Connect with us

ದಿನದ ಸುದ್ದಿ

ದೇವರಾಜ ಅರಸು ಕೊಟ್ಟ ಕಾಣಿಕೆ ಇತಿಹಾಸದ ಪುಟಗಳಲ್ಲಿ ಮರೆಯಲಾಗದ್ದು : ಸಿ.ಎಂ. ಬಸವರಾಜ ಬೊಮ್ಮಾಯಿ

Published

on

ಸುದ್ದಿದಿನ ಡೆಸ್ಕ್ : ರಾಜ್ಯದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಪ್ರಗತಿಗೆ ದಿವಂಗತ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು(D. Devaraj Urs – Former Chief minister of Karnataka ) ಕೊಟ್ಟ ಕಾಣಿಕೆ ಇತಿಹಾಸದ ಪುಟಗಳಲ್ಲಿ ಮರೆಯಲಾಗದ್ದು, ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Basavaraj Bommai Chief minister of Karnataka ) ಹೇಳಿದ್ದಾರೆ.

ವಿಧಾನಸೌಧದ ಬ್ಯಾಂಕ್ವೇಟ್ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಏರ್ಪಡಿಸಿದ್ದ ದೇವರಾಜ ಅರಸು
107 ಜನ್ಮ ದಿನಾಚರಣೆ ಹಾಗೂ ಅರಸು ಪ್ರಶಸ್ತಿ ಪ್ರಧಾನ ಮಾಡಿ ಅವರು ಮಾತನಾಡಿದರು.

ರಾಜಕೀಯ ರಂಗದಲ್ಲಿ ಕರ್ನಾಟಕ ರಾಷ್ಟ್ರಮಟ್ಟದಲ್ಲಿ ತನ್ನದೇ ಆದ ಸ್ಥಾನ ಪಡೆಯಲು ಕಾರಣರಾಗಿದ್ದಾರೆ. ಕೃಷಿ ಆಧುನೀಕರಣ, ವಿದ್ಯುತ್ ಉತ್ಪಾದನೆ ಮತ್ತು ಹಿಂದುಳಿದವರು ಮತ್ತು ತುಳಿತಕ್ಕೆ ಒಳಗಾದವರ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಮಹಾನ್ ನಾಯಕ ಎಂದು ಬಣ್ಣಿಸಿದರು.

ಹಿಂದುಳಿದ ವರ್ಗಗಳ ಹಾಸ್ಟೆಲ್‌ಗಳ ಸುಧಾರಣೆ ಮತ್ತು ಮೂಲಸೌಲಭ್ಯಕ್ಕಾಗಿ ಸಚಿವರ ಕೋರಿಕೆಯಂತೆ 250 ಕೋಟಿ ರೂಪಾಯಿ ಅನುದಾನ ಒದಗಿಸುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಮೊದಲಾದವರು ಹಾಜರಿದ್ದರು.

ಇದನ್ನೂ ಓದಿ | ಕೆನಡಾದಲ್ಲಿ ಇಂದಿನಿಂದ 65ನೇ ಕಾಮನ್‌ವೆಲ್ತ್ ಸಂಸದೀಯ ಸಮ್ಮೇಳನ; ಸ್ಪೀಕರ್ ಓಂ ಬಿರ್ಲಾ ನೇತೃತ್ವದ ಭಾರತೀಯ ನಿಯೋಗ ಭಾಗಿ

ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ದೇವರಾಜ ಅರಸು ಜನ್ಮ ದಿನ ಆಚರಿಸಿದ ವರದಿಗಳು ಬಂದಿವೆ. ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದಲ್ಲಿ ಅರಸು ಜನ್ಮದಿನೋತ್ಸವಕ್ಕೆ ನಗರಾಭಿವೃದ್ದಿ ಸಚಿವ ಭೈರತಿ ಬಸವರಾಜು ಚಾಲನೆ ನೀಡಿ, ಜನಕಲ್ಯಾಣ ಯೋಜನೆ ಮೂಲಕವೇ ಕರ್ನಾಟಕಕ್ಕೆ ಹೊಸ ನಾಯಕತ್ವ ಕೊಟ್ಟ ಮಹಾನ್ ನಾಯಕ ಎಂದು ಬಣ್ಣಿಸಿದರು. ಶಾಸಕ ಸಿ.ಟಿ. ರವಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಚಿತ್ರದುರ್ಗದ ತಾರಾಸು ರಂಗಮಂದಿರದಲ್ಲಿ ಸಮಾಜ ಕಲ್ಯಾಣ ಪಶುಸಂಗೋಪನೆ ಮತ್ತು ವಿವಿಧ ಇಲಾಖೆಯ ಸಹಯೋಗದೊಂದಿಗೆ ಏರ್ಪಡಿಸಿದ್ದ ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆಯನ್ನು ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ಉದ್ಘಾಟಿಸಿದರು. ಅರಸು ಜಯಂತಿ ಅಂಗವಾಗಿ ಚಿತ್ರದುರ್ಗ ನಗರದಲ್ಲಿ ಭಾವಚಿತ್ರದ ಮೆರವಣಿಗೆ ನಡೆಯಿತು.

ದಾವಣಗೆರೆಯಲ್ಲಿಂದು ಅರಸು ಅವರ ಭಾವಚಿತ್ರದ ಬೃಹತ್ ಮೆರವಣಿಗೆಗೆ ಜಿಲ್ಲಾಧಿಕಾರಿ ಶಿವಾನಂದ ಕಾಪಸಿ ಚಾಲನೆ ನೀಡಿದರು. ವಿವಿಧ ಕಲಾ ತಂಡಗಳು, ಸಂಘ, ಸಂಸ್ಥೆಗಳ ಸಾವಿರಾರು ಮಂದಿ ಭಾಗವಹಿಸಿದ್ದರು.

ನಂತರ ಜಿಲ್ಲಾಡಳಿತ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸದ ಜಿ.ಎಂ.ಸಿದ್ದೇಶ್ವರ್, ಮಾತನಾಡಿ ಈ ನಾಡು ಕಂಡ ಅಭಿವೃದ್ಧಿಯ ಹರಿಕಾರ ಅರಸು ಅವರು ಹಾಕಿಕೊಟ್ಟಿರುವ ಹಾದಿಯಲ್ಲಿ ನಾವೆಲ್ಲ ಸಾಗಬೇಕಿದೆ ಎಂದರು.

ಕಲಬುರಗಿ ಜಿಲ್ಲಾಡಳಿತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕಲಬುರಗಿಯಲ್ಲಿ ಅರಸು ಭಾವಚಿತ್ರದ ಮೆರವಣಿಗೆ ನಡೆಯಿತು. ಹಾವೇರಿಯಲ್ಲಿ ಜಿಲ್ಲಾಡಳಿತ ಇಂದಿನಿಂದ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ವೈವಿಧ್ಯಮಯ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಸಂಜಯ್ ಶೆಟ್ಟಣ್ಣವರ ಚಾಲನೆ ನೀಡಿದರು.

ಇದೇ ವೇಳೆ ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಜಿಲ್ಲೆಯ ಹಾನ್‌ಗಲ್ ತಾಲ್ಲೂಕಿನ ಹುಲಗಡ್ಡಿ ಗ್ರಾಮದ ಚಂದ್ರಶೇಖರ್ ಅವರಿಗೆ 2022-23ನೇ ಸಾಲಿನ ಜಿಲ್ಲಾ ಮಟ್ಟದ ಅರಸು ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಬಳ್ಳಾರಿಯಲ್ಲಿ ನಡೆದ ಸಮಾರಂಭದಲ್ಲಿ ಶಾಸಕ ಸೋಮಶೇಖರ ರೆಡ್ಡಿ ಅರಸು ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂಬ ಹೆಸರು ನಾಮಕರಣ ಮಾಡಿ, ಭೂಸುಧಾರಣೆ ಕಾಯ್ದೆಯನ್ನು ಜಾರಿಗೆ ತರುವ ಮೂಲಕ ಭೂರಹಿತರ ಬದುಕಿನಲ್ಲಿ ಹೊಸ ಬೆಳಕು ಮೂಡುವಂತೆ ಮಾಡಿದ ಧೀಮಂತ ನಾಯಕ ಎಂದು ಹೇಳಿದರು.

ದೇವರಾಜ ಅರಸು ಜೀವನ ಸಾಧನೆ ಕುರಿತು ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಪಕ ಡಾ. ವೆಂಕಟಗಿರಿ ದಳವಾಯಿ ಉಪನ್ಯಾಸ ನೀಡಿದರು. ಜನ್ಮ ದಿನದ ಅಂಗವಾಗಿ ೩ ದಿನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ನಾಳೆ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

ದಿನದ ಸುದ್ದಿ

ಭಾನುವಾರವೂ ಕ್ಯಾಶ್ ಕೌಟರ್ ಓಪನ್ ; ವಿದ್ಯುತ್ ಬಿಲ್ ಬಾಕಿ ಪಾವತಿಸಿ : ಬೆಸ್ಕಾಂ

Published

on

ಸುದ್ದಿದಿನಡೆಸ್ಕ್:ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕದ ಕಡಿತದಿಂದ ತೊಂದರೆಗೊಳಗಾಗದಂತೆ ನಾಳೆ ಮತ್ತು ಇದೇ 15ರ ಭಾನುವಾರವೂ ಬೆಸ್ಕಾಂ ಉಪ ವಿಭಾಗಗಳ ಕ್ಯಾಶ್ ಕೌಂಟರ್‌ಗಳು ತೆರೆದಿರಲಿವೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕ ಕಡಿತದಿಂದ ತೊಂದರೆಗೆ ಒಳಗಾಗಬಾರದು ಹಾಗೂ ಆನ್‌ಲೈನ್ ಪೇಮೆಂಟ್ ಬಳಸದವರ ಅನಕೂಲಕ್ಕಾಗಿ ಈ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಬಿಲ್ ಬಂದ 30 ದಿನದೊಳಗೆ ವಿದ್ಯುತ್ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ನಿರ್ಧರಿಸಿದ್ದು, ಸೆಪ್ಟೆಂಬರ್ 1ರಿಂದಲೇ ಈ ನಿಯಮ ಜಾರಿಯಾಗಿದೆ ಎಂದು ಹೇಳಿದೆ.

ವಿದ್ಯುತ್ ಬಿಲ್ ಬಾಕಿ ಮೊತ್ತ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂಪಾಯಿ ಗಳಿಗಿಂತ ಅಧಿಕವಾಗಿದ್ದಲ್ಲಿ, ಅಂತಹ ಸ್ಥಾಪನಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ. ಗೃಹ ಜ್ಯೋತಿಯೋಜನೆ ಅಡಿ ಶೂನ್ಯ ಬಿಲ್ ಪಡೆಯುತ್ತಿರುವ ಗ್ರಾಹಕರ ಹಿಂಬಾಕಿ ಶೂನ್ಯವಿದ್ದಲ್ಲಿ ಈ ಬಗ್ಗೆ ಚಿಂತಿಸಬೇಕಿಲ್ಲ ಎಂದು ಪ್ರಕಟಣೆ ಸ್ಪಷ್ಟಪಡಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಹತ್ತು ವರ್ಷಗಳ ಬಳಿಕ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧಾರ

Published

on

ಸುದ್ದಿದಿನಡೆಸ್ಕ್:ಹತ್ತು ವರ್ಷಗಳ ಬಳಿಕ ಕಲಬುರಗಿ ಜಿಲ್ಲೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧರಿಸಿದೆ.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಿ, ನಿರ್ಣಯ ತೆಗೆದುಕೊಳ್ಳಲು ಸೆಪ್ಟೆಂಬರ್ 17ಕ್ಕೆ ಸಂಪುಟ ಸಭೆ ನಡೆಯಲಿದೆ.

ಜಿಲ್ಲೆಯ ಮಿನಿ ವಿಧಾನಸೌಧದಲ್ಲಿರುವ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಬಗ್ಗೆ ವಿಶೇಷ ಆದ್ಯತೆ ನೀಡಲು ನಿರ್ಧರಿಸಲಾಗಿದೆ. ಈ ಹಿಂದೆ 2014ರ ನವೆಂಬರ್ 28ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆದಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂದು ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ

Published

on

ಸುದ್ದಿದಿನಡೆಸ್ಕ್:ಇಂದು ಗಣೇಶ ಚತುರ್ಥಿ, ದೇಶ ಸೇರಿ ನಾಡಿನದ್ಯಂತ ಹಿಂದೂ ಸಂಪ್ರದಾಯದಲ್ಲಿ ನಾಡಿನ ಜನತೆ ತಮ್ಮ ಒಳಿತಿಗಾಗಿ, ಜ್ಞಾನ ಸಮೃದ್ಧಿಗಾಗಿ ಶಿವನ ಪುತ್ರ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಿ ಅತ್ಯಂತ ಶ್ರದ್ದಾ ಭಕ್ತಿಯಿಂದ ಈ ಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ ಅದರಂತೆ ಬೆಂಗಳೂರು ಜನತೆ ಮನೆ ಮನೆಗಳಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶನ ಮೂರ್ತಿಗಳನ್ನು ಜಲ ಮೂಲಗಳಲ್ಲಿ ವಿಸರ್ಜಿಸಲು ಬೆಂಗಳೂರು ಮಹಾ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಇನ್ನೂ ಗಣೇಶ ಚತುರ್ಥಿ ವಿಶೇಷವಾಗಿ ನಾಡಿನ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತ್ತೆ ಅನೇಕ ಸಚಿವರು ಹಾಗೂ ಗಣ್ಯರು ಶುಭ ಹಾರೈಸಿದ್ದಾರೆ.

ಗಣೇಶ ಹಬ್ಬದ ಆಚರಣೆಯ ಸಂದರ್ಭದಲ್ಲಿ ಮದ್ಯಪಾನಾಸಕ್ತರು ಗಲಭೆಮಾಡುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ ನಿಯಮಗಳಡಿ ಇಂದಿನಿಂದ ಉಡುಪಿ ಜಿಲ್ಲೆಯಾದ್ಯಂತ ಹಾಗೂ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಇದೇ 9 ಮತ್ತು ಸೆಪ್ಟೆಂಬರ್ 11 ರಂದು ಮಧ್ಯಾಹ್ನ 2 ರಿಂದ ಮದ್ಯರಾತ್ರಿ 12.00 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ನೈಸರ್ಗಿಕವಾಗಿ ತಯಾರಿಸಿದ ಮಣ್ಣಿನ ಗಣೇಶನ ವಿಗ್ರಹಗಳನ್ನು ಮಾತ್ರ ಬಳಸುವ ಮೂಲಕ ಕೆರೆ, ನದಿ ಮೂಲಗಳು ಕಲುಷಿತಗೊಳಿಸದಂತೆ ಕಾಪಾಡುವುದು ನಮ್ಮ ಕರ್ತವ್ಯ ಎಂದು ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending