Connect with us

ರಾಜಕೀಯ

ಬೊಮ್ಮಾಯಿ, ಬಿಎಸ್ ವೈ ಅವರಿಂದ ದಲಿತರಿಗೆ ಅವಮಾನ : ಡಿ. ಬಸವರಾಜ್ ಆರೋಪ

Published

on

ಸುದ್ದಿದಿನ,ದಾವಣಗೆರೆ: ದಲಿತರ ಮನೆಗೆ ಊಟ ಹಾಗೂ ಉಪಾಹಾರಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಹೋಗುವುದೇ ದಲಿತರಿಗೆ ಮಾಡಿದ ದೊಡ್ಡ ಅಪಮಾನ ಎಂದು ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ಆರೋಪಿಸಿದರು‌.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾತ್ಮಗಾಂಧೀಜಿಯವರ ನಂತರ ದೇಶದಲ್ಲಿ ನಡೆಯುತ್ತಿರುವ ಬಹುದೊಡ್ಡ ಯಾತ್ರೆ ರಾಹುಲ್ ಗಾಂಧಿಯವರ ಭಾರತ್ ಜೋಡೊ ಯಾತ್ರೆ. ಈ ಯಾತ್ರೆಗೆ ಸೇರುತ್ತಿರುವ ಜನ ಸಾಗರವನ್ನು ನೋಡಿ ಬಿಜೆಪಿಗೆ ನಡುಕ ಉಂಟಾಗಿದೆ. ಬಿಜೆಪಿ ನಾಯಕರು ತಲೆ ಕೆಟ್ಟವರಂತೆ ಹೇಳಿಕೆ ನೀಡುವ ಮೂಲಕ ಜನರ ಮುಂದೆ ಬೆತ್ತಲೆಯಾಗಿದ್ದಾರೆ ಎಂದು ಕಿಡಿಕಾರಿದರು.

ನ್ಯಾಯಾಲಯದಿಂದ ವಿಚಾರಣೆಗೆ ದಿನಕ್ಕೊಂದು ಆದೇಶ ಪಡೆಯುತ್ತಿರುವ ಬಿ. ಎಸ್. ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಪುರೋಹಿತ ಶಾಹಿ ಆಧಾರಿತ ಹಿಂದೂ ಧರ್ಮದ ಸನಾತನಿಗಳಾದ ಬಿಜೆಪಿ ನಾಯಕರು ದಲಿತರನ್ನು ಮನುಷ್ಯರೆಂದೇ ಪರಿಗಣಿಸಿಲ್ಲ . ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್ . ಯಡಿಯೂರಪ್ಪನವರು – ದಲಿತರ ಮನೆಗೆ ಭೇಟಿ ನೀಡಿದ್ದೇವೆ ಎನ್ನುವುದೇ ದಲಿತರಿಗೆ ಮಾಡುವ ದೊಡ್ಡ ಅವಮಾನವೆಂದು ಹೇಳಿದರು.

ಬ್ರಾಹ್ಮಣರು, ವೀರಶೈವರು, ಒಕ್ಕಲಿಗರ ಮನೆಗಳೂ ಸೇರಿದಂತೆ ಮೇಲ್ಮಾತಿಯ ಮನೆಗಳಿಗೆ ಭೇಟಿ ನೀಡುವಾಗ ಇದೇ ಅಬ್ಬರದ ಪ್ರಚಾರ ಮಾಡಿ ಹೋಗುವರೇ ? ಇದು ದಲಿತರನ್ನು ಇನ್ನೂ ಅಸ್ಪೃಶ್ಯರೆಂದು ಜಗತ್ತಿಗೆ ಸಾರುವ ನೀಚ ಮನಸ್ಥಿತಿಯನ್ನು ಬಿಜೆಪಿ‌ ನಾಯಕರು ಹೊಂದಿದ್ದಾರೆ. ಅಧಿಕಾರಿಗಳನ್ನು ಮೊದಲೇ ಕಳುಹಿಸಿ ರೆಡ್‌ಲೇಬಲ್ , ಕಣ್ಣ ದೇವನ್ , ಚಹ ಪುಡಿ ತಂದಿಡಲು ಎರಡು ಹೊತ್ತಿನ ಊಟಕ್ಕೂ ಗತಿಯಿಲ್ಲದ ಕುಟುಂಬಗಳಿಗೆ ತಾಕೀತು ಮಾಡುತ್ತಿದ್ದಾರೆ ಎಂದು ಆರೋಪಿಸಿದರು‌.

ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಗಡಿಗುಡಾಳ್ ಮಂಜುನಾಥ್ ಮಾತನಾಡಿ, ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡುವಾಗ ಹುಷಾರಾಗಿರಬೇಕು‌. ಬೇಕಾಬಿಟ್ಟಿಯಾಗಿ ಹೇಳಿಕೆ‌ ನೀಡಿದರೆ ಜನರೇ ತಕ್ಕ ಉತ್ತರ ನೀಡುತ್ತಾರೆ ಎಂದರು.

ಭಾರತ್ ಜೋಡೊ ಯಾತ್ರೆಗೆ ದೇಶಾದ್ಯಂತ ಭಾರೀ ಬೆಂಬಲ ವ್ಯಕ್ತವಾಗಿದೆ. ಇದು ಬಿಜೆಪಿಗರಿಗೆ ನಡುಕ ಹುಟ್ಟಿಸಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ. ಬಿಜೆಪಿಯ ಜನಸಂಕಲ್ಪ ಯಾತ್ರೆ ಯಾಕೆ‌ ನಡೆಸುತ್ತಿದ್ದಾರೆ. ಅಭಿವೃದ್ಧಿ ಮಾಡದೇ ಇಂತ ಯಾತ್ರೆ ನಡೆಸಿದರೆ ಏನು ಪ್ರಯೋಜನ ಎಂದು ಪ್ರಶ್ನಿಸಿದರು‌.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಹತ್ತು ವರ್ಷಗಳ ಬಳಿಕ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧಾರ

Published

on

ಸುದ್ದಿದಿನಡೆಸ್ಕ್:ಹತ್ತು ವರ್ಷಗಳ ಬಳಿಕ ಕಲಬುರಗಿ ಜಿಲ್ಲೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧರಿಸಿದೆ.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಿ, ನಿರ್ಣಯ ತೆಗೆದುಕೊಳ್ಳಲು ಸೆಪ್ಟೆಂಬರ್ 17ಕ್ಕೆ ಸಂಪುಟ ಸಭೆ ನಡೆಯಲಿದೆ.

ಜಿಲ್ಲೆಯ ಮಿನಿ ವಿಧಾನಸೌಧದಲ್ಲಿರುವ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಬಗ್ಗೆ ವಿಶೇಷ ಆದ್ಯತೆ ನೀಡಲು ನಿರ್ಧರಿಸಲಾಗಿದೆ. ಈ ಹಿಂದೆ 2014ರ ನವೆಂಬರ್ 28ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆದಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪೌತಿ ಖಾತೆ ಆಂದೋಲನ ; ಸಚಿವ ಕೃಷ್ಣ ಬೈರೇಗೌಡ

Published

on

ಸುದ್ದಿದಿನಡೆಸ್ಕ್:ಬಹು ಮಾಲೀಕತ್ವ ಹೊಂದಿರುವ ಖಾಸಗಿ ಜಮೀನುಗಳ ಪೋಡಿ ಕಾರ್ಯ, ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿನ ದರಾಖಾಸ್ತು ಪೋಡಿ ಕಾರ್ಯ ಹಾಗೂ ಜಮೀನು ಮಾಲೀಕತ್ವವನ್ನು ವಾರಸುದಾರರಿಗೆ ಮಾಡಿಕೊಡುವ ಪೋತಿ ಖಾತೆ ಆಂದೋಲನವನ್ನು ರಾಜ್ಯದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಕಂದಾಯ ಖಾತೆ ಸಚಿವ ಕೃಷ್ಣ ಬೈರೇಗೌಡ ಬೆಂಗಳೂರಿನಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮುಡಾ ಪ್ರಕರಣ ; ಅರ್ಜಿ ವಿಚಾರಣೆ ಮುಂದೂಡಿಕೆ

Published

on

ಸುದ್ದಿದಿನಡೆಸ್ಕ್:ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ವಿಚಾರಣೆಗೆ ಅನುಮತಿ ನೀಡಿರುವ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಉಚ್ಛ ನ್ಯಾಯಾಲಯ ಮುಂದೂಡಿದೆ.

ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಮನವಿ ಪುರಸ್ಕರಿಸಿದ ನ್ಯಾಯಾಲಯ ವಿಚಾರಣೆಯನ್ನು ಇದೇ ತಿಂಗಳ 9 ಕ್ಕೆ ಮುಂದೂಡಿದೆ.

ಇದೇ ವೇಳೆ ಮಧ್ಯಂತರ ಆದೇಶವನ್ನು ನ್ಯಾಯಾಲಯ ವಿಸ್ತರಿಸಿದೆ. ಇದೇ 9 ರಂದು ಎ.ಜೆ.ಶಶಿಕಿರಣ್ ಶೆಟ್ಟಿ ವಾದ ಮಂಡಿಸಲಿದ್ದು, ಇದೇ 12 ರಂದು ಮುಖ್ಯಮಂತ್ರಿ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡನೆ ಮಾಡುವುದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ನಾಗಪ್ರಸನ್ನ, ಸೆಪ್ಟೆಂಬರ್ 12ರಂದು ಸಂಪೂರ್ಣ ವಿಚಾರಣೆ ಮುಗಿಸೋಣ ಎಂದು ಹೇಳಿ ನ್ಯಾಯಾಲಯದ ಕಲಾಪ ಮುಂದೂಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending