲಿದಾನ, ಪ್ರಕೃತಿ, ಪರಿಸರ‌, ಹೆಣ್ಣಿನ ಮಹತ್ವದ ಬಗ್ಗೆ ಕವನಗಳನ್ನು ಒಳಗೊಂಡಿರುವ ಈ ಪುಸ್ತಕ ದಾಖಲೆ ಸೃಷ್ಟಿಸಿದೆ.

  1. ವಜ್ರ ವರ್ಲ್ಡ್ ರೆಕಾರ್ಡ್ ವತಿಯಿಂದ ಈ ಪುಸ್ತಕ ಬರೆದ ಮಾನ್ಯ ಹರ್ಷ “ಭಾರತದ  ಅತ್ಯಂತ ಕಿರಿಯ ಕವನಗಾರ್ತಿ” ಎಂಬ ಬಿರುದು ನೀಡಿ ಸನ್ಮಾನಿಸಲಾಗಿದೆ.
  2. ಏಷಿಯಾ ಬುಕ್ ಆಫ್ ರೆಕಾರ್ಡ್ಸ್  ವತಿಯಿಂದ, “ಗ್ರಾಂಡ್ ಮಾಸ್ಟರ್” ಬಿರುದು , ಪಾರಿತೋಷಕ ನೀಡಿ ಗೌರವಿಸಲಾಗಿದೆ.
  3. ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ವತಿಯಿಂದ” ಪರಿಸರ ಕುರಿತ ಕವನಗಳು ರಚಿಸಿದ  ಅತ್ಯಂತ ಕಿರಿಯ ಕವನಗಾರ್ತಿ ಎಂಬ ಬಿರುದು, ಪಾರಿತೋಷಕ, ಮೆಡಲ್ ನೀಡಿ ಗೌರವಿಸಲಾಗಿದೆ.

ಸಣ್ಣ ವಯಸ್ಸಿನಲ್ಲೇ ಬರೆಯುವ ಗೀಳು ಅಂಟಿಸಿಕೊಂಡ ಮಾನ್ಯ, ಆರನೇ ವಯಸ್ಸಿಗೇ ಹಲವಾರು ಕವನಗಳನ್ನು ರಚಿಸತೊಡಗಿದಳು. ಇದನ್ನು ಕಂಡ ಆಕೆಯ ಶಾಲಾ ಶಿಕ್ಷಕರು, ಈ ಪುಟ್ಟ ಕವನಗಾರ್ತೀಯ ಬರೆಯುವ ಹವ್ಯಾಸವನ್ನು ಮತ್ತಷ್ಟು ಪ್ರೋತ್ಸಾಹಿಸಿದರು.

2018ರ ಕಿಡ್ಸ್ ವರ್ಲ್ಡ್ ಅಂತಾರಾಷ್ಟ್ರೀಯ ಸಣ್ಣ ಕಥೆಗಳ ಪ್ರಶಸ್ತಿಗೂ ಮಾನ್ಯ ಪಾತ್ರರಾಗಿದ್ದಾಳೆ. ಈಕೆ ರಚಿಸಿದ,” ಥಾಂಕ್ಸ್ ಗಿವಿಂಗ್” ಸಣ್ಣ ಕಥೆಯು ಭಾರೀ ಪ್ರಶಂಸೆಗೆ ಒಳಪಟ್ಟಿದೆ.

ಮೂರು ವರ್ಷಗಳ,  ಪುಸ್ತಕ ಮುದ್ರಿಸುವ,  ಈಕೆಯ ಕನಸು ಈಗ ನನಸಾಗಿದೆ. “ನೇಚರ್ ಅವರ್ ಫ್ಯೂಚರ್” ಪುಸ್ತಕ ಮಾನ್ಯಾಳ ಪರಿಸರ ಪ್ರಜ್ಞೆ ಹಾಗೂ ಕಾಳಜಿ ಗೆ ಕನ್ನಡಿ ಹಿಡಿದಂತಿದೆ.ಮಾರ್ಚ್ 22,2018 ರೈ ವಿಶ್ವ ಜಲ ಸಂರಕ್ಷಣಾ ದಿನಾಚರಣೆ ಅಂಗವಾಗಿ , ಚಿನ್ನದ ವಾಕಥಾನ್ ಆಯೋಜಿಸಿದ್ದ ಈ ಪೋರಿ, ಸ್ನೇಹಿತರೊಂದಿಗೆ”ನೀರು ಉಳಿಸಿ” ಆಂದೋಲನ  ನಡೆಸಿದ್ದಳು.

ಅಂತೆಯೇ,ಜೆ.ಪಿ.ನಗರದ ಪುಟ್ಟೇನಹಳ್ಳಿ ಕೆರೆಗೆ ಕಾಲ್ನಡಿಗೆಯಲ್ಲಿ ತೆರಳಿ, ಗಿಡಗಳನ್ನು ನೆಟ್ಟು ಪರಿಸರ ಪ್ರಜ್ಞೆ ಮೂಡಿಸದಳು ಮಾನ್ಯ ಹರ್ಷ. ಕಲೆ, ಕ್ರೀಡೆ ಯಲ್ಲಿ ವಿಶೇಷ ಆಸಕ್ತಿ ಹೊಂದಿರುವ ಮಾನ್ಯ,ಹಾಡು, ಕುಣಿತ,ಈಜುಗಾರಿಕೆಯಲ್ಲಿ ಹಲವಾರು ಪ್ರಶಸ್ತಿ ಗೌರವಗಳನ್ನು ಪಡೆದಿದ್ದಾಳೆ. ಕರಾಟೆ ಹಾಗೂ ಟೆಕ್ವಾಂಡೋ ವಿದ್ಯೆ ರೂಢಿಸಿಕೊಂಡಿರುವ ಮಾನ್ಯ ಕಲೆ-ಸಾಹಿತ್ಯ-ಕ್ರೀಡೆಗಳಲ್ಲಿ ಮುಂಚೂಣಿಯಲ್ಲಿದ್ದಾಳೆ.

ಇಷ್ಪಕ್ಕೇ ನಿಲ್ಲದೆ ಮಾನ್ಯಾಳ ಪುಸ್ತಕ ಪ್ರೀತಿ, ಈಗ ಈಕೆ ಕನ್ನಡದಲ್ಲಿ ರಚಿಸಿರುವ ಕವನ ಹಾಗೂ ಕಥೆಗಳ ಗುಚ್ಛವನ್ನು ಮುದ್ರಿಸುವ ತವಕದಲ್ಲಿದ್ದಾಳೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ4 days ago

ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ

ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ...

ಅಂತರಂಗ1 week ago

ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು

~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ...

ದಿನದ ಸುದ್ದಿ1 week ago

ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್

ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು. ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್...

ದಿನದ ಸುದ್ದಿ1 week ago

ದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ

ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ಶಿವಗಂಗೋತ್ರಿಯ ನೂತನ ವಿಜ್ಞಾನ ಸಭಾಂಗಣದಲ್ಲಿ ಕಂಪ್ಯೂಟರ್ ಅಪ್ಲಿಕೇಷನ್ಸ್ (ಎಮ್.ಸಿ.ಎ) ಹಾಗೂ ಕಂಪ್ಯೂಟರ್ ಸೈನ್ಸ್ (ಎಮ್.ಎಸ್ಸಿ) ವಿಭಾಗಗಳ ಸಂಯುಕ್ತಾಶ್ರಯದಲ್ಲಿ “ಸಂಶೋಧನಾ ಸಮಸ್ಯೆಯನ್ನು ಗುರುತಿಸುವ ವಿವಿಧ...

ದಿನದ ಸುದ್ದಿ2 weeks ago

ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ

ಸುದ್ದಿದಿನ,ದಾವಣಗೆರೆ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್. ಬಸವಂತಪ್ಪ ಅವರಿಗೆ ಸಚಿವ ಸ್ಥಾನ ದೊರೆತಿರುವುದು ದಾವಣಗೆರೆ ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಮಹತ್ವದ...

ದಿನದ ಸುದ್ದಿ2 weeks ago

ಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್

ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಹೆಮ್ಮೆಯ ಶಿಕ್ಷಣ ತಜ್ಞೆ, ಉದ್ಯಮಿ ಹಾಗೂ Parvatha Global Ventures LLP ಸಂಸ್ಥೆಯ ಸಂಸ್ಥಾಪಕಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (Founder & CEO)...

ದಿನದ ಸುದ್ದಿ2 weeks ago

ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ

ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು...

ದಿನದ ಸುದ್ದಿ2 weeks ago

ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ‌.ಕೆ.ಎ.ಓಬಳಪ್ಪ ಲೋಕಾಗೆ ದೂರು

ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7...

ದಿನದ ಸುದ್ದಿ2 weeks ago

ಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರಾಜ್ಯಾದ್ಯಂತ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಬಿಡುಗಡೆಯಾದ ರೂ. 695 ಲಕ್ಷಗಳ ಅನುದಾನದ ಖರ್ಚು ವೆಚ್ಚವನ್ನು ಇಲಾಖಾ...

ದಿನದ ಸುದ್ದಿ3 weeks ago

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,...

Trending